Subscribe to Updates
Get the latest creative news from FooBar about art, design and business.
- ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
- ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ
- ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ
- ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
- ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
- ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
Author: admin
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನವರು ಅಪರೇಷನ್ ಹಸ್ತ ಮಾಡಿದರೇ ಚುನಾವಣೆ ಬಳಿಕ ಬಿಜೆಪಿಯವರು ಅಪರೇಷನ್ ಕಮಲ ಮಾಡುತ್ತಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದರು. ಯಾದಗಿರಿ ಗುರುಮಠಕಲ್ ನಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿಯಿಂದ ಕಾಂಗ್ರೆಸ್ ಗೆ ನಾಯಕರ ವಲಸೆ ಪ್ರಾರಂಭವಾಗಿದೆ. ಕಾಂಗ್ರೆಸ್ ನಿಂದ ಅಪರೇಷನ್ ಹಸ್ತ ಬಿಜೆಪಿಯಿಂದ ಅಪರೇಷನ್ ಕಮಲ ಇದರ ಬಗ್ಗೆ ನಾನು ವೈಯಕ್ತಿಕವಾಗಿ ಟೀಕೆ ಮಾಡಲ್ಲ ಎಂದರು. ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಭವಿಷ್ಯ ಮುಗಿಸುತ್ತೇನೆಂದು ಬಾಬೂರಾವ್ ಚಿಂಚನಸೂರ್ ಹೇಳಿದ್ರು. ಆದರೆ ಈಗ ಚಿಂಚನಸೂರ್ ಅವರನ್ನೇ ಕಾಂಗ್ರೆಸ್ ನವರು ವಾಪಸ್ ಪಕ್ಷಕ್ಕೆ ಕರೆದುಕೊಂಡಿದ್ದಾರೆ. ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಕೊರತೆ ಎಷ್ಟಿದೆ. ಅಂತಾ ಗೊತ್ತಾಗುತ್ತೆ. ಅವರ ಕುತ್ತಿಗೆ ಕುಯ್ದವರನ್ನೇ ಮತ್ತೆ ತಬ್ಬಿಕೊಂಡು ಹೊರಟಿದ್ದಾರೆ. ಅಪರೇಷನ್ ಕಮಲ ಮಾಡುವ ಬಗ್ಗೆ ಬಿಜೆಪಿ ಸಂಖ್ಯೆ ತೆಗೆದು ನೋಡಿ ಅಪರೇಷನ್ ಮಾಡುವುದರಲ್ಲಿ ಬಿಜೆಪಿ ಗಿನ್ನಿಸ್ ದಾಖಲೆ ಮಾಡಬಹುದು ಎಂದು ವ್ಯಂಗ್ಯವಾಡಿದರು. ಸಿದ್ಧರಾಮಯ್ಯ ಕ್ಷೇತ್ರ ಫೈನಲ್ ಆಗದ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಬಗ್ಗೆ…
ಬಿಎಸ್ ಯಡಿಯೂರಪ್ಪರನ್ನ ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ. ಅವರಿಗೆ ಪಕ್ಷ ಎಲ್ಲವನ್ನೂ ನೀಡಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು. ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಕೂಟದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ. ಅಮಿತ್ ಶಾ ಅವರು ಪ್ರೀತಿಯಿಂದ ಮಾತನಾಡಿಸಿದ್ರು. ಅಮಿತ್ ಶಾ ನಡೆಯಿಂದ ಆನೆ ಬಲ ಬಂದಂತಾಗಿದೆ. ಇನ್ನಷ್ಟು ಉತ್ಸಾಹದಿಂದ ಕೆಲಸ ಮಾಡುತ್ತೇನೆ ಎಂದರು. ಬಿಎಸ್ ವೈ ಹಿಂದಿನಿಂದಲೂ ಉತ್ಸಹದಲ್ಲಿದ್ದಾರೆ . ಬಿಎಸ್ ವೈ ಯಾರ ಜೊತೆ ಮಾತನಾಡಬೇಕೋ ಅವರ ಜೊತೆ ಮಾತನಾಡಿದ್ದಾರೆ. ಬಿಎಸ್ ವೈ ಮತ್ತು ಅಮಿತ್ ಶಾ ಅವರು ನಡುವೆ ರಾಜಕೀಯ ವಿಚಾರ ಚರ್ಚೆಯಾಗಿದೆ. ಈ ಬಾರಿ ಅತಂತ್ರ ಸರ್ಕಾರ ಬರಲು ಬಿಡಲ್ಲ. ಬಿಜೆಪಿ ಸರ್ಕಾರ ಬಹುಮತ ಪಡೆಯುವ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದರು. ಶಿಕಾರಿಪುರ ಕ್ಷೇತ್ರದಲ್ಲಿ ನಾನು ಓಡಾಡುತ್ತಿದ್ದೇನೆ. ವರುಣಾದಲ್ಲಿ ನನ್ನ ಸ್ಪರ್ಧೆ ಬಗ್ಗೆ ವರಿಷ್ಠರು ಹೇಳುತ್ತಾರೆ. ಅದನ್ನ…
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ. ಯಾವ ಕ್ಷಣದಲ್ಲಾದ್ರೂ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಬಹುದು. ತುರ್ತು ಕಾರ್ಯಗಳನ್ನ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ ಎನ್ನಲಾಗುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ…
ಹಿಂದಿನ ಸರ್ಕಾರಗಳು ದೇಶದಲ್ಲಿ ಮಾದಕ ವಸ್ತು ನಿಯಂತ್ರಿಸುವಲ್ಲಿ ವಿಫಲವಾಗಿದ್ದವು. ಆದರೆ ದೇಶದಲ್ಲಿ ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅಮಿತ್ ಶಾ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ದಕ್ಷಿಣ ಭಾರತದ ರಾಜ್ಯಗಳ ಸಮ್ಮೇಳನದಲ್ಲಿ ಮಾತನಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ, ಮಾದಕ ವಸ್ತುಗಳ ನಿಯಂತ್ರಣ ಒಂದು ರೀತಿಯ ಸವಾಲಾಗಿತ್ತು. ಮಾದಕ ವಸ್ತುಗಳ ಮುಕ್ತ ಭಾರತಕ್ಕೆ ಮೋದಿ ಸರ್ಕಾರ ಪಣ ತೊಟ್ಟಿದೆ. ಮಾದಕ ವಸ್ತು ಮುಕ್ತ ಅಭಿಯಾನವನ್ನ ಕೇಂದ್ರ ಮಾಡುತ್ತಿದೆ ಎಂದರು. ನಶೆ ಮುಕ್ತ ಭಾರತಕ್ಕೆ ಶ್ರಮಿಸಿದ್ದೇವೆ. ದೇಶದ ಭದ್ರತೆಗೆ ಎಲ್ಲಾ ಇಲಾಖೆಗಳು ಒಟ್ಟಾಗಿ ಶ್ರಮಿಸಬೇಕು. ದಕ್ಷಿಣ ರಾಜ್ಯಗಳು ಡ್ರಗ್ಸ್ ತನಿಖೆ ಸ್ವರೂಪ ಬದಲಿಸಿಕೊಳ್ಳಬೇಕು. ಡ್ರಗ್ಸ್ ಸರಬರಾಜು ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು. ಎನ್ ಡಿಪಿಎಸ್ ಕಾನೂನು ಮತ್ತಷ್ಟು ಬಲಪಡಿಸಲಾಗುವುದು. ಸದ್ಯದ ದಿನಗಳಲ್ಲಿ ಕೇಂದ್ರದ ನೀತಿಯಿಂದ ಎಲ್ಲಾ ಬದಲಾಗಲಿದೆ ಎಂದು ಅಮಿತ್ ಶಾ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಬೆಳಗಾವಿ ಜಿಲ್ಲಾ ಅಧಿಕಾರಿ ಕಚೇರಿಗೆ ಇಂದು ರಾಯಬಾಗ್ ತಾಲೂಕಿನ ಮುಗಳಖೋಡ ಪುರಸಭೆ ಪೌರಕಾರ್ಮಿಕರ 25 8 2018 ರಿಂದ ಆಗಸ್ಟ್ 2016 ಹಾಗೂ ಜುಲೈ 2018 ರವರೆಗೆ ಪೌರಕಾರ್ಮಿಕರಿಗೆ ವೇತನ ಸಲ್ಲಿಸದೆ ಅವರಿಂದ ಮುಗುಳ್ಕೊಡು ಪುರಸಭೆ ಪೌರಕಾರ್ಮಿಕರ ಸೇವೆಯನ್ನು ತೆಗೆದುಕೊಳ್ಳುತ್ತಾ ಇದೆ. ಎಂದು ಅಂಬೇಡ್ಕರ್ ಪೀಪಲ್ ಪಕ್ಷ ಯುವ ಘಟಕ ಅಧ್ಯಕ್ಷರಾದ ಕೃಷ್ಣ ಸಿಎಂ ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಈ ವಿಷಯದ ಕುರಿತು ಚರ್ಚೆ ಮಾಡುತ್ತಾ ಕಾರ್ಮಿಕ ಆಯುಕ್ತರು ಬೆಳಗಾವಿ ವಿಭಾಗ ಈಗಾಗಲೇ 15 ದಿನಗಳ ಒಳಗಡೆನೆ ವೇತನ ಪಾವತಿ ಮಾಡಬೇಕೆಂದು ಆದೇಶ ಮಾಡಲಾಗಿತ್ತು . ಆದರೆ ಸ್ಥಳೀಯ ಆಡಳಿತ ಆದೇಶ ಉಲ್ಲಂಘನೆ ಮಾಡಿ ನ್ಯಾಯಾಲಯದ ಮೊರೆ ಹೋಗಿತ್ತು ಆದರೆ ಕರ್ನಾಟಕ ಉಚನ್ಯಾಯಾಲಯ ಪೌರ ಕಾರ್ಮಿಕರ ಪರವಾಗಿ ಕಾರ್ಮಿಕ ಆಯುಕ್ತರ ಆದೇಶವನ್ನು ಎತ್ತಿ ಹಿಡಿದಿರುವುದು ಗಮನಾರ್ಹ. ಈ ಅಂಶದಿಂದಾಗಿ ಕಾರ್ಮಿಕರಿಗೆ ನ್ಯಾಯ ದೊರಕಿಸುವ ಸಲುವಾಗಿ ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ಮುಂದಾಳತ್ವದಲ್ಲಿ ಪೌರ ಕಾರ್ಮಿಕರಿಗೆ ನ್ಯಾಯ ದೊರಕಿಸುವ ಸಲುವಾಗಿ ಇಂದು ಬೆಳಗಾವಿ…
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡ್ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಮಾನನಷ್ಟ ಪ್ರಕರಣ ಸಂಬಂಧ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ. ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು,…
