Subscribe to Updates
Get the latest creative news from FooBar about art, design and business.
- ಮಕ್ಕಳು ಮದ್ಯಪಾನ, ಧೂಮಪಾನ ಚಟುವಟಿಕೆಗಳಿಂದ ದೂರವಿರಬೇಕು: ಶಿಕ್ಷಕ ಮದನ್
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
Author: admin
H3N2 ಸೋಂಕಿನ ಬಗ್ಗೆ ಗಾಬರಿ ಪಡಬೇಕಿಲ್ಲ. ಆದರೆ ಸೋಂಕಿನ ಬಗ್ಗೆ ಎಚ್ಚರಿಕೆಯಿಂದಿರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು. H3N2 ಸೋಂಕಿನ ಭೀತಿ ಹಿನ್ನೆಲೆ ಅಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುಧಾಕರ್, ಸೋಂಕು ಬಗ್ಗೆ ಮಕ್ಕಳು ವೃದ್ದರು ಗರ್ಭಿಣಿಯರು ಎಚ್ಚರದಿಂದಿರಿ. ಶುಚಿತ್ವದ ಬಗ್ಗೆ ಹೆಚ್ಚಿನ ಗಮನ ನೀಡಿ. ವೈರಸ್ ಬಗ್ಗೆ ಯಾವುದೇ ಆತಂಕ ಬೇಡ. ಆದರೆ ವೈರಸ್ ಬಗ್ಗೆ ನಿರ್ಲಕ್ಷ್ಯಬೇಡ. ಜ್ವರಕ್ಕೆ ವ್ಯಾಕ್ಸಿನ್ ಪಡೆಯುವಂತೆ ಸೂಚನೆ ನೀಡಲಾಗಿದೆ ಎಂದರು. ಹೆಚ್ 3 ಎನ್2 ಸೋಂಕು ಹೆಚ್ಚಳ ಹಿನ್ನೆಲೆ ಸಭೆ ನಡೆಸಿದ್ದೇವೆ. ಅನಗತ್ಯವಾಗಿ ಬಿಸಿಲಿನಲ್ಲಿ ಓಡಾಡಬೇಡಿ. ಬಿಸಿಲು ಮುಗಿಯುವವರೆಗೂ ಹೆಚ್ಚು ನೀರು ಸೇವಿಸಿ. ಮಜ್ಜಿಗೆ ತಂಪು ಪಾನೀಯ ಹೆಚ್ಚು ಸೇವಿಸಿ ಸೋಂಕು ಪರೀಕ್ಷೆಗೆ 25 ಕೇಂದ್ರಗಳನ್ನ ತೆರೆಯಲಾಗುತ್ತದೆ. ಐಸಿಯುನಲ್ಲಿ ಕೆಲಸ ಮಾಡುವವರಿಗೆ ಲಸಿಕೆ ನೀಡುತ್ತೇವೆ ಎಂದು ಸಚಿವ ಸುಧಾಕರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಹೆಚ್.ಡಿ ಕುಮಾರಸ್ವಾಮಿ ಗೆ ಅಧಿಕಾರ ಕೊಟ್ಟಾಗ ಸರಿಯಾಗಿ ಆಡಳಿತ ನಡೆಸದೇ ಬಿಟ್ಟು ಹೋದ್ರು. ಹೆಚ್.ಡಿ .ಕೆ ಕುದುರೇ ಏರದೇ ಬಿಟ್ಟು ಹೋಗಿದ್ದಾರೆ. ಮತ್ತೆ ಅಧಿಕಾರಕ್ಕೆ ಬರ್ತೀನಿ ಅಂದರೇ ಜನರು ನಂಬಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಟಾಂಗ್ ನೀಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್, ಈ ರಾಜ್ಯದಲ್ಲಿ ಮತದಾರನೇ ದೊಡ್ಡವನು. ಇಲ್ಲಿ ಯಾರ ಪಾಳೇಗಾರಿಕೆ ನಡೆಯಲ್ಲ. ಮತ್ತೆ ಅಧಿಕಾರಕ್ಕೆ ಬರ್ತೀನಿ ಅಂದ್ರೆ ಹೆಚ್.ಡಿ ಕುಮಾರಸ್ವಾಮಿಯನ್ನ ಜನರು ನಂಬಲ್ಲ. ಕಾಂಗ್ರೆಸ್ ಜೆಡಿಎಸ್ ನವರದ್ದು ಯಾವಾಗಲೂ ಕಳ್ಳರ ಆಟ ಬಿಟಿಮ್ ಜೆಡಿಎಸ್ ಕಾಂಗ್ರೆಸ್ ನ ಬಿ ಟೀಮ್ ಎಂದು ಟೀಕಿಸಿದರು. ಡಿ.ಕೆ ಶಿವಕುಮಾರ್ ಗೆ ಸೋಲುವ ಭಯ ಕಾಡುತ್ತಿದೆ. ಸಿದ್ದರಾಮಯ್ಯ ಓಡಿ ಹೋಗುವ ಹಂತದಲ್ಲಿದ್ದಾರೆ ಎಸಿಬಿ ರಚಿಸಿ ಎಲ್ಲಾ ಕೇಸ್ ಮುಚ್ಚಿ ಹಾಕಿದರು ಕಾಂಗ್ರೆಸ್ ಅವಧಿಯಲ್ಲಿ ಒಂದು ಕೇಸ್ ನಲ್ಲಿ ಬಂದನವಾಗಿಲ್ಲ ನಾವು ಪಾರದರ್ಶಕವಾಗಿದ್ದೇವೆ. ಬಿಜೆಪಿಗರೇ ತಪ್ಪು ಮಾಡಿದ್ರೆ ಜೈಲಿಗೆ ಹಾಕ್ತೇವೆ. ಶಿಕ್ಷೆ ಕೊಡುತ್ತೇವೆ ಎಂದು ಆರ್.ಅಶೋಕ್ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ…
ಶೂಟಿಂಗ್ ವೇಳೆ ಬಿದ್ದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯಗಳಾಗಿರುವ ಹೈದರಾಬಾದ್ ನಲ್ಲಿ ಸಿನಿಮಾವೊಂದರ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾಗ ಈ ಘಟನೆ ನಡೆದಿದೆ. ಶೂಟಿಂಗ್ ವೇಳೆ ಬಿದ್ದು ಹಿರಿಯ ನಟ ಅಮಿತಾಬ್ ಬಚ್ಚನ್ ಪಕ್ಕೆಲುಬಿಗೆ ಗಾಯಗಳಾಗಿದೆ ಎನ್ನಲಾಗುತ್ತಿದೆ. ಸದ್ಯ ಬಿಗ್ ಬಿ ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಭಾರತೀಯ ರಿಸರ್ವ್ ಬ್ಯಾಂಕ್ ಪ್ರಸ್ತುತ ದೇಶದಲ್ಲಿ 2000 ರೂಪಾಯಿ ನೋಟುಗಳನ್ನು ಮುದ್ರಿಸುತ್ತಿಲ್ಲ. ಬ್ಯಾಂಕ್ ನೀಡಿರುವ ಆರ್‌ಟಿಐ ದಾಖಲೆಯಲ್ಲಿ, 2018-19ನೇ ಹಣಕಾಸು ವರ್ಷಕ್ಕೆ 2,000 ರೂಪಾಯಿ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ವಿವರಿಸಿದೆ. ನೋಟುಗಳ ಮುದ್ರಣಕ್ಕೆ ತಗಲುವ ವೆಚ್ಚ ತೀರಾ ಕಡಿಮೆ ಎಂಬುದನ್ನೂ ದಾಖಲೆಗಳು ತೋರಿಸುತ್ತವೆ. ದೇಶದಲ್ಲಿ ಇದುವರೆಗೆ 37 ಲಕ್ಷ ರೂ.2000 ನೋಟುಗಳನ್ನು ಮುದ್ರಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಇದೇ ವೇಳೆ 100, 200, 500 ಮತ್ತು 2000 ರೂ.ಗಳ ನೋಟುಗಳನ್ನು ಮುದ್ರಿಸಲು ಬ್ಯಾಂಕ್‌ಗೆ ಬೇಕಾಗಿರುವ ಮೊತ್ತವು ತೀರಾ ಕಡಿಮೆ ಎಂದು ರಿಸರ್ವ್ ಬ್ಯಾಂಕ್‌ನಿಂದ ಬಂದಿರುವ ದಾಖಲೆಗಳು ಎಂದು ಸೂಚಿಸುತ್ತವೆ. 