Author: admin

ಬೆಂಗಳೂರು ಹೊರವಲಯದಲ್ಲಿ ಚಡ್ಡಿ ಗ್ಯಾಂಗ್ ಮತ್ತೆ ಕಾಣಿಸಿಕೊಂಡಿದೆ. ಈ ಗ್ಯಾಂಗ್ ಕೈಯಲ್ಲಿ ಆಯುಧಗಳನ್ನು ಹಿಡಿದು ಸರ್ಜಾಪುರ ರಸ್ತೆ ಸುತ್ತಮುತ್ತ ಕಳ್ಳತನದ ಕೆಲಸಕ್ಕೆ ಇಳಿದಿದೆ. ಸದ್ಯ ಈ ಚಡ್ಡಿ ಗ್ಯಾಂಗ್ ನ ಐವರು ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸರ್ಜಾಪುರ ರಸ್ತೆಯ ಗುಟ್ಟಹಳ್ಳಿ, ದೊಡ್ಡ ತಿಮ್ಮಸಂದ್ರದ ವಿಲ್ಲಾಗಳಲ್ಲಿ ರಾತ್ರಿ ವೇಳೆ ಕಳ್ಳತನಕ್ಕೆ ಈ ಚಡ್ಡಿ ಗ್ಯಾಂಗ್ ಪ್ರಯತ್ನಿಸಿರುವುದು ಸಿಸಿ ಟಿವಿಯಿಂದ ಬಯಲಾಗಿದೆ. ಮುಖಕ್ಕೆ ಕರ್ಚೀಫ್ ಕಟ್ಟಿಕೊಂಡು ಕಳ್ಳತನಕ್ಕೆ ಇಳಿಯುತ್ತಿರುವ ಈ ಚಡ್ಡಿ ಗ್ಯಾಂಗ್ ಹರಿತವಾದ ಆಯುಧಗಳನ್ನು ಇಟ್ಟುಕೊಂಡು ಓಡಾಡುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಸರ್ಜಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯದಲ್ಲಿರುವ ಕ್ಲಬ್‌ಗಳ ಕಾರ್ಯವೈಖರಿ ಮತ್ತು ಚಟುವಟಿಕೆಗಳನ್ನು ಪರಿಶೀಲಿಸಲು ರಚಿಸಲಾಗಿರುವ ವಿಧಾನಪರಿಷತ್ತಿನ ವಿಶೇಷ ಸದನ ಸಮಿತಿಯು ‘ಬೆಂಗಳೂರು ಟರ್ಫ್ ಕ್ಲಬ್’ ಅನ್ನು ಶಾಶ್ವತವಾಗಿ ಸ್ಥಳಾಂತರಿಸುವಂತೆ ಶಿಫಾರಸು ಮಾಡಲು ಮುಂದಾಗಿದೆ. ಬಿಜೆಪಿಯ ಎನ್. ರವಿಕುಮಾರ್ ನೇತೃತ್ವದ ಸಮಿತಿಯು ಮುಂದಿನ ವಿಧಾನಮಂಡಲ ಅಧಿವೇಶನಕ್ಕೂ ಮೊದಲು ವರದಿ ಸಿದ್ಧಪಡಿಸಲು ತೀರ್ಮಾನಿಸಿದೆ. ಈ ಸಮಿತಿಯು ನಗರದ ಹೃದಯಭಾಗದಲ್ಲಿರುವ ಟರ್ಫ್ ಕ್ಲಬ್ ಅನ್ನು ನಗರದ ಹೊರವಲಯದಲ್ಲಿ ಚಿಕ್ಕಜಾಲ ಬಳಿ ಒದಗಿಸಿದ ಜಮೀನಿಗೆ ಸ್ಥಳಾಂತರಿಸುವಂತೆ ಶಿಫಾರಸು ಮಾಡಲು ನಿರ್ಧರಿಸಿದೆ. ವಿಧಾನ ಪರಿಷತ್ತಿನಲ್ಲಿ ಹಲವು ಸದಸ್ಯರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ರವಿಕುಮಾರ್, ‘ವರದಿ ಅಂತಿಮಗೊಳಿಸಲು ಇನ್ನೂ ಎರಡು ಸಭೆಗಳನ್ನು ನಡೆಸಬೇಕಿದೆ. ಮುಂದಿನ ಅಧಿವೇಶನದ ವೇಳೆಗೆ ವರದಿಯನ್ನು ಸದನಕ್ಕೆ ಸಲ್ಲಿಸಲಾಗುವುದು’ ಎಂದರು. ವಸ್ತ್ರಸಂಹಿತೆ ಮತ್ತು ಇತರ ನಿರ್ಬಂಧಗಳನ್ನು ವಿಧಿಸಿರುವ ಕ್ಲಬ್‌ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಮತ್ತು ಅಂತಹ ನಿರ್ಬಂಧಗಳನ್ನು ತೆಗೆದುಹಾಕುವ ಬಗ್ಗೆಯೂ ಸಮಿತಿ ಚರ್ಚೆ ನಡೆಸಿದೆ. ಇದೇ ವೇಳೆ ಕಾಂಗ್ರೆಸ್‌ನ ಯು. ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರ ಪ್ರಶ್ನೆಗೆ ಉತ್ತರಿಸಿದ ಉಪ…

