Author: admin

ತುರುವೇಕೆರೆ: ಪಟ್ಟಣದಲ್ಲಿ ರೈತರ ಬೃಹತ್ ಹೋರಾಟವನ್ನು ಎಲ್ಲಾ ಸಂಘಟನೆಗಳೊಂದಿಗೆ ಆಗಸ್ಟ್ 3 ರಂದು ತುರುವೇಕೆರೆ ಬಂದ್ ಹಮ್ಮಿಕೊಂಡಿದ್ದೇವೆ ಎಂದು ತಾಳಕೆರೆ ನಾಗೇಂದ್ರ ತಿಳಿಸಿದ್ದಾರೆ . ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷರಾದ ತಾಳ್ಕೆರೆ ನಾಗೇಂದ್ರ ಅವರು ಮಾತನಾಡಿ ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದೆ ಇದು ಅನ್ಯಾಯದ ಪರಮಾವಧಿ ಅಧಿಕಾರಿಗಳಿಗೆ ಹಣ ನೀಡಿದರೆ ಎಂತಹ ಕೊಬ್ಬರಿ ಬೇಕಾದರೂ ಹಾಕಿಸಿಕೊಳ್ಳುತ್ತಾರೆ ಮಾರುಕಟ್ಟೆಯಲ್ಲಿರುವ ಕೊಬ್ಬರಿಯನ್ನು ಖರೀದಿ ಮಾಡುತ್ತಾರೆ ಎಂದು ಆರೋಪಿಸಿ. ರೈತರ ಕೊಬ್ಬರಿಯನ್ನು ಸರಿಯಾಗಿ ಖರೀದಿ ಮಾಡಿಲ್ಲ ಇನ್ನೂ ಮಾರುವಂತ ಕೊಬ್ಬರಿ ಶೇಕಡ 60ರಷ್ಟು ರೈತರ ಬಳಿಯೇ ಇದೆ. ಇವರು ಒಂದು ತಿಂಗಳಿನಿಂದ ಬೇಕು ಬೇಡವೋ ಕರಿಸಿ ಖರೀದಿಸಿದ್ದು ಕಳೆದ ಒಂದು ವಾರದಿಂದ ಬಾಗಿಲನ್ನೇ ಮುಚ್ಚಿ, ನಿನ್ನೆ ನಮ್ಮ ಸಂಘಟನೆಯ ಗೌರವಾಧ್ಯಕ್ಷರು ಕೊಬ್ಬರಿಯನ್ನು ಆರಿಸಿಕೊಂಡು ತಂದಿದ್ದಾರೆ. ಆರಿಸಿಕೊಂಡು ತಂದಿರುವ ಕೊಬ್ಬರಿಯನ್ನು ರಿಜೆಕ್ಟ್ ಮಾಡಿದ್ದಾರೆ. ಇದೇ ತರಹ ಸಾವಿರಾರು ರೈತರಿಗೆ ಅನ್ಯಾಯವಾಗುತ್ತಿದೆ…

Read More

ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ. ವಿರೋಧಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನವನ್ನು ನಡೆಸಲಾಯಿತು. ಆದರೆ ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯವನ್ನು ವ್ಯರ್ಥಗೊಳಿಸಿದರು.ಅವರು ನಡವಳಿಕೆ ಸರಿಯಿರದಿದ್ದ ಕಾರಣ , ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ , ನಮಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್…

