Subscribe to Updates
Get the latest creative news from FooBar about art, design and business.
- ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
- ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
- ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
- ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
- ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
- ಎಸ್ ಐಆರ್ ಲೋಪ: ಬಿಜೆಪಿ ಆಕ್ಷೇಪ, ಬಿಎಲ್ ಒಗಳಿಗೆ ಸೂಚನೆ ನೀಡಲು ಆಗ್ರಹ
- ಎಸ್ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ
- ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
Author: admin
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ನಡೆಯುತ್ತಿರುವ ಕೊಲೆಗಳು, ಸರ್ಕಾರದ ಪೋಷಿತ ಎಂಬ ಗಂಭೀರ ಆರೋಪವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಡಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನ್ನಾಡಿದ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಬೀಗುತ್ತಿದೆ. ಆದ್ರೆ ಕಾನೂನು ಸುವ್ಯವಸ್ಥೆ ಹಳ್ಳ ಹಿಡಿದಿದೆ. ರಾಜ್ಯದಲ್ಲಿ ನಡೆಯುತ್ತಿರುವ ಕೊಲೆಗಳೆಲ್ಲಾ ಕಾಂಗ್ರೆಸ್ ಸರ್ಕಾರದ ಪೋಷಿತವೇ ಹೊರತು, ಬೇರೇನೂ ಅಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ ನಾಯಕರನ್ನು ಕೇಳಿದ್ರೆ 136 ಸ್ಥಾನ ಬಂದಿದೆ ಎಂದು ಬೀಗುತ್ತಾರೆ. ಈ ಕೊಲೆಗಳಿಗೆಲ್ಲಾ ಮುಂದೆ ನೀವೇ ಉತ್ತರಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ರಾಜ್ಯಸಭಾ ಸದಸ್ಯರಾಗುವುದು ಬಹುತೇಕ ಖಚಿತ ಎಂಬ ಮಾಹಿತಿ ಹೊರಬಿದ್ದಿದೆ. ಈಗಾಗಲೇ ರಾಜ್ಯದಲ್ಲೂ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸಹ ಉಸ್ತುವಾರಿಯಾಗಿ ಕಾರ್ಯನಿರ್ವಹಣೆ ಮಾಡಿರುವ ಅನುಭವ ಹೊಂದಿರುವ ಅಣ್ಣಾಮಲೈ ಅವರನ್ನು ಈಗ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದ್ರೆ, ಅದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ಅನುಕೂಲವಾಗಲಿದೆ ಎಂಬ ಕಾರಣಕ್ಕೆ, ಅವರನ್ನೀಗ ರಾಜ್ಯಸಭೆಗೆ ಆಯ್ಕೆ ಮಾಡಲಾಗುವುದು ಎಂಬ ಮಾಹಿತಿ ಹೊರಬಿದ್ದಿದೆ. ಇನ್ನು ಮತ್ತೊಂದು ವಿಶೇಷ ಅಂದರೆ, ಅಣ್ಣಾಮಲೈ ರಾಜಸ್ಥಾನ ರಾಜ್ಯದಿಂದ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ಕೊರಟಗೆರೆ : ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಸೀಗಲೆಂದು ಪೋಷಕರು ಹಗಲುರಾತ್ರಿ ಎನ್ನದೇ ದುಡಿದು ಕಷ್ಟಪಡ್ತಾರೇ.. ಶಾಲಾ–ಕಾಲೇಜಿನಲ್ಲಿ ಶಿಕ್ಷಕರು ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಶ್ರಮಿಸ್ತಾರೇ. ಆದರೇ ಇಲ್ಲೊಂದು ವಸತಿ ಶಾಲೆಯಲ್ಲಿ ತಡರಾತ್ರಿ ವಿದ್ಯಾರ್ಥಿಯೇ ಗೇಟ್ ಹತ್ತಿ ಹೊರಗಡೆ ಹೋಗ್ತಾಳೇ.. ರಾತ್ರಿಯಿಡಿ ಹೊರಗಡೆ ಇದ್ದು ಮತ್ತೇ ಅದೇ ನಿಲಯಕ್ಕೆ ಯಾರ ಭಯವು ಇಲ್ಲದೇ ಮುಂಜಾನೇ ವಾಪಸ್ ಬರ್ತಾಳೇ.. ಹಾಗಾದ್ರೇ ಸಮಾಜ ಕಲ್ಯಾಣ ಇಲಾಖೆಯ ಪಾತ್ರವೇನು ಎಂಬುದೇ ಯಕ್ಷಪ್ರಶ್ನೆ..? ಕೊರಟಗೆರೆ ಪಟ್ಟಣದ ಹೃದಯ ಭಾಗದಲ್ಲಿನ ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ತಡರಾತ್ರಿ 11ಗಂಟೆ 21 ನಿಮಿಷಕ್ಕೆ ಇಂತಹದೊಂದು ಘಟನೆ ನಡೆದಿದೆ. ವಸತಿ ನಿಲಯದ ವಾರ್ಡನ್ ಶೃತಿ.ಜಿ ತಮ್ಮ ಕರ್ತವ್ಯ ಮುಗಿಸಿ 6ಗಂಟೆಗೆ ಮನೆಗೆ ಹೋದ ನಂತರ ಕಾವಲುಗಾರ ಇರುವ ವೇಳೆ ಲೋಪ ಉಂಟಾಗಿದೆ. ಖಾಸಗಿ ವ್ಯಕ್ತಿ ಚಿತ್ರಿಕರಣ ಮಾಡಿರುವ ವಿಡೀಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವಿದ್ಯಾರ್ಥಿನಿಗಾಗಿ ರಾತ್ರಿಯಿಡಿ ಹುಡುಕಾಟ.. ವಿದ್ಯಾರ್ಥಿ ನಿಲಯದಿಂದ ಎಸ್ಕೇಪ್ ಆದ ಕೇಲವೇ ಕ್ಷಣದಲ್ಲಿಯೇ…
ಬೆಂಗಳೂರು: ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡವ ರಾಷ್ಟ್ರೀಯ ಮಂಡಳಿಯ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಕೊಡಗರು ಎಂದು ನಮೂದಾಗಿರುವ ಕೊಡವ ಸಮುದಾಯದ ಹೆಸರನ್ನು ಕೊಡವ ಎಂದು ತಿದ್ದುಪಡಿ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಲು ಕೂಡ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕೊಡವ ರಾಷ್ಟ್ರೀಯ ಮಂಡಳಿ ಎನ್.ಯು ನಾಚಪ್ಪ ಅವರ ನೇತೃತ್ವದ 30 ಜನರ ನಿಯೋಗ ಹಾಗೂ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ, ಕೆ.ಟಿ.ಪೆಮ್ಮಯ್ಯ, ಉಪಾಧ್ಯಕ್ಷರಾದ ಕರ್ನಲ್ ವಿವೇಕ್ ಮುತ್ತಣ್ಣ, ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಕೊಪ್ಪಳ: ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಶಾಲೆಯೊಂದರ ಗೋಡೆಗಳ ಮೇಲೆ ಹುಡುಗಿಯರ ಬಗ್ಗೆ ಅಶ್ಲೀಲವಾದ ಬರಹಗಳನ್ನು ಬರೆದಿರುವ ಬಗ್ಗೆ ಶನಿವಾರ ಪೊಲೀಸರು ತಿಳಿಸಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಪ್ರಾಥಮಿಕ ಶಾಲೆಯ ಗೋಡೆಗಳ ಮೇಲೆ ಅವಾಚ್ಯ ಶಬ್ದಗಳು ಬರೆದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಗಂಗಾವತಿ ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಕೊಪ್ಪಳ ಎಸ್ಪಿ ಯಶೋದಾ ವಂಟಗೋಡಿ ಅವರು ತಿಳಿಸಿದ್ದಾರೆ. ಕೃತ್ಯದಲ್ಲಿ ಇಬ್ಬರು ಬಾಲಕರು ಭಾಗಿಯಾಗಿರುವ ಬಗ್ಗೆ ಮಾಹಿತಿ ಇದ್ದು, ಸುಮಾರು 15 ಬಾಲಕರನ್ನು ಈ ಬಗ್ಗೆ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಶಾಲಾ ಆವರಣದಲ್ಲಿ ಸಿಸಿ ಟಿವಿ ಅಳವಡಿಸಲು ನಿರ್ದೇಶನ ಮಾಡಲಾಗಿದೆ. ಇನ್ನೂ ಘಟನೆಯಲ್ಲಿ ಹೊರಗಿನವರ ಕೈವಾಡವನ್ನು ಪೊಲೀಸರು ತಳ್ಳಿ ಹಾಕಿದ್ದಾರೆ. ಈ ಘಟನೆ ಇದು ಮೊದಲಲ್ಲ ಹಿಂದೆಯೂ ನಡೆದಿದೆ. ವಿಶೇಷವಾಗಿ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಅಶ್ಲೀಲ ಬರಹ ಬರೆದಿದ್ದಾರೆ. ಇದರ ವಿರುದ್ಧ ಪೊಲೀಸರು ಕಠಿಣ ಕ್ರಮಕೈಗೊಳ್ಳಬೇಕು…
ಚಿಕ್ಕಮಗಳೂರು.ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಗೆ ತೋಟದಲ್ಲಿ ಮೇಯಲು ಕಟ್ಟಿದ್ದ ಹಸು ಸ್ಥಳದಲ್ಲೇ ಸಾವನ್ನಪ್ಪಿದೆ. ಮೂಡಿಗೆರೆ ತಾಲೂಕಿನ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದ ಬೋಬೇಗೌಡ ಅವರ ತೋಟದಲ್ಲಿ ಹಾಡುಹಗಲೇ ಕಾಡಾನೆ ದಾಳಿ ಮಾಡಿದೆ. ತೋಟದಲ್ಲಿದ್ದ ಬಾಳೆಗಿಡವನ್ನ ಸಂಪೂರ್ಣ ನಾಶ ಮಾಡಿದೆ. ಇನ್ನು ಅಡಿಕೆ ಹಾಗೂ ತೆಂಗಿನ ಮರಗಳನ್ನ ಬುಡಸಮೇತ ಕಿತ್ತು ಹಾಕಿದೆ. ತೋಟದಲ್ಲಿ ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೂ ಕಾಡಾನೆ ದಾಳಿ ಮಾಡಿದ್ದು ಹಸು ಕೂಡ ಸ್ಥಳದಲ್ಲೇ ಸಾವನ್ನಪ್ಪಿದೆ. ಆನೆ ಬಂದ ಕೂಡಲೇ ಹಸು ಓಡಿ ಹೋಗ್ತಿತ್ತು. ಆದರೆ, ತೋಟದ ಮಾಲೀಕ ಹಸುವನ್ನ ಕಟ್ಟಿಹಾಕಿದ್ದ ಪರಿಣಾಮ ಹಸು ಓಡಿಹೋಗಲು ಸಾಧ್ಯವಾಗಿಲ್ಲ. ಇದರಿಂದ ಹಸು ಕೂಡ ಸ್ಥಳದಲ್ಲೇ ಸಾವನ್ನಪ್ಪಿದೆ. ತೋಟದಲ್ಲಿ ಆನೆಯನ್ನ ಕಂಡ ಕೂಡಲೇ ತೋಟದ ಮಾಲೀಕ ಹಾಗೂ ಅಕ್ಕಪಕ್ಕದ ಸ್ಥಳಿಯರು ಕೂಗಾಡಿ ಆನೆಯನ್ನ ಓಡಿಸಿದ್ದಾರೆ. ಸ್ಥಳಕ್ಕೆ ಪಶುವೈದ್ಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ…
ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಕರೆತಂದ ಪ್ರಿಯಕರ ತನ್ನ ಸ್ನೇಹಿತರ ಜೊತೆ ಸೇರಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಅಸ್ಸಾಂ ಮೂಲದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರೇಮಿ ತನ್ನನ್ನು ವಿವಾಹವಾಗುವುದಾಗಿ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ತಾನು ಬೆಂಗಳೂರಿಗೆ ಬಂದಿದ್ದಾಗಿ ಆಕೆ ಹೇಳಿದ್ದಾಳೆ. ದೊಡ್ಡನಾಗಮಂಗಲದಲ್ಲಿನ ರೂಮ್ ನಲ್ಲಿ ಆರೋಪಿ ಈ ಕೃತ್ಯ ಎಸಗಿರುವುದಾಗಿ ಸಂತ್ರಸ್ತೆ ಹೇಳಿದ್ದು, ತನ್ನ ಮೇಲೆ ಅತ್ಯಾಚಾರವೆಸಗಲು ಇನ್ನೂ ನಾಲ್ವರು ವ್ಯಕ್ತಿಗಳನ್ನು ಕಳಿಸಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ನಟ ಸುದೀಪ್ ವಂಚಿಸಿದ್ದಾರೆ ಎಂದು ಆರೋಪ ಮಾಡಿದ್ದ ನಿರ್ಮಾಪಕರಾದ ಎನ್.ಎಂ. ಕುಮಾರ್ ಹಾಗೂ ಸುರೇಶ್ ವಿರುದ್ಧ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಕಿಚ್ಚ ಸುದೀಪ್ ಮೊಕದ್ದಮೆ ದಾಖಲಿಸಿದ್ದಾರೆ. ಜೆಎಂಎಫ್ಸಿ ಕೋರ್ಟ್ ಗೆ ಇಂದು ಖುದ್ದಾಗಿ ಆಗಮಿಸಿ ಕಿಚ್ಚ ಸುದೀಪ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಿದೆ. ಅರ್ಜಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘಗಳ ಮೇಲೆ ನನಗೆ ಗೌರವವಿದೆ. ಇನ್ನು ವೈಯಕ್ತಿಕ ಹಿತಾಸಕ್ತಿಗೆ ಅವುಗಳನ್ನು ಬಳಸಲಾರೆ. ಹೀಗಾಗಿ ನಾನು ನೇರವಾಗಿ ನ್ಯಾಯಾಲಯಕ್ಕೆ ಬಂದಿದ್ದೇನೆ. ನನ್ನ ವಿರುದ್ಧ ಯಾರೇ ಏನೇ ಆರೋಪ ಮಾಡಿದ್ದರು ನ್ಯಾಯಾಲಯದಿಂದ ಸರಿ ಉತ್ತರ ಸಿಗುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುರುವೇಕೆರೆ: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೂತನ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷ ನಾಗೇಂದ್ರ ತಿಳಿಸಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದೇವೆ ಎಂದ ಅವರು, ಪ್ರಧಾನ ಕಾರ್ಯದರ್ಶಿಯಾಗಿ ವಿಜಯಕುಮಾರ್ ಗೌರವಾಧ್ಯಕ್ಷರಾಗಿ ಬಸವರಾಜು ಅಬಕನಹಳ್ಳಿ ಉಪಾಧ್ಯಕ್ಷರಾಗಿ ಗಂಗಾಧರಯ್ಯ ಕಾರ್ಯದರ್ಶಿಯಾಗಿ ಗೋವಿಂದರಾಜು ಸಹಕಾರ್ಯದರ್ಶಿಯಾಗಿ ಆನಂದ್ ಕಾನೂನು ಸಲಹೆಗಾರರಾಗಿ ವಕೀಲ ಮಂಜುನಾಥ್ ಪತ್ರಿಕಾ ಪ್ರತಿನಿಧಿಯಾಗಿ ಸತ್ಯನಾರಾಯಣ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷರಾಗಿ ಕಲಂದರ್ ಹಾಗೂ ಸಂಘಟನಾ ಸಂಚಾಲಕರಾಗಿ ಶಂಕರಲಿಂಗಪ್ಪ ಲಕ್ಕಸಂದ್ರ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದರು. ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸರ್ಕಾರಕ್ಕೆ ಕೊಬ್ಬರಿ ಬೆಂಬಲ ಬೆಲೆ ವಿಚಾರದಲ್ಲಿ ಮನವಿ ಸಲ್ಲಿಸಲಾಗಿದೆ ರಾಜ್ಯ ಸರ್ಕಾರವು ನಿಗದಿ ಮಾಡಿರುವಂತ ಪ್ರೋತ್ಸಾಹ ಧನ 1,250ರೂಗಳು ಹೊಸ ಖರೀದಿಗೆ ಮಾತ್ರ ಅನ್ವಯಿಸುತ್ತದೆ ಎಂದು ತೀರ್ಮಾನ ಮಾಡಿರುವುದು ರೈತರಿಗೆ ಮಾಡಿರುವ ದೊಡ್ಡ ಮೋಸ ಇದನ್ನು…
ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ.ನಿ.ಇವರು ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರುರಾದ ಎನ್.ಚಲುವರಾಯಸ್ವಾಮಿಯವರು ಮತ್ತು ತಾಲ್ಲೂಕಿನ ಶಾಸಕರಾದ ಎಚ್.ಟಿ.ಮಂಜು ರವರು ಉದ್ಘಾಟನೆ ಮಾಡಿದರು. ಸಚಿವರಿಗೆ ಮತ್ತು ಶಾಸಕರಿಗೆ ಅಕ್ಕಿಹೆಬ್ಬಾಳು ಹೋಬಳಿಯ ಜನತೆ ಪಟಾಕಿ ಸಿಡಿಸಿ ವಾದ್ಯಮೇಳದೊಂದಿಗೆ ಅದ್ದೂರಿ ಸ್ವಾಗತ ಕೋರಿದ್ದರು. ಕಟ್ಟಡದ ಉದ್ಘಾಟನೆ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಆರ್.ನವೀನ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಶಾಸಕ ಎಚ್.ಟಿ.ಮಂಜು ರವರು ಜ್ಯೋತಿ ಬೆಳಗಿಸುವ ಮೂಲಕ ಸಚಿವ ಎನ್. ಚಲುವರಾಯಸ್ವಾಮಿಯವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಸಹಕಾರ ಸಂಘದ ಪದಾಧಿಕಾರಿಗಳು.ಹೋಬಳಿಯ ಸುತ್ತ ಮುತ್ತ ಸಾರ್ವಜನಿಕರುಉಪಸ್ಥಿತರಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…