Author: admin

ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗಳ ನಡುವೆ ನಡೆದ ಗಲಾಟೆಯಲ್ಲಿ ಮಗಳು ತಂದೆಯನ್ನೇ ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ  ನಡೆದಿದೆ. ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದು ಮಗಳು ಕೊಲೆ ಮಾಡಿದ್ದಾಳೆ. ಹುಚ್ಚೀರಯ್ಯ(68) ಕೊಲೆಯಾದ ವ್ಯಕ್ತಿ. ಪುಷ್ಪ (30) ತಂದೆಯನ್ನೇ ಹತ್ಯೆ ಮಾಡಿದ ಮಗಳು. ಗಂಡನ ಬಿಟ್ಟು ಬಂದು ಹಲವು ವರ್ಷಗಳಿಂದ ತಂದೆ ಮನೆಯಲ್ಲೇ ವಾಸವಿದ್ದ ಪುಷ್ಪ ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಳು. ಮಂಗಳವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಅಪ್ಪ ಮಗಳ ನಡುವೆ ಮಾತಿನ ಚಕಮಕಿ ಆಗಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಸ್ಪೀಕರ್ ಪೀಠಕ್ಕೆ ಯು.ಟಿ.ಖಾದರ್ ಅಗೌರವ ತೋರಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಆರ್.ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ. ಸ್ಪೀಕರ್ ಆದವರು ಒಂದು ಪಾರ್ಟಿ ಪರವಾಗಿ ಇರಬಾರದು. ಸೋನಿಯಾ, ರಾಹುಲ್ ರನ್ನು ಸ್ಪೀಕರ್ ಭೇಟಿಯಾಗಿದ್ದಾರೆ. ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಿ ನ್ಯಾಯ ಕೇಳಿದ್ದೆವು ಎಂದು ಆರೋಪಿಸಿದ್ರು. ಪ್ರಶ್ನೆ ಮಾಡಿದ್ದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ಸ್ಪೀಕರ್ ಕ್ರಮ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಗುಬ್ಬಿ: ಆಟೋ, ಲಾರಿ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಘಟನೆ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ನಡೆದಿದೆ. ಪರ್ಮಾನ್ ಖಾನ್ ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ಗುಬ್ಬಿ ತಾಲ್ಲೂಕಿನ ಕಿಟ್ಟದಕುಪ್ಪೆ ಗ್ರಾಮದ ನಿವಾಸಿಯಾಗಿದ್ದಾನೆ. ಹೊರಗಿನಿಂದ ಗಾಂಜಾ ಖರೀದಿಸಿ ಗುಬ್ಬಿ ತಾಲ್ಲೂಕಿನಲ್ಲಿ  ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಆದರಿಸಿ ದಾಳಿ ನಡೆಸಿದ್ದ ಪೊಲೀಸರು ಪರ್ಮಾನ್ ಖಾನ್ ಮನೆಯಲ್ಲಿದ್ದ 230 ಗ್ರಾಂ. ಗಾಂಜಾ ಸೊಪ್ಪು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಗ್ರಾಮ ಪಂಚಾಯಿತಿ ಚುನಾವಣೆ ತಾಳಕೆರೆ ಪಂಚಾಯಿತಿ ಜೆಡಿಎಸ್ ತೆಕ್ಕೆಗೆ ಬಿದ್ದಿದೆ. ತಾಳಕೆರೆ ಪಂಚಾಯತಿ ನೂತನ ಅಧ್ಯಕ್ಷರಾಗಿ ಸರೋಜಮ್ಮ, ಅವಿರೋಧ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಜ್ಯೋತಿ ಸೋಮಶೇಖರ್ ಆಯ್ಕೆಯಾಗಿದ್ದಾರೆ. ಎರಡನೇ ಅವಧಿಗಾಗಿ ನಡೆದ ಚುನಾವಣೆಯಲ್ಲಿ 17  ಸದಸ್ಯರನ್ನು ಹೊಂದಿರುವ ಪಂಚಾಯತಿ ಇದಾಗಿದ್ದು.  ಅಧ್ಯಕ್ಷರ ಸ್ಥಾನಕ್ಕೆ ಸರೋಜಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದರೆ, ಉಪಾಧ್ಯಕ್ಷ  ಸ್ಥಾನಕ್ಕೆ ಜ್ಯೋತಿ ಸೋಮಶೇಖರ್ ಮತ್ತು ಲೋಹಿತ್  ಇಬ್ಬರು ಸದಸ್ಯರು  ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಪ್ರತಿಸ್ಪರ್ಧಿ ಯಾರು ನಾಮ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ. ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಲೋಕೋಪಯೋಗಿ ಇಲಾಖೆಯ ( A E E) ಅಧಿಕಾರಿಯಾದ ಪ್ರಭಾಕರ್ ಅವರು  ಸರೋಜಮ್ಮ ಅವರನ್ನು ಅಧ್ಯಕ್ಷ ಎಂದು ಘೋಷಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದ್ದು, ಚುನಾವಣೆ ನಡೆದು 17 ಸದಸ್ಯ ರನ್ನು ಹೊಂದಿರುವ ಗ್ರಾಮ ಪಂಚಾಯಿತಿಯ ಸದಸ್ಯರಲ್ಲಿ ಒಂಬತ್ತು ಮತಗಳು ಜ್ಯೋತಿ ಸೋಮಶೇಖರ್ ಎಂಬುವರಿಗೆ , ಲೋಹಿತ್ ಅವರಿಗೆ ಏಳು ಮತಗಳಿದ್ದು ಒಬ್ಬ ಸದಸ್ಯ…

Read More

ವರದಿ: ಆಬಿದ್ ಮಧುಗಿರಿ ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿಯ ಸಜ್ಜೆಹೊಸಳ್ಳಿ ಗ್ರಾಮ ಪಂ ವ್ಯಾಪ್ತಿಯ  ಸುವರ್ಣಮುಖಿ ನದಿಯಲ್ಲಿ ಭೂತಾಯಿಯ ಒಡಲನ್ನು ಬಗೆದು, ಕಳ್ಳರು ಹಾಡ ಹಗಲಲ್ಲೇ ಮರಳನ್ನು ದೋಚುತಿದ್ದಾರೆ. ಹಗಲು ಇರುಳು ಎನ್ನದೆ ರಾಜ ರೋಷವಾಗಿ ಯಾವ ಇಲಾಖೆಯ ಅಧಿಕಾರಿಗಳ ಭಯ ಇಲ್ಲದೆ ಪ್ರಕೃತಿಯ ನೈಸರ್ಗಿಕ ಮರಳನ್ನು ಟ್ರ್ಯಾಕ್ಟರ್ ಗಳಲ್ಲಿ  ತುಂಬಿಕೊಂಡು ಪ್ರತಿ ಟ್ಯಾಕ್ಟರ್ ಲೋಡಿಗೆ ಇಷ್ಟು ಹಣ ಎಂಬಂತೆ ನಿಗದಿ ಮಾಡಿಕೊಂಡು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದಾರೆ. ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಸುವರ್ಣಮುಖಿ ನದಿ ತುಂಬಿ ಹರಿದಿದ್ದು, ಇದರಿಂದ ಹೆಚ್ಚಾಗಿ ಮರಳು ಬಂದು ಈ ಭಾಗದಲ್ಲಿ ಸಂಗ್ರಹವಾಗಿದೆ, ಆದರೆ ಖಾಸಗಿ ಟ್ರ್ಯಾಕ್ಟರ್ ಮಾಲೀಕರು ಇದನ್ನೇ ದಂಧೆ ಮಾಡಿಕೊಂಡು ಖಾಸಗಿ ವ್ಯಕ್ತಿಗಳಿಗೆ ಮರಳು ಸರಬರಾಜು ಮಾಡುವುದಕ್ಕೆಈ ಪ್ರಕೃತಿ ನೈಸರ್ಗಿಕ ಮರಳನ್ನೇ ದೋಚುತ್ತಿದ್ದಾರೆ. ಟ್ಯಾಕ್ಟರ್ ನಂಬರ್ ಕಾಣದಂತೆ  ಮರೆ ಮಾಜಿ  ಮರಳನ್ನು ತುಂಬಿ ಮಾರಾಟ ಮಾಡುತ್ತಿದ್ದರು ಹಾಗೂ ಇಷ್ಟೆಲ್ಲಾ ಅಕ್ರಮ ಹಾಡ ಹಗಲಲ್ಲೇ  ನಡೆಯುತ್ತಿದ್ದರು, ಕ್ರಮಕ್ಕೆ ಮುಂದಾಗ ಬೇಕಾದ ಕಂದಾಯ ಇಲಾಖೆ,…

