Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
Author: admin
ಬೆಂಗಳೂರು: ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶ ಸೃಷ್ಟಿಯಾಗಿತ್ತು. ಇದನ್ನು ನಮ್ಮ ಸರ್ಕಾರ ಬದಲಾಯಿಸಿ, ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡಲಿದೆ. ಈಗಾಗಲೇ ಕೆಲಸ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ತಮ್ಮನ್ನು ಭೇಟಿಯಾದ ಎದ್ದೇಳು ಕರ್ನಾಟಕ ಸಂಘಟನೆಯ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಎಂದು ತಿಳಿಸಿದರು. ನಮ್ಮ ಸರ್ಕಾರವು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಿದೆ. ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗುವುದು. ಇದಕ್ಕೆ ವಾರ್ಷಿಕ 59,000 ಕೋಟಿ ರೂ. ಹಣಕಾಸಿನ ಅಗತ್ಯವಿದ್ದು, ಪ್ರಸಕ್ತ ವರ್ಷದ ಬಾಕಿ ಉಳಿದ ತಿಂಗಳುಗಳಿಗೆ…
ಬೆಂಗಳೂರು: 2022-23 ಮುಂಗಾರು ಹಂಗಾಮಿನಲ್ಲಿ ನೆಟೆ ರೋಗದಿಂದ ಹಾನಿಯಾದ ತೊಗರಿ ಬೆಳೆಗೆ ಮೊದಲ ಹಂತದ ಪರಿಹಾರವಾಗಿ 74 ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. 2022-23ನೇ ಸಾಲಿನಲ್ಲಿ ನೆಟೆ ರೋಗದಿಂದ ಕಲಬುರಗಿ ಜಿಲ್ಲೆಯಲ್ಲಿ 198488 ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ 14495 ಹೆಕ್ಟೇರ್, ವಿಜಯಪುರ ಜಿಲ್ಲೆಯಲ್ಲಿ 20401 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 10259 ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿರುತ್ತದೆ. ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ 10 ಸಾವಿರ ಪರಿಹಾರದಂತೆ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತಗೊಳಿಸಿ ಸರ್ಕಾರದಿಂದ 223 ಕೋಟಿಗಳ ಅನುದಾನ ಘೋಷಿಸಲಾಗಿದ್ದು, ಇದರ ಪೈಕಿ ಮೊದಲ ಹಂತದಲ್ಲಿ 1/3 ಭಾಗದಷ್ಟು, ಅಂದರೇ 74 ಕೋಟಿ ರೂಪಾಯಿ ಪರಿಹಾರ ಹಣವನ್ನು ಸಾದಿಲ್ವಾರು ನಿಧಿಯಿಂದ ಬಿಡುಗಡೆ ಮಾಡಲಾಗಿದೆ. ನೆಟೆರೋಗದಿಂದ ತೊಗರಿ ಬೆಳೆಹಾನಿಯಿಂದ ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರದ ಹಣ ವಿತರಿಸಲಾಗುವುದು. ಉಳಿದ ಪರಿಹಾರದ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ…
ಬೆಂಗಳೂರು:ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಅವರು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ತೆರಿಗೆ ಪಾವತಿಸುವವರು ಹಾಗೂ ಜಿಎಸ್ ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಾಸಭೆ ಚುನಾವಣಾ ಸಂದರ್ಭದಲ್ಲಿ ಏನೆಲ್ಲಾ ಮಾಡಬಹುದಿತ್ತು ಅನ್ನುವ ಬಗ್ಗೆಯೂ ಚರ್ಚೆಯಾಗಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ 9 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಮುಂದೆ ಏನೆಲ್ಲಾ ಮಾಬೇಕು ಎನ್ನುವ ಕುರಿತಂತೆ ಚರ್ಚೆ ಮಾಡಲಾಗಿದೆ ಎಂದರು.ಇದೇ ವೇಳೆ ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷ ನಾಯಕರ ಆಯ್ಕೆ ಕುರಿತು ಈ ಸಭೆಯಲ್ಲಿ ಚರ್ಚೆಗೆ ಬಂದಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಬೆಳಗಾವಿ: ಬಹಳಷ್ಟು ಜನರು ಮಹಾನಗರ ಪಾಲಿಕೆ ಸಿಬ್ಬಂದಿಯ ಕಾರ್ಯ ವೈಖರಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅನೇಕ ಅಧಿಕಾರಗಳ ವಿರುದ್ಧ ಆರೋಪಗಳು ಕೇಳಿ ಬಂದಿದ್ದು ಮುಂಬರುವ ದಿನಗಳಲ್ಲಿ ಸುಧಾರಿಸದೇ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಸ್ಮಾರ್ಟ್ ಸಿಟಿ, ಕುಡಿಯುವ ನೀರು ಸರಬರಾಜು, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಲವು ಸಲಹೆ ಸೂಚನೆ ನೀಡಿದ್ದು, ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ಆಶಯವಿದೆ. ತಕ್ಷಣ ಎಲ್ಲರನ್ನೂ ಬದಲಾವಣೆ ಮಾಡಬೇಕು ಎಂಬ ಆಸೆಯೂ ಇಲ್ಲ, ಇಚ್ಚೆಯೂ ಇಲ್ಲ. ಮೂರು ತಿಂಗಳ ಬಳಿಕ ಬಂದಾಗ ಇದೇ ಸ್ಥಿತಿ ಇದ್ದರೆ ಅಂತಹ ಅಧಿಕಾರಿಗಳನ್ನು ತಪ್ಪದೇ ವರ್ಗಾವಣೆ ಮಾಡಿಸುತ್ತೇವೆ ಎಂದು ಎಚ್ಚರಿಸಿದರು. ಬೆಳಗಾವಿ ಸ್ಮಾರ್ಟ್ ಸಿಟಿ, ಕುಡಿಯುವ ನೀರು ಪೂರೈಕೆ, ಪಿಡಬ್ಲ್ಯೂಡಿ, ಹೆಸ್ಕಾಂ ಸೇರಿದಂತೆ ಹಲವು ಇಲಾಖೆಗಳ ಬಗ್ಗೆ…
ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಭೌತಿಕ ಅರ್ಜಿ ಸಲ್ಲಿಕೆಯ ಮಾದರಿಯ ಗೃಹಲಕ್ಷ್ಮೀ ಯೋಜನೆ ಅರ್ಜಿ ಬಿಡುಗಡೆ ಮಾಡಿದೆ. ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಅರ್ಜಿಯಲ್ಲಿ ಸರ್ಕಾರ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗೋಕಾಕ: ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ಟೀಕಿಸಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿಯವರಿಗೆ ಟಾಂಗ್ ನೀಡಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ನಮ್ಮ ನಾಯಕರು ಸರಿಪಡಿಸುತ್ತಾರೆ, ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ತೆಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು. ಚಕ್ರವರ್ತಿ ಸೂಲಿಬೆಲೆ ಒಬ್ಬ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ವ್ಯಕ್ತಿ, ಪ್ರಧಾನಿ ಮೋದಿ ಹೇಳದಿರುವ ಭರವಸೆಗಳನ್ನು ಇವನೇ ಹೇಳುತ್ತಾನೆ. ಸೂಲಿಬೆಲೆ ಹೇಳಿಕೆಯಿಂದ ಸಮಾಜದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ ಎಂದ ಅವರು, ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಚಿವ ಎಂ.ಬಿ.ಪಾಟೀಲ್ ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಮುಂದುವರಿಸಿದರೆ ಸೂಲಿಬೆಲೆಗೆ ಜೈಲು ಕಂಬಿ ಎಣಿಸುವಂತೆ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ ಅಷ್ಟೇ ಎಂದರು. ಇನ್ನು ಗೋವು ಹತ್ಯೆ ನಿಷೇಧದ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು, ಆತುರದ…
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶಹೊರಬಿದ್ದು ಒಂದು ತಿಂಗಳಾಗುವ ಹೊತ್ತಿನಲ್ಲಿ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಕರೆದಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾಗಿರುವ ಕಾರ್ಯಕ್ರಮಗಳು, ಕೇಂದ್ರದ ಯೋಜನೆಗಳನ್ನು ಹೆಚ್ಚು ಹೆಚ್ಚು ಜನರಿಗೆ ತಲುಪಿಸುವ ಬಗೆ, ಜುಲೈ 3ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಅಧಿವೇಶನ ಮತ್ತಿತರ ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಇದರ ಜತೆಗೆ ಮುಖ್ಯವಾಗಿ ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ.…
ಬೆಳಗಾವಿ: ಟಿಪ್ಪು ಸುಲ್ತಾನ್, ಔರಂಗಜೇಬ್ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದೆ. ಹಿನ್ನೆಲೆ ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಹಿಂಸಾಚಾರ ಹಿನ್ನೆಲೆ ಕಳೆದ ರಾತ್ರಿ ಕೊಲ್ಲಾಪುರ ಜಿಲ್ಲಾ ಉಸ್ತುವಾರಿ ಸಚಿವ ದೀಪಕ್ ಕೇಸರಕರ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಯಿತು. ಸರ್ವಪಕ್ಷ ನಾಯಕರು, ವಿವಿಧ ಸಮುದಾಯಗಳ ಪ್ರಮುಖ ನಾಯಕರ ಜೊತೆ ಶಾಂತಿ ಸಭೆ ನಡೆದಿದೆ. ಸಚಿವ ದೀಪಕ್ ಕೇಸರಕರ್, ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ರು. ಹಾಗೂ ಕೊಲ್ಲಾಪುರ ಡಿಸಿ ಭಗವಾನ್ ಕಾಂಬಳೆ, ಎಸ್ಪಿ ಮಹೇಂದ್ರ ಪಂಡಿತ್ ಸೇರಿ ಹಿರಿಯ ಅಧಿಕಾರಿಗಳ ಜೊತೆಗೂ ಸಭೆ ನಡೆಸಿದರೆ. ಸದ್ಯ ಈಗ ಜೂನ್ 19ರವರೆಗೆ ಕೊಲ್ಲಾಪುರದಲ್ಲಿ ನಿಷೇಧಾಜ್ಞೆ ಮುಂದುವರಿಕೆಗೆ ಕೊಲ್ಲಾಪುರ ಜಿಲ್ಲಾಧಿಕಾರಿ ಭಗವಾನ್ ಕಾಂಬಳೆ ಆದೇಶ ಹೊರಡಿಸಿದ್ದಾರೆ. ಇಂದು ಮಧ್ಯರಾತ್ರಿ 12…
ಚುನಾವಣೆ ವೇಳೆ ಕಾಂಗ್ರೆಸ್ನವರು ಷರತ್ತು ಬಗ್ಗೆ ಹೇಳಿರಲಿಲ್ಲ. ಚುನಾವಣೆಯಲ್ಲಿ ಗೆದ್ದ ಬಳಿಕ ಕಂಡಿಷನ್ ಬಗ್ಗೆ ಹೇಳುತ್ತಿದ್ದಾರೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆಗಳು ಸಿಗಲ್ಲ ಅಂತಾ ಜನರಿಗೆ ಈಗ ಅರ್ಥವಾಗುತ್ತಿದೆ. ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಅಂತಿದ್ದಾರೆ. ಸಾರಿಗೆ ನಿಗಮಗಳಿಗೆ ಎಷ್ಟು ನಷ್ಟ ಆಗುತ್ತೆ ಅಂತಾ ಮುಂದೆ ಗೊತ್ತಾಗುತ್ತೆ. ಜನರಿಂದ ವೋಟ್ ಹಾಕಿಸಿಕೊಳ್ಳಲು ಉಚಿತ ಎಂದು ಹೇಳಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy