Author: admin

ಶಿವಮೊಗ್ಗ: ಮನುಷ್ಯ ಪರ ನಿಲುವುಗಳಿಗಾಗಿ, ಮೂಲಭೂತ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸ್ಥಾಪಿತವಾಗಿರುವ ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೊರಂ ನ ಲಾಂಛನವನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಂದ ಬಿಡುಗಡೆಗೊಳಿಸಲಾಯಿತು. ಲಾಂಛನವನ್ನು ನಗರದ ಅಂಬೇಡ್ಕರ್ ಭವನದ ಮುಂದಡಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ಬಿಡುಗಡೆಗೊಳಿಸಿದ ಪೌರಕಾರ್ಮಿಕರ ಪ್ರತಿನಿಧಿ ಶ್ರೀಧರ್ ರವರು ಮಾತನಾಡಿ, ಎಲ್ಲಾ ಸಮುದಾಯದ ಶೋಷಿತರಿಗೆ ಫೋರಂ ಕಾನೂನಾತ್ಮಕವಾಗಿ ನೆರವಾಗಲಿ ಎಂದರು ಅಲ್ಲದೆ ಒಳ್ಳೆಯ ಉದ್ದೇಶವಿದೆ ಇದು ರಾಜ್ಯದಲ್ಲಿ ಸಂಘಟಿತಗೊಳ್ಳಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಫೋರಂ ನ ಉಪಾಧ್ಯಕ್ಷರಾದ ಶಶಿ.ಕೆ.ಎಸ್ ರವರು ಮಾತನಾಡಿ,  ಯಾವುದೇ ಜಾತಿ.ಮತ ಪಂಥಗಳ ಬೇದವಿಲ್ಲದೆ, ರಾಜಕೀಯದ ಲೇಪನವಿಲ್ಲದೆ, ಮನುಷ್ಯ ಸಮುದಾಯದ ಜೀವನದ ಮೌಲ್ಯಗಳಿಗಾಗಿ ಇಂದು ಸಮಗ್ರವಾಗಿ ತಿಳುವಳಿಕೆ ಮೂಡಿಸಬೇಕಾದ ಸಂದರ್ಭಗಳಿವೆ, ಹೀಗಾಗಿಯೇ ನಮ್ಮ ಸಂಸ್ಥೆಯ ಮೊದಲ ಕಾರ್ಯಕ್ರಮದಲ್ಲಿ ಲಾಂಛನ (ಲೋಗೋ) ಬಿಡುಗಡೆಯನ್ಮು ಶೋಷಿತ ವರ್ಗಗಳಿಂದಲೇ ಮಾಡಿಸಲು ಹಾಗೂ ಇದರ ಮೂಲಕ ಸಹಭಾಗಿತ್ವ, ಸಹಭಾಳ್ವೆ, ಸಾಮರಸ್ಯವನ್ನು ನಾಗರೀಕ ಸಮಾಜಕ್ಕೆ ಫೋರಂ ನ ನಿಲುವುಗಳನ್ನು ಸ್ಪಷ್ಟಪಡಿಸಿದ್ದೇವೆ ಎಂದರು. ಈಗಾಗಲೇ…

Read More

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ಮತ್ತು ಬೂದಗವಿ ಗ್ರಾಮ ಪಂಚಾಯತಿಯ ಸಹಭಾಗಿತ್ವದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.. ಮರೇನಾಯಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಶಾಲಾ ಮಕ್ಕಳಿಂದ ಪ್ರಾರ್ಥನಾ ಗೀತೆ ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದಂತಹ ತಾಲೂಕು ದಂಡಾಧಿಕಾರಿ ಮುನಿಶಾಮಿ ರೆಡ್ಡಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೂದಗವಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾದ ಶ್ರೀನಿವಾಸ್ ಎಂ ಎಸ್ ಮತ್ತು ನೂತನ ಉಪಾಧ್ಯಕ್ಷ ಚಂದ್ರಶೇಖರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.15 ಕ್ಕೂ ಹೆಚ್ಚು ಜನ ವೃದ್ಧರಿಗೆ ಸ್ಥಳದಲ್ಲಿಯೇ ಪಿಂಚಣಿ ಮಾಶಾಸನ ಆದೇಶ ಪತ್ರವನ್ನು ಗ್ರೇಟ್ 2 ತಹಶೀಲ್ದಾರ್ ನರಸಿಂಹಮೂರ್ತಿ ವಿತರಣೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಮಾತನಾಡಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು,ಗ್ರಾಮ ಪಂಚಾಯತಿ ಸದಸ್ಯರು,ಗ್ರಾಮ ಪಂಚಾಯತಿ ಮಾಜಿ…

Read More

ಬೆಂಗಳೂರು ನಗರದಲ್ಲಿ ಕೆಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಆರೋಪಿ ಬೆನಸ್ಟಿನ್ ರಾಯ್‌ನನ್ನು (22) ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಕೇರಳದ ಬೆನಸ್ಟಿನ್ ರಾಯ್, ಕೆಂಗೇರಿ ಬಳಿಯ ಪ್ಯಾರಾಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿ. ಡ್ರಗ್ಸ್ ವ್ಯಸನಿಯಾಗಿದ್ದ ಈತ, ಕ್ರಮೇಣ ಪೆಡ್ಲರ್ ಆಗಿ ಮಾರ್ಪಟ್ಟಿದ್ದ. ನಗರದ ಹಲವು ಕಾಲೇಜುಗಳ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಿ ಹಣ ಸಂಪಾದಿಸುತ್ತಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಡ್ರಗ್ಸ್ ಮಾರಾಟದ ಬಗ್ಗೆ ಮಾಹಿತಿ ಬರುತ್ತಿದ್ದ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. * 20 ಲಕ್ಷ ಮೌಲ್ಯದ 200 ಗ್ರಾಂ ಎಂಡಿಎಂಎ, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದ ಎಂದು ತಿಳಿಸಿವೆ. ಕೇರಳದಿಂದ ಡ್ರಗ್ಸ್ ತರಿಸುತ್ತಿದ್ದ: ‘ಎರಡು ವರ್ಷಗಳ ಹಿಂದೆ ವಿದ್ಯಾಭ್ಯಾಸಕ್ಕೆಂದು ಬೆನಸ್ಟಿನ್ ರಾಯ್ ನಗರಕ್ಕೆ ಬಂದಿದ್ದ. ಕೆಲ ಸ್ನೇಹಿತರ ಜೊತೆ ಸೇರಿ, ಡ್ರಗ್ಸ್ ವ್ಯಸನಿಯಾಗಿದ್ದ. ಕೇರಳದಲ್ಲಿ ಡ್ರಗ್ಸ್ ಮಾರುತ್ತಿದ್ದವರ ಜೊತೆ ಒಡನಾಟ ಬೆಳೆಸಿಕೊಂಡಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಕೇರಳದಿಂದ ಡ್ರಗ್ಸ್ ತರಿಸುತ್ತಿದ್ದ ಆರೋಪಿ, ಅದನ್ನು ಕಾಲೇಜು ವಿದ್ಯಾರ್ಥಿಗಳಿಗೆ…

