Subscribe to Updates
Get the latest creative news from FooBar about art, design and business.
- ಇ–ಸ್ವತ್ತು ದಾಖಲೆ ವಿಳಂಬ: ಮಹಾನಗರ ಪಾಲಿಕೆಗೆ ಡಿಸಿ ಶುಭ ಕಲ್ಯಾಣ್ ದಿಢೀರ್ ಭೇಟಿ
- ತಿಪಟೂರು | ‘ಶೌರ್ಯ ಪ್ರಶಸ್ತಿ’ ಪುರಸ್ಕೃತ ಪ್ರಣವ್ ಬೆಳ್ಳೂರು ಅವರಿಗೆ ಸನ್ಮಾನ
- ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
- ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ
- ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ
- ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
- ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
- ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
Author: admin
ಬೆಳಗಾವಿ: “ನನ್ನ ರಾಜಕೀಯ ವಿರೋಧಿಗಳು ಕೇವಲ ರಾಜಕೀಯಕ್ಕೆ ಮಾತ್ರ ನನ್ನ ಬಗ್ಗೆ ಆಕ್ಷೇಪಗಳನ್ನು ಹುಡುಕಬೇಕೇ ಹೊರತು ಅಭಿವೃದ್ಧಿ ವಿಷಯದಲ್ಲಿ ಆಕ್ಷೇಪ ವ್ಯಕ್ತಪಡಿಸಲು ಯಾವುದೇ ಅವಕಾಶಗಳೇ ಉಳಿದಿಲ್ಲ. ಶಾಸಕತ್ವದ ಮೊದಲ ಅವಧಿಯಲ್ಲೇ ಇದನ್ನು ಸಾಧಿಸಲು ಆಶೀರ್ವದಿಸಿದ ಜನತೆಗೆ ಎಲ್ಲ ಶ್ರೇಯಸ್ಸು ಸಲ್ಲುತ್ತದೆ” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆಎಚ್ ಗ್ರಾಮದ ಸಿದ್ಧೇಶ್ವರ ನಗರ ಹಾಗೂ ರಜಾಕ್ ಕಾಲೋನಿಯ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಇಂದು ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈ ರಸ್ತೆಗಳ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ ಅವರು ಲೋಕೋಪಯೋಗಿ ಇಲಾಖೆಯಿಂದ 46 ಲಕ್ಷ ರೂ. ಬಿಡುಗಡೆ ಮಾಡಿಸಿದ್ದಾರೆ. “ಕ್ಷೇತ್ರದಲ್ಲಿ ಜಾತಿ, ಧರ್ಮ, ರಾಜಕೀಯ ಎಲ್ಲವನ್ನೂ ಬದಿಗಿಟ್ಟು ಕೇವಲ ಅಭಿವೃದ್ಧಿಯನ್ನೇ ಗುರಿಯಾಗಿರಿಸಿಕೊಂಡು ಕೆಲಸ ಮಾಡಿದ್ದೇನೆ. ಈ ಅಭಿವೃದ್ಧಿಯ ಅಭಿಯಾನದಲ್ಲಿ ಮಕ್ಕಳು, ಮಹಿಳೆಯರು ಎನ್ನದೆ ಎಲ್ಲರನ್ನೂ ಸಮಾನವಾಗಿ ಕಂಡು ಸ್ಪಂದಿಸಿದ್ದೇನೆ. ತಾರತಮ್ಯಕ್ಕೆ ಎಲ್ಲೂ ಅವಕಾಶ ನೀಡಿಲ್ಲ. ಜನಸಾಮಾನ್ಯರ ಮಧ್ಯೆ ಸಾಮಾನ್ಯಳಾಗಿ ಬೆರೆತು ಕ್ಷೇತ್ರದ ಬೆಳವಣಿಗೆಯಲ್ಲಿ…
ಹೆಚ್.ಡಿ.ಕೋಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ವಿಶ್ವಕರ್ಮಸಮಾಜದ ಅಧ್ಯಕ್ಷ ಕುಲುಮೆರಾಜುರವರ ನೇತೃತ್ವದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಅಭಿನಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ನಿಮ್ಮ ಈ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರರುಣಿ. ನಾನು ಮಾಡಿದ ಅಭಿವೃದ್ಧಿ ಕಾರ್ಯವನ್ನು ನೆನೆಸಿಕೊಂಡು ಅಭಿನಂದನೆ ಸಲ್ಲಿಸುತ್ತಿರುವುದು ವಿಶ್ವಕರ್ಮ ಸಮಾಜದ ಬದ್ದತೆ ಎತ್ತಿ ತೋರುತ್ತದೆ. ಹಾಗಾಗಿ ನಿಮ್ಮ ಆಶೀರ್ವಾದ ನನ್ನ ಮೇಲಿದ್ದರೆ, ನಿಮ್ಮ ಸೇವೆಯನ್ನು ನಾನು ಬದುಕಿರುವವರಗೆ ಮಾಡುತ್ತೇನೆ ಎಂದು ಹೇಳಿದರು ಕಾರ್ಯಕ್ರಮದಲ್ಲಿ ಸಮಾಜದ ನೂರಾರು ಮುಖಂಡರು ಹಾಗೂ ತಾಲ್ಲೂಕಿನ ಎಲ್ಲಾ ಗ್ರಾಮದ ಗ್ರಾಮಸ್ಥರು ಭಾಗಿಯಾಗಿದ್ದರು. ಶಾಸಕ ಅನಿಲ್ ಚಿಕ್ಕಮಾದು ಅವರನ್ನು ಕಾರ್ಯಕ್ರಮದಲ್ಲಿ ಎಲ್ಲಾ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು ಹಾಗೂ ವಿಶ್ವಕರ್ಮ ಸಮಾಜದ ಅದ್ಯಕ್ಷ ಕುಲುಮೆ ರಾಜುರವರನ್ನು ಅಭಿನಂದಿಸಲಾಯಿತು ಈ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ನರಸೀಪುರ ರವಿ, ಹೆಚ್.ಸಿ.ನರಸಿಂಹಮೂರ್ತಿ, ಐಡಿಯ ವೆಂಕಟೇಶ, ನಾಗರಾಜು, ನಾಯಾಜ್, ಮೂರ್ತಿಆಚಾರ್, ನಾಗರಾಜು, ಸೌಮ್ಯಮಂಜುನಾಥ್ ಹಾಗೂ ವಿಶ್ವಕರ್ಮ ಸಮಾಜದ…