Read More

ಬೆಂಗಳೂರು: ಪುಸ್ತಕಗಳಿಗೆ ಸರ್ಕಾರದ ಪ್ರೋತ್ಸಾಹ ಹೆಚ್ಚಾದರೆ ಸಾಹಿತ್ಯದ ಮೌಲ್ಯ ಕಡಿಮೆಯಾಗುತ್ತದೆ. ಕಳಪೆ ಸಾಹಿತ್ಯ ಹೆಚ್ಚಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ವಿಶ್ವವಾಣಿ ಪುಸ್ತಕ ಹೊರ ತಂದಿರುವ ಆರು ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಇಂದು ಬಿಡುಗಡೆಯಾಗಿರುವ ಪುಸ್ತಕಗಳಲ್ಲಿ ಅರ್ಥಪೂರ್ಣವಾಗಿ ಬದುಕಿನ ಒಳ ಮರ್ಮ ಹೇಳುವ ಅಂಕಣಗಳು ಇದರಲ್ಲಿವೆ. ವಿಶ್ವೇಶ್ವರ ಭಟ್ಟರು ಪ್ರತಿದಿನ ಹೊಸದನ್ನು ಹುಡುಕಿ ಜನರಿಗೆ ತಿಳಿಸುತ್ತಾರೆ. ಜನರಿಗೆ ಏನಾದರೂ ಹೇಳುವುದು ಬಹಳ ಕಷ್ಟ. ಅವರಲ್ಲಿ ಇರುವ ಚಿಂತನಾ ಶಕ್ತಿ ಸದಾ ಜೀವಂತ ಇರುವುದನ್ನು ನಾನು ಕಂಡಿದ್ದೇನೆ. ಅವರು ಒಬ್ಬ ಕೇವಲ ಪತ್ರಕರ್ತನಾಗಿ ಬೆಳೆದಿಲ್ಲ. ಒಬ್ಬ ಪತ್ರಕರ್ತ ಎಲ್ಲ ರಂಗದವರೊಂದಿಗೆ ಸಂಪರ್ಕ ಹೊಂದಿರದಿದ್ದರೆ, ಅವರು ಜನರ ಮನಸಿನಿಂದ ದೂರವಾಗುತ್ತಾನೆ ಎಂದರು. ಪತ್ರಕರ್ತರು ಮತ್ತು ರಾಜಕಾರಣಿಗಳ ನಡುವೆ ಅವಿನಾಭಾವ ಸಂಬಂಧ ಇದೆ. ಪತ್ರಕರ್ತರಿಲ್ಲದೆ ರಾಜಕಾರಣ ಇಲ್ಲ. ರಾಜಕಾರಣಿಗಳಿಲ್ಲದೆ ಪತ್ರಿಕೋದ್ಯಮ‌ ಇಲ್ಲ. ಟೀಕೆ ಮಾಡಲಿಕ್ಕೆ ಆದರೂ ಪತ್ರಿಕೆಗಳಿಗೆ ರಾಜಕಾರಣಿಗಳು ಬೇಕು. ರಾಜಕಾರಣಿಗಳು ಭ್ರಮೆಯಲ್ಲಿರುತ್ತೇವೆ. ಆದರೆ ವಾಸ್ತವ ಹಾಗೆ ಇರುವುದಿಲ್ಲ‌…

Read More

ರಾಜ್ಯ ರಾಜಧಾನಿಯಲ್ಲಿ ಸರಗಳ್ಳತನ, ಮೊಬೈಲ್ ಕಳ್ಳತನ, ದರೋಡೆ ಸೇರಿದಂತೆ 40ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ರಫೀಕ್ ಹಾಗೂ ತೌಫೀಕ್ ಸಾಧಿಕ್ ಬಂಧಿತ ಆರೋಪಿಗಳು. ಮೇ 27 ರಂದು ಬೈಕಿನಲ್ಲಿ ಬಂದ ಆರೋಪಿಗಳು ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಮ್ಮ ಎಂಬ 70 ವರ್ಷದ ವೃದ್ಧೆಯ ಚಿನ್ನದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು. ಇನ್ನು ಈ ಬಗ್ಗೆ ಕುರಿತು ಮಾತನಾಡಿದ ಉತ್ತರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ಅವರು, ಮೇ 27ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸರಗಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಲ್ಲೇಶ್ವರಂ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ, ಆರೋಪಿಗಳಿಬ್ಬರು ಸರಗಳ್ಳತನ ಪ್ರಕರಣವೊಂದರಲ್ಲಿ ಉಡುಪಿ ಜಿಲ್ಲೆಯ ಕಾಪು ಠಾಣೆಯ ಪೊಲೀಸರಿಂದ ಬಂಧನವಾಗಿರುವುದನ್ನು ತಿಳಿದು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಬಂಧಿತರಿಂದ ಮೂರು ಲಕ್ಷ ರೂ ಮೌಲ್ಯದ ಒಟ್ಟು 49 ಗ್ರಾಂ ತೂಕದ ಚಿನ್ನದ…

Read More

ರಾಯಚೂರು: ತಾಲೂಕಿನ ವಡ್ಲೂರು ಗ್ರಾಮದಲ್ಲಿ ಮಗನಿಂದಲೇ ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನಿನಲ್ಲಿ ಹೂತಿಟ್ಟಿದ್ದ ಶವವನ್ನು 13 ದಿನಗಳ ಬಳಿಕ ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಜಿಟಿ ಜಿಟಿ ಮಳೆಯಲ್ಲೇ ರಾಯಚೂರು ಎಸಿ ಮೆಹಬೂಬಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಜುಲೈ 7 ರಂದು ವಡ್ಲೂರು ಗ್ರಾಮದಲ್ಲಿ 70 ವರ್ಷದ ಶಿವನಪ್ಪ ಕೊಲೆಯಾಗಿದ್ದು, ಪ್ರಕರಣದ ಆರೋಪಿ ಈರಣ್ಣ ಜುಲೈ 19 ರಂದು ಪೊಲೀಸರಿಗೆ ಶರಣಾದ ಮೇಲೆ ಘಟನೆ ಬೆಳಕಿಗೆ ಬಂದಿದೆ. ಭಾರತ ಮಾಲಾ ಯೋಜನೆ ಹೈವೆಗೆ ಜಮೀನು ಹೋಗಿದ್ದು, ಭೂಸ್ವಾಧೀನ ಪರಿಹಾರ ಹಣಕ್ಕಾಗಿ ತಂದೆ-ಮಗನ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ತಂದೆಯ ಕೊಲೆ ಬಳಿಕ ವಡ್ಲೂರು ಗ್ರಾಮದ ಹೈವೆ ಪಕ್ಕದಲ್ಲಿ ಈರಣ್ಣ ತಾಯಿ ರಂಗಮ್ಮ ಜೊತೆಗೂಡಿ ಶವವನ್ನು ಹೂತಿಟ್ಟಿದ್ದ. ಬಳಿಕ ತಂದೆ ಕಾಣೆಯಾಗಿದ್ದಾರೆ ಎಂದು ಗ್ರಾಮದಲ್ಲಿ ಹೇಳಿಕೊಂಡು ಬಂದಿದ್ದ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ತಂದೆ ಕಾಣೆಯಾಗಿದ್ದಾರೆ ಎಂದು ದೂರು ಕೊಡಲು ಬಂದರೂ ಧೈರ್ಯ ಸಾಲದೆ ವಾಪಸ್ ತೆರಳಿದ್ದ. ಆದರೆ ಈರಣ್ಣನ…

