Author: admin

ತುರುವೇಕೆರೆ: ಹಾಲಿ ಶಾಸಕರಾಗಿರುವ ಮಸಾಲ ಜೈರಾಮ್ ರವರು ಮಹಾನ್ ಸುಳ್ಳುಗಾರ, ಯಾರೋ ಹುಟ್ಟಿಸಿದ ಮಗುವಿಗೆ ಯಾರದ್ದೋ ಹೆಸರು ಎಂದು ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಹಾಲಿ ಶಾಸಕ ಮಸಾಲ ಜೈರಾಮ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಲ್ಲಿ ಹಾಲಿ ಶಾಸಕರ ಸಾಧನೆ ನಮ್ಮ ತಾಲೂಕಿನಲ್ಲಿ ಶೂನ್ಯವಾಗಿದೆ, ನನ್ನ ಅಧಿಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅದರಲ್ಲಿ ಕಮಿಷನ್ ಹೊಡೆಯುವುದೇ ದೊಡ್ಡ ಸಾಧನೆಯಾಗಿದೆ. ಆದರೆ ಕಣ್ಣೀರಿಟ್ಟು ನಾನೇ ಮಂಜೂರು ಮಾಡಿಸಿದೆ ಎಂದು ಜನರನ್ನು ನಂಬಿಸಿ ಗಿಮಿಕ್ ಮಾಡುತ್ತಿದ್ದಾರೆ, ಅವರಿಗೂ ಇದೆಲ್ಲದರ ಅರಿವಿದೆ ಎಂದರು. ಇನ್ನು ದಬ್ಬೇಘಟ್ಟ ಹೋಬಳಿಯ ಏತ ನೀರಾವರಿ ಯೋಜನೆಗೆ 2019ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರದಲ್ಲಿ ನಾನು ಮಂಜೂರು ಮಾಡಿಸಿದ್ದೆ, ಗುಡ್ಡೇನಹಳ್ಳಿ , ಡಣನಾಯಕನಪುರ, ಕಾವಲ್ ಬಾಣಸಂದ್ರ, ಕಡೆಹಳ್ಳಿ ಕವಲ್, ಏತಾ ನೀರಾವರಿ ಯೋಜನೆಗಳಿಗೆ ಪ್ರಸ್ತಾವನೆಯನ್ನು 2017ರಲ್ಲಿ ಸಲ್ಲಿಸಲಾಗಿತ್ತು, ನಂತರ 2019…

Read More

ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತುಮಕೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ತುರುವೇಕೆರೆ ವಿಧಾನಸಭಾ ಕ್ಷೇತ್ರದ 2023ರ ಎಂಎಲ್ ಎ ಅಭ್ಯರ್ಥಿ ರಾಮಪ್ರಸಾದ್ ಪತ್ರಿಕಾ ಮಾಧ್ಯಮಗೋಷ್ಠಿ ನಡೆಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಯಾವೆಲ್ಲ ಯೋಜನೆಗಳನ್ನು ರೂಪಿಸಬೇಕು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು, ಎನ್ನುವ ನಿಟ್ಟಿನಲ್ಲಿ ರಾಜ್ಯದ ಜನಸಾಮಾನ್ಯರ ಜೊತೆ ಮತ್ತು ಚಿಂತಕರು ಹಾಗೂ ತಜ್ಞರ ಜೊತೆ ಹಲವಾರು ಸಭೆಗಳು ಮತ್ತು ಸಂವಾದಗಳನ್ನು ನಡೆಸಿದ, ನಂತರ ನಮ್ಮ ಪಕ್ಷದ ವತಿಯಿಂದ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಅದರ ಪ್ರಮುಖ ಅಂಶಗಳನ್ನು ಈ ಪತ್ರಿಕಾ ಟಿಪ್ಪಣಿಯಲ್ಲಿ ವಿವರಿಸುತ್ತಿದ್ದೇನೆ ಎಂದರು. ಮೊದಲನೆಯದಾಗಿ ಭ್ರಷ್ಟಾಚಾರ ಮುಕ್ತ ದಕ್ಷ ಆಡಳಿತ ನೀಡುವುದು, ಮನೆ ಬಾಗಿಲಿಗೆ ಸರ್ಕಾರಿ ಸೇವೆ ಅಥವಾ ಆನ್ಲೈನ್ ಮೂಲಕ ಸಂಪೂರ್ಣ ಸೇವೆ ಲಭ್ಯ, ಪೋಲಿಸ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ, ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಉತ್ಕೃಷ್ಟ ವೈದ್ಯಕೀಯ ಸಂಶೋಧನ ಕೇಂದ್ರ ಸ್ಥಾಪನೆ, ಶಿಕ್ಷಣಕ್ಕೆ ಸಂಬಂಧಿಸಿದಂತೆ ಎಲ್ಲಾ ಸರ್ಕಾರಿ ಶಾಲಾ ಕೊಠಡಿಗಳನ್ನು ಸ್ಮಾರ್ಟ್…

Read More

ತಾಲೂಕಿನ ಮಾಯಸಂದ್ರ ಹೋಬಳಿ ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಶಾಸಕ ಮಸಾಲ ಜೈರಾಮ್ , ಈ ಹಿಂದೆ 15 ವರ್ಷಗಳ ಕಾಲ ಶಾಸಕರಾಗಿದ್ದ ಮಹನೀಯರು ಯಾಕೆ ಈ ತಾಲೂಕಿನಲ್ಲಿ ಅಭಿವೃದ್ಧಿಯ ಕೆಲಸಗಳನ್ನು ಈ ಭಾಗಕ್ಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಒಮ್ಮೆ ಮಧ್ಯರಾತ್ರಿ ಹೇಮಾವತಿ ನೀರಿಗಾಗಿ ನಮ್ಮ ತಾಲೂಕಿನ ಒಂದು ಗ್ರಾಮದಲ್ಲಿ ಗಲಾಟೆಯಾದಾಗ ರಾತ್ರಿ 2 ಗಂಟೆಯಾದರೂ ಕೂಡ ನಾನು ಆ ಸ್ಥಳಕ್ಕೆ ಭೇಟಿ ನೀಡಿ, ಆ ಜಗಳವನ್ನು ಬಿಡಿಸಿ ಈ ತಾಲೂಕಿಗೆ ನೀರನ್ನು ಹರಿಸಲು ಎಷ್ಟು ಹೋರಾಟ ಮಾಡಿದ್ದೇನೆ ಎಂಬುದು ನಮ್ಮ ಶ್ರಮ ನಿಮಗೆ ಗೊತ್ತಿಲ್ಲ ನೀವು ನೋಡಿದರೆ ನಮ್ಮ ಅವಧಿಯಲ್ಲಿ ಕೆಲಸ ಆಗಿದೆ ಎಂದು ಹೇಳುತ್ತಿದ್ದೀರಾ ನಮ್ಮ ತಾಲೂಕಿಗೆ ಹೇಮಾವತಿ ನಿರ್ವಹಿಸಲು ಮುಖ್ಯ ಕಾರಣ ಯಾರೆಂಬುದು ನಿಮಗೆ ಗೊತ್ತಿದೆಯೇ ? ಸುಮ್ಮನೆ ನಾವು ಮಾಡಿದ್ದು ನಾವು ಮಾಡಿದ್ದು ಎಂದು ಹೇಳುತ್ತೀರಾ ಇದಕ್ಕೆ ಕಾರಣರಾದವರು ನಮ್ಮ ನಾಯಕರಾದ ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ ಎಂಬುದು…

Read More

ಕೆ.ಪಿ.ಟಿ. ಸಿ.ಎಲ್ ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ 20 ರಷ್ಟು ವೇತನ ಪರಿಷ್ಕರಣೆಗೆ ಒಪ್ಪಿದ್ದು, ಇಂದು ಆದೇಶ ಹೊರಡಿಸಲಾಗುವುದು ಎಂದರು. ಸಾರಿಗೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ ಸಾರಿಗೆ ಇಲಾಖೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಈ ಎರಡೂ ಆಜ್ಞೆ ಇಂದು ಹೊರಡಿಸಲಾಗುವುದು ಎಂದರು. ಕಾಡ್ಗಿಚ್ಚು ನಿಯಂತ್ರಣಕ್ಕೆ ಕ್ರಮ: ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಆಗುವ. ಸಾಧ್ಯತೆಯಿರುವೆಡೆಯಲ್ಲಿ ಪೂರ್ವಭಾವಿ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರಸ್ತುತ ಕಾಡ್ಗಿಚ್ಚನ್ನು ನಂದಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…

