Author: admin

ಎಡಪಕ್ಷಗಳ ಆಡಳಿತವಿರುವ ಕೇರಳದಲ್ಲೂ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ. ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ನಾವು ಸರ್ಕಾರ ರಚಿಸುವ ರೀತಿಯಲ್ಲಿ ಬಿಜೆಪಿ ಮೈತ್ರಿಕೂಟವು ಮುಂದಿನ ದಿನಗಳಲ್ಲಿ ಕೇರಳದಲ್ಲಿ ಸರ್ಕಾರ ರಚಿಸುತ್ತದೆ ಎಂಬ ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. ತ್ರಿಪುರಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಡ-ಕಾಂಗ್ರೆಸ್ ಮೈತ್ರಿಯನ್ನು ವ್ಯಂಗ್ಯವಾಡಿದ ಪ್ರಧಾನಿ, ಈ ಪಕ್ಷಗಳು ಕೇರಳವನ್ನು ಲೂಟಿ ಮಾಡುತ್ತಿವೆ ಎಂದು ಹೇಳಿದ ಮೋದಿ ಕಾಂಗ್ರೆಸ್ ವಿರುದ್ಧವೂ ಕಿಡಿಕಾರಿದರು. ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ಚುನಾವಣೆಗಳಲ್ಲಿ ಬಿಜೆಪಿ ಪರವಾಗಿರುವ ವಿಧಾನಸಭಾ ಫಲಿತಾಂಶದಿಂದ ಉತ್ತೇಜಿತರಾಗಿರುವ ಪ್ರಧಾನಿ ನರೇಂದ್ರ ಮೋದಿ ಕೇರಳದಲ್ಲೂ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎಂದು ತಿಳಿಸಿದರು. ಜತೆಗೆ ಚುನಾವಣಾ ಫಲಿತಾಂಶದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯು ಜನರಿಗೆ ಮಾಡಿದ ಅವಮಾನ ಎಂದು ಆರೋಪಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನಿಯಂತ್ರಣ ಹೇರಲು ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ, ಕಾಂಗ್ರೆಸ್‌ನ್ನು ಗೆಲ್ಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿ ದಕ್ಷಿಣ ಕ್ಷೇತ್ರದ ವಡಗಾವಿಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಬೇಸತ್ತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುತ್ತಲೇ ಇದ್ದಾರೆ. ಅಡುಗೆ ಅನಿಲ ಬೆಲೆ ಏರಿಕೆಯಾಗುತ್ತಲೇ ಇದೆ. ನಮ್ಮ ಸರ್ಕಾರದ ಅವಧಿಯಲ್ಲಿ ಸಿಲಿಂಡರ್‌ಗೆ ₹ ೪೦೦ ಇತ್ತು. ಈಗ ₹ ೧೧೦೦ ಆಗಿದೆ. ಎಲ್ಲ ವಸ್ತುಗಳ ಬೆಲೆ ಶೇ. ೧೮ ರಷ್ಟು ತೆರಿಗೆ ಕೊಡಬೇಕು. ಅದು ನಮಗೆ ಗೊತ್ತಿಲ್ಲದೇ ಮೋದಿ ಅಕೌಂಟ್‌ಗೆ ಹೋಗುತ್ತಿದೆ. ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೇಕಾರರು ಇದ್ದಾರೆ. ಬೆಲೆ ಏರಿಕೆಯಿಂದಾಗಿ ನೇಕಾರರು ಕೂಡ ಸಂಕಷ್ಟದಲ್ಲಿದ್ದಾರೆ. ನಮ್ಮ ತೆರಿಗೆ ಹಣ ನಮಗೆ ಸಿಗುವಂತೆ ಮಾಡಬೇಕಿದೆ ಎಂದರು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ, ಪಕ್ಷ…