Read More

ಮಂಗಳೂರು: ನಗರದಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೈಲ್ಯಾಂಡ್ ಬಳಿಯ ಅಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್(45) ಬಾಂಗ್ ಮಿಶ್ರಿ ಚಾಕೊಲೇಟ್ ಮಾರುತ್ತಿದ್ದನು. ಈತನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿ ಇದ್ದ 5,500 ರೂ. ಮೌಲ್ಯದ ಬಾಂಗ್ ಚಾಕೊಲೇಟ್ ಜಪ್ತಿ ಮಾಡಿದ್ದಾರೆ. ಕಾರ್ ಸ್ಟ್ರೀಟ್ ಬಳಿ ಬಾಂಗ್ ಮಿಶ್ರಿ ಚಾಕೊಲೇಟ್ ಮಾರುತ್ತಿದ್ದ ಮನೋಹರ್ ಶೇಟ್ (49) ನನ್ನು ಮಂಗಳೂರು ಉತ್ತರ ಠಾಣಾ ಬಂಧಿಸಿದ್ದಾರೆ. ಆರೋಪಿಯಿಂದ 48,000 ರೂ. ಮೌಲ್ಯದ ಬಾಂಗ್ ಚಾಕೊಲೇಟ್ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಚೊಚ್ಚಲ ಆವೃತ್ತಿಯ ಯಶಸ್ಸಿನ ಬಳಿಕ ಬಹುನಿರೀಕ್ಷಿತ ದ್ವಿತೀಯ ಆವೃತ್ತಿಯ ಶ್ರೀರಾಮ್ ಕ್ಯಾಪಿಟಲ್ ಮಹಾರಾಜ ಟ್ರೋಫಿ ಟೂರ್ನಿಗೆ ತಯಾರಿ ಆರಂಭವಾಗಿದೆ. ಆಗಸ್ಟ್ 13ರಿಂದ 29ರವರೆಗೂ ಟೂರ್ನಿಗೆ ದಿನಾಂಕ ನಿಗದಿಯಾಗಿದ್ದು, ಇಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಆಟಗಾರರ ಹರಾಜು ಪ್ರಕ್ರಿಯೆಗೆ ನಾಲ್ಕು ಕೆಟಗರಿಗಳನ್ನು ನಿಗದಿಸಲಾಗಿದ್ದು, ಪ್ರತಿ ಫ್ರಾಂಚೈಸಿಗೆ ತನ್ನ ಆಟಗಾರರನ್ನು ಖರೀದಿಸಲು 50 ಲಕ್ಷ ರೂ ಗರಿಷ್ಠ ಮಿತಿ ನೀಡಲಾಗಿದೆ. ‘ಎ’ ಕೆಟಗರಿಯಲ್ಲಿ ಭಾರತ ರಾಷ್ಟ್ರೀಯ ತಂಡ ಹಾಗೂ ಐಪಿಎಲ್ ತಂಡಗಳನ್ನು ಪ್ರತಿನಿಧಿಸಿರುವ ಆಟಗಾರರ ಹರಾಜು ನಡೆಯಲಿದ್ದು, ‘ಬಿ’ ಕೆಟಗರಿಯಲ್ಲಿ ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ, ಸೈಯ್ಯದ್ ಮುಸ್ತಾಕ್ ಅಲಿ ಟ್ರೋಫಿಯಂತಹ ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಆಡಿರುವ ಹಿರಿಯ ಆಟಗಾರರ ಹರಾಜು ನಡೆಯಲಿದೆ. ಇನ್ನು ‘ಸಿ’ ಕೆಟಗರಿಯಲ್ಲಿ ಬಿಸಿಸಿಐ ಅನುಮೋದಿತ ಟೂರ್ನಿಗಳಲ್ಲಿ ಪಾಲ್ಗೊಳ್ಳುತ್ತಿರುವ ಆಟಗಾರರ ಹರಾಜು ನಡೆದರೆ, ‘ಡಿ’ ಕೆಟಗರಿಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ. ಎಸ್. ಸಿ. ಎ)ಯಲ್ಲಿ ನೋಂದಾಯಿತ ಆಟಗಾರರ ಹರಾಜು ನಡೆಯಲಿದೆ. ಪ್ರತಿ ಫ್ರಾಂಚೈಸಿಯು ಕನಿಷ್ಠ…

Read More

15 ದಿನಗಳ ಕಾಲ ನಡೆದ ಬಜೆಟ್ ಅಧಿವೇಶನಕ್ಕೆ ತೆರೆ ಬಿದ್ದಿದ್ದು, ಪ್ರತಿಪಕ್ಷಗಳ ಗೈರಿನಲ್ಲೇ ಧನ ವಿನಿಯೋಗ ವಿಧೇಯಕಕ್ಕೆ ವಿಧಾನ ಪರಿಷತ್ ಅಂಗೀಕಾರ ನೀಡಿದೆ. ಸದನ ನಡೆಸಲು ಸಹಕರಿಸಿದ ಸರ್ವರಿಗೂ ಧನ್ಯವಾದ ಅರ್ಪಿಸಿದ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದರು. ಬಜೆಟ್ ಮೇಲಿನ ಚರ್ಚೆಯ ನಂತರ ಮಾತನಾಡಿದ ಸಭಾನಾಯಕ ಬೋಸರಾಜ್, ಕಲಾಪ ನಡೆಸಲು ಸಹಕರಿಸಿದ ಸದಸ್ಯರು, ಸಚಿವರು, ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು. ನಂತರ ಸಭಾಪತಿ ಬಸವರಾಜ ಹೊರಟ್ಟಿ, ಸಭಾನಯಕರ ನಂತರ ಪ್ರತಿಪಕ್ಷ ನಾಯಕರು ಮಾತನಾಡಬೇಕಿತ್ತು ಆದರೆ ಅವರು ಯಾರೂ ಇಲ್ಲ ನೀವೇ ಬಿಜೆಪಿ ಪರ ಮಾತನಾಡಿ ಎಂದು ಬಿಜೆಪಿಯ ರೆಬೆಲ್ ಸದಸ್ಯ ಹೆಚ್. ವಿಶ್ವನಾಥ್‌ಗೆ ಸೂಚಿಸಿದರು. ನಾನೇ ವಿರೋಧ ಪಕ್ಷದ ನಾಯಕ ಈಗ ಎನ್ನುತ್ತಲೇ ಕಲಾಪ ನಡೆಸಲು ಸಹಕರಿಸಿದ ಎಲ್ಲರಿಗೂ ವಿಶ್ವನಾಥ್ ಧನ್ಯವಾದ ಅರ್ಪಣೆ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC…

Read More

ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಜಾಪ್ರತಿನಿಧಿ ಕಾಯಿದೆ ಅನ್ವಯ ಅನರ್ಹಗೊಳಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ ಶಂಕರ ಅವರು ಸಲ್ಲಿಸಿರುವ ಚುನಾವಣಾ ಅರ್ಜಿ ಇಂದು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು. ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಮುಂದೂಡಿತು. ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123 (1) ಪ್ರಕಾರ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡುವುದು ಲಂಚಕ್ಕೆ ಸಮ. ಸೆಕ್ಷನ್ 123 (2) ಪ್ರಕಾರ ಇದು ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಅದನ್ನು ಪ್ರಚಾರ ಮಾಡುವುದೂ ಅಪರಾಧ. ಅಲ್ಲದೇ, ಇದನ್ನು ಅಭ್ಯರ್ಥಿಯ ಚುನಾವಣಾ ಲೆಕ್ಕಕ್ಕೆ ಸೇರ್ಪಡೆ ಮಾಡದಿರುವುದು ಸೆಕ್ಷನ್ 123 (6)ರ ಅಪರಾಧವಾಗಿದೆ ಎಂದು…

Read More

ವಿಶ್ವದ 38 ರಾಷ್ಟ್ರಗಳಲ್ಲಿ ಆಧುನಿಕ ತಂತ್ರಜ್ಞಾನದ ಆವಿಷ್ಕಾರ ಸೃಜಿಸಿ, 11 ಉತ್ಪಾದನಾ ಘಟಕಗಳನ್ನು ಹೊಂದಿರುವ ಹಿಟಾಚಿ ರೇಲ್ ಎಸ್. ಟಿ. ಎಸ್ ಪೈವೇಟ್ ಲಿಮಿಟೆಡ್ ಕಚೇರಿಯನ್ನು ಇಂದು ಬೆಂಗಳೂರಿನ ದೊಮ್ಮಲೂರಿನಲ್ಲಿ ನಾಡಿನ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಉದ್ಘಾಟಿಸಿ ಶುಭ ಕೋರಿ ಮಾತನಾಡಿದರು. ಭಾರತದಲ್ಲಿ “ಸ್ಮಾರ್ಟ್ ಮೊಬಿಲಿಟಿ” ಯನ್ನು ವೇಗಗೊಳಿಸಿ “ಸುರಕ್ಷಿತ ಮತ್‌ಆತು ರಾಮದಾಯಕ” ಹಾಗೂ “ಪರಿಸರ ಸ್ನೇಹಿ” ಸಾರಿಗೆ ಪರಿಹಾರಗಳನ್ನು ಒದಗಿಸುವ ಸಾಮಾಜಿಕ ನಾವೀನ್ಯತೆ ವ್ಯವಹಾರದ ಮೂಲಕ ಹಿಟಾಚಿ ರೇಲ್ ಕಂಪನಿಯು, ಉದ್ಯಮ ಶೀಲತೆಯ ಬೆಳವಣಿಗೆಗೆ ಬದ್ಧವಾಗಿರುವ ಕುರಿತು ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಮಾಹಿತಿ ಪಡೆದುಕೊಂಡರು. ಭಾರತದ ಕ್ಷಿಪ್ರ ಆರ್ಥಿಕ ಬೆಳವಣಿಗೆ ಮತ್ತು ಜಾಗತೀಕ ಕೈಗಾರಿಕಾ ವಲಯದ ಉತ್ಪಾದನಾ ಗುಣಮಟ್ಟಕ್ಕೆ ಹಿಟಾಚಿ ರೇಲ್ ಎಸ್. ಟಿ. ಎಸ್ ಪ್ರೈವೇಟ್ ಲಿಮಿಟೆಡ್ ವಿಶಿಷ್ಟ ಕೊಡುಗೆ ನೀಡಲಿ ಎಂದು ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಆಶಯ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More