Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
Author: admin
ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಗೆ ಸುತ್ತೋಲೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಚುನಾವಣೆಯ ಪ್ರಾಥಮಿಕ ಹಂತಗಳು ಆರಂಭಗೊಂಡಿವೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ತಾತ್ಕಾಲಿಕ ಸಮಿತಿ ಮತದಾರರ ಪಟ್ಟಿಯನ್ನು ಸಂಗ್ರಹಿಸಿದೆ. ತಾತ್ಕಾಲಿಕ ಸಮಿತಿಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರನ್ನು ನೇಮಿಸಿದ ನಂತರ, ಚುನಾವಣಾ ಪ್ರಕ್ರಿಯೆ ತಕ್ಷಣ ಪ್ರಾರಂಭವಾಗಲಿದೆ. ಭಾರತ ಕುಸ್ತಿ ಒಕ್ಕೂಟದ ಚುನಾವಣೆಯನ್ನು ಆದಷ್ಟು ಬೇಗ ನಡೆಸುವಂತೆ ಮುಷ್ಕರ ನಿರತ ಕುಸ್ತಿಪಟುಗಳು ಸರ್ಕಾರವನ್ನು ಒತ್ತಾಯಿಸಿದರು. ಇದೇ ತಿಂಗಳ 30ರೊಳಗೆ ಚುನಾವಣೆ ನಡೆಯಲಿದೆ ಎಂದು ಆಟಗಾರರಿಗೆ ಕೇಂದ್ರ ಕ್ರೀಡಾ ಸಚಿವರು ಭರವಸೆ ನೀಡಿದ್ದರು.ಬ್ರಿಜ್ ಭೂಷಣ್ ಅಥವಾ ಅವರ ಸಹಚರರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ. ದಿನನಿತ್ಯದ ಕರ್ತವ್ಯಕ್ಕಾಗಿ ಸರ್ಕಾರ ನೇಮಿಸಿರುವ ತಾತ್ಕಾಲಿಕ ಸಮಿತಿಯ ಕಾರ್ಯಾದೇಶ ಇದೇ 17ಕ್ಕೆ ಕೊನೆಗೊಳ್ಳಲಿದೆ. ಭಾರತದ ಕುಸ್ತಿ ಒಕ್ಕೂಟದ ಚುನಾವಣೆಯ ಎಲೆಕ್ಟೋರಲ್ ಕಾಲೇಜ್ 50 ಮತಗಳನ್ನು ಒಳಗೊಂಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಅಪರಾಧಿಗಳಿಗಾಗಿ ಡಿಜಿಟಲ್ ಜೈಲು ಸ್ಥಾಪಿಸಲು ಪಂಜಾಬ್ ಸರ್ಕಾರ ಯೋಜಿಸುತ್ತಿದೆ. ಭಯೋತ್ಪಾದಕರು ಸೇರಿದಂತೆ ಅಪರಾಧಿಗಳನ್ನು ಇರಿಸಲು ಜೈಲು ಸಂಕೀರ್ಣದೊಳಗೆ ಐವತ್ತು ಎಕರೆ ಪ್ರದೇಶದಲ್ಲಿ ಹೆಚ್ಚಿನ ಭದ್ರತೆಯ ಡಿಜಿಟಲ್ ಜೈಲು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದರು. ಲೂಧಿಯಾನ ಬಳಿ ಡಿಜಿಟಲ್ ಜೈಲು ಸ್ಥಾಪನೆಗೆ ಕೇಂದ್ರ 100 ಕೋಟಿ ರೂ. ಲಡ್ಡಾ ಕೋಠಿಯಲ್ಲಿ ಹೊಸದಾಗಿ ನೇಮಕಗೊಂಡ ಜೈಲು ವಾರ್ಡರ್ ಗಳಿಗೆ ನೇಮಕಾತಿ ಪತ್ರವನ್ನು ಸಹ ವಿತರಿಸಿದರು ಎಂದು ಮುಖ್ಯಮಂತ್ರಿ ಹೇಳಿದರು. ಜೈಲಿನಲ್ಲಿ ನ್ಯಾಯಾಧೀಶರಿಗೆ ಪ್ರತ್ಯೇಕ ಕ್ಯಾಬಿನ್ ಕೂಡ ಇರಲಿದೆ. ಭಯೋತ್ಪಾದಕರು ಸೇರಿದಂತೆ ಅಪರಾಧಿಗಳನ್ನು ನ್ಯಾಯಾಲಯಕ್ಕೆ ಹಾಜರಾಗದೆ ವಿಚಾರಣೆಗೆ ಒಳಪಡಿಸಲು ವ್ಯವಸ್ಥೆಯು ಅನುಮತಿಸುತ್ತದೆ. ಭಗವಂತ್ ಮಾನ್ ಪ್ರತಿಕ್ರಿಯಿಸಿ, ಪೊಲೀಸರಿಗೆ ವಿಶೇಷ ತರಬೇತಿ ಸೇರಿದಂತೆ ವಿವಿಧ ಸುಧಾರಣೆಗಳ ಜತೆಗೆ ವೈಜ್ಞಾನಿಕ ರೀತಿಯಲ್ಲಿ ಪೊಲೀಸ್ ಪಡೆ ಆಧುನೀಕರಣಕ್ಕೆ ಶ್ರಮಿಸಲಾಗುತ್ತಿದೆ. ಮೊಬೈಲ್ ಫೋನ್ ಬಳಕೆಯನ್ನು ಪರಿಶೀಲಿಸಲು ಜೈಲಿನೊಳಗೆ ಹೈಟೆಕ್ ಜಾಮರ್ ಮತ್ತು ಇತರ ಸಾಧನಗಳನ್ನು ಅಳವಡಿಸಲಾಗುವುದು. ಗಡಿಯಾಚೆಗಿನ ನುಸುಳುವಿಕೆಯನ್ನು ತಡೆಯಲು ಪಂಜಾಬ್ ಪೊಲೀಸರು ಆ್ಯಂಟಿ ಡ್ರೋನ್ ತಂತ್ರಜ್ಞಾನವನ್ನೂ ಪರಿಚಯಿಸಲಿದ್ದಾರೆ.…
ಮುಂದಿನ 24 ಗಂಟೆಗಳಲ್ಲಿ ಬಿಪೋರ್ಜೋಯ್ ಚಂಡಮಾರುತ ತೀವ್ರಗೊಂಡು ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಮುನ್ಸೂಚಕರು ತಿಳಿಸಿದ್ದಾರೆ. ಚಂಡಮಾರುತವು ಪ್ರಸ್ತುತ ಗೋವಾದಿಂದ 690 ಕಿ.ಮೀ ದೂರದಲ್ಲಿ 145 ಕಿ.ಮೀ ಗರಿಷ್ಠ ವೇಗದಲ್ಲಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುಜರಾತ್. ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ-ಮ್ಯಾನ್ಮಾರ್ ಕರಾವಳಿಯ ಬಳಿ ಪ್ರಬಲವಾದ ವಾಯುಭಾರ ಕುಸಿತವಾಗಿ ಪರಿಣಮಿಸಿದೆ. ಮುಂದಿನ 4 ದಿನಗಳ ಕಾಲ ಕೇರಳದಲ್ಲಿ ವ್ಯಾಪಕ ಗುಡುಗು/ಮಿಂಚು/ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಕೇಂದ್ರ ಹವಾಮಾನ ಇಲಾಖೆಯ ಪ್ರಕಾರ ಜೂನ್ 10 ರಿಂದ 11 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ದೆಹಲಿ: ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಸೋತಿದೆ. ಈ ನಡೆ ಅನುಸರಿಸದಿದ್ದಿದ್ದರೆ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಸಿ.ಟಿ ರವಿ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿ ನಗರದಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಪ್ರತಿಭಟನಾ ರ್ಯಾಲಿ ನಡೆಯುತ್ತಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತಿದೆ. ವಿಧಾನಸಭೆ ಚುನಾವಣೆ ವರೆಗೆ ಕನಿಷ್ಠ ಶುಲ್ಕ 90 ರೂಪಾಯಿ ಇತ್ತು. ಮತದಾನ ಮರುದಿನವೇ KERC ಕನಿಷ್ಠ ಶುಲ್ಕ 140 ರೂ.ಗೆ ಏರಿಕೆ ಮಾಡಲಾಗಿದೆ. ಕೆಇಆರ್‌ಸಿ ನಿರ್ಧಾರಕ್ಕೆ ರಾಜ್ಯ ಸರ್ಕಾರ ತಕ್ಷಣವೇ ತಡೆ ನೀಡಬೇಕು. ಹೆಚ್ಚಳವಾಗಿರುವ ಶುಲ್ಕ ಕೈಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರ ಬಂದರೆ ನೇಕಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಲಾಗಿತ್ತು. ಸದ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ತಾವು ನೀಡಿದ ಭರವಸೆ ಈಡೇರಿಸುವಂತೆ ಆಗ್ರಹಿಸುತ್ತಿದ್ದಾರೆ. ಸಾಲಕ್ಕೆ ಬೇಸತ್ತು ರಾಜ್ಯದ 42 ನೇಕಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ನೇಕಾರ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡಬೇಕು. 10 ಎಚ್ ಪಿವರೆಗೆ ಉಚಿತ ವಿದ್ಯುತ್ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಅಸಲಿಯಾಗಿದ್ದು, ಅರ್ಜಿಯಲ್ಲಿರುವ ಒಂದೆರಡು ಅಂಶಗಳನ್ನು ಮತ್ತು ಡಿಸೈನ್ ನ್ನು ಸ್ವಲ್ಪ ಬದಲಿಸಲಾಗುವುದು ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಗೃಹಲಕ್ಷ್ಮಿ ಅರ್ಜಿ ನಮೂನೆ ಅಸಲಿ ನಮೂನೆಯಾಗಿದೆ, ಅದು ನಕಲಿ ಅಲ್ಲ. ಅರ್ಜಿಯಲ್ಲಿರುವ ಒಂದೆರಡು ಅಂಶಗಳನ್ನು ಬದಲಿಸಲಾಗುವುದು, ಜಾತಿ ಕಾಲಂ ತೆಗೆದು ವರ್ಗ ಎಂದು ಹಾಕಲಾಗುವುದು, ಅರ್ಜಿಯ ಡಿಸೈನ್ ಸ್ವಲ್ಪ ಬದಲಾಗಲಿದೆ ಎಂದು ತಿಳಿಸಿದರು. ಗೃಹಲಕ್ಷ್ಮೀ ಯೋಜನೆಗೆ ಮಗ ತೆರಿಗೆ ಕಟ್ಟುವುದು ಅನ್ವಯ ಆಗಲ್ಲ. ಫಲಾನುಭವಿಯ ಗಂಡ ತೆರಿಗೆ ಕಟ್ಟಿದರೆ ಪತ್ನಿಗೆ ಗೃಹಲಕ್ಷ್ಮೀ ಯೋಜನೆ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ. 90% ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಪ್ರಮುಖರಾಗಿದ್ದಾರೆ, ಯಜಮಾನಿ ಎಂದೇ ನಮೂದಾಗಿದೆ. ವೃದ್ದಾಶ್ರಮದಲ್ಲಿರುವ ಮಹಿಳೆಯರ ಹೆಸರಿನಲ್ಲಿ ಬಿಪಿಎಲ್ ಕಾರ್ಡ್ ಇದ್ದರೆ ಅವರಿಗೂ ಯೋಜನೆ ಸಿಗಲಿದೆ ಎಂದು ಹೆಬ್ಬಾಳಕರ್ ಹೇಳಿದರು. ಮತ್ತೇನಾದರೂ ಮಾರ್ಪಾಡುಗಳು ಅಗತ್ಯವೆನಿಸಿದರೆ…
ಉಡುಪಿ: ಶಾಲಾ ಪಠ್ಯ ಪುಸ್ತಕ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಉಡುಪಿಯಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಶಾಸನದ ಆಧಾರದಲ್ಲಿ ಸರ್ಕಾರ ನಡೆಯುವುದು. ಸರ್ಕಾರ ಪರಿಶೀಲನೆ ಮಾಡದೆ ಪಠ್ಯ ಬದಲು ಮಾಡುವುದು ಸರಿಯಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ, 2009ರಲ್ಲಿ ಯುಪಿಎ ಸರ್ಕಾರ ಬನ್ನಂಜೆ ಅವರಿಗೆ ಪದ್ಮಶ್ರೀ ನೀಡಿತ್ತು. ಹೆಡ್ಗೆವಾರ್ ಪಾಠವನ್ನು ಸರ್ಕಾರ ವಾಪಸ್ ಪಡೆಯುವುದಾಗಿ ಹೇಳಿದೆ. ಚಕ್ರವರ್ತಿ ಸೂಲಿಬೆಲೆ ಪಾಠ ವಾಪಸ್ ಪಡೆಯುವುದಾಗಿ ಹೇಳುತ್ತಿದ್ದಾರೆ. ವೈಚಾರಿಕ ವಿಚಾರದ ಮೇಲೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಎಲ್ಲ ಬೆಳವಣಿಗೆಗಳನ್ನೂ ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದನದ ಒಳಗೆ ಮತ್ತು ಹೊರಗೆ ಸರ್ಕಾರಕ್ಕೆ ಮನವರಿಕೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದ್ದಾರೆ. ವರುಣ ಕ್ಷೇತ್ರದ ಜನತೆಗೆ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಸಮಾವೇಶ ನಡೆಸಲಿದ್ದಾರೆ. ಬೆಳಗ್ಗೆ 11.30 ಬೆಂಗಳೂರಿನಿಂದ ತೆರಳುವ ಸಿಎಂ ಸಿದ್ದರಾಮಯ್ಯ, ಮಧ್ಯಾಹ್ನ 12.20ಕ್ಕೆ ಸುತ್ತೂರು ಹೆಲಿಪ್ಯಾಡ್ಗೆ ತಲುಪಲಿದ್ದಾರೆ. ಮಧ್ಯಾಹ್ನ 12.35ಕ್ಕೆ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶ ಬಳಿಕ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ ಸಂಜೆ 4 ಗಂಟೆಗೆ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೋಡಿ ಜೂ.11ರ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ ವಿದ್ಯುತ್ ಉಚಿತ ಕೊಡುತ್ತಿದ್ದೇವೆ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಗ್ಯಾರಂಟಿಗೆ ಜನತೆಯಲ್ಲಿ ಹಲವು ಗೊಂದಲಗಳು ಉಳಿದುಕೊಂಡಿವೆ. ಈ ಎಲ್ಲಾ ಗೊಂದಲಗಳಿಗೆ ತೆರೆಎಳೆಯಲು ಇಂಧನ ಸಚಿವ ಕೆಜೆ ಜಾರ್ಜ್ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಗೃಹಜ್ಯೋತಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಜನರು ಆಧಾರ್ ಕಾರ್ಡ್ ಅನ್ನು ಆರ್‌ಆರ್ ನಂಬರ್‌ಗೆ ಲಿಂಕ್ ಮಾಡಬೇಕು. ವಾಸದ ಕರಾರು ಪತ್ರ ಅಥವಾ ವೋಟರ್ ಐಡಿ ನೀಡಬೇಕು. ಬಾಡಿಗೆ ಮನೆಯವರಿಗೂ, ಸ್ವಂತ ಮನೆಯವರಿಗೂ ಇದು ಅನ್ವಯಿಸುತ್ತದೆ. ಬೆಂಗಳೂರು ಒನ್ ಸೇವಾಕೇಂದ್ರದಲ್ಲಿ ಈ ವ್ಯವಸ್ಥೆಯನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು. ಜೂನ್ 15 ರಿಂದ ನೋಂದಣಿ ಆರಂಭವಾಗಿ, ಆಗಸ್ಟ್ 1 ರಿಂದ ಯೋಜನೆ ಜಾರಿಗೆ ಬರಲಿದೆ. 2 ಕೋಟಿ 16 ಲಕ್ಷ ಗೃಹಬಳಕೆ ಗ್ರಾಹಕರು ಇದ್ದಾರೆ.…
ತುಮಕೂರು: ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡಿನಿಂದ ಕುಯ್ದು ಮತಿಭ್ರಮನೆಯ ತಾಯಿ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣದ ತಿಪ್ಪಾಪುರ ಛತ್ರದ ಬಳಿ ನಡೆದಿದೆ. ಶ್ವೇತಾ (28) ಎಂಬಾಕೆಯಿಂದ ಕೃತ್ಯ ನಡೆದಿದೆ. ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೈಯನ್ನು ಕುಯ್ದಿ ನಂತರ ತೀವ್ರ ರಕ್ತ ಸಾವ್ರವಾಗಿ ಮಗು ಸಾವನಪ್ಪಿದೆ. ಒಂದು ವರ್ಷದ ಕ್ರಿತೀಶ್ ಮೃತ ಮಗು ರಕ್ತದ ಮಡುವಿನಲ್ಲಿ ಮೃತಪಟ್ಟಿದೆ. ಬಳಿಕ ತಾನು ಕೂಡ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಶ್ವೇತಾ ರನ್ನು ಅಕ್ಕಪಕ್ಕದ ಮನೆಯವರು ಗಮನಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮಧುಗಿರಿ ನಿವಾಸಿ ಶಿವಾನಂದ ಎಂಬುವ ಪತ್ನಿಯಾಗಿದ್ದ ಶ್ವೇತಾ ಮಾನಸಿಕ ಅಸ್ವಸ್ಥೆಯಾಗಿದ್ದರು, ಇತ್ತೀಚೆಗಷ್ಟೇ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…