Author: admin

ರಾಜ್ಯ ವಿಧಾನಸಭೆ ಸಮೀಪಿಸುತ್ತಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರುವ ಕನಸು ಕಟ್ಟಿಕೊಂಡಿರುವ ಬಿಜೆಪಿ ಮತದಾರರನ್ನ ಸೆಳೆಯಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ನಡುವೆ ಇದೀಗ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಮೋದಿ ಮುಖ ನೋಡಿ ಮತ ಹಾಕಿ ಇಲ್ಲದಿದ್ದರೆ ಭಿಕ್ಷೆ ಬೇಡಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ನಡೆದ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಚುನಾವಣೆ ದಿನ ಮೋದಿ ಮುಖ ನೋಡುವುದು, ಮತದಾನ ಮಾಡುವುದು ಅಷ್ಟೆ. ಮೋದಿಗೆ ಮತ ಹಾಕಿದರೆ ಸುರಕ್ಷಿತವಾಗಿ ಇರುತ್ತೀರಿ. ಇಲ್ಲದಿದ್ದರೆ ಪಾಕಿಸ್ತಾನ ದೇಶದಂತೆ ಎಲ್ಲರೂ ದಿವಾಳಿಯಾಗಬೇಕಾಗುತ್ತದೆ, ಭಿಕ್ಷೆ ಬೇಡಬೇಕಾಗುತ್ತೆ ಎಂದಿದ್ದಾರೆ. ಅಲ್ಲದೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಪಡೆದಿರುವುದು ನಮ್ಮ ಸುದೈವ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಜನರಿಗೆ ಕಾಂಗ್ರೆಸ್ ನೀಡುತ್ತಿರುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಬೋಗಸ್ ಕಾರ್ಡ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು. ಮಡಿಕೇರಿಯಲ್ಲಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಾಲೆಗೆ ತೆರಳುವ ಹೆಣ್ಣುಮಕ್ಕಳಿಗಾಗಿ ಉಚಿತ ಬಸ್ ಪಾಸ್ ಒದಗಿಸಲಾಗುತ್ತಿದೆ. 8 ಲಕ್ಷ ವಿದ್ಯಾರ್ಥಿನಿಯರಿಗೆ ಇದರಿಂದ‌ ಲಾಭವಾಗಿದೆ. ಸಾಮಾಜಿಕ‌ ನ್ಯಾಯ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ. ಹಾಗಾಗಿ ಜೇನು ಗೂಡಿಗೆ ಕೈ ಹಾಕುವ ಕೆಲಸ‌ಮಾಡಿದ್ದೇನೆ. ಬರೇ ಭಾಷಣದಲ್ಲಿ ಸಾಮಾಜಿಕ‌ನ್ಯಾಯ ಸಾಧ್ಯವಿಲ್ಲ. ಕೆಲವರನ್ನ ಕೆಲವು ಸಮಯ ಮೋಸ ಮಾಡಬಹುದು.‌ ಆದರೆ ಜನರನ್ನ ಎಲ್ಲಾ‌ ಸಮಯದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್​ಗೆ ಅಧಿಕಾರವಿದ್ದಾಗ ಯಾಕೆ ಸೌಲಭ್ಯ ನೀಡಲಿಲ್ಲ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಬೋಗಸ್ ಕಾರ್ಡ್ ಎಂದು ಲೇವಡಿ ಮಾಡಿದರು. ಯಡಿಯೂರಪ್ಪ ಅವರು ನಿಜವಾದ ಸಾಮಾಜಿಕ ನ್ಯಾಯ ಕೊಟ್ಟವರಾಗಿದ್ದಾರೆ. ಭಾಗ್ಯ ಲಕ್ಷ್ಮೀ ಯೋಜನೆ, ಕಾಗಿನೆಲೆ ಅಭಿವೃದ್ಧಿ, ತಾಂಡಾ ಅಭಿವೃದ್ಧಿ ನಿಗಮ ಮಾಡಿದ್ದು ಯಡಿಯೂರಪ್ಪನವರು ಎಂದು ಸಿಎಂ ಬೊಮ್ಮಾಯಿ ಯಡಿಯೂರಪ್ಪ ಅವರ ಸಾಧನೆಗಳನ್ನು ಗುಣಗಾನ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ…

Read More

ಕೋಲಾರದಿಂದ ಸಿದ‍್ಧರಾಮಯ್ಯ ಸ್ಪರ್ಧಿಸದಿದ್ದರೇ ನಾನು ರಾಜಕೀಯ ನಿವೃತ್ತಿ ಪಡೆಯುವೆ ಎಂದು ಕೋಲಾರ ಶಾಸಕ ಶ್ರೀನಿವಾಸ್ ಗೌಡ ಹೇಳಿಕೆ ನೀಡಿದ್ದಾರೆ. ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂಬ ವಿಚಾರ ಕುರಿತು ಮಾತನಾಡಿದ ಶಾಸಕ ಶ್ರೀನಿವಾಸ್ ಗೌಡ, ಸಿದ್ಧರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೇ ಕೆಲಸ ಮಾಡುವೆ ಎಂದು ತಿಳಿಸಿದ್ದಾರೆ. ಕೋಲಾರದಿಂದ 2ನೇ ಮುಖ್ಯಮಂತ್ರಿಯನ್ನು ರಾಜ್ಯಕ್ಕೆ ಕೊಡಬೇಕು ಎಂಬ ಆಸೆ ಇತ್ತು. ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನನ್ನು ಕರೆದು ಮಾತಾಡಿದ ಬಳಿಕ ಕ್ಷೇತ್ರ ಬಿಟ್ಟು ಕೊಟ್ಟಿದ್ದೇನೆ. ಈಗ ನನ್ನನ್ನು ಕೇಳದೆ ನಿರ್ಧಾರ ಕೈಗೊಂಡರೆ ಮಾತನಾಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಈಗ ನನ್ನನು ಏನೂ ಕೇಳದೆ ಈ ನಿರ್ಧಾರ ತೆಗೆದುಕೊಂಡರೆ ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದರು. ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಶಾಸಕ ಶ್ರೀನಿವಾಸಗೌಡ, ಈ ಬಾರಿ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರವನ್ನ ಸಿದ‍್ಧರಾಮಯ್ಯಗೆ ಬಿಟ್ಟುಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈ ಬಾರಿ ವಿಧಾನಸಭೆ ಚುನಾವಣೆಗೆ ಕೋಲಾದಿಂದ ಸ್ಪರ್ಧಿಸುವುದು…

Read More

ರಾಹುಲ್ ಗಾಂಧಿಗೆ ಉತ್ತರ ಪ್ರದೇಶ ಅಮೇಥಿಯಲ್ಲಿ ಸೋಲಿನ ಅನುಭವವಿದೆ. ಹೀಗಾಗಿ ಸಿದ್ಧರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸದಂತೆ ಸಲಹೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು. ವಿಜಯಪುರದಲ್ಲಿ ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉತ್ತರ ಪ್ರದೇಶ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುತ್ತಿದ್ದ ರಾಹುಲ್ ಗಾಂಧಿ ಸೋತಿದ್ದಾರೆ. ಈ ಅನುಭವದ ಆಧಾರದ ಮೇಲೆ ಸಿದ್ಧರಾಮಯ್ಯಗೆ ಕೋಲಾರದಿಂಧ ಸ್ಪರ್ಧೆ ಬೇಡ ಎಂದು ಸಲಹೆ ನೀಡಿದ್ದಾರೆ .ಕಾಂಗ್ರೆಸ್ ಅಷ್ಟರ ಮಟ್ಟಿಗೆ ಸೋತು ಸುಣ್ಣವಾಗಿದೆ  ಎಂದು ಟೀಕಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ರಾಜ್ಯದ ರಾಮನಗರ, ರಾಯಚೂರು, ವಿಜಯಪುರ, ಕಲಬುರಗಿ, ಬೀದರ್, ಮಂಡ್ಯ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇಂದು ಕೂಡ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ. ಹೌದು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಸಿಡಿಲಿಗೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಸೋನಾಳ ಗ್ರಾಮದಲ್ಲಿ ಸಿಡಿಲಿಗೆ ಲಹು ಮಾಧವರಾವ ಬೀರ್ಗೆ (36) ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮೆದಕಿನಾಳ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಬಿದ್ದು ಭೀರಪ್ಪ ಶಿವರಾಜ (2) ಸಾವನ್ನಪ್ಪಿದ್ದ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮಾರ್ಚ್ 20, 2023ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಚರಿಸಲಾಗುತ್ತಿದೆ. ಈ ದಿನದಂದು ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಸರ್ಕಾರಿ ನೌಕರರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಮಾ.20ರಂದು ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನ ವಿಧಾನ ಸೌಧದಲ್ಲಿರುವಂತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿ, ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣಪತ್ರವನ್ನು ಸಲ್ಲಿಸುವ ಷರತ್ತಿಗೆ ಒಳಪಟ್ಟು, ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಉರಿಗೌಡ, ನಂಜೇಗೌಡರ ವಿಚಾರಗಳು ಮುನ್ನೆಲೆಗೆ ಬಂದಿದ್ದು, ವಿಪಕ್ಷಗಳು ಇದನ್ನೇ ಅಸ್ತ್ರವಾಗಿಸಿಕೊಂಡು ಆಡಳಿತ ಪಕ್ಷದ ವಿರುದ್ಧ ಕೆಂಡಕಾರುತ್ತಿವೆ. ಇದೀಗ ಈ ಕುರಿತು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಉರಿಗೌಡ, ನಂಜೇಗೌಡ ಸ್ವಾಭಿಮಾನಿಗಳು, ಅವರು ಧರ್ಮಕ್ಕಾಗಿ ಹೋರಾಟ ಮಾಡಿದವರಾಗಿದ್ದಾರೆ. ನಮ್ಮ ದೇವಸ್ಥಾನ ಉಳಿಸುವುದಾಕ್ಕಾಗಿ ಹೋರಾಟ ಮಾಡಿದ್ದಾರೆ ಎಂದಿದ್ದಾರೆ . ಹಿಂದುಗಳ ಕ್ರೈಸ್ತ ನರಮೇಧ ಖಂಡಿಸಿ ಹೋರಾಡಿದ್ದಾರೆ. ಹೀಗೆ ಉರಿಗೌಡ ನಂಜೇಗೌಡರ ಬಗ್ಗೆ ಹೆಮ್ಮೆಯ ಇದೆ ಎಂದು ಕಾಂಗ್ರೆಸ್ ಜೆಡಿಎಸ್ ಆರೋಪಕ್ಕೆ ಶೋಭಾ ಕರದ್ಲಾಂಜೆ ತಿರುಗೇಟು ನೀಡಿದ್ದಾರೆ. ಟಿಪ್ಪು ಸುಲ್ತಾನ್ ಮಂಗಳೂರಿನಲ್ಲಿ ಕ್ರೈಸ್ತರ ಹಾಗೂ ಕೊಡವರ ನರಮೇಧವನ್ನು ಕೊಡಗಿನಲ್ಲಿ ಮಾಡಿದ್ದಾರೆ. ನಂದಿ ಬೆಟ್ಡದ ಮೇಲೆ ಹಿಂದುಗಳನ್ನು ಕೊಂದು ಹಾಕಿದ್ದಾರೆ. ಕನ್ನಡ ವಿರೋಧಿಯಾಗಿದ್ದವರ ವಿರುದ್ಧ ಸೆಟೆದು ನಿಂತವವರು ನಂಜೇಗೌಡ ಉರಿಗೌಡರು ಎಂದು ಜೆಡಿಎಸ್‌, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಕೆ.ಆರ್.ನಗರ: ತಾಲ್ಲೋಕಿನ ಸಿದ್ದಾಪುರ ಗ್ರಾಮದ ಪುಟ್ಟಸ್ವಾಮಪ್ಪ ಎಂಬುವವರ ಮಗ ಸುಮಾರು ನಲವತ್ತೇಳು ವರ್ಷದ ಅರವಿಂದ ಎಂಬುವವರು ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುವ ಸಂಧರ್ಭದಲ್ಲಿ ದಿನಾಂಕ ಮಾರ್ಚ್ ಎಂಟರಂದು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹುಣಸೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಅರವಿಂದರವರ ಬಳಗದ ಗೋಳು ಮುಗಿಲು ಮುಟ್ಟಿದೆ. ಹುಣಸೂರು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸ್ವ ಗ್ರಾಮ ಸಿದ್ದಪುರದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಮೃತರಿಗೆ ಎರಡೂ ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕೋಲಾರ ಬಿಟ್ಟು ವರುಣಾದಿಂದ ಸ್ಪರ್ಧಿಸುವಂತೆ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದು ಈ ಹಿನ್ನೆಲೆ ತಂದೆಗಾಗಿ ಕ್ಷೇತ್ರವನ್ನ ತ್ಯಾಗ ಮಾಡಲು ಶಾಸಕ ಯತೀಂದ್ರ ಸಿದ್ಧರಾಮಯ್ಯ ಮುಂದಾಗಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಅಪ್ಪ ವರುಣಾಗೆ ಬಂದ್ರೆ ನಾನು ಸ್ಪರ್ಧಿಸಲ್ಲ. ಸಿದ್ಧರಾಮಯ್ಯ ಅವರ ಪರ ಪ್ರಚಾರ ಮಾಡುತ್ತೇನೆ. ಸರ್ವೇಯಲ್ಲಿ ನೆಗೆಟಿವ್ ಫಲಿತಾಂಶ ಬಂದಿಲ್ಲ ನಾನು ಎರಡು ಬಾರಿ ಸರ್ವೇ ಮಾಡಿಸಿದ್ದೇನೆ. ಸರ್ವೇಯಲ್ಲಿ ತಂದೆ ಪರ ಫಲಿತಾಂಶ ಬಂದಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಸಾರಿಗೆ ನೌಕರರಿಗೆ ಶೇ. 15 ರಷ್ಟು ವೇತನಕ್ಕೆ ರಾಜ್ಯ ಸರ್ಕಾರ ಸಮ್ಮತಿ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆಯಲಾಗಿದೆ. ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 21ರಿಂದ ಸಾರಿಗೆ ನೌಕರರು ಮುಷ್ಕರ ನಡೆಸೋದಕ್ಕೆ ಕರೆ ನೀಡಿದ್ದರು. ಆದರೀಗ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ. 8 ಟ್ರೇಡ್ ಯೂನಿಯನ್ ಗಳು 20 % ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದರು. 15 % ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಅಲ್ಲದೇ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಗೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More