Author: admin

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಳೆದ ಎರಡು ಮೂರು ದಿನಗಳಿಂದ ನಮ್ಮ ಶಾಸಕರಿಗೆ ಫೋನ್ ಮಾಡುತ್ತಿದ್ದಾರೆ. ಟಿಕೆಟ್ ಭರವಸೆ ನೀಡುತ್ತಿದ್ದಾರೆ. ಹತಾಶೆಯಿಂದ ‌ನಮ್ಮ ಪಕ್ಷದವರನ್ನು ಸಂಪರ್ಕಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ ಎನ್ನುವುದಕ್ಕೆ ಇದೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಡಿಪಿಐ ಸಂಘಟನೆಯಿಂದ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮಾತನಾಡಿ, ಎಸ್ ಡಿಪಿಐನವರು ನನನ್ನು ಹೊಗಳಲು ಸಾಧ್ಯನಾ? ಎಸ್ ಡಿಪಿಐ ಒಂದು ದೇಶದ್ರೋಹಿ ಸಂಘಟನೆ. ಅವರು ದೇಶದ ವಿರುದ್ಧ ಚಟುವಟಿಕೆ ಮಾಡುವವರು. ಭಾರತದ ದೇಶದ ಅಲ್ಪಸಂಖ್ಯಾತರ ವಿರೋಧಿಗಳೇ ಎಸ್ ಡಿಪಿಐ ನವರು. ಅವರಿಂದ ನಾನೇನು ಹೊಗಳಿಕೆ ಬಯಸಲ್ಲ. ಯಾವಾಗಲು ನಮ್ಮ ವಿರೋಧಿಗಳು ಇದ್ದಾರೆ. ಅವರ ಹೇಳಿಕೆಗೆ ಸೊಪ್ಪು ಹಾಕುವುದಿಲ್ಲ. ಖಂಡಿತವಾಗಿಯೂ ಕಾನೂನು ಕ್ರಮ ಆಗುತ್ತದೆ. ಜನ ತೀರ್ಮಾನ ಮಾಡುತ್ತಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಇಂದು ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ. ಇಂದೇ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ಮೇ ಮೊದಲ ವಾರದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ  ಎಂದು   ಕೇಂದ್ರ ಚುನಾವಣಾ ಆಯೋಗ ಎಂದು ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಳಗಾವಿ: ಕಳೆದ 5 ವರ್ಷದಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 105ಕ್ಕೂ ಹೆಚ್ಚು ದೇವಸ್ಥಾನಗಳ ನಿರ್ಮಾಣ ಇಲ್ಲವೇ, ಜೀರ್ಣೋದ್ಧಾರ ಮಾಡಲಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಮಂಗಳವಾರ ಕ್ಷೇತ್ರದ ಸುಳಗಾ (ವೈ) ಗ್ರಾಮದ ಶ್ರೀ ಭಾವಕೇಶ್ವರಿ ದೇವಿ ಮಂದಿರದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಕ್ಷೇತ್ರ ಧಾರ್ಮಿಕವಾಗಿ ಅತ್ಯಂತ ಜಾಗ್ರತ ಕ್ಷೇತ್ರವಾಗಿದೆ. ಜನರ ಭಾವನೆಗೆ ಅನುಗುಣವಾಗಿ ಎಲ್ಲ ಜಾತಿ, ಧರ್ಮಗಳ ಧಾರ್ಮಿಕ ಕಾರ್ಯಗಳಿಗೆ ಹಣ ಒದಗಿಸಲಾಗಿದೆ. ಸ್ವಂತ ಆಸಕ್ತಿ ವಹಿಸಿ ಅತ್ಯಂತ ಗುಣಮಟ್ಟದ ಕಾಮಗಾರಿ ನಡೆಯುವಂತೆ ಗಮನಹರಿಸಲಾಗಿದೆ. ಜನರ ಸಹಕಾರವನ್ನು ಎಂದಿಗೂ ನಾನು ಮರೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಕ್ಷೇತ್ರದ ಅನೇಕ ದೇವಸ್ಥಾನಗಳನ್ನು ಧಾರ್ಮಿಕ ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿಪಡಿಸಲು ಅವಕಾಶವಿದೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಜನರ ಜೊತೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ,…