Read More

ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ 10 ಬಿಜೆಪಿ ಶಾಸಕರ ಅಮಾನತಾದ ಬಳಿಕ, ಆವರಣದಲ್ಲಿ ನೂಕಾಟ ತಳ್ಳಾಟ ಏರ್ಪಟ್ಟು ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಸದನದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನೆಲೆ ಸ್ಪೀಕರ್ ಯುಟಿ ಖಾದರ್, 10 ಬಿಜೆಪಿ ಶಾಸಕರನ್ನು ಅಮಾನತು ಮಾಡಿದರು. ಸಸ್ಪೆಂಡ್ ಆದ ಬಳಿಕವೂ ಬಿಜೆಪಿ ಸದಸ್ಯರು ಸದನದೊಳಗೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಾರ್ಷಲ್‌ ಗಳು ಅಮಾನತಾದ ಶಾಸಕರನ್ನು ಸದನದಿಂದ ಹೊರಹಾಕುವ ಕೆಲಸ ಮಾಡಿದರು. ಈ ವೇಳೆ ಸ್ಥಳದಲ್ಲಿ ನೂಕಾಟ ತಳ್ಳಾಟ ಜೋರಾಗಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಧಾನಸಭೆಯ ಆವರಣದಲ್ಲಿ ಕುಸಿದು ಬಿದ್ದಿದ್ದಾರೆ. ಯತ್ನಾಳ್ ಅವರಿಗೆ ಬಿಪಿ ಏರಿಕೆ ಹಾಗೂ ಶುಗರ್‌ ನಲ್ಲಿ ಏರುಪೇರಾಗಿದೆ ಎನ್ನಲಾಗಿದೆ. ಇದೀಗ ಯತ್ನಾಳ್ ಅವರನ್ನು ಚಿಕಿತ್ಸೆಗೆ ಅಂಬುಲೆನ್ಸ್ನಲ್ಲಿ ಪೋರ್ಟಿಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಬಳ್ಳಾರಿ ನಗರ ಹೊರವಲಯದ ಗುಗ್ಗರಹಟ್ಟಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ಮೆಹಬೂಬ್ ಬಾಷಾ(40) ಕೊಲೆಯಾದ ವ್ಯಕ್ತಿ. ದುಷ್ಕರ್ಮಿಗಳು ಬಾಷಾ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಬಾಷಾ ಮೃತಪಟ್ಟಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದ ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಶಂಕಿತ ಉಗ್ರರನ್ನು ಬಂಧಿಸಿದ ಕ್ರಮವನ್ನು ಸ್ವಾಗತಿಸಿದ ಅವರು ಸಂಬಂಧಿಸಿದ ಇಲಾಖೆಯನ್ನು ಅಭಿನಂದಿಸಿದರು. ಇನ್ನೊಬ್ಬ ಶಂಕಿತ ಉಗ್ರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈ ಜಾಲದ ಕುರಿತು ತನಿಖೆಯನ್ನು ಎನ್‌ಐಎಗೆ ವಹಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವ್ಯಾಪ್ತಿಯನ್ನು ಮೀರಿ ವಿದೇಶಕ್ಕೂ ಈ ಜಾಲ ಹರಡಿದೆ ಎಂಬ ಸಂಶಯವಿದೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವುದು ಸೂಕ್ತ ಎಂದು ನುಡಿದರು. ಅವರು ಬೆಂಗಳೂರಿನ ಹಲವೆಡೆ ಬಾಂಬ್ ಸ್ಫೋಟಿಸಲು ಯೋಜಿಸಿದ್ದರು ಎಂಬುದು ಬಹಳ ಗಂಭೀರವಾದ ಸಂಗತಿ ಎಂದ ಅವರು, ಕಾಂಗ್ರೆಸ್ ನಾಯಕರು ಈಗಲಾದರೂ ಮನ ಪರಿವರ್ತನೆ ಮಾಡಿಕೊಳ್ಳಲಿ ಎಂದು ಆಗ್ರಹಿಸಿದರು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗ ಕೆಪಿಸಿಸಿ ಅಧ್ಯಕ್ಷರು ಬಿಜೆಪಿಯನ್ನು ನಿಂದಿಸಿದ್ದರು. ಬಿಜೆಪಿ ದುರುದ್ದೇಶದಿಂದ ಬಂಧಿಸಿದೆ ಎಂದು ಟೀಕಿಸಿದ್ದರು ಎಂದು ವಿವರಿಸಿದರು. ಉಗ್ರಗಾಮಿ ಜಾಲ ಕರ್ನಾಟಕದಲ್ಲಿ ವಿಸ್ತರಿಸುತ್ತಿರುವುದು…

