Subscribe to Updates
Get the latest creative news from FooBar about art, design and business.
- ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
- ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
- ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
- ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
- ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
- ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
- 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
- ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
Author: admin
ಮಂಡ್ಯ: ಕೊಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಮದ್ದೂರಮ್ಮ ದೇವಾಲಯದ ಕೊಳದಲ್ಲಿ ನಡೆದಿದೆ 16 ವರ್ಷದ ಅಜಲಮ್ ಪಾಷಾ, 13 ವರ್ಷದ ಮಹಮ್ಮದ್ ಅಲಿ ಮೃತ ದುರ್ದೈವಿಗಳಾಗಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬಾಲಕರಿಬ್ಬರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಾಲಕರಿಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಕ್ಕಳು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿದ್ದು, ಎನ್ ಸಿಪಿ ನಾಯಕ ಅಜಿತ್ ಪವಾರ್ ಬಂಡಾಯವೆದ್ದು ಹಲವಾರು ಶಾಸಕರೊಂದಿಗೆ ಶಿಂಧೆ ಸರ್ಕಾರವನ್ನು ಸೇರಿದ್ದು, ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎನ್ ಸಿಪಿಯ ಹಿರಿಯ ನಾಯಕ ಛಗನ್ ಭುಜಬಲ್ ಕೂಡ ಮಹಾರಾಷ್ಟ್ರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲ ರಮೇಶ್ ಬೈಸ್ ಪ್ರಮಾಣವಚನ ಬೋದಿಸಿದರು. ಪ್ರಮಾಣ ವಚನ ಸ್ವೀಕಾರದ ವೇಳೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ರಾಜಭವನದಲ್ಲಿ ಉಪಸ್ಥಿತರಿದ್ದರು. ಮಹಾರಾಷ್ಟ್ರದ ಮಾಜಿ ಗೃಹ ಸಚಿವರಾದ ದಿಲೀಪ್ ವಾಲ್ಸೆ ಪಾಟೀಲ್, ಹಸನ್ ಮುಶ್ರೀಫ್, ಸಂಜಯ್ ಬನ್ಸೋಡೆ, ಅದಿತಿ ತಟ್ಕರೆ, ಧರ್ಮರಾವ್ ಮತ್ತು ಧನಂಜಯ್ ಮುಂಡೆ ಕೂಡ ಮಹಾರಾಷ್ಟ್ರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ವಸತಿ ನಿಲಯಗಳಿಗೆ ಪಾವಗಡ ತಹಶೀಲ್ದಾರ್ ಸುಜಾತ ದಿಢೀರ್ ಭೇಟಿ ನೀಡಿ ಹಾಸ್ಟೆಲ್ ಗಳ ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟ ಪರಿಶೀಲನೆ ನಡೆಸಿದರು. ಪಾವಗಡ ಪಟ್ಟಣದಲ್ಲಿರುವ ದೇವರಾಜು ಅರಸು ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳಿಗೆ ಭೇಟಿ ಮಾಡಿ ಅವರು, ಮಕ್ಕಳ ಹಾಜರಾತಿ ಪುಸ್ತಕ ಅಡುಗೆ ಮನೆಯ ಶುಚಿತ್ವ ಪರಿಶೀಲನೆ ನಡೆಸಿದರು. ತಾವೇ ಹಾಸ್ಟೆಲ್ ಊಟ ಸೇವಿಸಿ, ಆಹಾರದ ಗುಣಮಟ್ಟ ಪರಿಶೀಲನೆ ಮಾಡಿ, ಹಾಸ್ಟೆಲ್ ಸ್ವಚ್ಚವಾಗಿ ಇಡುವಂತೆ ವಾರ್ಡ್ ಗೆ ಸೂಚನೆ ನೀಡಿದರು. ಬಳಿಕ ಎಸ್ಸಿ-ಎಸ್ಟಿ ವಸತಿ ನಿಲಯಕ್ಕೂ ಭೇಟಿ ನೀಡಿದ ಅವರು, ಶೌಚಾಲಯ ಇಲ್ಲದೆ ಇರುವುದನ್ನು ಗಮನಿಸಿ ಕೂಡಲೇ ಶೌಚಾಲಯ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು. ಅಲ್ಲದೇ ಇಂದಿರಾ ಕ್ಯಾಂಟಿನ್ ಗೂ ಭೇಟಿ ನೀಡಿ, ಇಂದಿರಾ ಕ್ಯಾಂಟಿನ್ ಸ್ವಚ್ಛವಾಗಿಡುವಂತೆ ಸೂಚನೆ ನೀಡಿದರು. ತಹಶೀಲ್ದಾರ್ ಗೆ ಸ್ಥಳೀಯ ಅಧಿಕಾರಿಗಳ ಸಾಥ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಶಿರಾ: ಶಾಸಕ ಟಿ.