Author: admin

ರಾಜ್ಯದಲ್ಲಿ ಎಚ್3ಎನ್2 ವೈರಸ್ ಸೋಂಕು ಪತ್ತೆಯಾಗಿದ್ದು 26 ಜನರಿಗೆ ಸೋಂಕು ತಗುಲಿದೆ ಇದಕ್ಕೆ ಯಾವುದೇ ಭಯ ಪಡುವ ಅಗತ್ಯವಿಲ್ಲ ಆದರೆ ಮುನ್ನೆಚ್ಚರಿಕೆ ಅಗತ್ಯ. ಈ ಕುರಿತು ಶೀಘ್ರದಲ್ಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ ಹೇಳಿದ್ದಾರೆ. ಹಿರಿಯ ಅಧಿಕಾರಿಗಳು ಹಾಗೂ ತಜ್ಞರು ಒಳಗೊಂಡಿರುವ ತಾಂತ್ರಿಕ ಸಲಹಾ ಸಮಿತಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು,ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬಂದಿಗಳಿಗೆ ತಕ್ಷಣದಿಂದಲೇ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗುವುದು ಎಂದಿದ್ದಾರೆ. H3N2 ವೈರಸ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಜನಸಂದಣಿಯಿಂದ ದೂರವಿರಬೇಕು. ವೈದ್ಯರ ಸಲಹೆಯಿಲ್ಲದೆ ಔಷಧ ಸೇವಿಸುವುದು, ಅನಗತ್ಯವಾಗಿ ಆಂಟಿಬಯೋಟಿಕ್ ಸೇವನೆ ಮಾಡುವುದು ಸರಿಯಲ್ಲ ಔಷಧದ ಕೊರತೆ ಇಲ್ಲ, ಅಗತ್ಯ ಔಷಧಗಳನ್ನು ದಾಸ್ತಾನು ಮಾಡಲಾಗಿದೆ ಸೋಂಕು 2-5 ದಿನಗಳಲ್ಲಿ ಮಾಯವಾಗುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್…

Read More

ಹಾಸನ: ‘ನಾವು ಯಾರನ್ನೂ ಸಮಾಧಾನ ಮಾಡಲು ಹೋಗುವುದಿಲ್ಲ. ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಏನು ಮಾಡಿದ್ದೇವೆ ಎಂದು ರಣರಂಗದಲ್ಲಿ ಉತ್ತರಿಸುವೆ ‘ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಯಾವುದೇ ಕಾರಣಕ್ಕೂ ಜೆಡಿಎಸ್ ಬಿಡುವುದಿಲ್ಲ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್‌.ಡಿ.ಕುಮಾರಸ್ವಾಮಿ ಬಳಿ ಹೇಳಿದ್ದಕ್ಕೆ ನಮ್ಮ ಬಳಿ ದಾಖಲೆ ಇದೆ. ಇದು ಸುಳ್ಳಾದರೆ ಧರ್ಮಸ್ಥಳ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಆಣೆ ಮಾಡಲಿ’ ಎಂದು ಸವಾಲು ಹಾಕಿದರು. ‘ಅರಸೀಕೆರೆ ಕ್ಷೇತ್ರದಲ್ಲಿ ಲಿಂಗಾಯತ ಹಾಗೂ ಕುರುಬ ಸಮಾಜದ ಮತಗಳು ಈ ಬಾರಿ ಜೆಡಿಎಸ್‌ಗೆ ಬರುವುದಿಲ್ಲ ಎಂಬ ಕಾರಣದಿಂದ ಶಿವಲಿಂಗೇಗೌಡರು ಪಕ್ಷ ತೊರೆದಿದ್ದು, ಅವರಿಗೆ ದೇವರು ಒಳ್ಳೆಯದು ಮಾಡಲಿ’ ಎಂದರು. ‘ಅರಸೀಕೆರೆ ಅಭಿವೃದ್ಧಿಗೆ ಸಿದ್ದರಾಮಯ್ಯ ಕಾರಣ ಎಂದು ಶಿವಲಿಂಗೇಗೌಡ ಹೇಳಿದ್ದಾರೆ. ಆದರೆ, ಅವರನ್ನು ಶಾಸಕನ್ನಾಗಿ ಮಾಡಿದ್ದು ಜೆಡಿಎಸ್. 15 ವರ್ಷ ಪಕ್ಷದಿಂದ ಅಧಿಕಾರ ಅನುಭವಿಸಿದ ಅವರು, ಈಗ ಇಂಥ ಹೇಳಿಕೆ ಕೊಡುತ್ತಿರುವುದು ಎಷ್ಟು ಸರಿ’ ಎಂದು ಅವರು ಪ್ರಶ್ನಿಸಿದರು. ‘ಹಣ ಇದೆ ಅದಕ್ಕಾಗಿ ಪಂಚರತ್ನ…

