Author: admin

ಜ್ವರದಿಂದ ಬಳಲುತ್ತಿರುವ ಸೋನಿಯಾಗಾಂಧಿ ಅವರು ತಜ್ಞವೈದ್ಯರ ಮಾರ್ಗದರ್ಶನದಲ್ಲಿ ಸೋನಿಯಾಗಾಂಧಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ‌. ಎಂದು ಗಂಗಾರಾಮ್ ಆಸ್ಪತ್ರೆಯ ಮೂಲಗಳು ತಿಳಿಸಿವೆ. ವಯೋಸಹಜ ಸಮಸ್ಯೆಯಿಂದ ಹಾಗು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಗಂಗಾರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಡಿಎಸ್ ರಾಣಾ ತಿಳಿಸಿದ್ದಾರೆ. ನಿನ್ನೆ ಸೋನಿಯಾ ಗಾಂಧಿ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಳಗಾವಿ: ಕಾಂಗ್ರೆಸ್ ಪಕ್ಷದ ನಾಯಕರು ವಿರೂಪಾಕ್ಷಪ್ಪ ಮಾತ್ರವಲ್ಲ ಸಿದ್ದರಾಮಯ್ಯನವರು ಸಹ ನನ್ನ ಆಪ್ತರೇ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಿದರೆ ಇತ್ತ ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ಬೆಳಗಾವಿಗೆ ಆಗಮಿಸಿದ ಅವರು ಮಾಧ್ಯಮದವರು ಮಾಡಾಳ್ ವಿರೂಪಾಕ್ಷಪ್ಪನವರ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಸಮಾಧಾನ ಚಿತ್ತದಿಂದ, ಶಾಂತರಾಗಿ ಉತ್ತರ ನೀಡಿದರು.ವಿರೂಪಾಕ್ಷಪ್ಪ ಮತ್ತು ಅವರ ಮಗನ ಮೇಲೆ ಸರ್ಕಾರವಲ್ಲ, ಲೋಕಾಯುಕ್ತ ಕ್ರಮ ಜರುಗಿಸುತ್ತದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷದ ನಾಯಕರು ವಿರೂಪಾಕ್ಷಪ್ಪ ನಿಮ್ಮ ಆಪ್ತರೆಂದು ಅರೋಪಿಸುತ್ತಿದ್ದಾರೆ ಅಂತ ಹೇಳಿದ್ದಕ್ಕೆ ಅವರು ವಿರೂಪಾಕ್ಷಪ್ಪ ಮಾತ್ರವಲ್ಲ ಸಿದ್ದರಾಮಯ್ಯನವರು ಸಹ ನನ್ನ ಆಪ್ತರೇ ಎಂದು ನಗುತ್ತಾ ಉತ್ತರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : BSFನಲ್ಲಿ ಖಾಲಿಯಿರುವ 1284 ಕಾನ್ಸ್‌ಟೇಬಲ್ ಟ್ರೇಡ್ಸ್‌ಮ್ಯಾನ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು BSFನ ಅಧಿಕೃತ ವೆಬ್ ಸೈಟ್ (rectt.bsf.gov.in) ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 27 , 2023 ಹುದ್ದೆಗಳ ಸಂಖ್ಯೆ: ಒಟ್ಟು ಹುದ್ದೆಗಳ ಸಂಖ್ಯೆ- 1284 ಪುರುಷರಿಗಾಗಿ ಪೋಸ್ಟ್‌ಗಳ ಸಂಖ್ಯೆ – 1220 ಮಹಿಳೆಯರಿಗಾಗಿ ಹುದ್ದೆಗಳ ಸಂಖ್ಯೆ – 64 ಅರ್ಹತಾ ಮಾನದಂಡಗಳು: ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಸಂಬಂಧಿತ ವ್ಯಾಪಾರದಲ್ಲಿ ಪರಿಣತಿ ಹೊಂದಿರಬೇಕು. ನೇಮಕಾತಿ ಮಂಡಳಿಯು ನಡೆಸುವ ಸಂಬಂಧಿತ ವ್ಯಾಪಾರದಲ್ಲಿ ಟ್ರೇಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಾನ್‌ಸ್ಟೆಬಲ್ (ಅಡುಗೆ), ಕಾನ್ಸ್‌ಟೇಬಲ್ (ವಾಟರ್ ಕ್ಯಾರಿಯರ್) ಮತ್ತು ಕಾನ್ಸ್‌ಟೇಬಲ್ (ವೇಟರ್) ಟ್ರೇಡ್‌ಗಳಿಗೆ: ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಆಹಾರದಲ್ಲಿ ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟಿನ ಹಂತ-1…

