Subscribe to Updates
Get the latest creative news from FooBar about art, design and business.
- ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
- ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
- ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
- ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
- ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
- ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
- ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
- ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
Author: admin
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ. ಇಂದು(ಜು.25) ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆಗೆ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
‘ಹೊಸಕೆರೆ, ಮಲ್ಲತ್ತಹಳ್ಳಿ ಕೆರೆ, ಜೆ. ಪಿ. ಪಾರ್ಕ್ ಅಭಿವೃದ್ಧಿ ಹೆಸರಿನಲ್ಲಿ ಕೆರೆ ಕಣ್ಮರೆ, ಈಜುಕೊಳ ಮರು ನಿರ್ಮಾಣ, ಉದ್ಯಾನಗಳ ಅಭಿವೃದ್ಧಿ ಹೆಸರಿನಲ್ಲಿ ನಡೆದಿದೆ ಎನ್ನಲಾದ ಎಲ್ಲ ಅಕ್ರಮಗಳನ್ನು ಬಯಲಿಗೆ ಎಳೆಯುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು. ಮತ್ತಿಕೆರೆಯ ಜೆಪಿ ಪಾರ್ಕ್ ಚೌಡೇಶ್ವರಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಆರ್. ಆರ್. ನಗರ ಕ್ಷೇತ್ರ ವ್ಯಾಪ್ತಿಗೆ ಬರುವ ಹೊಸಕೆರೆ ಹಳ್ಳಿಯ ಹೊಸಕೆರೆ ಬಳಿ ಬೇನಾಮಿ ಹೆಸರಿನಲ್ಲಿ ಶಾಸಕರು ಜಮೀನು ಖರೀದಿ ಮಾಡಿದ್ದಾರೆ. ಆ ಜಮೀನಿಗೆ ಹೋಗಲು ಕೆರೆ ಮಧ್ಯದಲ್ಲಿಯೇ ರಸ್ತೆ ಮಾಡಿದ್ದಾರೆ. ಕೆರೆ ಅಭಿವೃದ್ಧಿ ಹೆಸರಿನಲ್ಲಿ ಲೂಟಿ ನೋಡಿಕೊಂಡು ಸುಮ್ಮನಿರುವುದೇ? ಅಭಿವೃದ್ಧಿ ಮಾಡದೆ ನೂರಾರು ಕೋಟಿ ಹಣ ಲೂಟಿ ಮಾಡಲಾಗಿದೆ’ ಎಂದು ದೂರಿದರು. ‘ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ, ಆರ್. ಆರ್. ನಗರದಲ್ಲಿ ನಡೆದಿರುವ ಅಕ್ರಮ, ಕಳಪೆ ಕಾಮಗಾರಿ ತನಿಖೆ ನಡೆಸಲು ಸಿದ್ಧ. ಯಾವ ರೀತಿಯಲ್ಲಿ ಬಿಜೆಪಿ ಶಾಸಕರು ಮೋಸ ಮಾಡಿ ಗೆಲುವು…
