Subscribe to Updates
Get the latest creative news from FooBar about art, design and business.
- ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
- ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
- ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
- ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
- ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
- ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
- 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
- ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
Author: admin
ಕರ್ನಾಟಕ ಲೇಖಕಿಯರ ಸಂಘ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತೆ ಆರ್. ಪೂರ್ಣಿಮಾ ಅವರಿಗೆ ‘ನಾಗಮಣಿ ಎಸ್. ರಾವ್ ದತ್ತಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಸಾಹಿತಿ ಕಮಲಾ ಹಂಪನಾ ಮಾತನಾಡಿ, ಶಾಸನವೊಂದರಲ್ಲಿ ‘ಕೆರೆಯಂ ಕಟ್ಟಿಸು, ಬಾವಿಯಂ ಸವೆಸು, ದೇವಾಗಾರಮಂ ಮಾಡಿಸ. ‘ಎನ್ನಲಾಗಿದೆ. ಇದನ್ನು ಪ್ರೌಢಪ್ರತಾಪದೇವರಾಯನ ಮಂತ್ರಿ ಲಕ್ಷ್ಮೀಧರಾಮಾತ್ಯನಿಗೆ ಬಾಲ್ಯದಲ್ಲಿ ಆತನ ತಾಯಿ ಹಾಲನ್ನು ಕುಡಿಸುತ್ತಾ ಹೇಳುತ್ತಾಳೆ. ಆಗ ಕೆರೆ, ಬಾವಿಗಳು ನೀರಿನ ಮೂಲಾಧಾರವಾಗಿದ್ದವು. ದೇವಾಲಯಗಳು ಪಂಚಾಯಿತಿ ಕಟ್ಟೆಗಳಾಗಿದ್ದವು. ಅಲ್ಲಿ ಸರಿ ತಪ್ಪುಗಳ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಆದರೆ, ಈಗ ಅವುಗಳ ಮಹತ್ವ ಅರಿತುಕೊಳ್ಳುವಲ್ಲಿ ವಿಫಲವಾಗುತ್ತಿದ್ದೇವೆ. ನಮ್ಮ ನಡೆ ಇತರರಿಗೆ ಮಾದರಿಯಾಗುವಂತಿರಬೇಕು’ ಎಂದು ಹೇಳಿದರು. ಆರ್. ಪೂರ್ಣಿಮಾ, ‘ನಾಗಮಣಿ ಅವರು ವಿಧಾನಮಂಡಲ ಅಧಿವೇಶನದ ವರದಿ ಮಾಡಿದ ಮೊದಲ ಪತ್ರಕರ್ತೆ. ಅವರ ಅನುಭವ ರೋಮಾಂಚನಕಾರಿಯಾದದ್ದು. ಅವರು ತಮ್ಮ ಜೀವನಾನುಭವವನ್ನು ಪುಸ್ತಕ ರೂಪದಲ್ಲಿ ಹೊರತರಬೇಕು’ ಎಂದು ಹೇಳಿದರು. ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಅವರು ‘ಪತ್ರಿಕೆಗಳಲ್ಲಿ ಸಾಹಿತ್ಯದ ಪಾತ್ರ ಅಂದು-ಇಂದು’ ಎಂಬ ವಿಷಯ ಬಗ್ಗೆ ಮತ್ತು…
ಎಸ್ ಪಿ ರೋಡ್ ನಲ್ಲಿ ಅಂಗಡಿ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಫುಟ್ ಪಾತ್ ವ್ಯಾಪಾರಿಯಿಂದ ಅಂಗಡಿ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದ್ದು, ಅಂಗಡಿ ಬಂದ್ ಮಾಡಿ ವರ್ತಕರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೋಲೀಸರ ಜೊತೆಗೆ ವರ್ತಕರು ವಾಗ್ವಾದ ನಡೆಸಿದ್ದು, ಫುಟ್ ಪಾತ್ ವ್ಯಾಪಾರಿಗಳಿಂದ ಸಾಕಷ್ಟು ತೊಂದರೆ ಆಗ್ತಿದೆ. ಅಂಗಡಿ ಖಾಲಿ ಮಾಡಿಸಿ ಅಂತಾ ಹಲವಾರು ಬಾರಿ ಮನವಿ ಮಾಡಿದ್ದೀವಿ. ಬಿಬಿಎಂಪಿ ಹಾಗೂ ಪೊಲೀಸರಿಗೂ ಮನವಿ ಮಾಡಿದ್ದೀವಿ. ಆದರೂ ಯಾವುದೇ ಪ್ರಯೋಜನ ಆಗಿಲ್ಲ, ನಮಗೆ ನ್ಯಾಯ ಸಿಗಬೇಕು. ಹಲ್ಲೆ ಮಾಡಿದವರಿಗೆ ಶಿಕ್ಷೆ ಆಗಬೇಕೆಂದು ಆಗ್ರಹ ಮಾಡಿದ್ದಾರೆ.ಇನ್ನೂ ವರ್ತಕರ ಗುಂಪು ಚದುರಿಸಲು ಪೊಲೀಸರು ಬಂದ ವೇಳೆ ಕೆಲಕಾಲ ಗೊಂದಲ ಉಂಟಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ದೊರೆತಿದ್ದು, ಇದರಿಂದ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು. 10ನೇ ತರಗತಿವರೆಗೆ ಎರಡು ಮೊಟ್ಟೆ ನೀಡುವ ಕಾರ್ಯಕ್ರಮದಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳಣಿಗೆಗೆ ಸಹಕಾರಿಯಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಬ್ಯಾಗ್ ಮತ್ತು ಸೈಟರ್ ವಿತರಣೆಸಚಿವ ರಾಮಲಿಂಗಾರೆಡ್ಡಿ ಪ್ರತಿನಿಧಿಸುವ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳನ್ನು ಮೀರಿಸುವಂತೆ ಮಾಡಿರುವ ಅಭಿವೃದ್ಧಿ ಚಟುವಟಿಕೆಯನ್ನು ವೀಕ್ಷಿಸಿದ ನಂತರ ಆಡುಗೋಡಿ ಸರ್ಕಾರಿ ಶಾಲೆಯಲ್ಲಿ 22 ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಬ್ಯಾಗ್ ಮತ್ತು ಸೈಟರ್‌ಗಳನ್ನು ವಿತರಿಸಿ ದಾನಿಗಳನ್ನು ಸನ್ಮಾನಿಸಿ ಮಾತನಾಡಿದ ಮಧು ಬಂಗಾರಪ್ಪ, 8ನೇ ತರಗತಿವರೆಗಿನ ಮಕ್ಕಳಿಗೆ ಒಂದು ಮೊಟ್ಟೆ ನೀಡಲಾಗುತ್ತಿತ್ತು. ಇದೀಗ ಪ್ರೌಢ ಶಾಲೆಗೂ ಈ ಯೋಜನೆ ವಿಸ್ತರಿಸಿ ಎರಡು ಮೊಟ್ಟೆ ವಿತರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಸದೃಢವಾದ ದೇಹ ಇದ್ದರೆ ಸದೃಢವಾದ ಮನಸ್ಸು ಇರುತ್ತದೆ ಎಂಬುದನ್ನು ಮನಗಂಡು ಮುಖ್ಯಮಂತ್ರಿಗಳು ಈ…
ಕಳೆದ ವಾರ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೃತ್ತಿ ವೈಷಮ್ಯಕ್ಕೆ ಹತ್ಯೆ ಮಾಡಿದ್ದ ಮೂವರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಆನಂದ್ ಎಂಬಾತನನ್ನು ಕೊಲೆ ಮಾಡಿದ ಆರೋಪಡಿ ಸತೀಶ್, ಪುಟ್ಟ ಹಾಗೂ ದಯಾನಂದ್ ಎಂಬುವರನ್ನು ಬಂಧಿಸಲಾಗಿದೆ. ಈ ಆರೋಪಿಗಳು ಕಳೆದ ಜುಲೈ 2 ರಂದು ಆನಂದ್‌ನನ್ನು ಹತ್ಯೆ ಮಾಡಿದ್ದರು. ಚನ್ನನಾಯಕನಪಾಳ್ಯದ ನಿರ್ಜನ ಪ್ರದೇಶದ ಬಯಲಿನಲ್ಲಿ ಶವ ಕಂಡುಬಂದಿದ್ದು, ಬೇರೆಡೆ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿತ್ತು. ಕೃತ್ಯಕ್ಕೂ ಮುನ್ನ ಸ್ಥಳದಲ್ಲಿ ಮದ್ಯಪಾನ ಸೇವಿಸಿರುವುದು, ಕಸದ ರಾಶಿಯ ಮೇಲೆ ಶವ ಇರಿಸಿ ಬೆಂಕಿ ಹಚ್ಚಲಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿತ್ತು. ಪ್ರಕರಣವನ್ನು ಚುರುಕುಗೊಳಿಸಿದ ಪೊಲೀಸರು 1 ವಾರದಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದರು. ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು. ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು…
ಪ್ರಪಂಚದಾದ್ಯಂತ ಇರುವ ಕನ್ನಡಿಗರನ್ನು ಒಂದುಗೂಡಿಸುವ ಮಹತ್ವದ ಕಾರ್ಯಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದಲ್ಲಿರುವ ಮೆಲ್ಬರ್ನ್ ನಗರದಲ್ಲಿ ಸ್ಥಾಪಿಸಲಾದ ಕನ್ನಡ ಭವನವನ್ನುಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಇಂದು ಲೋಕಾರ್ಪಣೆ ಮಾಡಿದರು. ಆಸ್ಟ್ರೇಲಿಯಾದಲ್ಲಿರುವ ಕನ್ನಡಿಗರ ಆಹ್ವಾನ ಮೇರೆಗೆ ಅಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಆಸ್ಟ್ರೇಲಿಯಾದ ಮೆಲ್ಬರ್ನ್ ನಗರದಲ್ಲಿ ನೆಲೆ ನಿಂತ ಕನ್ನಡಿಗರು ನಿರ್ಮಾಣ ಮಾಡಿರುವ ಕನ್ನಡ ಭವನವನ್ನು ಇಂದು ಉದ್ಘಾಟನೆ ಮಾಡಿದರು. ಕನ್ನಡದ ಕಾರ್ಯಚಟುವಟಿಕೆಗಳನ್ನು ವಿದೇಶದಲ್ಲಿಯೂ ವಿಸ್ತರಿಸುತ್ತಿರುವ ಅನಿವಾಸಿ ಕನ್ನಡಿಗರ ಭಾಷಾ ಪ್ರೇಮ ಹಾಗೂ ನಾಡು ನುಡಿಯ ಮೇಲಿರುವ ಅಭಿಮಾನ ಈ ಕನ್ನಡ ಭವನವನ್ನು ನೋಡಿದಾಗ ಅರ್ಥವಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ವಿದೇಶದಲ್ಲಿ ಇರುವ ಕನ್ನಡ ಸಂಘಗಳನ್ನು ಪರಿಷತ್ತಿನ ಅಮಗ ಸಂಸ್ಥೆಯನ್ನಾಗಿಸಿಕೊಂಡು ವಿದೇಶದಲ್ಲಿಯೂ ಕನ್ನಡ ಕಟ್ಟುವ ಕಾಯಕಲ್ಪದಲ್ಲಿ ತೊಡಗಿಕೊಳ್ಳಲಿದೆ. ರಾಜ್ಯದಲ್ಲಿ ಅನಿವಾಸಿ ಕನ್ನಡಿಗರ…
ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಯಲಹಂಕ ತಾಲೂಕಿನ ಅನಂತಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅಪಘಾತದ ವಿಡಿಯೋ ಪಕ್ಕದಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು, ಡಿಕ್ಕಿ ಹೊಡೆದ ಬೈಕ್‌ನಲ್ಲಿದ್ದವರಿಗೂ ಗಾಯಗಳಾಗಿವೆ. ರಾಮಗೊಂಡನಹಳ್ಳಿ ಕಡೆಯಿಂದ ದ್ವಿಚಕ್ರ ವಾಹನದಲ್ಲಿ (ಸ್ಕೂಟಿ) ಕಾಲೇಜು ವಿದ್ಯಾರ್ಥಿನಿ ಬರುತ್ತಿದ್ದು ಇದೇ ಸಮಯಕ್ಕೆ ಮತ್ತೊಂದು ಬೈಕನಲ್ಲಿ ಎದುರು ಬಂದ ಇಬ್ಬರು ಯುವಕರು ಅಡ್ಡಾ- ದಿಡ್ಡಿ ಬಂದು ನೋಡ ನೋಡುತ್ತಿದ್ದಂತೆ ವಿದ್ಯಾರ್ಥಿನಿಯ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸದ ಭಯಾನಕ ದೃಶ್ಯ ಪಕ್ಕದಲ್ಲಿದ್ದ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತಕ್ಕೆ ಒಳಗಾದ ಯುವಕರು ರಾಮಗೊಂಡನಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ. ಈ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC…
ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ವ್ಯಾಪಕ ಹಿಂಸಾಚಾರ ನಡೆದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಪಡೆಗಳು ವಿಫಲವಾಗಿವೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಕೂಚ್ ಬೆಹಾರ್ ಜಿಲ್ಲೆಯ ದಿನಾಟಾದಲ್ಲಿ, ಬಾರಾವಿಟಾ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತಪೆಟ್ಟಿಗೆಗಳನ್ನು ಧ್ವಂಸಗೊಳಿಸಿ ಮತಪತ್ರಗಳಿಗೆ ಬೆಂಕಿ ಹಚ್ಚಲಾಯಿತು. ಬಾರ್ನಾಚಿನಾ ಪ್ರದೇಶದ ಮತ್ತೊಂದು ಮತಗಟ್ಟೆಯಲ್ಲಿ ಸ್ಥಳೀಯರು ಫೇಕ್ ಮತದಾನ ಮಾಡಲಾಗಿದೆ ಎಂದು ಆರೋಪಿಸಿ ಮತಯಂತ್ರಗಳ ಜತೆಗೆ ಮತಪೆಟ್ಟಿಗೆಗೆ ಬೆಂಕಿ ಹಚ್ಚಿದ್ದಾರೆ. ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಒತ್ತಾಯಿಸಿ ವಿವಿಧ ಪ್ರದೇಶಗಳಲ್ಲಿ ಪ್ರತಿಭಟನೆಗಳೂ ನಡೆದಿವೆ. ನಂದಿಗ್ರಾಮದಲ್ಲಿ ಮಹಿಳಾ ಮತದಾರರು ತಮ್ಮ ಕೈಯಲ್ಲಿ ವಿಷದ ಬಾಟಲಿಗಳೊಂದಿಗೆ ಪೊಲೀಸ್ ಅಧಿಕಾರಿಯನ್ನು ಘೇರಾವ್ ಮಾಡಿ, ಪ್ರದೇಶದಲ್ಲಿ ಕೇಂದ್ರ ಪಡೆ ನಿಯೋಜಿಸಬೇಕೆಂದು ಒತ್ತಾಯಿಸಿದರು. ಇದೆಲ್ಲದರ ನಡುವೆ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಉತ್ತರ 24 ಪರಗಣದ ವಿವಿಧ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ದೂರುಗಳನ್ನು ಆಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಜೈನಮುನಿಗಳ ಹತ್ಯೆಗೆ ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾರಾಯಣ ಮಾಳಿ, ಹುಸೇನ್ ಢಾಲಾಯತ್ ಬಂಧಿತ ಆರೋಪಿಗಳು. ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ನಾರಾಯಣ ಮಾಳಿ, ಜೈನಮುನಿ ಆಶ್ರಮದ ಬಳಿ ಜಮೀನು ಲೀಸ್ ಪಡೆದು ಉಳುಮೆ ಮಾಡುತ್ತಿದ್ದ. ಇದೇ ವೇಳೆ ಜೈನಮುನಿಗೆ ಆಪ್ತನಾಗಿದ್ದು, ಆಶ್ರಮದಲ್ಲಿ ಸಣ್ಣಪುಟ್ಟ ಕೆಲಸ ಮಾಡಿ ಜೈನಮುನಿಗಳ ವಿಶ್ವಾಸಗಳಿಸಿದ್ದ. ವೈಯಕ್ತಿಕ ಕಾರಣಕ್ಕೆ ಮಾಳಿ ಜೈನಮುನಿಗಳ ಬಳಿ 6 ಲಕ್ಷ ರೂ. ಹಣ ಪಡೆದಿದ್ದ. ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿಗಳ ಕೊಲೆಗೈಯಲಾಗಿದೆ ಎನ್ನಲಾಗುತ್ತಿದೆ. ಜು.5ರ ರಾತ್ರಿ ಹಿರೇಕೋಡಿ ನಂದಿಪರ್ವತ ಆಶ್ರಮದ ಕೋಣೆಯಲ್ಲೇ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ನಡೆದಿದೆ. ವಿದ್ಯುತ್ ಶಾಕ್ ನೀಡಿ ಕತ್ತು ಹಿಸುಕಿ ಹತ್ಯೆ ಮಾಡಿದ್ದು, ಬಳಿಕ ಸ್ನೇಹಿತ ಹುಸೇನ್‌ಗೆ ಕರೆಮಾಡಿ ಕರೆಸಿಕೊಂಡಿದ್ದ. ಇಬ್ಬರು ಮೃತದೇಹ ಕತ್ತರಿಸಿ ಬಟ್ಟೆ ಸುತ್ತಿ ಕೊಳವೆಬಾವಿಗೆ ಎಸೆದಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಬೆಂಗಳೂರು: ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ 80 ಮಂದಿ ಕನ್ನಡಿಗರು ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಿ ಕರೆತರಲು ಅಗತ್ಯ ಎಲ್ಲಾ ನೆರವನ್ನು ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗದಗದಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್‌ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ತಿಳಿಸಿದ್ದಾರೆ ಗದಗದಿಂದ ಅಮರನಾಥ ಯಾತ್ರೆಗೆ 23 ಯಾತ್ರಿಕರು ಹೋಗಿದ್ದರು. ದೇವರ ದರ್ಶನ ಪಡೆದು ಮರಳಿ ಬರುವ ವೇಳೆ ಗುಡ್ಡ ಕುಸಿತವಾಗಿ ರಸ್ತೆ ಮಧ್ಯೆ ಸಿಲುಕಿದ್ದಾರೆ. ಅಮರನಾಥದಿಂದ ಸುಮಾರು 10 ಕಿಮೀ ದೂರದಲ್ಲಿ ಗುಡ್ಡ ಕುಸಿತವಾಗಿದೆ. ರಸ್ತೆ ಮಧ್ಯೆ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ. ಮಿಲಿಟರಿ ಪಡೆಯಿಂದ ಯಾತ್ರಿಕರನ್ನು ಮರಳಿ ಕರೆತರಲು ಪ್ರಯತ್ನಿಸಲಾಗಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾತ್ರಿಗಳ ಸಹಾಯಕ್ಕೆ…