Author: admin

ಕಲಬುರಗಿ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರರು -08, ಬೆರಳಚ್ಚುಗಾರರು-09, ಬೆರಳಚ್ಚು ನಕಲುಗಾರರು- 01, ಆದೇಶಜಾರಿಕಾರ- 13, ಜವಾನರು- 29 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಕಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆದೇಶ ಜಾರಿಕಾರ ಹಾಗೂ ಜವಾನರ ಹುದ್ದೆಗಳಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಲಘುವಾಹನ ಚಾಲನಾ ಪರವಾನಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಾಲತಾಣ https://districts.ecourts.gov.in/kalaburagi ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ…

Read More

ಬೈಲಹೊಂಗಲ : ಬೈಲಹೊಂಗಲ ತಾಲೂಕಿನ ಗದ್ದಿಕೊರವಿನಕೊಪ್ಪ ಗ್ರಾಮದ ರೈತರ ಹೊಲವೊಂದರಲ್ಲಿ ಬೃಹತ್ ಗಾತ್ರದ ಬಿಳಿ ಬಣ್ಣ ದ ಬಲೂನ್ ಒಂದು ಪತ್ತೆಯಾಗಿದ್ದು ಸ್ಥಳದಲ್ಲಿ ಆತಂಕ ಸೃಷ್ಟಿಸಿದೆ‌. ಪತ್ತೆಯಾದ ವಿಚಿತ್ರ ಬಲೂನ್ ಹವಾಮಾನ ಇಲಾಖೆಗೆ ಸಂಭಂದಿಸಿದ ಬೃಹತ್ ಗಾತ್ರದ ಬಲೂನಾಗಿದ್ದು ರೈತರ ಹೊಲದಲ್ಲಿ ಹಾರಿಬಂದು ಬಿದ್ದಿದೆ. ಇದು ಕಂಡುಬರುತ್ತಿದ್ದಂತೆ ರೈತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಈಗಾಗಲೇ ಬಲೂನ್ ಕುರಿತು ಮಾಹಿತಿ ಪಡೆಯಲಾಗಿದ್ದು ಅವುಗಳಲ್ಲಿ ಬಳಸಲಾದ ಇಲೆಕ್ಟ್ರಾನಿಕ್ ವಸ್ತುಗಳು ಹವಾಮಾನ ಇಲಾಖೆಯಲ್ಲಿ ಬಳಸುವ ಸಾಧನಗಳಾಗಿವೆ ಎಂದು ತಿಳಿಸಿದ್ದಾರೆ. ಸಾಮಾನ್ಯವಾಗಿ ಈ ವಸ್ತುಗಳನ್ನು, ಎತ್ತರದ ತಾಪಮಾನದ ಆರ್ದ್ರತೆ, ಗಾಳಿಯ ವೇಗ, ಗಾಳಿಯ ಒತ್ತಡ ಇತ್ಯಾದಿಗಳನ್ನು ಮೇಲ್ವಿಚಾರಣೆ ಮಾಡಲು ಬಳಸುವ ಏಕೈಕ ಸಾಧನವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಆದಾಯ ತೆರಿಗೆ ಇಲಾಖೆಯು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 71 ಮೆರಿಟೋರಿಯಸ್ ಸ್ಪೋರ್ಟ್ಸ್‌ ಪರ್ಸನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಯು 2 ವರ್ಷಗಳ ಪ್ರೊಬೇಷನ್ ಅವಧಿಯನ್ನು ಪೂರೈಸಬೇಕು. ಅರ್ಜಿ ಸಲ್ಲಿಸುವ ಆರಂಭ ದಿನಾಂಕ -ಫೆಬ್ರವರಿ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -ಮಾರ್ಚ್ .24 ಹುದ್ದೆಯ ಹೆಸರು ಮತ್ತು ಸಂಖ್ಯೆ ಆದಾಯ ತೆರಿಗೆ ನಿರೀಕ್ಷಕ-10 ತೆರಿಗೆ ಸಹಾಯಕ -32 ಬಹು ಕಾರ್ಯ ಸಿಬ್ಬಂದಿ -29 ಅರ್ಹತಾ ಮಾನದಂಡಗಳು: ಆದಾಯ ತೆರಿಗೆ ನಿರೀಕ್ಷಕ -ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಪಡೆದಿರಬೇಕು. ತೆರಿಗೆ ಸಹಾಯಕ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಪಡೆದಿರಬೇಕು. ಪ್ರತಿ ಗಂಟೆಗೆ 8000 ಪ್ರಮುಖ ಡಿಪ್ರೆಶನ್‌ಗಳ ಡೇಟಾ ಎಂಟ್ರಿ ಮಾಡುವ ಕೌಶಲ್ಯ ಹೊಂದಿರಬೇಕು. ಬಹು ಕಾರ್ಯ ಸಿಬ್ಬಂದಿ: ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪಡೆದಿರಬೇಕು. ವೇತನ: ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ – 44900- 142400…

Read More

ಬೆಳಗಾವಿ: “ಕೇವಲ ನಾಲ್ಕುವರೆ ವರ್ಷದ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೈಗೊಂಡ  ಅಭಿವೃದ್ಧಿ ಕಾರ್ಯಗಳು ಸಮಾಧಾನ ತಂದಿದ್ದು ಇದಕ್ಕೆ ಕ್ಷೇತ್ರದ ಜನತೆ ನೀಡಿದ ಸಹಕಾರ ಮಾದರಿಯಾಗಿದೆ” ಎಂದು ಶಾಸಕಿ ಲಕ್ಷ್ಮೀ  ಹೆಬ್ಬಾಳಕರ್  ಹೇಳಿದರು. ಅವರು, ಹಿಂಡಲಗಾ ಗ್ರಾಮದ ಸಿಂಡಿಕೇಟ್ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಪೇವರ್ಸ್ ರಸ್ತೆ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಕಾಲೋನಿಯಲ್ಲಿ ನೂತನ ಉದ್ಯಾನ ನಿರ್ಮಾಣಕ್ಕಾಗಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 25 ಲಕ್ಷ ರೂ. ವೆಚ್ಚದ ಉದ್ಯಾನ ನಿರ್ಮಾಣದ ಕಾಮಗಾರಿಗಳಿಗೆ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ರಾಮಕೃಷ್ಣ ಭಟ್, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ, ಶೋಭಾ , ವಿಜಯಾ ಆಚಾರ್ಯ, ರಾಹುಲ್ ಉರಣಕರ್, ವಿಠ್ಠಲ ದೇಸಾಯಿ, ಚೇತನಾ ಅಗಸ್ಗೆಕರ್, ಸೀಮಾ ದೇವಕರ್, ಗಜಾನಂದ ಕಾಕತ್ಕರ್, ಸಂತೋಷ ಫರ್ನಾಂಡಿಸ್, ಅಶೋಕ ಕಾಂಬಳೆ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಬರ್ಲಿನ್: ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಜರ್ಮನಿಯ ಹ್ಯಾಮ್‍ಬರ್ಗ್‍ನ ಯೆಹೋವ್‌ನ ವಿಟ್‍ನೆಸ್ ಚರ್ಚ್‍ನಲ್ಲಿ ನಡೆದಿದೆ. ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿ ನಡೆಸಿದವರು ಪರಾರಿಯಾಗಿರುವ ಅಥವಾ ಸಾವಿಗೀಡಾದ ಬಗ್ಗೆ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 9:15ರ ಸಮಯದಲ್ಲಿ ಪೊಲೀಸರಿಗೆ ತುರ್ತು ಕರೆಯೊಂದು ಬಂದಿದೆ. ಕರೆಯ ಆಧಾರದ ಮೇಲೆ ಚರ್ಚ್ ಬಳಿಗೆ ತೆರಳಿದ ಪೊಲೀಸರು ಗಾಯಗೊಂಡವರ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗುಂಡಿನ ದಾಳಿ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ಹೆಲಿಕಾಪ್ಟರ್ ಮೂಲಕ ಥರ್ಮಲ್ ಇಮ್ಯಾಜಿಂಗ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾರ್ಯಾಚರಣೆಗೆ ಅನುಕೂಲವಾಗುವಂತೆ ಸ್ಥಳೀಯ ನಿವಾಸಿಗಳಿಗೆ ಬೇರೆ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್…

Read More

ಬೆಳಗಾವಿ: ಬಿಜಗರಣಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್. ಅಂಬೇಡ್ಕರ್ ಅವರ ನೂತನ ಮೂರ್ತಿ ಪ್ರತಿಷ್ಠಾಪನೆಯ ಸಲುವಾಗಿ ಅಡಿಪಾಯಕ್ಕೆ ಕಾಂಕ್ರೀಟ್ ಹಾಕುವ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಪೂಜಾ ಸುತಾರ, ಮನೋಹರ್ ಬೆಳಗಾಂವ್ಕರ್ ಚಂದ್ರಭಾಗ ಜಾಧವ್, ಲಕ್ಷ್ಮೀ ಪಾಟೀಲ, ಮಂಜುಳಾ ಕೌಶಿಕ್, ಭಾರಕು ತಾರಿಹಾಳ್ಕರ್, ಸಾಗರ ನಾಯ್ಕ್, ಮಲ್ಲಪ್ಪ ಚೌಗುಲೆ ಹಾಗೂ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುತ್ತಿರೋ ಬೆನ್ನಲ್ಲೆ ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ಮಹತ್ವದ ತೀರ್ಮಾನವಾಗಲಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸುಮಲತಾ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್ ನೀಡುವ ಬಗ್ಗೆ ನಾಳೆ ಸುಮಲತಾ ನಿವಾಸದಲ್ಲೇ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಸುಮಲತಾ ಅಂಬರೀಷ್‌ ಮಹತ್ವದ ಘೋಷಣೆಯನ್ನು ಮಾಡಲಿದ್ದಾರೆ. ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ಆಪ್ತರೊಳಗಡೆ ಒಮ್ಮತ ತೀರ್ಮಾನ ಸಾಧ್ಯತೆಯಿದೆ. ಮಂಡ್ಯದ ಸುಮಲತಾ ತಮ್ಮ ನಿವಾಸದಲ್ಲೇ ಅಧಿಕೃತವಾಗಿ ಬಿಜೆಪಿ ಸೇರುವ ಬಗ್ಗೆ ಘೋಷಣೆ ಮಾಡಲಿದ್ದಾರೆ. ಮಂಡ್ಯ ಹಾಗೂ ಬೆಂಗಳೂರಿನ ಆಪ್ತರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಂಡ ಬಗ್ಗೆ ಮಾಹಿತಿ  ಬಹಿರಂಗವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುರುವೇಕೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಎನ್.ಎಚ್.ಎಂ. ಅಡಿಯಲ್ಲಿ ಒಳಗುತ್ತಿಗೆ ಆಧಾರದಲ್ಲಿ ನೌಕರರಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿ ತಮ್ಮ ಹುದ್ದೆಗಳ ಖಾಯಂಗಾಗಿ ಕಳೆದ 25 ದಿನಗಳಿಂದ ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದು ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳು ಪರದಾಡುವಂತೆ ಆಗಿದೆ. ಈ ಸಾರ್ವಜನಿಕ ಆಸ್ಪತ್ರೆಯಲ್ಲಿ ಎನ್ ಹೆಚ್ ಎಂ ,ಅಡಿಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಸುಮಾರು 25 ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಐ ಸಿ ಯು, ಲೇಬರ್ ವಾರ್ಡ್, ಎಕ್ಸರೇ, ಬ್ಲಡ್ ಬ್ಯಾಂಕ್, ರಕ್ತ ಪರೀಕ್ಷಾ ಕೇಂದ್ರ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಂತಹ ವಿವಿಧ ವಿಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು 24/7 ಸೇವೆ ದೊರೆಯುವ ಈ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹಾಗೂ ಕಾಯಿಲೆಗಳ ಪರೀಕ್ಷೆಗಳಿಗಾಗಿ ಬರುವ ರೋಗಿಗಳಿಗೆ ಸರಿಯಾದ ಸೌಲಭ್ಯ  ಸಿಗುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ಖಾಸಗಿ ಆಸ್ಪತ್ರೆಗಳಿಗೆ ಹಾಗೂ ರಕ್ತ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಹಣ ನೀಡಿ,  ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಬಡತನದ ಬೇಗೆಯಲ್ಲಿ ಹಾಗೂ…

Read More

ಪಾವಗಡ: ನಿಡಗಲ್ಲು ಹೋಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಿ.ಕೆಪುರ ಕ್ಲಸ್ಟರ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಇದೇ ವೇಳೆ ಮಾತನಾಡಿದ ದೈಹಿಕ ಶಿಕ್ಷಕರಾದ ಲಕ್ಷ್ಮೀ ನಾರಾಯಣ, ಶಾಲೆಯಲ್ಲಿ ಉತ್ತಮವಾದ ಗುಣಮಟ್ಟದ ಬೋಧನೆ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿರುತ್ತಾರೆ. ಇದನ್ನು ತಮ್ಮ ಮಕ್ಕಳು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಮುಖ್ಯವಾಗಿ ಸರ್ಕಾರಿ ಶಾಲೆಯಲ್ಲಿ ನಮ್ಮ ಮಕ್ಕಳು ಓದುವುದರಿಂದ ಕನ್ನಡ ಉಳಿಸುವಂತೆ ಮಾಡಬಹುದು ಎಂದು ತಿಳಿಸಿಕೊಟ್ಟರು. ಇದೇ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ರತ್ನಮ್ಮ ಕೊಂಡಪ್ಪನವರು ಈ ಸರ್ಕಾರಿ ಶಾಲೆಗೆ ಧ್ವನಿ ವರ್ಧಕ  ಉಚಿತವಾಗಿ ನೀಡಿದರು. ಇದೇ ಶಾಲೆಯ ಶಿಕ್ಷಕರಾದ ಪೃಥ್ವಿ ಮೌನಿಕ ಇವರ ಕುಟುಂಬದಿಂದ ಅನ್ನ ದಾನ ಮಾಡಿದರು. ಕಾರ್ಯಕ್ರಮದಲ್ಲಿ ಚಿದಾನಂದ ಸ್ವಾಮಿ ದೈಹಿಕ ಶಿಕ್ಷಣ ಪರಿವೀಕ್ಷಕರು ಪಾವಗಡ,  ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಪವನ್ ಕುಮಾರ್ ರೆಡ್ಡಿ, ಚಿದಾನಂದ ಸ್ವಾಮಿ ಟಿ.ಪಿ.ಇ.ಓ. ಪಾವಗಡ, ರಂಗನಾಥ ಇ ಸಿ ಓ., ದೇವರಾಜು ಬಿ.ಆರ್.ಸಿ.,  ಎಲ್ ಮೂರ್ತಿ. ಸಿ.ಆರ್. ಪಿ., ಎಚ್.ನಾಗರಾಜು ತಾ.ದೈ.ಶಿ. ಸಂಘದ ಅದ್ಯಕ್ಷರು,…

Read More

ರಾಜ್ಯದಲ್ಲಿ ಸರ್ಕಾರದಲ್ಲಿ ನಡೆಯುವ ಅವ್ಯವಹಾರದ ಬಗ್ಗೆ  ಅಂದರೆ ಮರಳುಮಾಫಿಯ, ಸರ್ಕಾರಿ ಇಲಾಖೆಗಳಲ್ಲಿ ನಡಿವ ಅವ್ಯವಹಾರಗಳ ಬಗ್ಗೆ ಪ್ರಾಮಾಣಿಕ ಸಾಮಾಜಿಕ ಕಾರ್ಯಕರ್ತರು, ಆರ್‌ಟಿಐ ಕಾಯ್ದೆಯ ಸದುಪಯೋಗ ಮಾಡಿಕೊಂಡು ಈ ಕಾಯ್ದೆಯಿಂದ ಮಾಹಿತಿ ಪಡೆದುಕೊಂಡು, ಮಾಧ್ಯಮಗಳಿಗೆ ಬಿಡುಗಡೆ ಹಾಗೂ ಸರ್ಕಾರಗಳ ಮೇಲೆ ಒತ್ತಡ ತರುವ ಸಂದರ್ಭದಲ್ಲಿ  ರಾಜಕಾರಣಿಗಳು ಹಾಗೂ ಅಧಿಕಾರಿಗಳು ತಮ್ಮ ಪಟಲಂ ಕಟ್ಟಿಕೊಂಡು ಸಾಮಾಜಿಕ ಕಾರ್ಯಕರ್ತರ ಮೇಲೆ ಹಲ್ಲೆ, ಹಾಗೂ ಅನೇಕ ಕಾರ್ಯಕರ್ತರನ್ನು ಕೊಲೆಗೈದಿರುವುದು ಮಾಧ್ಯಮಗಳಲ್ಲಿ ನೋಡಿದ್ದೇವೆ, ಆದರೆ ಸಾಮಾಜಿಕ ಕಾರ್ಯಕರ್ತರು ಜನಸಾಮಾನ್ಯರ ಅನುಕೂಲಕ್ಕಾಗಿ ಹಾಗೂ ಕಾನೂನುಗಳನ್ನು ರಕ್ಷಣೆ ಮಾಡುವ ಉದ್ದೇಶದಿಂದ ಸಾಮಾಜಿಕ ಕಾರ್ಯಕರ್ತರು ತಮ್ಮ ಪ್ರಾಣ ಭಯ ಬಿಟ್ಟು, ಹೋರಾಟ ಮಾಡುವ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಾಗಲು, ಯಾವುದೇ ರಾಜಕೀಯ ಪಕ್ಷಗಳಾಗಲಿ ಅಥವಾ ಸಂಘಟನೆಗಳಾಗಲಿ ಇವರ ಪರ ಹೋರಾಟ ಮಾಡಿದ್ದು ಆಗಲಿ ಅಥವಾ ಹೇಳಿಕೆ ಕೊಟ್ಟಿದ್ದು ಆಗಲಿ ಕಂಡುಬಂದಿರುವುದಿಲ್ಲ ಎಂಬುದು ಹಲವಾರು ಪ್ರಜ್ಞಾವಂತರಿಂದ ಕೇಳಿ ಬರುತ್ತದೆ. ರಾಜಕಾರಣಿಗಳ ಮೇಲೆ ಅಧಿಕಾರಿಗಳ ಮೇಲೆ ತನಿಖಾ ಸಂಸ್ಥೆಗಳು ದಾಳಿ ಮಾಡಿ, ಇವರ ಆದಾಯ ಮೀರಿ ಬಂಡವಾಳ…

Read More