Read More

ಚಿಕ್ಕೋಡಿ: ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಇಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿ ನೀಡಿ, ಭಕ್ತಾದಿಗಳಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಿಂದ ಆಘಾತವಾದ ಸಮಸ್ತ ಜೈನ ಸಮುದಾಯದ ಬಂಧುಗಳ, ಅಪಾರ ಸಂಖ್ಯೆಯ ಭಕ್ತರ ನೋವಿನಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ. ಆರೋಪಿಗಳಿಗೆ ಕಠಿಣ ಕ್ರಮ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈಗಾಗಲೇ ಗೃಹ ಸಚಿವರು ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಸರ್ಕಾರ ಈ ಬಗ್ಗೆ ಸಾಕಷ್ಟು ಗಮನ ಹರಿಸಿದೆ. ಪ್ರಕರಣ ಭೇದಿಸುವಲ್ಲಿ ಪೊಲೀಸರು ತತಕ್ಷಣವೇ ಯಶಸ್ವಿಯಾಗಿದ್ದಾರೆ. ಇಂತಹ ಅಹಿಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು. ಸ್ವಾಮೀಜಿಗಳ ಹತ್ಯೆಯನ್ನು ಎಲ್ಲ ಪಕ್ಷಗಳು ಖಂಡನೆ ಮಾಡಿವೆ.…

Read More

ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಬಿ ಖಾತೆನೀಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ಪ್ರಶೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಜಿ. ಡಿ ಹರೀಶ್‌ ಗೌಡ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹಿಂಖಾನ್ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಸಚಿವ ಸುರೇಶ್, ಬೆಂಗಳೂರಿನಲ್ಲಿ ಭೂ ಪರಿವರ್ತನೆಯಾದ ನಿವೇಶನ ಮತ್ತು ಕಟ್ಟಡಗಳಿಗೆ ಎ ಖಾತೆ, ಭೂ ಪರಿವರ್ತನೆಯಾಗದ ಸ್ವತ್ತುಗಳಿಗೆ ಬಿ ಖಾತೆ ನೀಡಲಾಗುತ್ತಿದೆ. ಅದೇ ರೀತಿ ರಾಜ್ಯದ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತೆಗೆ ಅವಕಾಶ ಕಲ್ಪಿಸಿದರೆ ಸರ್ಕಾರಕ್ಕೂ ಎರಡು ಸಾವಿರ ಕೋಟಿ ಆದಾಯ ಬರಲಿದೆ ಎಂದರು. ಸಂಬಂಧ ಪೌರಾಡಳಿತ ಸಚಿವರ ಜತೆ ಚರ್ಚಿಸಿ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಖಾತೆ ಬಿಕ್ಕಟ್ಟು ಬಹಳಷ್ಟು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇರುವುದರಿಂದ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಿದರೂ ಆದಾಯ ಬರುತ್ತಿಲ್ಲ ಎಂದು ಹೇಳಿದರು.…

Read More

ಹಾರ್ನ್ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ ಗಾಜು ಪುಡಿಪುಡಿ ಮಾಡಿ ಪುಂಡಾಟ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬರಿಗೆ ವರ್ತೂರು ಬಳಿ ಕಾರಿನಲ್ಲಿ ಹೋಗುವಾಗ ಘಟನೆ ನಡೆದಿದೆ. ಕಾರಿನಲ್ಲಿ ಹೋಗುತ್ತಿದ್ದಾಗ ಮುಂದುಗಡೆ ಅಡ್ಡಾದಿಡ್ಡಿಯಾಗಿ ಬೈಕ್ ಚಾಲನೆ ಮಾಡುತ್ತಿದ್ದ ಆರೋಪಿಗಳಿಗೆ ಕಾರು ಚಾಲಕ ದಾರಿ ಬಿಡುವಂತೆ ಹಾರ್ನ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ಕೆಲ ದೂರ ಹೋದ ಬಳಿಕ ಕಾರನ್ನು ಅಡ್ಡಗಟ್ಟಿದ್ದಾರೆ. ಅಪಾಯದ ಮೂನ್ಸೂಚನೆ ಅರಿತ ಕಾರು ಚಾಲಕ ತಕ್ಷಣವೇ ಕಾರನ್ನು ತಾನು ಬಂದ ದಾರಿಯಲ್ಲೇ ರಿವರ್ಸ್ ತೆಗೆದುಕೊಂಡು ತಪ್ಪಿಸಿಕೊಂಡು ಹೋಗಿದ್ದರು. ಆದರೆ, ಆರೋಪಿಗಳು ಕಾರನ್ನು ಫಾಲೋ ಮಾಡಿಕೊಂಡು ಬಂದು ಗುಂಜೂರು ಬಳಿ ಅಪಾರ್ಟ್‌ಮೆಂಟ್ ಸಮೀಪ ಬಂದು ಗಲಾಟೆ ಮಾಡಿದ್ದರು. ಎಂಟ್ರಿ ಗೇಟ್ ಬಳಿ ಕಾರು ಅಡ್ಡಗಟ್ಟಿ ಗಾಜುಗಳನ್ನು ಒಡೆದು ದಾಂಧಲೆ ಮಾಡಿದ್ದರು. ಆರೋಪಿಗಳು ದುಷ್ಕೃತ್ಯ ಹಾಗೂ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಈ ಬಗ್ಗೆ ಟ್ವಿಟರ್ ಮೂಲಕ ಕಾರಿನ ಮಾಲೀಕ ಪೊಲೀಸರಿಗೆ…

Read More

ರೌಡಿ ಶೀಟರ್ ಕಪೀಲ್ ಮರ್ಡರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆ ಸಿಕ್ಕಿವೆ. ಡಿಜೆ ಹಳ್ಳಿಯಲ್ಲಿ ಫೈನಾನ್ಸ್ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡ್ತಿದ್ದ ರೌಡಿ ಶೀಟರ್ ಕಪಿಲ್‌ ನನ್ನು ಜುಲೈ 12 ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಂತಕರು ಆತನನ್ನು ಅಟ್ಟಾಡಿಸಿ ಕೊಂದಿದ್ದಾರೆ. ಈ ಡೆಡ್ಲಿ ಅಟ್ಯಾಕ್‌ ಸಿಸಿಟಿವಿ ದೃಶ್ಯ ಈಗ ವೈರಲ್ ಆಗುತ್ತಿದೆ. ಮುಖಕ್ಕೆ ಮಾಸ್ಕ್, ಹೆಲ್ಮಟ್ ಧರಿಸಿದ್ದ ಆರೋಪಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕಪಿಲ್ ಮೇಲೆ ಹಲ್ಲೆ ಮಾಡಿದ್ದರು. ಜೀವವನ್ನು ಉಳಿಸಿಕೊಳ್ಳಲು ಕಪಿಲ್ ಕೊನೆ ಹಂತದವರೆಗೂ ಯತ್ನಿಸಿದ್ದರು. ಅದರೆ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಸುಮಾರು ನೂರು ಮೀಟರ್ ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಚೆ ಕತ್ತರಿಸಿ ಹಾಕಿದ್ದಾರೆ. ಸದ್ಯ ಪ್ರಕರಣ ಸಂಬಂಧ ಏಳು ಜನ ಆರೋಪಿಗಳನ್ನು ಡಿ ಜೆ ಹಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

‘ಮೆಟ್ರೊ ನಿಲ್ದಾಣಗಳಿಂದ ಶೀಘದ್ರಲ್ಲೇ ಮೀಟರ್ ಚಾಲಿತ ಆ್ಯಪ್ ಆಧಾರಿತ ಆಟೊ ಸೇವೆಗೆ ಚಾಲನೆ ನೀಡಲಾಗುವುದು’ ಎಂದು ಆಟೊ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ತಿಳಿಸಿದರು. ನಗರದಲ್ಲಿ ಗುರುವಾರ ಬಿ. ಪ್ಯಾಕ್ ಮತ್ತು ಡಬ್ಲ್ಯೂಆರ್‌ಐ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ‘ಪರ್ಸನಲ್ ಟು ಪಬ್ಲಿಕ್ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಅಗಸ್ಟ್ 15ರಂದು ಮೆಟ್ರೊಮಿತ್ರಾ ಎಂಬ ಆ್ಯಪ್ ಆಧಾರಿತ ಸೇವೆಯನ್ನು ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು. ಚಾಲಕರನ್ನು ವೃತ್ತಿಪರರನ್ನಾಗಿ ಮಾಡಲು ಈಗಾಗಲೇ ತರಬೇತಿ ನೀಡುತ್ತಿದ್ದೇವೆ. ತಂತ್ರಜ್ಞಾನ ಮತ್ತು ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ವೆಚ್ಚ ಸರಿದೂಗಿಸಲು ಮೀಟರ್ ಶುಲ್ಕದ ಜತೆಗೆ 110 ಹೆಚ್ಚುವರಿಯಾಗಿ ನೀಡಬೇಕು’ ಎಂದು ಹೇಳಿದರು. ಬಿ. ಪ್ಯಾಕ್ ಮುಖ್ಯಸ್ಥೆ ರೇವತಿ ಅಶೋಕ್, ‘ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಸಲುವಾಗಿ ಸಂಚಾರ ದಟ್ಟಣೆಗೆ ಕಡಿವಾಣ ಹಾಕಲು ನಗರದ ಜನ ವಾರದಲ್ಲಿ ಎರಡು ದಿನ ಸಾರ್ವಜನಿಕ ಸಾರಿಗೆಗಳನ್ನು ಬಳಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ವೈಟ್‌ ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಮಾರ್ಗ ಕಾರ್ಯಾರಂಭ ಮಾಡಲಿದೆ. ಈ…

Read More

ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಸ್ಪಂದಿಸಬೇಕಾದ ಕೇಂದ್ರ ಸರ್ಕಾರ ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ. ಹೆಚ್ ಮುನಿಯಪ್ಪ ಗುಡುಗಿದ್ದಾರೆ. ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಸಚಿವ ಕೆ. ಹೆಚ್. ಮುನಿಯಪ್ಪ, ನಾವು ಕೇಂದ್ರ ಸರ್ಕಾರದ ಮುಂದೆ ಪರಿಪರಿಯಾಗಿ ಬೇಡಿಕೊಂಡಿದ್ದೇವೆ. ಆಹಾರ ಭದ್ರತಾ ಕಾಯಿದೆ ಹೇಗೆ ಕಾರ್ಯನಿರ್ವಹಣೆ ಮಾಡುತ್ತದೆ? ಎಂಬುದು ನಮಗೂ ಗೊತ್ತಿದೆ. ಅವರ ಬಳಿ ಅಕ್ಕಿ ಇದೆ. ನಾವು ಪುಕ್ಕಟ್ಟೆ ಅಕ್ಕಿ ಕೇಳುತ್ತಿಲ್ಲ. ಅದಕ್ಕೆ ಹಣ ನೀಡುತ್ತೇವೆ ಎಂದರೂ, ಕೇಂದ್ರ ಸರ್ಕಾರ ಅಕ್ಕಿ ನೀಡಲಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಪಾಲಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೈಸೂರು: ಮಂಡ್ಯ ನಂತರ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ದ್ವೇಷದ ರಾಜಕಾರಣದ ಆರೋಪ ಕೇಳಿಬಂದಿದೆ. K.R.ನಗರ ಶಾಸಕ ಡಿ.ರವಿಶಂಕರ್ ಮೇಲೆ ಈ ಆರೋಪ ಕೇಳಿ ಬಂದಿದೆ. ಅರಕೆರೆ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುವಂತೆ ಒತ್ತಡ ಹಾಕುತ್ತಿದ್ದು, ಕೆಲಸ ಬಿಡುವಂತೆ ಹೇಳುತ್ತಿರುವ ಪ್ರಿನ್ಸಿಪಾಲ್ ಸ್ವಾಮಿ ನೌಕರರಿಗೆ ಸೂಚಿಸುತ್ತಿದ್ದಾರೆ. ಕೆಲಸ ಬಿಡಿ ಇಲ್ಲ ಅಂದರೆ ಶಾಸಕ, ಶಾಸಕರ ಪಿಎರನ್ನು ಭೇಟಿ ಮಾಡಿ, ನಿಮ್ಮ ಸಮಸ್ಯೆ ಸರಿಪಡಿಸಿಕೊಂಡು ಬನ್ನಿ ಎಂದು ಹೇಳುತ್ತಿದ್ದು, ಮನನೊಂದ ನೌಕರ ಚಲುವರಾಜು ಅವರು ಕಣ್ಣೀರಿಟ್ಟಿದ್ದಾರೆ. ಚಲುವರಾಜು ಅವರಿಗೆ ಹೊರ ಗುತ್ತಿಗೆ ಆಧಾರದಲ್ಲಿ ಸಾ.ರಾ.ಮಹೇಶ್ ಅವರು ಕೆಲಸ ಕೊಡಿಸಿದ್ದರು. ಅದರಂತೆ 15 ವರ್ಷದಿಂದ ಮುಖ್ಯ ಅಡುಗೆ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ಬೆಂಬಲಿತ ಎಂಬ ಕಾರಣಕ್ಕೆ ಕೆಲಸದಿಂದ ತೆಗೆಯುತ್ತಿರುವ ಆರೋಪ ಕೇಳಿಬಂದಿದೆ. ಇಷ್ಟು ದಿನ ಕೆಲಸ ಮಾಡಿದ್ದೀರಿ, ಈಗ ನಮ್ಮ ಬೆಂಬಲಿಗರಿಗೆ ಕೆಲಸ ಕೊಡಬೇಕು ಎಂದು ನೇರವಾಗಿ ಶಾಸಕ ಡಿ.ರವಿಶಂಕರ್ ಖಾಸಗಿ ಪಿಎ…

Read More

ಬೆಂಗಳೂರು ನಗರದಲ್ಲಿ ನಿನ್ನೆ ಸಂಜೆ ವೇಳೆ ಸುರಿದ ಸಾಧಾರಣ ಮಳೆಗೆ ಬೃಹತ್ ಮರವೊಂದು ಧರೆಗುರುಳಿ ಅನಾಹುತ ಸೃಷ್ಟಿಸಿದ ಘಟನೆ ನಡೆದಿದೆ. ಕನ್ನಿಂಗ್ ಹ್ಯಾಮ್ ರಸ್ತೆಯ ಚಂದ್ರಿಕಾ ಹೋಟೆಲ್ ಕಾರ್ನರ್ ಬಳಿ ಸಂಜೆ 7: 30ರ ಸುಮಾರಿಗೆ ಘಟನೆ ನಡೆದಿದ್ದು, ರಾಜಶೇಖರ (18) ಎಂಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಗಾಯಾಳುವನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರ ಬಿದ್ದ ರಭಸಕ್ಕೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಗೂ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಏಳೆಂಟು ಕಾರುಗಳು ಜಖಂಗೊಂಡಿವೆ. ಘಟನೆಯಿಂದ ಕೂದಲೆಳೆ ಅಂತರದಲ್ಲಿ ಹಲವರು ಪಾರಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮರ ಬಿದ್ದ ಹಿನ್ನೆಲೆಯಲ್ಲಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಸಂಚಾರ ದಟ್ಟಣೆವುಂಟಾಗಿದ್ದು, ಸ್ಥಳಕ್ಕೆ ಹೈಗೌಂಡ್ಸ್ ಸಂಚಾರಿ ಪೊಲೀಸರು ದೌಡಾಯಿಸಿದ್ದಾರೆ. ವಿದ್ಯುತ್ ಸಂಪರ್ಕ ಸಹ ಕಡಿತಗೊಂಡಿದ್ದು, ಸ್ಥಳಕ್ಕೆ ಆಗಮಿಸಿರುವ ಬಿಬಿಎಂಪಿ ಹಾಗೂ ಬೆಸ್ಕಾಂ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More