Subscribe to Updates
Get the latest creative news from FooBar about art, design and business.
- ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
- ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ
- ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ
- ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
- ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
- ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
Author: admin
ಬೆಂಗಳೂರು ಮಹಾನಗರದ ಜನತೆಗೆ 1895ರಿಂದ ಇಲ್ಲಿಯವರೆಗೆ ನೀರು ಪೂರೈಸಲು ಕಾಲಕಾಲಕ್ಕೆ ಅಳವಡಿಸಿಕೊಂಡು ಬಂದಿರುವ ವ್ಯವಸ್ಥೆ ಮತ್ತು ತಂತ್ರಜ್ಞಾನಗಳನ್ನು ಸಮಗ್ರವಾಗಿ ಪ್ರದರ್ಶಿಸುವ ವಿನೂತನ ನೀರು ವಸ್ತು ಸಂಗ್ರಹಾಲಯ ಲೋಕಾರ್ಪಣೆಗೊಂಡಿತು. ದಿ. ನಟ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಮಲ್ಲೇಶ್ವರ 18ನೇ ಅಡ್ಡರಸ್ತೆಯಲ್ಲಿರುವ ಜಲಮಂಡಲಿಯ ನೆಲ ಮಟ್ಟದ ನೀರು ಸಂಗ್ರಹಗಾರದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ್ ಈ ಮ್ಯೂಸಿಯಂಗೆ ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸಮಾಜದ ಬಗ್ಗೆ ಕಳಕಳಿ ಇಟ್ಟುಕೊಂಡಿದ್ದ ನಟ ಪುನೀತ್ ಅವರು ನಮಗೆಲ್ಲ ಸ್ಫೂರ್ತಿಯಾಗಬೇಕು. ಅವರ ಗೌರವಾರ್ಥವಾಗಿ ಅವರ ಹುಟ್ಟುಹಬ್ಬದಂದೇ ಈ ಮ್ಯೂಸಿಯಂ ಅನ್ನು ಸಮಾಜಕ್ಕೆ ಅರ್ಪಿಸಲಾಗಿದೆ” ಎಂದು ನೆನಪಿಸಿಕೊಂಡರು. ದೆಹಲಿಯಲ್ಲಿರುವ ಇಂಡಿಯಾ ಹ್ಯಾಬಿಟೆಟ್ ಸೆಂಟರ್ ರೀತಿಯಲ್ಲೇ ಮಲ್ಲೇಶ್ವರ ಇಂಟರ್ ನ್ಯಾಷನಲ್ ಸೆಂಟರ್ ನಿರ್ಮಿಸಲಾಗುವುದು. ಇದಕ್ಕಾಗಿ ಬಿಬಿಎಂಪಿ 20 ಕೋಟಿ ರೂ. ಕೊಡಲಿದ್ದು, ಜಲಮಂಡಲಿಯು ಅಗತ್ಯವಾದ ಜಾಗವನ್ನು ಕೊಡಲಿದೆ. ಇದು ಯುವಜನರು ಸಮರ್ಪಕ ಚಿಂತನೆ ರೂಪಿಸಿಕೊಳ್ಳುವಂತಹ…
ಜೆಎಸ್ ಎಸ್ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗ, ಮೈಸೂರು ಜಿಲ್ಲಾ ಕ್ಷಯರೋಗ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ.ಮಹಮ್ಮದ್ ಶಿರಾಜ್ ಅಹಮದ್, ನಮ್ಮ ದೇಶದಲ್ಲಿ ಕ್ಷಯರೋಗದ ಹೊರೆ ಮತ್ತು ರೋಗವನ್ನು ಎದುರಿಸಲು ಪ್ರಯತ್ನಿಸುವುದು, 2025 ರ ವೇಳೆಗೆ ಕ್ಷಯ ರೋಗ ನಿವಾರಣೆಗೆ ಗುರಿಯತ್ತ ಶ್ರಮಿಸುತ್ತಿರುವ ವಿವಿಧ ಹಂತಗಳು, ವಿವಿಧ ವಿಭಾಗಗಳ ಕಾರ್ಯಗಳ ಬಗ್ಗೆ ಪ್ರತಿನಿಧಿಗಳ ಕುರಿತು ಮಾತನಾಡಿದರು. ಇದೇ ವೇಳೆ ಕ್ಷಯರೋಗ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಡಾ. ಮೊಹಮ್ಮದ್ ಶಿರಾಜ್ ಅಹಮದ್ ಅವರನ್ನು ಸನ್ಮಾನಿಸಲಾಯಿತು. ಜೆಎಸ್ ಎಸ್ ವೈದ್ಯಕೀಯ ಕಾಲೇಜಿನ ಕಮ್ಯುನಿಟಿ ಮೆಡಿಸಿನ್ ವಿಭಾಗದ ಕಮ್ಯುನಿಟಿ ಮೆಡಿಸಿನ್ ಕ್ರಾನಿಕಲ್, ಮಾಸಿಕ ಇ-ಸುದ್ದಿಪತ್ರವನ್ನು (ಮೊದಲ ಸಂಚಿಕೆ) ಬಿಡುಗಡೆ ಮಾಡಲಾಯಿತು. ‘ವೀ ಕ್ಯಾನ್ ಎಂಡ್ ಟಿಬಿ’ ವಿಷಯದಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರು (ಪ್ರಿ ಕ್ಲಿನಿಕಲ್) ಡಾ.ಸುಮಾ ಎಂ.ಎನ್,…
ಮಾರ್ಚ್ 26 ರಂದು ನಿಗದಿಯಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ರೋಡ್ ಶೋವನ್ನ ಜೆಡಿಎಸ್ ರದ್ಧುಪಡಿಸಿದೆ. ಮಾರ್ಚ್ 26 ರಂದು ಕುಂಬಳಗೋಡಿನಿಂದ ಮೈಸೂರಿನವರೆಗೆ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ರೋಡ್ ಶೋ ನಡೆಸಲು ಜೆಡಿಎಸ್ ಮುಂದಾಗಿತ್ತು. ಆದರೆ ಹೆಚ್.ಡಿ ದೇವೇಗೌಡರ ಆರೋಗ್ಯ ದೃಷ್ಠಿಯಿಂದ ವೈದ್ಯರ ಸಲಹೆ ಮೇರೆಗೆ ರೋಡ್ ಶೋವನ್ನು ರದ್ದು ಮಾಡಲಾಗಿದೆ ಎನ್ನಲಾಗಿದೆ. ರೋಡ್ ಶೋ ರದ್ದಾದರೂ ಸಹ ಮೈಸೂರಿನಲ್ಲಿ 10 ಲಕ್ಷ ಕಾರ್ಯಕರ್ತರನ್ನ ಸೇರಿಸಿ ಸಮಾರೋಪ ಸಮಾರಂಭ ನಡೆಸಲು ಜೆಡಿಎಸ್ ತೀರ್ಮಾನಿಸಿದೆ. ರೋಡ್ ಶೋ ರದ್ದು ಕುರಿತು ಇಂದು ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಚರ್ಚಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ KRS ಪಕ್ಷವು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಯಾವೆಲ್ಲಾ ಯೋಜನೆಗಳನ್ನು ರೂಪಿಸಬೇಕು ಮತ್ತು ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತರಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯದ ಜನಸಾಮಾನ್ಯರ ಜೊತೆ ಮತ್ತು ಚಿಂತಕರು ಹಾಗೂ ತಜ್ಞರ ಜೊತೆ ಹಲವಾರು ಸಭೆಗಳು ಮತ್ತು ಸಂವಾದಗಳನ್ನು ನಡೆಸಿದ ನಂತರ ಪಕ್ಷವು ಪ್ರಣಾಳಿಕೆಯನ್ನು ಸಿದ್ದಪಡಿಸಿದ್ದು, ಅದರ ಪ್ರಮುಖ ಅಂಶಗಳನ್ನು ಈ ಪತ್ರಿಕಾ ಟಿಪ್ಪಣಿಯಲ್ಲಿ ವಿವರಿಸಲಾಗಿದೆ. ರಾಜ್ಯ ಸರ್ಕಾರದಲ್ಲಿ ಪ್ರಸ್ತುತ ಖಾಲಿ ಇರುವ 3 ಲಕ್ಷಕ್ಕಿಂತಲೂ ಹೆಚ್ಚಿನ ಹುದ್ದೆಗಳನ್ನು ಒಂದು ವರ್ಷದ ಒಳಗೆ ಭರ್ತಿ ಮಾಡಲಾಗುವುದು. ಭ್ರಷ್ಟಾಚಾರರಹಿತ, ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತಕ್ಕಾಗಿ ಮತ್ತು ಲಂಚ/ಭ್ರಷ್ಟಾಚಾರ ನಿಗ್ರಹಕ್ಕಾಗಿ ಲೋಕಾಯುಕ್ತ ಬಲಪಡಿಸಲು ಕ್ರಮ. ರಾಜ್ಯದಲ್ಲಿ ಬಡತನ ನಿವಾರಣೆಗಾಗಿ ಸಂಪೂರ್ಣ ಮದ್ಯ ನಿಷೇಧ. ಶಿಕ್ಷಣದ ಪ್ರತಿ ಹಂತದಲ್ಲಿಯೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಕ್ರಮ. ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಕನಿಷ್ಠ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮತ್ತು ತಾಲ್ಲೂಕಿಗೊಂದು ಸರ್ಕಾರಿ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ…
ಮೈಸೂರು -ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅವೈಜ್ಞಾನಿಕ ಟೋಲ್ ದರ ಸಂಗ್ರಹ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ , ಮೈಸೂರಿನ ಮಣಿಪಾಲ್ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಹಿನ್ನೆಲೆ 2600 ಎಕರೆ ರೈತರ ಜಮೀನು ಹೋಯ್ತು. ಮಂಡ್ಯ ಭಾಗದ ನೂರಾರು ಕುಟುಂಬಗಳು ಬೀದಿಗೆ ಬಂದಿದೆ ಜನ ವಿರೋಧಿ ಯೋಜನೆ ಮಾಡಿ ಟೋಲ್ ಸಂಗ್ರಹ ನೆಪದಲ್ಲಿ ಹಗಲು ದರೋಡೆಗೆಳಿದಿದ್ದೀರಿ ರಸ್ತೆ ಬೇಕು ಅಂಥಾ ಯಾರು ಕೇಳಿದ್ರು ? ನಾಲ್ಕು ಪಥನೇ ಸಾಕಾಗಿತ್ತು. ಹತ್ತು ಪಥದ ರಸ್ತೆ ಮಾಡಿದ್ದೀರಾ ಆದರೆ ಬಡವರು ಓಡಾಡುವ ಸರ್ವಿಸ್ ರಸ್ತೆ ಎಲ್ಲಿದೆ ? ಅಪಘಾತವಾದರೆ ಚಿಕಿತ್ಸೆ ನೀಡಲು ಟ್ರಾಮಾ ಸೆಂಟರ್ ಎಲ್ಲಿದೆ ಎಂದು ಪ್ರಶ್ನಿಸಿದರು. ಬೆಂಗಳೂರು ಮೈಸೂರು ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ ಎಚ್.ವಿಶ್ವನಾಥ್, ಸಂಸದ ಪ್ರತಾಪ ಸಿಂಹ ಮಿನಿ ಕಂಟ್ರ್ಯಾಕ್ಟರ್. ನಿನ್ನ ಕೆಲಸ ಏನು? ಹೆದ್ದಾರಿ…
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಉರಿಗೌಡ ಮತ್ತು ನಂಜೇಗೌಡರ ವಿಚಾರ ಬಾರಿ ಸುದ್ದಿಯಾಗುತ್ತಿದ್ದು ಈ ಕುರಿತು ಮತ್ತೆ ಶಾಸಕ ಸಿ.ಟಿ ರವಿ ಪ್ರತಿಕ್ರಿಯಿಸಿ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ಸಿ.ಟಿ ರವಿ, ಉರಿಗೌಡ ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು ಟಿಪ್ಪುವನ್ನ ಉರಿಗೌಡ ನಂಜೇಗೌಡ ಕೊಂದಿದ್ದು ಐತಿಹಾಸಿಕ ಸತ್ಯ. ಟಿಪ್ಪು ಹಾಸನವನ್ನ ಕೈಮಾಬಾದ್ ಎಂದು ಕರೆದಿದ್ದ. ಹೆಚ್.ಡಿ ಕುಮಾರಸ್ವಾಮಿಗೂ ಹಾಸನವನ್ನ ಕೈಮಾಬಾದ್ ಎಂದು ಕರೆಯಲು ಇಷ್ಟವೇನು…? ಎಂದು ವ್ಯಂಗ್ಯವಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಬಳ್ಳಾಪುರ ಜನರ ಬಹು ದಿನಗಳ ಕೂಗಿಗೆ ಜಯ ಸಿಕ್ಕಿದ್ದು ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು ಕೆಎಸ್ ಆರ್ ಟಿಸಿ ಅನುಮತಿ ನೀಡಿದೆ. ಕೇವಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್ ಗಳು ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಜನವರಿ 4ರಂದು ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿತ್ತು. ಬಿಎಂಟಿಸಿ ಬಸ್ ಸೇವೆಯನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸಿದ್ದಕ್ಕೆ ಕೆಎಸ್ ಆರ್ಟಿಸಿ ಆಕ್ಷೇಪ ವ್ಯಕ್ತಪಡಿಸಿತ್ತು. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿ.ಮೀ ಅಂತರವಿದೆ. ಹೀಗಾಗಿ ಬಸ್ ಸಂಚಾರ ವಿಸ್ತರಿಸಲು ಅವಕಾಶ ಇಲ್ಲ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರ ಮಾಡಿದರೆ ಕೆಎಸ್ ಆರ್ ಟಿಸಿ ಆದಾಯಕ್ಕೆ ಹೊಡೆತ ಬೀಳುವ ಸಾಧ್ಯತೆ ಇತ್ತು. ಹೀಗಾಗಿ ಕೆಎಸ್ ಆರ್ ಟಿಸಿ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು ಕೆಎಸ್ ಆರ್ ಟಿಸಿ ಅನುಮತಿ…