Read More

ಬೆಳಗಾವಿ: ಲಕ್ಷ್ಮೀ ಟೇಕಡಿಯಲ್ಲಿ ತನ್ನದೇ ಆದ ಸಂಗೀತ ಶಾಲೆಯನ್ನು ನಡೆಸುತ್ತಿರುವ ಹಾಗೂ ಸುಸಜ್ಜಿತ ಕಟ್ಟಡ ಹೊಂದಿರುವ ಮಹಿಳಾ ಅಭಿವೃದ್ಧಿ ಮತ್ತು ಸೇವಾ ಸಂಸ್ಥೆಯು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮತ್ತು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಸಹಯೋಗದಲ್ಲಿ ರವಿವಾರ ಮಾರ್ಚ 5, 2023 ರಂದು ಬೆಳಗಾವಿಯ ನೆಹರೂ ನಗರದ ಎಸ್ ಜಿ.ಬಾಳೇಕುಂದ್ರಿ ಇಂಜನಿಯರಿಂಗ್ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ಉತ್ಸವ”ಮುಂಜಾನೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಅದ್ಧೂರಿಯಿಂದ ಜರುಗಿತು. ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳ ಕಲಾವಿದರು ಮತ್ತು ಗೋವೆಯ ಕನ್ನಡಿಗ ಕಲಾವಿದರು ಭಾಗವಹಿಸಿದ್ದ ಉತ್ಸವವನ್ನು ಗಡಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಅವರು ಉದ್ಘಾಟಿಸಿದರು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಬೆಳಗಾವಿ ಉತ್ತರ ಶಾಸಕ ಅನೀಲ ಬೆನಕೆ ವಹಿಸಿದ್ದರು. ಧಾರವಾಡ ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕ ಹಿರಿಯ ಕನ್ನಡ ಹೋರಾಟಗಾರ ಬಾಸೂರು ತಿಪ್ಪೇಸ್ವಾಮಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ…

Read More

ಬೆಂಗಳೂರು: ಭ್ರಷ್ಟ ಕಾಂಗ್ರೆಸ್‍ಮುಕ್ತ ಭಾರತ ಮಾಡಲು ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ಈ ಯಾತ್ರೆಯು ಬಿಜೆಪಿ ಜಯಭೇರಿಗೆ ಸಹಾಯಕ ಎಂದು ರಾಜ್ಯದ ಸಚಿವ ಗೋವಿಂದ ಕಾರಜೋಳ ಅವರು ಅಭಿಪ್ರಾಯಪಟ್ಟರು. ಗೋಕಾಕ ನಗರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆ ಸಂಬಂಧಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಶಾಸಕ ಸ್ಥಾನ ಗೆಲ್ಲುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಆಗಲಿದೆ ಎಂದು ನುಡಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ, ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ, ಯಾತ್ರೆಯ ಸಂಚಾಲಕ ಅರುಣ ಶಾಹಾಪೂರ, ಸಹ ಸಂಚಾಲಕರಾದ ವೀವೆಕಾನಂದ ಡಬ್ಬಿ, ಡಾ.ಮಲ್ಲಿಕಾರ್ಜುನ ಬಾಳಿಕಾಯಿ, ಮಂಡಲ ಅಧ್ಯಕ್ಷರಾದ ಭಿಮಸಿ ಭರಮಣ್ಣವರ, ರಾಜೇಂದ್ರ ಗೌಡಪ್ಪಗೊಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾμï ಪಾಟೀಲ, ಖಜಾಂಚಿ ಮಲ್ಲಿಕಾರ್ಜುನ ಮಾದಮ್ಮನವರ ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್…

Read More

ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಲಕ್ಷೋಪ ಲಕ್ಷ ಭಕ್ತರ ಸಾಕ್ಷಿಯಾಗಿ ಬೆಳಗಾವಿಯ ಐತಿಹಾಸಿಕ ರಾಜಹಂಸಗಡ ಕೋಟೆಯ ಮೇಲೆ ಭಾನುವಾರ ಬೆಳಗ್ಗೆ ರಾಷ್ಟ್ರದಲ್ಲೇ ಅತ್ಯಂತ ಭವ್ಯವಾದದ್ದೆನ್ನಲಾದ, ಸ್ವರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಯನ್ನು ಅತ್ಯಂತ ಶಾಸ್ತ್ರೋಕ್ತ ವಿಧಿ ವಿಧಾನಗಳ ಮಧ್ಯೆ, ಮಹಾರಾಜರ ಪಟ್ಟಾಭಿಷೇಕದ ಮಾದರಿಯಲ್ಲಿ ಲೋಕಾರ್ಪಣಗೊಳಿಸಲಾಯಿತು. ಸಾಂಪ್ರದಾಯಿಕ ಪಲ್ಲಕ್ಕಿ ಉತ್ಸವದೊಂದಿಗೆ ಗಣ್ಯರ ಮೆರವಣಿಗೆಯಲ್ಲಿ ಆಗಮಿಸಿ, ರಾಜಹಂಸಗಡದ ಅಧಿಪತಿ ಸಿದ್ಧೇಶ್ವರ ಮಂದಿರದಲ್ಲಿ ಪೂಜೆ ಸಲ್ಲಿಸಿದ ನಂತರ ಶಿವಾಜಿ ಮಹಾರಾಜರ 13ನೇ ವಂಶಸ್ಥರಾದ ಯುವರಾಜ ಸಂಭಾಜಿರಾಜೇ ಛತ್ರಪತಿ ಮತ್ತು ಗಣ್ಯರು ಪುತ್ಳಳಿಯನ್ನು ಅನಾವರಣಗೊಳಿಸಿದರು. ಕೇಸರಿ ಬಟ್ಟೆ ನಿಧಾನವಾಗಿ ಕೆಳಗೆ ಸರಿಯುತ್ತಿದ್ದಂತೆ ಯುವರಾಜರ ಶಿಷ್ಯರು ಮಂತ್ರಘೋಷ ಮೊಳಗಿಸಿದರು. ಶಿವಾಜಿ ಮೂರ್ತಿ ಅನಾವರಣಗೊಳ್ಳುತ್ತಿದ್ದಂತೆ ಸೇರಿದ್ದ ಲಕ್ಷ ಲಕ್ಷ ಶಿವಾಜಿ ಭಕ್ತರು ಜೈ ಘೋಷ ಮೊಳಗಿಸಿದರು. ಇದೇ ಸಮಯಕ್ಕೆ ಬಣ್ಣದ ಓಕುಳಿಯಾಯಿತು. ಅಲ್ಲಿನ ಇಡೀ ಪರಿಸರವೇ ಶಿವಭಕ್ತಿಯಲ್ಲಿ ಮಿಂದೆದ್ದಿತು. ಇಡೀ ಕಾರ್ಯಕ್ರಮ ಮಹಾರಾಜರ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯುತ್ತಿದೆಯೇನೋ ಎನ್ನುವ ರೀತಿಯಲ್ಲಿ, ರಾಜ ದರ್ಭಾರದಂತೆ ಭಾಸವಾಗುವಂತಿತ್ತು. ಇದೇ ವೇಳೆ ಸಾಂಪ್ರದಾಯಿಕ…