ತಿಪಟೂರು: ದಿನೇ ದಿನೇ ಹೆಚ್ಚುತ್ತಿರುವ ಬೆಲೆ ಏರಿಕೆಯಿಂದ ಲಾರಿ ಮಾಲೀಕರ ಹೈರಾಣಾಗಿದ್ದು ಬೆಲೆ ಏರಿಕೆ ನಡುವೆ ಕೆ.ಬಿ.ಕ್ರಾಸ್ ಮೈನ್ಸ್ ಟ್ರಾನ್ಸ್ ಪೋರ್ಟ್ ಮಾಲೀಕರು ಲಾರಿ ಮಾಲೀಕರಿಗೆ ಟೆನೇಜ್ ಹಣ ಕಡಿತಗೊಳಿಸಿ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಕೆ.ಬಿ ಕ್ರಾಸ್ ನಲ್ಲಿ ಚಿಕ್ಕನಾಯ್ಕನಹಳ್ಳಿ ತಾಲ್ಲೂಕು ಲಾರಿ ಮಾಲೀಕರ ಸೇವಾ ಅಭಿವೃದ್ದಿ ಸಂಘದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಪ್ರತಿಭಟನಾ ನಿರತರನ್ನ ಉದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಟ್ರಕ್ ಮಾಲೀಕರ ಸಂಘದ ಅಧ್ಯಕ್ಷ ಮುಜಾಮಿಲ್ ಪಾಷ, ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕೆ.ಬಿ ಕ್ರಾಸ್ ಭರತ್ ರಾಜ್ ಮೈನ್ಸ್ ನಿಂದ ಬಳ್ಳಾರಿ ಹೊಸಪೇಟೆಗೆ ಟನ್ ಅದಿರು ಸಾಗಿಸಲು ಎಂಟುನೂರು ರೂಪಾಯಿ ನಿಗದಿಗೊಳಿಸಲಾಗಿತ್ತು, ಆರುತಿಂಗಳ ಕಾಲಾ ಎಂಟುನೂರು ರೂಪಾಯಿ ನೀಡಿದ, ಟ್ರಾನ್ಸ್ ಪೋರ್ಟ್ ಕಂಪನಿ ಮಾಲೀಕರು ಏಕಾಏಕಿಯಾಗಿ ಏಳುನೂರು ರೂಪಾಯಿ ಟನ್ ಗೆ ನೀಡಲು ಮುಂದಾಗಿರುವುದು ಸರಿಯಲ್ಲ, ಇತ್ತಿಚಿನ ದಿನಗಳಲ್ಲಿ ಡಿಸೇಲ್ ಬೆಲೆ ಏರಿಕೆ, ಸ್ಪೇರ್ ಸ್ಪಡ್ಸ್ ಬೆಲೆ ಏರಿಕೆ , ಟಯರ್ ಬೆಲೆ ಏರಿಕೆಯಾಗಿದೆ…
ಬೆಂಗಳೂರಿನ ಪ್ರೆಸ್ ಕ್ಲಬ್ ಆಫ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೇಳಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿಯಾಗಿದೆ ಎಂದರು. ಇವತ್ತಿನ ಬಹಳಷ್ಟು ಪತ್ರಕರ್ತರು ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ? ಇಲ್ಲವಾ? ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಪಿ. ರಾಮಯ್ಯ, ಡಾ. ಆರ್. ಪೂರ್ಣಿಮಾ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ, ಹಿರಿಯ ಪತ್ರಕರ್ತರು ಹಾಗೂ ಈ-ದಿನ ಸುದ್ದಿ ಸಂಸ್ಥೆಯ ಮುಖ್ಯಸ್ಥರಾದ ಡಿ. ಉಮಾಪತಿ, ಸುವರ್ಣ ನ್ಯೂಸ್…
ಸಿದ್ದರಾಮಯ್ಯರ ಬಜೆಟ್ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿದೆ. ಬಿಜೆಪಿಯ 14 ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಎಸ್ ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಲಿತೋದ್ದಾರಕ ಎನ್ನುವ ಕಾಂಗ್ರೆಸ್ಸಿಗರು ಬಿಜೆಪಿ ಜಾರಿಗೊಳಿಸಿದ 14 ಕಾರ್ಯಕ್ರಮಗಳನ್ನು ಕೈಬಿಟ್ಟಿದ್ದಾರೆ. ನೂತನ ಶಿಕ್ಷಣ ನೀತಿ ರದ್ದು ಮಾಡಿದ್ದಾರೆ. ಪಠ್ಯ ಪರಿಷ್ಕರಿಸಿದ್ದಾರೆ. ರೈತರು ಮತ್ತಿತರರಿಗೆ ಜಾರಿ ಮಾಡಿದ್ದ ವಿದ್ಯಾನಿಧಿ ನಿಲ್ಲಿಸಿದ್ದಾರೆ. ಪ್ರತಿಯೊಂದು ಜಿಲ್ಲೆಗೆ ಗೋಶಾಲೆ ಕಟ್ಟುವ ಯೋಜನೆಯನ್ನು ಕೈಬಿಟ್ಟಿದ್ದಾರೆ. ರೈತಪರ ಎಪಿಎಂಸಿ ಕಾಯ್ದೆ ಬದಲಿಸಿದ್ದಾರೆ ಎಂದು ಟೀಕಿಸಿದರು. ರೈತರಲ್ಲದವರು ಕೃಷಿ ಭೂಮಿ ಖರೀದಿಗೆ ಅವಕಾಶ ಕೊಟ್ಟಿದ್ದು, ಅದನ್ನು ಕೈಬಿಟ್ಟಿದ್ದಾರೆ. ‘ನಮ್ಮ ಕ್ಲಿನಿಕ್’ ಕೈಬಿಟ್ಟಿದ್ದಾರೆ. ಶಾಲೆಗಳಿಗೆ ಒಂದೇ ರೀತಿಯ ಬಣ್ಣವನ್ನು ಕೈಬಿಟ್ಟಿದ್ದಾರೆ. ಯುವಶಕ್ತಿ, ಸ್ತ್ರೀ ಸಾಮರ್ಥ್ಯ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ರೈತ ಸಮ್ಮಾನ್ ಯೋಜನೆಯ ರಾಜ್ಯದ ಕೊಡುಗೆ 4 ಸಾವಿರ ರೂಪಾಯಿಯನ್ನು ಕೈಬಿಟ್ಟಿದ್ದಾರೆ. ಕೃಷಿಕ ಮಹಿಳೆಯರಿಗೆ…
ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಹತ್ತಿರದ ದೊಡ್ಡೇಗೌಡನ ಪಾಳ್ಯದಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಕರಡಿಯೊಂದು, ಸೋಮವಾರ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ತಾಲ್ಲೂಕಿನ ಸಿ.ಎನ್. ದುರ್ಗಾ ಹೋಬಳಿ ತೋವಿನಕೆರೆ ಸಮೀಪದ ದೊಡ್ಡೇಗೌಡನ ಪಾಳ್ಯದ ರೈತರ ಜಮೀನಿನಲ್ಲಿ ಕರಡಿ ಕಾಣಿಸಿಕೊಂಡು, ಬೆಳೆಗಳನ್ನು ನಾಶ ಮಾಡುತ್ತಿತ್ತು. ಇದರಿಂದ ಬೇಸತ್ತ ಗ್ರಾಮಸ್ಥರು ಮತ್ತು ರೈತರು ಕರಡಿ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಯ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಕರಡಿ ಹಿಡಿಯಲು ಕಾರ್ಯಾಚರಣೆ ಶುರು ಮಾಡಿದ್ದರು. ಜಮೀನಿನಲ್ಲಿ ಸೂಕ್ತ ಸ್ಥಳದಲ್ಲಿ ಬೋನನ್ನು ಇಟ್ಟು ಅದರೊಳಗೆ ಹಲಸಿನ ಹಣ್ಣು ಮತ್ತು ಜೇನುತುಪ್ಪವನ್ನು ಇಡಲಾಗಿತ್ತು. ತಡರಾತ್ರಿ ಆಹಾರ ಹರಿಸಿ ಬಂದ ಕರಡಿಯು ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ಕರಡಿಯನ್ನು ಕಂಡು ಗ್ರಾಮಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ರೈತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರ ಮಾತನಾಡಿದ ಅರಣ್ಯ ಇಲಾಖೆಯ ಅಧಿಕಾರಿ ಸುರೇಶ್ , ತಾಲ್ಲೂಕಿನ ತೋವಿನಕೆರೆ ಸಮೀಪದ ದೊಡ್ಡೇಗೌಡನ ಪಾಳ್ಯದಲ್ಲಿ…
ಬೆಂಗಳೂರಿಗೆ ಹೊಸ ರೂಪ ನೀಡಿ ಈ ನಗರವನ್ನು ಜಾಗತಿಕ ನಗರವಾಗಿ ರೂಪಿಸುವ ಉದ್ದೇಶದಿಂದ ಇಂದು ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯು ವರ್ಲ್ಡ್ ಡಿಸೈನ್ ಆರ್ಗನೈಸೇಷನ್ ಜತೆ ಒಪ್ಪಂದ ಮಾಡಿಕೊಂಡಿದೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹೇಳಿದರು. ಬ್ಯಾಂಡ್ ಬೆಂಗಳೂರು ಹಾಗೂ ಕರ್ನಾಟಕದ ಪಾಲಿಗೆ ಇಂದು ಹೊಸ ಅಧ್ಯಾಯ ಆರಂಭವಾಗುತ್ತಿದೆ. ಕರ್ನಾಟಕದ ಭವಿಷ್ಯದ ಅಭಿವೃದ್ಧಿಗೆ ಇದು ಹೆಜ್ಜೆಗುರುತಾಗಲಿದೆ.ಕೆಲ ವರ್ಷಗಳ ಹಿಂದೆ ವಿಶ್ವ ವಿನ್ಯಾಸ ರಾಜಧಾನಿ ಯಾವುದು ಎಂಬ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಇದರಲ್ಲಿ ಬೆಂಗಳೂರು ಯಶ ಕಾಣಲಿಲ್ಲ. ಬೆಂಗಳೂರು ವಾಸಯೋಗ್ಯ ನಗರವಾಗಿ ನಿರ್ಮಾಣ ಮಾಡಬೇಕಿದೆ. ಇದಕ್ಕಾಗಿ ಈ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಈ ನಗರವನ್ನು ಬೆಂಗಳೂರನ್ನು ಜಾಗತಿಕ ನಗರವಾಗಿ ಮಾಡಲು ಸರ್ಕಾರ ಬದ್ಧವಾಗಿದೆ. ಯಾವುದೇ ಯೋಜನೆಯಾದರೂ ಅದರ ವಿನ್ಯಾಸ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಹೀಗಾಗಿ ನಾವು ಇಂದು ಈ…
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನ, ಆಟೊ, ಟ್ರ್ಯಾಕ್ಟರ್, ಕೃಷಿ ವಾಹನಗಳು ಸೇರಿದಂತೆ ವಿವಿಧ ಬಗೆಯ ವಾಹನಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಷೇಧ ಹೇರಿದೆ. ಮೋಟಾರು ವಾಹನ ಕಾಯ್ದೆಯ ಅನ್ವಯ ಪ್ರಾಧಿಕಾರವು ಜುಲೈ 12ರಂದು ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಹೊಸ ಆದೇಶವು ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ಸಂಚಾರಕ್ಕೆ ಎಕ್ಸ್‌ಪ್ರೆಸ್ ವೇ ಮುಕ್ತವಾದಾಗಲೇ ಬೈಕ್, ಆಟೊ ಹಾಗೂ ಕೃಷಿಗೆ ಬಳಸುವ ವಾಹನಗಳ ಸಂಚಾರವನ್ನು ನಿಷೇಧಿಸಬೇಕು ಎಂಬು ಮಾತು ಕೇಳಿ ಬಂದಿತ್ತು. ಈ ಕುರಿತು, ಪ್ರಾಧಿಕಾರ ಪ್ರಸ್ತಾವ ಸಿದ್ಧಪಡಿಸಿ ಕೇಂದ್ರ ಭೂ ಸಾರಿಗೆ ಸಚಿವಾಲಯಕ್ಕೆ ಕಳಿಸಿ ಕೊಟ್ಟಿತ್ತು. ಆಗ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ನಂತರ ವಿಷಯ ತಣ್ಣಗಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಣಿಪುರದಲ್ಲಿ ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದಲ್ಲಿ ಕಳೆದ ಮೂರು ತಿಂಗಳಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ ಎಂದರು. ಸಜೀವ ದಹನ, ಮಹಿಳೆಯರ ನಗ್ನ ಮೆರವಣಿಗೆಯಂತಹ ಭೀಭತ್ಸ ಕೃತ್ಯಗಳು ಸರಣಿ ರೂಪದಲ್ಲಿ ನಡೆಯುತ್ತಿವೆ. ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ. ಮಣಿಪುರ ಭಾರತದಲ್ಲಿದಿಯೇ ಅಥವಾ ಅಫ್ಘಾನಿಸ್ತಾನದಲ್ಲಿದೆಯೇ.? ಮಣಿಪುರ ಗಲಭೆ ನಿಯಂತ್ರಿಸಲು ಪ್ರಧಾನಿಯವರಿಗೆ ಸಾಧ್ಯವಿಲ್ಲವೇ.? ಎಂದು ಪ್ರಶ್ನೆ ಮಾಡಿದರು. ಮಣಿಪುರ ಹಿಂಸಾಚಾರವನ್ನು ಕಳೆದ 3 ತಿಂಗಳಿಂದ ಜೀವಂತವಾಗಿ ಬಿಟ್ಟಿರುವುದು ಕೇಂದ್ರದ ಅಸಹಾಯಕತೆಗಿಂತ ಹೆಚ್ಚಾಗಿ ಹೇಡಿತನ ತೋರಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದ ಪರಿಸ್ಥಿತಿ ನಿಭಾಯಿಸುವಲ್ಲಿ ಅಲ್ಲಿನ ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸಾಚಾರ ಸದ್ದಡಗಿಸುವ ಎದೆಗಾರಿಕೆ ಯಾಕಿಲ್ಲ.? ಎಂದು ಪ್ರಶ್ನೆ ಮಾಡಿದರು. ಕೇಂದ್ರ ಸರ್ಕಾರವು ಮಣಿಪುರದ ಬಿಜೆಪಿ ಸರ್ಕಾರವನ್ನು ಕೂಡಲೇ ವಜಾ ಮಾಡಲಿ ಎಂದು…
ದಲಿತ ಸಮುದಾಯದಲ್ಲಿ ಭೂಮಿ ಶೇ 6ರಷ್ಟು ಇದ್ದರೆ, ಶೇ 78 ಭಾಗ ಮೇಲ್ಟಾತಿ ಕೈಯಲ್ಲಿದೆ. ಇದು ರಾಜಕೀಯ ಶಕ್ತಿಯನ್ನು ಅವರಿಗೆ ತಂದುಕೊಟ್ಟಿದೆ’ ಎಂದು ವಕೀಲ ಹರಿರಾಮ್ ತಿಳಿಸಿದರು. ದಲಿತ ವಿಮೋಚನಾ ಸೇನೆ ವತಿಯಿಂದ ಪ್ರೊ. ಬಿ. ಕೃಷ್ಣಪ್ಪ ಅವರ 85ನೇ ಜಯಂತ್ಯುತ್ಸವದ ಅಂಗವಾಗಿ ನಡೆದ ಬಹುಜನ ಸ್ವಾಭಿಮಾನ ದಿನಾಚರಣೆ ಮತ್ತು ಮಾಳವ ನಾರಾಯಣ ಅವರು ರಚಿಸಿರುವ ‘ಕರ್ನಾಟಕದ ಅಂಬೇಡ್ಕರ್ ಪ್ರೊ. ಬಿ. ಕೃಷ್ಣಪ್ಪ’ ಕೃತಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಕೈಗಾರಿಕೆ, ಉದ್ಯಮ, ಮಾಧ್ಯಮ, ಸಹಕಾರಿ ಕ್ಷೇತ್ರಗಳಲ್ಲಿ ದಲಿತರಿಗೆ ನಿರೀಕ್ಷಿತ ಪ್ರಾತಿನಿಧ್ಯ ದೊರೆತಿಲ್ಲ. ಇದರಿಂದಾಗಿ ಆರ್ಥಿಕವಾಗಿಯೂ ಶೂನ್ಯವಾಗಿದ್ದಾರೆ ಎಂದರು. ‘ಶಿಕ್ಷಣ ಪಡೆಯುತ್ತಿರುವ ದಲಿತ ಯುವಸಮುದಾಯದವರಲ್ಲಿ ನಿಮ್ಮ ಗುರಿ ಏನು ಎಂದು ಕೇಳಿದರೆ ಸರ್ಕಾರಿ ಉದ್ಯೋಗ ಪಡೆಯುವುದು ಎಂದು ಹೇಳುತ್ತಿದ್ದಾರೆ. ಆದರೆ, ಈಗಿನ ಉದ್ಯೋಗಗಳಲ್ಲಿ ಶೇ 0. 6ರಷ್ಟು ಮಾತ್ರ ಸರ್ಕಾರಿ ಉದ್ಯೋಗವಾಗಿದೆ. ಅದರಲ್ಲಿ ದಲಿತರಿಗೆ ಶೇ 0. 2ರಷ್ಟು ಮಾತ್ರ ಸಿಗುತ್ತಿದೆ ಎಂದು ತಿಳಿಸಿದರು. ನಿವೃತ್ತ ಪ್ರಾಧ್ಯಾಪಕ ಎಚ್. ಗೋವಿಂದಯ್ಯ…