2021-22ರ ಅವಧಿಯಲ್ಲಿ 1000 ರೂಪಾಯಿ ನೋಟುಗಳ ಮುದ್ರಣಕ್ಕೆ ಕೇವಲ 1770 ರೂಪಾಯಿ ಖರ್ಚು ಮಾಡಬೇಕಿತ್ತು. ರಿಸರ್ವ್ ಬ್ಯಾಂಕ್ ನೀಡಿದ ಉತ್ತರದ ಪ್ರಕಾರ, 1,000-200 ರೂ.ಗಳ ನೋಟುಗಳನ್ನು ಮುದ್ರಿಸಲು 2,370 ರೂ., 1,000 ಮತ್ತು 500 ರೂ.ಗಳ ನೋಟುಗಳನ್ನು ಮುದ್ರಿಸಲು 2,290 ರೂ., ಮತ್ತು 2,000 ರೂ.…
ತ್ರಿಪುರಾದಲ್ಲಿ ಸರ್ಕಾರ ರಚನೆ ಕುರಿತು ಇಂದು ಗುವಾಹಟಿಯಲ್ಲಿ ಅಂತಿಮ ಮಾತುಕತೆ ನಡೆಯಲಿದೆ. ಗೃಹ ಸಚಿವ ಅಮಿತ್ ಶಾ ಇಂದು ಗುವಾಹಟಿಗೆ ತೆರಳಿ ಮಾತುಕತೆ ನಡೆಸಲಿದ್ದಾರೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಚರ್ಚೆಯಲ್ಲಿ ಮಾಣಿಕ್ ಸಹಾ ಮುಖ್ಯಮಂತ್ರಿಯಾಗಿ ಮುಂದುವರಿಯಲು ಒಪ್ಪಿಗೆ ಸೂಚಿಸಲಾಗಿದೆ. ಆದರೆ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಸ್ಥಳ ಸೇರಿದಂತೆ ವಿಷಯಗಳ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ. ಬಿಪ್ಲಬ್ ಕುಮಾರ್ ದೇಬ್ ಸೇರಿದಂತೆ ಕೆಲವು ನಾಯಕರು ಪ್ರತಿಮಾ ಭೌಮಿಕ್ ಅವರನ್ನು ಬೆಂಬಲಿಸುತ್ತಿದ್ದಾರೆ. ರಾಜ್ಯ ಪಕ್ಷದಲ್ಲಿನ ಆಂತರಿಕ ಸಮಸ್ಯೆ ತಪ್ಪಿಸಲು ಒಮ್ಮತದ ನಡೆಗೆ ರಾಷ್ಟ್ರೀಯ ನಾಯಕತ್ವದ ಪ್ರಯತ್ನವಾಗಿದೆ. ಮತ ಎಣಿಕೆಯ ನಂತರ ರಾಜ್ಯದಲ್ಲಿ ವ್ಯಾಪಕ ಹಿಂಸಾಚಾರದ ಬಗ್ಗೆ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಪೊಲೀಸರಿಗೆ ಪತ್ರ ನೀಡಿದ್ದಾರೆ. ಸುಮಾರು 600 ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಸುಮಾರು 1000 ಜನರು ಗಾಯಗೊಂಡಿದ್ದಾರೆ ಎಂದು ಸಿಪಿಐಎಂ ಆರೋಪಿಸಿದೆ. ಪತ್ರದ ಜೊತೆಗೆ ಉಲ್ಲಂಘನೆಗಳ ಸಂಪೂರ್ಣ ಪಟ್ಟಿಯನ್ನು ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…