Read More

ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಎಇಇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಚಿತ್ರದುರ್ಗದ ಹೊಸದುರ್ಗದಲ್ಲಿ ಬೆಸ್ಕಾಂ ಎಎಇ ತಿರುಪತಿ ನಾಯ್ಕ್ ಎಂಬುವವರು ವಿದ್ಯುತ್ ಗುತ್ತಿಗೆದಾರರ ಬಳಿ ಸರ್ವೀಸ್ ಕನೆಕ್ಷನ್ ಗಾಗಿ 20 ಸಾವಿರ ರೂ. ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ ವಾಸುದೇವ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ರಾಜೀನಾಮೆ ನೀಡಿದ್ದು ಇಂದೇ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೋಹನ್ ಲಿಂಬಿಕಾಯಿ ಇಂದು ಬೆಳಗ್ಗೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸಹಾಯಕರ ಮೂಲಕ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ ಲಿಂಬಿಕಾಯಿ, ಇಂದು ಸಂಜೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಬಿಜೆಪಿ ತ್ಯಜಿಸಿ ಕೆಜೆಪಿ ಕಟ್ಟಿದ ವೇಳೆ ಮೊದಲನೆಯದಾಗಿ ರಾಜೀನಾಮೆ ಸಲ್ಲಿಸಿದ್ದು ಮೋಹನ್ ಲಿಂಬಿಕಾಯಿ ಅವರಾಗಿದ್ದರು. ಅಂದು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಎಸ್​ವೈ ಹಿಂದೆ ಸಾಗಿದ್ದರು. ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ನೇಣುಬಿಗಿದುಕೊಂಡು ನಗರಸಭೆ ಸದಸ್ಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ನಗರಸಭೆ ಸದಸ್ಯ ಶಿವರಾಮ ಸಫಲ್ಯ ಆತ್ಮಹತ್ಯೆಗೆ ಶರಣಾದವರು. ಉರಮಾಲ್​ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ವಾರ್ಡ್ ನಂ.1ರ ಸದಸ್ಯರಾಗಿದ್ದ ಶಿವರಾಮ ಸಫಲ್ಯ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಂತರವಷ್ಟೇ ಆತ್ಮಹತ್ಯೆಯ ಹಿಂದಿನ ಕಾರಣ ತಿಳಿದು ಬರಬೇಕಿದೆ. ಸ್ಥಳಕ್ಕೆ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ. ಪುತ್ತೂರು ಟೌನ್ ಪೊಲೀಸರೂ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮಹಾರಾಷ್ಟ್ರದಿಂದ ಬೆಳಗಾವಿ ಗಡಿ ಗ್ರಾಮಗಳಿಗೆ ಷಡ್ಯಂತ್ರದಿಂದ ಯೋಜನೆ ಘೋಷಣೆ ಮಾಡಿದ್ದಾರೆ ಇಷ್ಟಾದ್ರೂ ಸಿಎಂಗೆ ಜವಾಬ್ದಾರಿ ಇಲ್ಲವಾ…? ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತರಾಟೆ ತೆಗೆದುಕೊಂಡರು. ಸಿಎಂ ಬೊಮ್ಮಾಯಿ ಕೇಂದ್ರ ಅಡಿಯಾಳಾಗಿ ಕೆಲಸ ಮಾಡುತ್ತಿದ್ದಾರೆ. ನಾವು ಸ್ವತಂತ್ರ ರಾಜ್ಯವನ್ನ ಒಪ್ಪಿಕೊಂಡಿದ್ದೇವೆ. ಇದರ ಗಾಂಭೀರ್ಯತೆ ಸಿಎಂ ಬೊಮ್ಮಾಯಿ ತಿಳಿದುಕೊಳ್ಳಬೇಕು. ಸಿಎಂ ಆದವರು ಈ ರಾಜ್ಯದ ನೆಲೆ, ಜಲ,ಭಾಷೆ ಗೌರವ ಕಾಪಾಡಬೇಕು. ಮಹಾರಾಷ್ಟ್ರದವರು ಷಡ್ಯಂತ್ರದಿಂದ ಯೋಜನೆ ಘೋಷಿಸಿದ್ದಾರೆ. ಮಹಾರಾಷ್ಟ್ರದವರು ಅನಗತ್ಯವಾಗಿ ಕಾಲು ಕೆರೆಯುತ್ತಿದ್ದಾರೆ. ಇದು ಒಕ್ಕೂಟದ ವ್ಯವಸ್ಥೆಗೆ ಧಕ್ಕೆ. ಕನ್ನಡಿಗರಿಗೆ ಅನ್ಯಾಯ..? ಕೇಂದ್ರದ ಮೇಲೆ ಒತ್ತಡ ಹೇರಲು ಆಗದಿದ್ದರೇ ಸಿಎಂ ಆಗಿರಲು ನಾಲಾಯಕ್ ಎಂದು ಗುಡುಗಿದರು. ಮಾರ್ಚ್ 20 ರಂದು ಬೆಳಗಾವಿಯಲ್ಲಿ ಯುವಕಾಂಗ್ರೆಸ್ ಸಮಾವೇಶ ನಡೆಸುತ್ತೇವೆ. ಯುವಕರನ್ನುದ್ದೇಶೀಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ. ಐತಿಹಾಸಿಕ ರಾಲಿ ಮಾಡಲು ಇಂದು ಸಭೆಯಲ್ಲಿ ತೀರ್ಮಾನಿಸಿದ್ದೇವೆ. 4ರಿಂದ 5 ಲಕ್ಷ ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಚುನಾವಣೆ  ಹಿನ್ನೆಲೆ ಯುವ ಕಾಂಗ್ರೆಸ್ ಸಮಾವೇಶ ಆಯೋಜಿಸಿದ್ದೇವೆ…