Read More

ಹೊಳೆನರಸೀಪುರ: ತಾಲೂಕಿನ  ಶ್ರವಣೂರು ಗ್ರಾಮದಲ್ಲಿ ಗ್ರಾಮದ ಕೆರೆ ಹಾಗೂ ಅರಣ್ಯ  ಸಮೀಪ ಇರುವ ಸರ್ಕಾರಿ ಜಾಗದಲ್ಲಿ ಸ್ಥಳೀಯ ವ್ಯಕ್ತಿಗಳಿಗೆ ಸೇರಿದ ಹಸು ಹಾಗೂ ಮೇಕೆಯನ್ನು ಚಿರತೆ ಕೊಂದು ಹಾಕಿದ ಘಟನೆ ನಡೆದಿದೆ ಪುಟ್ಟಸಾಮಿನಾಯಕ ಎಂಬುವರಿಗೆ ಸೇರಿರುವ ಹಸು ಮತ್ತು ಲೋಕೇಶ್ ಎಂಬುವರಿಗೆ ಸೇರಿರುವ ಮೇಕೆ ಮೇಯುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದ್ದು, ಮೇಕೆ ಹಾಗೂ ಹಸು ಎರಡೂ ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ  ನಡೆಸಿ ಮುಂದಿನ ಕ್ರಮ ಕೈಗೊಂಡರು. ಗ್ರಾಮಸ್ಥರು ಚಿರತೆಯನ್ನು ಸೆರೆಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದರು. ವರದಿ: ಮಂಜು, ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ. 2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಜೂನ್…

Read More

ಹೆಚ್.ಡಿ.ಕೋಟೆ: ನಾವು ಯಾರು ಇಂತ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕುವುದಿಲ್ಲ, ಹುಟ್ಟು ಸಾವಿನ ನಡುವೆ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಆರ್.ಧ್ರುವನಾರಾಯಣ್ ಅವರ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ದಿ.ಆರ್.ಧ್ರುವನಾರಾಯಣ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾವು ನಡೆದು ಬಂದ ದಾರಿಯ ಬಗ್ಗೆ ಅವಲೋಕನ ಮಾಡಿಕೊಂಡಾಗ ಸಾರ್ಥಕತೆಯ ತೃಪ್ತಿ ಸಿಗುತ್ತದೆ. ನಾವು ಸಮಾಜ ಮುಖಿಯಾಗಿ ಕೆಲಸ ಮಾಡಿದಾಗ ಮಾತ್ರ ನಮ್ಮ ಬದುಕು ಸಾರ್ಥಕ ಆಗಲು ಸಾಧ್ಯ. ದಿ.ಆರ್.ಧ್ರುವನಾರಾಯಣ್ ಅವರ ಅಕಾಲಿಕ ಸಾವಿನಿಂದ  ದೊಡ್ಡ ಶಕ್ತಿ ಕಳೆದುಕೊಂಡಂತೆ ಆಗಿದೆ, ಅವರ ಶಕ್ತಿ ಇನ್ನೂ ಈ ನಾಡಿಗೆ ಬೇಕಿತ್ತು, ಧ್ರುವನಾರಾಯಣ್ ಅವರಿಗೆ ಧ್ರುವನಾರಾಯಣ್ ಸಾಟಿ, ಅವರ ಜಾಗ ತುಂಬಲಿಕ್ಕೆ ಬೇರೆ ಯಾರಿಂದಲೂ ಸಾಧ್ಯವಿಲ್ಲ. ಆರ್. ಧ್ರುನಾರಾಯಣ್ ಅವರಿಗೆ ಇದ್ದ ದೂರದೃಷ್ಟಿ, ಕಾಳಜಿ ಎಲ್ಲವನ್ನೂ ಅವರ ಮಗ ದರ್ಶನ್ ಅವರಲ್ಲಿ ಕಾಣಬಹುದಾಗಿದೆ, ಎಲ್ಲಾ ರೀತಿಯ ಶಕ್ತಿ…