Read More

ಬೆಳಗಾವಿ: ವಿಧಾನ ಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಮತ್ತು ಚುನಾವಣೆಯಲ್ಲಿ ಬಳಸಲಾಗುವ ಮತಯಂತ್ರಗಳ ಮೂಲಕ ಮತದಾನ ವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದ್ದು, ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ವಿದ್ಯುನ್ಮಾನ ಮತ ಯಂತ್ರಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ ಮತ್ತು ಅವುಗಳ ಮೂಲಕ ಸಾರ್ವಜನಿಕರು ಹೇಗೆ ಮತ ಚಲಾವಣೆ ಮಾಡಬೇಕು ಎಂಬುದರ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ, ಬಸ್ ನಿಲ್ದಾಣದಲ್ಲಿ, ರೈಲ್ವೆ ನಿಲ್ದಾಣ, ಮಾರುಕಟ್ಟೆ ಹಾಗೂ ಕಡಿಮೆ ಮತದಾನ ಆಗಿರುವ ಕ್ಷೇತ್ರ, ಮತಗಟ್ಟೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಅಣುಕು ಮತದಾನದ ಬಳಿಕ ಮತ ಎಣಿಕೆ ಮಾಡಿ ಪ್ರಾತ್ಯಕ್ಷಿಕೆಯನ್ನು ತೋರಿಸಲಾಗುವುದು. ಮತದಾರರು ತಮ್ಮ ‌ಮತಗಟ್ಟೆ ಮಾಹಿತಿಯನ್ನು ಕೂಡ ತಿಳಿಸಲಾಗುವುದು ಎಂದು…

Read More

ತುಮಕೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಹಾಗೂ ವಿವಿಧ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ, ಸಂಸದರಾದ ಜಿ.ಎಸ್. ಬಸವರಾಜ್, ಸಚಿವರುಗಳಾದ ಬಿ.ಸಿ ನಾಗೇಶ್, ಎಸ್.ಟಿ ಸೋಮಶೇಖರ್, ಸಿ.ಸಿ.ಪಾಟೀಲ್, ಸ್ಥಳೀಯ ಶಾಸಕರಾದ ಜ್ಯೋತಿ ಗಣೇಶ್, ಜನಪ್ರಿಯ ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ. ಗೌಡ, ಮಸಾಲೆ ಜಯರಾಮ್, ರಾಜೇಶ್ ಗೌಡ, ಚಿತ್ರದುರ್ಗ ವಿಧಾನ ಪರಿಷತ್ ಶಾಸಕರಾದ ಕೆ.ಎಸ್ ನವೀನ್, ತುಳಸಿ ಮುನಿರಾಜು ಗೌಡ, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಮುಂತಾದ ಮುಖಂಡರುಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಫಲಾನುಭವಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ:…

Read More

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ  ಕಾರ್ಮಿಕ ಇಲಾಖೆ ನಿರೀಕ್ಷಕ ಕಚೇರಿಗೆ  ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ನಿರೀಕ್ಷಕ ಚಂದ್ರು  ಕಚೇರಿಯಿಂದ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ಧಾರೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ಕಬ್ಬಿಣದ ಅಂಗಡಿ ವ್ಯಾಪಾರಿ ಲಕ್ಷ್ಮಣ್ ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಹಾಕಿದ ವೇಳೆ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇವರ ಜತೆಗೆ ಮತ್ತೊಬ್ಬ ವ್ಯಾಪಾರಿಯೂ ಅಧಿಕಾರಿಯ ಲಂಚದಾಹದಿಂದ ಬೇಸತ್ತು ಲೋಕಾಯುಕ್ತರಿಗೆ ದೂರು ನೀಡಿದ್ದರು ಎನ್ನಲಾಗಿದೆ. ದೂರು ಪಡೆದ ಲೋಕಾಯುಕ್ತರು ಕಾರ್ಯಾಚರಣೆ ನಡೆಸಿದ್ಧಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ನೀವು ಎಲ್ಲಿ ನೋಡುತ್ತೀರಿ ಎಂಬುದರ ಆಧಾರದ ಮೇಲೆ ಸಮಯ ಬದಲಾಗುತ್ತದೆ. ನಾವು ಒಮ್ಮೆ ಹೋದರೆ ಮತ್ತೆ ಬರುವುದಿಲ್ಲ ಎಂದು ಸಮಯದ ಬಗ್ಗೆ ಹೇಳಲಾಗುತ್ತದೆ, ಆದರೆ ತಾಂತ್ರಿಕವಾಗಿ, ನಾವು ಇರುವ ಹಂತವನ್ನು ಅವಲಂಬಿಸಿ ಸಮಯ ಬದಲಾಗುತ್ತದೆ. ನಮ್ಮಲ್ಲಿ ಹಲವರು ಸಮಯವನ್ನು ಕಳೆದುಕೊಳ್ಳುವ ಮತ್ತು ಅದನ್ನು ಮರಳಿ ಪಡೆಯುವ ಅನುಭವವನ್ನು ಹೊಂದಿದ್ದೇವೆ. ಸಮಯವು ಅಂತಹ ಅದ್ಭುತಗಳನ್ನು ತೋರಿಸಲು ಸಮರ್ಥವಾಗಿರುವಾಗ ಚಂದ್ರನಲ್ಲಿ ಸಮಯ ಎಷ್ಟು ಎಂದು ವೈಜ್ಞಾನಿಕ ಜಗತ್ತು ಯೋಚಿಸುತ್ತಿದೆ. ಅನೇಕ ಚಂದ್ರನ ಕಾರ್ಯಾಚರಣೆಗಳಿದ್ದರೂ, ಚಂದ್ರನ ಮೇಲೆ ಸಮಯ ಮತ್ತು ಕಾರ್ಯಾಚರಣೆಯ ಅವಧಿಯನ್ನು ಮಿಷನ್ ಅನ್ನು ಮುನ್ನಡೆಸುವ ದೇಶದ ಸಮಯವನ್ನು ಆಧರಿಸಿ ಲೆಕ್ಕಹಾಕಲಾಗುತ್ತದೆ. ಕನಿಷ್ಠ ಚಂದ್ರನ ಕಾರ್ಯಾಚರಣೆಗಳನ್ನು ಹೆಚ್ಚಿಸುವ ಈ ಹಂತದಲ್ಲಿ, ಯುರೋಪಿಯನ್ ಬಾಹ್ಯಾಕಾಶ ಏಜೆನ್ಸಿಯ ಉಪಕ್ರಮದಲ್ಲಿ ಚಂದ್ರನ ಮೇಲೆ ಸಮಯವನ್ನು ಇಡಲು ಸಾಮಾನ್ಯ ಉಲ್ಲೇಖ ಬಿಂದು ಮತ್ತು ಸಮಯ ವಲಯವನ್ನು ರಚಿಸುವುದನ್ನು ಚರ್ಚಿಸಲಾಗುತ್ತಿದೆ. ಕಳೆದ ವರ್ಷ ನೆದರ್‌ಲ್ಯಾಂಡ್ಸ್‌ನಲ್ಲಿ ನಡೆದ ಸಭೆಯೊಂದರಲ್ಲಿ ಇಂತಹ ಕಲ್ಪನೆಯನ್ನು ಮೊದಲು ತರಲಾಯಿತು. ಚಂದ್ರನ ಮೇಲೆ ಸಮಯವನ್ನು ತಿಳಿಯಲು ಒಂದು ಉಲ್ಲೇಖ…

Read More

ಮೈಸೂರಿನ ಸೈಲೆಂಟ್ ಶೋರ್ಸ್ ಆ್ಯಂಪಿ ಥಿಯೇಟರ್ ನಲ್ಲಿ ಯು ಡಿಜಿಟಲ್ ನೆಟ್ ವರ್ಕ್’ನ 3ನೇ ವಾರ್ಷಿಕೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್, ಸುದ್ದಿ ವಾಹಿನಿಗಳಿಗೆ ಮೂರು ‘ವಿಟಮಿನ್’ಗಳೆಂದರೆ ಟಿವಿ ವೀಕ್ಷಕರು, ಟಿವಿಯನ್ನು ಮನೆಗೆ ಕೊಂಡೊಯ್ಯುವ ಕೇಬಲ್ ಆಪರೇಟರ್ ಗಳು, ಸುದ್ದಿ ವಾಹಿನಿಗಳಿಗೆ ಸಾಕಷ್ಟು ‘ಆಹಾರ’ ನೀಡುವ ರಾಜಕಾರಣಿಗಳು ಎಂದು ತಮಾಷೆ ಮಾಡಿದರು. ಸಾಕಷ್ಟು ಪೈಪೋಟಿ ನಡುವೆ ಯು ಡಿಜಿಟಲ್ ಪ್ರಗತಿಯ ಹಾದಿಯಲ್ಲಿ ಸಾಗುತ್ತಿರುವುದು ಶ್ಲಾಘನೀಯ. ಇದಕ್ಕೆ ಯು ಡಿಜಿಟಲ್ ತಂಡದ ಶ್ರಮ ಹಾಗೂ ಯು ಡಿಜಿಟಲ್ ನ ಮಂಜುನಾಥ್ ಅವರ ಶ್ರಮ ಹೆಚ್ಚಿದೆ. ಇದೇ ರೀತಿ ಯು ಡಿಜಿಟಲ್ ತಂಡ ಅಭಿವೃದ್ಧಿಯ ಪಥದಲ್ಲಿ ಸಾಗಲಿ ಎಂದು ಹಾರೈಸಿದರು. ಕನ್ನಡಿಗರು ಹೊರ ರಾಜ್ಯಗಳಿಗೆ ಹೋಗಿ ವಹಿವಾಟು ಮಾಡುವವರು ಕಡಿಮೆ. ನಮ್ಮ ರಾಜ್ಯದವರು ಹೊರಗಡೆ ಹೋಗಿ ವಹಿವಾಟು ನಡೆಸಲು ಸಾಕಷ್ಟು ಶಕ್ತಿ ಬೇಕು. ಆದರೆ ಯು ಡಿಜಿಟಲ್ ಪಕ್ಕದ ಆಂಧ್ರ ಪ್ರದೇಶಕ್ಕೂ ತಮ್ಮ ಸೇವೆಯನ್ನು ವಿಸ್ತರಿಸುವುದು…

