Author: admin

ಬೆಂಗಳೂರು ಮೈಸೂರು ದಶಪಥ ರಸ್ತೆ ನಿರ್ಮಾಣದ ಬಗ್ಗೆ ಕ್ರೆಡಿಟ್ ವಾರ್ ಮುಂದುವರೆದಿದ್ದು, ಈ ಸಂಬಂಧ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಕಾಂಗ್ರೆಸ್ ಪರ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ದಶಪಥ ರಸ್ತೆ ಬಗ್ಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲ. ನಿಮ್ಮ ಮೂಲಕ ತಿಳಿಸುವ ಪ್ರಯತ್ನವಾಗಬೇಕು. ಒಂದು ಕಡೆ ಪ್ರತಾಪ್ ಸಿಂಹ ನಾನೇ ಇದರ ರುವಾರಿ ಅಂತಾರೆ. 2014 ರಲ್ಲಿ ನಾನು, ಧ್ರುವನಾರಾಯಣ್ ಎಂಪಿ ಆಗಿದ್ದ ಮೊದಲು ಇದು 4 ಪಥದ ರಸ್ತೆಯನ್ನು ಎಸ್. ಎಂ ಕೃಷ್ಣ ಅವರ ಕಾಲಾವಧಿಯಲ್ಲಿ ಅನುಮೋದನೆ ಸಿಕ್ಕಿತ್ತು. ನಂತರ ಎಚ್.ಸಿ ಮಹಾದೇವಪ್ಪ ಅವರು ಪಿಡಬ್ಲ್ಯುಡಿ ಸಚಿವರಾಗಿದ್ದಾಗ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಯುಪಿಎ ಸರ್ಕಾರದ ಮನಮೋಹನ್ ಸಿಂಗ್ ಈ ರಸ್ತೆ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದ್ದರು. ಈಗ ಇವರು ನಾವು ಮಾಡಿಸಿದ್ದು ಅಂತ ಬೊಗಳೆ ಹೊಡೆಯುತ್ತಿದ್ದಾರೆ. ಯಾರಪ್ಪನ ದುಡ್ಡು ತಂದು ಕೊಟ್ಟಿದ್ದೀರೀ.? ಜನರ ಬೆವರಿನ ದುಡ್ಡಿನಿಂದ ಮಾಡಿಸಿದ್ದು ಇದು ನಿಮ್ಮ…

Read More

ಚುನಾವಣೆ ಸಮೀಪಿಸುತ್ತಿದೆ ಎಂದು ಪ್ರಧಾನಿ ಮೋದಿಯನ್ನ ಕರೆ ತಂದು ತರಾತುರಿಯಲ್ಲಿ ಬೆಂಗಳೂರು -ಮೈಸೂರು ದಶಪಥ ಹೆದ್ಧಾರಿ ಉದ್ಘಾಟನೆ ಮಾಡಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ಧರಾಮಯ್ಯ, ಬೆಂಗಳೂರು- ಮೈಸೂರು ಹೈವೇ ಕಾಮಗಾರಿ ಪೂರ್ಣವಾಗಿಲ್ಲ. ಹೈವೇ ಸರ್ವಿಸ್ ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡುವಂತಿಲ್ಲ ಎಕ್ಸ್ ಪ್ರೆಸ್ ಹೈವೇನಲ್ಲಿ ಬೈಪಾಸ್, ಅಂಡರ್ ಪಾಸ್ ಮಾಡಿಲ್ಲ ಇಷ್ಟೆಲ್ಲಾ ಕೆಲಸ ಬಾಕಿ ಇದ್ದರೂ ಬಿಜೆಪಿಯವರು ಮೋದಿ ಕರೆಸಿ ಉದ್ಘಾಟನೆ ಮಾಡಿದ್ದಾರೆ. ಚುನಾವಣೆ ಸಮೀಪಿಸುತ್ತಿದೆ ಎಂದು  ತರಾತುರಿಯಲ್ಲಿ ಉದ್ಘಾಟನೆ ಮಾಡಿಸಿದ್ದಾರೆ ಎಂದು ಕಿಡಿಕಾರಿದರು. ಮೈಸೂರು-ಬೆಂಗಳೂರು ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಮಾಡಿದ್ದು ನಾವು. ದಶಪಥ ರಸ್ತೆ ಮಾಡಬೇಕೆಂದು ಅನುಮೋದನೆ ಮಾಡಿದ್ದು ನಾವು. ನಾವು ಮಾಡಿದ ಕೆಲಸವನ್ನ ಅವರು ಬಂದು ಉದ್ಘಾಟನೆ ಮಾಡಿದ್ದಾರೆ ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…

Read More

ಪ್ರಧಾನಿ ಮೋದಿ ಮಂಡ್ಯ ಭೇಟಿ ವೇಳೆ ಉರಿಗೌಡ ಮತ್ತು ನಂಜೇಗೌಡ ಮಹಾದ್ವಾರ ನಿರ್ಮಿಸಿ ನಂತರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೆ ಅದನ್ನ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ತರಾಟೆ ತೆಗೆದುಕೊಂಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಹೆಚ್.ಡಿ ಕುಮಾರಸ್ವಾಮಿ, ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ ಎಂದು ಕಟು ಟೀಕೆ ಮಾಡಿದ್ದಾರೆ. ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂಧ್ರ ಮೋದಿ ಅವರ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ. ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ…

Read More

ರಾಮನಗರ ಕ್ಷೇತ್ರದಿಂದ ಡಿ.ಕೆ ಸುರೇಶ್ ಸ್ಪರ್ಧೆ ಬಗ್ಗೆ ಪ್ರಸ್ತಾಪವಿದೆ. ಆದರೆ ನಾವು ಯಾವುದೇ ತೀರ್ಮಾನಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಡಿಕೆ ಸುರೇಶ್ ಸ್ಪರ್ಧೆ ಬಗ್ಗೆ  ಹೈಕಮಂಡ್ ನಿಂದ ಒತ್ತಡ ಬಂದಿದ್ದು ನಿಜ. ಪಾರ್ಟಿ ಹೇಳುತ್ತಿದೆ. ಆದರೆ ನಾವಿನ್ನೂ ತೀರ್ಮಾನ ಮಾಡಿಲ್ಲ ಎಂದರು. ಈ ಹಿಂದೆಯೂ ಡಿಕೆ ಸುರೇಶ್ ಸ್ಪರ್ಧೆಗೆ ಕಾರ್ಯಕರ್ತರು ಒತ್ತಾಯ ಮಾಡಿದ್ದರು. ಆದರೆ ಮತ್ತೆ ಬೈಎಲೆಕ್ಷನ್ ಎಲ್ಲಾ ಮಾಡುವುದಕ್ಕೆ ಇಷ್ಟಿವಿಲ್ಲ. ಸ್ಪರ್ಧೆಗೆ ಡಿಕೆ ಸುರೇಶ್ ಅರ್ಜಿ ಹಾಕಿಲ್ಲ. ಚರ್ಚೆಯೂ ಮಾಡಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಬೆಂಗಳೂರಿನ ಹೈಕೋರ್ಟ್ ಪೀಠದಲ್ಲಿ ಖಾಲಿ ಇರುವ 39 ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಹಾಕಲು ಏಪ್ರಿಲ್ 6, 2023 ಕೊನೆಯ ದಿನಾಂಕವಾಗಿದೆ. ಕರ್ನಾಟಕ ಉಚ್ಛ ನ್ಯಾಯಾಲಯ​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪಾಸಾಗಿರಬೇಕು. ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 6, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚೆಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ. ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ. ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ…

Read More

ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಬೆನ್ನಲ್ಲೆ ಡಿ.ಕೆ ಶಿವಕುಮಾರ್ ಮತ್ತು ಸೋಮಣ್ಣ ಒಟ್ಟಿಗೆ ಕುಳಿತು ಮಾತನಾಡುತ್ತಿರುವ ದೃಶ್ಯದ ಫೋಟೊ ವೈರಲ್ ಆಗಿದ್ದು ಈ ಕುರಿತು ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಸೋಮಣ್ಣ, ಡಿಕೆ ಶಿವಕುಮಾರ್ ಮತ್ತು ನಾನು ಇರುವ ಆ ಫೋಟೊ ಯಾವುದೋ ಕಾಲದ್ದು. ಆದರೆ ಈಗ ಫೋಟೊ ವೈರಲ್ ಆಗಿದೆ. ಈಗ ವೈರಲ್ ಮಾಡಿದ್ರೆ ಏನು ಮಾಡೋಕೆ ಆಗಲ್ಲ ಎಂದರು. ನಾನು ಬಿಜೆಪಿ ಶಾಸಕ, ಬಿಜೆಪಿ ಸರ್ಕಾರದ ಮಂತ್ರಿ. ನನಗೆ ಇತಿಮಿತಿ ಗೊತ್ತಿದೆ. ನಾನು ಯಾರ ಹತ್ತಿರನೂ ಹೇಳಿಸಿಕೊಳ್ಳಲ್ಲ. ಬಿಜೆಪಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡತ್ತೇನೆ. ಬಿಜೆಪಿ ಪಕ್ಷದ ನಾಯಕನಾಗಿ ಕೆಲಸ ಮಾಡುತ್ತೇನೆ. ಪ್ರಧಾನಿ ಮೋದಿ, ಅಮಿತ್ ಶಾ ಸಿಎಂ ಬೊಮ್ಮಾಯಿ ನಾಯಕತ್ವ ಇದೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ತಾನು ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ 2.5 ಕೋಟಿ ವಂಚನೆ ಮಾಡಿದ್ದ ಆರೋಪಿ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀನಿವಾಸ್ ಎಂಬಾತನೇ ಐಪಿಎಸ್​ ಎಂದು ಹೇಳಿ ವ್ಯಕ್ತಿಯೊಬ್ಬರಿಗೆ ವಂಚಿಸಿರುವ ಆರೋಪಿ. ತಲಘಟ್ಟಪುರ ನಿವಾಸಿ ಒರ್ವ ವ್ಯಕ್ತಿಗೆ ಪರಿಚಯವಾಗಿದ್ದ ಶ್ರೀನಿವಾಸ್, ತಾನು ಮೈಸೂರಿನಲ್ಲಿ ಪ್ರಸ್ತುತ ಕೆಲಸ ಮಾಡುತ್ತಿದ್ದೇನೆ ಎಂದು ನಂಬಿಸಿ, ಮೈಸೂರಿನ ಲ್ಯಾಂಡ್ ವ್ಯವಹಾರದಲ್ಲಿ 450ಕೋಟಿ ವ್ಯವಹಾರ ಇದೆ ಅದು ಡೀಲ್ ಆದ್ರೆ 250 ಕೋಟಿ ಸಿಗುತ್ತೆ ಎಂದು ನಂಬಿಸಿದ್ದ. ಅಲ್ಲದೆ ಇದೇ ವೇಳೆ ಒಂದಷ್ಟು ಹಣ ಬೇಕು ಎಂದು ಶ್ರೀನಿವಾಸ ಕೇಳಿದ್ದು, ನಂತರ ಹಂತ ಹಂತವಾಗಿ 2.5 ಕೋಟಿ ರೂ ಪಡೆದು ವಂಚನೆ ಮಾಡಿದ್ದಾನೆ ಎನ್ನಲಾಗಿದೆ . ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು ಮೈಸೂರು ದಶಪಥ ಹೆದ್ದಾರಿಗೆ ಕಳೆದ ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಇಂದಿನಿಂಧ ಎಕ್ಸ್‌ ಪ್ರೆಸ್‌ ವೇನಲ್ಲಿ ಟೋಲ್ ಸಂಗ್ರಹ ಆರಂಭವಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಆದರೆ ಟೋಲ್ ಸಂಗ್ರಹಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಎಕ್ಸ್ ಪ್ರೆಸ್ ಹೈವೇಯಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಟೋಲ್ ಗೇಟ್ ಮುರಿದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಸಿದರು. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಕಾಂಗ್ರೆಸ್ ಕಾರ್ಯಕರ್ತತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್​​ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಟ್ರಾಫಿಕ್​ ಜಾಮ್​​ ಉಂಟಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಕೆ…

Read More

ತಿಪಟೂರು: ತಾಲೂಕಿನ ಶ್ರೀಹೊನ್ನವಳಿ ಅಮ್ಮನವರ ರಥೋತ್ಸವ ಮಾರ್ಚ್ 13ರಂದು ನೇರವೇರಿತು. ಮಾರ್ಚ್ 5ರಂದು ಆರಂಭಗೊಂಡಿದ್ದ ರಥೋತ್ಸವ ಕಾರ್ಯಕ್ರಮವು ಸೋಮವಾರ ಮುಕ್ತಾಯಗೊಂಡಿತು. 9 ದಿನಗಳ ಕಾಲ ವಿಜೃಂಭಣೆಯಿಂದ ನಡೆದ ರಥೋತ್ಸವದಲ್ಲಿ 18 ಹಳ್ಳಿಗಳ ಸಾವಿರಾರು ಭಕ್ತರು ಭಾಗವಹಿಸಿ ಶ್ರೀದೇವಿಯ ಕೃಪೆಗೆ ಪಾತ್ರರಾದರು. ದೇವಿಗೆ ಜಿಲೇಬಿ, ಬೂಂದಿ, ಬಾಳೆಹಣ್ಣಿನ ರಸಾಯಣವನ್ನು ಭಕ್ತರು ಅರ್ಪಿಸಿದರು. ಇದೇ ವೇಳೆ ಸಂಗೊಳ್ಳಿ ರಾಯಣ್ಣನ ಸಂಘದವತಿಯಿಂದ 18 ಕೆ.ಜಿ.ಯ ಕೇಕ್ ನ್ನು ಶ್ರೀಧೋತರಾಯ ಸ್ವಾಮಿ ತನ್ನ ಖಡ್ಗದಿಂದ ಕತ್ತರಿಸುವ ಮೂಲಕ ಜಾತ್ರೆಗೆ ಹುಟ್ಟುಹಬ್ಬದಂತೆ ಚಾಲನೆ ನೀಡಲಾಯಿತು. ಊರಿನ ರಾಜ ಬೀದಿಗಳಲ್ಲಿ ಉತ್ಸವ ನೆರವೇರಿದ ಬಳಿಕ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.  ಈ ಜಾತ್ರೋತ್ಸವದಲ್ಲಿ ಕೋಲಾಪುರದಮ್ಮ, ಚಿಕ್ಕಮ್ಮ, ಬನಶಂಕರಮ್ಮ, ಅಣ್ಣಪ್ಪಸ್ವಾಮಿ, ಕಂಚಿನ ಭೋತರಾಯಸ್ವಾಮಿ, ಧೊತರಾಯಸ್ವಾಮಿಯ ಪೂಜೆಯನ್ನು ನೆರವೇರಿಸಲಾಗಿತ್ತು. ಈ ರಥೋತ್ಸವದಲ್ಲಿ ಸಂಘದ ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…

Read More