ನಾನು ಮತ್ತೆ ಸಿಎಂ ಆಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಹೇಳಿಕೆ ಕುರಿತು ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ನಾನು ಮತ್ತೆ ಸಿಎಂ ಆಗುತ್ತೇನೆಂದು ಸಿಎಂ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ. ಸಿಎಂ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡಿದ್ದಾರೆ. ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದು ಹೇಳಿರುವುದರಲ್ಲಿ ತಪ್ಪಿಲ್ಲ. ಸಿಎಂ ಬೊಮ್ಮಾಯಿ ಹೇಳಿಕೆ ಸ್ವಾಗತಿಸುತ್ತೇನೆ ಎಂದರು. ಸಿದ್ಧರಾಮಯ್ಯ ಕ್ಷೇತ್ರ ವಿಚಾರದಲ್ಲಿ ಗೊಂದಲ ಇಲ್ಲ. ಗೊಂದಲ ಅಂತ ಹೇಳಿ ಪ್ರಚಾರ ಪಡೆಯುತ್ತಿದ್ದಾರೆ. ನಾನು ಅಲ್ಲಿ ನಿಲ್ತೀನಿ ಇಲ್ಲಿ ನಿಲ್ಲುತ್ತೇನೆ ಅಂತಾ ಹೇಳುತ್ತಾರೆ. ಎಲ್ಲಿ ನಿಂತರೂ ಗೆಲ್ಲುತ್ತೇನೆ ಎನ್ನುತ್ತಾರೆ. ಇದರಿಂದಾಗುವ ಪ್ರಯೋಜನ ಏನು..? ಇದಕ್ಕೆಲ್ಲಾ ಉತ್ತರ ಕೊಡುವ ಅಗತ್ಯವಿಲ್ಲ ಎಂದು ನುಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅದಾನಿ ವಿರುದ್ದ ತನಿಖೆ ನಡೆಸಲು ಧೈರ್ಯವಿಲ್ಲ. ಅದಾನಿ ಮನೆ ಮೇಲೆ ಸಿಬಿಐ,ಇಡಿ ದಾಳಿ ಮಾಡಿಲ್ಲ ಮೋದಿಯನ್ನ ಜನ ಕಳ್ಳರ ಸರ್ದಾರ್ ಎಂದು ಕರೆಯುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗುಡುಗಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅರವಿಂದ ಕೇಜ್ರಿವಾಲ್, ಬಿಜೆಪಿ ಸೇರ್ಪಡೆಯಾದರೇ ಎಲ್ಲಾ ಕೇಸ್ ಗಳು ಖುಲಾಸೆಯಾಗುತ್ತವೆ. ಮೋದಿ ಪ್ರತಿದಿನ ಯಾರನ್ನಾದರೂ ಕಾರಗೃಹಕ್ಕೆ ಕಳಿಸುತ್ತಿದ್ದಾರೆ. ಬೇರೆ ಪಕ್ಷದಲ್ಲಿದ್ದುಕೊಂಡು ನೀವು ಭ್ರಷ್ಟಾಚಾರ ಮಾಡಬೇಡಿ ಬಿಜೆಪಿಗೆ ಬಂದು ಭ್ರಷ್ಟಾಚಾರ ಮಾಡಿ ಎಂದು ಮೋದಿ ಹೇಳುತ್ತಿದ್ದಾರೆ. ಗುಜರಾತ್ ನಲ್ಲಿ ನಕಲಿ ಮದ್ಯ ಸೇವಿಸಿ ಹಲವು ಜನರು ಮೃತಪಟ್ಟಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. 10 ರಿಂದ 15 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು. ಮನೀಶ್ ಸಿಸೋಡಿಯ ಸತ್ಯೇಂದ್ರ ಜೈನ್ ಭ್ರಷ್ಟಾಚಾರ ಮಾಡಿಲ್ಲ. ಮೋದಿಗೆ ನಿದ್ರೆ ಬರದಿದ್ರೆ ಮಾತ್ರೆ ತೆಗೆದುಕೊಳ್ಳಲಿ . ಪ್ರಧಾನಿ ಮೋದಿ ನಿತ್ಯವೂ ಸಿಟ್ಟಿನಲ್ಲೇ ಇರ್ತಾರೆ ಎಂದು ಅರವಿಂದ ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.…
ಸಿದ‍್ಧರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಅವರ ಪಕ್ಷದವರೇ ಅವರನ್ನ ಸೋಲಿಸುತ್ತಾರೆ ಕೆ.ಎಸ್ ಈಶ್ವರಪ್ಪ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿದ್ಧರಾಮಯ್ಯ ತಳ ಬುಡ ಇಲ್ಲದ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ವರುಣಾ ಕ್ಷೇತ್ರದಿಂದ ಬಾದಾಮಿ, ಬಾದಾಮಿಯಿಂದ ಕೋಲಾರ, ಕೋಲಾರದಿಂದ ಕುಷ್ಟಗಿ, ಕುಷ್ಟಿಗಿಯಿಂದ ಮತ್ತೆ ವರುಣಾಗೆ ಓಡಾಡುತ್ತಿದ್ದಾರೆ. ಈ ಮೊದಲು ಹೈಕಮಾಂಡ್ ಹೇಳಿದ ಕಡೆ ಸ್ಪರ್ಧೆ ಮಾಡುತ್ತೇನೆ ಎಂದಿದ್ದರು. ಈಗ ಪತ್ನಿ ಮಗ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಅಂತಿದ್ದಾರೆ. ಇವರಿಗೆ ಕ್ಷೇತ್ರ ಇಲ್ಲ ಬೇರೆಯವರಿಗೆ ಹೇಗೆ ಟಿಕೆಟ್ ಕೊಡ್ತಾರೆ ಎಂದು ಟೀಕಿಸಿದರು. ನಿಮ್ಮ ಬಸ್ ಯಾತ್ರೆ ಯಾವಾಗ ನಿಲ್ಲಿಸುತ್ತೀರಿ ಎಂದು ಕುಟುಕಿದ ಕೆ.ಎಸ್ ಈಶ್ವರಪ್ಪ, ಸಿದ್ಧರಾಮಯ್ಯ ಎಲ್ಲೇ ಸ್ಪರ್ಧಿಸಿದ್ರೂ ಅವರ ಪಕ್ಷದವರೇ ಸೋಲಿಸುತ್ತಾರೆ. ಚುನಾವಣೆಯಲ್ಲಿ ಸಿದ್ಧರಾಮಯ್ಯ ಸೋಲಬೇಕೆಂಬುದು ನನ್ನ ಆಸೆ. ಸಿದ್ಧರಾಮಯ್ಯ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡುವ ಮನಸು ಮಾಡಲ್ಲ ಎಂದು ಲೇವಡಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕನನ್ನು ಬಂಧಿಸಲಾಗಿದೆ. ಭದ್ರತಾ ಪಡೆಗಳೊಂದಿಗೆ ಜಮ್ಮು ಪೊಲೀಸರು ನಡೆಸಿದ ಜಂಟಿ ಶೋಧದಲ್ಲಿ ಭಯೋತ್ಪಾದಕ ಸಿಕ್ಕಿಬಿದ್ದಿದ್ದಾನೆ. ಆತನ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದಕ ಚಟುವಟಿಕೆಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ (52RR) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (177 Bn) ಜಂಟಿಯಾಗಿ ಪೇತ್ ಸೀರ್ ರೈಲು ನಿಲ್ದಾಣದ ಬಳಿ ಶೋಧ ಕಾರ್ಯಾಚರಣೆ ನಡೆಸಿತು. ಇದೇ ವೇಳೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಭಯೋತ್ಪಾದಕನನ್ನು ಜಂಟಿ ತಂಡ ವ್ಯೂಹಾತ್ಮಕವಾಗಿ ಬಂಧಿಸಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್ ಜತೆ ನಂಟು ಹೊಂದಿರುವ ಮಂಚಸೀರ್ ನಿವಾಸಿ ಉಮರ್ ಬಶೀರ್ ಭಟ್ ಬಂಧಿತ ಆರೋಪಿ. ಆತನ ಬಳಿಯಿಂದ ಒಂದು ಹ್ಯಾಂಡ್ ಗ್ರೆನೇಡ್, ಪಿಸ್ತೂಲ್, ಪಿಸ್ತೂಲ್ ಮ್ಯಾಗಜೀನ್, 15 ಸುತ್ತಿನ ಪಿಸ್ತೂಲ್ ಮತ್ತು ಸಿಮ್ ಕಾರ್ಡ್ ಹೊಂದಿರುವ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…