Subscribe to Updates
Get the latest creative news from FooBar about art, design and business.
- ಇ–ಸ್ವತ್ತು ದಾಖಲೆ ವಿಳಂಬ: ಮಹಾನಗರ ಪಾಲಿಕೆಗೆ ಡಿಸಿ ಶುಭ ಕಲ್ಯಾಣ್ ದಿಢೀರ್ ಭೇಟಿ
- ತಿಪಟೂರು | ‘ಶೌರ್ಯ ಪ್ರಶಸ್ತಿ’ ಪುರಸ್ಕೃತ ಪ್ರಣವ್ ಬೆಳ್ಳೂರು ಅವರಿಗೆ ಸನ್ಮಾನ
- ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
- ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ
- ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ
- ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
- ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
- ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
Author: admin
ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಮೂರನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಪ್ರಧಾನಿಯವರ ಮಾಸಿಕ ರೇಡಿಯೋ ಕಾರ್ಯಕ್ರಮವಾದ ‘ಮನ್ ಕಿ ಬಾತ್’ ನ 99 ನೇ ಆವೃತ್ತಿ ಇಂದು ಪ್ರಸಾರವಾಗಲಿದೆ. ಅಕ್ಟೋಬರ್ 3, 2014 ರಂದು ವಿಜಯದಶಮಿ ಸಂದರ್ಭದಲ್ಲಿ ಪ್ರಾರಂಭವಾದ ಕಾರ್ಯಕ್ರಮವು ತನ್ನ 98 ಆವೃತ್ತಿಗಳನ್ನು ಪೂರ್ಣಗೊಳಿಸಿದೆ. ಅಂದಹಾಗೆ ‘ಮನ್ ಕಿ ಬಾತ್’ ಮಾಸಿಕ ಭಾಷಣವಾಗಿದ್ದು, ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಲ್ ಇಂಡಿಯಾ ರೇಡಿಯೊದಲ್ಲಿ ಪ್ರಸಾರವಾಗುತ್ತದೆ. ಈ ಕಾರ್ಯಕ್ರಮವು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್‌ನಲ್ಲಿ ಮತ್ತು AIR ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರವಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ನಾನು ಕೂಡ ಬೆಳಗಾವಿ ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿದ್ದೇನೆ ನಾನು1994 ರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಣ್ಣ ಕಾರ್ಯಕರ್ತರಿಂದ ಹಿಡಿದು ಜಿಲ್ಲಾ ಗ್ರಾಮೀಣ ಅಧ್ಯಕ್ಷರಾಗುವವರೆಗೆ ಪಕ್ಷವನ್ನು ಸಂಘಟನೆ ಮಾಡಿದ್ದೇನೆ ಬೆಳಗಾವಿ ನಗರಕ್ಕೆ ಸ್ವತಂತ್ರದ ನಂತರ ಇಲ್ಲಿವರೆಗೂ ಲಿಂಗಾಯತ ಸಮುದಾಯದ ಅಭ್ಯರ್ಥಿ ಅವಕಾಶ ಸಿಕ್ಕಿಲ್ಲ. ಈ ಬಾರಿ ಬೆಳಗಾವಿ ಉತ್ತರ ಮತಕ್ಷೇತ್ರಕ್ಕೆ ಲಿಂಗಾಯತ ಅಭ್ಯರ್ಥಿಗೆ ಅವಕಾಶ ನೀಡಬೇಕೆಂದು ಜನರ ಹಾಗೂ ಸಮುದಾಯದ ಬೇಡಿಕೆ ಇದೆ.