Subscribe to Updates
Get the latest creative news from FooBar about art, design and business.
- ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಬೆಲೆ ನಿಗದಿ
- ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ
- ತಿಪಟೂರು: ನ.21ರವರೆಗೆ ಕಲ್ಪೋತ್ಸವ ಕಾರ್ಯಕ್ರಮ
- ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
- ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
- ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
Author: admin
ಬೆಳಗಾವಿ: “ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ನೆಮ್ಮದಿ ತಂದಿವೆ. ಆದರೆ ಅಭಿವೃದ್ಧಿ ಎಂಬುದಕ್ಕೆ ಕೊನೆಯಿಲ್ಲ. ಅದಕ್ಕೆ ಮುಕ್ತಾಯವೆಂಬುದಿಲ್ಲ. ನಿರಂತರ ಅಭಿವೃದ್ಧಿಗೆ ನಾನು ಬದ್ಧವಾಗಿದ್ದು ಜನರ ಸಹಕಾರ ಅಗತ್ಯ” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಡಿಗುದ್ದಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅರಿಷಿಣ-ಕುಂಕುಮ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಗ್ರಾಮಸ್ಥರ ಕುಶಲೋಪರಿ ವಿಚಾರಿಸಿ ಮಾತನಾಡಿದರು. ಈ ಸಮಯದಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳ ಮೆಲುಕು ಹಾಕಲಾಯಿತು. “ಜನತೆಯ ಪ್ರೀತಿ, ಪ್ರೋತ್ಸಾಹ, ಆಶೀರ್ವಾದಗಳ ಮೂಲಕ ಶಾಸಕಿಯಾಗಿ ನಿಸ್ವಾರ್ಥ ಭಾವನೆಯಿಂದ ನಿಮ್ಮೆಲ್ಲರ ಸೇವೆಗಳನ್ನು ಅಚ್ಚುಕಟ್ಟಾಗಿ ಮಾಡಿದ್ದೇನೆ. ಎಂದಿನಂತೆ ಎಲ್ಲರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದ ಇರಲಿ” ಎಂದು ಲಕ್ಷ್ಮೀ ಹೆಬ್ಬಾಳಕರ್ ಕೋರಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಂಕರಗೌಡ ಪಾಟೀಲ, ಮಹಾಂತೇಶ ರಾಚಣ್ಣವರ, ಶಿವಾಜಿ ಕುರಿ, ಸೋಮಪ್ಪ ಮೂಕನವರ, ಅಂಜನಾ ಅರಬಳ್ಳಿ, ರೂಪಾ ಬೋರನ್ನವರ, ಪಾರವ್ವ ಅರಬಳ್ಳಿ, ಸದಾನಂದ ರಾಚನ್ನವರ, ರೂಪಾ ಸೊಗಲದ, ಸದಾಶಿವ ಮೂಕನವರ, ಹಾಲಪ್ಪ…
ಬೆಳಗಾವಿ: ಕರ್ನಾಟಕ ವಿಧಾನ ಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ನಿದ್ದೆಯಿಂದ ಎಚ್ಚೆತ್ತಿರುವ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ, ಲಕ್ಷಾಂತರ ಛತ್ರಪತಿ ಶಿವಾಜಿ ಅನುಯಾಯಿಗಳಿಗೆ ಮತ್ತು ಛತ್ರಪತಿ ಶಿವಾಜಿ ವಂಶಸ್ಥರಿಗೆ ಅವಮಾನ ಮಾಡಲು ಮುಂದಾಗಿದೆ. ಛತ್ರಪತಿ ಶಿವಾಜಿಯ ವಂಶಸ್ಥರೇ ಆಗಿರುವ ಯುವರಾಜ ಸಂಭಾಜಿರಾಜೇ ಛತ್ರಪತಿಯವರೇ ಲೋಕಾರ್ಪಣೆ ಮಾಡಿರುವ ಮೂರ್ತಿಯನ್ನು ಮಾರ್ಚ್ 19ರಂದು ಶುದ್ಧೀಕರಣ ಮಾಡುವುದಾಗಿ ಘೋಷಿಸುವ ಮೂಲಕ ಎಂಇಎಸ್ ಛತ್ರಪತಿ ಶಿವಾಜಿ ವಂಶಸ್ಥರಿಗೇ ಅವಮಾನ ಮಾಡಲು ಮುಂದಾಗಿದೆ. ಅಲ್ಲದೆ, ಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆಯಿಂದಾಗಿ ಖುಷಿಯಲ್ಲಿದ್ದ ಶಿವ ಭಕ್ತರಿಗೂ ಎಂಇಎಸ್ ಮುಖಂಡರು ಅವಮಾನ ಮಾಡುತ್ತಿದ್ದಾರೆ. ಲಕ್ಷಾಂತರ ಜನರ ಬಹುವರ್ಷದ ಕನಸಾಗಿದ್ದ ರಾಜಹಂಸಗಡ ಕೋಟೆಯ ಮೇಲೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ನಿರಂತರ ಪ್ರಯತ್ನದಿಂದಾಗಿ ಛತ್ರಪತಿ ಶಿವಾಜಿ ಮೂರ್ತಿ ಇದೀಗ ಸ್ಥಾಪನೆಯಾಗಿದೆ. ಅದರಲ್ಲೂ, ಛತ್ರಪತಿ ಶಿವಾಜಿಯ 13ನೇ ವಂಶಸ್ಥರಾಗಿರುವ ಯುವರಾಜ ಸಂಭಾಜಿರಾಜೇ ಛತ್ರಪತಿ ಸ್ವತಃ ಆಗಮಿಸಿ ಮೂರ್ತಿಯನ್ನು ಲೋಕಾರ್ಪಣೆ ಮಾಡಿದ್ದಾರೆ. 2 ದಿನಗಳ ಕಾಲ ಶಾಸ್ತ್ರೋಕ್ತ ವಿಧಿವಿಧಾನಗಳ ಮೂಲಕ, ರಾಜದರ್ಭಾರದಲ್ಲಿ ನಡೆಯುವ ಪಟ್ಟಾಭಿಷೇಕದ ಮಾದರಿಯಲ್ಲಿ…
ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಬಗ್ಗೆ ವದಂತಿಗಳು ಹಬ್ಬಿದ್ದು ಈ ಮಧ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯಿಂದ ಸೋಮಣ್ಣಗೆ ಕೋಕ್ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ವಿ. ಸೋಮಣ್ಣ, ನಾನು ನಿಂತ ನೀರಲ್ಲ, ಹರಿಯುವ ನೀರು ಎಂದು ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸೋಮಣ್ಣ, ಕ್ಷೇತ್ರದ ಜನರು ನನ್ನನ್ನು ಮನೆ ಮಗನಾಗಿ ನೋಡಿಕೊಂಡಿದ್ದಾರೆ. ನಾನು ಯಾರ ಬಗ್ಗೆಯೂ ಮಾತನಾಡಿಲ್ಲ. ರಾಜ್ಯಾಧ್ಯಕ್ಷರು, ಸಿಎಂ ಜತೆ ಕೆಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ. ನನಗೆ ಈಗ 72 ವರ್ಷ, ಆಗಬೇಕಿರುವುದು ಏನೂ ಇಲ್ಲ. ಆದರೆ ಸೋಮಣ್ಣ ನಿಂತ ನೀರಲ್ಲ, ಹರಿಯುವ ನೀರು ಎಂದರು. ನಾನು ಯಾರ ಬಗ್ಗೆಯೂ ಒಂದು ಸಣ್ಣ ಅಪಚಾರವೂ ಮಾಡಿಲ್ಲ. ರಾಜ್ಯಾಧ್ಯಕ್ಷರು, ಸಿಎಂ ನನಗೆ ಏನು ಹೇಳಿದ್ದಾರೆ ಅಂತ ನನಗೆ ಮಾತ್ರ ಗೊತ್ತಿದೆ. ಆದರೆ ಅವರ ಭಾವನೆಗಳನ್ನು ನಾನು ಅರ್ಥ ಮಾಡಿಕೊಂಡು, ನನ್ನ ಹೊಟ್ಟೆಪಾಡಿಗೋಸ್ಕರ ಏನು ಮಾಡಬೇಕು, ಅದನ್ನು ಮಾಡಿಕೊಂಡು ಹೋಗುತ್ತಿದ್ದೇನೆ. ಕ್ಷೇತ್ರದ…
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್ ನಿಧನದ ಸುದ್ಧಿ ತಿಳಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ. ಆರ್.ಧೃವನಾರಾಯಣ್ ನೆನೆದು ಕಣ್ಣೀರಿಟ್ಟಿರುವ ಡಿ.ಕೆ ಶಿವಕುಮಾರ್, ನನ್ನ ಸ್ವಂತ ಸಹೋದರನನ್ನೇ ಕಳೆದುಕೊಂಡಷ್ಟು ದುಃಖ ಆಗುತ್ತಿದೆ. ದೇವರು ಇದ್ದಾನೋ ಇಲ್ಲವೂ ಅನ್ನಿಸುತ್ತಿದೆ. ಧ್ರುವ ನಾರಾಯಣ್ ನಿಧನ ನನಗಷ್ಟೆ ಅಲ್ಲ. ಯಾರಿಗೂ ನಂಬಲಾಗುತ್ತಿಲ್ಲ. ಈ ಸಾವಿನ ಸುದ್ದಿ ಎಐಸಿಸಿ ಅಧ್ಯಕ್ಷರಿಗೂ ನಂಬಲು ಆಗುತ್ತಿಲ್ಲ ಪಕ್ಷಕ್ಕೆಷ್ಟೇ ಅಲ್ಲ ಇಡೀ ರಾಜ್ಯಕ್ಕೆ ನಷ್ಟ ಎಂದು ಭಾವುಕರಾದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಅಫ್ಘಾನಿಸ್ತಾನದ ಮಹಿಳೆ ರಜಿಯಾ ಮೊರಾಡಿ ಅವರು ಶೈಕ್ಷಣಿಕ ಶ್ರೇಷ್ಠತೆಗಾಗಿ ಭಾರತದಿಂದ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಂದ ರಜಿಯಾ ಚಿನ್ನದ ಪದಕ ಪಡೆದರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜಿಯಾ ಮುರಾದ್ ಅವರು ಶಿಕ್ಷಣ ನಿರಾಕರಿಸಿದ ಅಫ್ಘಾನಿಸ್ತಾನದ ಹುಡುಗಿಯರನ್ನು ನೆನಪಿಸಿಕೊಳ್ಳುತ್ತಾರೆ ಎಂದು ಹೇಳಿದರು. ರಜಿಯಾ ಸಾರ್ವಜನಿಕ ಆಡಳಿತದಲ್ಲಿ 8.60 ರ ಸಂಚಿತ ಗ್ರೇಡ್ ಪಾಯಿಂಟ್ ಸರಾಸರಿಯನ್ನು ಹೊಂದಿದ್ದಾರೆ. ಇದು ವಿಶ್ವವಿದ್ಯಾನಿಲಯದಲ್ಲಿ ಅತ್ಯುನ್ನತ ಶ್ರೇಣಿಯ ಅಂಕವಾಗಿದೆ. ರಜಿಯಾ ಅವರು ಗುಜರಾತ್ ವಿಶ್ವವಿದ್ಯಾನಿಲಯದಿಂದ ಸಾರ್ವಜನಿಕ ಆಡಳಿತದಲ್ಲಿ ಪದವಿ ಪಡೆದಿರುವ ಕಾರಣ ಪ್ರಶಸ್ತಿಗೆ ಅರ್ಹರಾಗಿದ್ದಾರೆ. 27 ವರ್ಷದ ರಜಿಯಾ ಮುರಡಿ ಎರಡು ವರ್ಷಗಳಿಂದ ಭಾರತದಲ್ಲಿ ಓದುತ್ತಿದ್ದಾರೆ. ರಜಿಯಾ ಮೊರಾಡಿ ಪ್ರಸ್ತುತ ಅದೇ ಕಾಲೇಜಿನಲ್ಲಿ ಸಾರ್ವಜನಿಕ ಆಡಳಿತದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದಾರೆ. ಆಗಸ್ಟ್ 2021 ರಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತೆ ಅಧಿಕಾರಕ್ಕೆ ಬಂದ ನಂತರ, ಮಹಿಳೆಯರ ಹಕ್ಕುಗಳನ್ನು ಸಂಪೂರ್ಣವಾಗಿ ನಿರಾಕರಿಸಲಾಯಿತು. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದು ಖುಷಿಯಾಗಿದೆ. ಕಳೆದ ಎರಡು ವರ್ಷಗಳಿಂದ ನನ್ನ ಕುಟುಂಬವನ್ನು…
ಮಾರ್ಚ್ 12 ರಂದು ಮೈಸೂರು –ಬೆಂಗಳೂರು ದಶಪಥ ಹೆದ್ಧಾರಿ ಉದ್ಘಾಟನೆಗೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಕಾರ್ಯಕ್ರಮಗಳ ಬಗ್ಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ನಾಳಿದ್ದು ನರೇಂದ್ರ ಮೋದಿಯವರು ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ಬಳಿಕ ಅಲ್ಲಿಂದ ಮಂಡ್ಯದತ್ತ ಹೇಳಿಕಾಪ್ಟರ್ ನಲ್ಲಿ ತೆರಳುತ್ತಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆಗಲಿದೆ. ಬಳಿಕ ಅಧಿಕೃತವಾಗಿ ಮೋದಿಯವರು ಮೈಸೂರು-ಬೆಂಗಳೂರು ಹೈವೇ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು. ಪ್ರಧಾನಿ ನರೇಂದ್ರಮೋದಿ ಕಾರ್ಯಕ್ರಮಕ್ಕೆ ಸುಮಾರು ಒಂದೂವರೆ ಲಕ್ಷ ಜನ ಸೇರಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳು ಮಂಡ್ಯದಲ್ಲೇ 2.60 ಲಕ್ಷ ಮಂದಿ ಇದ್ದಾರೆ. ಜೊತೆಗೆ ಅಮೃತ್, ಜಲ ಜೀವನ್, ಆಯುಷ್ಮಾನ್ ಭಾರತ್ ಸೇರಿದಂತೆ ಹಲವು ಯೋಜನೆಗಳ ಫಲಾನುಭವಿಗಳು ಇದ್ದಾರೆ. ಅವರನ್ನು ಸೇರಿಸಿ 1.50 ಲಕ್ಷ ಜನ ಸೇರುತ್ತಾರೆ. 12 ಗಂಟೆಗೆ…
ತುರುವೇಕೆರೆ: ಭೀಕರ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟ ದಾರುಣ ಘಟನೆ 150 ಎ ರಾಷ್ಟ್ರೀಯ ಹೆದ್ದಾರಿಯಲ್ಲಿಯಲ್ಲಿ ಬೆಳಗ್ಗೆ ಸುಮಾರು 10 ಗಂಟೆಗೆ ನಡೆದಿದೆ. ಸಂಗ್ಲಾಪುರ ಗೇಟ್ ಬಳಿ ಇರುವ ಉಣ್ಣೆಬಸವೇಶ್ವರ ದೇವಸ್ಥಾನದ ಸ್ವಲ್ಪ ದೂರದಲ್ಲಿ ಹಾದು ಹೋಗಿರುವ 150 ಎ ರಾಷ್ಟ್ರೀಯ ಹೆದ್ದಾರಿಯಲ್ಲಿ, ಮಾಯಸಂದ್ರ ಕಡೆಯಿಂದ ಬರುತ್ತಿದ್ದ ಮಹೇಂದ್ರ ಜೀತೋ ಎಂಬ ನಾಲ್ಕು ಚಕ್ರದ ವಾಹನ ಅತಿ ವೇಗವಾಗಿ ಬಂದು, ತುರುವೇಕೆರೆ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ರಭಸವಾಗಿ ಗುದ್ದಿದ್ದರಿಂದ, ಸ್ಥಳದಲ್ಲಿ ದ್ವಿಚಕ್ರವಾಹನ ಸವಾರ ಮೃತಪಟ್ಟಿದ್ದಾನೆ. ತುರುವೇಕೆರೆ ತಾಲೂಕಿನ ದಬ್ಬೇಗಟ್ಟ ಗ್ರಾಮದ ಸುರೇಶ್ ಮತ್ತು ಭಾಗ್ಯಮ್ಮ ಎಂಬುವರ ಒಬ್ಬನೇ ಮಗ ತಿಲಕ್ (22 ವರ್ಷ) ಮೃತಪಟ್ಟ ಯುವಕನಾಗಿದ್ದಾನೆ. ನಾಲ್ಕು ಚಕ್ರದ ವಾಹನದ ಹಿಂದೆ ಬರುತ್ತಿದ್ದ ಇನ್ನೊಂದು ದ್ವಿಚಕ್ರ ವಾಹನದಲ್ಲಿ ಇಬ್ಬರು ವಾಹನ ಸವಾರರಿದ್ದು ಅದರಲ್ಲಿ ಒಬ್ಬ ಯುವಕನಿಗೆ ಗಂಭೀರವಾದ ಗಾಯವಾಗಿದ್ದು, ಆತನನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನಗಳು ಪೂರ್ತಿ…
ನನ್ನ ಅರೋಗ್ಯ ಸಮಸ್ಯೆ ಕಡೆಗಣಿಸಿ ನಾನು ಶ್ರಮಿಸುತ್ತಿದ್ದೇನೆ. ಸ್ವಾರ್ಥಕ್ಕಾಗಿ ನನ್ನ ದೇಹ ದಂಡನೆ ಮಾಡುತ್ತಿಲ್ಲ. ಸಿಎಂ ಆಗಬೇಕೆಂದು ಈ ರೀತಿ ಶ್ರಮ ವಹಿಸುತ್ತಿಲ್ಲ. ನಮ್ಮ ಮನೆಯ ಬಳಿ ಬರುವ ಬಡ ತಾಯಂದಿರ ಕಣ್ಣೀರು ನೋಡಿದ್ದೇನೆ. ಬಡವರ, ರೈತರ ಕಣ್ಣೀರು ಒರೆಸಬೇಕು ಎನ್ನುವುದೊಂದೇ ನನ್ನ ಉದ್ದೇಶ. ಮುಂದೆ ಜೆಡಿಎಸ್ ನ ಬಹುಮತದ ಸರ್ಕಾರ ಬರುತ್ತದೆ, ಐದು ವರ್ಷ ಆಡಳಿತ ನಡೆಸಲಿದೆ ಎಂದು ನೋವಿನಲ್ಲಿ ಇರುವವರಿಗೆ ಹೇಳಿದ್ದೇನೆ. ರೈತರು ಸಾಲಗಾರ ಆಗಬಾರದು ಎನ್ನುವುದು ನನ್ನ ಗುರಿ. ಕೇವಲ 37 ಶಾಸಕರನ್ನು ಇಟ್ಟುಕೊಂಡು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೆ. ನಮ್ಮನ್ನು ವಿರೋಧಿಸಿದ್ದವರೇ ಸರ್ಕಾರ ರಚಿಸೋಣ ಎಂದು ಬಂದಾಗ ರೈತರ ಸಾಲಾ ಮನ್ನ ಮಾಡುವ ಉದ್ದೇಶದಿಂದ ಜೊತೆ ಸೇರಿದ್ದೆ ಎಂದು ತಿಳಿಸಿದರು. ದೇಶದ ಪ್ರಗತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಾರೆ. ಸಿಎಂ ಬಸವರಾಜ ಬೊಮ್ಮಾಯಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದೇವೆ ಎನ್ನುತ್ತಾರೆ. ಆದರೆ ಬಡ ಜನರ ಮಕ್ಕಳು ಶಿಕ್ಷಣ ಪಡೆಯಲು ಆಗದೆ ಪರದಾಡುತ್ತಿದ್ದಾರೆ ಎಂದು ಸರ್ಕಾರದ…
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ನಾನೂ ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿ ತನ್ನ ಆಪ್ತ ಮಹೇಶ್ ಕುಮಟಳ್ಳಿ ಪರ ಬ್ಯಾಟ್ ಬೀಸಿದ ರಮೇಶ್ ಜಾರಕಿಹೊಳಿ, ಅಥಣಿ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಟಿಕೆಟ್ ನೀಡಬೇಕು, ಟಿಕೆಟ್ ನೀಡದಿದ್ದರೇ ನಾನೂ ಗೋಕಾಕ್ ಕ್ಷೇತ್ರದಿಂದ ಸ್ಪರ್ಧಿಸಲ್ಲ. ಬಿಜೆಪಿ ಸರ್ಕಾರ ಸ್ಥಾಪನೆಗಾಗಿ ಸಚಿವ ಸ್ಥಾನ ತ್ಯಾಗ ಮಾಡಿ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದೇನೆ. ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೇರಿದ್ದೇನೆ. ಹೀಗಾಗಿ ಸಚಿವ ಸ್ಥಾನದ ಆಸೆಗಾಗಿ ಬಿಜೆಪಿ ಪಕ್ಷಕ್ಕೆ ಬಂದಿಲ್ಲ ಎಂದರು. ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ನಾರಾಯಣಗೌಡರು ಬಿಜೆಪಿ ಬಿಡುವುದಾಗಿ ಎಲ್ಲೂ ಹೇಳಿಲ್ಲ. ಕಾಂಗ್ರೆಸ್ ಮುಳುಗುವ ಹಡಗು. ಅಲ್ಲಿಗೆ ಹೋಗೋದು ಒಳ್ಳೆಯದಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಎಂದು ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಘೋಷಣೆ ಮಾಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಮಂಡ್ಯ ಅಭಿವೃದ್ದಿ ಬಗ್ಗೆ ಪ್ರಧಾನಿ ಮೋದಿಗೆ ಕಾಳಜಿ ಇದೆ. ಹೀಗಾಗಿ ನನ್ನ ಸಂಪೂರ್ಣ ಬೆಂಬಲ ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಎಂದು ಘೋಷಿಸಿದರು. ಅಂಬಿ ಕುಟುಂಬ ದ್ವೇಷದ ರಾಜಕಾರಣ ಮಾಡಲ್ಲ. ಪಕ್ಷೇತರ ಸಂಸದೆಯಾದರೂ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಹೆಚ್ಚು ಅನುದಾನ ನೀಡಿದ್ದಾರೆ. ಮೋದಿ ನಾಯಕತ್ವದಲ್ಲಿ ದೇಶ ಸಾಗುತ್ತಿದೆ. ಜಿಲ್ಲೆಯ ಭವಿಷ್ಯದ ದೃಷ್ಠಿಯಿಂದ ಒಂದು ಹೆಜ್ಜೆ ಮುಂದೆ ಇಟ್ಟಿದ್ದೇನೆ ಎಂದರು. ಚಾಮುಂಡಿ ತಾಯಿ ಮೇಲೆ ಆಣೆ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣ ಮಾಡಲ್ಲ ನನಗೆ ಅಂಬರೀಶ್ ಹೆಸರೂ ಉಳಿಯಬೇಕು. ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಪುತ್ರ ರಾಜಕಾರಣಕ್ಕೆ ಬರೋದಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…