Author: admin

ಸರಗೂರು: ತಾಲ್ಲೂಕಿನ ದೊಡ್ಡಬರಗಿ ಗ್ರಾಮದಲ್ಲಿ ಚಿಕ್ಕತಾಯಮ್ಮ ಎಂಬುವರು ಮನೆ ಕಳೆದುಕೊಂಡ ನೋವಿನಿಂದ  ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡಬರಗಿ ಗ್ರಾಮದಲ್ಲಿ ನಡೆದಿದೆ‌. ಸರಗೂರು ತಾಲ್ಲೂಕಿನ ಎಂ ಸಿ ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ನೆರೆ ಸಂತ್ರಸ್ತ ಮಹಿಳೆ ಚಿಕ್ಕತಾಯಮ್ಮ  ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. 2022ರಲ್ಲಿ ಮಳೆಯಿಂದಾಗಿ ಇವರ ಮನೆ ಕುಸಿದು ಬಿದ್ದು ಸಂಪೂರ್ಣವಾಗಿ ನಾಶಗೊಂಡಿತ್ತು. ಮತ್ತೆ ಮನೆ ನಿರ್ಮಾಣಕ್ಕಾಗಿ ಕಂದಾಯ ಇಲಾಖೆಗೆ ಅರ್ಜಿಸಲ್ಲಿಸಿದ್ದರು. ಈ ವೇಳೆ ತಾಯಮ್ಮ ಕುಟುಂಬ ಫಲಾನುಭವಿ ಎಂದು ಬಿ2 ಗ್ರೇಡ್ ನೀಡಲಾಗಿತ್ತು. ನಂತರ ಆದ ಬೆಳವಣಿಗೆಯಲ್ಲಿ ಅಧಿಕಾರಿಗಳು ಫಲಾನುಭವಿಗಳ ಪಟ್ಟಿಯಿಂದ ಚಿಕ್ಕತಾಯಮ್ಮ ಅವರನ್ನು ಬಿಡಲಾಗಿತ್ತು. ಮನೆ ಕಳೆದುಕೊಂಡಿದ್ದ ತಾಯಮ್ಮ ಸರ್ಕಾರದ ಆಸರೆಯ ಭರವಸೆಯಲ್ಲಿದ್ದರು. ಆದರೆ, ಅವರನ್ನು ಫಲಾನುಭವಿಗಳ ಪಟ್ಟಿಯಿಂದ ಕೈ ಬಿಟ್ಟ ಹಿನ್ನೆಲೆಯಲ್ಲಿ ತೀವ್ರವಾಗಿ ನೊಂದಿದ್ದರು. ಈ ಬಾರಿ ಮಳೆಯ ಸಂದರ್ಭದಲ್ಲಿ ತಾನೆಲ್ಲಿ ವಾಸ ಮಾಡಬೇಕು ಎಂದು ತೋಚದೇ ತೀವ್ರ ಚಿಂತೆಯಲ್ಲಿದ್ದರು ಎನ್ನಲಾಗಿದೆ. ಇದನ್ನು ಆತ್ಮಹತ್ಯೆ ಎನ್ನಬೇಕೋ, ಅಧಿಕಾರಿಗಳ, ಸರ್ಕಾರಿ ಪ್ರಾಯೋಜಿತ ಕೊಲೆ ಎನ್ನಬೇಕೋ…

