Subscribe to Updates
Get the latest creative news from FooBar about art, design and business.
- ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
- ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
- ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
- ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
- ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
- ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
- ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
- ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
Author: admin
ಚಿಕ್ಕೋಡಿ: ಹಿರೇಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜುಲೈ 21 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನ್ ದಲಾಯತ್ ಗೆ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯ ನ್ಯಾಯಾಧೀಶ ಚಿದಾನಂದ ಬಡಿಗೇರ ಆದೇಶ ಹೊರಡಿಸಿದ್ದಾರೆ. 7 ದಿನಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಇಬ್ಬರೂ ಆರೋಪಿಗಳನ್ನು ಸೋಮವಾರ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದರು. ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದ ಪೊಲೀಸರು, ಬಳಿಕ ಇಬ್ಬರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ರವಾನೆ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಮ್ಮತುಮಕೂರು: ಜಿಲ್ಲೆಯಲ್ಲಿ 19,000 ಪಡಿತರ ಚೀಟಿಗಳು ಆಕ್ಟೀವ್ ಆಗಿಲ್ಲ, ಇನ್ನು 50 ಸಾವಿರ ಕಾರ್ಡ್ ದಾರರು ಬ್ಯಾಂಕ್ ಖಾತೆಯನ್ನೆ ಹೊಂದಿಲ್ಲ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗಳನ್ನು ಆಕ್ಟೀವ್ ಮಾಡಲು ಸೂಚನೆ ನೀಡಲಾಗಿದೆ ಎಂದರು. ಅನ್ನ ಭಾಗ್ಯ ಯೋಜನೆಗೆ 30 ಕೋಟಿ ಹಣ ಬಿಡುಗಡೆ ಆಗಿದ್ದು ಅನ್ನಭಾಗ್ಯ ಯೋಜನೆ ಯಶಸ್ವಿಗೆ ಜಿಲ್ಲಾಢಳಿತ ಅವಿರತ ಪ್ರಯತ್ನ ನಡೆಸಲಾಗಿದೆ ಎಂದರು. ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ವಿಚಾರ. ತುಮಕೂರು ಜಿಲ್ಲೆಯಲ್ಲಿ 6,61,625 ಪಡಿತರ ಚೀಟಿಗಳಿವೆ. ಇದರಲ್ಲಿ 5,29,000 ಫಲನುಭವಿಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದರು. ನೇರ ಹಣ ಪಾವತಿ ಮೂಲಕ(DBT) ಖಾತೆಗಳಿಗೆ ಹಣವನ್ನು ಎರಡು ಮೂರು ದಿನಗಳಲ್ಲಿ ಜಮೆ ಮಾಡಲಾಗುವುದು. ಗ್ರಾಮದ ಅಂಚೆ ಇಲಾಖೆಯಲ್ಲೇ ಬ್ಯಾಂಕ್ ಖಾತೆ ತೆರೆಯಲು ಯೋಜನೆ ರೂಪಿಸಿದ್ದೇವೆ ಎಂದರು. ಪಡಿತರ ಅಂಗಡಿಯಲ್ಲಿ ಸಾರಯುಕ್ತ ಮಿಶ್ರಿತ ಅಕ್ಕಿ ವಿತರಣೆ: ಗೊಂದಲ ಪಡಿತರ ಅಂಗಡಿಗಳಲ್ಲಿ ನೀಡಲಾಗುತ್ತಿರುವ ಸಾರಯುಕ್ತ…
ತುಮಕೂರು: ವಿದ್ಯುತ್ ಪ್ರವಹಿಸಿ 19 ಕುರಿಗಳು ಸಾವನ್ನಪ್ಪಿದ ಘಟನೆ ಪಾವಗಡ ತಾಲ್ಲೂಕಿನ ಶ್ರೀರಂಗಾಪುರ ಗ್ರಾಮದಲ್ಲಿ ನಡೆದಿದೆ. ರೈತ ಮಂಜುನಾಥ್ ಎಂಬುವರಿಗೆ ಸೇರಿದ 19 ಕುರಿಗಳು ಸಾವನ್ನಪ್ಪಿದ್ದು, ರಾತ್ರಿ ಸುರಿದ ಮಳೆಯ ವೇಳೆ ಕುರಿ ಶೆಡ್ ಬಳಿ ಇದ್ದ ಕಂಬಕ್ಕೆ ವಿದ್ಯುತ್ ಪ್ರವಹಿಸಿದ್ದು, ಪರಿಣಾಮವಾಗಿ ಶೆಡ್ ನೊಳಗಿದ್ದ ಕುರಿಗಳು ಸಾವನ್ನಪ್ಪಿವೆ. ಕುರಿಗಳ ಸಾವಿನಿಂದಾಗಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ರೈತ ಕಂಗಾಲಾಗಿದ್ದಾನೆ. ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಭೂಮಿ ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ಹಮ್ಮಿ ಕೊಂಡಿದ್ದ ಸಾಂಕೇತಿಕ ಪ್ರತಿಭಟನೆ ಯಶಸ್ವಿಯಾಯಿತು. ಈ ವೇಳೆ 500ಕ್ಕೂ ಹೆಚ್ಚು ಜಿಲ್ಲೆಯ ಭೂಮಿ ವಸತಿ ರಹಿತರು ಈ ಪ್ರತಿಭಟನೆಗೆ ಭಾಗವಹಿಸಿ ನಗರದ ಟಾನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ತೆರಳಿ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ತುರ್ತಾಗಿ ಸಮಸ್ಯೆಗಳನ್ನು ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿಯ ರಾಜ್ಯ ಸಂಚಾಲಕರದ ಕುಮಾರ್ ಸಮತಳ ಹಾಗೂ ಬೆಂಗಳೂರಿನ ಮರಿಯಪ್ಪ, ಹೈಕೋರ್ಟ್ ವಕೀಲರಾದ ಉಮಾಪತಿ C, ಮತ್ತು ಸುಧಾ ಕಟ್ವ ಹಾಗೂ ಬೆಂಗಳೂರಿನ ಹಿರಿಯ ಹೋರಾಟಗಾರರದ ನರಸಿಂಹ ಮೂರ್ತಿ, ಮಹಿಳಾ ಹೋರಾಟಗಾರ್ತಿ ಲೀಲಾವತಿ ಹಾಗೂ ತುಮಕೂರಿನ ಸಮಾನಮನಸ್ಕ ವಕೀರಾದ M.S. ಗಣೇಶ್, ಶಿವಕುಮಾರ್ ಮೇಸ್ಟ್ರುಮನೆ, ಪದ್ಮನಾಭ, ಶೇಖರ್, ಚಿನ್ಮಯ್, ಮೋಹನ್, ಶಿವಕುಮಾರ್, ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಭದ್ರೆ ಗೌಡ್ರು, ಸಮಿತಿಯ ಸರಸ್ವತಿಪುರಂನ ಮಂಜುನಾಥ್,…
ಬೆಂಗಳೂರು: ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯತೆ ಇದೆ. ಜೊತೆಗೆ ಕೌಶಲ್ಯಯುಕ್ತ ಸಿಬ್ಬಂದಿಯೂ ಲಭ್ಯವಿದ್ದಾರೆ ಎಂದು ವಿವರಿಸಿದರು. ಫಾಕ್ಸ್ ಕಾನ್ ಸಂಸ್ಥೆಯು ತನ್ನ ಉದ್ಯಮ ಸ್ಥಾಪಿಸಲು ರಾಜ್ಯ ಸರ್ಕಾರವು ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ಫಾಕ್ಸ್ ಕಾನ್ ಕಂಪನಿಯ ಅಂಗಸಂಸ್ಥೆ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ನೆಟ್ (ಎಫ್ಐಟಿ) ಇದಕ್ಕಾಗಿ 8,800 ಕೋಟಿ ರೂ. ಹೂಡಿಕೆ ಮಾಡುವ ಯೋಜನೆ ಹೊಂದಿದೆ. ಇದು 14,000 ಉದ್ಯೋಗ ಸೃಷ್ಟಿಸಲಿದ್ದು ಘಟಕ…
ತುಮಕೂರು ವಿಶೇಷ ವರದಿ: ಪಡಿತರ ಅಂಗಡಿಗಳಲ್ಲಿ ನೀಡಲಾಗುತ್ತಿರುವ ಸಾರಾಯುಕ್ತ ಅಕ್ಕಿಯನ್ನು ಮಾಹಿತಿಯ ಕೊರತೆಯಿಂದಾಗಿ ಸಾರ್ವಜನಿಕರು ಬೇರ್ಪಡಿಸಿ ಉಪಯೋಗಿಸುತ್ತಿರುವ ಘಟನೆ ನಡೆದಿದೆ. ಪಡಿತರ ಅಂಗಡಿಯಲ್ಲಿ ಪಡೆದ ಅಕ್ಕಿಯಲ್ಲಿನ ಸಾರಯುಕ್ತ ಅಕ್ಕಿಯನ್ನು ಬೇರ್ಪಡಿಸಿ ಸಾರ್ವಜನಿಕರು ಉಪಯೋಗಿಸುತ್ತಿದ್ದಾರೆ. ಇದು ಪ್ಲಾಸ್ಟಿಕ್ ಅಕ್ಕಿ ಎಂಬ ಅನುಮಾನ ಸಾರ್ವಜನಿಕರಿಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡಬೇಕಿತ್ತು. ಆದ್ರೆ ಅಧಿಕಾರಿಗಳು ಈ ಬಗ್ಗೆ ತುಟಿ ತೆರೆಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಪ್ಪು ತಿಳುವಳಿಕೆಯನ್ನೇ ಸತ್ಯ ಎಂದು ನಂಬುವಂತಾಗಿದೆ. ಅಧಿಕಾರಿಗಳು ಈ ಅಕ್ಕಿಯ ವಿಚಾರದಲ್ಲಿ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು. ಇನ್ನೂ ಕೂಡ ಸರಿಯಾದ ಮಾಹಿತಿ ನೀಡಲು ಮುಂದಾಗದಿದ್ದರೆ, ವಾಟ್ಸಾಪ್, ಫೇಸ್ ಬುಕ್ ಗಳಲ್ಲಿ ಹರಿದಾಡುತ್ತಿರುವ ವದಂತಿಗಳನ್ನೇ ಜನರು ಸತ್ಯ ಎಂದು ನಂಬುವಂತಾಗುತ್ತದೆ ಎನ್ನುವ ಮಾತುಗಳು ಕೇಳಿ ಬಂದಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಟ್ರಾನ್ಸಫರ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದನ್ನು ತಾವು ಲಂಚ ಪಡೆದಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ಬೇರೆ ಸಚಿವರು ಲಂಚ ಪಡೆಯುತ್ತಿರುವದರ ಬಗ್ಗೆ ಹೇಳಿ ಜಾರಿಕೊಳ್ಳುತ್ತಿದ್ದಾರೆ ಎಂದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಶ್ಯಾಡೊ ಸಿಎಂ ವಿಚಾರದ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಹಲವು ವಿಚಾರ ಎತ್ತಿದ್ದೇವೆ. ಸಿಎಂ ಆಫೀಸ್ ನಿಂದ ಹಿಡಿದು ಎಲ್ಲಾ ಕಡೆಗೂ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಟ್ರಾನ್ಸ್ ಫರ್ ನಲ್ಲಿ ನಾನು ಯಾವುದಕ್ಕೂ ಹಣ ತಗೊಂಡಿಲ್ಲಾ ಅಂತ ಸಿಎಂ ಹೇಳ್ತಾರೆ. ಸಿಎಂ ಸ್ವಂತಕ್ಕೆ ಹಣ ತಗೊಂಡಿಲ್ಲಾ ಅಂತಾ ಜಾರಿಕೊಳ್ಳುತ್ತಿದ್ದಾರೆ. ಇಡೀ ಅವರ ಸರ್ಕಾರ ಮಂತ್ರಿಮಂಡಳದ ಸದಸ್ಯರು, ಭಂಟರು ಲಂಚ ತೆಗೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಅಧಿಕಾರಗಳ ವಲಯದಲ್ಲಿ ಬಹಳ ದೊಡ್ಡ ಚರ್ಚೆ ಆಗುತ್ತಿದೆ. ಅದನ್ನು ಮುಚ್ಚಿ ಹಾಕುವ ಸಲುವಾಗಿ ನಾನು ಲಂಚ ತೆಗೆದುಕೊಂಡಿಲ್ಲಾ. ಲಂಚ ತೆಗೆದುಕೊಂಡಿದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಅಂತ ಹೇಳುತ್ತಿದ್ದಾರೆ. ಅಂದರೆ ಅದರ ಅರ್ಥ ಸರ್ಕಾರದಲ್ಲಿ ಬೇರೆಯವರು ತಗೊಂಡ್ರೆ ಮುಖ್ಯಮಂತ್ರಿಗಳ ಜವಾಬ್ದಾರಿ…
ಐಸಿಐಸಿಐ ಬ್ಯಾಂಕ್ ಎಟಿಎಂ ಘಟಕದ ಯಂತ್ರಗಳಿಗೆ ತುಂಬಬೇಕಿದ್ದ 24. 17 ಲಕ್ಷ ಸಮೇತ ಪರಾರಿಯಾಗಿದ್ದ ಕಸ್ಟೋಡಿಯನ್ ಸೇರಿ ಐವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಕ್ಯಾಶ್ ಮ್ಯಾನೇಜ್‌ಮೆಂಟ್ ಆ್ಯಂಡ್ ಪೇಮೆಂಟ್ ಸಲ್ಯೂಷನ್ಸ್ (ಸಿ. ಎಂ. ಎಸ್) ಕಂಪನಿ ವ್ಯವಸ್ಥಾಪಕ ಸಿದ್ದರಾಜು ಕಳ್ಳತನ ಸಂಬಂಧ ದೂರು ನೀಡಿದ್ದರು. ಬಂಧಿತರಿಂದ ಸುಮಾರು 121 ಲಕ್ಷ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಮಾಜಿ ಉದ್ಯೋಗಿಯ ಸಂಚು ‘ಸಿ. ಎಂ. ಎಸ್ ಕಂಪನಿಯಲ್ಲಿದ್ದ ಪ್ರಮುಖ ಆರೋಪಿ, ಕೆಲ ತಿಂಗಳ ಹಿಂದೆಯಷ್ಟೇ ಕೆಲಸ ಬಿಟ್ಟಿದ್ದ. ಎಟಿಎಂ ಘಟಕಗಳಿಗೆ ಹಣ ತುಂಬುವ ವಿಷಯ ಆತನಿಗೆ ಗೊತ್ತಿತ್ತು. ಕಡಿಮೆ ಸಮಯದಲ್ಲಿ ಹೆಚ್ಚು ಹಣ ಸಂಪಾದಿಸಬೇಕೆಂದು ತೀರ್ಮಾಸಿದ್ದ ಈತ, ಹಾಲಿ ಉದ್ಯೋಗಿಗಳ ಜೊತೆ ಸೇರಿ ಸಂಚು ರೂಪಿಸಿ ಕೃತ್ಯ ಎಸಗಿದ್ದ’ ಎಂದು ಅಧಿಕಾರಿ ತಿಳಿಸಿದರು. ‘ವಿವಿಧ ಬ್ಯಾಂಕ್ ಗಳ ಎಟಿಎಂ ಘಟಕಗಳಿಗೆ ಹಣ ತುಂಬುವ ಜವಾಬ್ದಾರಿಯನ್ನು ಸಿ. ಎಂ. ಎಸ್ ಕಂಪನಿ ವಹಿಸಿಕೊಂಡಿದೆ. ಕಸ್ಟೋಡಿಯನ್ ಹಾಗೂ ಇತರರು,…
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು (ಕೆಎಸ್‌ಸಿಎಸ್‌ಟಿ) 2022 ಮತ್ತು 2023ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗೆ, ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಂದ ಅರ್ಜಿ ಆಹ್ವಾನಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಇಬ್ಬರು ಸಾಧಕರಿಗೆ ನೀಡುವ ‘ಸರ್. ಎಂ. ವಿಶ್ವೇಶ್ವರಯ್ಯ ಹಿರಿಯ ವಿಜ್ಞಾನಿ ಪ್ರಶಸ್ತಿ’ಯು ತಲಾ 12 ಲಕ್ಷ ನಗದು, ನೆನಪಿನ ಕಾಣಿಕೆ ಒಳಗೊಂಡಿದೆ. ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 71. 50 ಲಕ್ಷ ನಗದು ಒಳಗೊಂಡಿರುವ ‘ರಾಜಾ ರಾಮಣ್ಣ ಪ್ರಶಸ್ತಿ’ಯನ್ನು ಇಬ್ಬರಿಗೆ ನೀಡಲಾಗುತ್ತದೆ. ಐದು ವಿಜ್ಞಾನಿಗಳಿಗೆ ‘ಸರ್. ಸಿ. ವಿ. ರಾಮನ್ ವಿಜ್ಞಾನಿ ಪ್ರಶಸ್ತಿ’, ನಾಲ್ಕು ಎಂಜಿನಿಯರ್ ಗಳಿಗೆ ‘ಸತೀಶ್ ಧವನ್ ಎಂಜಿನಿಯರ್ ಪ್ರಶಸ್ತಿ’, ಇಬ್ಬರು ಮಹಿಳಾ ಸಾಧಕರಿಗೆ ‘ಕಲ್ಪನಾ ಚಾವ್ಹಾ ಮಹಿಳಾ ವಿಜ್ಞಾನಿ-ಎಂಜಿನಿಯರ್ ಪ್ರಶಸ್ತಿ’ ನೀಡಲಾಗುತ್ತದೆ. ಈ ಮೂರು ಪ್ರಶಸ್ತಿಗಳು ತಲಾ 1 ಲಕ್ಷ ನಗದು, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿಪತ್ರ ಒಳಗೊಂಡಿವೆ. ಅರ್ಜಿ ಸಲ್ಲಿಕೆಗೆ ಆ. 21 ಕೊನೆ ದಿನ. ಕಾರ್ಯದರ್ಶಿಗಳು,…
ಇದೇ 17 ಮತ್ತು 18ರಂದು ಬೆಂಗಳೂರಿನಲ್ಲಿ ನಡೆಯಲಿರುವ ಯುಪಿಎ ವಿಪಕ್ಷಗಳ ಸಭೆಗೆ ಆಗಮಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕರುಗಳನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸ್ವಾಗತಿಸಿದ್ದಾರೆ. ಕೇಂದ್ರ ಸರ್ಕಾರ ಜನಪ್ರಿಯ ಅರವಿಂದ್ ಕೇಜ್ರಿವಾಲ್ ರವರ ದೆಹಲಿ ಸರ್ಕಾರದ ವಿರುದ್ಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ರಾಜ್ಯಸಭೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಬೆಂಬಲಿಸಿರುವ ನಡೆ ಉತ್ತಮವಾದದ್ದು. ಬಿ ಜೆ ಪಿ ಯ ನಿರಂಕುಶ ಪ್ರಭುತ್ವವನ್ನು ರಾಷ್ಟ್ರದಿಂದ ಹೊಡೆದೋಡಿಸುವ ನಿಟ್ಟಿನಲ್ಲಿ ರಾಷ್ಟ್ರದ ವಿಪಕ್ಷಗಳೆಲ್ಲ ಒಂದುಗೂಡಿ ನಡೆಸುತ್ತಿರುವ ಹೋರಾಟಕ್ಕೆ, ಆಮ್ ಆದ್ಮಿ ಪಕ್ಷ ಸದಾ ಕೈ ಜೋಡಿಸುತ್ತದೆ ಎಂದು ಮುಖ್ಯಮಂತ್ರಿ ಚಂದ್ರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು. ‘ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸಭೆಯು ಈ ರಾಷ್ಟ್ರದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಂದಾಗಿ ಹೋರಾಟ ಮಾಡಿ ಮೋದಿ ಪ್ರಭುತ್ವವನ್ನು ರಾಷ್ಟ್ರದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಯಶಸ್ವಿಯಾಗಲಿದೆ ‘ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…