Author: admin

ಯಮಕನಮರಡಿ: ಮಹಿಳೆಯರು ಪ್ರಸ್ತುತ ಪುರುಷರಷ್ಟೇ ಸಮಾನರು. ಅವರಿಲ್ಲದ ಕ್ಷೇತ್ರವಿಲ್ಲ, ಅವರು ಮಾಡದ ಸಾಧನೆ ಇಲ್ಲ. ತೊಟ್ಟಿಲನ್ನು ತೂಗುವ ಕೈ ಇಂದು ಜಗತ್ತನ್ನೇ ಆಳುತ್ತಿದೆ. ಸಣ್ಣ ಪದವಿ, ಕೆಲಸ, ಮನೆಗೆಲಸದಿಂದ ಹಿಡಿದು ಅತ್ಯುತ್ತಮ ಪದವಿಯವರೆಗೂ ಮಹಿಳೆ ಸ್ಥಾನ ಪಡೆದುಕೊಂಡಿದ್ದಾಳೆ. ಹೀಗೆ ಮಹಿಳೆಯರ ಸಾಧನೆ, ಕೊಡುಗೆ ಸ್ಮರಿಸಲು ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕುರಣಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಪ್ರತಿ ವರ್ಷ ಮಾರ್ಚ್ 8 ರಂದು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ. ಮಹಿಳೆಯರ ತ್ಯಾಗ, ಪರಿಶ್ರಮ, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಕ್ಷೇತ್ರಗಳಲ್ಲಿನ ಅವರ ಸಾಧನೆ, ಸಮಾಜಕ್ಕೆ ಅವರ ಅಗತ್ಯತೆ, ಕೊಡುಗೆ, ಅವರಿಗೆ ಗೌರವ ಸಲ್ಲಿಸಲು ಹೀಗೆ ಹತ್ತಾರು ಕಾರಣಕ್ಕೆ ಈ ದಿನವನ್ನು ಮಹಿಳೆಯರಿಗಾಗಿ ಮೀಸಲಿಡಲಾಗಿದೆ ಎಂದು ತಿಳಿಸಿದರು. ಮಹಿಳಾ ದಿನಾಚರಣೆ ಮೊದಲು ರಾಷ್ಟ್ರ, ರಾಜ್ಯ, ಜಿಲ್ಲಾ ಮಟ್ಟದಲ್ಲಿ…

Read More

ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಎಐಎಡಿಎಂಕೆ ಶಾಸಕ ಪಿಆರ್ ಸೆಂಥಿಲ್ನಾಥನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಧುರೈ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾ ನಿರತ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಡಪ್ಪಾಡಿ ಕೆ ಪಳನಿಸ್ವಾಮಿ, ಪಿಆರ್ ಸೆಂಥಿಲ್ನಾಥನ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಪಳನಿಸ್ವಾಮಿ ಅವರ ಜೊತೆ ಪ್ರಯಾಣಿಸುತ್ತಿರುವುದಾಗಿ ವ್ಯಕ್ತಿಯೊಬ್ಬ ಫೇಸ್‌ಬುಕ್‌ನಲ್ಲಿ ಲೈವ್ ಮಾಡಿದ್ದಾನೆ. ಈ ವೇಳೆ ವ್ಯಕ್ತಿ ಅವರ ವಿರುದ್ಧ ಘೋಷಣೆ ಕೂಗಿದ್ದಾನೆ. ಇದಕ್ಕೆ ಪ್ರತಿಯಾಗಿ ಅವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪಳನಿಸ್ವಾಮಿ ಅವರ ಅಂಗರಕ್ಷಕರು ಫೇಸ್‌ಬುಕ್‌ನಲ್ಲಿ ಲೈವ್‌ನಲ್ಲಿ ಹಾಗೂ ಪಳನಿಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ವ್ಯಕ್ತಿಯ ಸೆಲ್ ಫೋನ್ ಕಿತ್ತುಕೊಂಡು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ವಿಮಾನ ನಿಲ್ದಾಣದಿಂದ ಫೇಸ್‌ಬುಕ್ ಲೈವ್ ಸ್ಟ್ರೀಮ್ ಅನ್ನು ಶೇರ್ ಮಾಡಿದ ಆರೋಪದ ಮೇಲೆ ಪ್ರಯಾಣಿಕನನ್ನು ಸಹ ವಶಕ್ಕೆ ತೆಗೆದುಕೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಹೆಚ್ಚುತ್ತಿರುವ ಬಿಸಿಲ ತಾಪವನ್ನು ಎದುರಿಸಲು ಕರ್ನಾಟಕ,ತಮಿಳುನಾಡು, ಕೇರಳ, ಆಂಧ್ರಪ್ರದೇಶ ಹರಸಾಹಸ ಪಡುತ್ತಿದೆ. ದಿನದಿಂದ ದಿನಕ್ಕೆ ಬಿಸಿಗಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನೂ ಅಧಿಕಾರಿಗಳು ಹೊರಡಿಸಿದ್ದಾರೆ. ನಿಖಿಲ್ ಎಂಬಾತ ಇಂದು ಪಾಲಕ್ಕಾಡ್ ಬಸ್‌ಗಾಗಿ ಕಾಯುತ್ತಿದ್ದಾಗ ಸನ್‌ಸ್ಟ್ರೋಕ್‌ಗೆ ಒಳಗಾಗಿದ್ದಾನೆ. ಸನ್ ಬರ್ನ್ ಎಂದರೇನು? ಬಿಸಿಲ ಬೇಗೆಯನ್ನು ತಡೆಯುವುದು ಹೇಗೆ? ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳಿ. ಸನ್‌ಬರ್ನ್ ಎಂಬುದು ಸುಟ್ಟಗಾಯ ಅಥವಾ ಅಂತಹುದೇ ದದ್ದುಯಾಗಿದ್ದು ಅದು ಸೂರ್ಯನಿಂದ ಬರುವ ನೇರಳಾತೀತ ಕಿರಣಗಳಿಗೆ ಅಥವಾ ಸೂರ್ಯನ ದೀಪ ಅಥವಾ ತೀವ್ರವಾದ ಸೂರ್ಯನ ಬೆಳಕಿಗೆ ಒಡ್ಡಿಕೊಂಡಾಗ ಸಂಭವಿಸುತ್ತದೆ. ಬಿಸಿಲಿನ ಬೇಗೆಯ ಪ್ರಮಾಣವು ಅದರ ತೀವ್ರತೆ ಮತ್ತು ಒಡ್ಡಿಕೊಂಡ ವ್ಯಕ್ತಿಯ ಚರ್ಮವನ್ನು ಅವಲಂಬಿಸಿರುತ್ತದೆ. ಹಿಗ್ಗಿಸಲಾದ ಗುರುತುಗಳೊಂದಿಗೆ ಗುಳ್ಳೆಗಳು, ಗುಲಾಬಿ ಬಣ್ಣದಿಂದ ಕೆಂಪು ಚರ್ಮದ ಬಣ್ಣ, ಸುಟ್ಟಗಾಯಗಳೊಂದಿಗೆ ಸಿಪ್ಪೆ ಸುಲಿದ ಚರ್ಮವು ಬಿಸಿಲಿನ ನಂತರ ದೇಹದ ಮೇಲೆ ಕಂಡುಬರುತ್ತದೆ. ತೀವ್ರ ಬಿಸಿಲಿನ ಲಕ್ಷಣಗಳು ಇಡೀ ದೇಹದ ಮೇಲೆ ಪರಿಣಾಮ ಬೀರಬಹುದು. ಜ್ವರ, ಶೀತ, ತೀವ್ರ ತಲೆನೋವು, ವಾಕರಿಕೆ, ವಾಂತಿ ಇತ್ಯಾದಿಗಳು…

Read More

ಬೆಳಗಾವಿ: ನನ್ನ ಬಳಿ 10 ಸಿಡಿಗಳಿವೆ. ನಾವು ಯುದ್ಧ ಮಾಡುವ ಜನ, ಷಡ್ಯಂತರ ಮಾಡುವವರಲ್ಲ. ಹೀಗಾಗಿ ಬಿಡುಗಡೆ ಮಾಡುವುದಿಲ್ಲ ಎಂಬುದಾಗಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಗೋಕಾಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಓರ್ ಮಂತ್ರಿಯನ್ನು ಬರ್ತಿರೋ, ಸಿಡಿ ಬಿಡಗಡೆ ಮಾಡಲೋ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೆದರಿಸುತ್ತಾನೆ. ಸಿಡಿ ಪಾಟನರ್ ಹಾಗೂ ಆಕ್ಟರ್ ಬೆಳಗಾವಿಯಲ್ಲೇ ಇದ್ದಾನೆ. ಅದಕ್ಕೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದರು. ನಾವು ಯುದ್ಧ ಮಾಡುವ ಜನ, ಷಡ್ಯಂತ್ರ ಮಾಡುವವರು ಅಲ್ಲ. ನನ್ನ ಬಳಿ 10 ಸಿಡಿಗಳಿದ್ದಾವೆ. ಆದರೇ ಬಹಿರಂಗ ಮಾಡೋದಿಲ್ಲ. ಅವನ ಪತ್ನಿ ನನ್ನ ತಂಗಿ ಇದ್ದಂತೆ, ಮನೆ ಒಡೆಯಬಾರದು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಗುಡುಗಿದರು. ಅಧಿಕಾರ ಬರಲು ಬಿಡಬಾರದು. ಸಿದ್ಧರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜನ ಖರ್ಗೆಯಂತ ಒಳ್ಳೆಯವರು ಇದ್ದಾರೆ. ಯಾವುದೇ ಕಾರಣಕ್ಕೂ ಡಿ.ಕೆ ಶಿವಕುಮಾರ್ ಕೈಯಲ್ಲಿ ಅಧಿಕಾರ ಸಿಗಲೇ ಬಾರದು. ಬ್ಲಾಕ್ ಮೇಲರ್ ಕೈಯಲ್ಲಿ ಅಧಿಕಾರ ಸಿಕ್ಕರೇ ಕಾಂಗ್ರೆಸ್ ಪಕ್ಷದ…

Read More

ಅತ್ಯುತ್ತಮ ಮೂಲ ಗೀತೆಗಾಗಿ ಆಸ್ಕರ್ ಭಾರತೀಯ ಚಲನಚಿತ್ರ RRR ನ ನಾಟು ನಾಟುಗೆ ದಕ್ಕಿತು. ಇದು ಭಾರತದ ಐತಿಹಾಸಿಕ ಕ್ಷಣ. ಚಿತ್ರವನ್ನು ರಾಜಮೌಳಿ ನಿರ್ದೇಶಿಸಿದ್ದಾರೆ. ಈ ಹಾಡು ಗೋಲ್ಡನ್ ಗ್ಲೋಬ್ಸ್‌ನಲ್ಲಿ ಅದೇ ವಿಭಾಗದಲ್ಲಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿತು. ಗೋಲ್ಡನ್ ಗ್ಲೋಬ್ ಹೊರತುಪಡಿಸಿ, ಈ ಹಾಡು ಕ್ರಿಟಿಕ್ಸ್ ಚಾಯ್ಸ್ ಸೇರಿದಂತೆ ಅಂತರರಾಷ್ಟ್ರೀಯ ಪ್ರಶಸ್ತಿಗಳಿಂದ ತುಂಬಿತ್ತು. ನಾಟು ​​ನಾಟು RRR ಗೋಲ್ಡನ್ ಗ್ಲೋಬ್ ಗೆದ್ದ ಭಾರತದ ಮೊದಲ ದೇಶೀಯ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ನಾಟು ನಾಟು ಬರೆದವರು ಚಂದ್ರ ಬೋಸ್. ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ನಾಲ್ಕೂವರೆ ನಿಮಿಷದ ಈ ಹಾಡಿಗೆ ಕೀರವಾಣಿ ಸಂಗೀತ ನೀಡಿದ್ದಾರೆ. ಕೀರವಾಣಿಯವರ ಮಗ ಕಾಲಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಪ್ರಮುಖ ಗಾಯಕರು. ಸೂಪರ್ ಸ್ಟಾರ್ ರಾಮ್ ಚರಣ್ ತೇಜ ಮತ್ತು ಜೂನಿಯರ್ ಎನ್. ಟ್ರಂ ಹಾಡಿನಲ್ಲಿ ನಟಿಸಿದ್ದಾರೆ. ಪ್ರೇಮ್ ರಕ್ಷಿತ್ ಹತ್ತೊಂಬತ್ತು ತಿಂಗಳಲ್ಲಿ ನೃತ್ಯ ಸಂಯೋಜನೆಯನ್ನು ಪೂರ್ಣಗೊಳಿಸಿದರು. ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾಗುವ ಮೊದಲು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಅಧಿಕೃತ…

Read More

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೋಳಿಕೊಪ್ಪ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ ನಂ.4 ರ ವರೆಗಿನ ರಸ್ತೆಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 38.90 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ರಸ್ತೆಯ ಡಾಂಬರೀಕರಣದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಕೈಗೊಂಡು ಭಾನುವಾರ ಚಾಲನೆಯನ್ನು ನೀಡಿದರು. ನಂತರ, ಕೋಳಿಕೊಪ್ಪ ಗ್ರಾಮದ ಶ್ರೀ ವಿಠ್ಠಲ ರುಕ್ಮಾಯಿ ಮಂದಿರದ ಜೀರ್ಣೋದ್ಧಾರದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು. ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ವತಿಯಿಂದ ದೇವಸ್ಥಾನ ಜೀರ್ಣೋದ್ಧಾರಕ್ಕೆ ಅವರು 15 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದಾರೆ. ಈ ಸಮಯದಲ್ಲಿ ರಾಜು ಜಾಧವ್, ಬಸವರಾಜ ನಾಯ್ಕ, ತುಕಾರಾಂ ಕೊಡಚವಾಡ್, ಮನೋಹರ ಬಾಂಡಗಿ ಶಿವಾನಂದ ಬಾಂಡಗಿ, ಪರಶುರಾಮ ಪೂಜಾರಿ, ಮಾರುತಿ ಕೊಡಚವಾಡ್ ಸಂತೋಷ್ ಜಾಧವ್, ರಾಜು ನಾಯ್ಕ್, ಫಕೀರ ಕುರೇರ್, ನಾಗೇಶ್ ಕೊಡಚವಾಡ, ಸೋಮನಾಥ, ರಮೇಶ ಕುರಿ, ನಿಂಗಾನಿ ನಾಯ್ಕ್, ಸುರೇಶ ಕೊಡಚವಾಡ, ಸಂತೋಷ್ ಜಾಧವ್ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಪ್ರತಿ ಗ್ರಾಮಪಂಚಾಯಿತಿಗೆ ಎರಡು ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆ ಮಾಡುವ ಸಂಬಂಧ ಆದೇಶ ಹೊರಡಿಸಿದೆ. ರಾಜ್ಯದ ಪ್ರತಿ ಗ್ರಾಮಪಂಚಾಯತ್ ನಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವ ಸ್ವಸಹಾಯ ಸಂಘ ಸ್ಥಾಪಿಸಿ, ಸ್ವಯಂ ಉದ್ಯೋಗ ಕೈಗೊಳ್ಳುವುದಕ್ಕೆ ನೆರವು ನೀಡಲು ರಾಜ್ಯ ಸರ್ಕಾರ ಆದೇಶಿಸಿದ್ದು, ಪ್ರತಿ ಗ್ರಾಮಪಂಚಾಯಿತಿಗೆ ಎರಡರಂತೆ 12 ಸಾವಿರ ಸ್ವಾಮಿ ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದರು.ಅದರಂತೆ ಇದೀಗ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಪ್ರತಿ ಗುಂಪಿಗೆ 10 ಸಾವಿರ ರೂ. ನಿಧಿ, 1 ಲಕ್ಷ ರೂ. ಸಬ್ಸಿಡಿಯೊಂದಿಗೆ 5 ಲಕ್ಷ ರೂ. ಸಾಲಸೌಲಭ್ಯ ಒದಗಿಸಲಾಗುತ್ತದೆ. ಸ್ಥಳೀಯ ಬೇಡಿಕೆಗಳನ್ನು ಆಧರಿಸಿ ಎಲ್ಲಾ ಸ್ವಸಹಾಯಗಳ ಕಾರ್ಯಚಟುವಟಿಕೆ ಆರಂಭಿಸಿ 12 ಸಾವಿರ ಯುವ ಸಂಘಗಳನ್ನು ನವೋದ್ಯಮಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಧಾರವಾಡ: ರಾಜ್ಯದ ಮೊದಲ ಐಐಟಿ ಗ್ರೀನ್ ಕ್ಯಾಂಪಸ್ ನ್ನು ವಿದ್ಯಾಕಾಶಿ ಧಾರವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. 852 ಕೋಟಿ ವೆಚ್ಚದಲ್ಲಿ 535 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಐಐಟಿ ಗ್ರೀನ್ ಕ್ಯಾಂಪಸ್ ನ್ನು ರಿಬ್ಬನ್ ಕಟ್ ಮಾಡುವ ಮೂಲಕ ಲೋಕಾರ್ಪಣೆಗೊಳಿಸಿದರು. ಹುಬ್ಬಳ್ಳಿ-ಧಾರವಾಡ ಜನರ ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ, ಕರ್ನಾಟಕದ ಪ್ರತಿ ವ್ಯಕ್ತಿ ಜೀವನ ಸಮೃದ್ಧಗೊಳಿಸುವ ಅವಕಾಶ ಸಿಕ್ಕಿದೆ. ಜಗದ್ಗುರು ಬಸವೇಶ್ವರರಿಗೆ ನನ್ನ ಪ್ರಣಾಮಗಳು. ಧಾರವಾಡ ಕರ್ನಾಟಕ ಮಾತ್ರವಲ್ಲ ಭಾರತದ ಜೀವಂತ ಪ್ರತಿಬಿಂಬ ಎಂದು ಹೇಳಿದರು. ಪಂಡಿತ್ ಭೀಮಸೇನ್ ಜೋಶಿ, ದ.ರಾ.ಬೇಂದ್ರೆಯವರನ್ನು ಸ್ಮರಿಸಿದ ಪ್ರಧಾನಿ ಮೋದಿ, ಸಾಹಿತ್ಯ, ಸಂಗೀತ ಕ್ಷೇತ್ರಕ್ಕೂ ಧಾರವಾಡ ಕೊಡುಗೆ ಸಾಕಷ್ಟಿದೆ. ಬೆಂಗಳೂರು-ಮೈಸೂರು ಹೈವೆ ಉದ್ಘಾಟನೆ ನನ್ನ ಸೌಭಾಗ್ಯ. ಇತ್ತೀಚೆಗೆ ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟಿಸಲಾಗಿದೆ. ಬೆಳಗಾವಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಲಾಗಿದೆ. ಧಾರವಾಡದಲ್ಲಿ ಐಐಟಿ ಲೋಕಾರ್ಪಣೆ ಮಾಡಲಾಗಿದೆ. ಡಬಲ್ ಎಂಜಿನ್ ಸರ್ಕಾರದಿಂದ ವೇಗವಾಗಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದರು. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ…

Read More

ಮಂಡ್ಯ: ರಾಜ್ಯದ ಎರಡು ಪ್ರಮುಖ ನಗರಗಳಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಅಡಿಗಲ್ಲು ಹಾಕಿದ್ದು ನಾವೇ. ಇಂದು ಹೆದ್ದಾರಿ ಉದ್ಘಾಟನೆ ಮಾಡುತ್ತಿರುವುದು ನಾವೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಪಕ್ಷಗಳಿಗೆ ತಿರುಗೇಟು ನೀಡಿದರು. ಪ್ರಧಾನಮಂತ್ರಿಗಳ ಮಂಡ್ಯ ಭೇಟಿ ಹಾಗೂ ಎಕ್ಸಪ್ರೆಸ್‌ವೇ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಭಾನುವಾರ ನಡೆದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದ 2015ರಲ್ಲಿ ಹೆದ್ದಾರಿಯ ಡಿಪಿಆರ್ ಸಿದ್ಧವಾಯಿತು. 2016ಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವರ್ಗಾವಣೆಯಾಯಿತು. ಅಂದಾಜು ವೆಚ್ಚ ಹೆಚ್ಚಾಗಿದ್ದರಿಂದ ಅದು ಮತ್ತೆ ಮೋದಿ ಅವರ ಬಳಿಗೆ ಹೋಯಿತು. ತಡ ಮಾಡದೆ ಮಂಜೂರಾತಿ ನೀಡಿದರು. ಹೀಗಾಗಿ ಈ ದಶಪಥ ಹೆದ್ದಾರಿ ನಮ್ಮ ಕೊಡುಗೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಬೊಮ್ಮಾಯಿ ಟಾಂಗ್ ನೀಡಿದರು. ಬೆಂಗಳೂರು-ಮೈಸೂರು ಹೆದ್ದಾರಿಯು 2019ರಲ್ಲಿ ಶಂಕುಸ್ಥಾಪನೆಯಾಗಿ 2023ರಲ್ಲಿ ಉದ್ಘಾಟನೆ ಆಗುತ್ತಿದೆ. ಯೋಜನೆ ಆರಂಭದಿಂದ ಹಿಡಿದು ಕೊನೆಯವರೆಗೂ ಯೋಜನೆಯನ್ನು ಮುನ್ನಡೆಸಿದ್ದು ನಾವೇ ಎಂದು ಗಟ್ಟಿ ಧ್ವನಿಯಲ್ಲಿ ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.…

Read More

ಬೆಂಗಳೂರು–ಮೈಸೂರು ದಶಪಥ ಎಕ್ಸ್‌ ಪ್ರೆಸ್‌ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ದ ಬೆನ್ನಲ್ಲೇ ದಶಪಥ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮೋದಿ ಆಗಮನದ ಹಿನ್ನಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ವರೆಗೆ ಸಂಚಾರ ನಿರ್ಬಂಧಕ್ಕೆ ಆದೇಶ ನೀಡಲಾಗಿತ್ತು. ಆದರೆ ಮೋದಿ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಬೆನ್ನಲ್ಲೇ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿ ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೀಗಾಗಿ ಇಂದು ಬೆಳಗ್ಗೆ ಅಗತ್ಯಸೇವೆ ಮತ್ತು ಹಾಲಿನ ವಾಹನಗಳಿಗೆ ಮಾತ್ರ ಬೆಳಗ್ಗೆ 9 ಗಂಟೆಯವರೆಗೆ ಸವೀರ್‍ಸ್‌ ರಸ್ತೆಯಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More