Read More

ವಿಧಾನಸಭೆಯಲ್ಲಿ ಬುಧವಾರ ನಡೆದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ. ಸಭಾಧ್ಯಕ್ಷರ ಪೀಠವನ್ನು ದುರ್ಬಳಕೆ ಮಾಡಿಕೊಂಡಿದೆ. ಎರಡು ನಿಮಿಷದಲ್ಲಿ ಬಗೆಹರಿಸುವ ವಿಷಯವನ್ನು ಇಷ್ಟು ದೂರ ಎಳೆದು ತರಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು. ಸರಕಾರ ಗಂಭೀರ ಲೋಪ ಎಸಗಿದೆ. ಆಗಿರುವ ತಪ್ಪನ್ನು ಒಪ್ಪಿಕೊಳ್ಳುವುದು ಬಿಟ್ಟಿ ಭಂಡತನ ಪ್ರದರ್ಶನ ಮಾಡುತ್ತಿದೆ ಎಂದು ದೂರಿದರು.ವಿಧಾನಸಭೆಯಲ್ಲಿ ನಡೆದಿರುವ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ. ಘಟಬಂಧನ್ ಸಭೆಗೆ ಬಂದಿದ್ದ ಹೊರರಾಜ್ಯದ ಗಣ್ಯರಿಗೆ ಉಪಚಾರ ಮಾಡಲು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದ್ದು ತಪ್ಪು. ಈ ಸದನದಲ್ಲಿ ಪ್ರಸ್ತಾಪ ಮಾಡಿದ ಪ್ರತಿಪಕ್ಷಗಳ ಮನವಿಯ ಬಗ್ಗೆ ಸರಕಾರ ಭಂಡತನ ತೋರಿದೆ. ಸ್ವೀಕರ್ ಕಚೇರಿಯಲ್ಲಿ ಸಂಧಾನ ಸಭೆ ನಡೆಸಿದ ವೇಳೆಯಲ್ಲೂ ಕಾಂಗ್ರೆಸ್ ನಾಯಕರು, ನಾವೇನೂ ಎನು ತಪ್ಪು ಮಾಡಿಲ್ಲವೆಂದು ಪ್ರತಿಷ್ಠೆ ತೋರಿದರು ಎಂದರು ಮಾಜಿ ಮುಖ್ಯಮಂತ್ರಿಗಳು. ಎರಡು ನಿಮಿಷಗಳ ಬಗೆಹರಿಸಬಹುದಾಗಿದ್ದ ವಿಷಯವನ್ನು ಇಷ್ಟು ದೂರ ಎಳೆದು ತಂದಿದ್ದಾರೆ. ಆಗಿದ್ದು ಆಯಿತು, ಮುಂದೆ ಈ ರೀತಿ ಆಗಲ್ಲ ಅಂತ ಹೇಳಿದ್ದರೆ ಸಾಕಿತ್ತು. ವಿಷಾದವನ್ನೂ…

Read More

ಗುಲ್ಟು” ಚಿತ್ರದ ಮೂಲಕ ಜನಪ್ರಿಯರಾಗಿ, “ಹೊಂದಿಸಿ ಬರೆಯಿರಿ”, “ಹೊಯ್ಸಳ” ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್. ಪ್ರಸ್ತುತ ನವೀನ್ ಶಂಕರ್ “ಕ್ಷೇತ್ರಪತಿ” ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಮತ್ತು ದ ಇಮೋಷನ್ಸ್ ಫ್ಯಾಕ್ಟರಿ ಗ್ರೂಪ್ (EFG) ಸಹ ನಿರ್ಮಾಣದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರವಿ ಬಸ್ರುರ್ ಮ್ಯೂಸಿಕ್ & ಮೂವೀಸ್ ಈ ಚಿತ್ರವನ್ನು ಅರ್ಪಿಸುತ್ತಿದೆ. ಖ್ಯಾತ ಕೆ ಆರ್ ಜಿ ಡಿಸ್ಟ್ರಿಬ್ಯೂಟರ್ಸ್ ಬಿಡುಗಡೆ ಮಾಡುತ್ತಿದೆ. “ಕ್ಷೇತ್ರಪತಿ” ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ‌. ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ…

Read More

2022-23 ಜುಲೈ ಆವೃತ್ತಿ ಪ್ರಥಮ/ದ್ವಿತೀಯ/ತೃತೀಯ ವರ್ಷದ ಬಿ.ಎ/ಬಿ.ಕಾಂ ಹಾಗೂ ಪ್ರಥಮ/ದ್ವಿತೀಯ ವರ್ಷದ ಎಂ.ಎ/ಎಂ.ಕಾಂ(NON-CBCS) ಮತ್ತು B.Lib.I.Sc., PG Diploma., Diploma., Certificate Programsಗೆ ಪ್ರವೇಶಾತಿ ಪಡೆದ (Fresh Students) ವಿದ್ಯಾರ್ಥಿಗಳಿಗೆ ಹಾಗೂ 2013-14, 2014-15 ಹಾಗೂ 2018-19ನೇ ಸಾಲಿನಿಂದ 2021-22ನೇ ಸಾಲಿನ ವರೆಗೆ ಪುನರಾವರ್ತಿತ ಪ್ರಥಮ/ದ್ವಿತೀಯ/ತೃತೀಯ ವರ್ಷದ ಬಿ.ಎ/ಬಿ.ಕಾಂ ಹಾಗೂ ಪ್ರಥಮ/ದ್ವಿತೀಯ ವರ್ಷದ ಎಂ.ಎ/ಎಂ.ಕಾಂ(NON-CBCS) ವಿದ್ಯಾರ್ಥಿಗಳಿಗೆ ಮತ್ತು 2018-19ನೇ ಸಾಲಿನಿಂದ 2020-21ನೇ ಜುಲೈ ಆವೃತ್ತಿಯ ಸಾಲಿನ‌ವರೆಗಿನ ಎಂ.ಲಿಬ್.ಐ.ಎಸ್ಸಿ (NoN-CBCS) ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮತ್ತು 2020-21ನೇ ಸಾಲಿನಿಂದ 2021-22ನೇ ಸಾಲಿನ‌ವರೆಗಿನ ಎಂ.ಲಿಬ್.ಐ.ಎಸ್ಸಿ ಹಾಗೂ PG Diploma., Diploma., Certificate Programsನ  ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದಂಡ ಶುಲ್ಕವಿಲ್ಲದೆ ಅಂತಿಮ ದಿನಾಂಕ:- 14/08/2023 200ರೂ. ದಂಡ ಶುಲ್ಕದೊಂದಿಗೆ ಕೊನೆಯ ದಿನಾಂಕ:- 24/08/2023. ಪರೀಕ್ಷಾ ಶುಲ್ಕವನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ  ಆನ್ ಲೈನ್ (http://ksouportal.com/views/ExamHome.aspx) ಮೂಲಕ ಪಾವತಿ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ…

