Author: admin

ಬೆಂಗಳೂರು: ಗುಬ್ಬಿ ಶ್ರೀನಿವಾಸ್ ಅವರು ಇಂದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದು, ಕಾರ್ಯಕ್ರಮ ಮುಗಿದ ಬೆನ್ನಲ್ಲೇ ಕಾಂಗ್ರೆಸ್ ನೊಳಗೆ ಅಸಮಾಧಾನ ಸ್ಫೋಟಗೊಂಡಿದೆ. ಹೌದು…! ವರದಿಗಳ ಪ್ರಕಾರ,  ತುಮಕೂರಿನ ಪ್ರಭಾವಿ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿಯೂ ಆಗಿರುವ, ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್ ಅವರಿಂದ ಪಕ್ಷವು ಯಾವುದೇ ಅಭಿಪ್ರಾಯ ಪಡೆಯದೇ ಗುಬ್ಬಿ ಶ್ರೀನಿವಾಸ್ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ ಅನ್ನೋ ಅಸಮಾಧಾನ ಕೇಳಿ ಬಂದಿದೆ. ಗುಬ್ಬಿ ಶ್ರೀನಿವಾಸ್ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಕಾರ್ಯಕ್ರಮಕ್ಕೆ ಜಿ.ಪರಮೇಶ್ವರ್ ಅವರನ್ನು ಆಹ್ವಾನಿಸದೇ ನಿರ್ಲಕ್ಷ್ಯ ವಹಿಸಲಾಗಿದೆ ಎನ್ನುವ ಅಸಮಾಧಾನ ಪಕ್ಷದೊಳಗೆ ಕೇಳಿ ಬಂದಿದೆ. ಈ ಹಿಂದೆ ಕೂಡ ಪರಮೇಶ್ವರ್‌ ಅವರ ಗಮನಕ್ಕೆ ಬಾರದೇ ಕಾಂಗ್ರೆಸ್ ನಲ್ಲಿ ಹಲವಾರು ಚಟುವಟಿಕೆಗಳನ್ನು ಮಾಡಲಾಗಿತ್ತು. ಪಕ್ಷದ ಹಿರಿಯ ಮುಖಂಡರನ್ನು ಕಡೆಗಣಿಸುವ ಕಾಂಗ್ರೆಸ್ ನಾಯಕರ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ದಸ್ತಾವೇಜು ಬರಹಗಾರರ ವತಿಯಿಂದ ಮಧುಗಿರಿಯ ಸಬ್ ರಿಜಿಸ್ಟರ್ ಕಚೇರಿ ಬಳಿಯಲ್ಲಿ ಶ್ರೀ ರಾಮನವಮಿ ಪೂಜೆಯನ್ನು ನೇರವೇರಿಸಲಾಯಿತು. ಪೂಜೆಯನ್ನು ದಾಸ್ತಾವೇಜು ಬರಹಗಾರರಾದ ಸಂಘದ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ಸಹ ರಾಮೋತ್ಸವ ಪೂಜೆಯನ್ನು ಬಹಳ ಸರಳವಾಗಿ ಆಚರಿಸಲಾಯಿತು. ಇದೇ ವೇಳೆ ಭಕ್ತಾದಿಗಳಿಗೆ ಹೆಸರು ಬೆಳೆ, ಕೋಸಂಬರಿ ಪಾನಕ, ಮಜ್ಜಿಗೆಯ ಪ್ರಸಾದವನ್ನು ವಿತರಿಸಿದ್ದರು. ದಾಸ್ತವೇಜು ಬರಹಗಾರರ ಕೆ.ಗೋವಿಂದಯ್ಯ, ಪ್ರಸನ್ನಕುಮಾರ್, ವೀರ ನಾಗಪ್ಪ, ಲಿಂಗಪ್ರಸಾದ್, ವೆಂಕಟೇಶ್ ಬಾಬು, ಅರ್ಚಕರಾದ ವೀರೇಶ್, ಕೆ.ಜಿ. ಲಕ್ಷ್ಮಿ ನಾರಾಯಣಪ್ಪ ಹಾಗೂ ಭಕ್ತಾದಿಗಳು ಹಾಜರಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಶ್ಚಿಮ ಬಂಗಾಳದಲ್ಲಿ ರಾಮ ನವಮಿ ಆಚರಣೆಯ ಸಂದರ್ಭದಲ್ಲಿ ಶಸ್ತ್ರಸಜ್ಜಿತ ಯುವಕರ ಶೌರ್ಯ. ಬುಧವಾರ ಸಂಜೆ ಬಂಗಾಳದ ಹೌರಾದಲ್ಲಿ ಯುವಕರ ಗುಂಪು ಕತ್ತಿ ಮತ್ತು ಹಾಕಿ ಸ್ಟಿಕ್‌ಗಳೊಂದಿಗೆ ಬೀದಿಗಿಳಿದಿದೆ. ರಾಮನವಮಿ ರ್ಯಾಲಿಯಲ್ಲಿ ವಿವೇಕಾನಂದ ಸೇವಾ ಸಂಘದ ಯುವಕರು ಕತ್ತಿ, ಹಾಕಿ ಸ್ಟಿಕ್‌ಗಳನ್ನು ಗಾಳಿಯಲ್ಲಿ ಬೀಸುವ ಮೂಲಕ ಭಯಭೀತರಾದರು. ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಹೌರಾದ ಸಂಕ್ರೈಲ್ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಶಸ್ತ್ರಸಜ್ಜಿತ ಯುವಕರು ರ್ಯಾಲಿಯನ್ನು ನಡೆಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ರಾಜಗಂಜ್ ರಥ ಥಾಲ್ ಮೇಳ ಮೈದಾನದಿಂದ ಮಾಣಿಕಪುರ ಬೆಲ್ತಳದವರೆಗೆ ಎರಡು ಕಿಲೋಮೀಟರ್ ವರೆಗೆ ಮೆರವಣಿಗೆ ಸಾಗಿತು. ರಾಮ ನವಮಿ ಆಚರಣೆಯ ಅಂಗವಾಗಿ, ಹಿಂದೂ ಸಂಘಟನೆಗಳು ರಾಜ್ಯದ ಐನೂರಕ್ಕೂ ಹೆಚ್ಚು ಸ್ಥಳಗಳಲ್ಲಿ ಮೆರವಣಿಗೆ ನಡೆಸಲು ಯೋಜಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಫಿಕ್ಸ್ ಆಗಿದ್ದು ನಿನ್ನೆಯಿಂದಲೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಮುಗಿಯುವವರೆಗೆ ಬೆಂಗಳೂರಿನಲ್ಲಿ ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು ಆದೇಶಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ನೀತಿ ಸಂಹಿತೆ ಮುಕ್ತಾಯದವರೆಗೆ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಬೇಕು. ಮೇ 16ರ ಬಳಿಕ ಸಾರ್ವಜನಿಕರು ಶಸ್ತ್ರಾಸ್ತ್ರಗಳನ್ನ ವಾಪಸ್ ಪಡೆಯಬಹುದು ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 70ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಆಗುವುದಿಲ್ಲ. ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರರಷ್ಟೆ ಸತ್ಯ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ನಾವು ಸರ್ಕಾರ ರಚಿಸುತ್ತೇವೆ. ರಾಜ್ಯದಲ್ಲಿ ನಾಲ್ಕು ತಂಡಗಳಾಗಿ ವಿಜಯ ಸಂಕಲ್ಪಯಾತ್ರೆ ಮಾಡಿದ್ದೇವೆ ವಿಜಯಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಯಾತ್ರೆಯಿಂದ ಕಾಂಗ್ರೆಸ್ ಭಯಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ ಅದು ಕೇವಲ ತಿರುಕನ ಕನಸಾಗಲಿದೆ. ಎರಡ್ಮೂರು ದಿನಗಳಲ್ಲಿ ನಾನು ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. 130 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ರಾಜ್ಯದಲ್ಲಿ ಸಾಮಾಜಿಕ ನ್ಯಾಯದಡಿ ಮೀಸಲಾತಿ ನೀಡಲಾಗಿದೆ. ಮೀಸಲಾತಿ ವಿಚಾರದಲ್ಲಿ ಮುಸ್ಲೀಂರಿಗೆ ಅನ್ಯಾಯ ಮಾಡಿಲ್ಲ…

Read More

ಕನ್ನಡದ ‘ ಕಾಂತಾರ ’ ಮತ್ತು ತಮಿಳಿನಲ್ಲಿ ತೆರೆಕಂಡ ‘ಜೈ ಭೀಮ್’ ಚಿತ್ರಗಳ ಪಟ್ಟಿಗೆ ಸೇರಲು ಕನ್ನಡದ ಮತ್ತೊಂದು ಚಿತ್ರ “ *ಅಡವಿ ” ಇದು ಮತ್ತೊಂದು ಕಾಂತಾರ ಆಗುವುದರಲ್ಲಿ ಅನುಮಾನವೇ ಇಲ್ಲ ಎನ್ನುತ್ತಿದೆ ಚಿತ್ರತಂಡ, ಪರಿಸರ ಸಂರಕ್ಷಣೆ ಹಾಗೂ ಆದಿವಾಸಿಗಳ ಜೀವನ ಆಧಾರಿತ ಸ್ಥಳೀಯ ಹೊಸ ಪ್ರತಿಭೆಗಳಿಂದ ಮೂಡಿಬಂದ ಅಡವಿ ಚಿತ್ರವನ್ನು ರುದ್ರಭೂಮಿಯಲ್ಲಿ ಪಟ್ಟಣವನ್ನು ಸ್ವಚ್ಛ ಸುಂದರವಾಗಿಸುವ ಪೌರಕಾರ್ಮಿರಿಂದ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದು ಇಡೀ ರಾಜ್ಯದಲ್ಲಿ ಮನೆ ಮಾತಾಗಲಿ ಎನ್ನುವುದು ಎಲ್ಲರ ಆಶಯವಾಗಿದೆ. ಪತ್ರಕರ್ತ ಸಾಮಾಜಿಕ ಹೋರಾಟಗಾರ ಟೈಗರ್ ನಾಗ್ ಕಾದಂಬರಿಯನ್ನು ಆಧರಿಸಿ, ಅವರೇ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮತ್ತು ನಿರ್ಮಾಣ ಮಾಡುತ್ತಿರುವ ಅಡವಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಕೊರಟಗೆರೆಯ ಪಟ್ಟಣದಲ್ಲಿ ವಿಶೇಷವಾಗಿ ರುದ್ರಭೂಮಿಯಲ್ಲಿ ಪೌರಕರ್ಮಿಕರಿಂದ ಬಿಡುಗಡೆ ಗಳಿಸಿ ಜನ ಮನ್ನಣೆ ಪಡೆದರು. ನಗರ ಪಾಲಿಕೆ, ನಗರಸಭ ಪುರಸಭೆ ಪಟ್ಟಣ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನಮ್ಮಂತಹ ಸಾಮಾನ್ಯ ಪೌರಕಾರ್ಮಿಕರಿಂದ ಅಡವಿ ಚಿತ್ರದ ಫಸ್ಟ್ ಲುಕ್…

Read More

ನಾವು ಕೊಟ್ಟ ಭರವಸೆ ಈಡೇರಿಸದಿದ್ದರೇ ಒಂದು ಕ್ಷಣವೂ ಅಧಿಕಾರದಲ್ಲಿರುವುದಿಲ್ಲ ಎಂದು ಮಾಜಿ ಸಿಎಂ ಸಿದ‍್ಧರಾಮಯ್ಯ ಹೇಳಿದರು.ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ಬಿಳುಗುಲಿ ಗ್ರಾಮದಲ್ಲಿ ಮಾತನಾಡಿದ ಸಿದ್ಧರಾಮಯ್ಯ, ಬಾದಾಮಿ ಕ್ಷೇತ್ರ ದೂರವಾಗಿದ್ದರಿಂದ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಅಳೆದು ತೂಗಿ ಹೈಕಮಾಂಡ್ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಹೇಳಿದೆ. ‘ ವರುಣಾದಲ್ಲಿ ನಾನು ಮತಯಾಚನೆಗೆ ಬರಲ್ಲ. ಯತೀಂದ್ರ ಸಿದ್ಧರಾಮಯ್ಯ ಬರಲಿದ್ದಾರೆ. ಹೈಕಮಾಂಡ್ ನಿರ್ಧರಿಸಿದ ಮೇಲೆ ಯತೀಂದ್ರ ಸ್ವಾಗತಿಸಿದ್ದಾರೆ. ನಾನು ರಾಝ್ಯ ಸುತ್ತಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದರು.ಇದೇ ವೇಳೆ ಬಿಜೆಪಿ ಸರ್ಕಾರ ಮತ್ತು ನಾಯಕರಿಗೆ ಶಾಪ ಹಾಕಿದ ಸಿದ್ಧರಾಮಯ್ಯ, ಇವರ ಮನೆ ಹಾಳಾಗ ಬಡವರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ನಾವು ಅಧಿಕಾರದಲ್ಲಿದ್ದಾಗ 15 ಲಕ್ಷ ಮನೆಗಳನ್ನ ಕಟ್ಟಿಸಿಕೊಟ್ಟಿದ್ದವು. ನಾವು ಮತ್ತೆ ಅಧಿಕಾರಕ್ಕೆ ಬಂದರೇ 20ಲಕ್ಷ ಮನೆ ಕಟ್ಟಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು. ಬೊಮ್ಮಾಯಿ ಮಾತೆತ್ತಿದ್ದರೇ ಧರ್ಮರಾಯನ ತರ ಮಾತನಾಡುತ್ತಾರೆ. ರಾಜ್ಯದಲ್ಲಿ 40 ಪರ್ಸೆಂಟ್ ಬೆಂಗಳೂರಿಲ್ಲಿ 50ಪರ್ಸೆಂಟ್ ಇದೆ. 40 ಪರ್ಸೆಂಟ್ ಸರ್ಕಾರವೆಂದು…

Read More

ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ‘ದಹಿ’ ಎಂದು ಮುದ್ರಣ ಮಾಡುವುದು ಕಡ್ಡಾಯ ಎಂದು ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಆದೇಶಿಸಿರುವುದನ್ನ ಖಂಡಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ ಪ್ರಧಾನಿ ಮೋದಿ ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು.ಇದನ್ನು ಒಪ್ಪಲು ಸಾಧ್ಯವಿಲ್ಲ. ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್…

Read More

ಔಷಧಿಗಳ ಬೆಲೆ ಇಷ್ಟು ಏರಿಕೆಯಾಗಿರುವುದು ಇದೇ ಮೊದಲು ಅಗತ್ಯ ಔಷಧಗಳ ಪಟ್ಟಿಯಲ್ಲಿರುವ 900 ಔಷಧಿಗಳ ಬೆಲೆ ಶೇ.12ರಷ್ಟು ಏರಿಕೆಯಾಗಿದೆ. ಪ್ರಸ್ತುತ ಅವುಗಳನ್ನು ನಿಯಂತ್ರಿತ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಕಳೆದ ವರ್ಷ ಶೇ 10ರಷ್ಟು ಬೆಲೆ ಏರಿಕೆಯಾಗಿತ್ತು. ಎರಡು ವರ್ಷಗಳಲ್ಲಿ ಶೇ.22ರಷ್ಟು ಹೆಚ್ಚಳವಾಗಿದೆ .ನೋವು ನಿವಾರಕಗಳು, ಆ್ಯಂಟಿಬಯೋಟಿಕ್‌ಗಳು ಮತ್ತು ಅಲರ್ಜಿ ಔಷಧಿಗಳ ಬೆಲೆಯೂ ಏರಿಕೆಯಾಗಲಿದೆ. ಇದರಿಂದ ಜನಸಾಮಾನ್ಯರ ವೈದ್ಯಕೀಯ ವೆಚ್ಚದಲ್ಲಿ ಭಾರಿ ಏರಿಕೆಯಾಗಲಿದೆ. ಕಳೆದ ವರ್ಷ, ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರವು ಔಷಧಿಗಳ ಸಗಟು ಬೆಲೆ ಸೂಚ್ಯಂಕದಲ್ಲಿ 10.7 ಶೇಕಡಾ ಹೆಚ್ಚಳವನ್ನು ಘೋಷಿಸಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹೆಚ್.ಡಿ.ಕೋಟೆ: ಹೆಚ್.ಡಿ. ಕೋಟೆ ಆಡಳಿತ ಸೌಧ ಕಾರ್ಯಲಯದಲ್ಲಿ ವಿಧಾನಸಭಾ ಸದಸ್ಯರ ಬೋರ್ಡ್ ತೆರವು ಗೊಳಿಸದ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಘಟನೆ ನಡೆದಿದೆ. ಆಡಳಿತ ಸೌಧದ ಕೊಠಡಿ ಒಂದರ ಮುಂದೆ ಶಾಸಕ ಅನಿಲ್ ಚಿಕ್ಕಮಾದು ಹೆಸರು ರಾರಾಜಿಸುತ್ತಿದ್ದ ದೃಶ್ಯ ಕಂಡು ಬಂದಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣದಲ್ಲಿ ಅಧಿಕಾರಿಗಳು ಬೋರ್ಡ್ ತೆರವುಗೊಳಿಸಬೇಕಿತ್ತು. ಆದರೆ, ತಾಲೂಕು ಆಡಳಿತ ಸಿಬ್ಬಂದಿ ವರ್ಗವು ದಿವ್ಯ ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದೆ. ಮಾರ್ಚ್ 29ರಂದು ನೀತಿ ಸಂಹಿತೆ ಜಾರಿಯಾಗಿತ್ತು. ಆದರೆ ಮಾರ್ಚ್ 30 ಆದರೂ ಅಧಿಕಾರಿಗಳು ಬೋರ್ಡ್ ತೆರವುಗೊಳಿಸದೇ ನಿರ್ಲಕ್ಷ್ಯವಹಿಸಿದ್ದಾರೆ. ಬೋರ್ಡ್ ತೆರವುಗೊಳಿಸದೇ ಇಲ್ಲಿನ ತಹಶೀಲ್ದಾರ್ ಮಹೇಶ್ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More