Read More

ಹುಕ್ಕೇರಿ: ಪಂಚಾಯತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ನೆರಲಿ ಗ್ರಾಮ ಪಂಪಂಚಾಯತಿನ ನೂತನ ಅಧ್ಯಕ್ಷರಾಗಿ 3ನೇ ವಾನ ತಾತ್ಯಾಸಾಹೇಬ್ (ನೀಲೇಶ) ಜಾದವ್, ಉಪಾಧ್ಯಕ್ಷರಾಗಿ 5ನೇ ವಾರ್ಡನ ವಿಮಲಾ ಕೆಂಪಣ್ಣ ಕಾಂಬಳೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 16 ಸದಸ್ಯರ ಬಲ ಹೊಂದಿದ ಈ ಗ್ರಾಪಂನಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊಂದೇ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಪಂಚಾಯತಿಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖಂಡರಾದ ಇಲಿಯಾಸ್ ಇನಾಮದಾರ್, ಮಧುಕರ್ ಖೋತ, ಅನಿಲ್ ಪಾಟೀಲ್, ಶಂಕರ ಸಂಕಪಾಳ, ರಾಜಶೇಖರ್ ಹಂದಿಗೂಡಮಠ, ರವೀಂದ್ರ ಪಾಟೀಲ್, ಕಲಗೌಡ್ ಪಾಟೀಲ್, ಶಿವಲಿಂಗ ಹುಕ್ಕೇರಿ, ವಿರುಪಾಕ್ಷಿ ಹೊಸಮನಿ, ಮಾರುತಿ ತಳವಾರ್, ಶಕೀಲ್ ಮುಲ್ಲಾ ಮಾರ್ಗದರ್ಶನದಲ್ಲಿ ಈ ಅವಿರೋಧ ಆಯ್ಕೆ ನಡೆಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯ ವಿಧಾನಸಭೆಯ ಸದನದಲ್ಲಿ ನಡೆದ ಘಟನೆಯ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ. ಸದನ ಮುಕ್ತಾಯದ ಬಳಿಕ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ ಸಚಿವ ರಾಮಲಿಂಗಾರೆಡ್ಡಿ, ವಿಪಕ್ಷದವರಿಗೆ ಜವಾಬ್ದಾರಿ ಇಲ್ಲ ಅನ್ನುವುದನ್ನು ಹೇಳುತ್ತೇನೆ. ನಿನ್ನೆ ಪ್ರತಿಪಕ್ಷದವರೆಲ್ಲ ಬಂದಿದ್ದರು. ಹಾಲಿ, ಮಾಜಿ ಎಲ್ಲರೂ ಇದ್ದರು. ಅವರಿಗೆ ಪ್ರೋಟೋಕಾಲ್ ಪ್ರಕಾರ ಸೆಕ್ಯೂರಿಟಿ ನೀಡಿದ್ದೆವು. ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಬರುತ್ತಿದ್ದರು. ಅವರಿಗೆ ಪ್ರೋಟೋಕಾಲ್ ಪ್ರಕಾರ ಗೌರವ ಕೊಡುತ್ತಿದ್ದರು. ಇವತ್ತು ಬಿಜೆಪಿ ಎಡಬಿಡಂಗಿತನ ತೋರಿದ್ದಾರೆ. ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಬಿಜೆಪಿಯವರು. ವಿಧಾನಸಭೆಯ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ. ಬಿಜೆಪಿಯವರು ಎಡಬಿಡಂಗಿಗಳು, ಹೊಸ ಸಂಸತ್ ಉದ್ಘಾಟನೆಯಾಯಿತು. ಆಗ ಪುರೋಹಿತರನ್ನ ಅಲ್ಲಿಗೆ ಕರೆದೊಯ್ದಿದ್ದರು. ಸ್ಪೆಷಲ್ ಫೈಟ್ ನಲ್ಲಿ ಕರೆದೊಯ್ದು ಉಪಚಾರ ಮಾಡಿದ್ದರು. ಕುಮಾರಸ್ವಾಮಿ ಪ್ರಮಾಣ ವಚನ ಮಾಡಿದರು. ಆಗ ಯಾರೆಲ್ಲ ಇಲ್ಲಿಗೆ ಬಂದಿದ್ದರಲ್ಲ, ಆಗ ಏಕೆ ಯಾರೂ ಕೇಳಲಿಲ್ಲ? ಅತಿಥಿಗಳಿಗೆ ಗೌರವ ಕೊಡುವುದು ಇವರಿಗೆ ಬರಲ್ಲ. ಜನ ಚುನಾವಣೆಯಲ್ಲಿ ಮಂಗಳಾರತಿ ಎತ್ತಿದ್ದಾರೆ. ಮುಂದಿನ ಚುನಾವಣೆಯಲ್ಲೂ ಮಂಗಳಾರತಿ…

