Subscribe to Updates
Get the latest creative news from FooBar about art, design and business.
- ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
- ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
- ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
- ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
- ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
- ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
- 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
- ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
Author: admin
ತುರುವೇಕೆರೆ : 2023-24ನೇ ಸಾಲಿನ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 7ರಂದು ಪಟ್ಟಣದ ಚೌಧ್ರಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಡಿ.ಕೆ. ನಾಗರಾಜು ತಿಳಿಸಿದ್ದಾರೆ. ಪಟ್ಟಣದಲ್ಲಿ ಪತ್ರಿಗಾಗುವಷ್ಟ ಏನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷವೂ ಸಹ ಜಿಸಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಮ್ಮ ಸಂಸ್ಥೆ ನೂರಾರು ವಿಧವಾದ ಸೇವಾ ಚಟುವಟಿಕೆಗಳನ್ನು ನಡೆಸಿ ಉತ್ತಮ ಪ್ರಶಸ್ತಿಯನ್ನು ಸಹ ಪಡೆದುಕೊಂಡಿದೆ ಎಂದರು. 2023 — 24 ರ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಲೋಕೇಶ್ ಮಾತನಾಡಿ ನನ್ನ ಪ್ರಸಕ್ತ ಅವಧಿಯಲ್ಲಿ ಪ್ರತಿ ತಿಂಗಳು ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವ ಜೊತೆಗೆ ಗಿಡಗಳನ್ನು ನೆಡುವುದು ಶೈಕ್ಷಣಿಕ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಚಾರ ಸಂಕಿರಣ ಕ್ಯಾನ್ಸರ್ ಮತ್ತು ಡಯಾಬಿಟಿಸ್ ಬಗ್ಗೆ ಜಾಗೃತಿ ಜಾಥ ಅನಾಥರಿಗೆ ರಕ್ಷಣೆ ಮತ್ತು ಮೂಲಭೂತ ಸೌಕರ್ಯವನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು ಹಾಗೆಯೇ ಶಾಲೆಗಳಿಗೆ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಲಾಗುವುದು ತಾಲೂಕಿನಲ್ಲಿ ಅತ್ಯುತ್ತಮವಾಗಿ ವಿದ್ಯಾಭ್ಯಾಸ…
ಬೆಳಗಾವಿ: ನಾವು ರಾಜಕಾರಣಿಗಳು ಹೆಸರು ಮಾಡುವ ಆಸೆ, ಆಕಾಂಕ್ಷೆಗಳನ್ನಿಟ್ಟುಕೊಂಡು ಕೆಲಸ ಮಾಡುತ್ತೇವೆ. ಆದರೆ ಈಶ್ವರೀಯ ವಿಶ್ವವಿದ್ಯಾಲಯ ನಿಸ್ವಾರ್ಥ ಭಾವದಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಲಕ್ಷ್ಮೀ ನಗರದ ಸಿದ್ದಿ ವಿನಾಯಕ ಕಾಲನಿಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ “ಜ್ಞಾನ ಪ್ರಕಾಶ ಕುಂಜ” ದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸತ್ಕಾರ ಸಮಾರಂಭದಲ್ಲಿ ಭಾಗಿಯಾಗಿ, ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿದ್ಯಾಲಯಕ್ಕೆ ತನ್ನದೇ ಆದ ವಿಶೇಷತೆಯಿದ್ದು, ಮನಸ್ಸಿಗೆ ಶಾಂತಿಯನ್ನು ನೀಡುವುದಲ್ಲದೆ ಮಾನಸಿಕ ಸ್ಥಿರತೆ, ಏಕಾಗ್ರತೆ, ಸಕಾರಾತ್ಮಕ ಚಿಂತನೆಯಿಂದ ಒತ್ತಡಮುಕ್ತ ಜೀವನ, ತನ್ಮೂಲಕ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತಿದೆ. ನಾವು ನಂಬಿರುವ ಪರಮಾತ್ಮನನ್ನು ನೆನೆಯೊದರಲ್ಲೇ ಪರಮಸುಖವಿದೆ ಎನ್ನುವ ಸಂದೇಶವನ್ನು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ ಸಮಾಜಕ್ಕೆ ಸಾರುತ್ತಿದೆ. ನಾವು ರಾಜಕಾರಣಿಗಳು ಹಲವಾರು ಆಸೆ, ಆಕಾಂಕ್ಷೆ, ಗುರಿಗಳನ್ನಿಟ್ಟುಕೊಂಡು ಸಮಾಜದಲ್ಲಿ ಹೆಸರು ಮಾಡಲು ಹೊರಟಿದ್ದೇವೆ, ಆದರೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ನಿಸ್ವಾರ್ಥ…
ಬೆಂಗಳೂರು: ಬೆಳಗಾವಿ ಜಿಲ್ಲೆ ಕಂಡ ಅತ್ಯಂತ ಮುತ್ಸದ್ದಿ ರಾಜಕಾರಣಿ ಡಿ.ಬಿ.ಇನಾಮದಾರ ಕಳಂಕ ರಹಿತವಾಗಿ ರಾಜಕಾರಣವನ್ನು ಹೇಗೆ ಮಾಡಬಹುದೆನ್ನುವುದನ್ನು ತೋರಿಸಿ ನಮಗೆಲ್ಲರಿಗೂ ಆದರ್ಶರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ಅಗಲಿದ ಗಣ್ಯರಿಗೆ ಸಂತಾಪ ಸೂಚಕ ನಿರ್ಣಯದ ಪರವಾಗಿ ಅವರು ಮಾತನಾಡುತ್ತಿದ್ದರು. ಇನಾಮದಾರ ತಮ್ಮದೇ ಶೈಲಿಯಲ್ಲಿ ರಾಜಕಾರಣ ಮಾಡಿದ್ದಾರೆ. ಜಿಲ್ಲೆಗೆ ಅನೇಕ ಯೋಜನೆಗಳನ್ನು ತರಲು ಪ್ರಯತ್ನಿಸಿ, ರಾಜಕಾರಣವನ್ನು ಕಳಂಕರಹಿತವಾಗಿ ಮಾಡಿ ಮತ್ತು ಸಾಮಾಜಿಕ ಕಳಕಳಿ ಹೊಂದಿ ನಮಗೆಲ್ಲ ರಾಜಕಾರಣವನ್ನು ಯಾವ ರೀತಿ ಮಾಡಬೇಕೆಂದು ತೋರಿಸಿ ಹೋಗಿದ್ದಾರೆ ಎಂದು ಸ್ಮರಿಸಿದರು. 6 -7 ಬಾರಿ ಶಾಸಕರಾಗಿ, ಸಚಿವರಾಗಿ, ಯಾರಿಗೂ ಕಷ್ಟ ಕೊಡದೆ, ವಿರೋಧ ಪಕ್ಷದಲ್ಲಿರಲಿ, ಆಡಳಿತ ಪಕ್ಷದಲ್ಲಿರಲಿ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಿ ರಾಜಕಾರಣ ಮಾಡಿದರು. ಮಲಪ್ರಭ ಸಕ್ಕರೆ ಕಾರ್ಖಾನೆ ಮುಚ್ಚುವ ಸಂದರ್ಭದಲ್ಲಿದ್ದಾಗ ಪುನಶ್ಚೇತನ ಮಾಡಿ ರೈತರಿಗೆ ನೆರವಾದರು. ನಮ್ಮ ಭಾಗದಲ್ಲಿ ಅವರನ್ನು ಎಲ್ಲರೂ ಧಣಿ ಎಂದು ಕರೆಯುತ್ತಿದ್ದರು. ಯಾರೂ ಹೆಸರು ಹೇಳಿ ಕರೆಯುತ್ತಿರಲಿಲ್ಲ.…
ಬೆಂಗಳೂರು: ವಿಧಾನಸಭೆ ಕಲಾಪ ಪುನಾರಂಭವಾಗುತ್ತಿದ್ದಂತೆ ಸದನದ ಬಾವಿಗಿಳಿದು ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದಾರೆ. ದ್ರೋಹ ದ್ರೋಹ ಕಾಂಗ್ರೆಸ್ ದ್ರೋಹ ಎಂದು ಬಿಜೆಪಿ ಘೋಷಣೆ ಮಾಡುತ್ತಿದ್ದರೆ, ಇತ್ತ ಕಾಂಗ್ರೆಸ್ ಶಾಸಕರು ಬಿಜೆಪಿ ವಿರುದ್ದ ಘೋಷಣೆ ಕೂಗುತ್ತಿದ್ದಾರೆ. ಸದನದಲ್ಲಿ ಬಿಜೆಪಿ ಗಲಾಟೆ ಹಿನ್ನಲೆ ಕೆಲ ನಿಮಿಷಗಳ ಕಲಾಪ ಮುಂದೂಡಿಕೆ ಮಾಡಲಾಗಿದ್ದು, ಈ ವೇಳೆ ಸ್ಪೀಕರ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯರನ್ನ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಸುನಿಲ್ ಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ರಾಜ್ಯ ಸರ್ಕಾರ ಎಸ್ ಐಟಿ (ವಿಶೇಷ ತನಿಖಾ ತಂಡ)ವನ್ನ ರಚನೆ ಮಾಡಿದೆ. ಅದರ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ನೇಮಕ ಮಾಡೊದ್ದು, ಇವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ತಂಡದಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ, ಎಸ್‌ಪಿ ಶರತ್ ಸಹ ಇರಲಿದ್ದಾರೆ. ತಂಡ ರಚನೆಯಾಗುತ್ತಿದ್ದಂತೆ ಸಿಐಡಿಯಲ್ಲಿ ಎಸ್ ಐಟಿ ಅಧಿಕಾರಿಗಳ ಜೊತೆ ಸಿಐಡಿ ಡಿಜಿ ಎಂ. ಎ. ಸಲೀಂ ಸಭೆ ನಡೆಸಿದ್ದಾರೆ. ತನಿಖೆಯ ರೂಪುರೇಷಗಳ ಬಗ್ಗೆ ಚರ್ಚೆ ನಡೆಸಿದ್ದು, ಫೈಲ್ ವರ್ಗಾವಣೆ, ಕೆಳಹಂತದಿಂದ ಯಾವೆಲ್ಲ ಅಧಿಕಾರಿಗಳು ತಂಡದಲ್ಲಿ ಇರಬೇಕು ಎಂಬುದರ ಚರ್ಚೆ ಮಾಡಲಾಗಿದೆ. ಈಗಾಗಲೇ ಸಿಸಿಬಿಯಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಮೊದಲು ನ್ಯಾಯಾಲಯದ ಅನುಮತಿ ಪಡೆದು ತನಿಖೆ ಮುಂದುವರೆಸಲು ಸಿದ್ಧತೆ ನಡೆಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಕೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಭರವಸೆ ಮೂಡುವಂತಹ ಯಾವುದೇ ಭಾಷಣ ಇಲ್ಲ. ಸುಳ್ಳಿನ ಕಂತೆ ಅಂತ ಸಾಭಿತಾಗಿದೆ. ಅಕ್ಕಿಯನ್ನು 10 ಕೆಜಿ ಕೊಡುತ್ತೇವೆ ಅಂತ ಸಹಿ ಮಾಡಿ ಹೇಳಿದ್ದರು. ಈಗ ಕೇಂದ್ರ ಅಂತ ಹೇಳದೆ ಆಹಾರ ಭದ್ರತೆಯಲ್ಲಿ ಕೊಡುತ್ತೇವೆ ಅಂತಿದ್ದಾರೆ. ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡುತ್ತಿದೆ ಎಂದು ಹೇಳಲು ಅವರಿಗೆ ನಾಚಿಕೆಯಾಗಿದೆ ಅಂತ ವಾಗ್ದಾಳಿ ನಡೆಸಿದರು. ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿದ್ದರು. ಆದರೆ, ಈಗ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ. ಜನರನ್ನು ಯಾಮಾರಿಸುವ ಕೆಲಸ ಮಾಡಿದ್ದಾರೆ. ಜವಾಬ್ದಾರಿಯಿಂದ ನುಸುಳಿಕೊಳ್ಳುತ್ತಿರುವ ಸರ್ಕಾರ ಇದು. ಅರ್ಥವಿಲ್ಲದೆ ಸುಮ್ಮನೆ ಬೊಗಳೆ ಭಾಷಣ ಮಾಡಿಸಿದ್ದಾರೆ. ಈ ಸರ್ಕಾರಕ್ಕೆ ಅಭಿವೃದ್ಧಿಯ…
ಜೆ. ಪಿ. ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ವಿಶೇಷವಾಗಿ ಗುರುಪೂರ್ಣಿಮೆ ಆಚರಿಸಲಾಗಿದ್ದು, ಶಿರಡಿ ಸಾಯಿ ಬಾಬಾರಿಗೆ ವಿಶೇಷ ಅಲಂಕಾರ, ವೈಭವದ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗಿತ್ತು. ಶಿರಡಿ ಬಾಬಾರನ್ನು ೨೦ ಸಾವಿರ ತೆಂಗಿನಕಾಯಿ, ೨. ೫೦೦ ಪರಂಗಿ, ಹಲಸಿನ ಹಣ್ಣು, ೫, ೦೦೦ ಬೆಲ್ಲ, ೨೫, ೦೦೦ ಕ್ಕೂ ಹೆಚ್ಚು ಖರ್ಜೂರ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಒಣ ಹಣ್ಣುಗಳು, ಅಸಂಖ್ಯಾತ ನವಧಾನ್ಯಗಳ ಮೂಲಕ ವಿಶೇಷ ಅಲಂಕಾರ ಮಾಡಲಾಗಿದ್ದು, ಗುರುಪೂರ್ಣಿಗೆ ಬಾಬಾ ಹಿಂದೆಂದಿಗಿಂತಲೂ ಈ ಬಾರಿ ವಿಶೇಷವಾಗಿ ಕಂಗೊಳಿಸುತ್ತಿದ್ದಾರೆ. ಕೆಂದು ಬಣ್ಣದ ಎಳನೀರಿನಿಂದಲೂ ವಿಶೇಷ ಅಲಂಕಾರ ಮಾಡಲಾಗಿದೆ ಎಂದು *ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನ ಟ್ರಸ್ಟಿ ರಾಮಮೋಹನ್ ರಾಜ್ ತಿಳಿಸಿದ್ದಾರೆ. ಸಾಯಿ ಬಾಬಾ ಅವರಿಗೆ ಅಲಂಕಾರ ಮಾಡಿದ ಎಲ್ಲಾ ವಸ್ತುಗಳನ್ನು ಮರಳಿ ಭಕ್ತರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಹಣ್ಣಾದ ಪರಂಗಿ, ಹಲಸು ಮತ್ತಿತರ ಆಹಾರ ವಸ್ತುಗಳನ್ನು ಸ್ಥಳದಲ್ಲಿಯೇ ಭಕ್ತಾದಿಗಳಿಗೆ ಸಮರ್ಪಿಸಲಾಗುತ್ತಿದೆ. ಕಳೆದ ವರ್ಷ ಕ್ರೀಡಾ…
ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಕೃಷ್ಣಮೂರ್ತಿ ಸಿ. ಡಿ (64) ಮೃತರು. ಶನಿವಾರ ಸಂಜೆ ನಡೆದಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೃಷ್ಣಮೂರ್ತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಭಾನುವಾರ ಮೃತಪಟ್ಟಿದ್ದಾರೆ ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಹೇಳಿದರು. ಕೃಷ್ಣಮೂರ್ತಿ ಅವರು ಟಿವಿಎಸ್ ಮೊಪೆಡ್ (ಕೆಎ 04 ಇಯು 9717) ವಾಹನದಲ್ಲಿ, ಈಸ್ಟ್ ವೆಸ್ಟ್ ಕಾಲೇಜು ಕಡೆಯಿಂದ ಬ್ಯಾಡರಹಳ್ಳಿ ಠಾಣೆ ಕಡೆಗೆ ಹೊರಟಿದ್ದರು. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಜೈ (24), ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ತಮ್ಮ ಹೊಂಡಾ ಆ್ಯಕ್ಟಿವಾ ದ್ವಿಚಕ್ರ ವಾಹನ (ಕೆಎ 02 ಎಚ್‌ಕೆ 4120) ಚಲಾಯಿಸಿದ್ದ. ಇದರಿಂದಾಗಿ ದ್ವಿಚಕ್ರ ವಾಹನ, ಟಿವಿಎಸ್ ಮೊಪೆಡ್ ಡಿಕ್ಕಿ ಹೊಡೆದಿತ್ತು. ಕೃಷ್ಣಮೂರ್ತಿ, ಜೈ ಹಾಗೂ ಆತನ ವಾಹನದ ಹಿಂಬದಿಯಲ್ಲಿದ್ದ ಕಾಲು ಉರ್ವಾ (31) ಗಾಯಗೊಂಡಿದ್ದರು. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೈ ಹಾಗೂ ಉರ್ವಾ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಬಿಟ್ ಕಾಯಿನ್ ಹಗರಣ ತನಿಖೆಗೆ ಎಸ್‌ಐಟಿ ರಚನೆಗೆ ಆದೇಶಿಸಿದ್ದು, ಆದಷ್ಟು ಬೇಗ ತನಿಖೆ ಮುಗಿಸಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ವಿಶ್ವಾಸ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಬಿಟ್ ಕಾಯಿನ್ ಹಗರಣ ಬಗ್ಗೆ ತನಿಖೆ ನಡೆಸಲು ಸಿಐಡಿ ಅಡಿ ಎಸ್‌ಐಟಿ ರಚಿಸಿ ಆದೇಶ ಹೊರಡಿಸಿದ್ದೇವೆ. ಎಸ್ ಐಟಿ ಜೊತೆಗೆ ತಾಂತ್ರಿಕ ತಜ್ಞರ ಸಹಾಯ ಬೇಕಾದರೆ ಉಪಯೋಗ ಮಾಡಬಹುದು. ಅದಕ್ಕೆ ಪೂರಕವಾದ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದರು. ಹಗರಣದಲ್ಲಿ ಏನೆಲ್ಲಾ ಮುಚ್ಚಿ ಹಾಕಲಾಗಿದೆ ಅದನ್ನು ಮರು ತನಿಖೆ ಮಾಡುತ್ತೇವೆ. ನಿಜ ಸ್ಥಿತಿ ಏನಿದೆ ಎಂಬ ಬಗ್ಗೆ ತನಿಖೆ ಆಗಲಿದೆ. ಎಡಿಜಿಪಿ ಮನೀಷ್ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡಲಾಗಿದೆ. ಅವರು ತನಿಖೆಗೆ ಯಾವ ತಾಂತ್ರಿಕ ತಜ್ಞರು ಬೇಕು, ಅವರ ಸಹಾಯ ಪಡೆಯಬಹುದು. ಆದಷ್ಟು ಬೇಗ ತನಿಖೆ ಮುಗಿಸುವಂತೆ ಕೇಳಿದ್ದೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ವರ್ಗಾವಣೆ ಕೇಳಿದಾಗ ಶಿಫಾರಸು ಮಾಡೋದು ಸಹಜ. ಮಾಜಿ ಸಿಎಂ ಎಚ್ಚಿಕೆ ಹೇಳಿಕೆ ಹಾಸ್ಯಾಸ್ಪದ ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ. ನಾಗೇಂದ್ರ ಟೀಕಿಸಿದರು. ವಿಧಾನಸೌಧದಲ್ಲಿ ಹೆಚ್ ಡಿಕೆಯವರ ವೈಎಸ್ ಟಿ ತೆರಿಗೆ ಆರೋಪಕ್ಕೆ ಪ್ರತಿಕ್ರಿಯಿಸುತ್ತ, ಅವರು ಎರಡು ಬಾರಿ ಸಿಎಂ ಆಗಿದ್ದವರು. ಸಿಎಂ ಆಗಿದ್ದಾಗ ಇಲಾಖೆ ಯಾವ ರೀತಿ ನಡೆಸಿದರು ಎಂದು ಗೊತ್ತಿದೆ. ಸಿಎಂ ಸುಪುತ್ರ ಯಾವುದರಲ್ಲೂ ಹಸ್ತಕ್ಷೇಪ ಮಾಡಿಲ್ಲ. ಆಧಾರ ರಹಿತ ಆರೋಪ ಮಾಡಿದ್ದಾರೆ. ಅದಕ್ಕೆ ಅವರ ಪಕ್ಷ 19 ಸ್ಥಾನಕ್ಕೆ ಇಳಿದಿದೆ. ಜನ ಮುಂದೆಯೂ ಅವರಿಗೆ ಪಾಠ ಕಲಿಸ್ತಾರೆ. ವದಂತಿ ಮಾತನ್ನು ಅವರು ಹೇಳುತ್ತಿದ್ದಾರೆ. ಇದು ಅವರ ಸ್ಥಾನಕ್ಕೆ ಗೌರವ ತರಲ್ಲ. ಗಾಳಿಯಲ್ಲಿ ಗುಂಡು ಹಾರಿಸುವುದನ್ನು ಈ ಹಿಂದಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಈಗಲೂ ಅದನ್ನು ಅವರು ಮುಂದುವರಿಸುತ್ತಿದ್ದಾರೆ. ಹೀಗೆ ಅವರು ಮುಂದುವರಿದರೆ ಲೋಕಸಭೆಯಲ್ಲಿ ಜನರು ಪಾಠ ಕಲಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟವಾದ ಆಡಳಿತ ಕೊಡುತ್ತಿದ್ದಾರೆ.…