Subscribe to Updates
Get the latest creative news from FooBar about art, design and business.
- ತಿಪಟೂರು: ಜೆಡಿಎಸ್ ಎಸ್ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
- ತುಮಕೂರು ಪ್ರಿಂಟಿಂಗ್ ಹಬ್ ಆಗಲಿ: ಸಿ.ಸಿ.ಪಾವಟೆ
- ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
- ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
- ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
- ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
- ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
- ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ
Author: admin
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು: ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದೆ. ಯೋಜನಾ ವ್ಯಾಪ್ತಿಯ ಎಲ್ಲಾ 7 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ. ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ. ಕುಡಿಯುವ ನೀರಿನ ಪೂರೈಕೆಗೆ ಬೇಕಾದಷ್ಟು ನೀರು ಲಭ್ಯವಿದೆ. ಪ್ರಾರಂಭಿಕ ಹಂತದಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ ಬಳಿಕ ಕೆರೆಗಳನ್ನು ತುಂಬಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಯೋಜನಾ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಖಾತ್ರಿಪಡಿಸಬೇಕು. ಕುಡಿಯುವ ನೀರು ಕಾಮಗಾರಿ ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂಬ ಸೂಚನೆ ನೀಡಲಾಯಿತು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ 14.056 ಟಿಎಂಸಿ ಕುಡಿಯುವ ನೀರು, 9.953 ಟಿಎಂಸಿ ನೀರು ಕೆರೆಯನ್ನು ತುಂಬಿಸಲು ಡಿಪಿಆರ್ ಮಾಡಲಾಗಿದೆ.…
ತುಮಕೂರು: ಇಂದು ದೇಶ ವಿದೇಶಗಳಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ತುಮಕೂರು ಜಿಲ್ಲೆಯಲ್ಲೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ತುಮಕೂರು ಜಿಲ್ಲಾಡಳಿತದ ವತಿಯಿಂದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು. ತುಮಕೂರು ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿ ವರ್ಗ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ, ಯೋಗ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಮಳೆಗಾಲದಲ್ಲಿ ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಶುಕ್ರವಾರ ಅರಣ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮರಗಳನ್ನು ರಕ್ಷಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಇತ್ತೀಚೆಗೆ ಮರದ ಕೊಂಬೆ ಬಿದ್ದು 29 ವರ್ಷದ ಅಕ್ಷಯ್ ಸಾವಿಗೀಡಾಗಿದ್ದಕ್ಕೆ ದುಃಖ ವ್ಯಕ್ತಪಡಿಸಿದರು. ಮಳೆ ಮತ್ತು ಬಲವಾದ ಗಾಳಿ ಬೀಸುವ ಸಮಯದಲ್ಲಿ ಎತ್ತರದ ಅಥವಾ ಆಳವಾಗಿ ಬೇರೂರಿರದ ಮರಗಳು ಬೀಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ, ಕಾಂಕ್ರೀಟ್, ಕಲ್ಲಿನ ಚಪ್ಪಡಿಗಳು ಮತ್ತು ಬೇರುಗಳ ಸುತ್ತಲೂ ಹಾಕಲಾದ ಹೆಂಚುಗಳು, ನೀರು ನೆಲಕ್ಕೆ ಇಳಿಯುವುದನ್ನು ತಡೆಯುವುದು ಎಂದು ತಜ್ಞರನ್ನು ಉಲ್ಲೇಖಿಸಿ ಹೇಳಿದರು. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ ಜಿಟಿ) ಕೂಡ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ ಮತ್ತು ರಾಜ್ಯ ಸರ್ಕಾರ ಈಗಾಗಲೇ ಅಧಿಕೃತ ಆದೇಶವನ್ನು ಬಿಡುಗಡೆ ಮಾಡಿದೆ. ಗುರುವಾರ ಬಿಬಿಎಂಪಿ ವಿಶೇಷ ಆಯುಕ್ತರು ಮರಗಳ ಸುತ್ತಲಿನ ಕಾಂಕ್ರೀಟ್ ತೆಗೆಯಲು ಆದೇಶಿಸಿದ್ದಾರೆ. ಇನ್ನು ಮುಂದೆ ರಸ್ತೆಬದಿಗಳಲ್ಲಿ ಸಸಿಗಳನ್ನು ನೆಡುವಾಗ, ಅದರ ಸುತ್ತ…
ಬೆಂಗಳೂರು: ನಿರ್ದೇಶಕ ನಂದ ಕಿಶೋರ್ ಯುವ ನಟರೊಬ್ಬರಿಗೆ ಅವಕಾಶ ನೀಡುವ ಆಮಿಷವೊಡ್ಡಿ ಬರೋಬ್ಬರಿ 22 ಲಕ್ಷ ರೂಪಾಯಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಯುವ ನಟ ಶಬರೀಶ್ ಶೆಟ್ಟಿ ಎಂಬವರು ಈ ಗಂಭೀರ ಆರೋಪ ಮಾಡಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ವಾಟ್ಸಾಪ್ ಚಾಟ್ ಹಂಚಿಕೊಂಡಿದ್ದಾರೆ. 2016ರಲ್ಲಿ ನಂದಕಿಶೋರ್ ಜಿಮ್ ನಲ್ಲಿ ಪರಿಚಯವಾಗಿದ್ದರು. ನನ್ನ ಫ್ರೆಂಡ್ ಥರ ಇದ್ದ ಅವರು ದುಡ್ಡಿನ ಸಹಾಯ ಕೇಳಿದರು. ನಾನು ಬೇರೆಯವರ ಮೂಲಕ ಅವರಿಗೆ ಸಹಾಯ ಮಾಡಿದೆ. ನಾನು ಸುದೀಪ್ ಅವರ ಫ್ಯಾನ್ ಆಗಿರುವುದರಿಂದ ನಂದ ಕಿಶೋರ್ ಜೊತೆಗೆ ಫ್ರೆಂಡ್ ಶಿಪ್ ಬೆಳೆಸಿದರೆ ಸುದೀಪ್ ಅವರನ್ನು ಸಂಪರ್ಕಿಸಬಹುದು ಎಂದು ಭಾವಿಸಿದ್ದೆ ಎಂದು ಶಬರೀಶ್ ಹೇಳಿದ್ದಾರೆ. ಸುದೀಪ್ ಸರ್ ಅವರನ್ನು ಸಂಪರ್ಕ ಮಾಡಬೇಕು ಅವರ ಜೊತೆ ಕ್ರಿಕೆಟ್ ಆಡಬೇಕು ಅನ್ನೋ ಕನಸಿತ್ತು. ನಂದ ಕಿಶೋರ್ ಅವರು ಸುದೀಪ್ ಸರ್ ಜೊತೆಗೆ ತುಂಬಾ ಆತ್ಮೀಯವಾಗಿದ್ರು ಅನ್ನೋ ಕಾರಣಕ್ಕೆ, ನಾನು ಅವರ ಜೊತೆ ಫ್ರೆಂಡ್ಶಿಪ್ ಬೆಳೆಸಿಕೊಂಡಿದ್ದೆ. ಅದನ್ನೇ ಬಂಡವಾಳವಾಗಿಟ್ಟುಕೊಂಡು ಅವರು ನನ್ನ…
ಮಂಗಳೂರು: ಗರ್ಭಿಣಿ ಮಹಿಳೆಯನ್ನು ಹತ್ಯೆ ಮಾಡಿದ ಪತಿಯೊಬ್ಬ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (52) ಹತ್ಯೆ ನಡೆಸಿದವರಾಗಿದ್ದು, ಇವರ ಪತ್ನಿ ಪತ್ನಿ ಜಯಂತಿ (45) ಹತ್ಯೆಯಾದವರಾಗಿದ್ದಾರೆ. ಹತ್ಯೆಯ ನಂತರ ರಾಮ ಮೂಲ್ಯ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಜಯಂತಿ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿದ್ದರೆ, ತಿಮ್ಮಪ್ಪ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಜಯಂತಿ ಅವರಿಗೆ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಂದಿದ್ದು, ನಂತರ ತಿಮ್ಮಪ್ಪ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮೃತ ಜಯಂತಿ ಅವರ ತಂಗಿ ಸುಜಾತ ಫರಂಗಿಪೇಟೆ ಮತ್ತು ತಿಮ್ಮಪ್ಪರ ಸಹೋದರ ವಿಶ್ವನಾಥ ಅವರ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ…
ಗುಂಡ್ಲುಪೇಟೆ: ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ರೇಂಜ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. ದೇಶಿಪುರ ಕಾಲೋನಿಯ ಪುಟ್ಟಮ್ಮ (32) ಮೃತಪಟ್ಟವರು. ಗುರುವಾರ ಮಧ್ಯಾಹ್ನ ದನಗಳನ್ನು ಮೇಯಿಸಲು ಹೋಗಿದ್ದ ವೇಳೆ ಹುಲಿ ದಾಳಿ ಮಾಡಿದೆ. ಮಹಿಳೆಯನ್ನು ಕೊಂದ ಬಳಿಕ ಸ್ಥಳದಿಂದ ನೂರು ಮೀಟರ್ ಗಳವರೆಗೆ ಹುಲಿ ಹೊತ್ತೊಯ್ದಿತ್ತು. ಘಟನೆಯ ಮಾಹಿತಿ ತಿಳಿದು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಂಡಿಪುರ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಮಾತನಾಡಿ, ಮಹಿಳೆ ಹುಲಿ ದಾಳಿಯಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಹಸ್ತಾಂತರಿಸಲಾಗುವುದು. ಹುಲಿಯನ್ನು ಸೆರೆಹಿಡಿಯಲು ಕಾರ್ಯಾಚರಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಜೂನ್ 10 ರಂದು ಬೆಡಗುಳಿ ಗ್ರಾಮದ ವ್ಯಾಪ್ತಿಯ ರಂಗಮ್ಮ ಹುಲಿ ದಾಳಿಯಲ್ಲಿ ಸಾವನ್ನಪ್ಪಿದ್ದರು. ಈ ಘಟನೆ ನಡೆದು, ಕೆಲವೇ ಗಂಟೆಗಳಲ್ಲಿ ಅರಣ್ಯ ಇಲಾಖೆ ಹುಲಿಯನ್ನು ಸೆರೆಹಿಡಿಯಿತು. ಈಗ, 10 ದಿನಗಳ ಒಳಗೆ ಮತ್ತೊಂದು ಹುಲಿ ದಾಳಿ ಗ್ರಾಮಸ್ಥರಲ್ಲಿ ಭೀತಿಯನ್ನು…
ಬೆಂಗಳೂರು: ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಆರೋಪಿಸಿದ್ದಾರೆನ್ನಲಾಗಿರುವ ಆಡಿಯೋ ಕ್ಲಿಪ್ ಜೂ.20ರಂದು ವೈರಲ್ ಆಗಿದೆ. ಆಡಿಯೋ ಕ್ಲಿಪ್‌ನಲ್ಲಿ, ಶಾಸಕ ಪಾಟೀಲ್ ತಮ್ಮಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಿದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಪಾಯವೇ ಅಲುಗಾಡುತ್ತದೆ ಎಂದು ಹೇಳಿದ್ದಾರೆ. ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದೆ. ಕಲಬುರಗಿ ಜಿಲ್ಲೆಯ ಆಳಂದ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಪಾಟೀಲ್, ಸಚಿವ ಜಮೀರ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರೊಂದಿಗೆ ಮಾತನಾಡುತ್ತಿರುವುದು ದೂರವಾಣಿ ಸಂಭಾಷಣೆಯ ಆಡಿಯೋ ಕ್ಲಿಪ್ ನಲ್ಲಿ ಕೇಳಿಬರುತ್ತಿದೆ. ಪಾಟೀಲ್ ತಮ್ಮ ಕ್ಷೇತ್ರದೊಳಗಿನ ಹಳ್ಳಿಗಳಲ್ಲಿ ಮನೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಲಂಚದ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು ಕಾರ್ಯದರ್ಶಿಯನ್ನು ಪ್ರಶ್ನಿಸಿದ್ದಾರೆ. ಲಂಚ ನೀಡಿದವರಿಗೆ ಮಾತ್ರ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ.…
ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಗಳಲ್ಲಿ ಗುಟ್ಕಾ, ಪಾನ್ ಮಸಾಲ ತಿಂದು ಉಗುಳುವವರಿಗೇನೂ ಕಡಿಮೆ ಇಲ್ಲ, ಅಂತಹ ಕೆಎಸ್ ಆರ್ ಟಿಸಿ ಬಸ್ ಗಳಲ್ಲೇ ಗುಟ್ಕಾ ಕಂಪೆನಿಗಳ ಜಾಹೀರಾತುಗಳನ್ನು ಪ್ರದರ್ಶನ ಮಾಡಲಾಗುತ್ತಿದೆಯೇ? ಇಲ್ಲೊಬ್ಬರು ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ಫೋಟೋವೊಂದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಹೌದು…! ರಘು ತುಮಕೂರು ಎಂಬವರು ಕೆಎಸ್ ಆಟಿಸಿ ಬಸ್ ವೊಂದರ ಹಿಂಬದಿಯ ಫೋಟೋ ತೆಗೆದು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದು, “ಈ ಚಿತ್ರಣದಲ್ಲಿ ಏನೆಲ್ಲ ತಪ್ಪಿದೆ ಗುರುತಿಸುವೀರಾ?” ಎಂದು ಪ್ರಶ್ನೆ ಮಾಡಿದ್ದಾರೆ. KA 06- F0783 ನಂಬರ್ ಪ್ಲೇಟ್ ನ ಈ ಬಸ್ ನಲ್ಲಿ ಕನ್ನಡದಲ್ಲಿ ಬರೆಯಲಾಗಿರುವ ನಂಬರ್ ಪ್ಲೇಟ್ ಮೇಲೆಯೇ ವಿಮಲ್ ಜಾಹೀರಾತು ಅಂಟಿಸಲಾಗಿದೆ. ಈ ತಪ್ಪನ್ನು ಸಾಮಾಜಿಕ ಬಳಕೆದಾರರು ಗುರುತಿಸಿದ್ದಾರೆ. ಅಲ್ಲದೇ “ಕೆಎಸ್ ಆರ್ ಟಿ” ಮಾತ್ರವೇ ಇದ್ದು, ಸಿ ಅಕ್ಷರವನ್ನು ಬಿಟ್ಟಿರುವುದನ್ನೂ ಗುರುತಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಗಳ ನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಪ್ರಸಿದ್ಧ ನಟರು ಗುಟ್ಕಾ ಕಂಪೆನಿಗೆ…
ತುಮಕೂರು: ಚುನಾವಣೆಗೂ ಮುಂಚೆ Save Nandini ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ ಎಂದು ಕಾಂಗ್ರೆಸ್ ದೊಡ್ಡ ಹೋರಾಟ ಮಾಡಿದ್ರು ಆದರೆ ಈಗ ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. ನಂದಿನಿ ಉಳಿಸಬೇಕು ಅಂತ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಸೇವ್ ನಂದಿನಿ ಎಂಬ ಹ್ಯಾಶ್ ಟ್ಯಾಗ್ ಹಿಡಿದು ಕೈನಲ್ಲಿ ಹಾಲಿನ ಪ್ಯಾಕೇಟ್ ಹಿಡಿದು ಫೋಟೋಗೆ ಪೋಸ್ ಕೊಟ್ಟ ಹಾಗಲ್ಲ, ನಮ್ಮ ನಂದಿನಿಯನ್ನ ಉಳಿಸಬೇಕು. ಇವತ್ತು ಅಧಿಕಾರಕ್ಕೆ ಬರುತ್ತಿದ್ದಂತೆ ನಮ್ಮ ಹೆಮ್ಮೆಯ ನಂದಿನಿಯನ್ನ ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದರು. ಅಮೂಲ್ ಸೇರಿದಂತೆ ಬೇರೆ ಬೇರೆಯವರಿಗೆ ಗುತ್ತಿಗೆ ಕೊಡುವಂತ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಇವತ್ತು ಉಪ ಮುಖ್ಯಮಂತ್ರಿಗಳ ತಮ್ಮ ಬಮುಲ್ ಅಧ್ಯಕ್ಷ ಆಗಿದ್ದಾರಲ್ಲ ಅವರೇ ಉತ್ತರ ಕೊಡ್ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಾದಯಾತ್ರೆ ಮಾಡಿ ಪಕ್ಷವನ್ನ ಸಂಘಟನೆ ಮಾಡುವ ವಿಚಾರಕ್ಕೆ ಮಾತನಾಡಿದ ಅವರು, ಪಾದಯಾತ್ರೆ ಆಗಲಿ ಯಾವುದೇ ಯಾತ್ರೆ ಆಗಲಿ. ಕೆಲವೊಮ್ಮೆ ಬೇರೆ…
ತುಮಕೂರು: ಸಹಕಾರ ಖಾತೆ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ ಸಮಾರಂಭದ ಹಿನ್ನೆಲೆಯಲ್ಲಿ ಶನಿವಾರ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು ಇದಕ್ಕಾಗಿ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಕೆ.ಎನ್.ರಾಜಣ್ಣ ಅವರ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ವೇದಿಕೆಯನ್ನು ಹಾಕಲಾಗಿದ್ದು ಕಾಂಗ್ರೆಸ್ ಮುಖಂಡರ ಕಟ್ ಔಟ್ ಗಳು ರಾರಾಜಿಸುತ್ತವೆ. ಸಹಕಾರಿ ವಲಯದಲ್ಲಿ ಕೆಲಸ ಮಾಡಿರುವ ಸಹಕಾರಿಗಳು ಹಾಗೂ ರಾಜಣ್ಣ ಅಭಿಮಾನಿಗಳು ಸೇರಿದಂತೆ ಒಟ್ಟು ಎರಡು ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಗೊಂದಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW