Subscribe to Updates
Get the latest creative news from FooBar about art, design and business.
- ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ
- ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
- ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
Author: admin
ಬೆಂಗಳೂರು: ರಾಜ್ಯದಲ್ಲಿ ಫಾಕ್ಸ್‌ಕಾನ್ ಕಂಪನಿ ಹೂಡಿಕೆ ಮಾಡುವುದು ನಿಶ್ಚಿತ. ಎಷ್ಟು ಪ್ರಮಾಣದ ಹೂಡಿಕೆ ಆಗಲಿದೆ ಎಂಬುದು ಇನ್ನಷ್ಟೇ ನಿರ್ಧಾರವಾಗಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು. ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಕರ್ನಾಟಕ ಘಟಕದ ವಾರ್ಷಿಕ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ‘ಫಾಕ್ಸ್‌ಕಾನ್ ಕಂಪನಿಯ ಪ್ರಮುಖರ ಜತೆ ಶುಕ್ರವಾರ ಸುದೀರ್ಘ ಚರ್ಚೆ ನಡೆದಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಕಂಪನಿ ಸಂಪೂರ್ಣ ಒಲವು ತೋರಿದೆ. ಈವರೆಗಿನ ಬೆಳವಣಿಗೆಗಳು ಏನೇ ಇರಬಹುದು. ಆದರೆ, ಫಾಕ್ಸ್‌ಕಾನ್ ಇಲ್ಲಿ ಹೂಡಿಕೆ ಮಾಡಲಿದೆ ಎಂಬುದರಲ್ಲಿ ಅನುಮಾನವಿಲ್ಲ’ ಎಂದರು. ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಅತ್ಯಂತ ವೇಗವಾಗಿ ನಡೆಯುತ್ತಿದೆ. ಮುಂದಿನ ಕೆಲವೇ ವರ್ಷಗಳಲ್ಲಿ 5,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಲಿದೆ. ಎಲ್ಲ ಪ್ರಮುಖ ನಗರಗಳಿಗೂ ಹೈಸ್ಪೀಡ್ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಜಾರಿಗೆ ಬರಲಿದೆ. ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ವೇಗವಾಗಿ ನಡೆಯುತ್ತಿದೆ. ಇವೆಲ್ಲವೂ ಕರ್ನಾಟಕವನ್ನು ಹೂಡಿಕೆದಾರರ ಆಸಕ್ತಿಯ ತಾಣವಾಗಿಸಿವೆ ಎಂದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ…
ಕಲಬುರಗಿ: ವಿಜಯ ಸಂಕಲ್ಪ ಯಾತ್ರೆಗೂ ಮುನ್ನ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಈಗಿರುವ ನಾಲ್ಕರಿಂದ ಆರು ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲ. ಉಳಿದಂತೆ ಬಹುತೇಕ ಶಾಸಕರಿಗೆ ಟಿಕೆಟ್ ದೊರೆಯಲಿದೆ’ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ಮೊದಲು ಸ್ಪಷ್ಟ ಬಹುಮತ ಪಡೆಯಬೇಕಿದೆ. ಆ ನಂತರ ಪಕ್ಷದ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ನಿರ್ಧರಿಸುತ್ತೇವೆ’ ಎಂದು ಯಡಿಯೂರಪ್ಪ ಹೇಳಿದರು. ಕರ್ನಾಟಕದಲ್ಲಿಯೂ ಗುಜರಾತ್ ಮಾಡೆಲ್? ಗುಜರಾತ್‌ನಲ್ಲಿ ಹಲವು ಬಾರಿ ಆಯ್ಕೆಯಾಗಿರುವ ಬಿಜೆಪಿ ಹಿರಿಯ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ಸಂದೇಶ ಕೊಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ವಾಹನಗಳಿಗೆ ವಿಮೆ ಮಾಡಿಸುವುದು ಕಡ್ಡಾಯವಾಗಿದೆ. ವಾಹನ ನೋಂದಣಿ ಮಾಡಿಸಬೇಕೆಂದರೆ ವಿಮೆ ಇರಲೇಬೇಕಾಗುವ ಕಾರಣ ಆ ಸಂದರ್ಭದಲ್ಲಿ ವಿಮೆ ಮಾಡಿಸುವ ಬಹಳಷ್ಟು ಮಂದಿ ನಂತರ ರಿನಿವಲ್ ಮಾಡಲು ಮುಂದಾಗುವುದಿಲ್ಲ. ವಿಮೆ ಮಾಡಿಸಲು ಬಹುತೇಕ ವಾಹನ ಮಾಲೀಕರು ನಿರಾಸಕ್ತಿ ವಹಿಸುತ್ತಾರೆ. ಒಂದು ಅಂದಾಜಿನ ಪ್ರಕಾರ ದೇಶದಲ್ಲಿ 30 ಕೋಟಿಗೂ ಅಧಿಕ ವಾಹನಗಳಿದ್ದು, ಈ ಪೈಕಿ ಅರ್ಧದಷ್ಟು ವಾಹನಗಳಿಗೆ ವಿಮೆ ರಿನಿವಲ್ ಆಗಿಲ್ಲವೆಂದು ಹೇಳಲಾಗಿದೆ. ಇದೀಗ ಇಂತಹ ವಾಹನಗಳ ಮಾಲೀಕರಿಗೆ ಶಾಕ್ ನೀಡಲು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮುಂದಾಗಿದೆ. ಯಾವ ವಾಹನಗಳಿಗೆ ವಿಮೆ ರಿನಿವಲ್ ಆಗಿಲ್ಲ ಎಂಬ ಮಾಹಿತಿ ಸಾರಿಗೆ ಸಚಿವಾಲಯದ ಬಳಿ ಇದ್ದು, ಅಂತಹ ವಾಹನಗಳ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ. ಸಾರಿಗೆ ಅಥವಾ ಪೊಲೀಸ್ ಇಲಾಖೆ ತಪಾಸಣೆ ನಡೆಸುವ ಸಂದರ್ಭದಲ್ಲಿ ವಿಮೆ ಇಲ್ಲದ ವಾಹನಗಳು ಸಿಕ್ಕಿ ಬಿದ್ದರೆ ಅಂತಹ ಸಂದರ್ಭದಲ್ಲಿ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಹೀಗಾಗಿ ನೋಟಿಸ್ ನೀಡುವುದರ ಜೊತೆಗೆ ವಿಮೆ ರಿನಿವಲ್ ಮಾಡದ…
ದಾವಣಗೆರೆ: ಭ್ರಷ್ಟಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬೇಲ್ ಸಿಕ್ಕ ಬಳಿಕ ಯುದ್ಧ ಗೆದ್ದು ಬಂದಂತೆ ಪೋಸ್ ನೀಡಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್ ಸಿಕ್ಕಿದ ಬಳಿಕ ಯುದ್ಧವನ್ನೇ ಗೆದ್ದು ಬಂದಂತೆ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ತಲೆಮರೆಸಿಕೊಂಡಿದ್ದ ತಮ್ಮ ನಾಯಕ ಬರುತ್ತಿದ್ದಂತೆಯೇ ಮಾಡಳ್ ಅವರ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಜಾಮೀನು ಆದೇಶ ತಲುಪಿದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಅವರಿಗೆ ಸೂಚಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ-2023 ಮತ್ತು 100 ನೇ ಜನೌಷಧಿ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ. 240 ವಾರ್ಡುಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ. ಸುಮಾರು 19 ಪಿ.ಹೆಚ್.ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 4 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಲ್ಲೆಡೆ ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಇಂದು ಸಂಚಾರಿ ಆಸ್ಪತ್ರೆಯನ್ನೂ ಹಾಗೂ ಡಯಾಲಿಸಿಸ್ ಕೇಂದ್ರವನ್ನೂ ಉದ್ಘಾಟಿಸಲಾಗಿದ್ದು, ರೋಗಿಗಳ ಮುಖದಲ್ಲಿ ಮಂದಹಾಸ ನೋಡಿದಾಗ ಸಾರ್ಥಕ…
ಮಧುಗಿರಿ: ಐತಿಹಾಸಿಕ ಶ್ರೀ ಕೋಡಿ ಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಬಹುಭಾಷಾ ನಟ ಅರ್ಜುನ್ ಸರ್ಜಾ ಮತ್ತು ಖ್ಯಾತ ನಟ ಧ್ರುವ ಸರ್ಜಾ ಆಗಮಿಸಿದ್ದು, ದೊಡ್ಡೇರಿ ಜಕ್ಕೇನಹಳ್ಳಿ ಗ್ರಾಮದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ವಿಶೇಷ ಮೆರುಗು ತಂದರು. ಪ್ರತಿ ವರ್ಷದಂತೆ ಈ ವರ್ಷವೂ ಗಂಗಾ ಪೂಜೆ ಧ್ವಜಾರೋಹಣ ಆದಲೂರಿನ ಶ್ರೀರಾಮ ದೇವರ ಆಗಮನ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದವು. ಬಳಿಕ ಶ್ರೀ ಕೋಡಿಲಿಂಗೇಶ್ವರ ಸ್ವಾಮಿ ಹಾಗೂ ಶಿವ ಪಾರ್ವತಿ ಅಮ್ಮನ ರವರ ಶ್ರೀ ಸ್ವಾಮಿಯ ಬ್ರಹ್ಮರಥೋತ್ಸವ ನೆರವೇರಿತು. ಕಾರ್ಯಕ್ರಮದಲ್ಲಿ ಅನ್ನ ಸಂತರ್ಪಣೆ ಹಾಗೂ ಬಸ್ಮಾಸುರನ ವಧೆ ಯಕ್ಷಗಾನ, ನಾಟಕ, ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ಜಾತ್ರಾ ಮಹೋತ್ಸವಕ್ಕೆ ಸುಮಾರು 6,000 ಭಕ್ತಾದಿಗಳು ಭಾಗಿಯಾಗಿದ್ದರು. ಈ ಜಾತ್ರೆಯಲ್ಲಿ ಗಣ್ಯರು ಭಾಗವಹಿಸಿದರು ಶಾಸಕರಾದ ಎಂ.ವಿ.ವೀರಭದ್ರಯ್ಯ, ಮಾಜಿ ಕೆ.ಎನ್.ರಾಜಣ್ಣ, ಮತ್ತು ಹನುಮಂತೇಗೌಡರವರು ಸೇರಿದಂತೆ ಹಲವು ಮುಖಂಡರುಗಳು ಭಾಗವಹಿಸಿದ್ದರು. ಪ್ರತಿ ವರ್ಷದಂತೆ ಮಂಗಳಮ್ಮ ನರಸಯ್ಯ ಕುಟುಂಬದಿಂದ ಅನ್ನ ಸಂತರ್ಪಣೆ ನೆರವೇರಿಸಲಾಯಿತು. ವರದಿ: ದೊಡ್ಡೇರಿ ಮಹಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯು ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಹಿಳೆಯರಿಗೆ ಎಲ್ಲ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲು ನಿರ್ಧರಿಸಿದೆ. ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಎಲ್ಲಾ ಮಹಿಳಾ ಪ್ರಯಾಣಿಕರಿಗೂ ಒಂದು ದಿನ ಉಚಿತ ಸೇವೆ ನೀಡಲು ಸರ್ಕಾರ ಅನುಮೋದನೆ ನೀಡಿದೆ. ನಾಳೆ ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಬಿಎಂಟಿಸಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಮೂಲಕ ಮಹಿಳಾ ದಿನಾಚರಣೆಗೆ ವಿಶೇಷ ಕೊಡುಗೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಭಾರತ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯ, ನವದೆಹಲಿಯ ಅಧೀನ ಕಚೇರಿಯಾದ ಪರಿಶಿಷ್ಟ ಜಾತಿ, ಪಂಗಡದ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ, ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಆವರಣ, ಕೌಶಲ್ಯ ಭವನ ಹಿಂಭಾಗ ಡೈರಿ ಸರ್ಕಲ್, ಬೆಂಗಳೂರು- 560 029 ಕಚೇರಿಯು ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಒಂದು ವರ್ಷ ಅವಧಿಯ ವಿಶೇಷ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಜ್ಞಾನ, ಕಂಪ್ಯೂಟರ್ ಜ್ಞಾನ, ನ್ಯೂಮಿರಿಕಲ್ ಅಬಿಲಿಟಿ, ಶಾರ್ಟ್ ಹ್ಯಾಂಡ್/ಸ್ಪೆನೋಗ್ರಾಫಿ ವಿಷಯಗಳ ತರಬೇತಿ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಹಾಜರಾತಿ ನಿಯಮಗಳಿಗೊಳಪಟ್ಟು ತರಬೇತಿ ಭತ್ಯೆ ನೀಡಲಾಗುತ್ತದೆ. ಅರ್ಜಿಯನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಿ, ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 30ರ ಸಂಜೆ 5ರ ಒಳಗಾಗಿ ಕಚೇರಿಗೆ ನೋಂದಾಯಿತ ಪೋಸ್ಟ್ ಅಥವಾ ಖುದ್ದಾಗಿ ಬಂದು ಸಲ್ಲಿಸಲು ತಿಳಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಯನ್ನು ಪಡೆಯಲು ಕಚೇರಿಯ ಮುಖ್ಯಸ್ಥರಾದ ಉಪ—ಪ್ರಾದೇಶಿಕ ಉದ್ಯೋಗಾಧಿಕಾರಿಗಳನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೂರವಾಣಿ ಸಂಖ್ಯೆ 080—29756192, 9916188914…
ನಾವು ಯಾವಾಗ ಬೇಕಾದರೂ ಚುನಾವಣೆ ಎದುರಿಸಲು ಸಿದ್ಧ. ಆದರೆ ಚುನಾವಣಾ ದಿನಾಂಕ ಘೋಷಣೆ ದಿನೇ ದಿನೇ ಮುಂದಕ್ಕೆ ಹೋಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿ ಕಾರಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ಮುಂದಿನ ದಿನಗಳಲ್ಲಿ ಬಿಜೆಪಿ ಶಾಸಕರು ಕೂಡ ಕಾಂಗ್ರೆಸ್ ಸೇರುತ್ತಾರೆ. ಇವತ್ತು ಕಾಂಗ್ರೆಸ್ ಸೇರ್ಪಡೆಯಾಗುವವರ ದೊಡ್ಡಪಟ್ಟಿ ಇತ್ತು. ಕಾಂಗ್ರೆಸ್ ಸೇರುವ ಕೆಲವರ ಹೆಸರನ್ನ ಚರ್ಚೆ ಮಾಡಬೇಕಿತ್ತು ಎಂದರು. ಬಿಜೆಪಿಯವರು ಚುನಾವಣೆಗೆ ಹೋಗಬೇಕೆಂದು ಚರ್ಚೆ ಮಾಡಿದರು. ಅಧಿಕಾರಿಗಳನ್ನ ಕರೆದು ಚರ್ಚೆ ಮಾಡಿದರು. ಆದರೆ ಈಗ ಚುನಾವಣೆ ಮುಂದಕ್ಕೆ ಹಾಕಲಾಗುತ್ತಿದೆ. ಈಗ ಶಾರ್ಟ್ ಟರ್ಮ್ ಟೆಂಡರ್ ಕರೆಯುತ್ತಿದ್ದಾರೆ. ಆದಷ್ಟು ಬೇಗ ಚುನಾವಣೆ ಮಾಡಿ. ಬ್ರಹ್ಮಾಂಡ ಭ್ರಷ್ಟಾಚಾರವನ್ನ ತಡೆಯಬೇಕು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದರು. ಬಿಜೆಪಿಯರವಿಗೆ ನಿತ್ಯ ಜನರೇ ಶಾಕಿಂಗ್ ನ್ಯೂಸ್ ಕೊಡುತ್ತಿದ್ದಾರೆ. ಆದರೂ ಯಾವುದನ್ನ ಗಮನಿಸದೇ ಬಿಜೆಪಿಯವರು ಟೆಂಡರ್ ಕರೆಯುತ್ತಿದ್ದಾರೆ ಎಂದು ಗುಡುಗಿದ ಡಿ.ಕೆ ಶಿವಕುಮಾರ್, ಪ್ರತಿ ತಾಲ್ಲೂಕಿನಲ್ಲಿ ಸೋಲಾರ್ ತಂದಿದ್ದೇವೆ. ನಾವು…
ಸಿದ್ಧರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವಧಿಯಲ್ಲಿ ಕೇವಲ ಕಾಫೀ – ತಿಂಡಿ – ಬಿಸ್ಕೆಟ್ ಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಈ ಸಂಬಂಧ ದಾಖಲೆ ಬಿಡುಗಡೆ ಮಾಡಿ ಮಾತನಾಡಿದ ಎನ್.ಆರ್ ರಮೇಶ್, ಸಿದ್ಧರಾಮಯ್ಯ ಮತ್ತು ಅವರ ಕಛೇರಿಯ ಸಿಬ್ಬಂದಿವರ್ಗ ಹಾಗೂ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಯ ಅಂದಿನ ಅಧಿಕಾರಿಗಳು ಭಾಗಿಗಳಾಗಿ ಬೃಹತ್ ಹಗರಣ ನಡೆದಿದೆ. 2013-14 ರಿಂದ 2017-18 ರವರೆಗಿನ 05 ವರ್ಷಗಳ ಅವಧಿಯಲ್ಲಿ – ಮುಖ್ಯಮಂತ್ರಿಗಳ ಕಛೇರಿಯ ಸಭೆಗಳು ಮತ್ತು ಮುಖ್ಯಮಂತ್ರಿಗಳ ಕಛೇರಿಗೆ ವಿವಿಧ ಕಾರ್ಯಗಳ ಪ್ರಯುಕ್ತ ಹೊರಗಿನಿಂದ ಬರುವಂತಹ ಅತಿಥಿಗಳ / ಗಣ್ಯರ ಉಪಚಾರ ಕಾರ್ಯಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಲಾಗಿದೆ. ಈ 05 ವರ್ಷಗಳ ಅವಧಿಯಲ್ಲಿ ಕೇವಲ…