Read More

ಶೈಕ್ಷಣಿಕ ಹಿತದೃಷ್ಟಿಯಿಂದ ಸೆಮಿಸ್ಟರ್ ಪರೀಕ್ಷೆಗಳನ್ನು ಮತ್ತಷ್ಟು ತಡ ಮಾಡದೆ, ಈ ಕೂಡಲೇ ಮುಗಿಸಲು ತುಮಕೂರು ವಿಶ್ವವಿದ್ಯಾಲಯ ಕ್ರಮ ಕೈಗೊಳ್ಳಬೇಕೆಂದು AIDSO ತುಮಕೂರು ಜಿಲ್ಲಾ ಸಮಿತಿ ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರಾದ ಪ್ರಸನ್ನ ಕುಮಾರ್ ಕೆ. ಅವರ ಮೂಲಕ ಕುಲಪತಿಗಳಿಗೆ ಮನವಿ ಸಲ್ಲಿಸಿತು. ರಾಜ್ಯದಲ್ಲಿ ಪ್ರಸ್ತುತ ಸೆಮಿಸ್ಟರ್ ತರಗತಿಗಳು ಆರಂಭವಾಗಿ 7 ತಿಂಗಳುಗಳು ಕಳೆದಿವೆ. ಆದರೂ ರಾಜ್ಯದ ಯಾವುದೇ ವಿಶ್ವವಿದ್ಯಾಲಯದಲ್ಲಿ ಈಗಾಗಲೇ ನಡೆಯಬೇಕಿದ್ದ ಸೆಮಿಸ್ಟರ್ ಪರೀಕ್ಷೆಗಳು ನಡೆದಿಲ್ಲ ಮತ್ತು ಹಲವು ವಿಶ್ವವಿದ್ಯಾಲಯಗಳು ಇನ್ನೂ ಪರೀಕ್ಷಾ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿಲ್ಲ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಸಮಿತಿ ಮನವಿಯಲ್ಲಿ ತಿಳಿಸಿದೆ. ಇದು ಹೀಗೆಯೇ ಮುಂದುವರೆದರೆ, ಮುಂದಿನ ಶೈಕ್ಷಣಿಕ ವರ್ಷದ ಮೇಲೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಒಂದೆಡೆ, ಸ್ವಾಯತ್ತ ವಿಶ್ವವಿದ್ಯಾಲಯಗಳು ತಮ್ಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಗಿಸಿಕೊಂಡು ಮುಂದಿನ ಸೆಮಿಸ್ಟರ್ ಅನ್ನು ಆರಂಭಿಸಿದ್ದಾರೆ. ಇನ್ನೊಂದೆಡೆ ರಾಜ್ಯದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೆಮಿಸ್ಟರ್ ತರಗತಿಗಳು ಮುಗಿಸಿಕೊಂಡು ಒಂದು ತಿಂಗಳಿನಿಂದ ಪರೀಕ್ಷೆಗಾಗಿ ಕಾಯುತ್ತಾ…

Read More

ತುರುವೇಕೆರೆ: ಪಟ್ಟಣದಲ್ಲಿ ಪೌರಾಡಳಿತ ಮತ್ತು ನಗರಾಭಿವೃದ್ಧಿ ಇಲಾಖೆ ಹಾಗೂ ಪಟ್ಟಣ ಪಂಚಾಯತಿಯ ವತಿಯಿಂದ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು  ಏರ್ಪಡಿಸಲಾಗಿತ್ತು. ಈ ಬೃಹತ್ ಕಟ್ಟಡವನ್ನು ಪೌರಾಡಳಿತ ಹಾಗೂ ಸಣ್ಣ ಕೈಗಾರಿಕಾ ಸಚಿವರಾದ ಎಂ ಟಿ ಬಿ ನಾಗರಾಜ್ ರವರು ಉದ್ಘಾಟಿಸಬೇಕಾಗಿದ್ದು ಅವರ ಅನುಪಸ್ಥಿತಿಯಲ್ಲಿ ತಾಲೂಕಿನ ಶಾಸಕರಾದ ಮಸಾಲ ಜಯರಾಮ್ ರವರು ನಾಮಫಲಕ ಅನಾವರಣಗೊಳಿಸುವ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿ, ಇದೊಂದು ಐತಿಹಾಸಿಕ ದಿನವಾಗಿದ್ದು, ಈ ಕಟ್ಟಡದ ಕಾಮಗಾರಿ ಶುರುವಾಗಿದ್ದು 2007ರಲ್ಲಿ ಇಂದಿಗೆ 17 ವರ್ಷಗಳೆ ಕಳೆದಿವೆ 14 ವರ್ಷ ಅಧಿಕಾರ ನಡೆಸಿದವರು ಕೇವಲ ತಗಡಿನ ಶೀಟ್ ಮುಚ್ಚಿ ಅನೈತಿಕ ಚಟುವಟಿಕೆ ತಾಣವಾಗಲು ಕಾರಣಕರ್ತರಾಗಿದ್ದರು ನಾನು ಶಾಸಕನಾಗಿ ಅಧಿಕಾರವಹಿಸಿಕೊಂಡ ಗಳಿಗೆಯಲ್ಲಿಯೇ ವಾಣಿಜ್ಯ ಸಂಕೀರ್ಣಕ್ಕೆ ಮುಕ್ತಿ ಕೊಡಿಸಬೇಕು ಎಂದು ಪಣತೊಟ್ಟು ಹದಿನೈದು ವರ್ಷಗಳಿಂದ ಆಗದೆ ಇರುವ ಕೆಲಸವನ್ನು ಕೇವಲ ಮೂರು ವರ್ಷಗಳಲ್ಲಿ ಕೋಟ್ಯಂತರ ರೂಪಾಯಿಗಳ ಅನುದಾನವನ್ನು ತಂದು ಈ ವಾಣಿಜ್ಯ ಸಂಕೀರ್ಣವನ್ನು ಐತಿಹಾಸಿಕವಾಗಿ ನಿರ್ಮಿಸಿದ್ದೇವೆ.…

Read More

ಕೊರಟಗೆರೆ : ಮುಂಬರುವ 2023ರ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ರಾಜಕೀಯ ಪಕ್ಷಗಳು ಸಮಾವೇಶಗಳನ್ನು ಮಾಡುವುದರ ಮತದಾರರ ಮನಸ್ಸು ಗೆಲ್ಲುವ ತಂತ್ರಗಾರಿಕೆ ಮಾಡುತ್ತಿದ್ದಾರೆ. ಭಾನುವಾರ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶವು ಅದ್ದೂರಿಯಾಗಿ ಯಶಸ್ವಿ ಕಂಡಿತು. ಕೊರಟಗೆರೆ ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಿರುವ ಕಾಂಗ್ರೆಸ್ ಕಚೇರಿ ರಾಜೀವ ಭವನ ಉದ್ವಾಟನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದು, ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ಖರ್ಗೆ ಅವರಿಗೆ ಸಾಥ್ ನೀಡಿದ್ದು, ಆ ಮೂಲಕ ತಾಲ್ಲೂಕಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಜೋರಾಗಿ ನಡೆಯಿತು. ಪಟ್ಟಣದ ಜೂನಿಯರ್ ಕಾಲೇಜ್ ಮೈದಾನದಿಂದ ವೇದಿಕೆವರೆಗೂ ಯೂತ್ ಕಾಂಗ್ರೆಸ್ ಬೈಕ್ ರ್ಯಾಲಿ ಮಾಡುವುದರ ಮೂಲಕ ಕೈ ಪರವಾಗಿ ಘೋಷಣೆಗಳನ್ನು ಕೂಗಿದರು. ತೆರೆದ ವಾಹನದಲ್ಲಿ ವೇದಿಕೆವರೆಗೂ ಕಾಂಗ್ರೆಸ್ ನಾಯಕರು ಆಗಮಿಸಿ ಸರ್ಕಾರಿ ಡಿಗ್ರಿ ಕಾಲೇಜ್ ಬಳಿಯಿರುವ ರಾಜೀವ ಭವನ ಉದ್ವಾಟನೆ ನೆರವೇರಿಸಿದರು. ಕೊರಟಗೆರೆ ಹಾಲಿ ಶಾಸಕ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಖರ್ಗೆಗೆ ರಾಜ್ಯ ಉಸ್ತುವಾರಿ ಸಚಿವ…

