Author: admin

ಹುಬ್ಬಳ್ಳಿ:  ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ  ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಚೆನ್ನಾಪುರ ಗ್ರಾಮದ ಎರಡೂವರೆ ವರ್ಷದ ರುಕ್ಸಾನಾ ಬಾನು ಶೇಖ್ ಸನದಿ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಕಳೆದ ಐದು ದಿನಗಳ ಹಿಂದೆ ಮನೆಯವರೊಂದಿಗೆ ಮದುವೆಗೆಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ತೆರಳಿದ್ದ ವೇಳೆ ಮಗುವಿನ ಮೈಮೇಲೆ ಕುದಿಯುವ ಸಾಂಬಾರ್ ಬಿದ್ದಿತ್ತು.  ತಕ್ಷಣ ಮಗುವನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಬಳಿಕ ಎರಡು ದಿನದ ಹಿಂದಷ್ಟೇ ಮಗುವನ್ನು ಡಿಸ್ಚಾರ್ಜ್ ಮಾಡಲಾಗಿತ್ತು.  ಮನೆಗೆ ಮರಳಿದ ನಂತರ ಮತ್ತೆ ಮಗುವಿನ ಮೈಮೇಲೆ ಮತ್ತೆ ಗುಳ್ಳೆಗಳು ಎದ್ದಿದ್ದವು. ಹೀಗಾಗಿ ಮತ್ತೆ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯವ ದಾರಿ ಮಧ್ಯೆಯೇ ಸಾವನ್ನಪ್ಪಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಈ ವರ್ಷಗಳಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ  ಕೂಗಿ ಹಾಜರಾತಿ ಪಡೆಯುವ ಬದಲು ಶಿಕ್ಷಕರು ಮೊಬೈಲ್‌ ನಲ್ಲಿ ವಿದ್ಯಾರ್ಥಿಗಳ ಮುಖ ಸ್ಕ್ಯಾನ್ ಮಾಡುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ. ‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ (ಎಐ ಫೇಶಿಯಲ್ ರಿಕಗ್ನಿಷನ್) ತೆಗೆದುಕೊಳ್ಳಲಾಗುತ್ತದೆ. ಸುಮಾರು 5 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಕರ್ನಾಟಕ ಸ್ಟೇಟ್ ಡೇಟಾ ಸೆಂಟರ್ (ಕೆಎಸ್‌ಡಿಸಿ) ಮೂಲಕ ನಿರ್ವಹಣೆ ಮಾಡಲಾಗುತ್ತದೆ. ಇದಕ್ಕಾಗಿ ಸಾಫ್ಟ್‌ ವೇರ್‌ ಕೂಡ ಸಿದ್ಧಪಡಿಸಲಾಗುತ್ತಿದೆ. ಇದು ಗರಿಷ್ಠ ಗೌಪ್ಯತೆ ಮತ್ತು ಸುರಕ್ಷತೆ ಕಾಪಾಡುತ್ತದೆ. ಪ್ರಸಕ್ತ ವರ್ಷದಿಂದಲೇ ಇ–ಹಾಜರಾತಿ ಜಾರಿಗೆ ಬರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೂ, ನಕಲಿ ದಾಖಲಾತಿ ತೋರಿಸಿ ಸರ್ಕಾರದ ವಿವಿಧ ಸೌಲಭ್ಯ ಪಡೆಯುತ್ತಿರುವ ಶಾಲೆಗಳ ಕಳ್ಳಾಟಕ್ಕೆ ತಡೆ ಹಾಕಲು ಮುಂದಾಗಿರುವ…

Read More

ವಾಷಿಂಗ್ಟನ್: ಇಸ್ರೇಲ್- -ಇರಾನ್ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಅಮೆರಿಕ ಅಧಿಕೃತವಾಗಿ ಎಂಟ್ರಿ ನೀಡಿದೆ.  ಇರಾನ್ ರಾಷ್ಟ್ರ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದೆ. ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪ್ರಮುಖ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿದೆ. ಈ ಕುರಿತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಘೋಷಣೆ ಮಾಡಿದ್ದಾರೆ.  ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ಅಮೆರಿಕವು ಅತ್ಯಂತ ಯಶಸ್ವಿಯಾಗಿ ದಾಳಿಗಳನ್ನು ನಡೆಸಿದೆ. ಎಲ್ಲಾ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್‌ ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಾವು ನಮ್ಮ ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ. ನಮ್ಮ ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಸುರಕ್ಷಿತವಾಗಿವೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಬೆಂಗಳೂರು: ತುಮಕೂರನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡುವುದಿಲ್ಲ, ತುಮಕೂರು ಜಿಲ್ಲೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಲೆ ಮತ್ತು ಸಂಸ್ಕೃತಿ ವಿಭಿನ್ನವಾಗಿದೆ, ಅದರ ಬಗ್ಗೆ ನಾವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ತುಮಕೂರನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡುವುದಿಲ್ಲ. ತುಮಕೂರು ವೇಗವಾಗಿ ಬೆಳೆಯುತ್ತಿದೆ ಎಂಬುದು ನಿಜ. ನಮ್ಮ ಮೆಟ್ರೋ ಜಾಲವನ್ನು ಜಿಲ್ಲೆಗೆ ವಿಸ್ತರಿಸಲು ಮತ್ತು ಇಲ್ಲಿಗೆ ಹೆಚ್ಚಿನ ಕೈಗಾರಿಕೆಗಳನ್ನು ಆಹ್ವಾನಿಸಲು ನಮ್ಮ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಹೇಳಿದರು. ತುಮಕೂರು ಬೆಂಗಳೂರಿನ ದಕ್ಷಿಣ ಆಗಬಹುದು ಎಂದು ಕೇಳಿದಾಗ ನಾನು ಆದರೂ ಆಗಬಹುದು ಎಂದು ಹೇಳಿದ್ದೆ. ಆದರೆ ತುಮಕೂರಿನ ಜಿಲ್ಲೆಯ ಹೆಸರು ಬದಲಾಯಿಸುತ್ತೇವೆಂದು ಹೇಳಿರಲಿಲ್ಲ. ತುಮಕೂರಿನ ಹೆಸರನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಿಲ್ಲ. ಅದಕ್ಕೆ ಅದರದೇ ಆದಂತ ಇತಿಹಾಸ ಸಂಸ್ಕೃತಿ ಇದೆ. ಯಾವುದೇ ಕಾರಣಕ್ಕೂ ತುಮಕೂರು ಜಿಲ್ಲೆಯ ಹೆಸರು ಬದಲಾಯಿಸುವುದಿಲ್ಲ ಎಂದು ತಿಳಿಸಿದರು. ಬೆಂಗಳೂರು ವ್ಯಾಪ್ತಿಗೆ ಸೇರಿಸುವ…

Read More

ತುಮಕೂರು:  ಸಮಾನ ಅವಕಾಶ ಕೊಟ್ಟು ಸಮ ಸಮಾಜ ನಿರ್ಮಾಣ ಮಾಡದಿದ್ದರೆ ಪ್ರಜಾಪ್ರಭುತ್ವದ ಸೌಧವನ್ನೇ ಧ್ವಂಸ ಮಾಡುತ್ತಾರೆ ಎಂದು 1949 ಜನವರಿಗೆ 25 ರಂದು ಅಂಬೇಡ್ಕರ್‌ ಹೇಳಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತುಮಕೂರಿನಲ್ಲಿ ಕೆ.ಎನ್.‌ ರಾಜಣ್ಣ ಅವರ ಅಮೃತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಪ್ರಜಾಪ್ರಭುತ್ವದ ಅಂಶಗಳನ್ನು ಪ್ರತಿಯೊಬ್ಬರು ಓದಬೇಕು. ಸಂವಿಧಾನ ರೂಪಿತವಾಗಿದೆ, ಯಾವುದರ ಮೇಲೆ ಚರ್ಚೆ ಆಗಿದೆ ಎಂದು ತಿಳಿದುಕೊಳ್ಳಲು ಸಾಧ್ಯವಾಗಲಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಸಮ ಸಮಾಜ ನಿರ್ಮಾಣ ಮಾಡಬೇಕಿದೆ ಎಂದರು. ಇಂದು ಸಮ ಸಮಾಜ ನಿರ್ಮಾಣ ಆಗದಿರುವುದಕ್ಕೆ ನಾವು ಕಾರಣರಲ್ಲ, ಬದಲಾಗಿ, ಅಕ್ಷರ ಸಂಸ್ಕೃತಿಯಿಂದ ಬಹುಸಂಖ್ಯಾತರನ್ನು ದೂರ ಇಟ್ಟಿದ್ದೆ ಕಾರಣವಾಗಿದೆ. ಚತುವರ್ಣ ವ್ಯವಸ್ಥೆಯಿಂದ ಅಸಮಾನತೆ ನಿರ್ಮಾಣವಾಯಿತು. ಮನುಷ್ಯತ್ವ ಬೆಳಸಿಕೊಳ್ಳಬೇಕು, ಇಲ್ಲದಿದ್ದರೆ ದ್ವೇಷ ಉದ್ಭವಿಸುತ್ತದೆ, ಇದ್ರಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯವಿಲ್ಲ ಎಂದರು. ರಾಜಕೀಯ ಮತ್ತು ಸಹಕಾರಿ ಕ್ಷೇತ್ರದಲ್ಲಿ ಬಡವರನ್ನು ಮೇಲೆತ್ತಬೇಕೆಂಬ ಗುಣವನ್ನು ಸಚಿವ ರಾಜಣ್ಣ ಅವರಲ್ಲಿ ಕಾಣಲು ಸಾಧ್ಯವಾಗಿದೆ. ಆದ್ರಿಂದ ಅವರು ನನಗೆ ಇಷ್ಟವಾಗಲಿದೆ ಎಂದರು. ನಮ್ಮತುಮಕೂರಿನ…

Read More

ತುಮಕೂರು: ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ  ಶಾಲಾ ಶಿಕ್ಷಣಕ್ಕೆ ರಾಜಣ್ಣ ನೆರವು ನೀಡುತ್ತಾ ಬಂದಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ತಿಳಿಸಿದರು. ಅವರು ಶನಿವಾರ ಕೆ.ಎನ್ ರಾಜಣ್ಣ ಅವರ 75 ನೇ ಜನ್ಮ ದಿನಾಚರಣೆ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡಿದರು. ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಅಸಮಾನತೆಯನ್ನು ತೊಲಗಿಸಿ ಎಲ್ಲರೂ ಮುಖ್ಯ ವಾಹಿನಿಗೆ ತರಬೇಕು ಎನ್ನುವುದೇ ನಿಜವಾದ ರಾಜಕೀಯ ಗುರಿ.  ಸಂವಿಧಾನ ಕೂಡ ಇದನ್ನೇ ಹೇಳುತ್ತದೆ. ಮನುಷ್ಯತ್ವ ಎನ್ನುವುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಅದು ಇದ್ದಾಗ ಮಾತ್ರ ಸಮಸಮಾಜ, ಬದಲಾವಣೆ ತರಲು ಸಾಧ್ಯವಾಗುತ್ತದೆ. ಇದಾಗಬೇಕಾದರೆ ಪ್ರತಿಯೊಬ್ಬರಿಗೂ ಆರ್ಥಿಕ ಹಾಗೂ ಸಮಾಜಿಕ ಶಕ್ತಿಯನ್ನು ತುಂಬಬೇಕು. ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾರ್ಥಕವಾಗಬೇಕಾದರೆ ಎಲ್ಲರೂ ಸ್ವಾವಂಬಿಗಳಾಗಬೇಕು ಎಂದು  ಅಂಬೇಡ್ಕರ್ ಹೇಳಿದ್ದಾರೆ.  ವೈರುಧ್ಯತೆ ಇರುವ ಸಮಾಜದಲ್ಲಿ…