ಪಾವಗಡ: ತಾಲ್ಲೂಕಿನ ಭೂಪೂರು ಗ್ರಾಮದಲ್ಲಿ ಶನಿವಾರ ಪಲವಳ್ಳಿಯಿಂದ ಬಿ.ಕೆ.ಹಳ್ಳಿ ರಸ್ತೆ ಕಾಮಗಾರಿಗೆ ಶಾಸಕ ವೆಂಕಟರಮಣಪ್ಪ ಅವರು ಗುದ್ದಲಿ ಪೂಜೆ ನೆರವೇರಿಸಿದರು. 5 ಕೋಟಿ ವೆಚ್ಚದಲ್ಲಿ 7 ಕಿಲೋ ಮೀಟರ್ ರಸ್ತೆ ಕಾಮಗಾರಿ ಇದಾಗಿದ್ದು, ಬಹುಬೇಗನೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ತಿಳಿಸಿದರು. ರಸ್ತೆ ಸಮಸ್ಯೆ ಬಿಟ್ಟರೆ ಯಾವುದೇ ಸಮಸ್ಯೆ ಇದ್ದಲ್ಲಿ ತಿಳಿಸಿ ಎಂದು ಕಾರ್ಯಕ್ರಮದಲ್ಲಿದ್ದ ಸಾರ್ವಜನಿಕರಿಗೆ ಹೇಳಿದರು. ಈ ವೇಳೆ ಜೆಡಿಎಸ್ ಮುಖಂಡರಾದ ಚೆನ್ನಕೇಶವ ರೆಡ್ಡಿ ಹಾಗೂ ನಾಗಾರ್ಜುನ ರೆಡ್ಡಿ ಮತ್ತು ಅಂಬರೀಷ್, ಗೋಪಾಲ್, ರಾಮಾಂಜಿ, ಮೂತ್ಯಾಲಪ್ಪ, ಮಾರಪ್ಪ ಇನ್ನಿತರರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಕಾರ್ಯಕ್ರಮದಲ್ಲಿ ಕಾಮನದುರ್ಗ ಗ್ರಾಮ ಪಂಚಾಯತಿ ಅಧ್ಯಕ್ಷ ರಾಮಾಂಜಿ ನಾಯ್ಕ, ಗಂಗಾಧರ ರೆಡ್ಡಿ, ಜಗನ್ನಾಥ್ ಶೆಟ್ಟಿ ಇನ್ನಿತರರಿದ್ದರು. ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಅದರಲ್ಲಿ ಉದಾಹರಿಸಬಹುದಾದ ಅಥವಾ ನವೀನತೆಯಿಂದ ಕೂಡಿದ ವಿಶೇಷಗಳೇನೂ ಕಾಣಿಸಲಿಲ್ಲ. ಬಹುತೇಕ ವಿಧಾನ ಸಭೆಯ ಸದಸ್ಯರು, ಕಳೆದ ಬಾರಿ ಸೋತವರಿಗೆ ಟಿಕೆಟ್ ನೀಡಲಾಗಿದೆ. ಒಂದೆರಡು ಕ್ಷೇತ್ರಗಳನ್ನು ಇಲ್ಲಿ ಉಲ್ಲೇಖಿಸಲೇಬೇಕು. ಅವುಗಳೆಂದರೇ ವರುಣಾ ಮತ್ತು ಟಿ. ನರಸೀಪುರ ಕ್ಷೇತ್ರಗಳು. ಈ ಎರಡೂ ಕ್ಷೇತ್ರಗಳಲ್ಲಿ ಪುತ್ರರು ತಮ್ಮ ತಮ್ಮ ತಂದೆಯವರ ರಾಜಕೀಯ ಭವಿಷ್ಯಕ್ಕೆ ತಮ್ಮ ರಾಜಕೀಯ ಭವಿಷ್ಯವನ್ನು ಬದಿಗಿಟ್ಟಿದ್ದಾರೆ. ಇನ್ನು ಟಿ.ನರಸೀಪುರದಲ್ಲಿ ಸ್ಪರ್ಧಿಸಿ ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸುವ ಕನಸು ಕಂಡಿದ್ದ ಸುನೀಲ ಬೊಸ್ ಕನಸು ಭಗ್ನವಾಗಿದೆ. ಅವರೂ ಸಹ ತಮ್ಮ ತಂದೆಗಾಗಿ ಕ್ಷೇತ್ರವನ್ನು ತ್ಯಾಗ ಮಾಡುವಂತಾಗಿದೆ. ಅವರ ತಂದೆ ಹೆಚ್ ಸಿ ಮಹದೇವಪ್ಪ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದರು. ದುರಾದೃಷ್ಟವಶಾತ್ ಆರ್. ಧ್ರುವ ನಾರಾಯಣ್ ನಿಧನದಿಂದ ಅವರ ಪುತ್ರ ದರ್ಶನ್ ಗೆ ಆ ಕ್ಷೇತ್ರ ಬಿಡಬೇಕಾಯಿತು. ಸಿದ್ದರಾಮಯ್ಯನವರು ಮತ್ತೊಂದು ಕ್ಷೇತ್ರದಲ್ಲಿ ಸೆಣಸಲು ಅಣಿಯಾಗಿದ್ದಾರೆ. ತಮ್ಮ ಮಗ ಬಿಟ್ಟುಕೊಟ್ಟ ಕ್ಷೇತ್ರವನ್ನು ಮರಳಿ ನೀಡುವ ಉದ್ದೇಶವೂ ಇದರಲ್ಲಿ ಅಡಗಿದೆ. ಆದರೆ…
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕೋವಿಡ್ ಇದ್ದಾಗ ಬರಲಿಲ್ಲ, ಪ್ರವಾಹ ಬಂದಾಗ ಬರಲಿಲ್ಲ. ಈಗ ಮಾತ್ರ ಕರ್ನಾಟಕದ ಬಗ್ಗೆ ಪ್ರೀತಿ ಹುಕ್ಕಿಹರಿಯುತ್ತಿದೆ. ಕೇವಲ ಬರುತ್ತಾರೆ, ಹೋಗುತ್ತಾರೆ ಅಷ್ಟೇ. ಶಾಸಕರು, ಸಚಿವರು ಮಾಡುವ ಉದ್ಘಾಟನೆಗೆ ಮೋದಿ ಕರೆಸುತ್ತಿದ್ದಾರೆ. ಮೋದಿ ಬಂದು ಶಂಕುಸ್ಥಾಪನೆ ಮಾಡಿ ಹೋಗುತ್ತಾರೆ ಅಷ್ಟೇ ಎಂದು ಕಿಡಿಕಾರಿದರು. ಚನ್ನಪಟ್ಟಣದ ಕಾರ್ಯಕರ್ತರು ನನಗೆ ರಾಜ್ಯ ಕಟ್ಟುವ ಕೆಲಸ ಕೊಟ್ಟಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ ಜನರು ನನ್ನ ಮನೆ ಮಗನಂತೆ ನೋಡುತ್ತಿದ್ದಾರೆ. ಯಾರು ಏನೇ ಅಪಪ್ರಚಾರ ಮಾಡಿದರು ಜನ ಕಿವಿಕೊಡಲ್ಲ. ಜನರೇ ನನಗೆ ರಕ್ಷಣೆ ನೀಡುತ್ತಾರೆ. ಎಲ್ಲವನ್ನೂ ಜನರಿಗೆ ಬಿಟ್ಟು ನಾನು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಕಾಂಗ್ರೆಸ್ನಿಂದ ಯಾರೇ ನಿಂತರೂ ತಲೆಕೆಡಿಸಿಕೊಳ್ಳಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ನಾನು ಸಾವರ್ಕರ್ ಅಲ್ಲ, ಗಾಂಧಿ ಕುಟುಂಬದ ರಾಹುಲ್. ನನ್ನ ಹೋರಾಟ ಮುಂದುವರೆಯುತ್ತೆ. ನನ್ನನ್ನು ಸಂಸದ ಸ್ಥಾನದಿಂದ ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಹೋರಾಟವನ್ನ ಮುಂದುವರೆಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತ ನನಗೆ ಪ್ರೀತಿ ಗೌರವ ಎರಡನ್ನೂ ಕೊಟ್ಟಿದೆ. ವಯನಾಡು ಲೋಕಸಭಾ ಕ್ಷೇತ್ರದ ಜನರಿಗೆ ನಾನು ಪತ್ರ ಬರೆದಿದ್ದೇನೆ. ವಯನಾಡು ಕ್ಷೇತ್ರದ ಜನರು ತಮ್ಮ ಹೃದಯದಲ್ಲಿ ನನಗೆ ಸ್ಥಾನ ನೀಡಿದ್ದಾರೆ. ನನ್ನ ಬೆನ್ನಿಗೆ ನಿಂತಿರುವ ವಿರೋಧ ಪಕ್ಷಗಳಿಗೆ ಧನ್ಯವಾದ ಹೇಳುತ್ತೇನೆ ಸದಸ್ಯತ್ಬ ಅನರ್ಹಗೊಳಿಸಿದ್ದಾರೆ. ನನ್ನ ಹೋರಾಟ ಮುಂದುವರೆಸುತ್ತೇನೆ ಎಂದರು. ಭ್ರಷ್ಟ ಅದಾನಿ ವಿರುದ್ದ ಮೋದಿ ಯಾಕೆ ಕ್ರಮ ಕೈಗೊಂಡಿಲ್ಲ ಅಂತಾ ಜನ ಪ್ರಶ್ನಿಸುತ್ತಿದ್ದಾರೆ. ಅಂದು ನಾನು ಮಾಡಿರುವ ಭಾಷಣದಲ್ಲಿ ಯಾವುದೇ ನಿರ್ದಿಷ್ಟ ಜಾತಿಯನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿರಲಿಲ್ಲ. ಅದಾನಿ ಕುರಿತ ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಹೆದರಿದ್ದು, ಅವರ ಕಣ್ಣಲ್ಲಿ ಅದನ್ನು ಕಂಡಿದ್ದೇನೆ. ಅದಕ್ಕಾಗಿಯೇ, ಮೊದಲು ಗೊಂದಲಕ್ಕೀಡಾಗಿ ನಂತರ ನನ್ನನ್ನು…
ಬೀದರಿನ ಗುರು ನಾನಕ್ ಆಸ್ಪತ್ರೆ, ಕಲಬುರ್ಗಿಯ ಡಾ. ಓಮ್ ಇಂಡೋ ಜರ್ಮನ್ ಆಸ್ಪತ್ರೆ ಚಿತ್ತಾಪುರ, ಉಡುಪಿಯ ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆ, ಕೊಳ್ಳೇಗಾಲದ ‘ಹೋಲಿ ಕ್ರಾಸ್ ಕಾನ್ವೆಂಟ್ ಆಸ್ಪತ್ರೆ’. ಮತ್ತು ಕೊಪ್ಪಳದ ಗವಿಸಿದ್ಧೇಶ್ವರ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಗೆ ಆಂಬುಲೆನ್ಸ್ ಹಸ್ತಾಂತರಿಸಲಾಗಿದೆ. ಈ ಬಾರಿ ಪ್ರಕಾಶ್ ರಾಜ್ ಫೌಂಡೇಶನ್ ಜತೆಗೆ ಚಿರಂಜೀವಿ ಚಾರಿಟೇಬಲ್ ಟ್ರಸ್ಟ್ ಮೂಲಕ ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿ ಅವರು ಕೂಡ ಕೈ ಜೋಡಿಸಿದ್ದಾರೆ. ಜೊತೆಗೆ ತಮಿಳಿನ ಸೋದರ ನಟ ಸೂರ್ಯ ಅವರು ತಮ್ಮ 2 ಡಿ ಎಂಟರ್ಟೈನ್ಮೆಂಟ್ ಮೂಲಕ. ನಮ್ಮ ಕನ್ನಡದ ಹೆಮ್ಮೆಯ ನಾಯಕ ನಟ ಯಶ್ ಅವರು ತಮ್ಮ ಸಂಸ್ಥೆ ‘ಯಶೋಮಾರ್ಗ’ ದ ಮೂಲಕ ಬಹಳ ದೊಡ್ಡ ಸಹಾಯವಾಗಿ ನಿಂತಿದ್ದಾರೆ. ಜೊತೆಗೆ ಅವರ ಸ್ನೇಹಿತ ನಿರ್ಮಾಪಕರಾದ ವೆಂಕಟ್ ಅವರು ತಮ್ಮ ಕೆವಿಎನ್ ಫೌಂಡೇಶನ್ ಮೂಲಕ ಬೆಂಬಲ ನೀಡಿದ್ದಾರೆ. ತಮ್ಮ ಸಜ್ಜನಿಕೆಯಿಂದ, ಧಾರಾಳ ಮನಸ್ಸಿನಿಂದ ಹಾಗೂ ಉತ್ತಮ ವ್ಯಕ್ತಿತ್ವದಿಂದಾಗಿ ನಮ್ಮೆಲ್ಲರ ನಡುವೆ ಎಂದೆಂದೂ ಮಾಸದ ನೆನಪಾಗಿ ಉಳಿದಿರುವವರು…