ಬಿ.ಜಯಚಂದ್ರ ಅವರು, ಶಿರಾ ನಗರದ ಕೆಲ ಬಡಾವಣೆಗಳ ರೌಂಡ್ಸ್ ಹಾಕಿದ್ರು. ಇದೇ ವೇಳೆ ರಸ್ತೆ ಬದಿಯಲ್ಲಿ ಚಹಾ ಸವಿದು ಜನರ ಸಮಸ್ಯೆ ಆಲಿಸಿದರು. ಚುನಾವಣೆಯಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಸಿಟಿ ರೌಂಡ್ಸ್ ಹೊಡೆದ ಶಾಸಕರು ನಗರ ಪ್ರದೇಶದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಮುಂದಾದರು. ಇದೇ ವೇಳೆ ಕುಡಿಯುವ ನೀರು, ಸ್ವಚ್ಛತೆ, ಚರಂಡಿ ಸಮಸ್ಯೆ ಕುರಿತಂತೆ ಹಲವು ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಹೇಳಿಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ವ್ಯಕ್ತಿ ಹಾವಿಗೆ ಬಲಿಯಾದ ಘಟನೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೆದ್ದಯ್ಯ(45) ಮೃತ ದುರ್ದೈವಿಯಾಗಿದ್ದಾರೆ. ಇವರು ಜಾನುವಾರುಗೆ ಮೇವು ತರಲು ಹೋಗಿದ್ದ ವೇಳೆ ಹಾವು ಕಚ್ಚಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಈಜು ಬಾರದಿದ್ದರೂ ನೀರಿಗೆ ಬಿದ್ದ ತನ್ನಿಬ್ಬರು ಮಕ್ಕಳನ್ನು ರಕ್ಷಿಸಿ ತಾಯಿ ನೀರುಪಾಲಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ರಥಸಂದ್ರ ಗ್ರಾಮದ ಕೆರೆಯಲ್ಲಿ ನಡೆದಿದೆ. ಮನು(30) ಮೃತ ಮಹಿಳೆಯಾಗಿದ್ದಾರೆ. ಇವರು ಇಬ್ಬರು ಮಕ್ಕಳೊಂದಿಗೆ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಮಕ್ಕಳು ಕೆರೆ ದಡದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಇಬ್ಬರು ಮಕ್ಕಳು ಕೂಡ ಕೆರೆಗೆ ಬಿದ್ದಿದ್ದಾರೆ. ತಕ್ಷಣವೇ ಕೆರೆಗೆ ಹಾರಿದ ಮನು ಮಕ್ಕಳಿಬ್ಬರನ್ನು ರಕ್ಷಿಸಿ ನೀರಿನಿಂದ ಮೇಲೆ ಹಾಕಿದ್ದಾರೆ. ಆದ್ರೆ ಈಜು ಬಾರದ ಕಾರಣ ತಾನು ನೀರಿನಿಂದ ಮೇಲೆ ಬರಲಾಗದೇ ಕೆರೆಯಲ್ಲೇ ಮುಳುಗಿ ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಪೊಲೀಸ್ ಸಂಬಂಧಿ ಸಮಸ್ಯೆ ಆಲಿಸಲು ಪ್ರತಿ ತಿಂಗಳು ನಾಲ್ಕನೇ ಶನಿವಾರದಂದು ಜನಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಸಭೆಯಲ್ಲಿ ಬಿಬಿಎಂಪಿಗೆ ಸಂಬಂಧಪಟ್ಟ ಸಮಸ್ಯೆಗಳು ಹೆಚ್ಚಾಗಿ ಕೇಳಿಬರುತ್ತಿವೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದರು. ‘ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ’ ಎಂದು ಪ್ರತಿಬಾರಿಯೂ ಸಾರ್ವಜನಿಕರು ಕೋರುತ್ತಿದ್ದಾರೆ. ಇದಕ್ಕೆ ಸ್ಪಂದಿಸಿರುವ ಬಿ. ದಯಾನಂದ್, ‘ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳುವ ಜನಸಂಪರ್ಕ ಸಭೆಗೆ ಬಿಬಿಎಂಪಿ ಅಧಿಕಾರಿಗಳನ್ನು ಕಳುಹಿಸಿಕೊಡಿ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ಡಿಸಿಆರ್ ಬಿ ಪೊಲೀಸರು ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ 3.61 ಲಕ್ಷ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಂ.ಬಿ.ರವಿಕುಮಾರ (47) ಹಾಗೂ ತಿಪ್ಪೇಶ (43) ಬಂಧಿತ ಆರೋಪಿಗಳು. ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ನಮ್ಮತುಮಕೂರು ಸ್ಪೆಷಲ್ ರಿಪೋರ್ಟ್: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ದೃಷ್ಟಿಯಿಂದ ತುಮಕೂರು ನಗರದ ಜೀವ ಜಲವಾಗಿರುವ ಹೇಮಾವತಿ ನದಿ ನೀರು ಗುರುರಿನ ಹೇಮಾವತಿ ಜಲಾಶಯದಿಂದ ಬುಗುಡನಹಳ್ಳಿ ಜಲಸಂಗ್ರಹಕಾರಕ್ಕೆ ಹರಿದು ಬರುತ್ತಿದೆ. ಹೌದು ಮುಂದಿನ ಒಂದು ವಾರದಲ್ಲಿ 300ಎಂಸಿಎಫ್ ಟೀ ಸಾಮರ್ಥ್ಯದ ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ನೀರು ಬಂದು ಸೇರಲಿದೆ. ನಿತ್ಯ 45 ಎಂಸಿಎಫ್ ಟಿ ಯಷ್ಟು ನೀರು ಬಂದು ಸೇರುತ್ತಿದ್ದು ಸುಮಾರು 500 ಕ್ಯೂಸ್ ಪ್ರಮಾಣದಲ್ಲಿ ನೀರು ಹರಿವಿನ ಪ್ರಮಾಣದಲ್ಲಿದೆ. ಈ ಮೂಲಕ ಮುಂದಿನ ಐದು ತಿಂಗಳವರೆಗೆ ತುಮಕೂರು ನಗರದಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ. ಬುಗುಡನಹಳ್ಳಿ ಜಲಸಂಗ್ರಹಗಾರದಲ್ಲಿ ಪ್ರಸ್ತುತ 32 ಎಂಸಿಎಫ್ ಅಷ್ಟು ನೀರು ಸಂಗ್ರಹವಾಗಿದ್ದು ಕಳೆದ ವರ್ಷ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿತ್ತು ಅಲ್ಲದೆ ಈ ವರ್ಷದ ಜನವರಿ 23ರವರೆಗು ಕೂಡ ಗೊರೂರಿನ ಹೇಮಾವತಿ ಜಲಾಶಯದಿಂದ ನೀರು ಹರಿಸಲಾಗಿತ್ತು. ಹಾಸನ ಜಿಲ್ಲೆಯ ಗೋರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ತುಮಕೂರು ನಗರಕ್ಕೆ ಜೂನ್ 27ರಂದು…
ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ. ಯುವಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಬರದಿದ್ದರೆ, ನಾನು ಮಂತ್ರಿಯಾಗದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದೆ, ಆದರೆ ಈಗ ಸರ್ಕಾರವು ಬಂದಿದೆ. ಮಂತ್ರಿಯೂ ಆಗಿದ್ದೇನೆ, ಆದ್ದರಿಂದ ಬೇರೆಯವರಿಗೆ ನಮ್ಮ ಶಾಸಕರೊಂದಿಗೆ ಚರ್ಚಿಸಿ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು. ನಂತರ ವ್ಯಾಕ್ಸಿನ್ ಡಿಪೋದಲ್ಲಿ ನಡೆದ ಅಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವ್ಯಾಕ್ಸಿನ್ ಡಿಪೋದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಆರಂಭಿಸಲು ಆರೋಗ್ಯ ಇಲಾಖೆಯಿಂದ ಯಾವುದೇ ರೀತಿಯ ಪರವಾನಿಗೆ ನೀಡಿರುವುದಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೇವಲ ಹೆರಿಟೇಜ್ ಪಾರ್ಕ್ ಅಭಿವೃದ್ಧಿಪಡಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಆದರೆ ಅಲ್ಲಿ ಮರಗಳನ್ನು ಕಡಿದು ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದ್ದು, ಈ ಕುರಿತು ತನಿಖೆ ಕೈಗೊಂಡು ಗೊಂದಲಕ್ಕೆ ಸ್ಪಷ್ಟೀಕರಣ ನೀಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದ ಅವರು, ಕಾಮಗಾರಿಗಳಲ್ಲಿ…