Subscribe to Updates
Get the latest creative news from FooBar about art, design and business.
- ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
- ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
- ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
- ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
- ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
- ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
- ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
- ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
Author: admin
ಆರೋಗ್ಯ ಕವಚ 108 ಯೋಜನೆಯಡಿ ಆಂಬುಲೆನ್ಸ್ ಸೇವೆ ಸುಧಾರಿಸಲು ಮುಂದಾಗಿರುವ ಆರೋಗ್ಯ ಇಲಾಖೆ, ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನ ಮಾಡಲು ತಾಂತ್ರಿಕ ಸಮಿತಿ ರಚಿಸಿದೆ. ‘104’ ಆರೋಗ್ಯ ಸಹಾಯವಾಣಿ ಸೇವೆ ಸುಧಾರಿಸಲು ಸಹ ಈ ಸಮಿತಿ ನೆರವಾಗಲಿದೆ. ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಹಾಗೂ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈ ಸಮಿತಿ ಕಾರ್ಯ ನಿರ್ವಹಿಸಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾಜಿ ಕುಲಪತಿ, ಕಾರ್ಮಿಕ ಇಲಾಖೆಯ ಆಯುಕ್ತ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರನ್ನು ಸಮಿತಿ ಒಳಗೊಂಡಿರಲಿದೆ ಎಂದು ಇಲಾಖೆ ತಿಳಿಸಿದೆ. ಟೆಂಡರ್ ಪ್ರಕ್ರಿಯೆ, ಉತ್ತಮ ಆರೋಗ್ಯ ಸೇವೆಗೆ ಅಳವಡಿಸಿಕೊಳ್ಳಬೇಕಾದ ಸೌಲಭ್ಯ, ತಂತ್ರಜ್ಞಾನದ ಬಗ್ಗೆ ಒಂದು ತಿಂಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಇಲಾಖೆ ಹೇಳಿದೆ. ಯೋಜನೆ ನಿರ್ವಹಿಸುತ್ತಿರುವ ಜಿವಿಕೆ-ಇಎಂಆರ್‌ಐ ಸಂಸ್ಥೆ ವಿರುದ್ಧ ಆರೋಪಗಳಿದ್ದವು. ವೇತನ ಪಾವತಿಯಾಗುತ್ತಿಲ್ಲ ಎಂದು ಸಂಸ್ಥೆಯ ನೌಕರರು ದೂರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು: ಸಹಾಯಮಾಡುವ ನೆಪದಲ್ಲಿ ವೃದ್ಧೆಯೊಬ್ಬರನ್ನು ಪರಿಚಯ ಮಾಡಿಕೊಂಡು ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಸಂತೆಮಾವತ್ತೂರು ಗ್ರಾಮದಲ್ಲಿ ಘಟನೆ ನಡೆದಿತ್ತು. ಕಳೆದ ವಾರ ಚಿಕ್ಕಮ್ಮ ಎಂಬ ವೃದ್ಧೆಯ ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು. ಚಿಕ್ಕಮ್ಮ ಅವರನ್ನು ಕಟ್ಟಿಹಾಕಿ ಹಣ, ಒಡವೆ ದೋಚಿದ್ದ ಖತರ್ನಾಕ್ ಕಳ್ಳರು ಬೆಂಗಳೂರಿಗೆ ಪರಾರಿಯಾಗಿದ್ದರು. ಇದೀಗ ಕಳ್ಳತನ ಮಾಡಿದ ಆರೋಪಿಗಳಾದ ಶರತ್, ಶಿವರಾಜು, ವಸಂತಕುಮಾರ್, ಅಲೀಶಾ ಬಾಬು ಅವರ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಬ್ಯಾಂಕಿಗೆ ಬಂದಿದ್ದ ವೃದ್ದೆಯನ್ನ ಪರಿಚಯ ಮಾಡಿಕೊಂಡಿದ್ದ ಆರೋಪಿ ಶರತ್, ಎಟಿಎಂ ನ ಲಾಕರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದನು. ಕಳೆದ ವಾರ ಬ್ಯಾಂಕಿಗೆ ಬಂದಿದ್ದ ಚಿಕ್ಕಮ್ಮರನ್ನ ಶರತ್ ಪರಿಚಯ ಮಾಡಿಕೊಂಡಿದ್ದನು. ಈ ವೇಳೆ ವೃದ್ಧೆ ಚಿಕ್ಕಮ್ಮ ಶರತ್ ಬಳಿ ತನ್ನ ಕಷ್ಟ ಸುಖಗಳನ್ನ ಹೇಳಿಕೊಂಡಿದ್ದರು. ಅಜ್ಜಿ ಒಬ್ಬಂಟಿಯಾಗಿರುವುದನ್ನು ಶರತ್ ಖಾತರಿಪಡಿಸಿಕೊಂಡಿದ್ದನು. ತನ್ನ ಸ್ನೇಹಿತರ ಜೊತೆ ಸೇರಿ ವೃದ್ಧೆಯ ಮನೆ ಮೇಲೆ ದಾಳಿ ಮಾಡಿದ್ದ…
ತುಮಕೂರು: ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬದ ಗ್ರಾಮದ ಕೆರೆಯಲ್ಲಿ ನಡೆದಿದೆ. ಹರೀಶ್(31) ಯೋಗೀಶ್ (36) ಸಾವನ್ನಪ್ಪಿದ ಯುವಕರಾಗಿದ್ದಾರೆ. ಗ್ರಾಮದ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು ಗ್ರಾಮದ ಕೆರೆಗೂ ಕೂಡ ನೀರು ಹರಿದು ಬರುತ್ತಿದೆ ಈ ನಡುವೆ ತಮ್ಮ ಸ್ನೇಹಿತರೊಂದಿಗೆ ಈ ಯುವಕರು ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಮೀನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಇಬ್ಬರೂ ಕೂಡ ಕಾಲ ಜಾರಿ ಕೆರೆಗೆ ಬಿದ್ದಿದ್ದಾರೆ. ಆದರೆ ಸುತ್ತಮುತ್ತಲಿದ್ದ ಯುವಕರು ಇವರನ್ನು ಪಾರು ಮಾಡಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಗುಬ್ಬಿ ತಾಲ್ಲೂಕಿನ ಆಡುಗೊಂಡನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಪತ್ತೆಯಾದವರಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆದಿದೆ. ಕೆರೆಯ ಬಳಿ ನೂರಾರು ಮಂದಿ ಗ್ರಾಮಸ್ಥರು ಜಮಾಯಿಸಿದ್ದಾರೆ. ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಹೆಚ್.ಡಿ.ಕೋಟೆ: ಕಂಠಮಟ್ಟ ಕುಡಿದು ಪುಂಡಾಟ ಮೆರೆದು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಕಿಡಿಗೇಡಿಗಳಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹೆಚ್.ಡಿ.