ಕೆ ಪಿ ಸಿ ಸಿ ಕಾರ್ಯಧ್ಯಕ್ಷರು ನಮ್ಮ ಹಿರಿಯ ನಾಯಕರು ಸತೀಶ್ ಜಾರಕಿಹೊಳಿ ಅವರ ನನ್ನ ಬೆಂಬಲವಿದೆ, ಪಕ್ಷದ ವರಿಷ್ಠ ನಾಯಕರುಗಳು ಈ ಬಾರಿ ನನ್ನ ಮೇಲೆ ವಿಶ್ವಾಸ ಇಡುತ್ತಾರೆಂದು ನಂಬಿದ್ದೇನೆ. ಕಾಂಗ್ರೆಸ್ ಪಕ್ಷ 2023ರ ಚುನಾವಣೆ ಒಗ್ಗಟ್ಟಿನಿಂದ ಎದುರಿಸಿ ಜಿಲ್ಲೆಯಲ್ಲಿ 12 ರಿಂದ 15 ಸ್ಥಾನ ಪಡೆಯಲಿದೆ. ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಅಧ್ಯಕ್ಷರು ವಿನಯ್ ನವಲಗಟ್ಟಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಬೆಳಗಾವಿ: 5 ವರ್ಷಗಳ ಹಿಂದೆ ನಿಮ್ಮ ಮನೆ ಬಾಗಿಲಿಗೆ ಬಂದು, “ನನ್ನನ್ನು ಒಮ್ಮೆ ಆಯ್ಕೆ ಮಾಡಿ ಕಳುಹಿಸಿಕೊಡಿ, 25 ವರ್ಷಗಳ ಅಭಿವೃದ್ಧಿಯನ್ನು 5 ವರ್ಷದಲ್ಲಿ ಮಾಡಿ ನಿಮ್ಮ ಋಣವನ್ನು ತೀರಿಸುತ್ತೇನೆ” ಎಂದು ವಚನ ಕೊಟ್ಟಿದ್ದೆ. ಕಳೆದ 5 ವರ್ಷಗಳಲ್ಲಿ ಕೊರೋನಾ, ಪ್ರವಾಹದಂತಹ ಪ್ರಕೃತಿ ವಿಕೋಪದ ನಡುವೆಯೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವ ಮೂಲಕ ಕೊಟ್ಟ ವಚನವನ್ನು ಈಡೇರಿಸಿದ್ದೇನೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸುಳೇಭಾವಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಅಳವಡಿಸಲಾದ ಫೇವರ್ಸ್ ನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸ್ವಾಭಿಮಾನವನ್ನು ಎತ್ತಿ ಹಿಡಿದು, ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದೇನೆ. ವಿರೋಧ ಪಕ್ಷದಲ್ಲಿದ್ದರೂ ಆಡಳಿತ ಪಕ್ಷದ ಶಾಸಕರೂ ಮಾಡಲಾಗದಷ್ಟು ಕೆಲಸಗಳನ್ನು ಶಕ್ತಿ ಮೀರಿ ಮಾಡಿದ್ದೇನೆ. ಸರಕಾರದ ಅನುದಾನವಲ್ಲದೆ ಸ್ವಂತ ಹಣವನ್ನೂ ನೀಡಿ ಬಡವರ ಕಣ್ಣೀರು ಒರೆಸಿದ್ದೇನೆ. ನನ್ನ ಸ್ವಂತ ಅನಾರೋಗ್ಯವನ್ನೂ ಲೆಕ್ಕಿಸದೆ, ವಿಶ್ರಾಂತಿಯನ್ನೂ ತೆಗೆದುಕೊಳ್ಳದೆ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದೇನೆ. ನನ್ನ…
ದಾವಣಗೆರೆ: ಕರ್ನಾಟಕಕ್ಕೆ ಬಹುಮತ ಪಡೆದ ಬಿಜೆಪಿ ಸರ್ಕಾರದ ಅವಶ್ಯಕತೆಯಿದೆ. ನಿಮ್ಮ ಸೇವೆ ಮಾಡಲು ಬಿಜೆಪಿ ಸರ್ಕಾರವನ್ನ ಗೆಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು. ದಾವಣಗೆರೆಯಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಯ ಮಹಾಸಂಗಮ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ನಿಮ್ಮ ಸೇವೆ ಮಾಡಬೇಕೆಂದು ಬಯಸುತ್ತಿದ್ದೇನೆ. ಆದರೆ ಕಾಂಗ್ರೆಸ್ ನನ್ನ ಸಮಾಧಿ ಬಯಸುತ್ತಿದೆ. ಜನರು ಮೋದಿ ನಿನ್ನ ಕಮಲ ಅರಳುತ್ತೆ ಅಂತಿದ್ದಾರೆ ಎಂದು ತಿರುಗೇಟು ನೀಡಿದರು. ದಾವಣಗೆರೆಯಲ್ಲಿ 4 ವಿಜಯ ಸಂಕಲ್ಪಯಾತ್ರೆಗಳ ಮಹಾಸಂಗಮ ಯಶಸ್ವಿಯಾಗಿದೆ. ಸಾಕಷ್ಟು ಜನಬೆಂಬಲ ಸಿಕ್ಕಿದೆ. ಮುಂದಿನ 3 ತಿಂಗಳೂ ಹುರುಪು ಹೀಗೆ ಇರಬೇಕು. ನಮ್ಮ ಕಾರ್ಯಕರ್ತರು ಎಲ್ಲ ಬೂತ್‌ಗಳಿಗೂ ತೆರಳಿ ಬಿಜೆಪಿ ಪರ ಪ್ರಚಾರ ಮಾಡಬೇಕು ಎಂದು ಕರೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್, 6 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. 124 ಅಭ್ಯರ್ಥಿಗಳಲ್ಲಿ ಮಹಿಳೆಯರಿಗೆ ಸಿಕ್ಕಿದ್ದು ಮಾತ್ರ ಕೇವಲ 6 ಸ್ಥಾನ. 6 ಅಭ್ಯರ್ಥಿಗಳ ಪೈಕಿ 5 ಮಹಿಳಾ ಅಭ್ಯರ್ಥಿಗಳು ಹಾಲಿ ಶಾಸಕಿಯರಾಗಿದ್ದಾರೆ. ಉಳಿದ ಒಬ್ಬರು ಅಭ್ಯರ್ಥಿ ಕುಸುಮಾ ರಾಜರಾಜೇಶ್ವರಿನಗರದಲ್ಲಿ ಕಣಕ್ಕಿಳಿಯಲಿದ್ದಾರೆ. ಯಾವ ಕ್ಷೇತ್ರದಿಂದ ಯಾರು ಕಣಕ್ಕೆ? ಲಕ್ಷ್ಮಿ ಹೆಬ್ಬಾಳ್ಕರ್ – ಬೆಳಗಾವಿ ಗ್ರಾಮೀಣ ಡಾ. ಅಂಜಲಿ ನಿಂಬಾಳ್ಕರ್ – ಖಾನಾಪುರ ಕನೀಝ್ ಫಾತಿಮ – ಕಲಬುರಗಿ ಉತ್ತರ ರೂಪಕಲಾ ಶಶಿಧರ್ – ಕೆಜಿಎಫ್ ಸೌಮ್ಯ ರೆಡ್ಡಿ – ಜಯನಗರ ಕುಸುಮಾ – ರಾಜರಾಜೇಶ್ವರಿನಗರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ: “ವಿವಿಧೆಡೆ ಹರಿದು ಹಂಚಿಹೋಗಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರತೆಯನ್ನು ಎದುರಿಗಿಟ್ಟುಕೊಂಡು ಅಭಿವೃದ್ಧಿಯ ಹೊಸ ಪರ್ವಕ್ಕೆ ನಾಂದಿ ಹಾಡಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಬಿಡುವಿಲ್ಲದೆ ಶ್ರಮಿಸಿದ್ದೇನೆ. ಐದು ವರ್ಷಗಳಲ್ಲಿ ಜನತೆಯ ಶ್ರೇಯೋಭಿವೃದ್ಧಿಯೇ ನನ್ನ ಉಸಿರಾಗಿಸಿಕೊಂಡು ಮಾಡಿರುವ ಕೆಲಸ ಕಾರ್ಯಗಳಿಗೆ ಕ್ಷೇತ್ರದ ಜನತೆಯೇ ಜೀವಂತ ಸಾಕ್ಷಿ” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಮರಾಠಾ ಕಾಲೋನಿಯಲ್ಲಿ ನೂತನ ಉದ್ಯಾನ (ಗಾರ್ಡನ್) ನಿರ್ಮಾಣದ ಸಲುವಾಗಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಿಡುಗಡೆಗೊಂಡ 50 ಲಕ್ಷ ರೂ. ಅನುದಾನದಲ್ಲಿ ಉದ್ಯಾನ ನಿರ್ಮಾಣದ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಕ್ಷೇತ್ರಕ್ಕೆ ಹೊಸ ಕಾಮಗಾರಿಗಳಿಗೆ ಅನುದಾನ ತರುವಾಗ ಪಟ್ಟ ನೋವು ಯಾರಲ್ಲೂ ಹೇಳಿಕೊಂಡಿಲ್ಲ. ಆದರೆ ಜನಹಿತವೇ ಉಸಿರಾಗಿಸಿಕೊಂಡು ಜನಬಲದಿಂದಲೇ ಮುಂದಡಿ ಇಟ್ಟು ಶಕ್ತಿ ಮೀರಿ ಅನುದಾನ ತಂದಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷದ ಸರಕಾರ ರಚನೆಯಾಗುವ ನಿಟ್ಟಿನಲ್ಲಿ ಬೆಂಬಲಿಸಿದರೆ ಸರಕಾರದ ಭಾಗವಾಗಿ ಬಂದು ಇನ್ನೂ ಹೆಚ್ಚು ಸೇವೆ…
