Author: admin

ಉರಿಗೌಡ ನಂಜೇಗೌಡ ಸಿನಿಮಾ ಕುರಿತು ಭಾರಿ ವಾದ ವಿವಾದಗಳು ನಡೆಯುತ್ತಿದ್ದು ಸಿನಿಮಾ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವಿಟ್ ಮಾಡಿದ್ದಾರೆ. ಮುನಿರತ್ನ ಅವರು ಈ ಸಿನೇಮಾ ನಿರ್ಮಾಣಕ್ಕೆ ಮುಂದಾಗಿದ್ದು ಇವರ ವಿರುದ್ಧವು ಎಚ್.ಡಿಕೆ ಟ್ವಿಟ್ ಮಳೆಗೈದಿದ್ದಾರೆ. ಕಲ್ಪಿತ ಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿ, ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೇಬೇಕೆಂಬ ಹಿಡೆನ್ ಅಜೆಂಡ ಬಿಜೆಪಿಗೆ ಇರುವುದಂತೂ ಸತ್ಯ ಎಂದು ಟ್ವೀಟ್ ಮಾಡಿದ್ದಾರೆ ಕುಮಾರಸ್ವಾಮಿ. ಸಚಿವರು ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ ಮೂಲಕ ಉರಿಗೌಡ-ನಂಜೇಗೌಡ’ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ’ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ ಕುಮಾರಸ್ವಾಮಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡ್ತಾರೆ. ಪಟ್ಟಿ ರಿಲೀಸ್ ಬಳಿಕ ಭಿನ್ನಮತ ಸ್ಪೋಟವಾಗುತ್ತದೆ ಎಂದು ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಟಿಕೆಟ್ ಸಿಗದೇ ಇದ್ರೆ ನಿಮ್ಮದು ಯಾವುದೋ ಜನ್ಮದ ಪುಣ್ಯ. ಟಿಕೆಟ್ ತೆಗೆದುಕೊಂಡು ಯಾಕೆ ಸೋಲುತ್ತೀರಿ. ಹೆಸರು ಕೈಬಿಟ್ಟರೇ ನೀವು ಪುಣ್ಯವಂತರು ಎಂದು ತಿಳಿದುಕೊಳ್ಳಿ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಹೇಳಿದರು. ಸಿದ್ಧರಾಮಯ್ಯಗೆ ಈಗಾಗಲೇ ಗೊತ್ತಾಗಿದೆ ಚುನಾವಣೆಯಲ್ಲಿ ಗೆಲ್ಲಲ್ಲ ಅಂತಾ. ಒಂದು ಕಡೆ ಲಿಂಗಾಯತರನ್ನ ಒಡೆದರು. ಪರಮೇಶ್ವರ್ ಮುನಿಯಪ್ಪರನ್ನ ಸೋಲಿಸಿದರು. ಹೀಗಾಗಿ ದಲಿತರ ವೋಟು ಕಾಂಗ್ರೆಸ್ ಗೆ ಬೀಳಲ್ಲ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಒಕ್ಕಲಿಗ ವಿರೋಧಿ. ಹೀಗಾಗಿ ಕಾಂಗ್ರೆಸ್ ಗೆ ಒಕ್ಕಲಿಗ ಸಮುದಾಯದ ವೋಟು ಬರಲ್ಲ ಈಗ ಮುಸ್ಲೀಂ ವೋಟ್ ಪಡೆಯಲು ಯತ್ನಿಸುತ್ತಿದ್ದಾರೆ. ಮುಸ್ಲೀಂ ವೋಟ್ ಬರೋದು ಡೌಟ್. ಕಾಂಗ್ರೆಸ್ ನವರು ಅಲೆಮಾರಿಗಳಾಗಿದ್ದಾರೆ ಎಂದು ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತು ಸತ್ಯ ಎಂದು ಬಿಜೆಪಿ ನಾಯಕರ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಉರಿಗೌಡ ಮತ್ತು ನಂಜೇಗೌಡ ವಿಚಾರಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿ ಬಿಜೆಪಿ ನಾಯಕರ ವಿರುದ್ಧ ಗುಡುಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ. ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ. ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ…