ಬೆಂಗಳೂರು ಕರಗವನ್ನ ನಾಟಕ ಎಂದು ಹೇಳಿಕೆ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಇದೀಗ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕ್ಷಮೆಯಾಚನೆ ಕೇಳಿದ್ದಾರೆ. ಕಾಂಗ್ರಸ್ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಬೆಂಗಳೂರು ಕರಗವನ್ನ ನಾಟಕ ಎಂದಿದ್ದರು. ಈ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಕ್ಷಮೆಯಾಚನೆಯೂ ಮಾಡಿದ್ದರು. ಆದರೆ ಸುಮ್ಮನಾಗದ ತಿಗಳರ ಸಮಾಜದ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನೇರವಾಗಿ ಶಾಸಕ ಹ್ಯಾರಿಸ್ ತಿಗಳರ ಪೇಟೆಯಲ್ಲಿರುವ ಶ್ರೀಧರ್ಮರಾಯಸ್ವಾಮಿ ದೇವಾಲಯಕ್ಕೆ ತೆರಳಿ ಕ್ಷಮೆಯಾಚಿಸಿದ್ದಾರೆ. ದೇವರ ಮೇಲೆ ನನಗೆ ಅಪಾರ ಭಕ್ತಿ ಗೌರವವಿದೆ ಧರ್ಮಾರಾಯಸ್ವಾಮಿ ದೇವಾಲಯದಲ್ಲಿ ನಾನು ಕ್ಷಮೆ ಕೇಳಿದ್ದೇನೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಲಿಸುತ್ತಿದ್ದ ಕಾರು ಹಳ್ಳಕ್ಕೆ ಬಿದ್ದು ದಂಪತಿ ದುರ್ಮರಣಕ್ಕೀಡಾಗಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರದಲ್ಲಿ ನಡೆದಿದೆ. ಶ್ರೀನಿವಾಸಪುರದ ಲಕ್ಷ್ಮೀಪುರ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಆಂಧ್ರ ಮೂಲದ ಶಫಿ(55), ಶಮಾ(50) ಮೃತಪಟ್ಟವರು. ಕೆಂಪೇಗೌಡ ಏರ್ ಪೋರ್ಟ್ ನಿಂದ ಮದನಪಲ್ಲಿಗೆ ತೆರಳುತ್ತಿದ್ದ ಕಾರು ಲಕ್ಷ್ಮೀಪುರ ಕ್ರಾಸ್ ಬಳಿ 20ರಿಂದ 25 ಅಡಿ ಹಳ್ಳಕ್ಕೆ ಬಿದ್ದಿದೆ. ಏರ್ ಪೋರ್ಟ್ ನಲ್ಲಿ ಮಗಳನ್ನ ಬಿಟ್ಟು ವಾಪಸ್ ಬರುವಾಗ ಈ ಘಟನೆ ಸಂಭವಿಸಿದೆ. ಅಪಘಾತ ಸ್ಥಳಕ್ಕೆ ಗೌನಿಪಲ್ಲಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ಶ್ರೀನಿವಾಸಪುರ ಆಸ್ಪತ್ರೆಗೆ ರವಾನಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮಾರ್ಚ್ 20, 2023ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಚರಿಸಲಾಗುತ್ತಿದೆ. ಈ ದಿನದಂದು ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಸರ್ಕಾರಿ ನೌಕರರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಮಾ.20ರಂದು ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನ ವಿಧಾನ ಸೌಧದಲ್ಲಿರುವಂತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿ, ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣಪತ್ರವನ್ನು ಸಲ್ಲಿಸುವ ಷರತ್ತಿಗೆ ಒಳಪಟ್ಟು, ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy