Author: admin

ಮುಂದಿನ ಮೂರು ತಿಂಗಳೊಳಗಾಗಿ 108 ಆರೋಗ್ಯ ಸೇವೆಯನ್ನು ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಅಗತ್ಯವಿರುವ ಕ್ರಮಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಮಾಗಡಿ ಆರೋಗ್ಯಸೌಧದಲ್ಲಿ ನಡೆದ 108 ಆರೋಗ್ಯ ಸೇವೆಯ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. 90 ದಿನಗಳೊಳಗೆ ಆ್ಯಂಬುಲೆನ್ಸ್ ಸೇವೆಯಲ್ಲಿ ಉತ್ತಮ ಫಲಿತಾಂಶ ಬೇಕು. ಸಾರ್ವಜನಿಕರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಾಹನ ಸೇವೆ ಪಡೆಯಲು ಪರಿತಪಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ರಾಜ್ಯ ಸರ್ಕಾರ ಮೂರು ನಿಗಮಗಳಿಗೆ ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದಂತ ಹೆಚ್ ಕೆ ಪಾಟೀಲ್ ಅವರನ್ನು ಪ್ರವಾಸೋದ್ಯಮ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ನಿಗಮ, ಸಂಸ್ಥೆ, ಪ್ರಾಧಿಕಾರಗಳ ಮೂರಕ್ಕೆ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಸಚಿವ ಹೆಚ್ ಕೆ ಪಾಟೀಲ್ ಅವರನ್ನು ಬೆಂಗಳೂರಿನ ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಹಾಗೂ ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಹೆಚ್ಚಿನ ಜನರಿಗೆ ತಲುಪಬೇಕು ಎನ್ನುವ ಸದುದ್ದೇಶದಿಂದ ಕೆಲವು ಮಾರ್ಪಾಡುಗಳನ್ನು ಮಾಡಲಾಗುತ್ತಿದೆ. ಹಾಗಾಗಿ ಅರ್ಜಿ ಸಲ್ಲಿಕೆ ಸ್ವಲ್ಪ ವಿಳಂಬವಾಗತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮೀ ಯೋಜನೆ ಬಹಳಷ್ಟು ಜನರಿಗೆ ತಲುಪಬೇಕು ಹಾಗೂ ಸರಳವಾಗಿ ಸಿಗಬೇಕು ಎಂಬ ಕಾರಣಕ್ಕೆ ಯೋಜನೆಯಲ್ಲಿ ಹಲವು ಬದಲಾವಣೆಯನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚಿಸಿದ್ದೇವೆ. ಇದರಿಂದಾಗಿ ಸ್ವಲ್ಪ ಸಮಯ ಬೇಕಾಗಿದೆಯೇ ವಿನಃ ಬೇರೇನೂ ಸಮಸ್ಯೆ ಇಲ್ಲ ಎಂದು ಹೇಳಿದರು. ಪ್ರತ್ಯೇಕ ಆ್ಯಪ್ ಕೂಡ ಸಿದ್ಧಪಡಿಸಲು ಸೂಚಿಸಲಾಗಿದೆ. ಅದಾದಲ್ಲಿ ವೇಗವಾಗಿ ಅರ್ಜಿ ಸ್ವೀಕಾರ ಸಾಧ್ಯವಾಗುತ್ತದೆ. ಸಾಧ್ಯವಾದಷ್ಟು ಹೆಚ್ಚಿನ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವುದು ಸರಕಾರದ ಉದ್ದೇಶವಾಗಿದೆ. ಈ ಎಲ್ಲಾ ಕಾರಣದಿಂದಾಗಿ ಯೋಜನೆಗೆ ಅರ್ಜಿ ಸಲ್ಲಿಕೆ ಕೊಂಚ ವಿಳಂಬವಾಗುತ್ತಿದೆ. ಆಗಸ್ಟ್ 17 ಅಥವಾ 18ರಿಂದ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತದೆ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್‌ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ. ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದ್ದಾರೆ. ಏಮ್ಸ್‌ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಕೋರಿದ್ದಾರೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ಸ್. ಭೋಸರಾಜು ಅವರು ರಾಯಚೂರಿನಲ್ಲಿ ಏಮ್ಸ್‌…