Read More

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಲು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಗುತ್ತಿಗೆ ನೌಕರರಿಗೆ ಸಂಭಾವನೆಯನ್ನು ದಿನಾಂಕ 01-04-2023ರಿಂದ ಜಾರಿಗೆ ಬರುವಂತೆ ಶೇ.15ರಷ್ಟು ಹೆಚ್ಚಿಸಲಾಗಿದೆ. ಈ ಆದೇಶವು  ಗುತ್ತಿಗೆ ನೌಕರರಿಗೆ ಮಾತ್ರವೇ ಅನ್ವಯವಾಗಲಿದೆ.ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವಿಟ್ ಮಾಡಿ ಮಾಹಿತಿ ನೀಡಿದ್ದಾರೆ. ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಐಆರ್’ಸಿಟಿಸಿ ಪೋರ್ಟಲ್’ನಲ್ಲಿ ದೋಷ ಟಿಕೆಟ್ ಬುಕ್ಕಿಂಗ್’ಗೆ ಗ್ರಾಹಕರ ಪರದಾಟ ಇದರ ಪರಿಣಾಮವಾಗಿ ಸಾರ್ವಜನಿಕರು ಸಮಸ್ಯೆ ಅನುಭವಿಸಬೇಕಾಗಿದೆ. ಆನ್ ಲೈನ್ ಮೂಲಕ ಟಿಕೆಟ್‌ಗಳನ್ನು ಬುಕ್ ಮಾಡುವವರು ಬುಕ್ಕಿಂಗ್ ವೇಳೆ ಆಗುತ್ತಿರುವ ಸಮಸ್ಯೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳುತ್ತಿದ್ದಾರೆ. ತತ್ಕಾಲಿಕ  ಸೇವೆಯ ಮೂಲಕ ತಮ್ಮ ರೈಲು ಟಿಕೆಟ್‌ಗಳನ್ನು ಕಾಯ್ದಿರಿಸಲು ಪ್ರಯತ್ನಿಸುವಾಗ ಹೆಚ್ಚಿನವರು ಐಆರ್ ಸಿಟಿಸಿ ಪೋರ್ಟಲ್‌ನಲ್ಲಿ ದೋಷವನ್ನು ಎದುರಿಸಿದ್ದಾರೆ. ಹಲವರು ಅನಿರೀಕ್ಷಿತ ದೋಷವನ್ನು ಗಮನಕ್ಕೆ ತರುವ ಮೂಲಕ ಸಾಮಾಜಿಕ ಜಾಲತಾಣಗಳ ಮೂಲಕ ಸಮಸ್ಯೆಯನ್ನು ಹಂಚಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು : ಮಾರ್ಚ್‌ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಶುರುವಾಗಲಿದ್ದು, ಈ ನಿಟ್ಟಿನಲ್ಲಿ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ನೀಡಿದ್ದ ಮನವಿಗೆ ಕೆಎಸ್‌ಆರ್‌ಟಿಸಿ ಒಪ್ಪಿ ಸುತ್ತೋಲೆ ಹೊರಡಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಸೇವೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿತ್ತು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಅಷ್ಟೇ ಅಲ್ಲದೆ ಪರೀಕ್ಷಾ ದಿನ ಸಂಚರಿಸುವಾಗಿ ಬಸ್ ನಿರ್ವಾಹಕರಿಗೆ ಪರೀಕ್ಷೆಯ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಇನ್ನೂ ಈ ಕುರಿತಂತೆ ಚಾಲಕ ಮತ್ತು ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡುವಂತೆ ನಿಗಮ ಸಲಹೆ ಸೂಚನೆಯನ್ನು…

Read More