Read More

ನವದೆಹಲಿ:ಪ್ರಾರಂಭವಾಗುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಒಟ್ಟು 31 ಮಸೂದೆಗಳನ್ನು ಚರ್ಚಿಸುವ ಸಾಧ್ಯತೆಯಿದೆ. ಇವುಗಳನ್ನು ಈಗಾಗಲೇ ಕೆಳಮನೆಯಲ್ಲಿ ಮಂಡಿಸಲಾಗಿದೆ ಮತ್ತು ಜಂಟಿ ಸಮಿತಿಗಳಿಗೆ ಉಲ್ಲೇಖಿಸಲಾಗಿದೆ. ಸುದ್ದಿ ಸಂಸ್ಥೆ ಎಎನ್ಐ ಪ್ರಕಟಿಸಿರುವ ಪಟ್ಟಿಯ ಪ್ರಕಾರ, ಡೇಟಾ ರಕ್ಷಣೆ ಮಸೂದೆಯು ಕೇಂದ್ರದ ಕಾರ್ಯಸೂಚಿಯ ಒಂದು ಭಾಗವಾಗಿದೆ. ಇದರ ನಡುವೆ ಸದ್ಯ ದೇಶದ ಎಲ್ಲರ ಕಣ್ಣುಗಳು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಮಸೂದೆಯ ಮೇಲೆ ಇದೆ. ಇದನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ತೀವ್ರವಾಗಿ ಟೀಕಿಸಿದೆ. ವಿಪಕ್ಷಗಳ ಸಭೆಯಲ್ಲಿಯೂ ಇದನ್ನು ಖಂಡಿಸಲಾಗಿದೆ. ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದ ಕಾಂಗ್ರೆಸ್ ಕೂಡ ಬಹಿರಂಗವಾಗಿ ಈ ಮಸೂದೆಯನ್ನು ಟೀಕಿಸಿ, ಎಎಪಿಗೆ ಬೆಂಬಲ ಸೂಚಿಸಿದೆ. ಇತ್ತ ಸರ್ಕಾರವನ್ನ ಇಕ್ಕಟ್ಟಿಗೆ ತಳ್ಳಲು ವಿಪಕ್ಷಗಳು ಸಹ ಸಜ್ಜಾಗಿವೆ. ಮಣಿಪುರ ಗಲಭೆ, ರಾಹುಲ್ ಗಾಂಧಿ ಅನರ್ಹತೆ, ದೆಹಲಿ ಸುಗ್ರೀವಾಜ್ಞೆ, ಪ್ರವಾಹ, ಒರಿಸ್ಸಾ ರೈಲು ದುರಂತ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಬಗ್ಗೆ…

Read More

ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವಡೆ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಳಗಾವಿ, ಬೀದರ್, ಕಲಬುರಗಿ, ಬಾಗಲಕೋಟೆ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More