Read More

ಮಾರ್ಚ್ 20 ರಂದು ಬೆಳಗಾವಿಯಲ್ಲಿ ಯುವಕ್ರಾಂತಿ ರಾಲಿ ನಡೆಸುತ್ತೇವೆ. ಅಂದು ಯುವಕರಿಗೆ ಯೋಜನೆ ಘೋಷಣೆ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಮಾರ್ಚ್ 20ರ ಯುವಕ್ರಾಂತಿ  ರಾಲಿಯನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಪಾಲ್ಗೊಳ್ಳಲಿದ್ದಾರೆ. ಬೊಮ್ಮಯಿ ಸರ್ಕಾರ ಯುವಕರ ಭವಿಷ್ಯವನ್ನ ಹಾಳು ಮಾಡಿದೆ. ಪಿಎಸ್ ಐ ಹುದ್ದೆ ಸೇರಿದಂತೆ ಸರ್ಕಾರಿ ಹುದ್ದೆಯನ್ನ ಮಾರಾಟ ಮಾಡಿದ್ದಾರೆ. ಕೈಗಾರಿಕೋದ್ಯಮಗಳು ಅನ್ಯರಾಜ್ಯಗಳ ಪಾಲಾಗುತ್ತಿವೆ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ರೋಡ್ ಶೋ ಮಾಡದಿದ್ದರೇ ಒಳ್ಳೆಯದು . ಮೋದಿ ರೋಡ್ ಶೋ ಮಾಡಿದ ದಿನವೇ ಬೆಲೆ ಏರಿಕೆ ಆಗಿದೆ. ಹೀಗಾಗಿ ಮೋದಿ ರೋಡ್ ಶೋ ಮಾಡದಿದ್ದರೇ ಒಳ್ಳೆಯದಾಗುತ್ತದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ವ್ಯಂಗ್ಯವಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಹೆಚ್.ಡಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸಿದರೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಹ ಸ್ಪರ್ಧಿಸಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ನವದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಕಾಂಗ್ರೆಸ್ ಟಿಕೆಟ್ 16 ಆಕಾಂಕ್ಷಿಗಳು ಖರ್ಗೆಗೆ ಮನವಿ ಸಲ್ಲಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಿದರೇ ಡಿಕೆಶಿಯೂ ಸ್ಪರ್ಧಿಸಲಿ. ಡಿಕೆ ಶಿವಕುಮಾರ್ ಸ್ಪರ್ಧಿಸದಿದ್ದರೇ ಮೂಲ ಕಾಂಗ್ರೆಸ್ಸಿಗರಿಗೆ ಆದ್ಯತೆ ನೀಡಿ ಎಂದು ಮಾಜಿ ಶಾಸಕ ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಅಮರಾವತಿ ಚಂದ್ರಶೇಖರ್ ಸತೀಶ್ ಗೌಡ ಸೇರಿ ಹಲವರು ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More