ಮಾರ್ಚ್ 3 ರಿಂದ 23ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆದಿದ್ದವು. ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಮಾದರಿ ಉತ್ತರಗಳ ಬಗ್ಗೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಮಾರ್ಚ್ 27ರ ಸಂಜೆ 5 ಗಂಟೆಯ ಒಳಗೆ ಸಲ್ಲಿಸಬೇಕು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡುವುದಾಗಿ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ಸದ್ಯಕ್ಕೆ ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಡುತ್ತೇನೆ. ಇನ್ನು ಬೇರೆ ಶಾಸಕರ ರಾಜಿನಾಮೆಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದು ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್, ಇಂದೇ ರಾಜಿನಾಮೆ ಕೊಡಬೇಕಿತ್ತು. ಆದರೆ ಸ್ಪೀಕರ್ ಇರಲಿಲ್ಲ. ಹಾಗಾಗಿ ಸೋಮವಾರ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮತದಾರರ ಗುರುತಿನ ಚೀಟಿ ಹಾಗೂ ಆಧಾರ್ ಲಿಂಕ್ ಮಾಡಲು ನೀಡಿರುವ ಗಡುವನ್ನು ವಿಸ್ತರಣೆ ಮಾಡಿದೆ.ಆರಂಭದಲ್ಲಿ ಇವೆರಡು ಪ್ರಮುಖ ದಾಖಲೆಗಳನ್ನು ಲಿಂಕ್ ಮಾಡಲು ನೀಡಿದ್ದ ಅವಧಿಯು 2023ರ ಮಾರ್ಚ್ 31 ಕೊನೆಯಾಗಬೇಕಿತ್ತು. ಆದರೀಗ ಆ ಗಡುವನ್ನು ಒಂದು ವರ್ಷಗಳ ಅವಧಿಗೆ ವಿಸ್ತರಣೆ ಮಾಡಲಾಗಿದ್ದು, 2024ರ ಮಾರ್ಚ್ 31 ಆಧಾರ್ ವೋಟರ್ ಐಡಿ ಲಿಂಕ್ ಕೊನೆಯ ದಿನವಾಗಿರುತ್ತದೆ.ಆ ಮೂಲಕ ಮತದಾರರ ಗುರುತಿನ ಚೀಟಿದಾರರಿಗೆ ರಿಲೀಫ್ ನೀಡಲಾಗಿದೆ. ಆದರೆ, ಮತದಾರರ ಗುರುತಿನ ಚೀಟಿಯನ್ನು ಆಧಾರ್ ಜತೆ ಲಿಂಕ್ ಮಾಡುವುದು ಕಡ್ಡಾಯವಲ್ಲ ಎನ್ನುವುದು ಗಮನಿಸಬೇಕಾದ ಅಂಶವಾಗಿದೆ. ರಾಷ್ಟ್ರೀಯ ಮತದಾರರ ಸೇವೆಗಳ ಅಧಿಕೃತ ಪೋರ್ಟಲ್ nvsp.in ಭೇಟಿ ನೀಡಿ. ಹೋಮ್ ಪೇಜ್ ನಲ್ಲಿ “Search in Electoral Roll” ಆಯ್ಕೆಯನ್ನು ಆರಿಸಿ. ಬಳಿಕ ನಿಮ್ಮ ವೈಯಕ್ತಿಕ ಮಾಹಿತಿ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ. ಇದಾದ ಬಳಿಕ ನಿಮ್ಮ ಆಧಾರ್‌ನೊಂದಿಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. OTP ಅನ್ನು ವೆಬ್‌ಸೈಟ್‌ನಲ್ಲಿ ನಮೂದಿಸಿ. ಇದಾದ ಬಳಿಕ ನಿಮ್ಮ ಎರಡು…