Author: admin

ತುಮಕೂರು:  ರಸ್ತೆ ಬದಿಯಲ್ಲಿ ಕೊರೆಯಲಾಗಿದ್ದ ಹೊಂಡಕ್ಕೆ ಕಾರೊಂದು ಬಿದ್ದ ಘಟನೆ ತುಮಕೂರಿನ NH 4 ಪೂನಾ — ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ. ಪೂನಾ — ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಸುಮಾರು 6ರಿಂದ 8 ಅಡಿ ಉದ್ದದ ಗುಂಡಿಯನ್ನು ತೆಗೆದು ಹಾಗೆಯೇ ಬಿಡಲಾಗಿದ್ದು, ಈ ಗುಂಡಿಗೆ ಕಾರು ಬಿದ್ದು ಮಗುಚಿ ಬಿದ್ದಿದೆ. ಅಂತರಸನಹಳ್ಳಿ ಬೈಪಾಸ್ ಬಳಿಯಲ್ಲೇ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾರ್ವಜನಿಕರಿಂದ ಆಕ್ರೋಶ: ಪೂನಾ — ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಂತರಸನಹಳ್ಳಿ ಬೈಪಾಸ್ ಬಳಿಯಲ್ಲಿ ರಸ್ತೆಯ ಎಡಬಾಗದಲ್ಲಿ  ಸುಮಾರು 6 ರಿಂದ 8 ಅಡಿ ಉದ್ದ ಗುಂಡಿ ತೆಗೆದು ಹಾಗೆ ಬಿಟ್ಟಿರುತ್ತಾರೆ ಇಂತ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಬಲ್ ಅಳವಡಿಕೆ ಹಾಗೂ ಮತ್ತಿತರ ಕಾಮಕಾರಿ ನಡೆಸುವವರು ರಸ್ತೆ ಬದಿಯಲ್ಲಿ ಗುಂಡಿ ತೋಡಿಟ್ಟು  ಸಾರ್ವಜನಿಕರಿಗೆ ಅಪಾಯವನ್ನುಂಟು ಮಾಡುತ್ತಿದ್ದಾರೆ. ಈ ಒಂದು ಪ್ರದೇಶ ಮಾತ್ರವಲ್ಲದೇ ಹಲವು…

Read More

ಕೊರಟಗೆರೆ : ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿಯ ಸರ್ಕಾರಿ ಹಳ್ಳದಲ್ಲಿ ಅಕ್ರಮವಾಗಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ 15 ಜನ ಆರೋಪಿಗಳನ್ನು ಕೊರಟಗೆರೆ ಪೊಲೀಸರ ತಂಡ ಬಂಧಿಸಿ ಅವರಿಂದ 4.15 ಲಕ್ಷ ರೂ ನಗದು, 3 ಕಾರು ಮತ್ತು 15 ಫೋನ್ ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಹೊಳವನಹಳ್ಳಿ ಹೋಬಳಿಯ ಅರಸಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಕ್ಕಿಪಿಕ್ಕಿ ಕಾಲೋನಿಯ ಸರ್ಕಾರಿ ಹಳ್ಳದಲ್ಲಿ ಅಕ್ರಮ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬೆಂಗಳೂರು, ಮೈಸೂರು,ಮಂಡ್ಯ ಮತ್ತು ಗೌರಿಬಿದನೂರು ಮೂಲದ 15 ಜನ ಇಸ್ಪೀಟ್ ಆಟಗಾರರ ಮೇಲೆ ಕೊರಟಗೆರೆ ಪಿಎಸ್ಐ ಚೇತನ್ ಗೌಡ ನೇತೃತ್ವದ ತಂಡ ದಾಳಿ ನಡೆಸಿದೆ. ಇವರ ವಿರುದ್ಧ ಪ್ರಕರಣ ದಾಖಲಾಗಿದೆ, ಮಧುಗಿರಿ ಡಿವೈಎಸ್ಪಿ ವೆಂಕಟೇಶ್ ನಾಯ್ಡು ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಐ ಸುರೇಶ್ ಮತ್ತು ಪಿಎಸ್ಐ ಚೇತನ್ ಗೌಡ ನೇತೃತ್ವದಲ್ಲಿ ದಾಳಿ ನಡೆದಿದೆ.. ಸಿಬ್ಬಂದಿಗಳಾದ ದೊಡ್ಡಲಿಂಗಯ್ಯ,ದಯಾನಂದ, ಮಲ್ಲೇಶ್, ರಾಘವೇಂದ್ರ, ರವಿಚಂದ್ರನ್, ಗಣೇಶ್, ಧರ್ಮಪಾಲ್ ನಾಯಕ, ದಿನೇಶ್, ಮಧು, ನಟರಾಜ್, ಪ್ರಕಾಶ್…

Read More

ತುಮಕೂರು: ಚಿಕ್ಕಪ್ಪನೇ 13 ವರ್ಷ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ  ಸಂಬಂಧಿಸಿದಂತೆ , ಅಪರಾಧಿಗೆ ಜಿಲ್ಲಾ ಸತ್ರ ನ್ಯಾಯಾಲಯ(FTSC) ಪೋಕ್ಸೋ ನ್ಯಾಯಾಲಯವು 30 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಹೆಬ್ಬೂರು ಹೋಬಳಿ ಮೇಣಸಂದ್ರ ಗ್ರಾಮದ ನೊಂದ 13 ವರ್ಷದ ಬಾಲಕಿಗೆ ಸಂಬಂಧದಲ್ಲಿ ಚಿಕ್ಕಪ್ಪನಾಗಿರುವ ರಾಕೇಶ್ ಅಲಿಯಾಸ್ ಧನಂಜಯ ಎಂಬಾತ, ಬಾಲಕಿಯ ಮನೆಗೆ ಆಗಾಗ ಬಂದು ಹೋಗುತ್ತಿದ್ದ. ಈ ನಡುವೆ ನೊಂದ ಬಾಲಕಿಯನ್ನು ಲೈಂಗಿಕ ಉದ್ದೇಶದಿಂದ ಮೈ ಮುಟ್ಟಿ, ನಾನು ಹೇಳಿದ ಹಾಗೆ ಕೇಳಬೇಕು. ಇಲ್ಲವಾದರೆ, ನಿನ್ನ ತಂದೆ ತಾಯಿಯನ್ನು ಸಾಯಿಸುತ್ತೇನೆ ಎಂದು ಬೆದರಿಸಿ, ಬಾಲಕಿಯನ್ನು ಮಾವಿನ ತೋಪಿನ ಬಳಿಯ ವ್ಯಕ್ತಿಯೊಬ್ಬರ ಜಮೀನಿಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಲೈಂಗಿಕ ಕಿರುಕುಳದ ವೇಳೆ ಬಾಲಕಿಯ ನಗ್ನ ಚಿತ್ರವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಬಳಿಕ ಬಾಲಕಿಯ ಚಿನ್ನದ ಒಡವೆ ಪಡೆದುಕೊಂಡು, ಆಕೆಯನ್ನು ಹೆದರಿಸಿ ಆಕೆಯ ಮೇಲೆ ಲೈಂಗಿಕ…

Read More

ತುಮಕೂರು: ಗೋಕುಲ ಗೋಶಾಲೆಯ ರಾಸುಗಳ ಬಗ್ಗೆ ನಮ್ಮತುಮಕೂರು ವರದಿಗೆ ಸ್ಪಂದಿಸಿದ ಕಂದಾಯ ಮತ್ತು ಪಶು ಇಲಾಖೆ, ತಕ್ಷಣದಲ್ಲೇ ಕ್ರಮಕೈಗೊಂಡಿದೆ. ಗೋಕುಲ ಗೋಶಾಲೆಯ ರಾಸುಗಳ ಸಾವಿನ ಬಗ್ಗೆ ನಮ್ಮ ತುಮಕೂರು ವಾಹಿನಿ  ಸವಿವರವಾದ ವರದಿ ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ಗೋಮುಖ ಗೋಶಾಲೆಯಿಂದ ಮಧುಗಿರಿ ತಾಲೂಕಿನ ಸುರಭಿ ಗೋಶಾಲೆಗೆ ಗೋವುಗಳನ್ನು ರವಾನಿಸಲಾಗಿದೆ. ಪಶು ಇಲಾಖೆಯ ಉಪ ನಿರ್ದೇಶಕ, ಕೊರಟಗೆರೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ  ಸ್ಥಳದಲ್ಲೇ ಮೊಕ್ಕಾಂ ಹೂಡಿ ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಕೊರಟಗೆರೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ   ನೇತೃತ್ವದ ತಂಡ,  ಉಪ ನಿರ್ದೇಶಕ ಪಶು ಪಾಲನ ಮತ್ತು ಪಶು ವೈದ್ಯಕೀಯ  ಇಲಾಖೆ ತುಮಕೂರು ಇವರ ಆದೇಶದ ಮೇರೆಗೆ ರಾಸುಗಳು ಸುರಭಿ ಗೋಶಾಲೆಗೆ ರವಾನೆ ಮಾಡಲಾಗಿದೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU

Read More

ಕೊರಟಗೆರೆ: ಅಂಗನವಾಡಿ ಕಾರ್ಯಕರ್ತರಿಗೆ ಹೊಸ ಮೊಬೈಲ್ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ವತಿಯಿಂದ  ಪ್ರತಿಭಟನೆ ನಡೆಯಿತು. ಸರ್ಕಾರವು ಕಳಪೆ ಗುಣಮಟ್ಟದ ಮೊಬೈಲ್ ನೀಡಿರುವುದರ ವಿರುದ್ಧ ಧಿಕ್ಕಾರ ಕೂಗಿದ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಳಪೆ ಮೊಬೈಲ್ ಗಳನ್ನು ಸರ್ಕಾರ ಹಿಂಪಡೆದು ಹೊಸ ಮೊಬೈಲ್ ಗಳನ್ನು ನೀಡುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂಬ ಎಚ್ಚರಿಕೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರಕ್ಕೆ ನೀಡಿದ್ದಾರೆ. ಇನ್ನೂ ಪ್ರತಿಭಟನಾ ನಿರತ ಅಂಗನವಾಡಿ ಕಾರ್ಯಕರ್ತೆಯರ ಮನವಿಯನ್ನು ಸಿಡಿಪಿಓ ಅಂಬಿಕ ಸ್ವೀಕರಿಸಿದರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU

Read More

ನಮ್ಮತುಮಕೂರು ವಿಶೇಷ ವರದಿ: ಮನೆ ಇಲ್ಲದೆ ಗುಡಿಸಿಲಲ್ಲಿ ವಾಸ ಮಾಡುತ್ತಿದ್ದು ಮನೆ ಕಟ್ಟಿಕೊಳ್ಳಲು ಸಹಾಯ ಮಾಡಿ ಎಂದು ಬಾಲಕಿ ಒಬ್ಬಳು ರಾಷ್ಟ್ರಪತಿಗೆ ಪತ್ರ ಬರೆದು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಸ್ಪಂದಿಸಿರುವ  ರಾಷ್ಟ್ರಪತಿ ಭವನದ ಕಚೇರಿ ಅಧಿಕಾರಿಗಳು ತುಮಕೂರು ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತುಮಕೂರು ಜಿಲ್ಲೆ, ತುರುವೇಕೆರೆ ತಾಲೂಕಿನ ತೂಯಲಹಳ್ಳಿ ಗ್ರಾಮದ ವಾಸಿಯಾಗಿರುವ ಲಕ್ಷ್ಮೀ ಎಂಬ ವಿದ್ಯಾರ್ಥಿನಿ ಮನವಿಯನ್ನು ಪರಿಶೀಲಿಸುವಂತೆ ರಾಷ್ಟ್ರಪತಿ ಅಧೀನ ಕಾರ್ಯದರ್ಶಿಗಳಿಂದ ಪತ್ರ ಬರೆದಿದ್ದಾರೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶದನ್ವಯ ಶಾಲಾ ಬಾಲಕಿ ಮನೆಗೆ ಭೇಟಿ ನೀಡಿ  ತುರುವೇಕೆರೆ ತಹಶಿಲ್ದಾರ್ ಪರಿಶೀಲನೆ ನಡೆಸಿದರು. ಕಳೆದ ತಿಂಗಳ 29 ರಂದು, ಮನೆ ಕಟ್ಟಲು ನಿವೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಶಾಲಾ ಬಾಲಕಿ ಲಕ್ಷ್ಮೀ  ಪತ್ರ ಬರೆದು ಮನವಿ ಮಾಡಿದ್ದಳು. ತುಮಕೂರು ಜಿಲ್ಲೆ, ತುರುವೇಕೆರೆ ತಾಲೂಕಿನ ತೂಯಲಹಳ್ಳಿ ಗ್ರಾಮದ ವಾಸಿಯಾಗಿರುವ ಲಕ್ಷ್ಮೀ ತೂಯಲಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಾಳೆ. ಬಾಲಕಿ ಮನೆಗೆ ಭೇಟಿ ನೀಡಿದ್ದ ತಹಶಿಲ್ದಾರ್, ಹಾಗೂ ಪಿಡಿಓ …

Read More

ವರ್ಗಾವಣೆಗೆ ಶಾಸಕರ ಭವನ, ಕುಮಾರಕೃಪಾ ಸುತ್ತಮುತ್ತ ಜನಜಂಗುಳಿ, ಹಪ್ತಾ ವಸೂಲಿಗೆ ಮೇಲಾಧಿಕಾರಿಗಳಿಂದ ಒತ್ತಡ ಹೆಚ್ಚಾಗಿ ಪೇದೆ ಆತ್ಮಹತ್ಯೆಗೆ ಯತ್ನ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪರಿಯನ್ನು ಮಾಜಿ ಬಸವರಾಜ ಬೊಮ್ಮಾಯಿ ಬಿಚ್ಚಿಟ್ಟ ಪರಿ ಇದು. ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಬೇಕೆಂದರೆ 2013 ರಿಂದ 2023 ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಲೋಕಾಯುಕ್ತ ಇರುವಾಗ ಅದನ್ನು ನಿಷ್ಕ್ರಿಯಗೊಳಿಸಿ ಎಸಿಬಿ ರಚನೆ ಮಾಡಿದ್ದರು. ಭ್ರಷ್ಟಾಚಾರದಿಂದ ರಕ್ಷಣೆ ಪಡೆಯಲು ಎಸಿಬಿ ರಚನೆ ಮಾಡಿದ್ದರು ಅಂತ ಕೋರ್ಟ್ ಆದೇಶದಲ್ಲಿಯೇ ಇದೆ ಎಂದು ಹೇಳಿದರು. ಭ್ರಷ್ಟಾಚಾರ ನಿಯಂತ್ರಣ ಮಾಡಲು 2013 ರಿಂದ 2023 ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ, ಈ ಸಮಯದಲ್ಲಿ ನಡೆದ ಹಗರಣಗಳ ಬಗ್ಗೆ ಯಾರೇ ದೂರು ಕೊಟ್ಟರೂ ತನಿಖೆ ನಡೆಸಿ, ಹಲವಾರು ಸಂದರ್ಭದಲ್ಲಿ ನ್ಯಾಯಾಂಗ ಆಯೋಗದ ತನಿಖೆಗಳನ್ನು ನೋಡಿದ್ದೇವೆ. ಮುಕ್ತವಾದ…

Read More

ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮತ್ತೊಂದು ಕಡೆ ಟೊಮೆಟೊ ಕಳವು ಪ್ರಕರಣಗಳು ಕೂಡ ವರದಿಯಾಗುತ್ತಿವೆ. ಇದರಿಂದ ಟೊಮೆಟೊ ಬೆಳೆದ ರೈತರು ತಮ್ಮ ಜಮೀನುಗಳಿಗೆ ಹಗಲಿರುಳು ಕಾವಲು ಕಾಯುವಂತಾಗಿದೆ. ಇಂಥದ್ದೇ ಪ್ರಕರಣದಲ್ಲಿ, ಸುಮಾರು 2 ಸಾವಿರ ಕೆಜಿಗೂ ಹೆಚ್ಚು ಟೊಮೆಟೊ ಇದ್ದ ಬೊಲೆರೊ ವಾಹನವನ್ನೇ ಕಳವುಗೈದಿರುವ ಘಟನೆ ಬೆಂಗಳೂರಿನ ಯಲಹಂಕ ಬಳಿಯ ಚಿಕ್ಕಜಾಲ ಗ್ರಾಮದ ಬಳಿ ಶನಿವಾರ ಬೆಳಗ್ಗೆ ವರದಿಯಾಗಿದೆ. ಹಿರಿಯೂರಿನಿಂದ ಕೋಲಾರಕ್ಕೆ ಶನಿವಾರ ರೈತ ತಾನು ಬೆಳೆದ ಟೊಮೆಟೋವನ್ನು ಸಾಗಿಸುತ್ತಿದ್ದರು. ಈ ವೇಳೆ ಮೂವರು ಕಾರಿನಲ್ಲಿ ಟೊಮೆಟೊ ವಾಹನವನ್ನು ಹಿಂಬಾಲಿಸಿದ್ದಾರೆ. ಬೊಲೆರೋ ವಾಹನವನ್ನು ಹಿಂಬಾಲಿಸಿಕೊಂಡು ಬಂದ ಮೂವರು ಆರ್‌ ಎಮ್‌ ಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ಬೊಲೆರೊ ವಾಹನವನ್ನು ಅಡ್ಡಗಟ್ಟಿ, ನಿಮ್ಮ ವಾಹನ ತಮ್ಮ ಕಾರಿಗೆ ಪೀಣ್ಯಾ ಬಳಿ ತಾಗಿದೆ ಎಂದು ವಾದಿಸಿದ್ದಾರೆ. ವಾಗ್ವಾದ ತಾರಕಕ್ಕೇರುತ್ತಿದ್ದಂತೆ ಹಲ್ಲೆ ಕೂಡ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹಣಕ್ಕಾಗಿ ಬೇಡಿಕೆ ಕೂಟ ಇಟ್ಟಿದ್ದ ದುಷ್ಕರ್ಮಿಗಳು, ಹಣ ಇಲ್ಲ ಎಂದಿದ್ದಕ್ಕೆ ಬೊಲೆರೊ ಸಮೇತ ರೈತ ಮತ್ತು ಚಾಲಕನನ್ನು…

Read More

ಕಿವಿ, ಮೂಗು ಮತ್ತು ಗಂಟಲು ವೈದ್ಯರ ಅಧಿಕೃತ ಶಾಖೆಯಾದ ಮಲ್ನಾಡ್ ಎಒಐ ವತಿಯಿಂದ ಕಿವಿ, ಮೂಗು ಮತ್ತು ಗಂಟಲು ಕ್ಷೇತ್ರದಲ್ಲಿ ಶೈಕ್ಷಣಿಕವಾಗಿ ಕೊಡುಗೆ ನೀಡುವ ಸಲುವಾಗಿ ರೂ. 15 ಲಕ್ಷ ವೆಚ್ಚದ ಟೆಂಪೊರಲ್ ಬೋನ್ ಡಿಸೆಕ್ಷನ್ ಯುನಿಟ್ ಮತ್ತು ಎಫ್‌ ಇಎಸ್ಎಸ್ ಕ್ಯಾಡವೆರಿಕ್ ಡೆಸೆಕ್ಷನ್ ಯುನಿಟ್‌ ಗಳನ್ನು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಇಎನ್‌ ಟಿ ವಿಭಾಗಕ್ಕೆ ಕೊಡುಗೆಯಾಗಿ ಇಂದು ನೀಡಲಾಯಿತು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ. ವಿ. ವಿರೂಪಾಕ್ಷಪ್ಪನವರು ಮಲ್ನಾಡ್ ಎಒಐ ಶಾಖೆಯಿಂದ ಸ್ವೀಕರಿಸಲಾದ ಉಪಕರಣಗಳಿಗೆ ಚಾಲನೆ ನೀಡಿದರು. ಈ ವೇಳೆ ಡಾ. ಗಂಗಾಧರ್ ಮಾತನಾಡಿ, 2015 ರಲ್ಲಿ ಪ್ರಾರಂಭವಾದ ಮಲ್ನಾಡ್ ಎಒಐ ಶಾಖೆ ಲೈವ್ ಸರ್ಜರಿ ವರ್ಕ್ ಶಾಪ್, ಸಿಎಂಇ ಗಳು ಸೇರಿದಂತೆ ಅನೇಕ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಈ ಉಪಕರಣಗಳು ಕಿವಿ ಮತ್ತು ಮೂಗಿನ ಶಸ್ತ್ರಚಿಕಿತ್ಸೆಗಳನ್ನು ಅಭ್ಯಸಿಸಲು ಅತ್ಯಂತ ಪ್ರಯೋಜನಕಾರಿಯಾಗಿದ್ದು, ಇಎನ್‌ ಟಿ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮತ್ತು ಕಿರಿಯ ಇಎನ್‌ ಟಿ…

Read More

ಬರ್ಬರವಾಗಿ ಹತ್ಯೆಯಾದ ಬೆಳಗಾವಿ ಜಿಲ್ಲೆಯ ಜೈನಮುನಿ ಕಾಮಕುಮಾರನಂದಿ ಮಹಾರಾಜ ಅವರ ಪಾರ್ಥಿವ ಶರೀರವನ್ನು ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆಯಲಾಗಿತ್ತು. ಈ ಹೃದಯ ವಿದ್ರಾವಕ ಘಟನೆಯ ಬಗ್ಗೆ ಸೂಕ್ತ ತನಿಖೆಯಾಗಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕೆಂದು ವಿಧಾನಮಂಡಲದ ಅಧಿವೇಶನದಲ್ಲಿ ಸಚಿವರಾದ ಎಚ್.ಕೆ ಪಾಟೀಲ್ ಅವರಿಗೆ ವಿಧಾನಪರಿಷತ್ ಶಾಸಕರಾದ ಡಾ. ಟಿ. ಎ. ಶರವಣ ಅವರು ಮನವಿ ಮಾಡಿದರು. ಗೌರವಯುತ ಸ್ಥಾನದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರಕರಣದ ಬಗ್ಗೆ ನಿರ್ಲಕ್ಷ್ಯದ ಹೇಳಿಕೆ ನೀಡಿ ಪ್ರಕರಣದ ದಿಕ್ಕು ತಪ್ಪಿಸಬಾರದು, ಈ ರೀತಿಯ ಹೇಳಿಕೆಯಿಂದ ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ಕೈ ಕಟ್ಟಿದಂತಾಗುತ್ತದೆ ಎಂದು ತಿಳಿಸಿದರು. ಜೈನ ಮುನಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೆ ನಿಷ್ಪಕ್ಷಪಾತವಾದ ತನಿಖೆ ನಡೆದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಈ ವೇಳೆ ಬತ್ತಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More