ದೇಶವನ್ನೇ ಬೆಚ್ಚಿ ಬೀಳಿಸಿದ ರೈಲು ದುರಂತಕ್ಕೆ ಗ್ರೀಕ್ ಪ್ರಧಾನಿ ಮಿತ್ಸೋಟಾಕಿಸ್ ಜನರಲ್ಲಿ ಕ್ಷಮೆಯಾಚಿಸಿದರು. ಗ್ರೀಸ್‌ನಲ್ಲಿ ರೈಲು ಸಾರಿಗೆಯನ್ನು ಸುರಕ್ಷಿತಗೊಳಿಸುವಲ್ಲಿ ವಿಫಲವಾದ ಬಗ್ಗೆ ಸರ್ಕಾರದ ಮೇಲೆ ಹೆಚ್ಚುತ್ತಿರುವ ಕೋಪದ ಮಧ್ಯೆ ಪ್ರಧಾನ ಮಂತ್ರಿಯ ಸಾರ್ವಜನಿಕ ಕ್ಷಮೆಯಾಚನೆಯು ಬಂದಿದೆ. ಗ್ರೀಸ್‌ನಲ್ಲಿ ಸರಕು ಸಾಗಣೆ ರೈಲು ಮತ್ತು ಪ್ರಯಾಣಿಕ ರೈಲು ನಡುವೆ ಸಂಭವಿಸಿದ ಅಪಘಾತದಲ್ಲಿ 57 ಜನರು ಸಾವನ್ನಪ್ಪಿದ್ದಾರೆ. ಪ್ರಧಾನಿಯಾಗಿ ನಾನು ಎಲ್ಲರಿಗೂ ಋಣಿಯಾಗಿದ್ದೇನೆ. ಆತ್ಮೀಯರನ್ನು ಕಳೆದುಕೊಂಡವರಿಗೆ ಸಂತಾಪ. ಬೇರೆ ಬೇರೆ ಕಡೆಗೆ ಹೋಗುವ ಎರಡು ರೈಲುಗಳನ್ನು ಒಂದೇ ಮಾರ್ಗದಲ್ಲಿ ಓಡಿಸಲು ಬಿಡಲಿಲ್ಲ. ಯಾರೂ ಅದನ್ನು ಗಮನಿಸಲಿಲ್ಲ, ಪತನ ಸಂಭವಿಸಿದೆ” – ಮಿತ್ಸೋಟಾಕಿಸ್ ತಮ್ಮ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ತಿಳಿಸಿದ್ದಾರೆ. ಲಾರಿಸ್ಸಾ ನಗರದ ಬಳಿ ಮಂಗಳವಾರ ಪ್ರಯಾಣಿಕ ಮತ್ತು ಸರಕು ರೈಲಿನ ನಡುವೆ ಘರ್ಷಣೆಯು ಗ್ರೀಸ್‌ನಾದ್ಯಂತ ವ್ಯಾಪಕ ಪ್ರತಿಭಟನೆಯನ್ನು ಹುಟ್ಟುಹಾಕಿತು. ವಿದ್ಯಾರ್ಥಿಗಳು, ರೈಲ್ವೆ ಕಾರ್ಮಿಕರು ಮತ್ತು ಸಾರ್ವಜನಿಕ ವಲಯದ ಕಾರ್ಮಿಕರ ಕರೆಗಳ ನಂತರ ಸಾವಿರಾರು ಪ್ರತಿಭಟನಾಕಾರರು ಭಾನುವಾರ ಅಥೆನ್ಸ್‌ನ ಸಂಸತ್ತಿನ ಹೊರಗೆ ಜಮಾಯಿಸಿದರು.…
ತೋಷಾ ಖಾನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಲಾಮಾಬಾದ್ ಪೊಲೀಸರು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದಾರೆ. ಆದರೆ ವಾರಂಟ್‌ನೊಂದಿಗೆ ಇಮ್ರಾನ್‌ಖಾನ್ ನಿವಾಸ ತಲುಪಿದ ಪೊಲೀಸರಿಗೆ ಭಾರೀ ಪ್ರತಿಭಟನೆಯಿಂದಾಗಿ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದೆ. ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಬಂಧಿಸುವಂತೆ ಆದೇಶಿಸಿದೆ. ಬಂಧನಕ್ಕೆ ಮಾರ್ಚ್ 7 ಕೊನೆಯ ದಿನಾಂಕವಾಗಿದೆ.