Read More

ಬೆಂಗಳೂರು: ತಪ್ಪು ಅರಿವಾದರೆ ಯಾರೇ ಆದರೂ ಸಹ ಪಕ್ಷಕ್ಕೆ ಮರಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಪಕ್ಷಕ್ಕೆ ವಾಪಸ್ ಮರಳುವ ವಿಚಾರ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಇದೆಲ್ಲಾ ಕೇಂದ್ರದ ಮಟ್ಟದಲ್ಲಿ ಚರ್ಚೆ ಆಗುವ ವಿಚಾರ ಎಂದರು. ನಮ್ಮ ಹಂತದಲ್ಲಿ ಚರ್ಚೆ ಆಗಲ್ಲ. ಆದ್ರೆ ಯಾರ‍್ಯಾರು ತಮ್ಮ ತಪ್ಪನ್ನು ಅರ್ಥ ಮಾಡಿಕೊಂಡು ವಾಪಸ್ ಬರಬೇಕು ಅನ್ಕೊಂಡಿದ್ದಾರೋ ಅವರು ಬರಬಹುದು ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಸ್ಯಾಂಡಲ್ ವುಡ್ ನ ಬಹು ಬೇಡಿಕೆಯ ನಟ ಧ್ರುವ ಸರ್ಜಾ ಅವರು ತನ್ನ ಅಣ್ಣ ಚಿರಂಜೀವಿ ಸರ್ಜಾ ಅವರ ಬೈಕ್ ನಲ್ಲಿ ರೈಡ್ ಮಾಡುವ ಮೂಲಕ ತಮ್ಮ ಅಣ್ಣನ ನೆನಪನ್ನು ಸ್ಮರಿಸಿ ಭಾವುಕರಾಗಿದ್ದಾರೆ. 2020ರ ಜೂನ್ 7ರಂದು ಚಿರಂಜೀವಿ ಸರ್ಜಾ ಹೃದಯಾಘಾತಕ್ಕೆ ನಿಧನರಾಗಿದ್ದರು. ಚಿರಂಜೀವಿ ಸರ್ಜಾ ಅವರ ನಿಧನದಿಂದ  ಧ್ರುವ ಸರ್ಜಾ ಮತ್ತು ಕುಟುಂಬ ತೀವ್ರ ದುಃಖಿತವಾಗಿತ್ತು. ಅಣ್ಣನ ನೆನಪಲ್ಲೇ ಧ್ರುವ ಸರ್ಜಾ ಈಗಲೂ ಕಳೆಯುತ್ತಿದ್ದಾರೆ. ಚಿರು ಇಷ್ಟದ ಯಮಹಾ ಆರ್‌ಡಿ 350 (Yamaha RD 350) ಬೈಕ್‌ ನಲ್ಲಿ ಅಣ್ಣ–ತಮ್ಮ ಜಾಲಿ ರೈಡ್ ಹೋಗುತ್ತಿದ್ದರು. ಕಾಲೇಜಿಗೆ ಹೋಗ್ತಿದ್ರು, ಸಿನಿಮಾ ಥಿಯೇಟರ್‌ಗೂ ಹೋಗುತ್ತಿದ್ದರು. ಮೈಸೂರಿಂದ ಬೆಂಗಳೂರಿಗೂ ಪ್ರಯಾಣ ಮಾಡುತ್ತಿದ್ದರು. ಅಣ್ಣನ ಇಷ್ಟದ ಈ ಬೈಕ್‌ ನ್ನ ಹಾಗೇ ಉಳಿಸಿಕೊಂಡ ಧ್ರುವ ಸರ್ಜಾ ಅದನ್ನ ಮತ್ತೆ ಸಂಪೂರ್ಣ ರೆಡಿ ಮಾಡಿಸಿ ತಂದೆಯನ್ನ ಹಿಂದೆ ಕೂರಿಸಿಕೊಂಡು ಮನೆಯ ಮುಂದಿನ ರಸ್ತೆಯಲ್ಲಿ ರೈಡ್ ಮಾಡಿದ್ದಾರೆ. ಅಗಲಿದ ಮಗನ ಇಷ್ಟದ ಬೈಕ್‌ ನ್ನ ತಂದೆಯೂ ಓಡಿಸಿ ಖುಷಿಪಟ್ಟಿದ್ದಾರೆ.…

Read More

ಬೆಂಗಳೂರು: ರಾಜ್ಯಾಧ್ಯಕ್ಷ ಹುದ್ದೆ ಕುರಿತು ಪಕ್ಷ ಸದ್ಯವೇ ನಿರ್ಧರಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ತಿಳಿಸಿದರು. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲ ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು, ಪಕ್ಷದ ಮುಖಂಡರ ಅಭಿಮತ ಪಡೆದುಕೊಂಡು ಅಂತಿಮವಾಗಿ ಯಾರನ್ನು ಮಾಡಿದರೆ ಒಳ್ಳೆಯದು ಎಂಬ ಕುರಿತು ಅಂತಿಮ ನಿರ್ಧಾರ ಸದ್ಯವೇ ಆಗುವ ವಿಶ್ವಾಸವಿದೆ ಎಂದರು. ಕಳೆದ ಒಂದೂಕಾಲು ವರ್ಷದಿಂದ ಕೊಟ್ಟಿರುವ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತನಾಗಿ ಶ್ರದ್ಧೆಯಿಂದ ನಿರ್ವಹಿಸುತ್ತಿದ್ದೇನೆ ಎಂಬ ಅನಿಸಿಕೆ ನನ್ನದು. ಕೇಂದ್ರ ಮತ್ತು ರಾಷ್ಟ್ರೀಯ ನಾಯಕರಿಗೆ ಕೊಡಬೇಕಾದ ಮಾಹಿತಿಯನ್ನು ಕೊಡುತ್ತ ಬಂದಿದ್ದೇನೆ ಎಂದು ಹೇಳಿದರು. ನಾನು ಮತ್ತು ಪಕ್ಷದ ಕೆಲವು ಹಿರಿಯ ಮುಖಂಡರು ನಿನ್ನೆ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ಮಾರ್ಗದರ್ಶಕರಾದ ಅಮಿತ್ ಶಾ ಜೀ ಅವರನ್ನು ಭೇಟಿ ಮಾಡಿದ್ದೇವೆ. ಸುಮಾರು 20–25 ನಿಮಿಷಗಳ ಕಾಲ ಸುದೀರ್ಘವಾಗಿ ರಾಜ್ಯ ರಾಜಕಾರಣ, ಪ್ರಚಲಿತ ವಿದ್ಯಮಾನಗಳ ಕುರಿತು ಚರ್ಚಿಸಿದ್ದೇವೆ ಎಂದು ವಿವರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬೆಂಗಳೂರು: ಇಸ್ರೇಲ್–ಇರಾನ್ ಯುದ್ಧ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಬರಹವನ್ನು ಹಂಚಿಕೊಂಡ ಸಿದ್ದರಾಮಯ್ಯ ಅವರು ಭಾರತ  ಈಗ ಮಾತನಾಡಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ. ಇರಾನ್ ಮೇಲೆ ಇಸ್ರೇಲ್ ನಡೆಸಿದ ಅಪಾಯಕಾರಿ ದಾಳಿ ಕಾನೂನುಬಾಹಿರ. ಇದು ಪ್ರಾದೇಶಿಕ ಶಾಂತಿಗೆ ಬೆದರಿಕೆ ಹಾಕುತ್ತದೆ ಮತ್ತು ಭಾರತದ ಹಿತಾಸಕ್ತಿಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದಿದ್ದಾರೆ. ಸೋನಿಯಾ ಗಾಂಧಿಯವರ ಲೇಖನವು ನಾಗರಿಕರ ಜೀವಗಳು ಬಲಿಯಾದಾಗ, ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದಾಗ ಮತ್ತು ರಾಜತಾಂತ್ರಿಕತೆಯನ್ನು ತ್ಯಜಿಸಿದಾಗ ಭಾರತ ಮೌನವಾಗಿರಲು ಸಾಧ್ಯವಿಲ್ಲ ಎಂಬುದನ್ನು ಪ್ರಬಲವಾಗಿ ನೆನಪಿಸುತ್ತದೆ ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಕಾಶ್ಮೀರ ಸೇರಿದಂತೆ ನಿರ್ಣಾಯಕ ಸಮಯದಲ್ಲಿ ಇರಾನ್ ಭಾರತದ ಪರವಾಗಿ ನಿಂತಿದ್ದರೂ ಕೇಂದ್ರ ಸರ್ಕಾರದ ಮೌನವಾಗಿದೆ. ಈ ಮೊದಲು ಗಾಜಾ ಈಗ ಇರಾನ್ ವಿಚಾರಲ್ಲಿ ಮೌನವಾಗಿರುವುದು ಶಾಂತಿಯನ್ನು ಪ್ರತಿಪಾದಿಸುವ ನಮ್ಮ ವಿದೇಶಾಂಗ ನೀತಿಯ ನಿರ್ಗಮನವನ್ನು ಸೂಚಿಸುತ್ತದೆ. ಪಶ್ಚಿಮ ಏಷ್ಯಾದಲ್ಲಿ ನಮ್ಮದೇ ಆದ ದೀರ್ಘಕಾಲೀನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಭಾರತ ಈಗ ಮಾತನಾಡಬೇಕು ಎಂದು ಪೋಸ್ಟ್…

Read More