Read More

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ದಿನಾಂಕ 09-03-2023, ಗುರುವಾರ – ಕನ್ನಡ, ಅರೇಬಿಕ್ ದಿನಾಂಕ 11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ ದಿನಾಂಕ 13-03-2023, ಸೋಮವಾರ – ಅರ್ಥಶಾಸ್ತ್ರ ದಿನಾಂಕ 14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ ದಿನಾಂಕ 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ದಿನಾಂಕ 16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ದಿನಾಂಕ 17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್ ದಿನಾಂಕ 18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ ದಿನಾಂಕ 20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ ದಿನಾಂಕ 21-03-2023, ಮಂಗಳವಾರ – ಹಿಂದಿ ದಿನಾಂಕ 23-03-2023, ಗುರುವಾರ – ಇಂಗ್ಲೀಷ್ ದಿನಾಂಕ 25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ದಿನಾಂಕ 27-03-2023, ಸೋಮವಾರ…

Read More

ಚಿತ್ರದುರ್ಗ:  ಅತ್ಯಂತ ಕೆಳಸ್ತರದಲ್ಲಿರುವವರಿಗೆ ದುಡಿಯುವ ವರ್ಗದವರಿಗೆ ಸರ್ಕಾರ ನೀಡಿರುವ ಕಾರ್ಯಕ್ರಮ ಸರಿಯಾಗಿ ಮುಟ್ಟಿದೆ ಹಾಗೂ ಸರ್ಕಾರದ ಕಾರ್ಯಕ್ರಮಗಳು ಮುಟ್ಟದಿರುವ  ಕೆಲವು ಕಡೆಗಳಲ್ಲಿ ಅವುಗಳನ್ನು ವಿಲೇವಾರಿ ಮಾಡಲು ಆದೇಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಮುರುಘಾ ಮಠದ ಆವರಣದ ಹೆಲಿಪ್ಯಾಡ್ ನಲ್ಲಿ   ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಚಿತ್ರದುರ್ಗ ಜಿಲ್ಲೆಯಲ್ಲಿ ಫಲಾನುಭವಿಗಳ ಸಭೆ ಹಾಗೂ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೆಳ ಸ್ತರದಲ್ಲಿ ಶಕ್ತಿ ಇಲ್ಲದವರಿಗೆ    ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಇದನ್ನು ನೆರವೇರಿಸುವರು ಎಂದರು. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ : ಬಗರ್ ಹುಕುಂ ಸಾಗುವಳಿ ಮಾಡುವವರಿಗೆ ಹಕ್ಕುಪತ್ರ ನೀಡುವ ಸಂಬಂಧ ಸಮಿತಿಯಲ್ಲಿ ಕೆಲಸಗಳಾಗುತ್ತಿದ್ದು,  ಫಾರಂ ನಂ 57 ಸಲುವಾಗಿ ಒಂದು ವರ್ಷ ವಿಸ್ತರಣೆ ಯೂ ಆಗಿದೆ. ಅದರಡಿ ವಿಲೇವಾರಿಗೆ ಆದೇಶ ನೀಡಿದ್ದು, ವಿಳಂಬವಾಗಿರುವಲ್ಲಿ ನೇರವಾಗಿ ಎ.ಸಿ ಅವರು ಸಭೆ ಮಾಡಿಸಿ ವಿತರಣೆ…

Read More

ಕೊರಟಗೆರೆ: ಕೊರಟಗೆರೆಯಲ್ಲಿ ರಾಜೀವ(ಕಾಂಗ್ರೆಸ್) ಭವನವನ್ನು ನೂತನವಾಗಿ ಜನತೆಯ ಸಹಕಾರದಿಂದ ನಿರ್ಮಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾ.5ರ ಭಾನುವಾರ 11 ಗಂಟೆಗೆ ಏರ್ಪಡಿಸಿದ್ದು, ನಮ್ಮ ಆತ್ಮೀಯರು, ನಮ್ಮ ರಾಜ್ಯದವರೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಈ ಭವನವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಡಿಸಿಎಂ ಮತ್ತು ಶಾಸಕರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ಪಟ್ಟಣದ ನೂತನ ಕಾಂಗ್ರೆಸ್ ಭವನ ಆವರಣದಲ್ಲಿ ಏರ್ಪಡಿಸಲಾದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜೀವ ಭವನ ಉದ್ಘಾಟನೆ ಹಾಗೂ ಜಿಲ್ಲಾ ಸಮಾವೇಶಕ್ಕೆ ನಮ್ಮ ನೆಚ್ಚಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರ ಆಗಮನದಿಂದ ಮೆರುಗು ತರುವುದರ ಜೊತೆಗೆ ಈ ಕಾರ್ಯಕ್ರಮ ಐತಿಹಾಸಿಕವಾಗಲಿದೆ ಎಂದು ತಿಳಿಸಿದರು. ನಮ್ಮ ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷವಾಗಿ ಒದಗಿ ಬಂದ ಭಾಗ್ಯ ಎಂದು ನನ್ನ ಭಾವನೆ ಜೊತೆಗೆ ಚುನಾವಣೆ ಕೂಡ ಸಮೀಪದಲ್ಲಿರುವ ದೃಷ್ಠಿಯಿಂದ ಜಿಲ್ಲಾ ಸಮಾವೇಶವಾಗಲಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಕಾರ್ಯದರ್ಶಿ ಸುರ್ಜಿವಾಲ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಮೇಲ್ಮನೆ ವಿರೋಧಪಕ್ಷದ ನಾಯಕ ಹರಿಪ್ರಸಾದ್, ಕೋಲಾರ ಸಂಸದ ಮುನಿಯಪ್ಪ, ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ…