ಕೋಟೆ ಪಟ್ಟಣದ ಹ್ಯಾಂಡ್ ಪೋಸ್ಟ್ ನಲ್ಲಿ ನಡೆದಿದೆ. ಹೊರಗಿನಿಂದ ಹ್ಯಾಂಡ್ ಪೋಸ್ಟ್ ಸರ್ಕಲ್ ಗೆ ಬಂದು ಅನವಶ್ಯಕವಾಗಿ ರಸ್ತೆಯಲ್ಲಿ ಅತೀ ವೇಗವಾಗಿ ಕಾರನ್ನು ಸರ್ಕಲ್ ನಲ್ಲಿ ಸುಖಸುಮ್ಮನ್ನೆ ಕಾರನ್ನು ಸುತ್ತಿಸಿ, ರಸ್ತೆ ಬದಿಯಲ್ಲಿ ನಿಂತಿದ್ದ ಪ್ರಯಾಣಿಕರು ಹಾಗೂ ಪಾದಚಾರಿಗಳಿಗೆ ಕೊಚ್ಚೆಯನ್ನು ಹಾರಿಸಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ. ಎರಡೂ ಕಾರಿನಲ್ಲಿ ಬಂದು ಪುಂಡಾಟ ಆಡುತಿದ್ದ ಪಾನ ಮತ್ತರಿಗೆ ಆಕ್ರೋಶಗೊಂಡ ಸಾರ್ವಜನಿಕರು ಗೂಸ ನೀಡಿದ್ದು, ಕಾರಿನಲ್ಲಿದ್ದ ಒಬ್ಬನನ್ನು ಸಾರ್ವಜನಿಕರು ಹಿಡಿದುಪೋಲಿಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಉಳಿದವರು ಪರಾರಿಯಾಗಿದ್ದಾರೆ. ಪೊಲೀಸರು ಪರಾರಿಯಾದವರ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ದೇವಾಂಗ ಸಂಘದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂತರಾಜು ಅವರ ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ- ಅಂಶ ಸ್ಪಷ್ಟವಾಗಿ ತಿಳಿಯಲಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲೇ ವರದಿ ಸಿದ್ಧವಾಗಿತ್ತು. ರಾಜಕೀಯ ಕಾರಣಗಳಿಗಾಗಿ ವರದಿ ಸ್ವೀಕಾರವಾಗಲಿಲ್ಲ. ಈ ಹಿಂದೆ ಅಧಿಕಾರಕ್ಕೆ ಬಂದ ಸರ್ಕಾರಗಳು ಕಾಂತರಾಜು ವರದಿ ಸ್ವೀಕಾರ ಮಾಡಲಿಲ್ಲ. ವರದಿ ಅನುಷ್ಠಾನದಿಂದ ಜಾತಿಗಳ ಸ್ಥಿತಿಗತಿ ಆಧರಿಸಿ ಶಿಕ್ಷಣ, ಉದ್ಯೋಗ ಸೇರಿ ನಾನಾ ವಲಯಗಳಲ್ಲಿ ಅವಕಾಶ ಮತ್ತು…
ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ. ರಾಷ್ಟ್ರದ ಸಾಲ 175 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ರಾಜ್ಯದ ಸಾಲ 5. 5 ಲಕ್ಷ ಕೋಟಿ ಮುಟ್ಟಿದೆ. 35 ಸಾವಿರ ಕೋಟಿ ರೂಪಾಯಿಗಳಷ್ಟು ಯನ್ನು ಕಟ್ಟಬೇಕಾಗಿದೆ. ಹೀಗಿರುವಾಗ ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು? ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಪ್ರಶ್ನಿಸಿದ್ದಾರೆ. ಭಾರತ್ ಸೈಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ದೆಹಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಅಲ್ಲಿನ ಪ್ರಜೆಗಳಿಗೆ ಉಚಿತ ವಿದ್ಯುತ್, ಉಳಿಯುವ ನೀರು, ಶಿಕ್ಷಣ, ಆರೋಗ್ಯ, ಸಾರಿಗೆ ಸೇರಿದಂತೆ ಎಲ್ಲ ಸವಲತ್ತುಗಳನ್ನು ಉಚಿತವಾಗಿ ನೀಡುತ್ತಿದ್ದರೂ ಸಹ ಸಾಲರಹಿತ ಬಜೆಟ್ ಮಂಡಿಸುತ್ತಿರುವುದು ಆಮ್ ಆದ್ಮಿ ಪಕ್ಷದ ವಿಶೇಷತೆ ಎಂದು…
ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ, ಪದ್ಮವಿಭೂಷಣ ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬ ಸದಸ್ಯರು ಹಾಗೂ ಅವರ ನೇತೃತ್ವದ ಸಂಸ್ಥೆಗಳ ವಿರುದ್ಧ ಆಧಾರ ರಹಿತ ಆರೋಪ ಮಾಡುವುದು ಹಾಗೂ ಪ್ರಕಟಿಸದಂತೆ ಬೆಂಗಳೂರಿನ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧಕಾಜ್ಞೆ ನೀಡಿ ಆದೇಶ ಹೊರಡಿಸಿದೆ. ಧರ್ಮಸ್ಥಳ ದೇವಾಲಯ, ದೇವಾಲಯದ ಅಧೀನದಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡದಂತೆ ನಿರ್ಬಂಧ ಹೇರಬೇಕು ಎಂದು ಕೋರಿ ಶೀನಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನಗರದ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ಮಾಡಿದೆ. ಅಲ್ಲದೆ, ಈ ಸಂಬಂಧ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್, ಇನ್ಸ್ಟಾಗ್ರಾಮ್, ಯೂಟ್ಯೂಬ್, ಟಿವಿ ಚಾನಲ್ ಮತ್ತು ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರು ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ…
ಮಿದುಳು ನಿಷ್ಕ್ರಿಯಗೊಂಡಿದ್ದ ಕೋಲಾರದ 51 ವರ್ಷದ ರೈತರೊಬ್ಬರ ಅಂಗಾಂಗಗಳನ್ನು ಇಲ್ಲಿನ ಸ್ಪರ್ಶ್ ಆಸ್ಪತ್ರೆಯ ವೈದ್ಯರು ದಾನವಾಗಿ ಪಡೆದಿದ್ದಾರೆ. ಅವರ ಪತ್ನಿ ಅಂಧರಾಗಿದ್ದು, ಪುತ್ರಿ ಇದ್ದಾಳೆ. ಅನಿಯಂತ್ರಿತ ರಕ್ತದೊತ್ತಡದಿಂದ ಅವರಿಗೆ ಮಿದುಳಿನಲ್ಲಿ ರಕ್ತಸ್ರಾವವಾಗಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಜು. 18ರಂದು ಯಶವಂತಪುರದ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದರು. ಜು. 20ರಂದು ಅವರ ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿದ ವೈದ್ಯರು, ಕುಟುಂಬದ ಸದಸ್ಯರ ಸಮ್ಮತಿ ಮೇರೆಗೆ ಅಂಗಾಂಗ ದಾನ ಪ್ರಕ್ರಿಯೆ ಕೈಗೊಂಡರು. ಹೃದಯ, ಶ್ವಾಸಕೋಶ, ಎರಡು ಮೂತ್ರಪಿಂಡಗಳು ಮತ್ತು ಕಾರ್ನಿಯಾವನ್ನು ದಾನವಾಗಿ ಪಡೆದರು ಎಂದು ಆಸ್ಪತ್ರೆ ತಿಳಿಸಿದೆ. ‘ದುಃಖದ ಸಂದರ್ಭದಲ್ಲಿಯೂ ಕುಟುಂಬ ಸದಸ್ಯರು ಅಂಗಾಂಗ ದಾನಕ್ಕೆ ಸಮ್ಮತಿಸುವ ಮೂಲಕ ಮಾದರಿಯಾಗಿದ್ದಾರೆ. ಅಂಗಾಂಗಕ್ಕಾಗಿ ಹಲವಾರು ಮಂದಿ ಎದುರು ನೋಡುತ್ತಿದ್ದು, ಈ ಬಗ್ಗೆ ಜಾಗೃತಿ ಹೆಚ್ಚಬೇಕು’ ಎಂದು ಆಸ್ಪತ್ರೆಗಳ ಸಮೂಹದ ಮುಖ್ಯ ಕಾರ್ಯಾಚರಣೆ ಅಧಿಕಾರಿ ಜೋಸೆಫ್ ಸಂಘ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಬೆಂಗಳೂರು: ನಗರದಲ್ಲಿ ಮಹಿಳೆಯರ ಸರಗಳವು ಮಾಡಿ ಪರಾರಿಯಾಗಿ ಉಡುಪಿಯಲ್ಲಿ ಸೆರೆಸಿಕ್ಕಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರ ಠಾಣೆ ಪೊಲೀಸರು ಕಸ್ಟಡಿಗೆ ಪಡೆದಿದ್ದು, ಇವರಿಂದ 7 3 ಲಕ್ಷ ಮೌಲ್ಯದ 49 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ಮೊಹಮ್ಮದ್ ರಫೀಕ್ ಹಾಗೂ ತೌಫಿಕ್ ಸಾಧಿಕ್ ಬಂಧಿತರು. ಅಪರಾಧ ಹಿನ್ನೆಲೆಯುಳ್ಳ ಇವರಿಬ್ಬರು, ಬೆಂಗಳೂರು, ಮಂಗಳೂರು, ಉಡುಪಿ ಹಾಗೂ ಶಿವಮೊಗ್ಗದಲ್ಲಿ ಮಹಿಳೆಯರ ಸರಗಳವು ಮಾಡಿದ್ದರು. ಇತ್ತೀಚೆಗಷ್ಟೇ ಇವರನ್ನು ಉಡುಪಿ ಪೊಲೀಸರು ಬಂಧಿಸಿದ್ದರು. ಬಾಡಿ ವಾರಂಟ್ ಮೂಲಕ ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ, ಕೆಲ ಪ್ರಕರಣಗಳು ಪತ್ತೆಯಾಗಿವೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಮಲ್ಲೇಶ್ವರ ಠಾಣೆ ವ್ಯಾಪ್ತಿಯ ನಿವಾಸಿ ಶಾಂತಮ್ಮ (70) ಅವರು ಮೇ 27ರಂದು ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ಬೈಕ್ ನಲ್ಲಿ ಬಂದಿದ್ದ ಆರೋಪಿಗಳು, ಶಾಂತಮ್ಮ ಅವರನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತೊಯ್ದಿದ್ದರು. ಈ ಸಂಬಂಧ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿಗಳ ಸುಳಿವು ಸಿಕ್ಕಿತ್ತು’ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಮಾರುಕಟ್ಟೆಯಲ್ಲಿ ದರ ಗಗನಕ್ಕೇರಿರುವ ಸಂದರ್ಭದಲ್ಲಿ ಟೊಮೆಟೋ ತುಂಬಿದ್ದ ಗೂಡ್ಸ್ ವಾಹನವನ್ನೇ ಕಳ್ಳತನ ಮಾಡಿದ್ದ ದಂಪತಿಯನ್ನು ಆರ್ ಎಂಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭಾಸ್ಕರ್ ಹಾಗೂ ಆತನ ಪತ್ನಿ ಸಿಂಧುಜಾ ಎಂದು ಗುರುತಿಸಲಾಗಿದೆ. ರಾಕಿ, ಕುಮಾರ್, ಮಹೇಶ್ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಜುಲೈ 8ರಂದು ಹಿರಿಯೂರಿನ ರೈತನೋರ್ವ ತನ್ನ ಜಮೀನಿನಲ್ಲಿ ಬೆಳೆದಿದ್ದ 250ಕ್ಕೂ ಹೆಚ್ಚು ಕೆಜಿಯಷ್ಟು ಟೊಮೆಟೋವನ್ನು ಕೋಲಾರಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ ಆರ್‌ಎಂಸಿ ಯಾರ್ಡ್ ಬಳಿ ಕಾರಿನಲ್ಲಿ ಬಂದಿದ್ದ ಆರೋಪಿಗಳು ತಮ್ಮ ಕಾರಿಗೆ ನಿಮ್ಮ ವಾಹನ ಟಚ್ ಆಗಿದೆ ಎಂದು ಬಲವಂತದಿಂದ ಗೂಡ್ಸ್ ವಾಹನ ನಿಲ್ಲಿಸಿ ಚಾಲಕ ಹಾಗೂ ರೈತನ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಗಾಡಿಯಲ್ಲಿದ್ದ ಟೊಮೆಟೋ ನೋಡಿ ಕಳ್ಳತನದ ಸಂಚು ರೂಪಿಸಿದ್ದರು. ಚಾಲಕ ಹಾಗೂ ರೈತನನ್ನು ಕೂರಿಸಿಕೊಂಡು ಹೋಗಿ ಚಿಕ್ಕಜಾಲ ಬಳಿ ಬಿಟ್ಟು ಟೊಮೆಟೊ ತುಂಬಿದ್ದ ವಾಹನ ಸಮೇತ ಪರಾರಿ ಆಗಿದ್ದರು. ನಂತರ ಚೆನ್ನೈ ಮಾರುಕಟ್ಟೆಯಲ್ಲಿ ಟೊಮೆಟೊ ಮಾರಾಟ ಮಾಡಿದ್ದರು.…