Read More

ತಿಪಟೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ಬರುವಂತೆ ಕ್ರಮಕೈಗೊಂಡಿರುವ ರಾಜ್ಯ ಸರ್ಕಾರಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಭೇಟಿಯಾಗುವ ಮೂಲಕ ಡಾ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಅಭಿನಂದನೆ ಸಲ್ಲಿಸಿತು. ಬಿ.ಸಿ. ನಾಗೇಶ್ ರವರ ಗೃಹ ಕಚೇರಿಗೆ ಭೇಟಿ ನೀಡಿದ ಸಂಘಟನೆಯ ಮುಖಂಡರು ಸರ್ಕಾರಕ್ಕೆ ಸಚಿವರ ಮೂಲಕ ಅಭಿನಂದನೆಗಳನ್ನು ತಿಳಿಸಿದರು. ಈ ವೇಳೆ ಮಾತನಾಡಿದ  ಅಧ್ಯಕ್ಷರಾದ ಮತ್ತಿಘಟ್ಟ ಶಿವಕುಮಾರ್, ಕಳೆದ 25– 30 ವರ್ಷಗಳಿಂದ ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಾ ಬರುತ್ತಿದ್ದು, ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೆ ಬರುವಂತೆ ಮಾಡಿರುವ ಹಾಗೂ ಕಳೆದ ಮೂರು ತಿಂಗಳ ಹಿಂದೆ ಮೀಸಲಾತಿ ಹೆಚ್ಚಳ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರಕ್ಕೆ ಹಾಗೂ ಸಮುದಾಯದ ಸ್ವಾಮೀಜಿಗಳಾದ ಮಾಧಾರ ಚೆನ್ನಯ್ಯ ಸ್ವಾಮಿಜಿ ಅವರಿಗೂ ಎಲ್ಲಾ ನನ್ನ ಎಲ್ಲಾ ದಲಿತ ಸಂಘಟನೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ. ತಾಲ್ಲೂಕು ಉಪಾಧ್ಯಕ್ಷರಾದ ಗುರುಗದಹಳ್ಳಿ  ಮಂಜುನಾಥ್, ತಾಲೂಕು ಸಂಘಟನಾ ಅಧ್ಯಕ್ಷರಾದ ಅಶೋಕ್ ಬಳ್ಳೇಕೆರೆ, ತಾಲೂಕು ಖಜಾಂಚಿ…

Read More

ಮಧುಗಿರಿ: ತಾಲೂಕು ಆಡಳಿತ ಹಾಗೂ ಅಗ್ನಿ ಬನ್ನಿರಾಯಸ್ವಾಮಿ ಸಂಘದ ವತಿಯಿಂದ ಇಂದು ಅಗ್ನಿಬನ್ನಿರಾಯ ಸ್ವಾಮಿಯ ಜಯಂತೋತ್ಸವ ಸರಳವಾಗಿ ನೆರವೇರಿತು. ಈ ಸಂದರ್ಭದಲ್ಲಿ ಅಗ್ನಿ ಬನ್ನಿ ರಾಯರ ತಾಲೂಕು ಅಧ್ಯಕ್ಷರಾದ ರಂಗನಾಥ ಮಾತನಾಡಿ, ತಿಗಳ ಜನಾಂಗದವರು ನಾವು, ಸ್ವಲ್ಪ ಜಮೀನುಗಳನ್ನು ಹೊಂದಿದ್ದು, ನಮ್ಮ ಕುಲಕಸುಬು ಸೊಪ್ಪು, ತರಕಾರಿ, ಹಣ್ಣು ಇನ್ನು ಮುಂತಾದ ವಸ್ತುಗಳ ಮಾರಾಟದಿಂದ ಜೀವನ ನಡೆಸುತ್ತಿದ್ದು, ನಾವು ಸ್ವಾಭಿಮಾನಿಗಳ ಬದುಕನ್ನು ಕಟ್ಟಿಕೊಂಡಿದ್ದೇವೆ ಎಂದರು. ಅಗ್ನಿ ಬನ್ನಿ ರಾಯರ ಜನಾಂಗಕ್ಕೆ ಸರ್ಕಾರ ಬೆಂಬಲ ನೀಡಿ, ಇಂದು ಎಲ್ಲಾ ಜನಾಂಗದವರು ಅವರವರ ಜಯಂತೋತ್ಸವ ಆಚರಿಸುವ ರೀತಿ, ನಮ್ಮ ಜಾತಿಗೂ ಜಯಂತೋತ್ಸವ ಆಚರಿಸಲು ಅನುವು ಮಾಡಿಕೊಟ್ಟು ಸಹಕರಿಸಿರುತ್ತಾರೆ ಮತ್ತು ತಿಗಳ ಅಭಿವೃದ್ಧಿ ನಿಗಮ ಹಾಗೂ ಎಲ್ಲಾ ಇಲಾಖೆಯ ಸೌಲಭ್ಯಗಳು ರಾಜಕೀಯದಲ್ಲಿ ಗುರುತಿಸಿಕೊಳ್ಳಲು ಸರ್ಕಾರ ಸೌಲಭ್ಯ ದೊರಕಿಸಿದೆ. ಸರ್ಕಾರಕ್ಕೆ ನಾವು ಗೌರವ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಶಿರಸ್ತೇದಾರ್ ಶ್ರೀನಿವಾಸ ರವರು ಮಾತನಾಡಿ, ಇನ್ನು ಮುಂದೆ ವಿಜೃಂಭಣೆಯಿಂದ ನಮ್ಮ ತಾಲೂಕಿನಲ್ಲಿ ಜಯಂತೋತ್ಸವ ಆಚರಣೆ ಮಾಡಲು ನಾವು ಸಹಕರಿಸುತ್ತೇವೆ. ಮುಂದಿನ…

Read More

ಒಳಮೀಸಲಾತಿ ವಿರೋಧಿಸಿ ಶಿಕಾರಿಪುರ ಬಳಿಕ ಇದೀಗ ಇಂದು ಬಾಗಲಕೋಟೆಯಲ್ಲೂ ಪ್ರತಿಭಟನೆ ನಡೆದಿದೆ. ಒಳಮೀಸಲಾತಿ ವಿರುದ್ದ ಬಂಜಾರ ಸಮುದಾಯ ಸಿಡಿದೆದ್ದಿದ್ದು, ಬಾಗಲಕೋಟೆಯ ಅಮೀನಗಢ ಹುನಗುಂದ ತಾಂಡಗಳಲ್ಲಿ ಪ್ರತಿಭಟನೆ ನಡೆದಿದೆ. ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ಹಾಗೆಯೇ ಬಾಗಲಕೋಟೆ ತಾಲೂಕಿನ ಮುಚಖಂಡಿ ತಾಂಡಾದಲ್ಲಿ ಮನೆ ಹಾಗೂ ವಿದ್ಯುತ್ ಕಂಬಗಳಿಗೆ ಕಟ್ಟಿದ್ದ ಬಿಜೆಪಿ ಧ್ವಜ ತೆರವುಗೊಳಿಸಿ ಲಂಬಾಣಿ ಸಮುದಾಯಕ್ಕೆ ಸರ್ಕಾರದಿಂದ ಅನ್ಯಾಯ ಆಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ವಿರೋಧ ಹಿನ್ನೆಲೆ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಗ್ರಾಮದಲ್ಲಿ ರಸ್ತೆ ತಡೆದು, ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ ಹೊರ ಹಾಕಿದ್ದಾರೆ. ಒಳ ಮೀಸಲಾತಿ ಜಾರಿ ಮಾಡದಂತೆ ಆಗ್ರಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಹುಲ್ ಗಾಂಧಿ ಸಂಸದರ ಅನರ್ಹತೆಗೆ ಅಮೆರಿಕ ಪ್ರತಿಕ್ರಿಯಿಸಿದೆ. ಈ ಬಗ್ಗೆ ನಿಗಾ ಇರಿಸಲಾಗಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ಹೇಳಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಜೊತೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ತಮ್ಮ ಬದ್ಧತೆಯನ್ನು ಭಾರತ ಸರ್ಕಾರದೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ಪಟೇಲ್ ಪ್ರತಿಕ್ರಿಯಿಸಿದರು. ಕಾನೂನಿನ ಆಳ್ವಿಕೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯದ ಗೌರವವು ಯಾವುದೇ ದೇಶದ ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ರಾಹುಲ್ ಗಾಂಧಿ ಅವರ ಉಚ್ಛಾಟನೆ ಕುರಿತ ಪ್ರಶ್ನೆಗೆ ಉತ್ತರಿಸಿದ ವೇದಾಂತ್ ಪಟೇಲ್, ರಾಹುಲ್ ಗಾಂಧಿ ಪ್ರಕರಣವನ್ನು ಭಾರತೀಯ ನ್ಯಾಯಾಲಯವು ಗಮನಿಸುತ್ತಿದೆ ಎಂದು ಹೇಳಿದರು. ಅಮೆರಿಕವು ಭಾರತದೊಂದಿಗೆ ಮಾತುಕತೆ ನಡೆಸುತ್ತಿದೆಯೇ ಅಥವಾ ರಾಹುಲ್ ಗಾಂಧಿಯೊಂದಿಗೆ ಮಾತುಕತೆ ನಡೆಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ಪ್ರಕರಣದಲ್ಲಿ ವಿಶೇಷ ಹಸ್ತಕ್ಷೇಪ ಎಂದು ಅರ್ಥವಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…

Read More