Read More

ತುಮಕೂರು: ಉಚಿತ ಬಸ್ ಪ್ರಯಾಣದ ಎಫೆಕ್ಟ್., ಪಾವಗಡ ಶನಿಮಹಾತ್ಮ ದೇವಸ್ಥಾನಕ್ಕೆ ಜನ ಸಾಗರವೇ ಹರಿದು ಬಂದಿದೆ. ರಾಜ್ಯದ ಮೂಲೆಯಿಂದ ಪಾವಗಡದ ಶನಿಮಹಾತ್ಮನ ದರ್ಶನಕ್ಕೆ ಭಕ್ತರು ಬಂದಿದ್ದರು. ದೇವರ ದರ್ಶನಕ್ಕೆ ಬಂದವರಲ್ಲಿ ಮಹಿಳೇಯರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಪ್ರಯಾಣಿಕರಿಂದ  ಪಾವಗಡ ಬಸ್ ನಿಲ್ದಾಣ ತುಂಬಿ ತುಳುಕಿತ್ತು. ಬೆಳಗ್ಗೆಯಿಂದಲ್ಲೇ ಎಲ್ಲಾ ಬಸ್ ಗಳು ಪುಲ್ ರಷ್ ಆಗಿದ್ದವು. ಇನ್ನೊಂದೆಡೆ ಬಸ್ ಗಳಿಗಾಗಿ ವಿದ್ಯಾರ್ಥಿಗಳು ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು, ಚಿತ್ರದುರ್ಗ ಬಳ್ಳಾರಿ ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪಾವಗಡಕ್ಕೆ ಮಹಿಳಾ ಪ್ರಯಾಣಿಕರು ಆಗಮಿಸಿದ್ದರು. ಪಾವಗಡದಿಂದ ದಾವಣಗೆರೆ- ಚಳ್ಳಕೆರೆ ಚಿತ್ರದುರ್ಗ ಮಾರ್ಗದಲ್ಲಿ ಬಸ್ಗಳ ಸಂಖ್ಯೆ ವಿರಳವಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುರುವೇಕೆರೆ : ಬೊಗಸೆ ಯಲ್ಲಿ ಸಮುದ್ರದ ನೀರಿನ ಮಾದರಿ ಕಾಣಬಹುದು, ಸಮುದ್ರ ಕಾಣುವುದಿಲ್ಲ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಂದು ವಿಶಾಲವಾದ ಸಮುದ್ರ. ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿ ಹೆಗ್ಗಡವರ ಚಿಂತನೆಯಿಂದ ರೂಪುಗೊಂಡ ಒಂದೊಂದು ಯೋಜನೆಗಳು ವಿಶಾಲವಾದ ಸಮುದ್ರದ ನೀರನ್ನು ಬೊಗಸೆಯಲ್ಲಿ ಎತ್ತಿದಂತೆ.., ಹಳ್ಳಿಯ ಮನಸ್ಸುಗಳನ್ನು ಹತ್ತಿರದಿಂದ ಆಲಿಸಿ ಅವುಗಳಿಗೆ ಜೀವ ನೀಡಲಾಗಿದೆ. ಜ್ಞಾನವಿಕಾಸ ಕಾರ್ಯಕ್ರಮವು ಗ್ರಾಮೀಣ ಮಹಿಳೆಯರ ಪ್ರತಿಭೆಗಳ ಅನಾವರಣಕ್ಕೆ ಇರುವ ಒಂದು ಅಭೂತಪೂರ್ವ ವೇದಿಕೆ ಎಂದು ಜಿಲ್ಲಾ ನಿರ್ದೇಶಕಿ ಜಯಶೀಲ ತಿಳಿಸಿದರು. ಇವರು ತುರುವೇಕೆರೆ ಗ್ರಾಮಾಂತರ ಯೋಜನಾ ಕಚೇರಿಯಲ್ಲಿ ನಡೆದ ಜ್ಞಾನವಿಕಾಸ ಸೇವಾ ಪ್ರತಿನಿಧಿಗಳ ವಾರ್ಷಿಕ ಕ್ರಿಯಾ ಯೋಜನೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸಭೆಯಲ್ಲಿ ಬೆಂಗಳೂರು ಪ್ರಾದೇಶಿಕ ಕಚೇರಿಯ ಜ್ಞಾನವಿಕಾಸ ಯೋಜನಾಧಿಕಾರಿ ಸಂಧ್ಯಾ ಶೆಟ್ಟಿ ಮಾತನಾಡಿ ಯೋಜನೆಯ ಕಾರ್ಯಕರ್ತರು ಜ್ಞಾನವನ್ನು ಪಡೆದುಕೊಳ್ಳುವಲ್ಲಿ ಸದಾ ಹಕ್ಕಿಯಂತೆ ಹೆಕ್ಕಿ ತಿನ್ನುವವರಾಗಬೇಕು ಎಂದು ಕ್ರಿಯಾ ಯೋಜನೆಯ ಸಮರ್ಪಕ ಅನುಷ್ಠಾನದ ಕುರಿತು ಮಾಹಿತಿ ನೀಡಿದರು. ಈ ಸಭೆಯಲ್ಲಿ ಕ್ಷೇತ್ರ ಯೋಜನಾಧಿಕಾರಿಗಳಾದ ಅನಿತಾ ಶೆಟ್ಟಿ, ಯಶೋಧರ್ , ಜಿಲ್ಲಾ…

Read More

ತುರುವೇಕೆರೆ: ಗೋಣಿ ತುಮಕೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ನಾಗರತ್ನ ರಂಗಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ . ಈ ಹಿಂದಿನ ಅಧ್ಯಕ್ಷರಾದ ಜಯಲಕ್ಷ್ಮಮ್ಮನವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. 14 ಜನ ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ನಾಗರತ್ನ ರಂಗಸ್ವಾಮಿಯವರು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆಯ ಕೊನೆಯವರೆಗೂ ಯಾರೊಬ್ಬರೂ ಸಹ ನಾಮಪತ್ರ ಸಲ್ಲಿಸದ ಕಾರಣ , ಚುನಾವಣಾ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ತಾಲ್ಲೂಕಿನ ತಹಶೀಲ್ದಾರ್ ವೈ.ಎಂ.ರೇಣು ಕುಮಾರ್ ರವರು ನಾಗರತ್ನ ರಂಗಸ್ವಾಮಿ ರವರನ್ನು ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು. ಘೋಷಣೆ ಮಾಡಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಸಂಭ್ರಮ ಹಂಚಿಕೊಂಡರು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷ ಜಯಲಕ್ಷ್ಮಮ್ಮ ಉಪಾಧ್ಯಕ್ಷ ಲಕ್ಷ್ಮಮ್ಮ ಹಾಗೂ ಗುತ್ತಿಗೆದಾರ ತ್ಯಾಗರಾಜು ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು, ಜೂನ್ 17:  ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದ್ದು,ತೆಲಂಗಾಣದ ಮುಖ್ಯಮಂತ್ರಿಗಳೊಂದಿಗೆ  ಖುದ್ದಾಗಿ ಮಾತನಾಡಿದ್ದು, ಅಲ್ಲಿ  ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದರು. ಆಂಧ್ರಪ್ರದೇಶದವರೊಂದಿಗೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು. ರಾಜ್ಯದಲ್ಲಿಯೇ ಅಕ್ಕಿ ಲಭ್ಯವಿದೆ. ಕಮಿಷನ್ ಆಮಿಷಕ್ಕೆ ಹೊರರಾಜ್ಯಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ ಎಂದು  ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿಯೇ ದೊರೆಯುವುದಾದರೆ ಕೊಡಿಸಲಿ ಎಂದು ಅವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಆರ್ ಆರ್ ನಗರದ 118 ಕೋಟಿ ನಕಲಿ ಬಿಲ್ ಪಾವತಿ ಹಗರಣದಲ್ಲಿ ಶಾಸಕ ಮುನಿರತ್ನ ರವರ ಪಾತ್ರದ ಬಗ್ಗೆ ತನಿಖೆ ನಡೆಸಲು ಕೂಡಲೇ ಶಾಸಕರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೋಹನ್ ದಾಸರಿ 2008 ರಿಂದ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮುನಿರತ್ನ ಇಷ್ಟೆಲ್ಲ ಕೋಟ್ಯಾಂತರ ರೂಪಾಯಿಗಳ ಬಾನಗಡಿಯ ಹಿಂದೆ ನೇರ ಪಾತ್ರವಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಶಾಸಕರ ನೇರ ಹಸ್ತಕ್ಷೇಪವಿಲ್ಲದೆ ಕೇವಲ ಅಧಿಕಾರಿಗಳು ಮಾತ್ರ ಇಷ್ಟೆಲ್ಲ ಹಗರಣಗಳು ಮಾಡಲು ಸಾಧ್ಯವಿಲ್ಲ. ಈ ಹಿಂದೆ ಲೋಕಾಯುಕ್ತ ವರದಿಯಲ್ಲಿ ಶಾಸಕ ಮುನಿರತ್ನ ಹೆಸರು ಕೈ ಬಿಟ್ಟಿರುವುದರ ಹಿಂದೆ ಸಹ ಈ ಹಿಂದಿನ ಬಿಜೆಪಿ ಸರ್ಕಾರದ ನೇರ ಷಡ್ಯಂತರವಿತ್ತು. ಈ ಹಗರಣದ ಹಿಂದೆ ಮುನಿರತ್ನ ಕೈವಾಡವಿದೆಯೆಂದು ಇವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಈ ಹಿಂದೆ ಆಮ್ ಆದ್ಮಿ ಪಕ್ಷವು ಒತ್ತಾಯಿಸಿತ್ತು. ನೂತನ ಕಾಂಗ್ರೆಸ್ ಸರ್ಕಾರವು ಕೇವಲ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಂಡು ಪ್ರಕರಣವನ್ನು ತಿಪ್ಪೆ…

Read More

ಸರ್ಕಾರಿ ನೌಕರರ ಸಾಮಾನ್ಯವರ್ಗಾವಣೆ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ರಾಜ್ಯಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಈ ಮುಂಚೆ 2023-24ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗಳನ್ನು ಜೂನ್ 15ರ ವರೆಗೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು. ಇದೀಗ ಈ ಅವಧಿಯನ್ನು ಜೂನ್ ಅಂತ್ಯದವರೆಗೂ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಸಾರ್ವತ್ರೀಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸುವ ಅವಶ್ಯಕತೆಯನ್ನು ಮನಗಂಡು ಸರ್ಕಾರವು ಈ ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More