Read More

ತುಮಕೂರು: ಇಂದು ರಾಜ್ಯವ್ಯಾಪಿ ದ್ವಿತೀಯ ಪಿಯು ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಎಐಡಿಎಸ್ ಓ ದಿಂದ ಶುಭಾಶಯ ಕೋರಲಾಯಿತು. ಎಐಡಿಎಸ್ಓ ಸಂಘಟನೆಯ ಜಿಲ್ಲಾಧ್ಯಕ್ಷರು ಅಶ್ವಿನಿ, ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಇಂದು ತುಮಕೂರಿನ  ವಿವಿಧ ಪರೀಕ್ಷಾ ಕೇಂದ್ರಗಳಿಗೆ ತೆರಳಿ, “ಶಿಕ್ಷಣವೆಂದರೆ ಕೇವಲ ಮಾಹಿತಿ ಹೊಂದುವುದಲ್ಲ, ಬದಲಿಗೆ ಚಿಂತನೆಗಾಗಿ ಮೆದುಳನ್ನು ತರಬೇತುಗೊಳಿಸುವುದು” ಎಂಬ ಆಲ್ಬರ್ಟ್ ಐನ್ಸ್ಟಿನ್ನರ ಸೂಕ್ತಿಯನ್ನು ಹೊಂದಿರುವ ಬಿತ್ತಿ ಪತ್ರವನ್ನು ಹಿಡಿದು ವಿದ್ಯಾರ್ಥಿಗಳಿಗೆ ಒತ್ತಡಕ್ಕೆ ಒಳಗಾಗದೆ ನಿರಾಳವಾಗಿ ಪರೀಕ್ಷೆಗಳನ್ನು ಬರೆಯುವಂತೆ ಸಲಹೆ ನೀಡಿದರು. ತುಮಕೂರಿನಲ್ಲಿ, ಸರ್ಕಾರಿ ಪಿಯು ಕಾಲೇಜು, ಸಿದ್ದಾಗಂಗ ಪಿಯು ಕಾಲೇಜು, ಎಂಪ್ರೆಸ್ ಪಿಯು ಕಾಲೇಜು  ಹಾಗು ಇನ್ನಿತರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು ಎಂದು ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಸರಗೂರು: ಬದುಕಿನಲ್ಲಿ ಆಸ್ತಿ, ಅಂತಸ್ತು ಮುಖ್ಯ ಅಲ್ಲ. ಪ್ರೀತಿ — ವಿಶ್ವಾಸವೇ ಮುಖ್ಯ. ಬಡತನ — ಸಿರಿತನ ಶಾಶ್ವತವಲ್ಲ. ಪ್ರೀತಿ–ವಿಶ್ವಾಸವಿಲ್ಲದಿದ್ದರೆ ಬದುಕಿಗೆ ಅರ್ಥವಿಲ್ಲ ಎಂದು ಗುರುಮಲ್ಲೇಶ್ವರ ದಾಸೋಹ ಮಹಾಸಂಸ್ಥಾನ ಮಠಾಧ್ಯಕ್ಷರು ಶ್ರೀ ಮಹಾಂತಸ್ವಾಮಿ ತಿಳಿಸಿದರು . ಸರಗೂರು ತಾಲ್ಲೂಕಿನ ಪಟ್ಟಣದ ಪಡುವಲು ವಿರಕ್ತ ಮಠದಲ್ಲಿ 8 ನೇ ವರ್ಷದ ಶ್ರೀ ಕಾಳ ಒಡೆಯ ಗುರುಗಳ ಆರಾಧನೆ ಮಹೋತ್ಸವ ಮತ್ತು ವೀರಶೈವ ಲಿಂಗಾಯತ ವಧು–ವರರ ಉಚಿತ ಸಾಮೂಹಿಕ ವಿವಾಹ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು. ಗಂಡ — ಹೆಂಡತಿ ಸದಾ ಪರಸ್ಪರ ಅರ್ಥೈಸಿಕೊಂಡು ಪ್ರೀತಿ–ವಿಶ್ವಾಸದಿಂದ ಸಾರ್ಥಕ ಜೀವನ ನಡೆಸಬೇಕು ಎಂದು  ನೂತನ ದಂಪತಿಗಳಿಗೆ ಕಿವಿಮಾತು ಹೇಳಿದ ಅವರು,  ಸತ್ಯ, ಧರ್ಮ, ನ್ಯಾಯ ಮತ್ತು ನೀತಿಗೆ ಪ್ರಸಿದ್ಧವಾದುದು.  ಸಂಸಾರ ಸಾಗರಕ್ಕೆ ಧುಮುಕಿದ ನವದಂಪತಿಗಳು ಶ್ರೀ ಸ್ವಾಮಿಯ ಅನುಗ್ರಹದಿಂದ ಸುಖ – ಶಾಂತಿ ಮತ್ತು ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಹಾರೈಸಿದರು. ಸಮಾರಂಭ ಬಳಿಕ ಕಾಳ ಒಡೆಯ ಗುರುಗಳ ಮಹಾವಿದ್ಯಾಪೀಠ ಪಡುವಲು ವಿರಕ್ತ ಮಠದ…

Read More

ಮಧುಗಿರಿ: ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮಲಾಪುರ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟರಮಣಪ್ಪನವರು ಗುರುವಾರ ನಿಧನ ಹೊಂದಿದರು. ದೊಡ್ಡೇರಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯ 25/11/22ರ ನಿರ್ಣಾಯದಂತೆ ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರು ನಿಧನ ಹೊಂದಿದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಮೃತ ಗ್ರಾಮ ಪಂಚಾಯತ್ ಮಾಜಿ ಸದಸ್ಯ ವೆಂಕಟರಮಣಪ್ಪ ರವರ ಮೃತ ದೇಹಕ್ಕೆ ಪುಷ್ಪಮಾಲಿಕೆ ಗೌರವ ಸಲ್ಲಿಸಲಾಯಿತು. ಬಳಿಕ ಮೃತರ ಕುಟುಂಬಕ್ಕೆ ಅಂತ್ಯಕ್ರಿಯೆ ಖರ್ಚಿಗೆ ಐದು ಸಾವಿರ ಸಹಾಯಧನ ವರ್ಗ 1 ಅನುಧಾನದಲ್ಲಿ ಚೆಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ನಾಗಮಣಿ ರಂಗಸ್ವಾಮಿ, ಉಪಾಧ್ಯಕ್ಷ ಹರೀಶ್, ಸದಸ್ಯರಾದ ವಿಜಯ್ ಪ್ರಕಾಶ್, ಶ್ರೀದೇವಮ್ಮ, ಶಾರದಮ್ಮ, ಮಂಜಮ್ಮ ಗಂಗಾಧರ್ ಕಾರ್ಯದರ್ಶಿ ದಿವಾಕರ್ ಬಿಲ್ ಕಲೆಕ್ಟರ್ ವಿಜಯ್ ಕುಮಾರ್, DEO ಕರಿಯಣ್ಣ ವಾಟರ್ ಮ್ಯಾನ್ ಪ್ರಭಾಕರ್, ಹಾಗೂ ಗ್ರಾಮಸ್ಥರು ಇದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ತುಮಕೂರು: ದ್ವಿತೀಯ ಪಿಯು ಪರೀಕ್ಷೆ ಇಂದಿನಿಂದ ಆರಂಭಗೊಂಡಿದ್ದು ಗುರುವಾರ ಬೆಳಗ್ಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಆಗಮಿಸಿದರು. ಜಿಲ್ಲೆಯಲ್ಲಿ 27,857 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 12,889 ಗಂಡು ಮಕ್ಕಳು, 14,968 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. 35 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ.ಪರೀಕ್ಷೆಗಾಗಿ ಪಿಯು ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಪಿಯುಸಿ ಪರೀಕ್ಷೆಗಳು ಮಾರ್ಚ್ 9, 2023 ರಿಂದ ಮಾರ್ಚ್ 29, 2023 ರವರೆಗೆ ನಡೆಯಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್‌ ಗಳನ್ನು ಬಿಡುಗಡೆ ಮಾಡಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1,109 ಕೇಂದ್ರಗಳಲ್ಲಿ ನಡೆಯಲಿದ್ದು, 7,26,213 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 25,847 ಖಾಸಗಿ, 70,586 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ಒಟ್ಟು 3,62,509 ಬಾಲಕಿಯರು, ಮತ್ತು 3,63,704 ಬಾಲಕರು ಸೇರಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯದಲ್ಲಿ 2,47,269 ಮತ್ತು ವಿಜ್ಞಾನ ವಿಭಾಗದಿಂದ 2,44,129 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂಬ ಮಾಹಿತಿ  ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…

Read More

ಕಾಂಗ್ರೆಸ್ ನಾಯಕ ಇತ್ತೀಚೆಗೆ ದೇಶಾದ್ಯಂತ ಭಾರತ್ ಜೋಡೋ ಪಾದಯಾತ್ರೆ ಮಾಡಿದ್ದು ಯಶಸ್ವಿಯಾಗಿತ್ತು. ಈ ಯಾತ್ರೆ ಕುರಿತು ಮಾತನಾಡಿ ಕಾಂಗ್ರೆಸ್ ಟೀಕಿಸಿರುವ ಬಿ.ಎಸ್ ಯಡಿಯೂರಪ್ಪ, ರಾಹುಲ್ ಗಾಂಧಿ ಪಾದಯಾತ್ರೆ ಬಳಿಕ ಬಿಜೆಪಿ ಮೂರು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಟಾಂಗ್ ಕೊಟ್ಟರು. ಬೆಳಗಾವಿ ರಾಯಭಾಗದಲ್ಲಿ ಬಿಜೆಪಿ ಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ರಾಹುಲ್ ಗಾಂಧಿ ಪಾದಯಾತ್ರೆ ಬಳಿಕ ತ್ರಿಪುರಾ ನಾಗಲ್ಯಾಂಡ್ ಸೇರಿ ಮೂರು ಕಡೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮೋದಿ ಎಲ್ಲಾ ಧರ್ಮದವರನ್ನ ಸಮಾನವಾಗಿ ನೋಡಿದ್ದಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರನ್ನೂ ಸಮಾನವಾಗಿ ನೋಡಿದ್ದಾರೆ. ಒಂದು ದಿನವೂ ಅವರು ವಿಶ್ರಾಂತಿ ಪಡೆದಿಲ್ಲ ಎಂದು ತಿಳಿಸಿದರು. ಟಿಕೆಟ್ ನೀಡುವ ವಿಚಾರವನ್ನ ಹೈಕಮಾಂಡ್ ತಿರ್ಮಾನಿಸುತ್ತದೆ. ಹೈಕಮಾಂಡ್ ಹಾಗೂ ಚುನಾವಣಾ ಸಮಿತಿಯಲ್ಲಿ ಚರ್ಚೆಯಾದ ಬಳಿಕ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ನಿರ್ಧಾರವಾಗುತ್ತದೆ. ಇಲ್ಲಿನ ವಾಸ್ತವಿಕ ಸ್ಥಿತಿಯನ್ನ ತಿಳಿದುಕೊಂಡು ಹೈಕಮಾಂಡ್ ತಿರ್ಮಾನ ತೆಗೆದುಕೊಳ್ಳುತ್ತದೆ ಎಂದು ಬಿಎಸ್ ವೈ ತಿಳಿಸಿದರು. ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತೇವೆ ಎಂದು ಕನಸು…

Read More

ಬೀದರ್: ತಾಲ್ಲೂಕಿನ ಬಗದಲ್ ಗ್ರಾಮದ 30ಕ್ಕೂ ಹೆಚ್ಚು ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ನಗರದ ತಮ್ಮ ಗೃಹ ಕಚೇರಿಯಲ್ಲಿ ಮಾಜಿ ಶಾಸಕ ಅಶೋಕ ಖೇಣಿ ಅವರು ಧ್ವಜ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು. ಕಾರ್ಯಕರ್ತರಿಗೆ ಸ್ಪಂದನೆ ದೊರಕದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದೇವೆ ಎಂದು ಮುಖಂಡ ಕಾರ್ತಿಕ ದೇಸಾಯಿ ಹೇಳಿದರು. ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಮುಖಂಡರಾದ ಸಂತೋಷ ಪಾಟೀಲ, ಉದಯಕುಮಾರ ಚಟ್ನಳ್ಳಿ, ಆನಂದ ಕೆ, ವೈಜಿನಾಥ ಮೊದಲಾದವರು ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ವಿದ್ಯಾರ್ಥಿಗಳಿಗಾಗಿ ಈ ವರ್ಷ 150 ಕನಕದಾಸ ಹಾಸ್ಟೆಲ್ ಮಂಜೂರು ಮಾಡಲಾಗಿದ್ದು, 1 ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟಲ್ ಸೌಲಭ್ಯ ಕೊಡಲಾಗಿದೆ. ವಿದ್ಯಾರ್ಥಿಗಳ ಸಮಸ್ಯೆ ಅರ್ಥಮಾಡಿಕೊಂಡರೇ ಮಾತ್ರ ಇದು ಸಾಧ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದರು. ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಮೀಸಲಾತಿ ಕೆಲವೇ ಕೆಲವರಿಗೆ ಸಿಗುತ್ತಿತ್ತು. ಸೌಲಭ್ಯವನ್ನ ಕೆಲವರು ಮಾತ್ರ ಕಬಳಿಸುತ್ತಿದ್ದರು. ಅಶಿಕ್ಷಿತರಿಗೆ ಮುಗ್ದರಿಗೆ ಸೌಲಭ್ಯ ಸಿಗುತ್ತಿರಲಿಲ್ಲ ಬಿಜೆಪಿ ಸರ್ಕಾರದದಿಂದ ಜಾಗೃತಿ ಮೂಡಿಸಲಾಗುತ್ತಿದೆ. ಗಂಗಾಯಕಲ್ಯಾಣ ಯೋಜನೆ ಜನರಿಗೆ ತಲುಪುತ್ತಿದೆ ಎಂದರು. ಈ ವರ್ಷ 150ಕನಕದಾಸ ಹಾಸ್ಟೆಲ್ ಮಂಜೂರು ಮಾಡಲಾಗುತ್ತಿದೆ . ಶಿಕ್ಷಣಕ್ಕಾಗಿ ಸುತ್ತಮುತ್ತಲಿನ ಹಳ್ಳಿಗಳ ಮಕ್ಕಳು ಬರುತ್ತಾರೆ. ಆದರೆ ಆ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ದೊರೆಯುತ್ತಿರಲಿಲ್ಲ. ಬಜೆಟ್ ಇಲ್ಲದಿದ್ದರೂ 450 ಕೋಟಿ ನೀಡಿದ್ದೇವೆ ಅರ್ಹ ಫಲಾನುಭವಿಗಳಿಗೆ ಬೈಕ್ ವಿತರಣೆ ಮಾಡುತ್ತಿದ್ದೇವೆ. ಸಾಮಾಜಿಕ ನ್ಯಾಯ ಎನ್ನುವ ಪಕ್ಷಗಳು ಯಾಕೆ ಹಾಸ್ಟೆಲ್ ಮಾಡಲಿಲ್ಲ…?…

Read More

ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲೀಂ ರಾಜರು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈ ವಿರುದ್ದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಪ್ರಮೋದ್ ಮುತಾಲಿಕ್ ಸಾವಿರಾರು ವರ್ಷದಿಂದ ಮಠದಲ್ಲಿ ಪೂಜೆ ನಡೆಯುತ್ತಿದೆ. ಮುಸ್ಲೀಂ ವೋಟ್ ಬ್ಯಾಂಕ್ ಗಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ. ಕೀರ್ತಿ ಗಳಿಸಲು ಇಂತಹ ಅಸಹ್ಯ ಹೇಳಿಕೆ ನೀಡಿದ್ದಾರೆ. ಚುನಾವಣೆ ಹೊತ್ತಲ್ಲಿ ಇಂತಹ ಹೇಳಿಕೆ ಬೇಕಿತ್ತಾ…? ಎಂದು ಪ್ರಶ್ನಿಸಿದರು. ಮಿಥುನ್ ರೈ ತಮ್ಮ ಹೇಳಿಕೆಯನ್ನ ಹಿಂಪಡೆಯಬೇಕು. ಇಲ್ಲದಿದ್ದರೇ ಹಿಂದೂಗಳು ಮತ ಹಾಕಲ್ಲ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More