Subscribe to Updates
Get the latest creative news from FooBar about art, design and business.
- ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
- ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
- ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
- ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
- ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
- ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
- ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
- ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
Author: admin
ತುಮಕೂರು: ಕರಡಿ ಒಂದು ರಾತ್ರಿಯಾಗುತ್ತಿದ್ದಂತೆ ಗ್ರಾಮದ ಹೊರವಲಯದಿಂದ ಗ್ರಾಮದೊಳಗೆ ನುಗ್ಗಿ ಭಯಭೀತಿ ಉಂಟು ಮಾಡುತ್ತಿರುವಂತಹ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೋವಿನಕೆರೆ ಗ್ರಾಮದಲ್ಲಿ ನಿತ್ಯ ನಿರಂತರವಾಗಿದೆ. ಇದರಿಂದಾಗಿ ಮುಂಜಾನೆ ಹಾಗೂ ರಾತ್ರಿ ವೇಳೆಯಲ್ಲಿ ರೈತರು ತಮ್ಮ ಹೋಲ ಗದ್ದೆಗಳಿಗೆ ಹೋಗಲು ಹಿಂದೇಟು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ದಿನ ಸಂಜೆ 7 ಗಂಟೆಗೆ ಜನವಸತಿ ಪ್ರದೇಶಗಳತ್ತ ಬರುವಂತಹ ಕರಡಿ ಜನರನ್ನು ಕಂಡರೆ ಅವರ ಮೇಲೆ ಎರಗುವ ಭೀತಿ ಸೃಷ್ಟಿ ಮಾಡಿದೆ. ಅಲ್ಲದೆ ಮನೆ ಪಕ್ಕದಲ್ಲಿರೋ ಬಾಳೆ, ಪರಂಗಿ, ಸೀಬೆ, ಕಡಲೆಕಾಯಿ ಕಿತ್ತು ಹಾಕುತ್ತಿರುವ ಕರಡಿಯಿಂದ ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಒಂದು ಹಂತದಲ್ಲಿ ಸಂಜೆಯಾಗುತ್ತಿದ್ದಂತೆ ತೋವಿನಕೆರೆ ಗ್ರಾಮಸ್ಥರು ತಮ್ಮ ಮಕ್ಕಳನ್ನು ಕೂಡ ಹೊರಗೆ ಬೆಳೆದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಒಂದು ತಿಂಗಳಿನಿಂದ ಕರಡಿಯ ಕಾಟದಿಂದ ಬೇಸತ್ತು ಹೋಗಿರುವ ಗ್ರಾಮಸ್ಥರು ಇದನ್ನು ಸೆರೆ ಹಿಡಿದು ದೂರದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದುವರೆಗೂ ಅರಣ್ಯ ಇಲಾಖೆಯ ಕ್ಯಾರೆಯನ್ನದೆ…
ತುಮಕೂರು: ಪಂಪ್ ಹೌಸ್ ನಲ್ಲಿ ಅಡಗಿದ್ದ ಚಿರತೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ರೈತರೊಬ್ಬರು ಪಾರಾಗಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕ್ಯಾಮಸಂದ್ರ ಗ್ರಾಮದಲ್ಲಿ ನಡೆದಿದೆ. ಜಯರಾಮ್ ಪ್ರಾಣಾಪಾದಿಂದ ಪಾರಾದ ರೈತರಾಗಿದ್ದಾರೆ. ಎಂದಿನಂತೆ ನಿನ್ನೆ ರಾತ್ರಿ ತಮ್ಮ ತೋಟದ ಪಂಪ್ ಹೌಸ್ ಒಳಗೆ ತೆರಳಿದ್ದಾರೆ. ಪಂಪ್ ಹೌಸ್ ನಲ್ಲಿ ಅಡಗಿಕೊಂಡಿದ್ದ ಚಿರತೆ, ಜಯರಾಮ್ ಅವರಿಗೆ ಗೋಚರಿಸಿಲ್ಲ. ಒಂದು ಹಂತದಲ್ಲಿ ಕತ್ತಲೆಯಲ್ಲಿ ಚಿರತೆ ಕಾಲು ಮುಟ್ಟಿದ್ದಾರೆ, ತಕ್ಷಣ ಎಚ್ಚೆತ್ತುಕೊಂಡ ಜಯರಾಮ್ ಅವರು ಕ್ಷಣಾರ್ಧದಲ್ಲಿ ಪಂಪ್ ಹೌಸ್ ನಿಂದ ಹೊರಗೆ ಓಡಿ ಬಂದಿದ್ದಾರೆ. ಇದರಿಂದಾಗಿ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದಂತಾಗಿದೆ. ಸ್ವಲ್ಪ ಯಾಮಾರಿದ್ದರೂ ಚಿರತೆ ದಾಳಿಗೆ ಒಳಗಾಗುತ್ತಿದ್ದರು. ಅಲ್ಲದೆ ಚಿರತೆ ಎಂದು ಸ್ಪಷ್ಟವಾಗುತ್ತಿದ್ದಂತೆ ಕೂಡಲೇ ಪಂಪ್ ಹೌಸ್ ಬಾಗಿಲು ಹಾಕಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಪಂಪ್ ಹೌಸ್ ಸುತ್ತ ಬಲೆ ಹಾಕಿ ಚಿರತೆ ಸೆರೆ ಹಿಡಿದಿದ್ದಾರೆ. ಈ ಮೂಲಕ ಗ್ರಾಮಸ್ಥರು ಚಿರತೆ ಕಾಟದಿಂದ ನಿಟ್ಟುಸಿರು ಬಿಡುವಂತಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೂ ಹೊರಗೂ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶಪಥ ಮಾಡಿದ್ದಾರೆ. ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಹೆಚ್ ಡಿ ಕೆ ಮಾತನಾಡಿ, ವಿರೋಧ ಪಕ್ಷದಲ್ಲಿ ನಾನು ಇದ್ದೇನೆ, ಬೊಮ್ಮಾಯಿ ಅವರೂ ಇದ್ದಾರೆ. ನಾಡಿನ ಹಿತಾಸಕ್ತಿ ಕಾಪಾಡುವ ಸಲುವಾಗಿ ಹೋರಾಟ ಮಾಡಲು ನಾವು ಒಗ್ಗಟ್ಟಾಗಿ ಹೋಗುತ್ತಿದ್ದೇವೆ ಎಂದಿದ್ದಾರೆ. ಕಾಂಗ್ರೆಸ್ ನವರಿಗೆ ಸರ್ಕಾರ ಬೇಕಿಲ್ಲ. ಭೂಮಿ ಲಪಟಾಯಿಸೋದು ಬೇಕು. ಇದು ಒಂದು ರೀತಿ ಈಸ್ಟ್ ಇಂಡಿಯಾ ಕಂಪನಿಯ ಆಡಳಿತ. ಸರ್ಕಾರಕ್ಕೆ ನಿಜಕ್ಕೂ ಜನತೆಗೆ, ರೈತರಿಗೆ ಒಳ್ಳೆಯದು ಮಾಡಬೇಕು ಅನ್ನೋ ಮನಸ್ಸಿದ್ದರೆ ಸರ್ಕಾರ ಸುಪರ್ದಿಗೆ ಬರಬೇಕಾದ ಭೂಮಿಯನ್ನ ಸ್ವಾಧೀನಪಡಿಸಿಕೊಳ್ಳಿ. ನನ್ನ ಪಕ್ಷದವ ಆಸ್ತಿ ಇದ್ದರೂ ಮುಟ್ಟುಗೋಲು ಹಾಕಿಕೊಳ್ಳಿ ಎಂದರಲ್ಲದೇ ಅಕ್ರಮ ಭೂಕಬಳಿಕೆ ಬಯಲಿಗೆಳೆಯಬೇಕಾದ್ರೆ ಈ…
ಕೋಲಾರ: ಕೆ ಎಸ್ ಆರ್ ಟಿ ಸಿ ಡಿಪೋ ನೌಕರನೊಬ್ಬ ತನ್ನ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀನಿವಾಸಪುರದ ಉಪ್ಪುಕುಂಟೆ ಗ್ರಾಮದಲ್ಲಿ ನಡೆದಿದೆ. ಸೋಮಾಚಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತ ಶ್ರೀನಿವಾಸಪುರ ಸಾರಿಗೆ ಸಂಸ್ಥೆಯ ಬಸ್ ಡಿಪೋದಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಪಾರ್ಶ್ವ ವಾಯುವಿಗೆ ತುತ್ತಾಗಿದ್ದ. ಬಳಿಕ ಕಂಡಕ್ಟರ್ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಡಿಪೋದಲ್ಲಿಯೇ ಕೆಲಸಕ್ಕೆ ನಿಯೋಜನೆ ಮಾಡಿಕೊಂಡಿದ್ದರು. ರೋಗಕ್ಕೆ ತುತ್ತಾಗಿದ್ದರೂ ಸೋಮಾಚಾರಿಯಿಂದ ಮಾಡಲು ಸಾಧ್ಯವಾಗದ ಕೆಲಸ ನೀಡುವ ಮೂಲಕ ಡಿಪೋ ಮ್ಯಾನೇಜರ್ ವೆಂಕಟೇಶ್ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೇಲಾಧಿಕಾರಿಯ ಕಿರುಕುಳದ ಬಗ್ಗೆ ತನ್ನ ಬಳಿ ಹೇಳಿಕೊಂಡಿದ್ದರು ಎಂದು ಮೃತ ಕಂಡಕ್ಟರ್ ಪತ್ನಿ ಧನಲಕ್ಷ್ಮೀ ಹೇಳಿದ್ದಾರೆ. ಈ ಸಂಬಂಧ ಶ್ರೀನಿವಾಸಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬು ತೂಕ ಮಾಡುವಾಗ ರೈತರನ್ನು ವಂಚಿಸುತ್ತಿದ್ದಾರೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. ನಿಯಮ 69ರರಡಿ ವಿಷಯ ಪ್ರಸ್ತಾಪಿಸಿದ ಅವರು, ಕಬ್ಬು ಬೆಳೆಗಾರರಿಗೆ, ಸಾಗಣೆದಾರರಿಗೆ, ಕಟಾವು ಮಾಡುವವರಿಗೆ ಕೆಲವು ಸಕ್ಕರೆ ಕಾರ್ಖಾನೆಗಳಿಂದ ವಂಚನೆಯಾಗುತ್ತಿದೆ. ಇದನ್ನು ತಪ್ಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಹಿಂದಿನ ಸಕ್ಕರೆ ಸಚಿವರು ಏಕಕಾಲದಲ್ಲಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿದ್ದರು. ಆದರೆ, ಏನು ಪ್ರಯೋಜನ ಆಗಿಲ್ಲ. ತೂಕದಲ್ಲಿ ವ್ಯವಸ್ಥಿತವಾಗಿ ಮೋಸ ಮಾಡಲಾಗುತ್ತಿದೆ. ಈ ವ್ಯವಹಾರವನ್ನೂ ಒಬ್ಬ ವ್ಯಕ್ತಿ ನಿರ್ವಹಿಸುತ್ತಿದ್ದಾರೆ. ಆತನನ್ನು ಭೂಗತ ದೊರೆ ಎನ್ನಬಹುದು. ರೈತರ ಮೇಲೆ ಗೂಂಡಾಗಳಿಂದ ಹಲ್ಲೆ: ಮಹಾರಾಷ್ಟ್ರದಲ್ಲಿ ದೊಡ್ಡ ಜಾಲವೇ ಇದೆ. ತೂಕ ಮಾಡುವ ಸಾಪ್ಟವೇರ್ ಅಳವಡಿಸಿದರೆ, ಖಾಸಗಿ ವೇಬ್ರಿಡ್‌ಜ್‌ನಲ್ಲಿ ಒಂದು ತೂಕವಾದರೆ, ಕಾರ್ಖಾನೆಗಳಲ್ಲಿ ಕಡಿಮೆ ತೂಕ ಬರಲಿದೆ. ಅದನ್ನು ಪ್ರಶ್ನಿಸಿದ ರೈತರ ಮೇಲೆ ಗೂಂಡಾಗಳಿಂದ ಹಲ್ಲೆ ಮಾಡಿಸಿರುವ ಉದಾಹರಣೆಗಳಿವೆ. ಒಂದೊಂದು ಕಾರ್ಖಾನೆಯಲ್ಲೂ 40-50 ಸಾವಿರ ಟನ್ ಕಬ್ಬನ್ನು ಈ ರೀತಿ ವಂಚಿಸಲಾಗುತ್ತಿದೆ. ಮೋಸದ…
ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕೆಎಂಎಫ್ ಪ್ರತಿ ಲೀಟರ್ ಗೆ 5 ರೂಪಾಯಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದ್ರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಸೇರಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಪಶುಸಂಗೋಪನ ಇಲಾಖೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಆಡಳಿತ ಮಂಡಳಿ ಸದಸ್ಯರು ಮತ್ತು ಕೆಎಂಎಫ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನ ಪೊಲೀಸ್ ಕಸ್ಟಡಿ ವಿಧಿಸಿದೆ. ರಾಜಧಾನಿ ಇಂಫಾಲದಿಂದ ಸುಮಾರು 35 ಕಿಮೀ ದೂರದಲ್ಲಿರುವ ಕಾಂಗ್ ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಜನರ ಗುಂಪೊಂದು ಮಹಿಳೆಯರನ್ನು ಥಳಿಸಿ ಬೆತ್ತಲೆಗೊಳಿಸಿ ಅವರನ್ನು ಮೆರವಣಿಗೆ ಮಾಡಿದ್ದು ಮಾತ್ರವಲ್ಲದೇ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಇಂದು ಈ ನಾಲ್ಕು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲ ನಾಲ್ಕು ಆರೋಪಿಗಳಿಗೆ ನ್ಯಾಯಾಲಯ 11 ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಂಗಳೂರು ನಗರ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಕುಖ್ಯಾತ ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೃಷ್ಣಾಪುರದಲ್ಲಿ ವಾಸವಾಗಿದ್ದ ಮೊಹಮ್ಮದ್ ನಿಯಾಝ್(28), ನಿಶಾದ್(31) ಮತ್ತು ಮೊಹಮ್ಮದ್ ರಝೀನ್(24) ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 180 ಗ್ರಾಂ ತೂಕದ 9 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮಾರುತಿ ಸ್ವಿಫ್ಟ್ ಕಾರು, 1,40,000 ರೂಪಾಯಿ ಮೌಲ್ಯದ 4 ಮೊಬೈಲ್ ಫೋನ್‌ಗಳು, 22,050 ನಗದು ಹಣ, 1 ಪಿಸ್ತೂಲ್, 1 ಸಜೀವ ಗುಂಡು, 2 ಡ್ರ್ಯಾಗನ್ ಚೂರಿಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವೆಲ್ಲದರ ಒಟ್ಟು ಬೆಲೆ 27,62,000 ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ನಿಯಾಝ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಎಎಸ್‌ಐ ಅವರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣ,…
ಮಧುಗಿರಿ: ಪರಿಶ್ರಮದ ವಿದ್ಯಾಭ್ಯಾಸ, ಉಜ್ವಲ ಭವಿಷ್ಯಕ್ಕೆ ತಳಹದಿ ಎಂದು ಟಿ.ವಿ. ವೆಂಕಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಹಂತೇಶ ಮೈ ಹೊಸಮನಿ ಅಭಿಪ್ರಾಯ ಪಟ್ಟರು. ವೆಂಕಟಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಪ್ರಥಮ ಪಿ.ಯು ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಹೆಚ್ಚು ಅಂಕ ಪಡೆದು ತೇರ್ಗಡೆಯಾದವರಿಗೆ ಅಭಿನಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭವಿಷ್ಯದಲ್ಲಿ ಖುಷಿ ಆನಂದ ಶಾಶ್ವತವಾಗಿರಬೇಕೆಂದರೆ ಏಕಾಗ್ರತೆ, ಸತತ ಅಧ್ಯಯನ ಅವಶ್ಯ, ಶಿಕ್ಷಕರ ಮಾರ್ಗದರ್ಶನ ಅತ್ಯಗತ್ಯ. ವಿನಯ ವಿದ್ಯೆಗೆ ಪೋಷಕವಾಗಿರಬೇಕೆಂದರು. ಮುಖ್ಯ ಅತಿಥಿ ಹಿರಿಯ ಸಾಹಿತಿ ಪ್ರೊ. ಮಲವ ಮೂರ್ತಿ ಎದೆಗೆ ಬಿದ್ದ ಅಕ್ಷರ ಅರಿವನ್ನು ಬಿತ್ತರಿಸಿ, ಆತ್ಮ ವಿಶ್ವಾಸ ತುಂಟ, ಅಹಂಕಾರ ಲಯಗೊಳಸುತ್ತದೆ, ಗುರು-ಹಿರಿಯರು, ತಂದೆ ತಾಯಿರಲ್ಲಿ ಗೌರವ, ವಿಶ್ವಾಸ ನಂಬಿಕೆ ಮತ್ತು ಪ್ರೀತಿ ಬೆಳೆಸುತ್ತದೆ. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಜಿ.ಹೆಚ್, ಹನುಮಂತರಾಯಪ್ಪ ವಿದ್ಯೆ ಬಾಳಿನ ಬೆಳಕು, ಶಿಕ್ಷಕರ ಪರಿಶ್ರಮ, ಪರೀಕ್ಷೆ ಫಲಿತಾಂಶದ ಗುಣ ಮಟ್ಟಕ್ಕೆ ಪೂರಕವಾಗಲಿ ಎಂದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷನ ನಿರ್ದೇಶಕ ವೆಂಕಟೇಶಮೂರ್ತಿ, ರಂಗಸ್ವಾಮಯ್ಯ, ಏನುಕುಮಾರ್, ಚಿತ್ತಯ್ಯ…
ತುಮಕೂರು: ಟೀ ಮಾರುತ್ತಿದ್ದ ವ್ಯಕ್ತಿಯೇ ಇಂದು ಪ್ರಧಾನಿ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ ಹಾಗಾಗಿ ಅದೃಷ್ಟ ಎಂಬುದು ಯಾರಿಗೆ ಇರುತ್ತದೆ ಎಂಬುದು ಹೇಳಲು ಅಸಾಧ್ಯ. ಅಂತಹ ಒಂದು ಪ್ರಸಂಗ ತುಮಕೂರು ಜಿಲ್ಲೆಯಲ್ಲಿ ನಡೆದಿದ್ದು ಟೀ ಮಾರುತಿದ್ದ ಮಹಿಳೆಯೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. ದೇವರಾಯನದುರ್ಗ ಪ್ರದೇಶದಲ್ಲಿರುವ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಎದುರು ಟಿ ಅಂಗಡಿ ಇಟ್ಟುಕೊಂಡು ಮಾರುತಿದ್ದ ಮಹಿಳೆ ಮೂಡಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿನ್ನೆ ತುಮಕೂರು ತಾಲೂಕಿನ ಉರ್ಡಿಗೆರೆ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಟೀ ಅಂಗಡಿ ಇಟ್ಟುಕೊಂಡು ಬದುಕು ನಡೆಸುತ್ತಿದ್ದ ಅನ್ನಪೂರ್ಣಮ್ಮ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ನಡೆದ ಗ್ರಾ.ಪಂ ಚುನಾವಣೆಯಲ್ಲಿ ದೇವರಾಯನದುರ್ಗ ಗ್ರಾ.ಪಂ ಸದಸ್ಯರಾಗಿ ಆಯ್ಕೆಯಾಗಿದ್ದರು. ನಿನ್ನೆ ನಡೆದ ಗ್ರಾ.ಪಂ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ತುಮಕೂರಿನ ಉರ್ಡಿಗೆರೆ ಗ್ರಾ.ಪಂ.ಗೆ ಅಧ್ಯಕ್ಷೆಯಾದ ಅನ್ನಪೂರ್ಣಮ್ಮ ಅವಿರೋಧವಾಗಿ ಉರ್ಡಿಗೆರೆ ಗ್ರಾ.ಪಂ ಸದಸ್ಯರು ಆಯ್ಕೆ ಮಾಡಿದ್ದಾರೆ. ಇನ್ನು ಟೀ ಮಾರಾಟ ಮಾಡ್ತಿದ್ದ ಮೋದಿ ಇಂದು ದೇಶದ ಪ್ರಧಾನಿಯಾಗಿದ್ದಾರೆ.. ಅವರದ್ದು…