ಕಳೆದ ಮೂರು ದಿನಗಳಿಂದ ಇಮ್ರಾನ್ ಖಾನ್ ಅವರನ್ನು ಬಂಧಿಸಲು ಪಾಕಿಸ್ತಾನ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಇಂದು ಸಮಮ್ ಪಾರ್ಕ್‌ನಲ್ಲಿರುವ ಅವರ ನಿವಾಸವನ್ನು ಪೊಲೀಸರು ಪ್ರವೇಶಿಸಲು ಸಾಧ್ಯವಾಯಿತು. ಹೀಗಾಗಿ ಬಂಧನ ಪ್ರಕ್ರಿಯೆ ಇಂದೇ ಪೂರ್ಣಗೊಳ್ಳಲಿದೆ ಎಂದು ನಂಬಲಾಗಿತ್ತು. ಆದರೆ ನೂರಾರು ಜನರು ನಿವಾಸದ ಹೊರಗೆ ಜಮಾಯಿಸಿ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಪೊಲೀಸರು ನಿವಾಸದಿಂದ ಹೊರಗೆ ಬರಲು ಸಾಧ್ಯವಾಗಲಿಲ್ಲ. ಬಂಧನ ಪ್ರಕ್ರಿಯೆಗೆ ಇಮ್ರಾನ್ ಖಾನ್ ಅಸಹಕಾರ ಅಧಿಕಾರಿಗಳು ಕತ್ತರಿ ಹಾಕುತ್ತಿದ್ದಾರೆ. ಅವರ ಪಕ್ಷವೂ ಇಮ್ರಾನ್ ಪರ…
ನಿಕೋಬಾರ್ ದ್ವೀಪಗಳ ಬಳಿ ಬೆಳಗ್ಗೆ 5 ಗಂಟೆಗೆ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪನದ ಅನುಭವವಾಗಿದೆ. ಈ ವರ್ಷ ಈ ಪ್ರದೇಶದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ. ಅದಕ್ಕೂ ಮುನ್ನ ಜನವರಿಯಲ್ಲಿ ಅಂಡಮಾನ್ ಸಮುದ್ರದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿತ್ತು. 77 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಇದೇ ವೇಳೆ ಉತ್ತರಕಾಶಿಯಲ್ಲೂ ಭಾನುವಾರ ಬೆಳಗ್ಗೆ ಭೂಕಂಪದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 2.5 ತೀವ್ರತೆಯ ಭೂಕಂಪನದ ನಂತರ ಎರಡು ಭೂಕಂಪಗಳು ಸಂಭವಿಸಿದವು. ಮಧ್ಯರಾತ್ರಿ 12.45ಕ್ಕೆ ಮತ್ತೆರಡು ಕಂಪನಗಳು ಕಾಣಿಸಿಕೊಂಡವು. ಜಿಲ್ಲೆಯ ಭಟ್ವಾರಿ ಪ್ರದೇಶದ ಸಿರೋರ್ ಅರಣ್ಯದಲ್ಲಿ ಮೊದಲ ಕಂಪನದ ಕೇಂದ್ರಬಿಂದುವಾಗಿದೆ. ಆದರೆ ಸ್ವಲ್ಪ ಕಂಪನ ಮಾತ್ರ ಕಂಡುಬಂದಿದ್ದು, ಸ್ಥಳೀಯವಾಗಿ ದಾಖಲಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್…
ನಮ್ಮತುಮಕೂರು: ಬದುಕನ್ನು ಕಟ್ಟಿಕೊಡುವಂತಹ ಹಲವಾರು ಯೋಜನೆಗಳನ್ನು ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ್ದು, ತುಮಕೂರು ಜಿಲ್ಲೆಯ 24 ಲಕ್ಷ ಜನರಿಗೆ ಉಭಯ ಸರ್ಕಾರಗಳ ವಿವಿಧ ಯೋಜನೆಗಳ ಸವಲತ್ತುಗಳನ್ನು ಒದಗಿಸಲಾಗಿದೆ. ಯೋಜನೆಗಳನ್ನು ಘೋಷಿಸುವುದಲ್ಲದೆ ಪೂರ್ಣ ಪ್ರಮಾಣದಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸುವಲ್ಲಿ ನಮ್ಮ ಸರ್ಕಾರ ಮುಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ತುಮಕೂರು ಮಹಾನಗರ ಪಾಲಿಕೆ ಹಾಗೂ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋಗದಲ್ಲಿ ಇಂದು ನಗರದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ಮಾರ್ಟ್ ಸಿಟಿ ಲಿಮಿಟೆಡ್ನ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡುತ್ತಾ ಕನ್ನಡನಾಡಿನಲ್ಲಿ ಬಡತನವನ್ನು ಸಂಪೂರ್ಣವಾಗಿ ಅಳಿಸಿ ಸಮೃದ್ಧಿ ಕರ್ನಾಟಕ ಸ್ಥಾಪಿಸುವ ಸಂಕಲ್ಪ ಕೈಗೊಳ್ಳುತ್ತಿರುವುದಾಗಿ ಘೋಷಿಸಿದರು. ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಗರೀಬ್ ಕಲ್ಯಾಣ್, ಆತ್ಮ ನಿರ್ಭರ್ ಭಾರತ್, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಯೋಜನೆಗಳ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಡಿಬಿಟಿ ತಂತ್ರಜ್ಞಾನದ ಮೂಲಕ…
ಒಂದು ಕೋಟಿ ಜನರನ್ನು ಸಂಪರ್ಕಿಸಿ ಬಿಜೆಪಿ ಪ್ರನಾಳಿಕೆ ಸಿದ್ಧಪಡಿಸಲಾಗುತ್ತದೆ ಎಂದು ಬಿಜೆಪಿ ಪ್ರಣಾಳಿಕೆ ಸಮಿತಿ ಸಂಚಾಲಕ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆಯನ್ನು ರಚಿಸುವ ಮುನ್ನ ಸಮಿತಿಯು ಸುಮಾರು ಒಂದು ಕೋಟಿ ಜನರನ್ನು ಸಂಪರ್ಕಿಸಿ ಸಲಹೆಗಳನ್ನು ಪಡೆಯಲಾಗುತ್ತದೆ ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುಧಾರಣೆಗಳನ್ನು ತರುವ ಮೂಲಕ, ನಿಯಮಗಳನ್ನು ಬದಲಾಯಿಸುವ ಮೂಲಕ, ರೆಡ್-ಟ್ಯಾಪಿಸಂ ಅನ್ನು ಕಡಿತಗೊಳಿಸುವ ಮೂಲಕ ಮತ್ತು ವಿಶೇಷ ಉಪಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಜನರ ಜೀವನವನ್ನು ಸುಧಾರಿಸಲು ಬಯಸುತ್ತಿದ್ದೇವೆ ಎಂದು ಹೇಳಿದರು. ಜನರ ಎಲ್ಲಾ ಸಲಹೆಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಅವುಗಳನ್ನು ಜಾರಿಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA