Author: admin

ಬೆಳಗಾವಿ: ಬಸ್ ಗಳಲ್ಲಿ ಪ್ರಯಾಣದ ವೇಳೆ ಕಿಟಕಿ ಸೀಟ್ ಬಳಿ ಕುಳಿತುಕೊಳ್ಳುವುದು ಎಲ್ಲರಿಗೂ ಇಷ್ಟವಾದ ವಿಚಾರ, ಇಲ್ಲೊಂದು ಕಡೆ ಕಿಟಕಿ ಪಕ್ಕ ಸೀಟಿಗಾಗಿ ಇಬ್ಬರ ನಡುವೆ ನಡೆದ ಜಗಳ, ಚಾಕುವಿನಿಂದ ಇರಿಯುವ ಮಟ್ಟಕ್ಕೆ ಬೆಳೆದಿದೆ. ಹೌದು… ಬೆಳಗಾವಿಯಲ್ಲಿ ಈ ಘಟನೆ ನಡೆದಿದ್ದು, ಕಿಟಕಿ ಪಕ್ಕದ ಸೀಟ್ ಗಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಹತ್ಯೆ ಯತ್ನದಲ್ಲಿ ಅಂತ್ಯಗೊಂಡಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಜಗಳ ನಡೆದಿದೆ. ಯುವಕನೋರ್ವ ಮತ್ತೊಬ್ಬ ಯುವಕನಿಗೆ ಚಾಕು ಇರಿದಿದ್ದಾನೆ. ಗ್ರಾಮದ ಮಜ್ಜು ಸನದಿ(20) ಎಂಬ ಯುವಕನ ಎದೆ ಭಾಗಕ್ಕೆ ಯುವಕರ ಗ್ಯಾಂಗ್​ ಒಂದು ಚಾಕು ಇರಿದು ಪರಾರಿ ಆಗಿದೆ. ಮಜ್ಜು ಸನದಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಡಿಸಿಪಿ ರೋಹನ್​ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೀದರ್ : ಕಮಲನಗರ್ ತಾಲ್ಲೂಕಿನ ಹೊಳ ಸಮುದ್ರ ಗ್ರಾಮದ ಬೀಜ ವಿತರಣಾ ಕೇಂದ್ರಕ್ಕೆ ಸೋಮವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರಿಗೆ ಬಿತ್ತನೆ ಬೀಜಗಳು ಸಮರ್ಪಕವಾಗಿ ನೀಡಲಾಗುತ್ತಿದೆ ಅಥವಾ ಇಲ್ಲವೇ ಎಂದು ಪರಿಶೀಲನೆ ನಡೆಸಿದರು. ಸಂದರ್ಭದಲ್ಲಿ ಗ್ರಾಮದ ರೈತರೊಂದಿಗೆ ಚರ್ಚಿಸಿ ಮುಂಗಾರು ಕೃಷಿ ಚಟುವಟಿಕೆಗಳಿಗೆ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಿಸಲಾಗುವುದು ಎಂದು ತಿಳಿಸಿ, ರೈತರು ಯಾವುದೇ ಆತಂಕ ಪಡಬೇಕಿಲ್ಲ ಎಂದು ಹೇಳಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ನ್ಯಾಯಾಲಯದ ಮುಂದೆ ಹೃದಯಾಘಾತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ, ಗುಬ್ಬಿ ಪಟ್ಟಣದ ನ್ಯಾಯಾಲಯದ ಮುಂದೆ ನಡೆದಿದೆ. ರಂಗನಾಥ್(35) ಮೃತ ದುರ್ದೈವಿಯಾಗಿದ್ದಾರೆ. ಇವರು ಗುಬ್ಬಿ ತಾಲೂಕು ಚೇಳೂರಿನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದರು. ನ್ಯಾಯಾಲದಲ್ಲಿ ಕೆಲಸ ನಿಮಿತ್ತ ಬೆಳಗ್ಗೆ ಬಂದಿದ್ದ ರಂಗನಾಥ್, ನ್ಯಾಯಾಲಯದ ಗೇಟ್‌ ನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.  ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ ಆಗಿದೆ ಅಂತಾ ನಾವು‌ ಸ್ಪಷ್ಟವಾಗಿ ಹೇಳ್ತೇವೆ ಎಂದು ಜೆಡಿಎಸ್   ಸಿಎಲ್‌ ಪಿ ನಾಯಕ ಸಿ.ಬಿ. ಸುರೇಶ್ ಬಾಬು ತಿಳಿಸಿದ್ದಾರೆ. ಯಾವತ್ತು ದೇವೆಗೌಡ್ರು ಬಿಜೆಪಿ ಜೊತೆ ಮುಖ ಮಾಡಿರಲಿಲ್ಲ.  