Read More

ಅಥಣಿ: ಅಥಣಿ ಮತಕ್ಷೇತ್ರದಲ್ಲಿ ಬಾಂಧಾರಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಟ್ಟು 16ಕ್ಕೂ ಅಧಿಕ ಬಾಂದಾರಗಳನ್ನು ಮಂಜೂರು ಮಾಡಲಾಗಿದ್ದು ಸಧ್ಯ ಕಾಮಗಾರಿಗಳು ಪ್ರಾರಂಭವಾಗಿವೆ, ಈಗಾಗಲೇ ಸುಮಾರು 28.98 ಕೋಟಿ ರೂ ಅನುದಾನವನ್ನು ಬಾಂದಾರುಗಳ ರಿಪೇರಿ ಕಾರ್ಯಗಳಿಗೆ ತರಲಾಗಿದ್ದು ಶೀಘ್ರ ಭೂಮಿಪೂಜೆ ನೆರವೇರಿಸಲಿದ್ದೆವೆ, ಮತಕ್ಷೇತ್ರದ ಜನತೆ ಆಶೀರ್ವಾದ ಮಾಡಿ ನನ್ನನ್ನು ಶಾಸಕರಾಗಿ ಮಾಡಿದ್ದು ಅವರ ಸೇವೆ ಮಾಡುತ್ತಿದ್ದೆನೆ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರು ಹೇಳಿದರು. ಅವರು ತಾಲೂಕಿನ ದೇಸಾರಟ್ಟೆ ಗ್ರಾಮದಲ್ಲಿ 1 ಕೋಟಿ 60 ಲಕ್ಷ ರೂ ವೆಚ್ಚದ ದೇಸಾರ ಕೊಕಟನೂರ ರಸ್ತೆ ಕಾಮಗಾರಿ, ಕೊಕಟನೂರ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದ ಎಸ್‌ಸಿ ಕಾಲೋನಿಯಲ್ಲಿ ಚರಂಡಿ ನಿರ್ಮಾಣ ಕಾಮಗಾರಿ, 2 ಕೋಟಿ 11 ಲಕ್ಷ ರೂ ವೆಚ್ಚದ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯ ಕಟ್ಟಡ ಕಾಮಗಾರಿ, 5 ಲಕ್ಷ ರೂ. ವೆಚ್ಚದ ಸ್ತ್ರೀ ಕರಿಸಿದ್ದೇಶ್ವರ ದೇವಸ್ಥಾನದ ಸಮುದಾಯ ಭವನ ಕಟ್ಟಡ ಕಾಮಗಾರಿ, 1 ಕೋಟಿ ರೂ ವೆಚ್ಚದ ಹಿರೇಹಳ್ಳಕ್ಕೆ…

Read More

ಕೊರಟಗೆರೆ : ಮಾಜಿ ಸಿಎಂ ಯಡಿಯೂರಪ್ಪನವರ ಅಭಿಮಾನಿಯಾದ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾದ ಮುನಿಯಪ್ಪನವರು ಬಿಎಸ್‌ ವೈ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುವುದರ ಮೂಲಕ ನೂರಾರು ಬಡ ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ತಮ್ಮ ಕ್ಷೇತ್ರದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಿ ಕೆಲಸ ಕೊಡಿಸುವುದರ ಮೂಲಕ ಯುವಜನತೆಯ ಬಾಳಿಗೆ ಬೆಳಕು ನೀಡಿದ್ದಾರೆ. ಕ್ಷೇತ್ರದ ಯುವ ಜನತೆಯ ಉತ್ತಮ ಭವಿಷ್ಯ ನಿರ್ಮಾಣದ ಕನಸ್ಸನ್ನು ಹೊತ್ತಿರುವ ಮುನಿಯಪ್ಪ ಹಾಗೂ ಬಿಜೆಪಿ ಯುವ ಮುಖಂಡ ಚೇತನ್ ಮುನಿಯಪ್ಪನವರು ಈಗಾಗಲೇ ಕ್ಷೇತ್ರದ ಬಡ ವರ್ಗದ ಜನರಿಗೆ ಸಾಕಷ್ಟು ರೀತಿಯ ಸಹಾಯ ಹಸ್ತ ಚಾಚಿ ಮಾನವೀಯತೆ ಮೆರೆದಿದ್ದಾರೆ. ಮುನಿಯಪ್ಪನವರು ಈಗಾಗಲೇ ಕೊರಟಗೆರೆ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ತೆರಳಿ ಜನರ ಕಷ್ಟ ಸುಖದಲ್ಲಿ ಭಾಗವಹಿಸಿ ಜನರ ವಿಶ್ವಾಸ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಮುಂದಿನ 2023ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ…

Read More