Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ಪಾವಗಡ: ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಕರಿಯಮ್ಮನ ಪಾಳ್ಯ ಶಾಲೆಯ ಮಕ್ಕಳಿಗೆ ಪಾವಗಡ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆ ವತಿಯಿಂದ ಉಚಿತ ಸಮವಸ್ತ್ರ ನೋಟ್ ಪುಸ್ತಕ ಲೇಖನಿ ಸಾಮಗ್ರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು ವಾಲ್ಮೀಕಿ ಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಲೇಖನಿ ಸಾಮಗ್ರಿಗಳ ವಿತರಣೆ ಕಾರ್ಯಕ್ರಮವನ್ನು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮರವರು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಯ ಉಳಿವಿಗೆ ಸಂಘ, ಸಂಸ್ಥೆಗಳು, ದಾನಿಗಳು ಮುಂದೆ ಬಂದು ಸರ್ಕಾರಿ ಶಾಲೆ ಉಳಿಸುವ ಪ್ರಯತ್ನಗಳನ್ನು ಪ್ರಾಮಾಣಿಕವಾಗಿ ಮಾಡಿದರೆ ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಸರ್ಕಾರಿ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ಆಗಬೇಕು ಎಂದರು ಹಾಗೆಯೇ ವಾಲ್ಮೀಕಿ ಜಾಗೃತಿ ವೇದಿಕೆಯ ವತಿಯಿಂದ ಇಂದು ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಪ್ರಶಂಸಿಸಿ ಅಭಿನಂದನೆಗಳನ್ನು ತಿಳಿಸಿದರು. ಕಾರ್ಯಕ್ರಮ ಉದ್ದೇಶಿಸಿ ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳೇಗಾರ್ ಲೋಕೇಶ್ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳಿಗೆ ಹಾಗೂ ಶಾಲೆಯ ಅಭಿವೃದ್ಧಿಗೆ ಸಹಾಯ ಸಹಕಾರ ಮಾಡಿ ಬಡ ಮಕ್ಕಳ…
ಕುಣಿಗಲ್: ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಕೋಟ್ಯಂತರ ಹಣ ಖರ್ಚು ಮಾಡುತ್ತಿದೆ. ಆದರೆ ನೀವುಗಳು ಕಾಟಾಚಾರಕ್ಕೆ ಯೋಜನೆಗಳನ್ನು ತಯಾರು ಮಾಡಿ ಕಾಮಗಾರಿಗೆ ಚಾಲನೆ ನೀಡುತ್ತಿದ್ದೀರಿ, ಇದು ನನಗೆ ಸರಿ ಅನಿಸುತ್ತಿಲ್ಲ ಎಂದು ಶಾಸಕ ಡಾ. ಹೆಚ್.ಡಿ. ರಂಗನಾಥ್ ಇಇ ಪಂಪಾಪತಿ ಅವರಿಗೆ ಸೂಚಿಸಿದರು. ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದಿಂದ ಶೆಟ್ಟಗೆರೆ ಗ್ರಾಮದವರೆಗೆ ಡಾಂಬರೀಕರಣ ರಸ್ತೆ ಕಾಮಗಾರಿಗೆ 4.50 ಕೋಟಿ ರೂ. ವೆಚ್ಚದಲ್ಲಿ ಹಾಗೂ ಸೀನಪ್ಪನಹಳ್ಳಿ ಹೊಸಕೆರೆ ಬಳಿ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ 12.50 ಕೋಟಿ ವೆಚ್ಚದ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕಳೆದ ನಾಲ್ಕು ದಶಕಗಳ ಹಿಂದೆ ಅಂದಿನ ಸಚಿವರಾದ ಡಿ.