Read More

ಹಾಸನ: ಕುಮಾರಣ್ಣ ನನ್ನ ಹಿತೈಷಿ, ಯಾವಾಗಲೂ ನನ್ನ ಒಳಿತನ್ನೇ ಬಯಸುವಂತಹವರು. ಅವರು ಏನು ಹೇಳಿದರೂ ಆಶೀರ್ವಾದ ಅನ್ಕೊತೀನಿ ಎಂದು ಬಿಜೆಪಿ ಶಾಸಕ ಪ್ರೀತಂ ಗೌಡ ಹೇಳಿದ್ದಾರೆ. ಅವನ್ಯಾವನೋ ಶಾಸಕ 50 ಸಾವಿರ ಲೀಡ್‌ನಿಂದ ಗೆಲ್ತೀನಿ ಅಂತ ಚಾಲೆಂಜ್ ಹಾಕ್ತಾನೆ ಎಂಬ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿಗೆ ನಯವಾಗಿಯೇ ತಿರುಗೇಟು ಕೊಟ್ಟ ಪ್ರೀತಂ ಗೌಡ, ಅವರು ವೈಯುಕ್ತಿಕವಾಗಿ ನನ್ನ ಬಗ್ಗೆ ಮಾತಾನಾಡಿದರೆ ಅವರು ಯಾವಾಗಲೂ ನನ್ನ ಹಿತೈಷಿಯೇ. ನನ್ನ ಬಗ್ಗೆ ವೈಯುಕ್ತಿಕವಾಗಿ ಮಾತನಾಡಿದರೆ ಅವರು ಪ್ರೀತಿಯಿಂದ ಮಾತನಾಡಿರುತ್ತಾರೆ ಎಂದರು. ಅವರ ಪ್ರೀತಿಯನ್ನು ನಾನು ಆಶೀರ್ವಾದ ಎಂದು ತೆಗೆದುಕೊಂಡಿರುತ್ತೇನೆ. ಅವರ ಆಶೀರ್ವಾದ ಯಾವಾಗಲೂ ನನ್ನ ಮೇಲೆ ಇರುತ್ತದೆ. ಅವರು ಏನು ಬಯಸುತ್ತಾರೆ ಅದನ್ನು ಮಾಡುವುದಕ್ಕೆ ಅವರ ಒಬ್ಬ ಸಹೋದರನಾಗಿ ನಾನು ಹಾಸನದಲ್ಲಿ ಅವರ ಪರವಾಗಿ ಯೋಚನೆ ಮಾಡುತ್ತೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸಿನಿಮಾ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಸಾಧು ಕೋಕಿಲ ಅವರಿಗೆ ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‍ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಶುಭವಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಭಾಶಯ ಕೋರಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ತುಮಕೂರು ವಿಧಾನಸಭಾ ಕ್ಷೇತ್ರ: ಕರ್ನಾಟಕ ರಾಷ್ಟ್ರ ಸಮಿತಿ(KRS) ಪಕ್ಷದ ವತಿಯಿಂದ ಏಳಿ! ಎದ್ದೇಳಿ! ವೀರಕನ್ನಡಿಗರೇ, ಭ್ರಷ್ಟರನ್ನು ತೊಲಗಿಸುವ ತನಕ ವಿರಮಿಸದಿರಿ ಅನ್ನೋ ಘೋಷಣೆಯೊಂದಿಗೆ ಕೆ ಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಕರುನಾಡು ಕಟ್ಟೋಣ — ಸಂಕಲ್ಪ ಯಾತ್ರೆ ಯಶಸ್ವಿಯಾಗಿ ನಡೆದಿದ್ದು, ಇದೀಗ ಯಾತ್ರೆಯ ಸಮಾರೋಪ ಸಮಾರಂಭ ನಡೆದಿದೆ. ಯಾತ್ರೆಯು ರಾಮನಗರ ಜಿಲ್ಲೆಯ ಮಾಗಡಿಯಿಂದ ಪ್ರಾರಂಭವಾಗಿ ತುಮಕೂರು, ಹಾಸನ, ಚಿಕ್ಕಮಗಳೂರು,ದಾವಣಗೆರೆ, ಹಾವೇರಿ ಮಾರ್ಗವಾಗಿ , ಧಾರವಾಡ, ಬೆಳಗಾವಿ ಮತ್ತು ಬಾಗಲಕೋಟೆ , ಕೊಪ್ಪಳ, ವಿಜಯನಗರ, ಬಳ್ಳಾರಿ, ಇಂದು ಚಿತ್ರದುರ್ಗ ತಲುಪಿ ಮುಂದೆ ಸಾಗಿ ಸಿರಾ ಮತ್ತು ತುಮಕೂರಿನಲ್ಲಿ ಸಮಾರೋಪಗೊಂಡಿದೆ. ಪ್ರಸ್ತುತ ಯಾತ್ರೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಮುಂಬರುವ ವಿಧಾನಸಭಾ ಚುನಾವಣೆಗೆ ಕೆ.ಆರ್.ಎಸ್. ಪಕ್ಷದ ಪ್ರಮುಖ ಪ್ರಣಾಳಿಕೆ ಅಂಶಗಳನ್ನು ಬಿಡುಗಡೆ ಮಾಡಲಾಗುವುದು ಮತ್ತು ಅದನ್ನು ಜನರಿಗೆ ತಲುಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಯಾತ್ರೆಯ ಸಮಾರೋಪದಲ್ಲಿ ಪಕ್ಷದ ಸಂಪೂರ್ಣ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು. ಈಗಾಗಲೇ ಕರ್ನಾಟಕ ರಾಷ್ಟ್ರ…

Read More

ಚೆನ್ನೈ – ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಆದರೆ, ಪ್ರತಿದಿನ ಸರಾಸರಿ 30ರಿಂದ 40 ಕಾಡ್ಗಿಚ್ಚುಗಳು ಉರಿಯುತ್ತಿದ್ದು,ಭಾರತೀಯ ಅರಣ್ಯ ಸಂಶೋಧನಾ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಜಿಲ್ಲಾ ಅರಣ್ಯಾಧಿಕಾರಿಗಳ ಮೂಲಕ ಅಗ್ನಿಶಾಮಕದವರು ನಂದಿಸುವ ಕಾರ್ಯ ಮಾಡುತ್ತ ಬರುತ್ತಿದ್ದಾರೆ. ತಮಿಳುನಾಡು ಮಾತ್ರವಲ್ಲದೆ ಕರ್ನಾಟಕ, ಆಂಧ್ರಪ್ರದೇಶ, ಇನ್ನಿತರ ಅರಣ್ಯಪ್ರದೇಶದಲ್ಲಿ ಬೇಸಿಗೆ ಕಾಲದಲ್ಲಿ ವಿವಿಧ ರೀತಿಯಲ್ಲಿ ಕಾಡುಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅನೇಕ ಪ್ರಾಣಿಸಂಕುಲ ನಾಶ ಹೊಂದುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More