Author: admin

ತುಮಕೂರು:ಎತ್ತಿನಹೊಳೆ ಯೋಜನೆಯ ಮೊದಲ ಹಂತದ ನೀರು ಬರುವ ಜೂನ್ ತಿಂಗಳಿನಲ್ಲಿ ಚಿಕ್ಕನಾಯಕನಹಳ್ಳಿಗೆ ಹಾಗೂ ತಿಪಟೂರು ಕ್ಷೇತ್ರಗಳಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿಕ್ಕನಾಯಕನಹಳ್ಳಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಚಿಕ್ಕನಾಯಕನಹಳ್ಳಿಯಲ್ಲಿ 31500 ರೈತರಿಗೆ ಕಿಸಾನ್ ಸಮ್ಮಾನ್: ನಮ್ಮ ಸರ್ಕಾರ ಮೂರು ವರ್ಷಗಳಲ್ಲಿ ಹಲವಾರುವ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಚಿಕ್ಕನಾಯಕನಹಳ್ಳಿಯಲ್ಲಿ 31500 ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿಕೃಷಿ ಸಮ್ಮಾನ್ ಯೋಜನೆ ಅಡಿಯಲ್ಲಿ ’53 ಲಕ್ಷ ರೈತರಿಗೆ 16000 ಕೋಟಿ ರೂ. ನೀಡಲಾಗಿದೆ. ಚಿಕ್ಕನಾಯಕನಹಳ್ಳಿಯಲ್ಲಿ 31500 ರೈತರಿಗೆ ಇಂದು ಕಿಸಾನ್ ಸಮ್ಮಾನ್ ಯೋಜನೆಯಡಿ 89 ಕೋಟಿ ರೂ. ದೊರೆತಿದೆ. ಪ್ರಧಾನ ಮಂತ್ರಿಕೃಷಿ ಸಿಂಚಯಿ ಯೋಜನೆಯಡಿ 3646 ರೈತರಿಗೆ ಲಾಭ ದೊರೆತಿದೆ. ನಗರಾಭಿವೃದ್ಧಿಯಡಿ ಹುಳಿಯಾರು, ಚಿಕ್ಕನಾಯಕನಹಳ್ಳಿ, ಹುಳಿಯಾರು ಪಟ್ಟಣಕ್ಕೆ ಅಮೃತ ಯೋಜನೆಯಡಿ15 ಕೋಟಿ ರೂವೆಚ್ಚದಲ್ಲಿ 38 ಕಾಮಗಾರಿ ಕೈಗೊಂಡಿದೆ. 176 ಮಹಿಳಾ ಸ್ವಸಹಾಯ ಸಂಘಕ್ಕೆ ರಾಜ್ಯದಲ್ಲಿ 17 ಲಕ್ಷ ರೂ.ಬಿಡುಗಡೆಯಾಗಿದೆ. ಜಲ್ ಜೀವನ್ ಮಿಷನ್…

Read More

ಕೊರಟಗೆರೆ : ಪಟ್ಟಣದ ಪ್ರವಾಸಿ ಮಂದರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಯುವಕರು ಕರ್ನಾಟಕ ರಣಧೀರರ ವೇದಿಕೆಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಸಂಘಟನೆಯ ಕೆಲವೊಂದು ಹೋರಾಟಗಳನ್ನು ಗಮನಿಸಿ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ ಎಂ.ಎನ್.ರವರ ನೇತೃತ್ವದಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ತಿಮ್ಮಪ್ಪ ಗೌಡರವರ ಅಧ್ಯಕ್ಷತೆಯಲ್ಲಿ ಸಂಘಟನೆಗೆ ಸೇರ್ಪಡೆಯಾದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು, ಕಳೆದ ಎರಡು ವರ್ಷಗಳಿಂದ ಕೊರಟಗೆರೆ ತಾಲ್ಲೂಕಿನಲ್ಲಿ  ಸಂಘಟನೆಯು ನಾಡು ನುಡಿ ನೆಲ ಜಲ ಭಾಷೆಯ ವಿಚಾರದಲ್ಲಿ ಹಾಗೂ ತಾಲ್ಲೂಕಿನಲ್ಲಿರುವ ಜ್ವಲಂತ ಸಮಸ್ಯೆಗಳ ಕುರಿತು ಹೋರಾಟ ಮಾಡಿಕೊಂಡು ಬಂದಿದೆ. ಹಿಂದಿ ದಿವಸ್ ವಿರೋಧಿಸಿ ಬೃಹತ್ ಮಟ್ಟದ ಹೋರಾಟವನ್ನು ತಾಲ್ಲೂಕಿನಲ್ಲಿ ಮಾಡಲಾಗಿದೆ ಗ್ರಾಮೀಣ ಭಾಗದ ಬಡ ರೈತರ ಬಗರ್ ಹುಕ್ಕುಂ ಸಾಗುವಳಿ ಜಮೀನಿನ ವಿಚಾರವಾಗಿ ಸಂಘಟನೆಯು ಇಂದಿಗೂ ಸಹ ನಿರಂತರವಾದ ಹೋರಾಟವನ್ನು ಕೈಗೆತ್ತಿಕೊಂಡು ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ ಎಂ ಎನ್ ರವರ ಮತ್ತು ತಾಲ್ಲೂಕು…

Read More

ಸಲ್ಮಾನ್ ಯೂಸುಫ್ ಇಂದು ಬೆಳಿಗ್ಗೆ ತಮ್ಮ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಅದರಲ್ಲಿ ಕನ್ನಡದಲ್ಲಿ ಮಾತನಾಡದ್ದಕ್ಕೆ ವಿಮಾನ ನಿಲ್ದಾಣದಲ್ಲಿ ತನಗೆ ಹೇಗೆ ಕಿರುಕುಳ ನೀಡಲಾಯಿತು ಎಂಬುದನ್ನು ವಿವರಿಸಿದ್ದಾರೆ. ಕನ್ನಡದಲ್ಲಿ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಅಧಿಕಾರಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಲ್ಮಾನ್ ಲೈವ್ ಬಂದು ತಮ್ಮ ಅನುಭವವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ನಾನು ದುಬೈಗೆ ತೆರಳಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ನನಗೆ ಭಾಷೆ ಅರ್ಥವಾಗುತ್ತದೆ. ಆದರೆ ಚೆನ್ನಾಗಿ ಮಾತನಾಡಲು ಬರುವುದಿಲ್ಲ. ಆದರೂ ಕನ್ನಡದಲ್ಲೇ ಹೇಳಲು ಪ್ರಯತ್ನಿಸಿದೆ. ಆದರೂ ಅಧಿಕಾರಿ ಪಾಸ್ಪೋರ್ಟ್ ತೋರಿಸಿ ತಂದೆ ತಾಯಿಯ ಹೆಸರು, ಹುಟ್ಟಿದ ಊರು ಹೇಳಿ ನೀವು ಮತ್ತು ನಿಮ್ಮ ತಂದೆ ಬೆಂಗಳೂರಿನಲ್ಲಿ ಹುಟ್ಟಿದ್ದು ನಿಮಗೆ ಕನ್ನಡ ಭಾಷೆ ಬರುವುದಿಲ್ಲವೇ? ಅಧಿಕಾರಿಯ ಪ್ರಶ್ನೆಗೆ ಉತ್ತರಿಸುವಾಗ ನನಗೆ ಕನ್ನಡ ಬರುವುದಿಲ್ಲ ಎಂದು ಸಲ್ಮಾನ್ ವಿಡಿಯೋದಲ್ಲಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಕೌಟುಂಬಿಕ ಕಲಹ ಹಿನ್ನೆಲೆ ತಂದೆ ನೇಣಿಗೆ ಶರಣಾಗಿದ್ದು ತಂದೆ ಸಾವಿನಿಂದ ಮನನೊಂದ ಮಗನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಹೆಚ್.ಡಿ.ಕೋಟೆ ತಾಲೂಕಿನ ಎನ್.ಬೇಗೂರು ಸಮೀಪದ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ. ನಾಗೇಗೌಡ ಮತ್ತು ಮಧು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರು.ಕೌಟುಂಬಿಕ ಕಲಹದಿಂದ ಬೇಸತ್ತ ತಂದೆ ನಾಗೇಗೌಡ(55) ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ಬೇಳೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದರು. ತಂದೆ ಸಾವಿನ ಸುದ್ದಿ ತಿಳಿದು ಮನನೊಂದ ಮಗ ಮಧು (24) ತಡರಾತ್ರಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಒಂದೇ ಕುಟುಂಬದ ತಂದೆ ಮಗನ ಎರಡು ಮೃತದೇಹಗಳ ಅಂತ್ಯ ಸಂಸ್ಕಾರವನ್ನ ಗ್ರಾಮದಲ್ಲಿ ಏಕಕಾಲದಲ್ಲಿ ನೆರವೇರಿಸಲಾಯಿತು. ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಅರಸೀಕೆರೆ: ಕಳೆದ ಎರಡು ಅವಧಿಯಲ್ಲಿ ರಾಜ್ಯವನ್ನಾಳಿದ ಕಾಂಗ್ರೆಸ್‌ ಹಾಗೂ ಬಿಜೆಪಿ ಸರ್ಕಾರಗಳು ಅಭಿವೃದ್ಧಿ ಹೆಸರಿನಲ್ಲಿ 5.65 ಲಕ್ಷ ಕೋಟಿ ರೂ.ಸಾಲ ಮಾಡಿ, ಅದನ್ನು ಜನರ ತಲೆ ಮೇಲೆ ಹೊರೆಸಿವೆ. ಇದು ರಾಷ್ಟ್ರೀಯ ಪಕ್ಷಗಳ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮತ್ತು ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಅಭಿವೃದ್ಧಿ ಹೆಸರಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಶೇ.60 ಸರ್ಕಾರದ ಹಣ ಅರ್ಹ ಫ‌ಲಾನುಭವಿಗಳಿಗೆ ಸೇರದೆ ಮಧ್ಯವರ್ತಿ ಪಾಲಾಗಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕಾಗಿ ಈ ಸರ್ಕಾರಗಳು 5.65 ಲಕ್ಷ ಕೋಟಿ ರೂ. ಹಣವನ್ನು ಸಾಲ ತಂದು, ರಾಜ್ಯದ ಜನತೆ ತಲೆ ಮೇಲೆ ಹೊರೆಸಿದ್ದಾರೆ ಎಂದು ಹೇಳಿದರು. ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿ, ನನಗೆ ಕೊಟ್ಟಿದ್ದು, ಕಾಲು ಮುರಿದ ಕುದುರೆ, ಅದನ್ನು ನಾನು ಏರಿ ಧೀರನೂ, ಶೂರನೂ ಆಗಲು ಹೇಗೆ ಸಾಧ್ಯ? ಅವರನ್ನೇ ಕೇಳಿ ಎಂದು ಹರಿಹಾಯ್ದರು. ಐಟಿ, ಇಡಿ ದಾಳಿಗೆ…

Read More

ಬೆಳಗಾವಿ: ಯುವಕರಿಗೆ ಸ್ಪೂರ್ತಿ ನೀಡಲು ಮಾ.20 ರಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಲಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು. ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿಪಿಎಡ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದೇವೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದರು. ರಾಹುಲ್ ಗಾಂಧಿ ಅವರು ನಡೆಸಲಿರುವ ಸಮಾವೇಶದಲ್ಲಿ ಸುಮಾರು 10 ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದಾರೆ. ರೋಡ್ ಶೋ ನಡೆಸುವುದು ಬಿಡುವುದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದರು. ರಾಜ್ಯದಲ್ಲಿ 40% ಕಮಿಷನ್ ಸರಕಾರದ ವಿರುದ್ಧ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ.ಬಿಜೆಪಿ ಸರಕಾರಕ್ಕೆ ಬದ್ಧತೆ ಇಲ್ಲ. ಇದರ ಕಾರ್ಯಕ್ರಮ ಭ್ರಷ್ಟಾಚಾರ. ಅಯೋಗ್ಯದ ಸರಕಾರ ವಿಜಯ ಸಂಕಲ್ಪ…