ಎನ್. ಹುಚ್ಚಮಾಸ್ತಿಗೌಡ ಅವರು ಕಾಡೋರನಹಳ್ಳಿ ಗ್ರಾಮದಿಂದ ಮಾಗಡಿ ತಾಲೂಕು ಸಂಪರ್ಕಿಸಲು ಬಂಡಿ ಜಾಡು ರಸ್ತೆ ನಿರ್ಮಾಣ ಮಾಡಿಸಿದ್ದರು. ಈ ಭಾಗದಲ್ಲಿ ಉತ್ತಮ ರಸ್ತೆ ಆಗದೆ ತಮಗೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ನನ್ನಲ್ಲಿ ಕೋರಿದ್ದರು. ಆದ್ದರಿಂದ ಸರ್ಕಾರದಿಂದ ಹಣ ಮಂಜೂರು ಮಾಡಿಸಿ…
ತುಮಕೂರು: ಭಾರತದ ಸಮಗ್ರ ಅಭಿವೃದ್ಧಿಯಲ್ಲಿ ಸಿದ್ದಗಂಗಾ ಮಠ ಹಾಗೂ ಡಾ. ಶ್ರೀ ಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯವಾಗಿದ್ದು, ಮಠದ ಸಹಾಯಾರ್ಥ ಮಕ್ಕಳಿಗೆ ಅನ್ನ, ಆಶ್ರಯ, ಶಿಕ್ಷಣವನ್ನು ಶ್ರೀಗಳು ದಾನರೂಪದಲ್ಲಿ ನೀಡದೆ ಅವರ ಹಕ್ಕಾಗಿ ಒದಗಿಸುವ ಮೂಲಕ ದೊಡ್ಡ ಮಟ್ಟಕ್ಕೆ ಹಾಕಿಕೊಟ್ಟಿದ್ದಾರೆ ಎಂದು ಭಾರತದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಬಣ್ಣಿಸಿದರು. ಸಿದ್ದಗಂಗಾ ಮಠದಲ್ಲಿ ಬುಧವಾರ ಜರುಗಿದ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 7ನೇ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ಪ್ರಧಾನಿ ಮೋದಿ ಅವರ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿ ಸಿದ್ದಗಂಗಾ ಮಠದ ಸೇವಾ ಚಟುವಟಿಕೆಗಳು ನಡೆಯುತ್ತಿದ್ದು, ಅನಿಶ್ಚಿತತೆ, ವಿಭಜನೆ ಮತ್ತು ಅಶಾಂತಿಯನ್ನು ಸೃಷ್ಟಿಸುತ್ತಿರುವ ಈ ಯುಗದಲ್ಲಿ ಸಿದ್ದಗಂಗೆಯ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನ ನೈತಿಕ ದಿಕ್ಕನ್ನು ಸೂಚಿಸುವ ನಂದಾದೀಪ ವೆನಿಸಿದೆ” ಎಂದರು. ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, “89 ವರ್ಷಗಳ ಕಾಲ ಶ್ರೀಮಠದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ನಮ್ಮೆಲ್ಲರ ಪೂಜ್ಯ ಗುರುಗಳಾದ ಡಾ.ಶಿವಕುಮಾರಸ್ವಾಮೀಜಿಯವರು, ನಮ್ಮಲ್ಲಿ ಸದಾ ಕಾಯಕ…
ಗುಬ್ಬಿ: ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಲಿಂಕ್ ಕಾಮಗಾರಿಗೆ ಮೊದಲಿಂದಲೂ ನಾನು ವಿರೋಧವನ್ನು ಮಾಡುತ್ತಿದ್ದೇನೆ, ಆದರೆ ಆಡಳಿತ ಪಕ್ಷ ಇರುವುದರಿಂದ ನಾನು ಯಾವುದೇ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ, ನನಗೆ ನನ್ನ ತಾಲೂಕಿನ ಜನ ಮುಖ್ಯ, ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ಗುಬ್ಬಿ ತಾಲೂಕಿನ ಮಲಾಮಚಕುಂಟಿ, ಸಣಬನಹಳ್ಳಿ, ಈರಪ್ಪನ ಹಟ್ಟಿ ಹಾಗೂ ಹೂವಿನಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ಸುಮಾರು 4 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕುಣಿಗಲ್ ಉತ್ಸವಕ್ಕೆ ನನ್ನನ್ನು ಆಹ್ವಾನ ಮಾಡಿದರು. ನಾನು ಕೂಡ ಹೋಗಿದ್ದೆ ಆದರೆ ಉಪಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಹೇಮಾವತಿ ವಿಚಾರದ ಬಗ್ಗೆ ಮಾತನಾಡಿರುವುದು ನಿಜ. ಆದರೆ ನಾನು ಸಂಪೂರ್ಣ ಬೆಂಬಲ ಕೊಡ್ತೀನಿ ಅಂತ ಎಲ್ಲೋ ಹೇಳಿಲ್ಲ ಹೇಳುವುದು ಇಲ್ಲ. ಡಿ.ಕೆ.ಶಿವಕುಮಾರ್ ಅವರು ಈ ವಿಚಾರ ಯಾಕೆ ಹೇಳಿದರು ನನಗಂತೂ ಗೊತ್ತಿಲ್ಲ ಆದರೆ ನನ್ನ ತಾಲೂಕಿನ ರೈತರ ಹಿತ ಕಾಪಾಡುವ ಉದ್ದೇಶದಿಂದ ನಾನು ಕೂಡ ಹೇಮಾವತಿ…
ಸರಗೂರು: ಹಾಲಿಗೆ ಕಲಬೆರಕೆ ಮಾಡದೆ ಗುಣಮಟ್ಟವನ್ನು ಕಾಯ್ದುಕೊಂಡು ಹಾಲಿನ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಶಾಸಕರು, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಅನಿಲ್ ಕುಮಾರ್ ತಿಳಿಸಿದರು. ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಗೊಂಡ ಬಿಎಂಸಿ ಕೇಂದ್ರವನ್ನು ಮಂಗಳವಾರದಂದು ಉದ್ಘಾಟಿಸಿ ಅವರು ಮಾತನಾಡಿದರು. ಸಂಘದ ಏಳಿಗೆಗೆ ಎಲ್ಲರೂ ಶ್ರಮಿಸಬೇಕು. ಆ ಮೂಲಕ ಗುಣಮಟ್ಟದ ಹಾಲಿನ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು. ಹಾಲಿನಿಂದ ಮನೆಯ ನಿರ್ವಹಣೆ ಮಾಡಬಹುದು. ಹಾಲಿನಿಂದ ಕಲಬೆರಕೆ ಇರೋದಿಲ್ಲ. ಪರಿಶುದ್ದ ಹಾಲು ಮಕ್ಕಳಿಂದ ವಯೋವೃದ್ದರಿಗೂ ಬೇಕು. ಸುಂದರವಾಗಿ ಕಟ್ಟಡ ನಿರ್ಮಾಣವಾಗಿದ್ದು, ಸಂಘ ಉತ್ತಮವಾಗಿ ಬೆಳೆಯಬೇಕು. ರಾಜಕಾರಣ ಮಾಡಬಾರದು ಎಂದು ಹೇಳಿದರು. ಮೈಮುಲ್ ಅಧ್ಯಕ್ಷ ಕೆ.ಈರೇಗೌಡ ಮಾತನಾಡಿ, “ಹಾಲಿಗೆ ನೀರು ಹಾಕದೆ ಗುಣಮಟ್ಟ ಕಾಯ್ದುಕೊಳ್ಳಿ. ಹಸುಗಳಿಗೆ ರೋಗಬರದಂತೆ ಮುನ್ನೆಚ್ಚರಿಕೆ ಕ್ರಮವಹಿಸಿಕೊಂಡು ಆರೋಗ್ಯ ಕಾಪಾಡಿ. ಮುಂದಿನ ದಿನಗಳಲ್ಲಿ ಉತ್ಪಾದಕರು ಸಬಲರಾಗಲು ಹೆಚ್ಚು ಹಾಲು ಉತ್ಪಾದನೆಗೆ ಮುಂದಾಗಬೇಕು,” ಎಂದರು. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಹಾಲು…
ಸರಗೂರು: ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಗ್ರಾಮ ವಿಕಾಸ್ ಯೋಜನೆಯಡಿ ಮಂಜೂರಾಗಿದೆ. ಉಳಿಕೆ ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಮುಂದಿನ ದಿನಗಳಲ್ಲಿ ರಸ್ತೆ ಡಾಂಬರೀಕರಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು. ಕೋಟೆ ದೊಡ್ಡ ತಾಲೂಕು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದೇನೆ. ತಂದೆಯ ಶ್ರಮದ ಫಲವಾಗಿ ಉಸಿರು ಇರುವರೆಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು. ನಮ್ಮ ತಂದೆ ದಿ ಚಿಕ್ಕಮಾದುರವರು ಗುದ್ದಲಿ ಪೂಜೆ ಸಲ್ಲಿಸಿದ ಕಾಮಗಾರಿಯನ್ನು ಪೂರ್ಣಗೊಳಿಸಲು ಮಾರ್ಚ್ ತಿಂಗಳಲ್ಲಿ ನಡೆಯುವ ಬಜೆಟ್ ಮಂಡನೆ ಮುಗಿದ ಮೇಲೆ ಅನುದಾನವನ್ನು ಬಿಡುಗಡೆಗೊಳಿಸಿ ಪೂರ್ಣ ಮಾಡಲಾಗುವುದು ಎಂದರು. ಅಂಬೇಡ್ಕರ್ ಭವನದ ಸುತ್ತ ಕಾಂಪೌಂಡ್ ನಿರ್ಮಾಣ ಹಾಗೂ ಗ್ರಂಥಾಲಯ ಮಾಡಲು ಮನವಿ ಗ್ರಾಮಸ್ಥರು ಮಾಡಿದ್ದಾರೆ. ನನ್ನ ಶಾಸಕರ ಅನುದಾನದಲ್ಲಿ ಮಾಡುತ್ತೇನೆಂದು ಭರವಸೆ ನೀಡಿದರು. ನಮ್ಮ ಕುಟುಂಬಕ್ಕೆ ಮೂರು ಬಾರಿ ತಾಲೂಕಿನ ಜನರ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಿರಾ ಅದರಂತೆ ವರ್ಷದ 365 ದಿನಗಳಲ್ಲಿ ನಮ್ಮ ಕುಟುಂಬದವರು…
ಕೊರಟಗೆರೆ: ಕೊರಟಗೆರೆ ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ವಿಶೇಷ 50 ಕೋಟಿ ಅನುದಾನ ತಂದು ರಾಜ್ಯಕ್ಕೆ ಮಾದರಿ ಕ್ಷೇತ್ರ ಮಾಡುವುದೇ ನನ್ನ ಮೊದಲ ಆದ್ಯತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಶಾಂತಲಿಂಗಯ್ಯನ ಪಾಳ್ಯ ಗ್ರಾಮದ ಮುಖ್ಯ ರಸ್ತೆಗೆ ಸುಮಾರು 60 ಲಕ್ಷದ ಕಾಮಗಾರಿ ಉದ್ಘಾಟಿಸಿ ಹಾಗೂ ಬಿ.ಡಿ.ಪುರ ಗ್ರಾಮದಲ್ಲಿ 40 ಲಕ್ಷ ರೂಗಳ ಗ್ರಾಪಂ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕೊರಟಗೆರೆ ಕ್ಷೇತ್ರದಲ್ಲಿ ಹಲವು ಗ್ರಾಮಗಳಲ್ಲಿ ದಶಕಗಳಿಂದ ರಸ್ತೆಗಳು ಅಭಿವೃದ್ದಿ ಹೊಂದಿಲ್ಲ ಎನ್ನವ ಗ್ರಾಮಸ್ಥರ ಬೇಡಿಕೆಗಳಿಗೆ ಮುಖ್ಯಮಂತ್ರಿಗಳಿಂದ 50 ಕೋಟಿಗಳ ವಿಶೇಷ ಅನುದಾನದಲ್ಲಿ ಗ್ರಾಮಗಳ ಮೂಲಭೂತ ಸೌಕರ್ಯಗಳನ್ನ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ವರ್ಷ 50 ಕೋಟಿಗಳನ್ನ ಪೂರೈಸಿ ಮುಂಬರುವ ದಿನಗಳಲ್ಲಿ ಮತ್ತೆ 50 ಕೋಟಿ ರೂ ಅನುದಾನ ಪಡೆದು ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗವುದು ಎಂದರು. ತಾಲ್ಲೂಕಿನ ಜನರ ಬೇಡಿಕೆಯಂತೆ ಈಗಾಗಲೇ ತೋವಿನಕೆರೆ ಹೋಬಳಿ ಕೇಂದ್ರದಲ್ಲಿ 36 ಕೋಟಿ ವ್ಯಚ್ಚದಲ್ಲಿ ಆಸ್ಪತ್ರೆಯನ್ನ ಮೇಲ್ಜಾಗೆ ಅಭಿವೃದ್ಧಿ…
ತುಮಕೂರು: ತುಮಕೂರಿನ ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸುರೇಂದ್ರನಾಥ ಡಿ.ಆರ್. ಮತ್ತು ಡಾ.ಶ್ವೇತಾ ಡಿ.ಎಸ್. ಇವರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ವಿದ್ಯಾರ್ಥಿಗಳು ಹಲವು ಆರೋಪಗಳನ್ನು ಮಾಡಿದ್ದರು. ಈ ಸಂಬಂಧ ಸರ್ಕಾರಿ ಚಿತ್ರಕಲಾ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರ ಕಚೇರಿಗೆ ಈ ಬಗ್ಗೆ ಮನವಿ ಸಲ್ಲಿಸಿ ಸಮಸ್ಯೆ ಬಗೆಹರಿಸಲು ಮನವಿ ಮಾಡಿಕೊಂಡಿತ್ತು. ಈ ಸಂಬಂಧ ಕಾಲೇಜಿಗೆ ಭೇಟಿ ನೀಡಿದ ಪ್ರಾದೇಶಿಕ ಜಂಟಿ ನಿರ್ದೇಶಕರು ಹಾಗೂ ಕೇಂದ್ರ ಕಚೇರಿಯ ಸಹಾಯಕ ನಿರ್ದೇಶಕರು ವಿಚಾರಣೆ ನಡೆಸಿ ಸಲ್ಲಿಸಿದ ವರದಿಯನ್ವಯ ಈ ಕ್ರಮಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳನ್ನು ನಿರ್ಲಕ್ಷಿಸುವ ಉಪನ್ಯಾಸಕರಿಗೆ ಇದೊಂದು ಎಚ್ಚರಿಕೆಯ ಕರೆಗಂಟೆಯಾಗಿದೆ, ವಿದ್ಯಾರ್ಥಿಗಳ ಒಗ್ಗಟ್ಟಿನ ಹೋರಾಟಕ್ಕೆ ತಡವಾಗಿಯಾದರೂ ಜಯ ಸಿಕ್ಕಿದೆ. ಹೋರಾಟಕ್ಕೆ ಸಹಕರಿಸಿದ ಎಲ್ಲ ಸಂಘಟನೆಗಳಿಗೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ಕೃತಜ್ಞತೆ ಸಲ್ಲಿಸುವುದಾಗಿ, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ನಟರಾಜು ಜಿ.ಎಲ್., ಖಜಾಂಚಿ ಮಹಮದ್ ಗೌಸ್ ಪೀರ್, ಕಾರ್ಯದರ್ಶಿ…
ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮತ್ತು ತರಬೇತುದಾರರಾಗಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of India – SAI) ಸುವರ್ಣಾವಕಾಶ ನೀಡಿದೆ. ಸಾಯಿ ತನ್ನ ಅಧಿಕೃತ ಅಧಿಸೂಚನೆಯಲ್ಲಿ ಒಟ್ಟು 323 ‘ಸಹಾಯಕ ತರಬೇತುದಾರ’ (Assistant Coach) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಪ್ರಮುಖ ವಿವರಗಳು: ಈ ನೇಮಕಾತಿಯು ಅಥ್ಲೆಟಿಕ್ಸ್, ಶೂಟಿಂಗ್, ಈಜು, ಕುಸ್ತಿ, ಬಾಕ್ಸಿಂಗ್ ಸೇರಿದಂತೆ ಒಟ್ಟು 26 ವಿವಿಧ ಕ್ರೀಡಾ ವಿಭಾಗಗಳಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳನ್ನು ಭಾರತದಾದ್ಯಂತ ಇರುವ ಸಾಯಿಯ ಪ್ರಾದೇಶಿಕ ಕೇಂದ್ರಗಳು ಮತ್ತು ರಾಷ್ಟ್ರೀಯ ಶ್ರೇಷ್ಠತಾ ಕೇಂದ್ರಗಳಲ್ಲಿ (NCOE) ನೇಮಕ ಮಾಡಿಕೊಳ್ಳಲಾಗುವುದು. ಒಟ್ಟು ಹುದ್ದೆಗಳಲ್ಲಿ ಶೇಕಡಾ 33 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ವಯೋಮಿತಿ ಮತ್ತು ವೇತನ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30 ವರ್ಷಗಳಾಗಿರಬೇಕು (ಸರ್ಕಾರದ ನಿಯಮಗಳಂತೆ ವಯೋಮಿತಿ ಸಡಿಲಿಕೆ ಇರುತ್ತದೆ). ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ರಿಂದ ರೂ. 1,12,400 ರವರೆಗೆ (ಲೆವೆಲ್-6) ವೇತನ ಶ್ರೇಣಿ ದೊರೆಯಲಿದೆ.…
ಸರಗೂರು: ತಾಲೂಕಿನ ಅಡ್ಡಹಳ್ಳಿ ಗ್ರಾಮದಲ್ಲಿನ ನಾಮಧಾರಿಗೌಡರ ಬೀದಿ ಸಿಸಿ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಎರಡು ಇಲಾಖೆ ಮುಂದಾದಾಗ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆ ಅಧಿಕಾರಿಗಳು, ಪೊಲೀಸರ ಮಧ್ಯಸ್ಥಿಕೆಯಿಂದ ಕಾಂಕ್ರೀಟ್ ಕಾಮಗಾರಿ ನಡೆಯಿತು. ಶಾಸಕ ಅನಿಲ್ ಚಿಕ್ಕಮಾದು ಅವರು ಅಡ್ಡಹಳ್ಳಿ ಗ್ರಾಮಕ್ಕೆ 40 ಲಕ್ಷ ರೂ.ಅನುದಾನ ಮಂಜೂರು ಮಾಡಿದ್ದು, ಈ ಪೈಕಿ ಗ್ರಾಮದಲ್ಲಿ ಕಾಮಗಾರಿಯನ್ನು ಹುಣಸೂರಿನ ಕೆಆರ್ ಐಡಿಎಲ್ ಸಂಸ್ಥೆ ವಹಿಸಿಕೊಂಡು ಕೆಲಸ ಮಾಡುತ್ತಿತ್ತು. ಇದಕ್ಕೂ ಮುನ್ನವೇ ಗ್ರಾಮ ಪಂಚಾಯಿತಿ ಸದಸ್ಯರಾದ ನಂದಕುಮಾರ್ ಅವರೂ ಸಹ ನರೇಗಾದಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಕ್ರಿಯಾಯೋಜನೆ ರೂಪಿಸಿಕೊಂಡು ಚರಂಡಿ ನಿರ್ಮಾಣ ಮಾಡಿದ್ದು, ಸಿಸಿ ರಸ್ತೆಗೆ ಕಾಂಕ್ರೀಟ್ ರಸ್ತೆ ಮಾಡಿಸಲು ಶಿಥಿಲಗೊಂಡ ವಿದ್ಯುತ್ ಕಂಬ ಹಾಕಿದ ಬಳಿಕ ಮಾಡಿಸಲು ವಿಳಂಬ ಮಾಡಲಾಗಿದೆ ಎಂದು ಆರೋಪಿಸಿ ಬೀದಿ ಜನರು ಪ್ರತಿಭಟಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ನಂದಕುಮಾರ್ ಅವರಿಗೆ ಮನುಗನಹಳ್ಳಿ ಗ್ರಾಮ ಪಂಚಾಯಿತಿಯಿಂದ ದಾಸಯ್ಯ ಅವರ ಮನೆಯಿಂದ ಸುದಿಕುಮಾರ್ ಅವರ ಮನೆಯವರೆಗೆ ಸಿಸಿ ರಸ್ತೆ ಮತ್ತು ಚರಂಡಿ…