Author: admin

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದ ಚವಾಟ ಗಲ್ಲಿಯ ಚರಂಡಿಗಳ ನಿರ್ಮಾಣಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಲೋಕೋಪಯೋಗಿ ಇಲಾಖೆಯ ವತಿಯಿಂದ 1.21 ಕೋಟಿ ರೂ, ಮಂಜೂರು ಮಾಡಿಸಿದ್ದು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೋಮವಾರ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಾಗಿದ್ದು, ಇತಿಹಾಸದಲ್ಲೇ ಎಂದೂ ಇಷ್ಟೊಂದು ಅಭಿವೃದ್ಧಿ ಕಂಡಿರಲಿಲ್ಲ. ಹಾಗಾಗಿ ಮುಂದಿನ ಬಾರಿಯೂ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೆೆಂಬಲಿಸಬೇಕು ಎಂದು ಮೃಣಾಲ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು. ಈ ಸಮಯದಲ್ಲಿ ದತ್ತಾ ಪಾಟೀಲ, ಅರ್ಚನಾ ಪಾಟೀಲ, ಸದೆಪ್ಪ ರಾಜಕಟ್ಟಿ, ಜಯರಾಂ ಪಾಟೀಲ, ಶಂಕರ ಅಷ್ಟೇಕರ್, ಉಮೇಶ ಪಾಟೀಲ, ವಿಶಾಲ ಪಾಟೀಲ, ನಾರಾಯಣ ಪಾಟೀಲ, ಮಾರುತಿ ಚೌಹಾನ್ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಕರ್ನಾಟಕ ಸರ್ಕಾರ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷ ತನ್ನ ಕಡೆಯ ಮೀಸಲಾತಿ ಅಸ್ತ್ರ ಬಳಿಸಿದೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಚಿವ ಸಂಪುಟ ಸಭೆ ಮೀಸಲಾತಿಯ ಬದಲಾವಣೆ ಮಾಡಿದ್ದು ಇಲ್ಲಿ ಎಲ್ಲಾ ವರ್ಗಗಳಿಗೆ ಅನ್ವಯಿಸುವ ಹಾಗೆ ಈ ಬದಲಾವಣೆಯನ್ನು ತರಲಾಗಿದೆ ಎಂದು ಸರ್ಕಾರ ಸಮರ್ಥನೆ ನೀಡುತ್ತಾ ಇದೆ . ಯಾವ ಬದಲಾವಣೆಯನ್ನು ಸಂಪುಟ ಸಭೆಯಲ್ಲಿ ತೀರ್ಮಾನಗೊಳ್ಳಲಾಗಿದೆ ಅಂದರೆ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣಾ ನೀತಿ ಸಂಹಿತಿ ಘೋಷಣೆ ಆಗಲಿದ್ದು ಅದರ ಮುಂಚೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಅತ್ಯಂತ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಬಹುದಿನಗಳಿಂದ ನಿರೀಕ್ಷಿತ ಗೊಂಡಿರುವ ದಲಿತ ಒಳ ಮೀಸಲಾತಿಗಳ ಕುರಿತು ಬೇಡಿಕೆ ಇತ್ತು 3ರಿಂದ 7 % ಹೆಚ್ಚಿಸಿ ಇದರಿಂದ ರಾಜ್ಯದಲ್ಲಿ ಮೀಸಲಾತಿ ಪ್ರಮಾಣ 50% ಗಿಂತ ಗರಿಷ್ಠ ಮಿತಿಯನ್ನು ದಾಟಿ 56% ಹೋಗಿದ್ದು ರಿಂದ ಇದು ಚರ್ಚೆಗೆ ಗ್ರಾಹಕವಾಗಿತ್ತು . 2018 ರಲ್ಲಿ ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಲಿಂಗಾಯತ ಧರ್ಮವನ್ನು ಒಡೆಯಲು ಪ್ರಯತ್ನ ಪಟ್ಟರು…

Read More

ಶಿಕಾರಿಪುರದಲ್ಲಿ ಬಂಜಾರ ಸಮುದಾಯದ ಪ್ರತಿಭಟನೆ ವೇಳೆ ತಮ್ಮ ಮನೆ ಮೇಲೆ ನಡೆದ ಕಲ್ಲು ತೂರಾಟ ಕುರಿತು ಪ್ರತಿಕ್ರಿಯಿಸಿರುವ ಬಿಎಸ್ ಯಡಿಯೂರಪ್ಪ, ತಪ್ಪು ಗ್ರಹಿಕೆಯಿಂದ ಈ ಘಟನೆ ನಡೆದಿದೆ. ಸಮುದಾಯದ ಹಿರಿಯ ಮುಖಂಡರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಏಕಾಏಕಿ ಕಲ್ಲು ತೂರಾಟದಿಂದ ನನಗೆ ನೋವಾಗಿದೆ. ತಾಂಡಾ ಅಭಿವೃದ್ಧಿ ನಿಗಮವನ್ನು ನಾನು ಮಾಡಿದ್ದೇನೆ. ತಪ್ಪು ಗ್ರಹಿಕೆಯಿಂದ ಇಂತಹ ಘಟನೆ ನಡೆದಿದೆ ಅಂತಾ ಭಾವಿಸಿದ್ದೇನೆ. ಬಂಜಾರ ಸಮುದಾಯದ ಹಿರಿಯರನ್ನು ಕರೆದು ಮಾತನಾಡುತ್ತೇನೆ. ನಾನು ಮತ್ತು ವಿಜಯೇಂದ್ರ ಇಬ್ಬರೂ ಬಂಜಾರ ಸಮುದಾಯದ ಸಮಸ್ಯೆಗಳ ಚರ್ಚೆಗೆ ಸಿದ್ಧರಿದ್ದೇವೆ ಎಂದರು. ಬಂಜಾರ ಸಮುದಾಯದ ನ್ಯಾಯಯುತವಾದ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುತ್ತೇವೆ. ನಾನು 4 ಸಲ ಸಿಎಂ ಆಗಲು ಬಂಜಾರ ಸಮುದಾಯ ಕಾರಣ. ಬಂಜಾರ ಸಮುದಾಯದವರು ಶಾಂತಿಯಿಂದ ವರ್ತಿಸಬೇಕು. ಸಮಾಜಘಾತುಕ  ವ್ಯಕ್ತಿಗಳ ಮಾತು ಕೇಳಬೇಡಿ. ನಾಳೆ ಅಥವಾ ನಾಡಿದ್ದು ಶಿವಮೊಗ್ಗಕ್ಕೆ ಹೋಗಿ ಮಾತನಾಡುತ್ತೇನೆ ಎಂದು ಬಿಎಸ್ ವೈ ತಿಳಿಸಿದರು. ನಮ್ಮತುಮಕೂರು.ಕಾಂನ…

Read More

ಬೆಂಗಳೂರಿನಲ್ಲಿ ಆಟೋ ಚಾಲಕರ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವೆ ಹಗ್ಗಜಗ್ಗಾಟ ಶುರುವಾಗಿದ್ದು, ರ್ಯಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಬೆಂಗಳೂರು ಆಟೋ ಚಾಲಕರ ವಿರುದ್ದ ಇದೀಗ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಸಿಡಿದೆದ್ದಿದ್ದಾರೆ. ನಗರದಲ್ಲಿ ಆಟೋ ಚಾಲಕರಿಂದ ನಡೆಯುತ್ತಿರುವ ನಿರಂತರ ದೌರ್ಜನ್ಯ ಖಂಡಿಸಿ ಇಂದು ಬೆಳಗ್ಗೆ ಫ್ರೀಡಂಪಾರ್ಕ್​ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗಾಗಿ ಒತ್ತಾಯಿಸಿ ಸಾವಿರಾರು ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿಯಲ್ಲಿ ಪಾಲ್ಗೊಂಡು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೈಕ್ ಟ್ಯಾಕ್ಸಿ ಚಾಲಕರ ಪ್ರತಿನಿಧಿಸುವ ನಗರದ ಏಕೈಕ ಸಂಸ್ಥೆಯಾಗಿರುವ ಬೈಕ್ ಟ್ಯಾಕ್ಸಿ ಅಸೋಸಿಯೇಶನ್ ಈ ಪ್ರತಿಭಟನೆಗೆ ಕರೆ ನೀಡಿದ್ದು, ತಮ್ಮ ಸದಸ್ಯರ ಮೇಲೆ ಆಗುತ್ತಿರುವ ನಿರಂತರ ದೌರ್ಜನ್ಯ ಪ್ರಶ್ನಿಸಿ ಇಂದು ಧರಣಿ ನಡೆಸುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಪುದುಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ಸೆಂಥಿಲ್ ಕುಮಾರ್ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ಮೂರು ದ್ವಿಚಕ್ರವಾಹನಗಳಲ್ಲಿ ಬಂದ ಏಳು ಮಂದಿಯ ತಂಡವು ಮೊದಲು ಸೆಂಥಿಲ್ ಕುಮಾರ್ ಮೇಲೆ ಸ್ವದೇಶಿ ಬಾಂಬ್ ಎಸೆದು ನಂತರ ಮಾರಕಾಯುಧಗಳಿಂದ ಹಲ್ಲೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಲಿಯನ್ನೂರಿನ ಬೇಕರಿಯೊಂದರಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಸೆಂಥಿಲ್ ಕುಮಾರ್ ಪುದುಚೇರಿ ಗೃಹ ಸಚಿವ ಎ ನಮಶಿವಾಯಂ ಅವರ ಹತ್ತಿರದ ಸಂಬಂಧಿ ಎಂದು ವರದಿಗಳಿವೆ. ಹಿಂಸಾಚಾರದ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದರೂ ಸೆಂಥಿಲ್ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಸೆಂಥಿಲ್ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ದಾಳಿಕೋರರನ್ನು ಬಂಧಿಸಲು ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: 4 ವರ್ಷ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 80 ವರ್ಷದ ಅಪರಾಧಿಗೆ ಗೌರವಾನ್ವಿತ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ(ಪೋಕ್ಸೋ) ನ್ಯಾಯಾಲಯವು 20 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸುವಂತೆ ತೀರ್ಪು ನೀಡಿದೆ. ವಿಲ್ಸನ್ ಜೊನ್ ತನ್ ಅಲಿಯಾಸ್ ರಾಜಣ್ಣ ಅಲಿಯಾಸ್ ರಾಜಕುಮಾರ್ ಎಂಬ 80 ವರ್ಷದ ಅಪರಾಧಿಯು ದಿನಾಂಕ 5—01—2022ರಂದು ಬೆಳಗ್ಗೆ ಬೆತ್ತಲೂರು ಗ್ರಾಮದ ಚರ್ಚ್ ಮುಂಭಾಗದಲ್ಲಿರುವ ಹುಣಸೆತೋಪಿನ ಮರದ ಬಳಿ ಆಟವಾಡುತ್ತಿದ್ದ ಮಗುವನ್ನು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಅಪರಾಧಿಯ ಮಗಳ ಮನೆ ಬೆತ್ತಲೂರು ಗ್ರಾಮದಲ್ಲಿದ್ದು, ಅಲ್ಲಿಗೆ ಬಂದಿದ್ದ ವೇಳೆ ಈ ದುಷ್ಕೃತ್ಯವನ್ನು ಎಸಗಿದ್ದ. ಈ ಪ್ರಕರಣಕ್ಕೂ ಮೊದಲು ಈತ ಪೋಕ್ಸೋ ಪ್ರಕರಣದಲ್ಲಿ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹದ್ದೇ ಕೃತ್ಯ ಎಸಗಿ ಮೂರು ವರ್ಷ ಸಾಧಾರಣ ಶಿಕ್ಷೆ ಹಾಗೂ ದಂಡ ಕಟ್ಟಿದ್ದ. ಆದರೆ, ಇದಾದ ಬಳಿಕವೂ…

Read More

ದಾವಣಗೆರೆ: ಚನ್ನಗಿರಿಯ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಲಾಗಿದೆ. ಚುನಾವಣೆಗೆ ಕೆಲವೇ ದಿನಗಳು ಇರುವಾಗ ಹಾಲಿ ಬಿಜೆಪಿ ಶಾಸಕನನ್ನು ಲೋಕಾಯುಕ್ತರು ಬಂಧಿಸಿರುವುದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ಶಾಸಕರ ನಿರೀಕ್ಷಣಾ ಜಾಮೀನನ್ನು ಸೋಮವಾರ ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿತ್ತು. ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ರದ್ದಾಗುತ್ತಿದ್ದಂತೆಯೇ ಲೋಕಾಯುಕ್ತ ಪೊಲೀಸರು ಚನ್ನಗಿರಿಯ ಅವರ ನಿವಾಸಕ್ಕೆ ತೆರಳಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ಬಂಧಿಸಲು ಕಾದು ಕುಳಿತಿದ್ದರು. ಅಂತಿಮವಾಗಿ ಸಂಜೆ 7 ಗಂಟೆ ಸುಮಾರಿಗೆ ಮಾಡಾಳ್ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸರು ತುಮಕೂರಿನ ಕ್ಯಾತ್ಸಂದ್ರ ಟೋಲ್‌ ಬಳಿ ಬಂಧಿಸಿದ್ದಾರೆ. ಅವರು ಬೆಂಗಳೂರಿಗೆ ಬರುವಾಗ ಪೊಲೀಸರು ಬಂಧಿಸಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

Read More

ಬೆಂಗಳೂರು: ರಾಜ್ಯ ಪ್ರವಾಸದಲ್ಲಿದ್ದ ಕೇಂದ್ರ ಸಚಿವ ಅಮಿತ್ ಶಾ ಭದ್ರತೆಯಲ್ಲಿ ವೈಫಲ್ಯ ಉಂಟಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಅಮಿತ್ ಶಾ ಪ್ರಯಾಣಿಸುತ್ತಿದ್ದಾಗ ಅವರ ಭದ್ರತಾ ವಾಹನಗಳನ್ನು 2 ಬೈಕರ್ಸ್‌ಗಳು ಬೆನ್ನಟ್ಟಿದ್ದಾರೆ. ಭಾನುವಾರ ತಡರಾತ್ರಿ 11 ಗಂಟೆ ಬಿಜೆಪಿ ಕೋರ್ ಸಮಿತಿಯ ಸಭೆ ನಡೆಸಿ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಿಂದ ಹೆಚ್‌ಎಎಲ್‌ಗೆ ಅಮಿತ್ ಶಾ ತೆರಳುತ್ತಿದ್ದಾಗ ಶಫಿನ್ ಫ್ಲಾಜಾದಿಂದ ಮಣಿಪಾಲ್ ಸೆಂಟರ್ ವರೆಗೆ ಅವರ ಭದ್ರತಾ ವಾಹನಗಳ ಹಿಂದೆ 2 ಬೈಕ್‌ಗಳು ಬಂದಿವೆ. ಸುಮಾರು 300 ಮೀ. ವರೆಗೆ ಬೈಕರ್ಸ್‌ಗಳು ಭದ್ರತಾ ವಾಹನಗಳ ಜೊತೆಯೇ ಬಂದಿದ್ದಾರೆ. ಇಬ್ಬರು ಬೈಕರ್ಸ್‌ಗಳು ಏಕಾಏಕಿ ಭದ್ರತಾ ವಾಹನಗಳ ಹಿಂದಿನಿಂದ ಬಂದಿದ್ದು, ಸ್ವಲ್ಪ ದೂರದವರೆಗೆ ಬೆನ್ನಟ್ಟಿದ್ದಾರೆ. ತಕ್ಷಣವೇ ಭಾರತೀನಗರದ ಪೊಲೀಸರು ಬೈಕ್‌ನಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಅವರಿಬ್ಬರೂ ವಿದ್ಯಾರ್ಥಿಗಳು ಎಂಬುದು ತಿಳಿದು ಬಂದಿದ್ದು ಇಬ್ಬರು ವಿದ್ಯಾರ್ಥಿಗಳು ಉದ್ದೇಶಪೂರ್ವಕವಾಗಿ ಬಂದಿಲ್ಲ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಮಹಾರಾಷ್ಟ್ರ: ಸಾವರ್ಕರ್ ಅವರನ್ನು ಅವಮಾನಿಸಬೇಡಿ ಪರಿಸ್ಥಿತಿ ಸರಿಯಾಗಿರುವುದಿಲ್ಲ ಎಂದು ರಾಹುಲ್‌ ಗಾಂಧಿ ಅವರಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ. ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರನ್ನು ಎಲ್ಲರೂ ತಮ್ಮ ಆರಾಧ್ಯ ದೈವ ಎಂದು ಪರಿಗಣಿಸುತ್ತಾರೆ ಮತ್ತು ಅವರನ್ನು ಅವಮಾನಿಸಬೇಡಿ. ಅಂಡಮಾನ್‌ ನ ಸೆಲ್ಯುಲರ್ ಜೈಲಿನಲ್ಲಿ 14 ವರ್ಷಗಳ ಕಾಲ ಊಹಿಸಲಾಗದ ಹಿಂಸೆಯನ್ನು ಸಾವರ್ಕರ್ ಅನುಭವಿಸಿದರು. ಅವರ ನೋವುಗಳನ್ನು ಮಾತ್ರ ಕೇಳಬಹುದು ಅದು ಅವರ ತ್ಯಾಗದ ಪ್ರತೀಕ. ನಾವು ಸಾವರ್ಕರ್ ಅವರಿಗೆ ಆಗುವ ಅವಮಾನವನ್ನು ಸಹಿಸಲಾರೆವು ಎಂದು ಹೇಳಿದರು. ರಾಹುಲ್ ಗಾಂಧಿಯವರು ಸಾವರ್ಕರ್ ಅವರನ್ನು ಕೀಳಾಗಿ ಕಾಣುವುದನ್ನು ಮುಂದುವರಿಸಿದರೆ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕುಗಳು ಉಂಟಾಗಬಹುದು ಅವರಿಗೆ ಅಗೌರವ ತೋರಿಸಿದರೆ ನಾವು ಅದನ್ನು ಸಹಿಸುವುದಿಲ್ಲ. ನಾವು ಹೋರಾಟಕ್ಕೆ ಸಿದ್ದರಿದ್ದೇವೆ. ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…

Read More

ಬೀದರ್: ಮಹಿಳಾ ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ಸಾವಿರಾರು ಸೀರೆಗಳನ್ನು ಪೊಲೀಸರು ಜಪ್ತಿ ಮಾಡಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟದಲ್ಲಿ ನಡೆದಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತ್ತೆ ಬೀದರ್‌ನಲ್ಲಿ ಗಿಫ್ಟ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಸೋಮವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಭಾವ ಚಿತ್ರವಿರುವ ಸೀರೆಗಳ ಪ್ಯಾಕೆಟ್‌ಗಳನ್ನು ಭಾಲ್ಕಿ ನಗರದ ಮನೆ ಮನೆಗೆ ತೆರಳಿ ಕಾಂಗ್ರೆಸ್ ಕಾರ್ಯಕರ್ತರು ಹಂಚುತ್ತಿದ್ದರು. ಈ ಸಂದರ್ಭ ಬಿಜೆಪಿ ಕಾರ್ಯಕರ್ತರು ಎಂಟ್ರಿಯಾಗಿದ್ದಾರೆ. ಭಾಲ್ಕಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಿಕೆ ಸಿದ್ರಾಮ್ ಹಾಗೂ ಕಾರ್ಯಕರ್ತರು ಆಗಮಿಸಿ ಪರಿಶೀಲನೆ ಮಾಡುತ್ತಿದ್ದಾಗ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಭಾಲ್ಕಿ ಪೊಲೀಸರು ಸಾವಿರಾರು ಸೀರೆ ಬಾಕ್ಸ್‌ಗಳನ್ನು ಜಪ್ತಿ ಮಾಡಿ ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್…

Read More