Read More

ಕೊಪ್ಪಳ‌ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಮೊಹರಂ ಹಬ್ಬ ನಿಷೇಧಿಸಿ ಕನಕಗಿರಿ ತಹಶೀಲ್ದಾರ್ ಸಂಜಯ್ ಕಾಂಬ್ಳೆ ಆದೇಶ ಹೊರಡಿಸಿದ್ದಾರೆ. ಜುಲೈ 29ರವರೆಗೆ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಳೆದ ವರ್ಷ 2 ಗುಂಪುಗಳ ನಡುವೆ ಗಲಾಟೆಯಾಗಿ ಇಬ್ಬರು ಮೃತಪಟ್ಟಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿ 84 ಜನರನ್ನು ಬಂಧಿಸಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಿಬಿಎಂಪಿ ವ್ಯಾಪ್ತಿಯಲ್ಲಿ 11ನೇ ಜುಲೈ 2023 ರಿಂದ ಬೀದಿ ನಾಯಿಗಳ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದೆ. ಈ ವರ್ಷ ನಾವು ಕ್ಷೇತ್ರ ಸಮೀಕ್ಷಾ ತಂಡಗಳ ಜೊತೆಗೆ, VayDyn, ಸ್ಟಾರ್ಟ್ ಅಪ್ @ARTPARK IISc(ಕೃತಕ ಬುದ್ಧಿಮತ್ತೆ ಮತ್ತು ರೊಬೊಟಿಕ್ಸ್ ಟೆಕ್ನಾಲಜಿ ಪಾರ್ಕ್- ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್) ಡೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಬೆಂಗಳೂರು ನಗರದ ಕೆರೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಿರುಗಾಡುವ ಬೀದಿ ನಾಯಿಗಳ ಎಣಿಕೆ ಕಾರ್ಯದ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲು ಪಾಲಿಕೆಯೊಂದಿಗೆ ಕೈಜೋಡಿಸಿದೆ. ಬೀದಿ ನಾಯಿಗಳ ಸಮೀಕ್ಷೆಗೆ ಡ್ರೋನ್ ಗಳನ್ನು ಬಳಸುತ್ತಿರುವುದು ಭಾರತದಲ್ಲಿ ಇದೇ ಮೊದಲನೆಯ ಯೋಜನೆಯಾಗಿದೆ. ಮೊದಲ ಹಂತದಲ್ಲಿ ಹುಳಿಮಾವು, ಸಾರಕ್ಕಿ, ಸೀಗೇಹಳ್ಳಿ ಮತ್ತು ಎಲೆ ಮಲ್ಲಪ್ಪ ಶೆಟ್ಟಿ ಕೆರೆಗಳನ್ನು ಪರಿಕಲ್ಪನೆಯ ಪುರಾವೆಯಾಗಿ ಆಯ್ಕೆ ಮಾಡಲಾಗಿರುತ್ತದೆ. ಡ್ರೋನ್ ಗಳು ನಾಯಿಗಳ ಚಿತ್ರಗಳನ್ನು ಸೆರೆಹಿಡಿಯಲು ಮತ್ತು ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಬೀದಿ ನಾಯಿಗಳನ್ನು ಗುರುತಿಸಲು ಯಶಸ್ವಿಯಾಗಿದೆ. ಡ್ರೋನ್ ಸಮೀಕ್ಷೆಯ ದತ್ತಾಂಶವನ್ನು ಮುಂಬರುವ ದಿನಗಳಲ್ಲಿ ವಿಶ್ಲೇಷಿಸಲಾಗುವುದು ಮತ್ತು ಸಾಂಪ್ರದಾಯಿಕ ಕ್ಷೇತ್ರ ಸಮೀಕ್ಷೆ ತಂಡವು ಸಂಗ್ರಹಿಸಿದ ದತ್ತಾಂಶದೊಂದಿಗೆ(ಡೇಟಾ) ತಾಳೆ ಮಾಡಲಾಗುತ್ತದೆ.…

Read More