Author: admin

ವೋಟರ್‌ ಐಡಿ ಮತ್ತು ಆಧಾರ್‌ ಜೋಡಿಸುವುದಕ್ಕೆ ಇದ್ದ ಅಂತಿಮ ಗಡುವನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದರಂತೆ, ಈ ವರ್ಷ ಏಪ್ರಿಲ್‌ 1ಕ್ಕೆ ಇದ್ದ ಕೊನೇ ದಿನ 2024ರ ಮಾರ್ಚ್‌ 31ರ ತನಕ ವಿಸ್ತರಣೆ ಆಗಿದೆ. ಮತದಾರರು ಈ ಅವಧಿಯನ್ನು ಸದುಪಯೋಗ ಮಾಡಿಕೊಂಡು ತಮ್ಮ ಮತದಾರರ ಚೀಟಿ ಮತ್ತು ಆಧಾರ್‌ ಜೋಡಿಸುವ ಕೆಲಸವನ್ನು ಮಾಡಬೇಕು ಎಂದು ಸರ್ಕಾರ ಕೇಳಿಕೊಂಡಿದೆ. ಬಳಕೆದಾರರು ತಮ್ಮ ಆಧಾರ್‌ ಜತೆಗೆ ವೋಟರ್‌ ಐಡಿ ಜೋಡಿಸುವ ಕೆಲಸವನ್ನು ಆನ್‌ಲೈನ್‌ ಮೂಲಕ ಅಥವಾ ಎಸ್‌ಎಂಎಸ್‌ ಮೂಲಕ 2024ರ ಮಾರ್ಚ್‌ 31ರ ಒಳಗೆ ಪೂರ್ಣಗೊಳಿಸಬೇಕು. ಆಧಾರ್‌ ಜತೆಗೆ ವೋಟರ್‌ ಐಡಿ ಜೋಡಿಸುವ ಕೆಲಸ ಕಡ್ಡಾಯ ಅಲ್ಲದೇ ಹೋದರೂ, ಒಂದಕ್ಕಿಂತ ಹೆಚ್ಚು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಇದ್ದರೆ ಅದನ್ನು ರದ್ದುಗೊಳಿಸುವುದಕ್ಕೆ ಇದು ನೆರವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಬೀದರ್ ಜಿಲ್ಲೆಯ ಔರಾದ ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನರು ಪರದಾಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ತಕ್ಷಣವೇ ಬಗೆ ಹರಿಸುವಂತೆ ಸುಧಾಕರ್ ಕೊಳ್ಳುರ ಆಗ್ರಹಿಸಿದರು. ಇಂದು ಗ್ರಾಮಕ್ಕೆ ಭೇಟಿ ನೀಡಿದ ಸುಧಾಕರ್ ಅವರು, ಗ್ರಾಮದ ನೀರಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಬಳಿ ದೂರವಾಣಿ ಮೂಲಕ ಮಾತನಾಡಿ, ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದರು. ಗ್ರಾಮದಲ್ಲಿ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಈ ಕಡೆಗೆ ಗಮನ ನೀಡುತ್ತಿಲ್ಲ ಎಂದು ಸುಧಾಕರ್ ಕೊಳ್ಳುರ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಂಕು ನಿಷ್ಪತೆ, ಹರಿದೇವ ಸಂಗನಾಳ, ಇಬ್ರಾಹಿಂ, ನಬಿ ಮುಲ್ಲಾ, ಸೈಯದ್ ಇಸ್ಮೈಲ್, ರಂಜಿತ್, ಶಾಮ, ಸಂಜು ಕಂಬಳೆ ಮತ್ತಿತರರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಮುಂದಾಗಿರುವ ಬಾಬೂರಾವ್ ಚಿಂಚನಸೂರ್ ಅವರ ವಿರುದ್ದ ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಆರ್.ಅಶೋಕ್, ಚಿಂಚನಸೂರ್ ಗೆ ಅಧಿಕಾರದ ಮೇಲೆ ಆಸೆ. ಚಿಂಚನಸೂರ್ ಮಾತಿಗೆ ಯಾವುದೇ ಬೆಲೆ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ಬಿಜೆಪಿಗೆ ಬಂದಿದ್ದಾಗೆ ಹೇಳಿದ್ರು. ಎಂಎಲ್ ಸಿ ಆದರೂ ವಿಧಾನಸಭೆ ಟಿಕೆಟ್ ಕೇಳುತ್ತಿದ್ದಾರೆ. ಚಿಂಚನಸೂರ್ ಮಾತಿನ ಮೇಲೆ ನಿಲ್ಲಲ್ಲ ಎಂದು ವಾಗ್ದಾಳಿ ನಡೆಸಿದರು. ಚಾಮರಾಜನಗರದಿಂದ ಸಚಿವ ವಿ.ಸೋಮಣ್ಣ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್.ಅಶೋಕ್, ನಿನ್ನೆ ಸಂಜೆ ಸೋಮಣ್ಣ ಕರೆ ಮಾಡಿದ್ರು.ನಿಮ್ಮ ಜೊತೆ ಮಾತಾಡಬೇಕಂದರು ಚಾಮರಾಜನಗರಿಂದ ಸೋಮಣ್ಣ ಸ್ಪರ್ಧಿಸುವುದಾಗಿ ಹೇಳಿದರು. ಸೋಮಣ್ಣ ಬಿಜೆಪಿಯಲ್ಲಂದಲೇ ಸ್ಪರ್ಧಿಸುತ್ತಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುರುವೇಕೆರೆಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯು ಐತಿಹಾಸಿಕವಾಗಿ ಅಚ್ಚಳಿಯದೇ ಉಳಿಯುವಂತಹ ಕಾರ್ಯಕ್ರಮವಾಗಿದ್ದು, ತುರುವೇಕೆರೆ ಇತಿಹಾಸದಲ್ಲಿಯೇ ಯಾವ ಪಕ್ಷಗಳು ಮಾಡಿರದಂತಹ ಕಾರ್ಯಕ್ರಮವಾಗಿದೆ ಎಂದು ಶಾಸಕ ಮಸಾಲ ಜಯರಾಮ್ ಹೇಳಿದರು. ತಮ್ಮ ಫಾರ್ಮ್ ಹೌಸ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ. ಮಾಧುಸ್ವಾಮಿ, ಸಿ ಟಿ ರವಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಸಂಸದರಾದ ಜಿ.ಎಸ್ .ಬಸವರಾಜ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಡಿ.ಲಕ್ಷ್ಮೀನಾರಾಯಣ್ , ಮಾಜಿ ಸಂಸದರಾದ ಮುದ್ದಹನುಮೇಗೌಡ, ಆರ್ .ದೇವೇಗೌಡ , ವೈ.ಎ.ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರು ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತ ಎಲ್ಲರೂ ಸೇರಿ ಈ ಕಾರ್ಯಕ್ರಮವನ್ನು ಅತ್ಯಂತ ಅದ್ಭುತವಾಗಿ ಯಶಸ್ವಿಗೊಳಿಸಿದ್ದಾರೆ ಎಂದರು. ತಾಲೂಕಿನಲ್ಲಿ ಭಾರತೀಯ ಜನತಾ ಪಕ್ಷವು ಬಹಳ ಸದೃಢವಾಗಿದೆ. ಇಡೀ ಜಿಲ್ಲೆಯೇ ನಮ್ಮ ತಾಲೂಕನ್ನು ಒಮ್ಮೆ ತಿರುಗಿ ನೋಡುವಂತಾಗಿದೆ. ನನ್ನ ಆತ್ಮೀಯ ಎಲ್ಲಾ ಕಾರ್ಯಕರ್ತರುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಾರ್ವಜನಿಕರಿಗೂ ಸಹ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಕ್ಕಾಗಿ ಧನ್ಯವಾದಗಳು ಅರ್ಪಿಸುತ್ತೇನೆ…

Read More

ಸರ್ಕಾರ ಕಾರ್ಮಿಕ ಕಿಟ್ ನೀಡುವ ಮೂಲಕ ಕಟ್ಟಡ ಕಾರ್ಮಿಕರ ನೆರವಿಗೆ ಧಾವಿಸಿದ್ದು, ನೋಂದಣಿಗೊಂಡ ಕಟ್ಟಡ ಕಾರ್ಮಿಕರು ಕಿಟ್ ನ್ನು ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಸೂರ್ಯಕಾಂತ ಸಾದುರೆ ತಿಳಿಸಿದರು. ಬೀದರ್ ಜಿಲ್ಲೆಯ ಮಂಗಲಪೇಟ ಹತ್ತಿರದ ಇಡೇನ್ ಕಾಲೋನಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಸಂಘಟನೆಯ ವತಿಯಿಂದ ಕಾರ್ಮಿಕ ಕಿಟ್ ವಿತರಿಸಿ ಅವರು ಮಾತನಾಡಿದರು. ಈ ವೇಳೆ ಕಾರ್ಮಿಕ ಸಂಘಟನೆಯ ಗೌರವ ಅಧ್ಯಕ್ಷ ಪಂಡರಿ ಪೂಜಾರಿ, ಕಾರ್ಮಿಕ ಅಧ್ಯಕ್ಷ ಸೂರ್ಯಕಾಂತ ಸಾದುರೆ, ಉಪಾಧ್ಯಕ್ಷರಾದ ಯೇಸುದಾಸ್ ಬೆಳ್ಳೋರ, ಅನಿಲಕುಮಾರ ಗಂಜ್ಕರ್, ತುಕಾರಾಮ ಗೌರೆ, ಸಂತೋಷ ಸಿಂಧೆ, ಪ್ರಬುರಾವ್ ಬಾಚೆಪಳ್ಳಿ, ಶಿವರಾಜ ಜಮಸ್ತಾನ ಪುರ, ಪ್ರಕಾಶ ಚಿಕಪೇಟ ಕರ್ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಇತ್ತೀಚೆಗೆ ನಿಧನರಾದ ಚಾಮರಾಜನಗರ ಲೋಕಸಭಾ ಮಾಜಿ ಸಂಸದರಾದ ಆರ್. ಧ್ರುವನಾರಾಯಣ ಅವರಿಗೆ ಹನ್ನೊಂದನೇ ದಿನದ ಪ್ರಯುಕ್ತ ಹೆಚ್.ಡಿ.ಕೋಟೆಯ ಹೆಚ್.ಮಟಕೆರೆಗ್ರಾಮದ ಅಭಿಮಾನಿಗಳು ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಧ್ರುವನಾರಾಯಣರವರ ಅಭಿಮಾನಿ, ಗ್ರಾಮದ ಮುಖಂಡ ಶಿವರಾಜು, ಆರ್. ಧ್ರುವನಾರಾಯಣ ಅವರು, ಇಡೀ ರಾಜ್ಯದ ರಾಜಕಾರಣಿಗಳಿಗೆ ಮಾದರಿ ಸಂಸದರು. ಅಭಿವೃದ್ಧಿ ಕೆಲಸಗಳಿಂದ ಅವರು ಎಲ್ಲರ ಮನಸ್ಸನ್ನು ಗೆದ್ದ ಧ್ರುವತಾರೆಯಾಗಿದ್ದಾರೆ. ಇಂದು ಅವರನ್ನ ಕಳೆದು ಕೊಂಡು ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಯಜಮಾನ ಮಹದೇವಯ್ಯ, ಗ್ರಾಮಪಂಚಾಯಿತಿ ಸದಸ್ಯರಾದ ವೆಂಕಟೇಶ, ವಸಂತ ಬಸಪ್ಪ, ಮುಖಂಡರಾದ ಗೋಪಾಲಸ್ವಾಮಿ, ಜಯಪಾಲ, ಕೃಷ್ಣಮಟಕೆರೆ, ಶಿವರಾಜು, ಶಿವಣ್ಣ, ಶಂಕರಯ್ಯ ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೋದಿಯವರು ಕಳೆದ ಎಂಟು ವರ್ಷಗಳ ಆಡಳಿತ ಅವಧಿಯಲ್ಲಿ ಒಂದು ದಿನವೂ ವಿಶ್ರಾಂತಿ ತೆಗೆದುಕೊಳ್ಳದೆ ,ಕೆಲಸ ಮಾಡುತ್ತಿದ್ದಾರೆ, ಅವರ ಕೈಯನ್ನು ನಾವು ಬಲಪಡಿಸಬೇಕಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ತುರುವೇಕೆರೆ ಪಟ್ಟಣಕ್ಕೆ ಭಾರತೀಯ ಜನತಾ ಪಾರ್ಟಿಯ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ನಾನು 50 ಕಾರ್ಯಕ್ರಮವನ್ನು ಮುಗಿಸಿ ಕಡೆ ಕಾರ್ಯಕ್ರಮ ನಿಮ್ಮ ತಾಲೂಕಿಗೆ ಬಂದಿದ್ದೇನೆ, ನೀವು ನನಗೆ ಅದ್ದೂರಿ ಸ್ವಾಗತ ಮಾಡಿ ಪ್ರೀತಿಯನ್ನು ತೋರಿಸಿದ್ದೀರಿ, ಇದಕ್ಕೆ ನಾನು ಯಾವಾಗಲೂ ಚಿರಋಣಿಯಾಗಿರುತ್ತೇನೆ. ಜೊತೆಗೆ ಮಸಾಲ ಜೈರಾಮ್ ಅವರನ್ನು 20,000 ಮತಗಳ ಅಂತರದಿಂದ ಗೆಲ್ಲಿಸುತ್ತೀರಿ ಎಂದು ನಾನು ಭಾವಿಸಿದ್ದೇನೆ ಎಂದರು. ಮೋದಿಯವರು ಕಳೆದ ಎಂಟು ವರ್ಷಗಳ ಆಡಳಿತ ಅವಧಿಯಲ್ಲಿ ಒಂದು ದಿನವೂ ವಿಶ್ರಾಂತಿ ತೆಗೆದುಕೊಳ್ಳದೆ, ಕೆಲಸ ಮಾಡುತ್ತಿದ್ದಾರೆ. ಅವರ ಕೈಯನ್ನು ನಾವು ಬಲಪಡಿಸಬೇಕಾಗಿದೆ. ಇನ್ನು ಎರಡು ತಿಂಗಳುಗಳಲ್ಲಿ ಚುನಾವಣೆ ವೇಳೆ ನೀವೆಲ್ಲ ಮಸಾಲ ಜಯರಾಮ್ ಪರ ನಿಂತು ಅವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುತ್ತೇವೆಂದು ನಾನು ಭಾವಿಸಿದ್ದೇನೆ ಎಂದರು. ತಾಲೂಕಿನಲ್ಲಿ…

Read More

ಉತ್ತರ ಕರ್ನಾಟಕ ಅಭಿವೃದ್ದಿಗೆ ಕಿತ್ತೂರು ಕರ್ನಾಟಕ ಮಂಡಳಿ ರಚನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಜಯಪುರ ಜಿಲ್ಲೆ ಮುದ್ದೆಬಿಹಾಳ ತಾಲ್ಲೂಕಿನ ನಾಲತವಾಡದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ. ಮೋಸ ಮಾಡೋದು ಸುಳ್ಳು ಆಶ್ವಾಸನೆ ನೀಡೋದು ಗ್ಯಾರಂಟಿ ಅಲ್ಲ. ಕಾಂಗ್ರೆಸ್ ನ ಗ್ಯಾರಂಟಿ ನಂಬೋಕೆ ಇದು ಛತ್ತೀಸ್ ಘಡ, ರಾಜಸ್ತಾನ ಅಲ್ಲ. ಇದು ಕರ್ನಾಟಕ. ಕರ್ನಾಟಕದ ಜನತೆ ಬಹಳ ಜಾಣರಿದ್ದಾರೆ ಎಂದರು. ಕೃಷ್ಣೇಯ ಮೇಲೆ ಅಣೆ ಮಾಡಿ ಅಧಿಕಾರಕ್ಕೆ ಬಂದರು. ಕೃಷ್ಣಾ ಯೋಜನೆಗೆ ವರ್ಷಕ್ಕೆ 10 ಸಾವಿರ ಕೋಟಿ ಕೊಡ್ತೇವೆ ಅಂದರು. ಈಗ ನೀವು ಕೊಟ್ಟಿರೋದು 6 ಸಾವಿರ ಕೋಟಿ ರೂ. ಮಾತ್ರ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಗೆ ಸಿಎಂ ಬೊಮ್ಮಾಯಿ ಪರೋಕ್ಷ ಟಾಂಗ್ ನೀಡಿದರು. ಮುದ್ದೆ ಬಿಹಾಳ ಮಾದರಿಯಲ್ಲೆ ಎಲ್ಲಾ ಕ್ಷೇತ್ರಗಳ ಅಭಿವೃದ್ದಿ ಮಾಡಲಾಗುತ್ತದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ…

Read More

ಹಿಂದೂ ವಿರೋಧಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ನಟ ಚೇತನ್ ಅವರ ವಿರುದ್ಧ ಹಿಂದೂಪರ ಸಂಘಟನೆಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದವು. ಕೇಸ್ ದಾಖಲಿಸಿಕೊಂಡಿದ್ದ ಶೇಷಾದ್ರಿಪುರಂ ಠಾಣಾ ಪೊಲೀಸರು ನಟ ಚೇತನ್ ರನ್ನ ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಇದೀಗ ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 32ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಇನ್ನು ನಟ ಚೇತನ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಈ ಬಾರಿ ಮಾರ್ಚ್​​ 29ರಿಂದ ಕರಗ ಉತ್ಸವ ಆರಂಭವಾಗಿ, ಏಪ್ರಿಲ್​ 8ರವರೆಗೆ ನಡೆಯಲಿದ್ದು, ಏಪ್ರಿಲ್ 6 ರಂದು ಬೆಂಗಳೂರು ಕರಗ ಶಕ್ತ್ಯೋತ್ಸವ ಚೈತ್ರ ಪೂರ್ಣಿಮೆ ನಡೆಯಲಿದೆ. 11 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದ್ದು, ಈ ಬಾರಿಯು ಕರಗವನ್ನು ಅರ್ಚಕ ವಿ. ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಪೂಜಾರಿ ಜ್ಞಾನೇಂದ್ರ ಅವರು ಕಳೆದ 12 ವರ್ಷಗಳಿಂದ ಕರಗ ಹೊರುತ್ತಿದ್ದಾರೆ. ಕರಗ ರಾತ್ರಿ 12 ಗಂಟೆಗೆ ನಗರ ಪ್ರದಕ್ಷಿಣೆಗೆ ಹೊರಡಲಿದೆ. ಮಾರ್ಚ್​. 29ರಂದು ಧ್ವಜಾರೋಹಣ ನಡೆಯುತ್ತದೆ. ನಂತರ ಏಪ್ರಿಲ್​ 8ರವರಗೆ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಏಪ್ರಿಲ್​​ 3 ರಂದು ಆರತಿ, ಏಪ್ರಿಲ್​​ 4 ರಂದು ಹಸಿಕರಗ, ಏಪ್ರಿಲ್​ 5 ರಂದು ಪೊಂಗಲ್​, ಮರುದಿನ 6 ರಂದು ಕರಗ ಉತ್ಸವ ನಡೆಯಲಿದೆ. ಇನ್ನು ವೀರಕುಮಾರರು, ತಿಗಳ ಸಮುದಾಯದ ಕೆಲ ಭಕ್ತರು ಕರಗ ನಡೆಯುವ 11 ದಿನಗಳ ಕಾಲ ಉಪವಾಸ ಇರುತ್ತಾರೆ.…

Read More