Read More

ಸಚಿವ ಸೋಮಣ್ಣ ಅಸಮಾಧಾನ ವಿಚಾರ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ, ಯಾವುದೇ ಕಾರಣಕ್ಕೂ ಸಚಿವ ಸೋಮಣ್ಣ ಪಕ್ಷ ಬಿಡುವುದಿಲ್ಲ. ಸಚಿವಸೋಮಣ್ಣ ಆ ಭಾಗದಲ್ಲಿ ಒಳ್ಳೆ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ಗೌರವವಿದೆ. ಹೀಗಾಗಿ ಸೋಮಣ್ಣ ನಮ್ಮ ಜೊತೆ ಇರ್ತಾರೆ. ಸೋಮಣ್ಣ ಸಹಕಾರದಿಂದಲೇ ನಾವು ಅಧಿಕಾರಕ್ಕೆ ಬಂದಿದ್ದು ಎಂದರು. ಕಾಂಗ್ರೆಸ್ ಸರ್ಕಾರವಿದ್ದಾಗ ತುರ್ತು ಪರಿಸ್ಥಿತಿ ಜಾರಿಗೆ ತಂದರು. ಅಟಲ್ ಬಿಹಾರಿ ವಾಜಿಪೇಯಿ ಸೇರಿ ಅನೇಕರನ್ನ ಆಗ ಬಂಧಿಸಿದ್ದರು. ಇವತ್ತು ಅದೇ ಕಾಂಗ್ರೆಸ್ ನವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ. ಮೋದಿ ಅಮಿತ್ ಶಾರನ್ನ ಎದುರಿಸುವಂತಹ ನಾಯಕರು ಯಾರು ಇಲ್ಲ. ಕಾಂಗ್ರೆಸ್ ನಲ್ಲಿ ಯಾರು ಇಲ್ಲ ಅನ್ನೋದು ಸಾಮಾನ್ಯ ಜನರ ಭಾವನೆ. ಹೀಗಾಗಿ ರಾಜ್ಯದಲ್ಲಿ 140ಕ್ಕೂ ಹೆಚ್ಚು ಸೀಟ್ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಬಿಎಸ್ ವೈ ತಿಳಿಸಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಹುಲ್ ಗಾಂಧಿ ಹೆಚ್ಚು ಹೆಚ್ಚು ಪ್ರಚಾರ ಮಾಡಿದ್ದಷ್ಟು ನಾವು ಹೆಚ್ಚು ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೇವೆ. ನಾವು ಹೆಚ್ಚು ಸ್ಥಾನಗಳನ್ನ…

Read More

ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಆರ್.ಶಂಕರ್ ಮನೆ ಮೇಲಿನ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ. ತನಿಖಾ ಸಂಸ್ಥೆಗಳು ಎಷ್ಟು ಮುಕ್ತವಾಗಿವೆ ಅನ್ನೋದಕ್ಕೆ ಇದು ಸಾಕ್ಷಿ. ಯಾರೇ ತಪ್ಪು ಮಾಡಿದ್ರೂ ಸರ್ಕಾರ ಶಿಕ್ಷಿಸುವ ಕೆಲಸ ಮಾಡುತ್ತೆ. ಆರ್ .ಶಂಕರ್ ಕೇಸ್ ನಲ್ಲೂ ತನಿಖಾ ಸಂಸ್ಥೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಹಾವೇರಿಯ ಬೀರೇಶ್ವರ ನಗರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಆರ್‌.ಶಂಕರ್‌ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಶಂಕರ್‌ ಅವರ ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲು ಸಂಗ್ರಹಿಸಿಟ್ಟಿದ್ದ ಶಂಕರ್‌ ಭಾವಚಿತ್ರ ಇರುವ ಸೀರೆ ಬಾಕ್ಸ್,‌ ತಟ್ಟೆ– ಲೋಟ ಹಾಗೂ ಎಲ್‌ ಕೆಜಿಯಿಂದ ಪದವಿ ಕಾಲೇಜುಗಳವರೆಗೆ ಹಂಚಲು ತಂದಿರುವ ಸ್ಕೂಲ್‌ ಬ್ಯಾಗ್‌ಗಳನ್ನು ವಶಪಡಿಸಿಕೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲ. ಬಿಜೆಪಿಗೆ ಮುಜುಗರ ತರುವ ಕೆಲಸ ಮಾಡುವುದಿಲ್ಲ ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾಗಿ ವಾಪಸ್ ಬೆಂಗಳೂರಿಗೆ ಹೋಗುತ್ತೇನೆ. ನನ್ನ ಇತಿಮಿತಿಯಲ್ಲಿ ನಾನು ಜೀವನ ಮಾಡುತ್ತಿದ್ದೇನೆ. ನನ್ನಿಂದ ಬಿಜೆಪಿಗೆ ಅಪಚಾರವಾಗಬಾರದು. ನಾನು ಬಿಜೆಪಿ ಬಿಡಲ್ಲ. ಪಕ್ಷದ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಇದೇ ವೇಳೆ ವಿಜಯೇಂದ್ರ ವಿರುದ್ದ ಅಸಮಾಧಾನ ಕುರಿತು ಪತ್ರರ್ಕತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಸೋಮಣ್ಣ, ವಿಜಯೇಂದ್ರ ಯಾರು..? ಅವರಿಗೂ ನನಗೂ ಏನು ಸಂಬಂಧ. ಬಿಎಸ್ ವೈ ಪುತ್ರ ವಿಜಯೇಂದ್ರ ಗೆ 40 ವರ್ಷ ನನಗೆ 70 ವರ್ಷ ವಿಜಯೇಂದ್ರ ಬಗ್ಗೆ ನನ್ನ ಪುತ್ರನಿಗೆ ಅಸಮಾಧಾನವಿದ್ದರೇ ಅವನನ್ನೇ ಕೇಳಿ ಎಂದು ವಿ.ಸೋಮಣ್ಣ ಹೇಳಿದರು  . ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್…

Read More

2021ನೇ ಸಾಲಿನ ಹಿಂಬಾಕಿ ಶಿಷ್ಯ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎಸ್.ಸಿ ಮತ್ತು ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳು ಇಂದು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು. ನಗರದ ಕ್ರಾಫರ್ಡ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದ್ದು, ಮೈಸೂರು ವಿಶ್ವ ವಿದ್ಯಾನಿಲಯದ ವಿರುದ್ಧ ಪ್ರತಿಭಟನಾನಿರತ ಸಂಶೋಧನಾ ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 46 ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಿಲ್ಲ. ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡಬೇಕಿರುವ ಶಿಷ್ಯ ವೇತನವನ್ನ ಇತರೆ ಕಾಮಗಾರಿಗಳಿಗೆ ಬಳಕೆ ಮಾಡಿದ್ದಾರೆ. ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುವ ಶಿಷ್ಯ ವೇತನದಲ್ಲೂ ಅಕ್ರಮ ನಡೆದಿದೆ. ಕೂಡಲೇ ಎಸ್ಸಿ ಎಸ್ಟಿ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಜಾರಿ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟವನ್ನ ತೀವ್ರಗೊಳಿಸುತ್ತೇವೆ ಎಂದು ಸಂಶೋಧನಾ ವಿದ್ಯಾರ್ಥಿ ಕಲ್ಲಳ್ಳಿ ಕುಮಾರ್ ಎಚ್ಚರಿಕೆ ನೀಡಿದರು. ಈ ವೇಳೆ ಪ್ರತಿಭಟನೆಯಲ್ಲಿ ಕಿರಣ್, ನಟರಾಜು, ಸೋಮಶೇಖರ್, ಅಶ್ವಿನಿ, ಪ್ರಮೀಳಾ, ಭವ್ಯ, ಕುಶಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More