Read More

ಮೊದಲು ಜೆಡಿಎಸ್ ರಾಜ್ಯಕ್ಕೆ ಸೀಮಿತವಾಗಿತ್ತು. ನಂತರ ಮಂಡ್ಯ, ಹಾಸನಕ್ಕೆ ಸೀಮಿತವಾಗಿದೆ. ಹೆಚ್.ಡಿ ಕುಮಾರಸ್ವಾಮಿ ಹೆಚ್.ಡಿ ದೇವೇಗೌಡರು ಒಂದು ವರ್ಗಕ್ಕೆ ಸೀಮಿತರಾಗಿದ್ದಾರೆ. ಜೆಡಿಎಸ್ ಇನ್ನಷ್ಟು ಕುಗ್ಗಿ ಜಿಲ್ಲೆಗೆ ಸೀಮಿತವಾಗೋದು ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದರು. ಉರಿಗೌಡ ನಂಜೇಗೌಡ ಸಿನಿಮಾಗೆ ಎಚ್ ಡಿಕೆ ವಿರೋಧ ಕುರಿತು ಮಾತನಾಡಿದ ಆರ್. ಅಶೋಕ್, ಒಕ್ಕಲಿಗರನ್ನು ಹೀಯಾಳಿಸುವ ಉದ್ದೇಶವಿಲ್ಲ ನಾವೂ ಒಕ್ಕಲಿಗ ಸಮಾಜದಿಂದ ಬಂದವರು ಬಿಜೆಪಿ ಇತಿಹಾಸ ಪರವಾಗಿ ನಿಲ್ಲುತ್ತದೆ. ಇತಿಹಾಸ ಏನು ಅಂತಾ ನೋಡುತ್ತೇನೆ. ಹೆಚ್ ಡಿಕುಮಾರಸ್ವಾಮಿಗೆ ಅನುಮಾನವಿದ್ದರೇ ಇತಿಹಾಸವನ್ನ ಮತ್ತೊಮ್ಮೆ ಪರಿಶೀಲಿಸೋಣ ಎಂದರು. ಯಾರೂ ಸಮುದಾಯವನ್ನ ಗುತ್ತಿಗೆ ಪಡೆಯಲು ಆಗಲ್ಲ. ಕುಮಾರಸ್ವಾಮಿ ಪದೇ ಪದೇ ಜಾತಿ ಹೆಸರು ಹೇಳುವುದು. ಜಾತಿ ಹೆಸರಲ್ಲಿ ಮತ ಕೇಳುವ ಗಿಮಿಕ್ ಮಾಡಬಾರದು ಎಂದು ಆರ್.ಅಶೋಕ್ ಟಾಂಗ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ ಪಾಲ್ಗೊಂಡಿದ್ದಾರೆ. ಈ ನಡುವೆ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ದ ಸ್ಪರ್ಧೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೆಲ ನಾಯಕರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಸಿಎಂ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯೂ ಒಪ್ಪಿಗೆ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿರೋದ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರ ಬದಲಾವಣೆ ಕುರಿತು ಹೈಕಮಾಂಡ್ ನಲ್ಲಿ ಚರ್ಚೆ ನಡೆಯುತ್ತಿದ್ದು ಕಾಂಗ್ರೆಸಿನ ಹಿರಿಯ ನಾಯಕರುಗಳು ಸಿದ್ದರಾಮಯ್ಯನವರಿಗೆ ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂಬ ಸಲಹೆಯನ್ನು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇದರ ಜೊತೆಗೆ ರಾಜ್ಯದ ಹಾಗೂ ಸ್ಥಳೀಯ ನಾಯಕರುಗಳ ಜೊತೆ ಚರ್ಚೆ ನಡಿಸಲು ಸಿದ್ದರಾಮಯ್ಯನವರು ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಉತ್ತರ ಕರ್ನಾಟಕದ ಬಾದಾಮಿ ಅಥವಾ ವಾರಣ ಚಾಮುಂಡೇಶ್ವರಿ ,ಈ ಮೂರು ಕ್ಷೇತ್ರಗಳಲ್ಲಿ ಆಯ್ಕೆ ಮುಂದಿದೆ ಮುಂದಿನ ರಾಜಕೀಯ ಬದಲಾವಣೆಗಳಲ್ಲಿ ಸಿದ್ದರಾಮಯ್ಯ ಅವರ ನಿರ್ಧಾರ ರಾಜ್ಯ ಚುನಾವಣಾ ರಾಜ್ಯ ರಾಜಕೀಯಕ್ಕೆ ಹೊಸ ತಿರುಗೇಟು ನೀಡಲಿದೆ ಎಂಬುದು ಸ್ಪಷ್ಟವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಪ್ರಸ್ತುತ ಸಂದರ್ಭದಲ್ಲಿ ಜೈನ ಧರ್ಮದ ಸಂದೇಶಗಳನ್ನು ಹೆಚ್ಚು ಹೆಚ್ಚು ಪ್ರಚಾರಗೊಳಿಸಬೇಕಾದ ಅಗತ್ಯವಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮುತ್ನಾಳ ಗ್ರಾಮದಲ್ಲಿ ಶುಕ್ರವಾರ ನಡೆದ ಭಗವಾನ ಶ್ರೀ 1008 ಆದಿನಾಥ ತೀರ್ಥಂಕರ ಜಿನಬಿಂಬ ಪಂಚಕಲ್ಯಾಣ ಮಹಾ ಮಹೋತ್ಸವ ಹಾಗೂ ಭಗವಾನ ಶ್ರೀ ಬಾಹುಬಲಿ ಭವ್ಯ ಪ್ರತಿಮೆಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡುತ್ತಿದ್ದರು. ಇಂದು ಸಮಾಜದಲ್ಲಿ ನಾವು ಬಯಸುವುದು ಶಾಂತಿಯನ್ನು. ತನ್ಮೂಲಕ ಎಲ್ಲರೂ ನೆಮ್ಮದಿಯಿಂದ ಬಾಳುವಂತಾಗಬೇಕು. ಜೈನ ಧರ್ಮದ ಸಂದೇಶದಲ್ಲಿ ಶಾಂತಿ, ಅಂಹಿಂಸೆಗೆ ಮೊದಲ ಆದ್ಯತೆ ನೀಡಲಾಗಿದೆ. ಎಲ್ಲರೂ ಅದನ್ನು ಅಳವಡಿಸಿಕೊಂಡಾಗ ಸುಖ, ಶಾಂತಿ, ನೆಮ್ಮದಿ ಕಾಣಲು ಸಾಧ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಭಟ್ಟಾರಕ ಭಟ್ಟಾಚಾರ್ಯ ಸ್ವಸ್ತಿ ಶ್ರೀ ಭಟ್ಟಾಕಲಂಕ ಸ್ವಾಮೀಜಿ ಸೋಂದಾಮಠ, ಪರಮಪೂಜ್ಯ ಭಟ್ಟಾರಕ ಪಟ್ಟಾಚಾರ್ಯ ಸ್ವಸ್ತಿ ಅಭಿನವ ಲಕ್ಷ್ಮೀಸೇನ ಮಹಾಸ್ವಾಮೀಜಿ, ಕೊಲ್ಹಾಪುರ, ಷ ಭ್ರ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು ಕೇದಾರ ಶಾಖಾಪೀಠ ಮುತ್ನಾಳ ಇವರು ವಹಿಸಿದ್ದರು. ಈ ಸಮಯದಲ್ಲಿ ಗ್ರಾಮದ…

Read More

ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರಗೆ ಟಿಕೆಟ್ ನೀಡುವ ಸುಳಿವನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ಕ್ಲಿಸ್ಟ ಪರಿಸ್ಥಿತಿಯಲ್ಲಿ, ಸವಾಲುಗಳನ್ನು ಎದುರಿಸುವಂತ ಶಕ್ತಿ ನೀಡಿದವರು ಬಿ.ಎಸ್.ಯಡಿಯೂರಪ್ಪ. ಅವರ ನನ್ನ ನಡುವೆ ತಂದೆ–ಮಕ್ಕಳ ಸಂಬಂಧವಿದೆ. ಅದು ಎಲ್ಲಾ ಭಾವನೆಯನ್ನು ಮೀರಿದ್ದಾಗಿದೆ ಎಂದರು. ಶಿಕಾರಿಪುರ ಮತ್ತೆ ಅವರಿಗೆ ಅವಿನಾಭಾವ ಸಂಬಂಧ. ಅವರನ್ನು ನಾನು ಎಷ್ಟು ಬಾರಿ ಮಾತನಾಡಿದರೂ ಶಿಕಾರಿಪುರದ ಅಭಿವೃದ್ಧಿಯ ಬಗ್ಗೆಯೇ ಮಾತನಾಡುತ್ತಾರೆ ಎಂಬುದಾಗಿ ತಿಳಿಸಿದರು. ಶಿವಶರಣೆ, ವೈಚಾರಿಕ ಕ್ರಾಂತಿ ನಡೆಸಿದ ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪಿಸಿ, ಶಿವಶರಣರಿಗೆ ದೊಡ್ಡ ಕಾಣಿಕೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುರುವೇಕೆರೆ: ಪಟ್ಟಣದ ಮಹೇಂದ್ರ ರಸ್ತೆಯಲ್ಲಿರುವ ಪೊಲೀಸ್ ವೃತ ನಿರೀಕ್ಷಕರ ಕಚೇರಿಯದುರಿನ ಕಾರು ಚಾಲಕರ ಮತ್ತು ಮಾಲೀಕರ ಸಂಘವು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮ ದಿನವನ್ನು ಆಚರಿಸಿತು. ತುರುವೇಕೆರೆ ವೃತ್ತದ ಪೊಲೀಸ್ ನಿರೀಕ್ಷಕರಾದ ಗೋಪಾಲ್ ನಾಯಕ್ ರವರು ಕೆಕ್ ಕತ್ತರಿಸುವ  ಮೂಲಕ ಅಪ್ಪು ಹುಟ್ಟುಕ್ಕೆ ಚಾಲನೆ ನೀಡಿದರು. ಇದೇ ವೇಳೆ ಸಂಘದ ಆಟೋ ಚಾಲಕರು ಮತ್ತು ಮಾಲೀಕರ ಕಾರ್ಯವನ್ನುಶ್ಲಾಘಿಸಿ  ಶುಭಾಶಯ ಕೋರಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ  ನಾಯಕ್ ರವರು ಬಿರಿಯಾನಿ ಬಡಿಸಿದರು. ಈ ಸಂದರ್ಭದಲ್ಲಿ ನೂರಾರು ಪುನೀತ್ ರಾಜಕುಮಾರ್ ಅಭಿಮಾನಿಗಳು ಆಟೋ ಚಾಲಕರು ಮತ್ತು ಮಾಲೀಕರುಗಳು ಸಾರ್ವಜನಿಕರು ಉಪಸ್ಥಿತರಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕರ್ನಾಟಕ  ರಾಷ್ಟ್ರ ಸಮಿತಿ(ಕೆಆರ್ ಎಸ್) ಪಕ್ಷದ ಕುಣಿಗಲ್ ತಾಲೂಕು ಘಟಕದ ವತಿಯಿಂದ ಇಂದು ನಗರದ ಪ್ರವಾಸಿ ಮಂದಿರದಲ್ಲಿ  ಪತ್ರಿಕಾಗೋಷ್ಠಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಘಟಕದ ಸಂಚಾಲಕರ ಶ್ರೀನಿವಾಸಮೂರ್ತಿ ಅವರು, ಕಳೆದ ಮೂರು ದಶಕದಲ್ಲಿ ರಾಜಕಾರಣ ಸರಿಪಡಿಸಲಾಗದ ಮಟ್ಟಕ್ಕೆ ಹಾಳಾಗಿದ್ದು, ತತ್ವ, ಸಿದ್ಧಾಂತ, ನೈತಿಕತೆ, ಸಾಮಾಜಿಕ ಕಳಕಳಿಗಳನ್ನು   ಎಲ್ಲಾ ಪಕ್ಷಗಳು ಮೂಲೆಗುಂಪು ಮಾಡಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕುಟುಂಬ ರಾಜಕಾರಣವನ್ನು ಎಗ್ಗಿಲ್ಲದೆ ನಡೆಸುತ್ತಿದ್ದಾರೆ. ಜನ ಸಾಮಾನ್ಯರ ಬದುಕನ್ನು ಆಯೋಮಯವನ್ನಾಗಿ ಮಾಡಿ, ಬರಿ ಹಣ ಹಾಕಿ, ಹಣ ತೆಗೆಯುವ ರಾಜಕಾರಣದಲ್ಲಿ ಮುಳುಗಿದ್ದು,  ಎಲ್ಲಾ ಪಕ್ಷಗಳು ಒಂದು ರೀತಿಯ ಮೂರು ತಲೆಯ ಒಂದೇ ಹಾವು ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಸವಣ್ಣ ಗಾಂಧಿ ಇತ್ಯಾದಿ ಮಹಾಪುರುಷರ ಆಶಯದ  ರಾಜಕಾರಣ ಮಾಡುವ ಸಲುವಾಗಿ ಕರ್ನಾಟಕ ಸಮಿತಿ ನಿರಂತರವಾಗಿ ಶ್ರಮಿಸುತ್ತಿದ್ದು, ನಮ್ಮ ತಾಲೂಕಿಗೆ ರಘು ಜಾಣಗೆರೆಯವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಪಕ್ಷವು  ಘೋಷಿಸಿದೆ.  ರಘು ಜಾಣಗೆರೆಯವರ ಅಧ್ಯಯನಶೀಲತೆ, ಸಾಮಾಜಿಕ ಕಳಕಳಿ  ವಾಕ್ಚಾತುರ್ಯ,   ಕಾನೂನಿನ  ಅರಿವು , ಸಜ್ಜನ…

Read More