ತುರುವೇಕೆರೆ: ದಿವಂಗತ ಶ್ರೀ ಚಾರುಕೀರ್ತಿ ಭಟ್ಟಾರಕ ಶ್ರೀಗಳ ಅಗಲಿಕೆಯಿಂದ ಅಪಾರ ನಷ್ಟ ಉಂಟಾಗಿದೆ ಎಂದು ಜೈನ ಸಮಾಜದ ಮುಖಂಡರಾದ ಚಂದ್ರಪ್ರಭು ಹೇಳಿದರು. ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ 1008 ಶಖೆ ದಿಗಂಬರ ಜೈನ ಪಾಶ್ವನಾಥ ಸ್ವಾಮಿ ಟ್ರಸ್ಟ್ (ರಿ) ಗೌರವಾಧ್ಯಕ್ಷರಾಗಿದ್ದ ಮತ್ತು ಜೈನ ಸಮಾಜದ ಶ್ರೀಗಳಾದ ಶ್ರೀ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜೈನ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಯಿತು. ಈ ವೇಳೆ ಸಮಾಜದ ಅಧ್ಯಕ್ಷರಾದ ಚಂದ್ರಪ್ರಭು ಮಾತನಾಡಿ ಶ್ರೀಗಳು 12-12-1969ರಲ್ಲಿ ಕ್ಷುಲ್ಲಕ ದೀಕ್ಷೆ ಸ್ವೀಕರಿಸಿದರು, ವಿಚಾರ ಸಂಕಿರಣ, ಧರ್ಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸರಳಶೈಲಿ ಪ್ರವಚನಗಳಿಂದ ಶ್ರಾವಕರ ಮನ ಗೆದ್ದಿದ್ದಾರೆ. ಶ್ರೀಗಳು ಜೈನ ಧರ್ಮ ಇಂದಿಗೂ ತನ್ನತನ ಉಳಿಸಿಕೊಂಡು ಬರುವುದಕ್ಕೆ ಪ್ರಮುಖ ಕಾರಣವೆಂದರೆ ಜೈನ ತತ್ವಶಾಸ್ತ್ರ ಗ್ರಂಥಗಳು ಹಾಗೂ ಜೈನ ವಾಸ್ತುಶಿಲ್ಪ ಕಲೆ ಎಂಬುದನ್ನು ಅರಿತು ಬಸದಿಗಳ ಜೀರ್ಣೋದ್ದಾರ, ಜೈನ ಸಾಹಿತ್ಯ ಪ್ರಕಟಣೆಗೆ ವಿಶೇಷವಾಗಿ ಒತ್ತು ನೀಡಿರುವುದರ ಜೊತೆಗೆ ಅವುಗಳ ಸಂರಕ್ಷಣೆಗಾಗಿ ಪ್ರಮುಖ…
ತಿಪಟೂರಿನ ಕೆ.ಆರ್. ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕರುನಾಡಿನ ಹಾಸ್ಯ ಚಕ್ರವರ್ತಿ ಆರ್. ನರಸಿಂಹರಾಜು ರಂಗಮಂದಿರವನ್ನು ಉದ್ಘಾಟಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಿರ್ಮಾಣವಾಗಿರುವ ಈ ಸುಸಜ್ಜಿತ ರಂಗ ಮಂದಿರದಲ್ಲಿ ಏಕ ಕಾಲದಲ್ಲಿ 620 ಕಲಾಸಕ್ತರು ಕುಳಿತುಕೊಳ್ಳಬಹುದು. ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಲೋಕಾರ್ಪಣೆಗೊಂಡಿರುವ ಈ ರಂಗಮಂದಿರದಲ್ಲಿ ನಾಟಕ, ರಂಗಭೂಮಿ, ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬಹುದು. ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಹಿರಿಯ ಚಿತ್ರ ಸಾಹಿತಿ, ಸಿ. ವಿ. ಶಿವಶಂಕರ್, ಚಲನಚಿತ್ರ ನಟ ನಿರ್ಮಾಪಕ, ಗಂಡಸಿ ಸದಾನಂದ ಸ್ವಾಮಿ, ಗುಪ್ತ, ಸುಬ್ಬಣ್ಣ, ತಿಪಟೂರು ಕೃಷ್ಣ, ದಯಾನಂದ್, ರಾಜಶೇಖರ್, ಪ್ರಭು, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಮೂಡಲಪಾಯ ಯಕ್ಷಗಾನ ಭಾಗವತರು, ಕೇಂದ್ರ ಸಂಗೀತ ಮತ್ತು ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕಲ್ಮನೆ ನಂಜಪ್ಪ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಭೂಮಿ ಕಲಾವಿದರಾದ ಶ್ರೀಮತಿ ಹೇಮಲತಾ ಸೇರಿದಂತೆ ಇನ್ನಿತರ ಕಲಾವಿದರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವರದಿ: ಆನಂದ್…
ವಿದ್ಯಾರ್ಥಿಗಳು ಓದಿನ ಜೊತೆಗೆ ಒಂದೊಂದು ಗಿಡ ನೆಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಈ ಮೂಲಕ ಪರಿಸರ ಸ್ನೇಹಿ ಆಗಬೇಕು ಎಂದು ಶಾಸಕ ಮಸಾಲ ಜಯರಾಮ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತುರುವೇಕೆರೆ ತಾಲೂಕು ಮಾಯಸಂದ್ರ ಹೋಬಳಿ ಮಣೆ ಚಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 24.84 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಮಾಡಿ, ಅವರು ಮಾತನಾಡಿದರು. ಕ್ಷೇತ್ರದ ಅಭಿವೃದ್ಧಿಗಾಗಿ ತುರುವೇಕೆರೆ ಕ್ಷೇತ್ರದ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣಗಳ ಸಂಸ್ಥೆ ಬೆಂಗಳೂರು, ವತಿಯಿಂದ ತುರುವೇಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗುಬ್ಬಿ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ 24.55 ಕೋಟಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯನ್ನು ಈಗ ತಾನೇ ಉದ್ಘಾಟನೆ ಮಾಡಿ ಬಂದಿದ್ದೇನೆ. ಅಭಿವೃದ್ಧಿಯೇ ಮರೀಚಿಕೆಯಾದ ಈ ಭಾಗದಲ್ಲಿ ವಸತಿ ಶಾಲೆಗಳಿಗೆ ಆದ್ಯತೆಯನ್ನು ನೀಡಿ, ಇಲ್ಲಿಯೂ ಸಹ ನೂತನ ಶಾಲಾ ಕಟ್ಟಡವನ್ನು ತಂದಿದ್ದೇನೆ ಎಂದು ಅವರು…
ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಮಾಡಿದುಣ್ಣೋ ಮಹರಾಯ ಎಂಬಂತಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದ ಬಿಜೆಪಿ ಯುವ ಸಮಾವೇಶದ ಬಳಿಕ ಮಾತನಾಡಿದ ಅವರು, ಮೋದಿ ಆಡಳಿತವನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿರುವಾಗ ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದು ಸರಿಯಲ್ಲ, ನ್ಯಾಯಾಲಯ ಸರಿಯಾದ ಕ್ರಮ ತೆಗೆದುಕೊಂಡಿದೆ ಎಂದು ಅಭಿಪ್ರಾಯಪಟ್ಟರು. ಸಿದ್ದರಾಮಯ್ಯ ಅವರ ಕ್ಷೇತ್ರ ಕಗ್ಗಂಟಾಗಿರುವ ಬಗ್ಗೆ ಇದೇ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾಂಗ್ರೆಸ್ ಮುಖಂಡರೇ ಮಾಸ್ಟರ್ ಪ್ಲಾನ್ ಮಾಡಿದ್ದಾರೆ, ಕಾಂಗ್ರೆಸ್ ನ ಒಳಜಗಳದಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಭಿವೃದ್ಧಿಪರ್ವಕ್ಕೆ ಜನಾಶೀರ್ವಾದ ಮಾಡುತ್ತಾರೆ, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್…