ಇದಕ್ಕೆ ಈಗಾಗಲೇ ಮೊನ್ನೆ ಕುಮಾರಣ್ಣ ಬೆಂಗಳೂರಿನಲ್ಲಿ ಉತ್ತರ ಕೊಟ್ರು. ಕೇಂದ್ರದಲ್ಲಿ ಯಾವ ರೀತಿ ಹೊಂದಾಣಿಕೆ‌ ಇದೆ. ನಮ್ಮ ಪಕ್ಷವನ್ನ ಎಷ್ಟು ಗೌರವಯುತವಾಗಿ ನಡೆಸಿಕೊಳ್ತಿದ್ದಾರೆ. ಇಲ್ಲೂ ಕೂಡ ಅಷ್ಟೇ, ಒಂದು ಏನಾಗಿದೆ, ನಾವು ಈಗಾಗಲೇ ಹಲವಾರು ಬಾರಿ‌ ಹೇಳಿದ್ದೇವೆ. ರಾಜ್ಯದಲ್ಲಿ ಹೊಂದಾಣಿಕೆ ಕೊರತೆ ಆಗಿದೆ ಅಂತಾ, ನಾವು ಕೂಡ ಸ್ಪಷ್ಟವಾಗಿ ಹೇಳ್ತೇವೆ. ಯಾಕಂದ್ರೆ ಇಲ್ಲಿ ಸಮನ್ವಯ ಸಮಿತಿಗಳಾಗಲಿಲ್ಲ ಎಂದರು. ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟಗಳಲ್ಲಿ ಸಮನ್ವಯ ಸಮಿತಿಗಳಾಗಲಿಲ್ಲ. ಅದೆಲ್ಲಾ ಆದ್ರೆ ಜನರಿಗೆ ಗೊಂದಲ ಇರಲ್ಲಾ ಅನ್ನೋ ದೃಷ್ಟಿಯಿಂದ ಇದನ್ನ ನಾವು ಆವಾಗಿನಿಂದ ಬಯಸುತ್ತಿದ್ದೇವೆ. ಖಂಡಿತಾ ಅದು ಮುಂದಿನ ದಿನಗಳಲ್ಲಿ ರಾಷ್ಟ್ರೀಯ ನಾಯಕರೆಲ್ಲಾ ಕೂತ್ಕೊಂಡು ಸರಿಪಡಿಸಿ ಎಂದರು. ಈಗ ಒಂದಾಗಿ ಎರಡು ಪಕ್ಷಗಳು ಒಟ್ಟಾಗಿ…

Read More

ಕೊರಟಗೆರೆ:  ನಗರದ ಮುಖ್ಯರಸ್ತೆಯಲ್ಲಿ ಆಟೋ ವ್ಹೀಲಿಂಗ್ ಮಾಡುತ್ತಾ ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿದ್ದ ಆಟೋ ಚಾಲಕನನ್ನು  ಕೊರಟಗೆರೆ ಪೊಲೀಸರು ಬಂಧಿಸಿದ  ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತೋಷ್ ಬಂಧಿತ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಆಟೋ ಚಾಲಕ  ಶನಿವಾರ ರಾತ್ರಿ ಮುಖ್ಯರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುತ್ತಿದ್ದ ದೃಶ್ಯವನ್ನು ಚಿತ್ರೀಕರಿಸಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪಿಎಸ್‌ ಐ ವೈ.ಜಿ.ತೀರ್ಥೇಶ್ ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯ ಸಹಿತ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ. ವ್ಹೀಲಿಂಗ್ ಮಾಡುವುದು, ಕರ್ಕಶ ಧ್ವನಿ ಮಾಡಿಕೊಂಡು ಓಡಾಡುವುದು ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವುದು ಕಂಡುಬಂದಲ್ಲಿ ಕ್ರಮವಹಿಸುವುದರೊಂದಿಗೆ ವಾಹನವನ್ನು ಜಪ್ತಿ ಮಾಡಿಕೊಳ್ಳಲಾಗುವುದು  ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಬಗ್ಗೆ ಮಹಿಳೆಯೊಬ್ಬರು ನೀಡಿದ ದೂರಿನನ್ವಯ ವಿವಾಹಿತ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿಯ ಬೆಳತ್ತೂರು ನಿವಾಸಿ, ಆರೋಪಿ ಶ್ರೀನಿವಾಸ್ ಬಂಧಿತ ಆರೋಪಿಯಾಗಿದ್ದಾನೆ. ಸಂತ್ರಸ್ತ ಮಹಿಳೆ ಕೌಟುಂಬಿಕ ಹಿಂಸಾಚಾರದ ಹಿನ್ನೆಲೆಯಲ್ಲಿ ಪತಿಯಿಂದ ಬೇರ್ಪಟ್ಟಿದ್ದು, ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದರು. ನಂತರ, ಆಕೆ ಆರೋಪಿಯನ್ನು ಭೇಟಿಯಾಗಿದ್ದು, ತಾನು ಕೆಲಸ ಪಡೆಯಲು ಸಹಾಯ ಮಾಡಿದ್ದ. ಹೀಗಾಗಿ ಆತನೊಂದಿಗೆ  ಆತ್ಮೀಯವಾಗಿದ್ದಳು. ವಿವಾಹಿತನಾಗಿರುವ ಆರೋಪಿ, ತನ್ನ ಪತಿಗೆ ವಿಚ್ಛೇದನ ನೀಡುವಂತೆ ಮಹಿಳೆಯ ಮನವೊಲಿಸಿ, ಕಾಡುಗೋಡಿಯ ಕಾಶಿ ವಿಶ್ವನಾಥ ದೇವಸ್ಥಾನದ ಬಳಿಯ ಬಾಡಿಗೆ ಮನೆಯಲ್ಲಿ ಕಳೆದ ಆರು ವರ್ಷಗಳಿಂದ ಲಿವ್–ಇನ್ ಪಾರ್ಟ್ನರ್ ಆಗಿ ಸಂತ್ರಸ್ತೆಯ ಜೊತೆ ವಾಸಿಸಲು ಪ್ರಾರಂಭಿಸಿದನು. ನಂತರ ಆಕೆಯ ಗಮನಕ್ಕೆ ಬಾರದೆ ಅವರ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ಬ್ಲ್ಯಾಕ್‌ ಮೇಲ್ ಮಾಡಿ ಹಣ ಸುಲಿಗೆ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ನಂತರ, ಆಕೆ 2023 ರಲ್ಲಿ ಆತನಿಂದ ತಪ್ಪಿಸಿಕೊಂಡು ಕೋಲಾರ ಜಿಲ್ಲೆಯ ಆಕೆಯ ಪೋಷಕರ ಮನೆಗೆ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದ ಮುಂಭಾಗದ ರಸ್ತೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಪರಿಣಾಮ ಸ್ಥಳದಲ್ಲಿದ್ದ ವಾಹನಗಳಿಗೆ ಹಾನಿಯಾಗಿದೆ ಎಂದು ಬುಧವಾರ ತಿಳಿದುಬಂದಿದೆ. ಗಾಳಿ ಹಾಗೂ ಮಳೆ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದ ಬಳಿಯೇ ಮರ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿದ್ದು, ಪರಿಣಾಮ ವಾಹನಗಳಿಗೆ ಹಾನಿಯಾಗಿದೆ ಎಂದು ವರದಿಗಳಿಂದ ತಿಳಿದಬಂದಿದೆ. ಘಟನೆ ಹಿನ್ನೆಲೆಯಲ್ಲಿ ಶಿವಾನಂದ ಸರ್ಕಲ್ ಬಳಿ ಪೊಲೀಸರು ರಸ್ತೆ ಬಂದ್ ಮಾಡಿದ್ದು, ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಬಾಯಲ್ಲಿ ಕನ್ನಡ…ಆದ್ರೆ ರಾಜ್ಯ ಸರ್ಕಾರ ರಾಜ್ಯದ ಉತ್ಪನ್ನವನ್ನೇ ಕಡೆಗಣಿಸಿದೆ ಎನ್ನುವ ಆಕ್ರೋಶ ಇದೀಗ ಕೇಳಿ ಬಂದಿದೆ.  ಬೆಂಗಳೂರಿನ ಮೆಟ್ರೋದಲ್ಲಿ ರಾಜ್ಯದ ನಂದಿನಿ ಹಾಲು ಉತ್ಪನ್ನಗಳ ಮಳಿಗೆಗಳ ಬದಲು, ಅಮುಲ್ ಉತ್ಪನ್ನಗಳಿಗೆ ಮಣೆ ಹಾಕಲಾಗಿದೆ. ಬೆಂಗಳೂರಿನ ಮೆಟ್ರೋದಲ್ಲಿ ಅಮೂಲ್ ಉತ್ಪನ್ನಗಳ ಮಳಿಗೆ ಪ್ರಾರಂಭಿಸುವುದಕ್ಕೆ ಬಿಎಂಆರ್‌ಸಿಎಲ್‌ ಅವಕಾಶ ಮಾಡಿಕೊಟ್ಟಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಇತ್ತೀಚೆಗೆ ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ಅಥವಾ ಅಮುಲ್ ಜೊತೆ ನಿಲ್ದಾಣಗಳಲ್ಲಿ ಕಿಯೋಸ್ಕ್‌ಗಳನ್ನು ಸ್ಥಾಪಿಸಲು ಪರವಾನಗಿ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೆನ್ನಿಗಾನಹಳ್ಳಿ, ಬೈಯಪ್ಪನಹಳ್ಳಿ, ಟ್ರಿನಿಟಿ, ಸರ್ ಎಂ ವಿಶ್ವೇಶ್ವರಯ್ಯ, ನಾಡಪ್ರಭು ಕೆಂಪೇಗೌಡ (ಮೆಜೆಸ್ಟಿಕ್), ನ್ಯಾಷನಲ್ ಕಾಲೇಜು, ಜಯನಗರ ಮತ್ತು ಬನಶಂಕರಿ ನಿಲ್ದಾಣಗಳಲ್ಲಿ ಕಿಯೋಸ್ಕ್‌ಗಳನ್ನು ಸ್ಥಾಪಿಸಲು ಅಮುಲ್ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಬಿಎಂಆರ್‌ ಸಿಎಲ್ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಚಿತ್ತೂರು: ಸಾಲ ಮರುಪಾವತಿ ಮಾಡಲಿಲ್ಲವೆಂದು ಮಹಿಳೆಯನ್ನು ಮರಕ್ಕೆ ಕಟ್ಟಿ ಮನಬಂದಂತೆ ಥಳಿಸಿದ ಘಟನೆಯೊಂದು ಆಂಧ್ರಪ್ರದೇಶದ ಚಿತ್ತೂರಿನ ಕುಪ್ಪಂ ಮಂಡಲದ ನಾರಾಯಣಪುರಂ ಗ್ರಾಮದಲ್ಲಿ ನಡೆದಿದೆ. ಮುನಿಕಣ್ಣಪ್ಪ ಎಂಬ ವ್ಯಕ್ತಿ ಸಿರಿಷಾ ಎಂಬ ಮಹಿಳೆಯನ್ನು ಮರಕ್ಕೆ ಕಟ್ಟಿ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಸಿರಿಷಾ ಅವರ ಪತಿ ತಿಮ್ಮರಾಯಪ್ಪ ಮೂರು ವರ್ಷಗಳ ಹಿಂದೆ ಮುನಿಕಣ್ಣಪ್ಪ ಅವರಿಂದ 80,000 ರೂ. ಸಾಲ ಪಡೆದಿದ್ದರು. ಸಾಲ ಮರುಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳನ್ನು ಬಿಟ್ಟು ತಿಮ್ಮರಾಯಪ್ಪ ಊರು ಬಿಟ್ಟಿದ್ದ. ಇನ್ನು ಮಹಿಳೆ ದಿನಗೂಲಿ ಕಾರ್ಮಿಕಳಾಗಿ ಕೆಲಸ ಮಾಡಿ, ಮಕ್ಕಳನ್ನು ಪೋಷಿಸುತ್ತಿದ್ದು, ಸಾಲ ಮರುಪಾವತಿ ಮಾಡಲು ವಿಳಂಬ ಮಾಡಿದ್ದಾರೆ. ಈ ನಡುವೆ ಸೋಮವಾರ ಮಧ್ಯಾಹ್ನ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಮುನಿಕಣ್ಣಪ್ಪ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹತ್ಯೆ ಮಾಡುವ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಬಲವಂತವಾಗಿ ಎಳೆದುಕೊಂಡು ಹೋಗಿ ಬೇವಿನ ಮರಕ್ಕೆ ಕಟ್ಟಿ ಹಾಕಿ, ದೈಹಿಕವಾಗಿ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಮಂಗಳೂರು: ಅರ್ಧ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗುವೊಂದು ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್‌ ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ. ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಮಧ್ಯಾಹ್ನ 3:30ಕ್ಕೆ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಭಾನುವಾರ ಬೆಳಗ್ಗೆ 10:25ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More