Author: admin

ಕೊರಟಗೆರೆ : ಮಧುಗಿರಿ ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳಾದ ಕೊರಟಗೆರೆ ,ಮಧುಗಿರಿ,ಸಿರಾ, ಪಾವಗಡದ ಯುವ ಮೋರ್ಚಾ ಸಮಾವೇಶವನ್ನು ಮಾರ್ಚ್ 12 ರಂದು ಕೊರಟಗೆರೆ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಒಕ್ಕೊರಲಿನಿಂದ ಏರ್ಪಡಿಸಲಾಗಿದೆ ಎಂದು ಮಧುಗಿರಿ ಜಿಲ್ಲೆಯ ಬಿಜೆಪಿ ಘಟಕದ ಅದ್ಯಕ್ಷ ಬಿ.ಕೆ ಮಂಜುನಾಥ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾದ್ಯಕ್ಷ ಬಿ. ಕೆ.ಮಂಜುನಾಥ್ ಮಾತನಾಡಿ  2023 ರ ಚುನಾವಣೆಯಲ್ಲಿ ಪಾವಗಡ, ಮಧುಗಿರಿ, ಕೊರಟಗೆರೆ, ಸಿರಾ ವಿಧಾನ ಸಭಾ ಕ್ಷೇತ್ರಗಳ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 12 ರಂದು ಕೊರಟಗೆರೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಯುವ ಮೋರ್ಚಾ ಸಮಾವೇಶ ಒಕ್ಕೊರಲಿನಿಂದ ಏರ್ಪಡಿಸಲಾಗಿದ್ದು  ಮುಖ್ಯ ಅತಿಥಿಗಳಾಗಿ ಸಂಸದ ತೇಜಸ್ವಿ ಸೂರ್ಯ,ರಾಜ್ಯಸಭಾ ಸದಸ್ಯ ನಟ  ಜಗ್ಗೇಶ್,  ಸಂದೀಪ್ , ನವೀನ್ ಕುಮಾರ್, ಮಾಜಿ ಸಂಸದ  ಮುದ್ದಹನುಮೇಗೌಡ ಸೇರಿದಂತೆ ಹಲವಾರು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಬಾರತೀಯ ಜನತಾ ಪಕ್ಷಕ್ಕೆ ಹೆಚ್ಚು ಹೆಚ್ಚಾಗಿ ಯುವಕರನ್ನು ಪಕ್ಷಕ್ಕೆ ಕರೆತಂದು ಪಕ್ಷವನ್ನು ಗಟ್ಟಿಗೊಳಿಸುವ ಉದ್ದೇಶದಿಂದ…

Read More

ನಾವು ತಿನ್ನುವ ಆಹಾರಕ್ಕೂ ಹೃದಯದ ಆರೋಗ್ಯಕ್ಕೂ ನಿಕಟ ಸಂಬಂಧವಿದೆ. ಕೊಬ್ಬಿನಂಶವಿರುವ ಆಹಾರಗಳು, ಹೆಚ್ಚಿನ ಉಪ್ಪು ಇತ್ಯಾದಿಗಳು ಹೃದಯದ ಆರೋಗ್ಯವನ್ನು ಕೆಡಿಸುತ್ತವೆ. ಹೃದಯದ ಆರೋಗ್ಯವು ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ಉರಿಯೂತದಂತಹ ಅನೇಕ ಅಂಶಗಳಿಂದ ಪ್ರಭಾವಿತವಾಗಿರುತ್ತದೆ. ಒಳ್ಳೆಯ ಆಹಾರವನ್ನು ಸೇವಿಸುವುದರಿಂದ ಹೃದಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಆರೋಗ್ಯವನ್ನು ಕಾಪಾಡಿಕೊಳ್ಳಲು ಮನಃಪೂರ್ವಕವಾಗಿ ಸೇವಿಸಬಹುದಾದ ಕೆಲವು ಆಹಾರಗಳ ಪರಿಚಯ ಮಾಡಿಕೊಳ್ಳೋಣ. ಕಿತ್ತಳೆ ಕಿತ್ತಳೆಯಲ್ಲಿರುವ ಪೆಕ್ಟಿನ್ ಎಂಬ ಫೈಬರ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಒಳ್ಳೆಯದು. ಕಿತ್ತಳೆ ರಕ್ತನಾಳಗಳ ಆರೋಗ್ಯಕ್ಕೆ ಒಳ್ಳೆಯದು ಎಂದು ಅಧ್ಯಯನಗಳು ತೋರಿಸಿವೆ. ಹಸಿರು ಎಲೆಗಳ ಸೊಪ್ಪು ಅನೇಕ ಜೀವಸತ್ವಗಳು ಮತ್ತು ಖನಿಜಗಳ ಉಗ್ರಾಣವಾಗಿದೆ. ಎಲೆಗಳ ಹಸಿರುಗಳಲ್ಲಿನ ಆಹಾರ ನೈಟ್ರೇಟ್‌ಗಳು ರಕ್ತದೊತ್ತಡವನ್ನು ಕಡಿಮೆ ಮಾಡುತ್ತವೆ. ಟೊಮೆಟೊ ಟೊಮೆಟೊದಲ್ಲಿ ಕಂಡುಬರುವ ಲೈಕೋಪೀನ್ ಎಂಬ ವಸ್ತುವು ಉರಿಯೂತದಿಂದ ಉಂಟಾಗುವ ಹಾನಿಯನ್ನು ಸರಿಪಡಿಸಲು ಮತ್ತು ಹೃದಯದ ಆರೋಗ್ಯವನ್ನು ರಕ್ಷಿಸಲು ಒಳ್ಳೆಯದು. ಬೆಳ್ಳುಳ್ಳಿ ಬೆಳ್ಳುಳ್ಳಿಯನ್ನು ಅಡುಗೆಮನೆಯಲ್ಲಿ ವಿವಿಧ ಕಾಯಿಲೆಗಳಿಗೆ ಔಷಧಿ ಎಂದು ಕರೆಯಲಾಗುತ್ತದೆ. ಬೆಳ್ಳುಳ್ಳಿಯಲ್ಲಿ ಕಂಡುಬರುವ ಆಲಿಸಿನ್ ಎಂಬ ವಸ್ತುವು…

Read More

ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಬಂದಿಳಿದಿದ್ದಾರೆ. ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಜೀವ್ ಕುಮಾರ್ ಅವರ ತಂಡದಲ್ಲಿ ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ , ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್‌ ಮೀನಾ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಚುನಾವಣಾಧಿಕಾರಿಗಳಾಗಿರುವ ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ, ಡಿಜಿಪಿ ಮತ್ತು ಐಜಿ ಪ್ರವೀಣ್…

Read More

ಪಂಚರತ್ನಯಾತ್ರೆ ಮತ್ತು ನಮ್ಮ ಪಕ್ಷದ ಬೆಳವಣಿಗೆಯಿಂದ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಆತಂಕ ಶುರುವಾಗಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ನುಡಿದರು. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಗುಂದ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೆಡಿಎಸ್​​ ಅನ್ನು ಕಾಂಗ್ರೆಸ್ ​​ನ ಬಿ ಟೀಂ ಎನ್ನುತ್ತಾರೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪದೇಪದೇ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಂ ಎನ್ನುತ್ತಾರೆ. ಆದರೆ, ನಾವು ನಾಡಿನ ಜನತೆಯ ಬಿ ಟೀಂ ಎಂದು ಹೇಳಿದ್ದೇವೆ. ಬಿಜೆಪಿ ಹಾಗೂ ಕಾಂಗ್ರೆಸ್ ​ಗೆ ನಮ್ಮ ಪಕ್ಷದ ಬೆಳವಣಿಗೆಯಿಂದ ಆತಂಕವಾಗಿದೆ. ನಾವು ಪಂಚರತ್ನ ಯಾತ್ರೆ ಮೂಲಕ ಜನರನ್ನು ತಲುಪುತ್ತಿದ್ದೇವೆ. ಇದರಿಂದ ಎರಡು ರಾಷ್ಟ್ರೀಯ ಪಕ್ಷಗಳು ಕಂಗಾಲಾಗಿವೆ ಎಂದು ಟೀಕಿಸಿದರು. ನಮ್ಮ ಭದ್ರಕೋಟೆಯನ್ನು ಛಿದ್ರ ಮಾಡುತ್ತೇವೆ ಅಂತ ಹೊರಟಿದ್ದಾರೆ. ಆದರೆ, ಹೆಚ್​​ಡಿ ದೇವೇಗೌಡರು ಬೆಳಿಸಿರುವ ಲಕ್ಷಾಂತರ ಕಾರ್ಯಕರ್ತರು ಇದ್ದಾರಲ್ಲ, ಅವರು ನಮ್ಮ ಶಕ್ತಿ. ಅವರು ಇರುವ ವರೆಗೂ ಈ ಪಕ್ಷಕ್ಕೆ ಅವರು ಯಾರಿಂದಲೂ ಏನೂ…

Read More

ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಕೆಲವು ದಿನಗಳಲ್ಲಿ ಘೋಷಣೆಯಾಗುವ ಸಾಧ್ಯತೆ ಇದ್ದು, ಈ ಮಧ್ಯೆ ಮತದಾರರ ಓಲೈಕೆಗಾಗಿ ರಾಜಕಾರಣಿಗಳು ಏನೆಲ್ಲಾ ಪ್ಲಾನ್ ಮಾಡುತ್ತಾರೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಅಂತೆಯೇ ಜಾತಿರಾಜಕಾರಣದ ಓಲೈಕೆಗಾಗಿ ಶಾಸಕರೊಬ್ಬರು ದೇವರ ಹುಂಡಿ ಹಣದಲ್ಲಿ ಸಮುದಾಯ ನಿರ್ಮಾಣ ಹಾಗೂ ಶಾದಿ ಮಹಲ್‍ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಗೆ ಪ್ರಸ್ತಾಪ ಸಲ್ಲಿಸಿದ್ದು ಸಿಎಂ ಕೂಡ ಪ್ರಸ್ತಾಪಕ್ಕೆ ಸಮ್ಮತಿ ಸೂಚಿಸಿರುವ ವಿಚಾರ ಬಹಿರಂಗವಾಗಿದೆ. ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್ ಈ ರೀತಿ ಪ್ರಸ್ತಾಪವನ್ನಿಟ್ಟಿದ್ದಾರೆ. ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ನಿಧಿಯಲ್ಲಿ ಸಾಕಷ್ಟು ಅನುದಾನವಿದ್ದು, ಈ ಹಣವನ್ನ ಬಳಸಿ ಶಾದಿ ಮಹಲ್ ಸಮುದಾಯ ಭವನ ಸೇರಿ ವಿವಿಧ ಕಾಮಗಾರಿಗಳನ್ನ ಕೈಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಬಳಿ ಪ್ರಸ್ತಾಪವಿಟ್ಟಿದ್ದಾರೆ. ಶಾಸಕ ಹರ್ಷವರ್ದನ್ ಪ್ರಸ್ತಾಪಕ್ಕೆ ಸಿಎಂ ಬೊಮ್ಮಾಯಿ ಕೂಡ ಸೈ ಎಂದು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಮುಜರಾಯಿ ಇಲಾಖೆ ಕಾಯ್ದೆ ಪ್ರಕಾರ ಯಾವುದೇ ದೇವಸ್ಥಾನದ ಹುಂಡಿ ಹಣವನ್ನು ಆ ದೇಗುಲದ ಅಭಿವೃದ್ಧಿಗೆ ಮಾತ್ರ…

Read More

ದೆಹಲಿ ಮದ್ಯ ನೀತಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮನೀಶ್ ಸಿಸೋಡಿಯಾ ಅವರನ್ನು ನಿರ್ದೇಶನಾಲಯ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ. ತಿಹಾರ್ ಜೈಲಿನಲ್ಲಿ ಸತತ ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ನಂತರ ಸಿಸೋಡಿಯಾ ಅವರನ್ನು ಬಂಧಿಸಿತ್ತು. ಕಳೆದ ವಾರ ಸಿಬಿಐನಿಂದ ಬಂಧನಕ್ಕೊಳಗಾಗಿದ್ದ ಸಿಸೋಡಿಯಾ ಅವರನ್ನು ನಿನ್ನೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆ ನಂತರವೇ ಇಡಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಕಳೆದ ನವೆಂಬರ್‌ನಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಿದ ದೆಹಲಿ ಅಬಕಾರಿ ನೀತಿಯೇ ವಿವಾದದ ಮೂಲ. ನೀತಿ ನಿರೂಪಣೆ ಮತ್ತು ಅನುಷ್ಠಾನದಲ್ಲಿ ಅವ್ಯವಹಾರ ನಡೆದಿದೆ ಎಂಬ ಮುಖ್ಯ ಕಾರ್ಯದರ್ಶಿ ವರದಿ ಕುರಿತು ರಾಜ್ಯಪಾಲರು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ. ಮದ್ಯ ನೀತಿಯಲ್ಲಿನ ಅವ್ಯವಹಾರದ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಅಬಕಾರಿ ಸಚಿವ ಸಿಸೋಡಿಯಾ ಸೇರಿದಂತೆ 15 ಜನರ ವಿರುದ್ಧ ಎಫ್‌ಐಆರ್ ಸಿದ್ಧಪಡಿಸಲಾಗಿದೆ. ನಂತರ ಇಡಿ ಕೂಡ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ವಿವಾದಗಳ ನಡುವೆಯೇ ಸರ್ಕಾರ ಮದ್ಯ…

Read More

ರಾಜ್ಯ ಪೊಲೀಸ್ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ 112 ಕೋಮು ಗಲಭೆ ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಸರಣಿ ಟ್ವೀಟ್ ಮಾಡಿ ರಾಜ್ಯ ಬಿಜೆಪಿ ಸರ್ಕಾರವನ್ನ ಜೆಡಿಎಸ್ ಘಟಕ ತರಾಟೆ ತೆಗೆದುಕೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ಸೌಹಾರ್ದತೆ, ಸಹಬಾಳ್ವೆಗೆ ಹೆಸರಾದ ಕರ್ನಾಟವು ರಾಜ್ಯ ಬಿಜೆಪಿ ಸರ್ಕಾರದ ನಾಲ್ಕು ವರ್ಷದ ಅವಧಿಯಲ್ಲಿ  ರಾಜ್ಯ ಪೊಲೀಸ್ ಇಲಾಖೆಯ ಪ್ರಕಾರ ಕೋಮು ಗಲಭೆ, ಕೋಮು ಹಿಂಸೆಯ 122 ಪ್ರಕರಣಗಳು ದಾಖಲಾಗಿವೆ. ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕರಾವಳಿ ಪ್ರದೇಶ ಮತ್ತು ಮಧ್ಯ ಕರ್ನಾಟಕವನ್ನು ಕೋಮು ದ್ವೇಷದ ಪ್ರಯೋಗಶಾಲೆ ಮಾಡಿಕೊಂಡ ಬಿಜೆಪಿ ಪಕ್ಷದ ಬಳುವಳಿ ಇದು. ರಾಜಕೀಯ ಲಾಭಕ್ಕಾಗಿ ರಾಜ್ಯ ಕಾಂಗ್ರೆಸ್ ಪಕ್ಷದ ಕುತಂತ್ರದ ಮೌನಕ್ಕೂ ಇದರಲ್ಲಿ‌ ಪಾಲಿದೆ ಎಂದು ಕಿಡಿಕಾರಿದೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗಜ್ಞಾನೇಂದ್ರ ಅವರೆ, ಕಳೆದ ಎರಡು ವರ್ಷಗಳಲ್ಲಿ 85 ಕೋಮು ಹಿಂಸೆಯ ಪ್ರಕರಣಗಳು ನಡೆಯಲು…

Read More

ಮಧುಗಿರಿ: ಕ್ಷೇತ್ರದಲ್ಲಿ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಸಾಕಷ್ಟು ಆರ್ಥಿಕ ನೆರವು ನೀಡಿದ್ದಾರೆ ಎಂದು ಕೆಜಿಎಫ್ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪ ಶಶಿಧರ್  ತಿಳಿಸಿದರು. ಪಟ್ಟಣದ ಎಪಿಎಂಸಿ ಹಿಂಭಾಗ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ತಾಲೂಕು ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬೂತ್ ಮಟ್ಟದ ಮಹಿಳಾ ಮುಖಂಡರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಅವರಿಗೆ ಆರ್ಥಿಕ ನೆರವು ನೀಡುವುದು ಅತ್ಯಗತ್ಯ, ಈ ನಿಟ್ಟಿನಲ್ಲಿ ಜಿಲ್ಲಾ ಬ್ಯಾಂಕ್ ನ ಅಧ್ಯಕ್ಷರಾಗಿರುವ ಕೆ.ಎನ್.ರಾಜಣ್ಣನವರು ಅನೇಕ ಸವಲತ್ತುಗಳನ್ನು ಒದಗಿಸಿ ಅವರಿಗೆ ಸ್ವಾಭಿಮಾನದಿಂದ ಬದುಕಲು ಅನುವು ಮಾಡಿಕೊಟ್ಟಿದ್ದಾರೆ ಎಂದರು. ಕಾಂಗ್ರೆಸ್ ಈ ಬಾರಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ,  ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2000 ಹಣ ನೀಡಲಾಗುವುದರ ಜೊತೆ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಹಾಗೂ ಪ್ರತಿಯೊಬ್ಬರಿಗೂ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ…

Read More

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ 23 ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ನೆರವಿಗೆ ಇಂಡೋಮಿಮ್ ಕಂಪನಿಯ ವತಿಯಿಂದ 70 ಸ್ಮಾರ್ಟ್ ಟಿ.ವಿ.ಗಳನ್ನು ವಿತರಿಸಲಾಯಿತು. ಗುರುವಾರ ಇದರ ಅಂಗವಾಗಿ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಮತ್ತೀಕೆರೆ ಸರಕಾರಿ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಕಂಪನಿಯ ಅಧ್ಯಕ್ಷ ಜಯರಾಂ ಅವರು ಈ ಸಾಧನಗಳನ್ನು ಸಚಿವರ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, “ಜಯರಾಂ ಅವರು ಈಗ ಕೊಟ್ಟಿರುವುದು ಸೇರಿದಂತೆ ಇದುವರೆಗೆ ಒಂದು ಕೋಟಿ ರೂಪಾಯಿ ಮೊತ್ತದ ಟ್ಯಾಬ್ ಮತ್ತು ಲ್ಯಾಪ್‌ಟಾಪ್ ಗಳನ್ನು ಕ್ಷೇತ್ರದ ಶಾಲೆಗಳಿಗೆ ಕೊಟ್ಟಿದ್ದಾರೆ. ಈಗ ಬಡವರ ಮಕ್ಕಳ ಸುಗಮ ಕಲಿಕೆಗೆ 50 ಇಂಚಿನ ಐವತ್ತು ಟಿ.ವಿ.ಗಳನ್ನು ಕೊಟ್ಟಿದ್ದಾರೆ. ಇದು ಅನುಕರಣಯೋಗ್ಯ ಸಂಗತಿಯಾಗಿದೆ” ಎಂದರು. ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲಿನ ಸರಕಾರಿ ಶಾಲೆಗಳಲ್ಲಿ ಈವರೆಗೆ 1,400 ಟ್ಯಾಬ್ ಮತ್ತು 23 ಸ್ಮಾರ್ಟ್ ಬೋರ್ಡ್ ಕೊಡಲಾಗಿದೆ. ಇದರಿಂದ ಆಧುನಿಕ ಮತ್ತು ವೈಜ್ಞಾನಿಕ ಕಲಿಕೆ ಸಾಧ್ಯವಾಗಿದೆ.…

Read More

ಬೆಳಗಾವಿ: ಕನ್ನಡ ಮಹಿಳಾ ಸಂಘದ ಸಾಹಿತ್ಯ ಕಲಾ ವೇದಿಕೆ ವತಿಯಿಂದ ಮಾರ್ಚ್ 19ರಂದು ಬೆಳಗಾವಿಯಲ್ಲಿ ಕನ್ನಡ ಗೀತೆಗಳ ಸ್ಪರ್ಧೆ ರಾಗ ರಂಜನಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಟಿಳಕವಾಡಿ 2ನೇ ರೈಲ್ವೆ ಗೇಟ್ ಬಳಿಯ ವರೇರ್ಕರ್ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ದಾಸರ ಪದಗಳನ್ನು ಹಾಡುವ ಸ್ಪರ್ಧೆ ಇದಾಗಿದ್ದು, ಸ್ಪರ್ಧೆಗೆ 5 ಜನ ಮಹಿಳೆಯರ ಅಥವಾ 5 ಜನ ಪುರುಷರ ಗುಂಪು ಇರಬೇಕು. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಮಾರ್ಚ್ 17ರ ಒಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಬೇಕು ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಿ: ಶುಭದಾ ಕೋಟೂಳಕರ – 9902852367 ಸಂಗೀತ ಪಾಟೀಲ -9980070771 ಗೌರಿ ಸರನೋಬತ್ -948139055 ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More