Author: admin

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್​ ಹೋಟೆಲ್ ​​ನಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ವಾಗತಿಸಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾತ್ರಿಯೇ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ. ನೆಲಮಂಗಲ ಬಳಿಯ ನಗರೂರು ಬಿಜಿಎಸ್ ಕಾಲೇಜು ಆವರಣದಲ್ಲಿ ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿಯವರಿಂದ ರಾಜ್ಯಕ್ಕೆ ಕೊಡುಗೆ ಏನು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರಶ್ನಿಸಿದ್ದು, ತನ್ನ ಜೊತೆಗೆ ಈ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, NDA ಎಂದರೆ ನೇಷನ್ ಡೆಸ್ಟ್ರಾಯ್ ಅಲಾಯನ್ಸ್. ಕೇಂದ್ರ ಸಚಿವ ಜೋಶಿ ಮತ್ತು ಕುಮಾರಸ್ವಾಮಿಗೆ ರಾಜ್ಯದ ಮೇಲೆ ಪ್ರೀತಿ ಜಾಸ್ತಿಯಾಗಿದೆ. ಕಳೆದ 1 ವರ್ಷದಿಂದ ನೀವು ಇಬ್ಬರು ಕೇಂದ್ರದಲ್ಲಿ ಏನ್ ಕಡಿದು ಕಟ್ಟೆ ಹಾಕಿದ್ದೀರಾ? ಉತ್ತರ ಕೊಡಿ. ಆತ್ಮಸಾಕ್ಷಿ ಇದ್ದರೆ ಬಹಿರಂಗ ಚರ್ಚೆ ಇಬ್ಬರು ಬರಲಿ ಎಂದರು. ಕೇಂದ್ರ ಸರ್ಕಾರ ಏನು ಮಾಡಿದೆ ಎಂದು ತಿಳಿಯುವ ಕುತೂಹಲವಿದೆ. ನಮ್ಮ ರಾಜ್ಯ ಸರ್ಕಾರ 2 ವರ್ಷ ಏನು ಮಾಡಿದೆ ಎಂದು ನಾನು ಹೇಳುತ್ತೇನೆ. ಮೊದಲು ನೀವು ರಾಜ್ಯಕ್ಕೆ ಏನು ಮಾಡಿದ್ದೀರಾ ಹೇಳಿ? ಬಹಿರಂಗ ಚರ್ಚೆಗೆ ಜೋಶಿ, ಕುಮಾರಸ್ವಾಮಿ ಬರಲಿ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ನವದೆಹಲಿ: ಕಮಲ್ ಹಾಸನ್ ಚಿತ್ರ `ಥಗ್ ಲೈಫ್’ ಬಿಡುಗಡೆ ವಿಚಾರದಲ್ಲಿ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ ಚಲನಚಿತ್ರ ಮಂಡಳಿಯನ್ನು ತರಾಟೆಗೆತ್ತಿಕೊಂಡಿದೆ. ಚಿತ್ರದ ಮೇಲೆ ಯಾವುದೇ ನಿರ್ಬಂಧ ಹೇರಿಲ್ಲ. ನಿರ್ಮಾಪಕರು ಸಿನಿಮಾ ಬಿಡುಗಡೆ ಮಾಡಲು ಮನಸ್ಸು ಮಾಡಿದರೆ ಸಂಪೂರ್ಣ ಭದ್ರತೆಯನ್ನು ಒದಗಿಸುವುದಾಗಿ ರಾಜ್ಯ ಸರ್ಕಾರ ಸಲ್ಲಿಸಿದ ಅಫಿಡವಿಟ್ ಅನ್ನು ದಾಖಲಿಸಿಕೊಂಡ ನ್ಯಾಯಾಲಯ, ಬೆದರಿಕೆ ಹಾಕಿದವರ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿತು. ದ್ವೇಷ ಭಾಷಣ ಮತ್ತು ಹಿಂಸಾಚಾರದ ಬೆದರಿಕೆಗಳ ಕುರಿತು ಮಾರ್ಗಸೂಚಿಗಳನ್ನು ಕೋರಿ ನಿರ್ಮಾಪಕ ಮತ್ತು ಮೂರನೇ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಪೀಠವು, ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ಎಂದು ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಬೆಂಗಳೂರು ಮೆಟ್ರೊ ನಿಲ್ದಾಣಗಳಲ್ಲಿ  ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸ್ಪಷ್ಟನೆ ನೀಡಿದೆ. ಅಮುಲ್‌ಗೆ 10 ಮಳಿಗೆಗಳ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಎಂಆರ್‌ ಸಿಎಲ್‌ ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ ಚವಾಣ್, ಬೆಂಗಳೂರು ಮೆಟ್ರೊ ನಿಲ್ದಾಣಗಳ ವ್ಯಾಪ್ತಿಯಲ್ಲಿರುವ ಅಂಗಡಿಗಳು ಮತ್ತು ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ಮೂಲಕ ಹಂಚಲಾಗಿದೆ. ಈ ಪ್ರಕ್ರಿಯೆಯ ಮೂಲಕ ಅಮುಲ್ 10 ಮಳಿಗೆಗಳನ್ನು ಪಡೆದುಕೊಂಡಿದೆ ಎಂದರು. ಭವಿಷ್ಯದ ಟೆಂಡರ್‌ಗಳಲ್ಲಿ ನಂದಿನಿ ಭಾಗವಹಿಸಿದರೆ ಅದಕ್ಕೂ ಮಳಿಗೆಗಳನ್ನು ನೀಡುತ್ತೇವೆ. ನಾವು ಯಾರಿಗೂ ಆದ್ಯತೆ ನೀಡುವುದಿಲ್ಲ. 10 ಮಳಿಗೆಗಳಿಗೆ ಐದು ವರ್ಷಗಳ ಅವಧಿಗೆ ಅಮುಲ್‌ಗೆ ಮಾಸಿಕ ರೂ. 7 ಲಕ್ಷ ಬಾಡಿಗೆ ನಿಗದಿಪಡಿಸಲಾಗಿದೆ. ಬಿಎಂಆರ್‌ಸಿಎಲ್ ಇತ್ತೀಚೆಗೆ ಆಹ್ವಾನಿಸಿದ ಟೆಂಡರ್‌ನಲ್ಲಿ ನಂದಿನಿ ಭಾಗವಹಿಸಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ನಮ್ಮ ಮೆಟ್ರೋದಲ್ಲಿ ಅಮುಲ್ ಮಳಿಗೆ ತೆರೆದ ಹಿನ್ನೆಲೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರಾಜ್ಯದ ನಂದಿನಿಗೆ ಸ್ಥಾನವಿಲ್ಲವೇ ಎನ್ನುವ ಆಕ್ರೋಶ ಕೇಳಿ…

Read More

ಬೆಂಗಳೂರು: ಶೌಚಗುಂಡಿ ಸ್ವಚ್ಚಗೊಳಿಸುವಾಗ ಅಸ್ಥಿಪಂಜರ, ಮೂಳೆಗಳು, ತಲೆಬುರುಡೆ ರೀತಿಯ ಭಾಗಗಳು ಪತ್ತೆಯಾಗಿರುವ ಘಟನೆ ಬೆಂಗಳೂರು ನಗರದ ಬೇಗೂರಿನ ಅಪಾರ್ಟ್​​ಮೆಂಟ್​​ ವೊಂದರಲ್ಲಿ ನಡೆದಿದೆ. ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್‌ಮೆಂಟ್ಸ್‌ ನ ಪಾರ್ಕಿಂಗ್ ಸ್ಥಳದ ಪಕ್ಕದಲ್ಲಿರುವ ಹೊಂಡಗಳಲ್ಲಿ ಅಸ್ಥಿಪಂಜರದ ಅವಶೇಷಗಳು ಕಂಡುಬಂದಿವೆ. ಸಿಕ್ಕ ಅಸ್ಥಿಪಂಜರ ಮನುಷ್ಯರದ್ದಾ ಅಥವಾ ಪ್ರಾಣಿಗಳಿದ್ದಾ ಎಂಬುದನ್ನು ಅರಿಯಲು ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮಾದರಿಗಳನ್ನು ಕಳುಹಿಸಿದ್ದಾರೆ. ಬೇಗೂರಿನ ಕೈಗಾರಿಕಾ ಪ್ರದೇಶದ ಅಪಾರ್ಟ್​​ಮೆಂಟ್ ​​​ವೊಂದರಲ್ಲಿ ಜೂನ್ 16ರಂದು ಗುತ್ತಿಗೆ ಕಾರ್ಮಿಕರು ಶೌಚಗುಂಡಿಗಳನ್ನು ಸ್ವಚ್ಚಗೊಳಿಸುವಾಗ ಅಸ್ಥಿಪಂಜರ ಕಂಡುಬಂದಿತ್ತು.‌ ಇದನ್ನು ಕಂಡು ಅಪಾರ್ಟ್‌ಮೆಂಟ್​​ ನಿವಾಸಿಗಳು ಆತಂಕಗೊಂಡಿದ್ದರು. ಕಾರ್ಮಿಕರು ಈ ವಿಷಯವನ್ನು ಅಪಾರ್ಟ್ ಮೆಂಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಕರಿಯಾ ಜಾನ್‌ಗೆ ತಿಳಿಸಿದರರು, ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳೆದ‌ 10 ವರ್ಷಗಳ ಹಿಂದೆ ಅಪಾರ್ಟ್​​ಮೆಂಟ್ ನಿರ್ಮಾಣವಾಗುವ‌ ಆ ಜಾಗದ ಬಳಿ ಸ್ಮಶಾನವಿತ್ತು ಎಂದು ಸ್ಥಳೀಯರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಯುಡಿಆರ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಫ್​…

Read More

ಬೆಂಗಳೂರು: ಬಿಗ್‌ಬಾಸ್‌ ಸೀಸನ್ 11ರ ಸ್ಪರ್ಧಿ ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ ಕೇಳಿಬಂದಿದೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಮೈನುದ್ದಿನ್ ಎಂಬವರು ಗೋಲ್ಡ್ ಸುರೇಶ್ ವಿರುದ್ಧ ವಂಚನೆ ಆರೋಪ ಮಾಡಿದ್ದಾರೆ. ಕೇಬಲ್‌ ಚಾನೆಲ್‌ ಸೆಟ್‌ಅಪ್‌ ಮಾಡಿಕೊಡುವುದಾಗಿ ಹೇಳಿ ವಂಚನೆ ಮಾಡಿದ್ದಾರೆಂದು ಅವರು ದೂರಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೋಲ್ಡ್ ಸುರೇಶ್, ಇದು ಊಹಾಪೋಹದ ಆರೋಪ. ಅಧಿಕೃತವಾಗಿ ನನ್ನ ಮೇಲೆ‌ ಎಲ್ಲೂ ಎಫ್‌ ಐಆರ್  ಆಗಿಲ್ಲ. 2018ರಲ್ಲಿ ನನ್ನ ಸ್ನೇಹಿತನ ಮೂಲಕ ಆ ವ್ಯಕ್ತಿ ಪರಿಚಯ ಆಗಿದ್ರು. ಅವರ ಕೆಲಸ ಮಾಡಿಕೊಟ್ಟಿದ್ದೀನಿ. ನಾನು ಯಾರಿಗೂ ಯಾವುದೇ ಹಣ ಕೊಡಬೇಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು, ಮಧುಗಿರಿ: ಸಚಿವ ರಾಜಣ್ಣ ಅವರೇ ನೀವೂ ಹಿರಿಯರು ಗೌರವವಿದೆ, ನಿಮ್ಮ ಹಿರಿತನಕ್ಕೆ ನಾನು ಬೆಲೆ ಕೊಡುತ್ತೇನೆ. ಆದರೆ ಹಿಟ್ಲರ್ ಕಾಲದ ರಾಜಕಾರಣ ಮಾಡಬೇಡಿ, ಇಲ್ಲಿ ಯಾರು ಕೂಡಾ ನಿಮ್ಮ ದರ್ಪಕ್ಕೆ, ಧಮ್ಕಿಗೆ, ಟಾರ್ಗೆಟ್ ರಾಜಕಾರಣಕ್ಕೆ ಕೈ ಕಟ್ಟಿಕೊಂಡು ಕೂರಲ್ಲ ರಾಜಣ್ಣ ವಿರುದ್ಧ  ನಿಖಿಲ್ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದರು ತುಮಕೂರಿನ ಮಧುಗಿರಿಯಲ್ಲಿ ಆಯೋಜಿಸಲಾಗಿದ್ದ ಮೂರನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯನ್ನ ಉದ್ದೇಶಿಸಿ ಮಾತನಾಡಿದರು. ತಾಲ್ಲೂಕಿನಲ್ಲಿ ಟಾರ್ಗೆಟ್ ರಾಜಕಾರಣ ಮಾಡುತ್ತಿದ್ದಾರೆ. ಕೃಷಿ ಇಲಾಖೆಯಲ್ಲಿ ಡಿ ಗ್ರೂಪ್ ನೌಕರ ನರಸಿಂಹಮೂರ್ತಿ ಜೆಡಿಎಸ್ ಪಕ್ಷದ ಅಭಿಮಾನಿಯಾಗಿದ್ದು ತಪ್ಪಾ.? ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡ ಅನ್ನೋ ಕಾರಣಕ್ಕೆ ಅಮಾಯಕ ನನ್ನ ಟಾರ್ಗೆಟ್ ಮಾಡಿ ಬಲಿಪಶು ಮಾಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆ ಅಭಿಮಾನಿ ಪಕ್ಷದ ಮೇಲೆ ಅಭಿಮಾನ ಇಡುವುದು ತಪ್ಪಾ.? ಅಂತಹ ಮುಗ್ಧ ವ್ಯಕ್ತಿಯ ಮೇಲೆ ಟಾರ್ಗೆಟ್ ಮಾಡಿ ಕಿತ್ತು ಬಿಸಾಕಿದ್ದಾರೆ. ಇಲ್ಲಿರುವ ಶಾಸಕರು ಹಿರಿಯರಿದ್ದಾರೆ. ಅವರು ಹಿರಿಯ ತನಕ್ಕೆ…

Read More

ತುಮಕೂರು, ಕೊರಟಗೆರೆ : ರಾಜ್ಯದ ಜನ ಕಾಂಗ್ರೆಸ್ ಆಡಳಿತದಿಂದ ರೋಸಿಹೋಗಿದ್ದಾರೆ. ದೇವೇಗೌಡರ ಮಾರ್ಗದರ್ಶನದಲ್ಲಿ, ಕುಮಾರಣ್ಣನವರ ನಾಯಕತ್ವದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು ನಿಮ್ಮ ಜೊತೆ ನಾನಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಜನರೊಂದಿಗೆ ಜನತಾದಳ ಬುಧವಾರ ಮೂರನೇ ದಿನದ ರಾಜ್ಯ ಪ್ರವಾಸ ಬೈಕ್ ರ್ಯಾಲಿ ಮೂಲಕ ಕೊರಟಗೆರೆ  ಕ್ಷೇತ್ರದಲ್ಲಿ “ಜನರೊಂದಿಗೆ ಜನತಾದಳ” ಮಿಸ್ಡ್ ಕಾಲ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯನ್ನ ಉದ್ದೇಶಿಸಿ ಮಾತನಾಡಿದರು. ಸುಧಾಕರ್ ಲಾಲ್ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ಪೂರಕವಾಗಿ ಕೆಲಸ ಮಾಡಿ ಮಾಡುತ್ತಿದ್ದೇವೆ. ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಇದು ಕಾರ್ಯಕರ್ತರ ಪಕ್ಷ ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಜತೆ ನಾನಿದ್ದೇನೆ ಎಂದು ಧೈರ್ಯ ತುಂಬಿದರು. ಪ್ರವಾಸ ಅವಧಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆ ಮತ್ತು ಪ್ರತಿ ತಾಲ್ಲೂಕಿನ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಸಾಮಾನ್ಯ ಜನರನ್ನ ಭೇಟಿ ಮಾಡಳಿದ್ದೇನೆ. ಪಕ್ಷದ ಬಗ್ಗೆ ಕಾರ್ಯಕರ್ತರು ಹೊಂದಿರುವ ಭಾವನೆಯನ್ನು ಅರ್ಥಮಾಡಿಕೊಳ್ಳಳಿದ್ದೇನೆ.…

Read More

ತುಮಕೂರು: ಇಕೊ–ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತುಮಕೂರು ಮತ್ತು ಡಬ್ಲೂ.ಎಫ್.ವಿ ಸಂಸ್ಥೆ ತುಮಕೂರು ಇವರ ಸಂಯುಕ್ತ ಆಶ್ರಯದೊಂದಿಗೆ ಪರಿಸರ ಕಾಳಜಿಯ ಭಾಗವಾಗಿ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರ ಮತ್ತು ನೀರಿನ ತೊಟ್ಟಿಗಳನ್ನು ವಿತರಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಬ್ಲೂ.ಎಫ್.ವಿ (ವಾಟರ್  ಫಾರ್ ವಾಯಿಸ್‍ ಲೈಸ್ ಫೌಂಡೇಶನ್) ಸಂಸ್ಥಾಪಕರಾದ ಜೈನ್ ಸನ್ನಿ ಹಸ್ತಿಮಲ್  ರವರು ವಿವಿಧ ರೀತಿಯ ಮೂಕ ಪ್ರಾಣಿಗಳು ಮತ್ತು ಪಕ್ಷಿಗಳು ಕುಡಿಯುವ ನೀರಿನ ಅವಶ್ಯಕತೆ ಮತ್ತು ಅದನ್ನು ಒದಗಿಸುವ ನಮ್ಮ ಪಾತ್ರ ಕುರಿತು ವಿಡಿಯೋ ಸಂವಾದದ ಮೂಖಾಂತರ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಇದೇ ಕಾರ್ಯಕ್ರಮದಲ್ಲಿ ಡಬ್ಲೂ.ಎಫ್.ವಿ ಸಂಸ್ಥೆಯಿಂದ ಕುಡಿಯುವ ನೀರಿನ ತೊಟ್ಟಿಗಳನ್ನು ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಮತ್ತು ಕಾಲೇಜಿಗೆ ನೀಡಲಾಯಿತು. ಈ ನೀರಿನ ತೊಟ್ಟಿಗಳಿಗೆ ತೃತೀಯ ಬಿ.ಎಸ್.ಸಿ ವಿದ್ಯಾರ್ಥಿಗಳಿಂದ ಪರಿಸರ ಕಾಳಜಿ ಸೂಚಿಸುವ ಭಿತ್ತಿ ಚಿತ್ರಗಳನ್ನು ಬಿಡಿಸಿ ಈ ಕಾರ್ಯಕ್ರಮದ ಮಹತ್ವವನ್ನು ಸಾರಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ. ವಸಂತ ಟಿ.ಡಿ. ಅವರು ಮಾತನಾಡಿ “ಅವಶ್ಯಕತೆ ಇರುವ ಮೂಕ…

Read More

ಬೆಳಗಾವಿ: ಬಸ್ ಗಳಲ್ಲಿ ಪ್ರಯಾಣದ ವೇಳೆ ಕಿಟಕಿ ಸೀಟ್ ಬಳಿ ಕುಳಿತುಕೊಳ್ಳುವುದು ಎಲ್ಲರಿಗೂ ಇಷ್ಟವಾದ ವಿಚಾರ, ಇಲ್ಲೊಂದು ಕಡೆ ಕಿಟಕಿ ಪಕ್ಕ ಸೀಟಿಗಾಗಿ ಇಬ್ಬರ ನಡುವೆ ನಡೆದ ಜಗಳ, ಚಾಕುವಿನಿಂದ ಇರಿಯುವ ಮಟ್ಟಕ್ಕೆ ಬೆಳೆದಿದೆ. ಹೌದು… ಬೆಳಗಾವಿಯಲ್ಲಿ ಈ ಘಟನೆ ನಡೆದಿದ್ದು, ಕಿಟಕಿ ಪಕ್ಕದ ಸೀಟ್ ಗಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಹತ್ಯೆ ಯತ್ನದಲ್ಲಿ ಅಂತ್ಯಗೊಂಡಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಜಗಳ ನಡೆದಿದೆ. ಯುವಕನೋರ್ವ ಮತ್ತೊಬ್ಬ ಯುವಕನಿಗೆ ಚಾಕು ಇರಿದಿದ್ದಾನೆ. ಗ್ರಾಮದ ಮಜ್ಜು ಸನದಿ(20) ಎಂಬ ಯುವಕನ ಎದೆ ಭಾಗಕ್ಕೆ ಯುವಕರ ಗ್ಯಾಂಗ್​ ಒಂದು ಚಾಕು ಇರಿದು ಪರಾರಿ ಆಗಿದೆ. ಮಜ್ಜು ಸನದಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಡಿಸಿಪಿ ರೋಹನ್​ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More