Subscribe to Updates
Get the latest creative news from FooBar about art, design and business.
- ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
- ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
- ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
- ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
- ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
- ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
- 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
- ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
Author: admin
ಬೆಂಗಳೂರು ಸೇರಿದಂತೆ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನಜೀವನ ಈಗಾಗ್ಲೆ ಅಸ್ತವ್ಯಸ್ಥವಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಹಾವೇರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಕಟ್ಟಡ ಕಾಮಗಾರಿ ನಡೆಯುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 50 ಮೀಟರ್ಗಳಷ್ಟು ತಾಮ್ರದ ಕೇಬಲ್ ವೈರ್ ಕದಿಯುತ್ತಿದ್ದ ಹೌಸ್ ಕೀಪಿಂಗ್ ಸಿಬ್ಬಂದಿಯೊಬ್ಬರು ರೆಸ್ಟ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕೇಬಲ ಕದ್ದ ರಾಹುಲ್ ಕುಮಾರ್ ವಿರುದ್ಧ ಕೆಐಎ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದ್ದು, ಇಂದು ಸೇವೆಯಿಂದ ವಜಾಗೊಳಿಸಲಾಗಿದೆ. ವಿಮಾನ ನಿಲ್ದಾಣದ ಪೊಲೀಸರ ಪ್ರಕಾರ, ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು 2 ನಡುವೆ ಮಲ್ಟಿ ಮಾಡಲ್ ಟ್ರಾಸ್ಪೋರ್ಟ್ ಹಬ್(ಎಂಎಂಟಿಎಚ್) ನಿರ್ಮಿಸುತ್ತಿರುವ ಗೋದ್ರೇಜ್ ಮತ್ತು ಬಾಯ್ಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿಯ ಸೆಕ್ಷನ್ 379(ಕಳ್ಳತನ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಎಸ್ಎಲ್ ವಿ ಸರ್ವಿಸೆಸ್, ತನ್ನ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿದ್ದ ರಾಹುಲ್ ಕುಮಾರ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಿಹಾರ ಮೂಲದ ಕುಮಾರ್ ಮಂಗಳವಾರ ಸಂಜೆ 5. 30 ರ ಸುಮಾರಿಗೆ ಕೇಬಲ್ ಅನ್ನು ಹೊತ್ತುಕೊಂಡು ನಿರ್ಮಾಣ ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ವಿಮಾನ ನಿಲ್ದಾಣದ ನಿರ್ವಾಹಕರು, ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋಟ್‌್ರ ಲಿಮಿಟೆಡ್…
ತುಮಕೂರು: ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಬೆಸ್ಕಾಂ ಇಂಜಿನಿಯರ್ ಒಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡದಲ್ಲಿ ನಡೆದಿದೆ. ಬೆಂಗಳೂರಿನಲ್ಲಿರುವ ಬೆಳ್ಳಂದೂರಿನ ಬೆಸ್ಕಾಂ ಪೂರ್ವ ವಿಭಾಗದ ಜೂನಿಯರ್ ಇಂಜಿನಿಯರ್ ಮಂಜುನಾಥ್ (22) ಆತ್ಮಹತ್ಯೆ ವ್ಯಕ್ತಿಯಾಗಿದ್ದಾರೆ. ಪಾವಗಡ ಪಟ್ಟಣದ ಲಾಡ್ಜ್ ವೊಂದರಲ್ಲಿ ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆ ವಿಚಾರದಲ್ಲಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪಾವಗಡ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಶಿರಾ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ವಿಧಾನ ಪರಿಷತ್ ಶಾಸಕ ಚಿದಾನಂದ ಗೌಡರು ಇಂದು ಭೇಟಿ ನೀಡಿ, ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರಿಗೆ ಸಿಇಟಿ ಗೆ ಸಂಬಂಧಪಟ್ಟ ಸುಮಾರು ಮೂರುವರೆ ಸಾವಿರ ಬೆಲೆ ಬಾಳುವ 4 ಉಚಿತ ತರಬೇತಿ ಪುಸ್ತಕ ನೀಡುವುದರ ಜೊತೆಗೆ ಉಚಿತ “CET” ತರಬೇತಿ ಕ್ಲಾಸ್ ಗೆ ಚಾಲನೆ ನೀಡಿದರು. ಕಳೆದ ಕೆಲ ದಿನಗಳ ಹಿಂದೆ ಈ ಸರ್ಕಾರಿ ಕಾಲೇಜ್ ಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಉಚಿತವಾಗಿ CET ತರಬೇತಿ ಕ್ಲಾಸ್ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ತಮ್ಮ ಭರವಸೆಯನ್ನು ನೆರವೇರಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಈ ಹಂತದಲ್ಲಿ ನೀವೆಲ್ಲ ಬಹಳ ಗಮನವಿಟ್ಟು ಓದಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಕಷ್ಟಪಟ್ಟು ಶ್ರದ್ದೆಯಿಂದ ಕಲಿಯಬೇಕು. ನೀವುಗಳು ಜೀವನದಲ್ಲಿ ಅತ್ಯುತ್ತಮ ಮಟ್ಟಕ್ಕೇರಿ, ಈ ತಾಲೂಕಿಗೆ ಕೀರ್ತಿ ತರಬೇಕೆಂಬುದು ನನ್ನ ಮಹಾದಾಸೆಯಾಗಿದೆ. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಇಂತಹ ಶಿಕ್ಷಣ ಪಡೆದು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ…
ಬೆಂಗಳೂರು: ನಾನು ಯಾವುದಾದರೂ ವರ್ಗಾವಣೆ ವಿಷಯದಲ್ಲಿ ಭಾಗಿಯಾದ ದಾಖಲಾತಿ ನೀಡಿದರೆ ರಾಜಕೀಯ ನಿವೃತ್ತಿ ಆಗುವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು. ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಸರಕಾರ ದಿನದ 24 ಗಂಟೆಯೂ ವರ್ಗಾವಣೆ ದಂಧೆಯನ್ನೇ ನಡೆಸುತ್ತಿದೆ. ಅಭಿವೃದ್ಧಿ ಬದಲು ನಗದು ಅಭಿವೃದ್ಧಿಯಲ್ಲಿ ತೊಡಗಿದೆ. ಇದನ್ನು ಹೇಳಿದರೆ ನಮ್ಮ ಮೇಲೆಯೇ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ನನ್ನಲ್ಲಿ ಈ ಸರಕಾರ ನಡೆಸುತ್ತಿರುವ ವರ್ಗಾವಣೆ ದಂಧೆಗಳಿಗೆ ಸಂಬಂಧಿಸಿ ನನ್ನಲ್ಲಿ ದಾಖಲೆಗಳಿವೆ. ಅದರಲ್ಲಿ ಯಾರಿಗೂ ಅನುಮಾನ ಬೇಡ. ಅದನ್ನು ಬಿಡುಗಡೆ ಮಾಡಬೇಕಾದ ಸಂದರ್ಭದಲ್ಲಿ ಮಾಡುತ್ತೇನೆ. ಯಾವಾಗ, ಎಲ್ಲಿ ಬಿಡುಗಡೆ ಮಾಡುತ್ತೇನೆ ಎಂಬುದು ನನಗೆ ಗೊತ್ತಿದೆ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಹಲವಾರು ವರ್ಷಗಳು ಕೆಲಸ ಮಾಡಿದ್ದಾರೆ, ಅವರು ಎಂದಾದರೂ ದಾಖಲೆ ಬಿಡುಗಡೆ ಮಾಡಿದ್ದರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನೆ ಮಾಡಿದರು. ಅವರು ಎಂದೂ ದಾಖಲೆ ಇಟ್ಟು ಮಾತನಾಡಿದನ್ನು ನಾನು ನೋಡಲೇ ಇಲ್ಲ.…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂಬರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು ಭಾವಿಸಿದ್ದೇವು. ಅದು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಹುದ್ದೆಯಲ್ಲಿ ಅಧಿಕಾರ ಕಡಿಮೆ ಗೌರವ ಜಾಸ್ತಿ, ನೀವು ಸರಳ ಸಜ್ಜನರಿದ್ದೀರಿ, ನಾನು ನಿಮ್ಮ ತಾಂಡಾಕ್ಕೆ, ಮನೆಗೆ ಬಂದಿದ್ದೇನೆ. ರಾಜಕಾರಣದಲ್ಲಿ ಯಾರು ಏನು ಬೇಕಾದರೂ ಆಗಬಹುದು. ರಾಜಕಾರಣದಲ್ಲಿ ಪವರ್ ಪೊಲಿಟಿಕ್ಸ್ ಇಸ್ ವೇಟಿಂಗ್ ಗೇಮ್ ಅಂತ ಈಗ ಅದು ಅವಕಾಶ ಬಂದಾಗ ಅದನ್ನು ಪಡೆದುಕೊಳ್ಳಬೇಕು. ಶಕ್ತಿ ಇದ್ದವರು ಅಧಿಕಾರ ಪಡೆದುಕೊಳ್ಳುವ ಕೆಲಸ ಮಾಡುತ್ತಾರೆ ಎಂದರು. ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ ವೀರನೂ ಅಲ್ಲ ಎಂದು ಅಲ್ಲಮಪ್ರಭುಗಳು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿ ಕೆ…
2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು. ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಹಾಗೂ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. 2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕವನ್ನು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಂಡಿಸಿದರು. ಕಾನೂನು ಸಚಿವ ಎಚ್. ಕೆ. ಪಾಟೀಲ್ ಪರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, 2023ನೇ ಸಾಲಿನ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪರವಾಗಿ 2023ನೇ ಸಾಲಿನ ಕರ್ನಾಟಕ ಅಗ್ನಿಶಾಮಕ ತಿದ್ದುಪಡಿ ವಿಧೇಯಕ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರವಾಗಿ 2023ನೇ ಸಾಲಿನ ಕರ್ನಾಟಕ…
ಬೆಂಗಳೂರು: ರಾಜ್ಯದ ಅಂಗನವಾಡಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರಿಗೆ ಫಿಲ್ಟರ್ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ. ಕರ್ನಾಟಕ ವಿಧಾನ ಸಭೆಯಲ್ಲಿ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಕೆ.ಎಂ. ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬರುವ ಬಜೆಟ್ ನಲ್ಲಿ ಈ ಯೋಜನೆ ಅಳವಡಿಸಿಕೊಳ್ಳಲು ಮುಖ್ಯಮಂತ್ರಿಗೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಅನೇಕ ಅಂಗನವಾಡಿಗಳ ಕಟ್ಟಡಗಳ ನಿರ್ಮಾಣ ಕಾರ್ಯ ಅರ್ಧದಲ್ಲಿದ್ದು ಅವುಗಳನ್ನು ಪೂರ್ತಿಗೊಳಿಸಲು ಹಾಗೂ ಅಂಗನವಾಡಿ ಮಕ್ಕಳಿಗೂ ಶೌಚಾಲಯ ವ್ಯವಸ್ಥೆ ಒದಗಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂಬ ಶಾಸಕ ನಾರಾಯಣಸ್ವಾಮಿ ಅವರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳಕರ, ಆದಷ್ಟೂ ಶೀಘ್ರವೇ ಈ ಕುರಿತು ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ಇಲಾಖೆಗೆ ಈ ಕುರಿತು ಸೂಚನೆ ನೀಡಲಾಗುವುದು ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಕಟ್ಟಲು ಈ ಹಿಂದೆ ಶೇ 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಡಿಸ್ಕೌಂಟ್ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಲು ಈ ಹಿಂದೆ ಆದೇಶಿಸಲಾಗಿತ್ತು. ಇದೀಗ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ 50ರ ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಂಗಳೂರು: ಬಿಜೆಪಿ ಪ್ರತಿಭಟನೆ ಪಶ್ಚಾತ್ತಾಪದ ಪ್ರತಿಭಟನೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ದೆಹಲಿಯಲ್ಲಿ ಪ್ರತಿಭಟಿಸಿ. ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧರಣಿ ನಡೆಸಲಿ. ತೈಲ ಬೆಲೆ ಕುಸಿದಿದ್ದರೂ ಪೆಟ್ರೋಲ್, ಡೀಸೆಲ್ ದರ ಇಳಿಸಿಲ್ಲ. ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸದಿದ್ದರಿಂದ ಬೆಲೆ ಏರಿಕೆಯಾಗಿದೆ ಎಂದು ಸದನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA