Author: admin

ಹೆಚ್​.ಡಿ ದೇವೇಗೌಡರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು ಹಾಕೋಕೆ ಹೊರಟಿದ್ದಾರೆ. ಹಾಸನ ಜಿಲ್ಲಾ ಬಿಜೆಪಿ ಮುಖಂಡರಿಗೆ ಮಾನ ಮರ್ಯಾದೆ ಏನೂ ಇಲ್ಲ ಎಂದು ಹೆಚ್​.ಡಿ.ರೇವಣ್ಣ ಕಿಡಿಕಾರಿದರು. ಹಾಸನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಹೆಚ್.ಡಿ ರೇವಣ್ಣ, ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕಿದ ಬಳಿಕ 5 ವರ್ಷ ಕಾಲ ಕಾಮಗಾರಿ ಸ್ಥಗಿತಗೊಂಡಿತ್ತು. ಕೆಲಸ ಮತ್ತೆ ಪುನಾರಂಭವಾಗಿ 1 ವರ್ಷ ಕಳೆದರು ಅಡಿಗಲ್ಲು ಹಾಕುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗೊತ್ತಿದೆಯೋ ಇಲ್ವೋ ನನಗೆ ಗೊತ್ತಿಲ್ಲ ಎಂದು ಕುಟುಕಿದರು. ಆಸ್ಪತ್ರೆ ಕಟ್ಟಡ ನಿರ್ಮಾಣ ಇನ್ನೂ ಮುಗಿದಿದ್ದರೂ ಉದ್ಘಾಟನೆಗೆ ಹೊರಟಿದ್ದಾರೆ. ಬರುವ ಚುನಾವಣೆಯಲ್ಲಿ 140 ಸ್ಥಾನಗಳನ್ನು ಗೆಲ್ಲುತ್ತಾರೆ ಅಂತ ಹೇಳಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅವರೇ ಉದ್ಘಾಟನೆ ಮಾಡಿಕೊಳ್ಳಲಿ. ನಾನು ಜಾರಿಗೆ ತಂದಿದ್ದ ಯೋಜನೆಗೆ ಅಡಿಗಲ್ಲು ಹಾಕಲು ಮುಂದಾಗಿದ್ದಾರೆ. ಹಾಗೇನಾದರೂ ಮಾಡಲು ಮುಂದಾದರೇ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಹುಲಿ ಯಾವತ್ತೂ ಸಣ್ಣ ಪುಟ್ಟ ಬೇಟೆಯಾಡಲ್ಲ. ಕಾದು ನೋಡಿ ದೊಡ್ಡ ಜಿಂಕೆಯನ್ನೇ ಬೇಟೆಯಾಡುತ್ತೆ ಎಂದು ಬಿಜೆಪಿಗೆ ಜನಾರ್ಧನ ರೆಡ್ಡಿ ಪರೋಕ್ಷ ಟಾಂಗ್ ನೀಡಿದರು. ಕೊಪ್ಪಳದ ಕನಕಗಿರಿಯಲ್ಲಿ ಮಾತನಾಡಿದ ಜನಾರ್ಧನ ರೆಡ್ಡಿ ನಾನು ಬೆಂಗಳೂರಿನ ಯಾವುದೇ ಕ್ಷೇತ್ರದಲ್ಲಿ ನಿಂತರೂ ಶಾಸಕನಾಗುತ್ತಿದ್ದೆ. ನನಗೆ ಕನಕಗಿರಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಬೇಡಿ ಎಂದಿದ್ದರು ಆದರೆ ನಾನು ಕಾಯುವ ಜಾಯಮಾನದವನಲ್ಲ. ಇಲ್ಲಿ ಸೇರಿದ ಜನ ನೋಡಿದರೇ 20 ಮಾತ್ರೆ ತೆಗದುಕೊಳ್ಳವವರು 40 ಮಾತ್ರೆ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಶ್ರೀರಾಮುಲುಗೆ ಪರೋಕ್ಷ ಟಾಂಗ್ ನೀಡಿದರು. ಬಿಎಸ್ ವೈ ರನ್ನ ಸಿಎಂ ಮಾಡಿದ್ದು ನಾನು ಅಂತ ಜನರು ಹೇಳುತ್ತಿದ್ದಾರೆ. ಕಲ್ಬುರ್ಗಿ ವಿಮಾನ ನಿಲ್ದಾಣ ಮಾಡಿದ್ದು ನಾನು. ಬಳ್ಳಾರಿ ವಿಮಾನ ನಿರ್ಮಿಸುವ ಕನಸಿತ್ತು. ಅದು ಅರ್ಧಕ್ಕೆ ನಿಂತಿದೆ. ಇನ್ನೊಂದು ವರ್ಷದಲ್ಲಿ ನಾವು ಅಧಿಕಾರಕ್ಕೆ ಬಂದರೇ ವಿಮಾನ ನಿಲ್ದಾಣ ಪೂರ್ಣಗೊಳಿಸುತ್ತೇವೆ ಎಂದರು. ಕೆಲ ಹುಚ್ಚು ರಾಜಕಾರಣಿಗಳು 12 ವರ್ಷದಿಂದ ರೆಡ್ಡಿ ರಾಜಕೀಯದಿಂದ ದೂರವಿದ್ದಾನೆ ರಾಜಕೀಯ ಜೀವನ ಮುಗಿಯಿತು ಎಂದುಕೊಂಡಿದ್ದರು. ಹುಲಿ ಯಾವತ್ತೂ ಸಣ್ಣ…

Read More

ನನಗೆ ಮತದಾರರೇ ದೇವರು ಕ್ಷೇತ್ರದ ಮತದಾರರೇ ನನ್ನ ತಂದೆ ತಾಯಿಂದಿರು. ಉಸಿರು ಇರುವವರೆಗೂ ಕ್ಷೇತ್ರ ಬಿಟ್ಟು ಹೋಗಲ್ಲ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ. ಬೂಕನಕೆರೆಯಲ್ಲಿ ಸಭೆಯೊಂದರಲ್ಲಿ ಭಾವುಕರಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಮತದಾರರಿಗೆ ಅನ್ಯಾಯ ಮಾಡಿದ್ರೆ ಭಗವಂತ ಬಿಡಲ್ಲ. ಕ್ಷೇತ್ರದ ಮತದಾರರೇ ನನ್ನ ತಂದೆ ತಾಯಿ. ನೀವು ಆಶೀರ್ವಾದ ಮಾಡಿದರೇ ಚುನಾವಣೆಗೆ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೇ ನಿಮ್ಮ ಸೇವೆ ಮಾಡಿಕೊಂಡು ಇರುತ್ತೇನೆ. ನಿನ್ನಮ್ಮ ಬಿಟ್ಟು ಎಲ್ಲೂ ಹೋಗಲ್ಲ ಎಂದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗೆ ನಿನ್ನೆ ಸ್ಪಷ್ಟನೆ ನೀಡಿದ್ದ ಸಚಿವ ನಾರಾಯಣಗೌಡ, ಬಿಜೆಪಿ ಪಕ್ಷ ಬಿಡುವುದಿಲ್ಲ ಎಂದಿದ್ದರು. ಇದೀಗ ಕ್ಷೇತ್ರದ ಗ್ರಾಮಗಳಿಗೆ ಭೇಟಿ ನೀಡಿ ಸಭೆ ನಡೆಸುತ್ತಿದ್ದು ಸಚಿವ ನಾರಾಯಣಗೌಡರ ನಡೆ ಸಾಕಷ್ಟು ಕುತೂಹಲ ಮೂಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮಹಿಳೆ ಸಮಾಜದಲ್ಲಿ ಮಹತ್ತರ ಸಾಧನೆಗಳನ್ನು ಮಾಡಿದರೂ ಕೂಡ ಅದರ ‘ಗುರುತಿಸುವಿಕೆ’ಗಾಗಿ ಆಕೆ ಇನ್ನೂ ಕಾಯಬೇಕಾಗಿದೆ. ಈ ‘ಕಾಯುವಿಕೆ’ ನಿಂತಾಗಲೇ ಮಹಿಳಾ ದಿನಾಚರಣೆಗೊಂದು ಅರ್ಥ ಬರಲಿದೆ’ ಎಂದು ಬೆಂಗಳೂರು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಎಸ್.ಶೈಲಜಾ ಅಭಿಪ್ರಾಯಪಟ್ಟರು. ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಸಾಂಸಾರಿಕ ಜವಾಬ್ದಾರಿಗಳ ಜೊತೆಗೆ ಪ್ರತಿ ಹೆಣ್ಣು ತನ್ನದೇ ಆದ ‘ಐಡೆಂಟಿಟಿ’ ಹೊಂದುವುದು ಅಗತ್ಯ’ ಎಂದರು. ಇದೇ ವೇಳೆ, ಸಾಗರ ಚಂದ್ರಮ್ಮ ಆಸ್ಪತ್ರೆಯ ಖ್ಯಾತ ಪ್ರಸೂತಿ ತಜ್ಞರಾದ ಡಾ. ವಿದ್ಯಾಮಣಿ ಹೆಣ್ಣುಮಕ್ಕಳ ಆರೋಗ್ಯದ ಕುರಿತು ಅರಿವು ಮೂಡಿಸಿದರು. ನ್ಯಾಷನಲ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಡಾ. ಎಚ್. ಎನ್. ಸುಬ್ರಹ್ಮಣ್ಯ ಮಾತನಾಡಿ ‘ಸಮಾಜದ ಎಲ್ಲಾ ಸ್ತರಗಳಲ್ಲಿಯೂ ಮಹಿಳೆಯ ಕೊಡುಗೆ ಅಪಾರ ಮತ್ತು ಅವಿಸ್ಮರಣೀಯ’ ಎಂದರು. ಕಾರ್ಯಕ್ರಮದಲ್ಲಿ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾದ ವೈ.ಜಿ.ಮಧುಸೂಧನ್, ಕಾರ್ಯದರ್ಶಿಗಳಾದ ವಿ.ವೆಂಕಟಶಿವಾ ರೆಡ್ಡಿ, ಬಿ.ಎಸ್. ಅರುಣ್ ಕುಮಾರ್, ಪ್ರಾಂಶುಪಾಲರಾದ ಪ್ರೊ.ಪಿ.ಎಲ್.ರಮೇಶ್, ಜಯನಗರ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾದ…

Read More

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕನ್ನಡ ಹಿರಿಯ ಸಾಹಿತಿ ಮಲೆಯೂರು ಗುರುಸ್ವಾಮಿ ವಿಧಿವಶರಾಗಿದ್ದಾರೆ. ಕ್ಯಾನರ್ ನಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಿಸದೇ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 5ಕ್ಕೂ ಹೆಚ್ಚು ಕಾದಂಬರಿ ರಚನೆ. 10ಕ್ಕೂ ಹೆಚ್ಚು ಕೃತಿಗಳನ್ನು ಸಂಪಾದಿಸಿದ್ದ ಗುರುಸ್ವಾಮಿ, ಮಹಾಕವಿ ಷಡಕ್ಷರಿ ದೇವ ಸ್ಮಾರಕ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಪಡೆದಿದ್ರು. ನಾಳೆ ಸ್ವಗೃಹ ಮಲೆಯೂರಿನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ. ಮಲೆಯೂರು ಗುರುಸ್ವಾಮಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನಿಕಟಪೂರ್ವ ರಾಜ್ಯಾಧ್ಯಕ್ಷರಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೈಸೂರು ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೈಸೂರು ಜೆ.ಎಸ್.ಎಸ್. ಮಹಾವಿದ್ಯಾಪೀಠದ ಬಳಿ ಇಂದು ಬೆಳಿಗ್ಗೆ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಅವರ ಹುಟ್ಟೂರಾದ ಚಾಮರಾಜನಗರ ತಾಲ್ಲೂಕಿನ ಮಲೆಯೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಸಿದ್ಧರಾಮಯ್ಯ ಎಲ್ಲಾ ಭರವಸೆ ಈಡೇರಿಸಿದ್ದಾರೆ ಎನ್ನುತ್ತಾರೆ ಆದರೆ ಚಾಮುಂಡೇಶ್ವರಿಯಲ್ಲಿ ಯಾಕೆ ಸೋತರು ಎಂದು ಕೆ.ಎಸ್ ಈಶ್ವರಪ್ಪ ಪ್ರಶ್ನಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ, ಸಿದ‍್ಧರಾಮಯ್ಯ ಸ್ವಾರ್ಥಿ. ಪಕ್ಷಾಂತರ ಪ್ರವೀಣ. ಸಿದ್ಧರಾಮಯ್ಯ ಬಿಜೆಪಿ ಬಗ್ಗೆ ಮಾತನಾಡುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸಾಯುವ ಹಂತದಲ್ಲಿದೆ. ಸಿದ್ಧರಾಮಯ್ಯಗೆ ಪಕ್ಷ ನಿಷ್ಟೆ ಇಲ್ಲ ಎಂದರು. ಇದೇ ವೇಳೆ ಡಿ.ಕೆ ಶಿವಕುಮಾರ್ ವಿರುದ್ಧವೂ ಕಿಡಿಕಾರಿದ ಕೆ.ಎಸ್ ಈಶ್ವರಪ್ಪ, ಡಿಕೆ ಶಿವಕುಮಾರ್ ಮನೆಯಲ್ಲಿ ಎಷ್ಟು ಹಣ ಇದೆ ಅಂತಾ ರೈಡ್ ಆಗುವವರೆಗೂ ಡಿಕೆ ಶಿವಕುಮಾರ್ ಗೆ ಗೊತ್ತಿರಲಿಲ್ಲ. ಅವರಿಗೆ ಭ್ರಷ್ಟಾಚಾರದ ವಿರುದ್ಧ ಹೋರಾಡುವ ನೈತಿಕತೆ ಇಲ್ಲ. ಸುಳ್ಳು ಹೇಳುವ ಕಾಂಗ್ರೆಸ್ ಗೆ ಸೋಲು ಖಚಿತ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಲಂಡನ್:  ಬಿಜೆಪಿ ತಾನು ಶಾಶ್ವತವಾಗಿ ಅಧಿಕಾರದಲ್ಲಿರುತ್ತೇನೆ ಎಂಬ ಭ್ರಮೆಯಲ್ಲಿದೆ. ಆದರೆ ಅದು ಸಾಧ್ಯವಿಲ್ಲ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳ ಉಳಿವಿಗಾಗಿ ಎಲ್ಲಾ ಪ್ರತಿಪಕ್ಷಗಳು ಒಂದಾಗಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಆದರೆ ಅದು ಸಾಧ್ಯವಿಲ್ಲ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳ ಉಳಿವಿಗಾಗಿ ಎಲ್ಲಾ ಪ್ರತಿಪಕ್ಷಗಳು ಒಂದಾಗಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಲಂಡನ್ ನ  ಚಥಮ್ ಹೌಸ್ ಥಿಂಕ್ ಟ್ಯಾಂಕ್ನಲ್ಲಿ ಸೋಮವಾರ ಸಂಜೆ ನಡೆದ ಸಂವಾದದಲ್ಲಿ ಮಾತನಾಡಿದ ವಯನಾಡು ಸಂಸದ ರಾಹುಲ್ ಗಾಂಧಿ, ದೇಶದಲ್ಲಿ ಭಿನ್ನಾಭಿಪ್ರಾಯ ಹತ್ತಿಕ್ಕುವ ಯತ್ನ ನಡೆಯುತ್ತಿದ್ದು, ಇಸ್ರೇಲಿ ಸಾಫ್ಟ್ವೇರ್ ಪೆಗಾಸಸ್ ಅನ್ನು ತಮ್ಮ ಫೋನ್ ನಲ್ಲಿ  ಹಾಕಲಾಗಿದೆ ಎಂದು ಮತ್ತೊಮ್ಮೆ ಆರೋಪಿಸಿದರು. ಅಧಿಕಾರದ ದೃಷ್ಟಿಕೋನದಲ್ಲಿ ಹೇಳುವುದಾದರೆ, ಸ್ವಾತಂತ್ರ್ಯದಿಂದ ಇಲ್ಲಿಯವರೆಗಿನ ಬಹುಪಾಲು ಸಮಯ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ” ಎಂದು ರಾಹುಲ್ ಗಾಂಧಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಮಂಡ್ಯ: ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಜಿಲ್ಲೆಯ ಬೆಂಗಳೂರು—ಮೈಸೂರು ರಾಷ್ಟ್ರೀಯ ಹೆದ್ದಾರಿಯ ದಶಪಥ ರಸ್ತೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರ ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮದಲ್ಲಿ ಡ್ರೋಣ್ ಕ್ಯಾಮರ ಬಳಸಿ ಕಾರ್ಯಕ್ರಮವನ್ನು ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲ ಕೃಷ್ಣ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮ ನಡೆಯುವ ಪ್ರದೇಶದಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋಣ್ ಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚನೆ ನೀಡಲಾಗಿದ್ದು, ತಪ್ಪಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯ ಅಗತ್ಯ ಕ್ರಮವಹಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮುಂಬೈ: ನಟಿ ರಶ್ಮಿಕಾ ಮಂದಣ್ಣ ನನ್ನ ಕ್ರಶ್ ಎಂದು ನಾನು ಯಾವಾಗ ಹೇಳಿದ್ದೆ ಎಂದು ಪ್ರಶ್ನಿಸಿ ಯುವ ಕ್ರಿಕೆಟಿಗ ಶುಭ್ ಮನ್ ಗಿಲ್ ಗರಂ ಆಗಿದ್ದಾರೆ. ಶುಭ್ ಮನ್ ಗಿಲ್ ರಶ್ಮಿಕಾ ನನ್ನ ಕ್ರಶ್ ಎಂದು ಹೇಳಿಕೆ ನೀಡಿದ್ದರು ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ರಶ್ಮಿಕಾ ಮಂದಣ್ಣ ಎಂದರೆ ಇಷ್ಟ ಎಂದು ಯಾವಾಗ ಹೇಳಿದ್ದೆ ಆಕ್ರೋಶ ವ್ಯಕ್ತಪಡಿಸಿದ ಪ್ರಶ್ನಿಸಿದ್ದಾರೆ. ಎಲ್ಲಿಯೂ ನಾನು ಇದರ ಬಗ್ಗೆ ಮಾತಾಡಿಲ್ಲ ಅಂತ ಯೋಚನೆ ಮಾಡ್ತಿರುವ ಎಮೋಜಿ ಹಾಕಿ ಕಾಮೆಂಟ್ ಮಾಡಿದ್ದಾರೆ. ರಶ್ಮಿಕಾ ನನ್ನ ಕ್ರಶ್ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಕ್ರಶ್ ಅವಳಲ್ಲ. ಯಾವತ್ತೂ ನಾನು ಹೇಳಿಲ್ಲ, ಹೇಳುವುದೂ ಇಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ದಾವಣಗೆರೆ: ಜಿಲ್ಲೆಯಾದ್ಯಂತ ಬಣ್ಣದೋಕುಳಿ ಸಂಭ್ರಮ, ಸಡಗರ ಮನೆ ಮಾಡಿತ್ತು. ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ಯುವಕ, ಯುವತಿಯರು, ಮಹಿಳೆಯರು ಪರಸ್ಪರ ಬಣ್ಣ ಹಚ್ಚಿಕೊಂಡು ಸಂಭ್ರಮಿಸಿದರು. ಬಣ್ಣ ಎರಚಿಕೊಳ್ಳುತ್ತಾ ಡಿಜೆ ಸೌಂಡ್ಗೆ ಸಖತ್ತಾಗಿಯೇ ಸ್ಟೆಪ್ ಹಾಕಿದ ಜನರು ಬಣ್ಣದ ಲೋಕದಲ್ಲಿ ಮಿಂದೆದಿದ್ದರು.  ಬಣ್ಣ ಬಣ್ಣದ ವೇಷ ತೊಟ್ಟವರ ಬಟ್ಟೆಗಳೆಲ್ಲವೂ ಬಣ್ಣಗಳಿಂದ ಕಂಗೊಳಿಸುತ್ತಿದ್ದವು. ಇನ್ನು ಬಣ್ಣದಲ್ಲಿ ಮಿಂದೆದ್ದ ಯುವಸಮೂಹ ಡಿಜೆ ಸೌಂಡ್ಗೆ ಸಖತ್ ಸ್ಟೆಪ್ ಹಾಕಿದರು. ಚಿಣ್ಣರ ಸಂಭ್ರಮವೂ ಕೂಡ ವಿಶೇಷವಾಗಿ ಗಮನ ಸೆಳೆಯಿತು. ಹೋಳಿ ಹಬ್ಬದ ಹಿನ್ನೆಲೆಯಲ್ಲಿ ರಾಮ್ ಅಂಡ್ ಕೋ ಸರ್ಕಲ್ ನಲ್ಲಿ ಕಾಲೇಜು ಯುವಕ, ಯುವತಿಯರ ಡ್ಯಾನ್ಸ್ ಮತ್ತಷ್ಟು ಕಳೆಗಟ್ಟುವಂತೆ ಮಾಡಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More