Author: admin

ಹೆಚ್.ಡಿ.ಕೋಟೆ: ಪಟ್ಟಣದ ಸ್ಟೇಟ್ ಬ್ಯಾಂಕ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಮಂಜುನಾಥ ಲೋಡರ್ಸ್ ಅಸೋಸಿಯೇಷನ್ ಕಟ್ಟಡವನ್ನು ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಿದರು. ಬಳಿಕ  ಮಾತನಾಡಿದ ಅವರು, ಬಹುದಿನಗಳಿಂದ ಶ್ರಮಿಕರಿಗೆ ಒಂದು ಆಶ್ರಯ ನೀಡುವ ಕಟ್ಟಡ ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಿ ಎಲ್ಲಾರ ಸಹಕಾರದಿಂದ ಇಂದು ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಕಟ್ಟಡವನ್ನು ಉದ್ಘಾಟನೆ ಮಾಡಲಾಗಿದೆ, ಮುಂದಿನ ದಿನಗಳಲ್ಲಿ ಉತ್ತಮವಾದ ಕಟ್ಟಡವನ್ನು ನಮ್ಮ ಲೋಡರ್ಸ್ ಸಂಘದವರಿಗೆ ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಲಾಗಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಮತ್ತು ಆಶೀರ್ವಾದ ಅವಶ್ಯಕವಾಗಿದೆ ಎಂದು ಹೇಳಿದರು. ನಂತರ ಮಾತನಾಡಿದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ವೆಂಕಟಸ್ವಾಮಿ, ತಾತ್ಕಾಲಿಕವಾಗಿ ಕಟ್ಟಡ ನಿರ್ಮಾಣ ಮಾಡಿ ನಮ್ಮ ಲೋಡರ್ಸ್ ಸಂಘಕ್ಕೆ ನೀಡಲಾಗಿದೆ ಈ ಕಟ್ಟಡವನ್ನು ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಿ ಕೊಳ್ಳುವುದು ಉತ್ತಮ ಎಂದು ಕಿವಿ ಮಾತು ಹೇಳಿದರು. ನಂತರ ಮಾತನಾಡಿದ ಆದಿ ಕರ್ನಾಟಕ ಮಹಾ ಸಭಾ ಅದ್ಯಕ್ಷ ಹೆಚ್.ಸಿ.ನರಸಿಂಹಮೂರ್ತಿ, ಈ ದೇಶದಲ್ಲಿ ಬಹಳ ಶ್ರಮಿಕ ವರ್ಗದವರು ಎಂದರೆ ನಮ್ಮ ಲೋಡರ್ಸ್ ಗಳು ಅವರು ಎಲ್ಲರ ಸಹಕಾರದಿಂದ…

Read More

ಇರುವೆಗೆ ಸಿಂಪಡಿಸುವ ಇರುವೆ ನಾಶಕ ತಿಂದು 5 ವರ್ಷದ ಬಾಲಕ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪುಟ್ಟಿರಮ್ಮನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಸಾವನ್ನಪ್ಪಿದ ಬಾಲಕ. ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆ ಗೆ ಸಿಂಪಡಿಸುವ ಔಷಧಿಯನ್ನು ತಂದಿಟ್ಟಿದ್ದರು. ಮಗು ಆ ಆಟವಾಡುವ ಸಮಯದಲ್ಲಿ ಇರುವೆ ಪುಡಿಯನ್ನು ತಿಂದಿದೆ. ವಿಷ ತಿಂದು ನರಳಾಡುತ್ತಿದ್ದ ಮಗುವನ್ನು ಗಮನಿಸಿದ ಪೋಷಕರು ತಕ್ಷಣ ಕಾಮಗೆರೆ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ ಆರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಮಗು ಚಿಕಿತ್ಸೆಗೆ ಫಲಿಸದೆ ಗುರುವಾರ ರಾತ್ರಿ ಸಾವನ್ನಪ್ಪಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ನಿನ್ನೆ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧ ವಿಧಿಸಲಾಗಿದೆ. ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಡಾಳ್ ಸೇರಿ ಐವರನ್ನ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ನ್ಯಾಯಾಲಯಕ್ಕೆ ಬೆಳಿಗ್ಗೆ ಹಾಜರುಪಡಿಸಿದ್ದರು. ಇದೀಗ ಪ್ರಶಾಂತ್ ಮಡಾಳ್ ಸೇರಿ ಐವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶಿಸಿದೆ. ಲೋಕಾಯುಕ್ತ ಅಧಿಕಾರಿಗಳು ಪ್ರಶಾಂತ್ ಮನೆ ಮತ್ತು ಕಚೇರಿಯಿಂದ ಇದುವರೆಗೆ ರೂ. 7.62 ಕೋಟಿ ವಶಪಡಿಸಿಕೊಂಡಿದ್ದಾರೆ. ಪ್ರಶಾಂತ್, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಒಬ್ಬ ಅಧಿಕಾರಿಯಾಗಿದ್ದು ನಿಯೋಜನೆ ಮೇರೆಗೆ ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಂಡ್ಯ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮಗನ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಮಾಧುಸ್ವಾಮಿ, ಶಾಸಕರು ಯಾಕೆ ರಾಜೀನಾಮೆ ಕೊಡಬೇಕು.? ಅವರ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಅವರ ಮಗ ದುಡ್ಡು ತೆಗೆದುಕೊಂಡಿದ್ದಾನೆ ಮುಂದಿನ ಪರಿಣಾಮ ಎದುರಿಸುತ್ತಾನೆ ಎಂದರು. ಮಂಡ್ಯದ ಹುಲಿಕೆರೆಯಲ್ಲಿ ಮಾತನಾಡಿದ ಅವರು, ಪುತ್ರನ ಹಣ ಸಿಕ್ಕ ಪ್ರಕರಣ ಕುರಿತು ನಾವು ಅದರ ಬಗ್ಗೆ ಕಮೆಂಟ್ ಮಾಡೊಕೆ ಅಗಲ್ಲ. ವಿರೂಪಾಕ್ಷಪ್ಪನ ಮಗ ಎಸಿಬಿಯಲ್ಲಿ ಒಬ್ಬ ಆಫೀಸರ್. ಅವನು ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡ್ತಾರೆ ಎಂದು ಪ್ರಶ್ನಿಸಿದರು. ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು.? ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು.? ಇಂತಹ ಅಯೋಗ್ಯರು ಯಾರ್ ಯಾರು ಇದ್ದಾರೆ ಎಂದು ನಾವು ಹುಡುಕಿಕೊಂಡು ಕೂರೊಕೆ ಆಗುತ್ತಾ ಎಂದು ಕಿಡಿಕಾರಿದರು. 40% ದಂಧೆ ಮಾಡೊಕೆ ಅವರು ಯಾರು ಮಂತ್ರಿಯಲ್ಲ. ಆತ ಒಬ್ಬ ಸರ್ಕಾರಿ ಅಧಿಕಾರಿ, ಎಸಿಬಿಯಲ್ಲಿ ಇದ್ದವರು. ಶಾಸಕರಿಗೂ ಮುಖ್ಯಮಂತ್ರಿಗಳಿಗೂ…

Read More

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ವೇಳೆ ಕೋಟ್ಯಾಂತರ ರೂಪಾಯಿ ಪತ್ತೆಯಾಗಿರುವ ವಿಚಾರ‌ಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ಶಾಸಕ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಡಿ ಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ತಿಹಾರ್ ಜೈಲಿಗೆ ಹೋಗಿ ಬಂದಿರುವವರ ಪ್ರಶ್ನೆಗೆ ಉತ್ತರಿಸುವ ಅಗತ್ಯವಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಕೆ ಎಸ್ ಈಶ್ವರಪ್ಪ ಟಾಂಗ್ ನೀಡಿದರು. ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಡಿ ವಿ ಸದಾಂನಂದಗೌಡ, ಕೆ ಎಸ್ ಈಶ್ವರಪ್ಪ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ, ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆ. ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್ ಸಿ, ಎಸ್…

Read More

ಲೋಕಾಯುಕ್ತ ಬಲ ತುಂಬಿದ್ಧೇ ಭ್ರಷ್ಟಾಚಾರ ನಿಗ್ರಹಕ್ಕೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲಿ, ಲೋಕಾಯುಕ್ತ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಚೆನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ‘ಭ್ರಷ್ಟಾಚಾರ ತಡೆಯುವುದಕ್ಕಾಗಿ ಲೋಕಾಯುಕ್ತ ಸ್ಥಾಪನೆ ಮಾಡಿದ್ದೇವೆ. ಕಾಂಗ್ರೆಸ್ ಶಾಸಕರ ಮೇಲು ಹಲವು ಆರೋಪಗಳಿತ್ತು, ಅವೆಲ್ಲವೂ ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ಮುಚ್ಚಿ ಹಾಕಿದ್ದು, ಆ ಎಲ್ಲ ಕೇಸ್​ಗಳ ತನಿಖೆ ಆಗಲಿ ಎಂದು ಹೇಳಿದರು. ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರುವುದು ಭ್ರಷ್ಟಾಚಾರ ನಿಯಂತ್ರಿಸಲು. ಹಿಂದೆ ಲೋಕಾಯುಕ್ತ ಇಲ್ಲದೆ ಕಾಂಗ್ರೆಸ್ ಕಾಲದ ಕೇಸ್​ಗಳು ಮುಚ್ಚಿಹೋಗಿದ್ದವು. ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ. ನಾವು ಯಾರನ್ನೂ ರಕ್ಷಣೆ ಮಾಡಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ವನ್ಯಜೀವಿ ದಿನವು ಭೂಮಿಯ ಮೇಲಿನ ವನ್ಯಜೀವಿಗಳ ಪ್ರಾಮುಖ್ಯತೆ ಮತ್ತು ರಕ್ಷಣೆಯ ಬಗ್ಗೆ ಜನರಿಗೆ ನೆನಪಿಸುವ ದಿನವಾಗಿದೆ. ವಿಶ್ವ ವನ್ಯಜೀವಿ ದಿನವು ಮಾನವ ಅಭಿವೃದ್ಧಿಯೊಂದಿಗೆ, ವನ್ಯಜೀವಿಗಳು ಮತ್ತು ಅವುಗಳ ಆವಾಸಸ್ಥಾನಗಳನ್ನು ರಕ್ಷಿಸಬೇಕು ಎಂದು ನಮಗೆ ನೆನಪಿಸುವ ದಿನವಾಗಿದೆ. ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ರಕ್ಷಿಸುವುದು, ಮತ್ತು ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನು ಜನರಿಗೆ ತಿಳಿಸುವುದು ಮುಂತಾದ ಹಲವು ಉದ್ದೇಶಗಳು ಇವೆ. ವಿಶ್ವಸಂಸ್ಥೆಯು 2013 ರಲ್ಲಿ ವಿಶ್ವ ವನ್ಯಜೀವಿ ದಿನವನ್ನು ಪ್ರಾರಂಭಿಸಿತು. ವನ್ಯ ಪ್ರಾಣಿ ಮತ್ತು ಸಸ್ಯಗಳ ಅಳಿವಿನಂಚಿನಲ್ಲಿರುವ ಪ್ರಭೇದಗಳಲ್ಲಿ ಅಂತರಾಷ್ಟ್ರೀಯ ವ್ಯಾಪಾರದ ಸಮಾವೇಶವನ್ನು ಮಾರ್ಚ್ 3, 1973 ರಂದು ವಿಶ್ವಸಂಸ್ಥೆಯು ಅಂಗೀಕರಿಸಿತು. ಈ ವರ್ಷದ ವನ್ಯಜೀವಿ ದಿನವನ್ನು ಸೈಟ್‌ಗಳ ಸ್ಥಾಪನೆಯ 50 ನೇ ವಾರ್ಷಿಕೋತ್ಸವದಂದು ಆಚರಿಸಲಾಗುತ್ತದೆ ಎಂಬುದು ಉಲ್ಲೇಖನೀಯ. ಮಾನವ-ವನ್ಯಜೀವಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸುದ್ದಿಗಳು ಹೊರಬರುತ್ತಿರುವ ಹೊತ್ತಿನಲ್ಲಿ ಈ ಬಾರಿಯ ವನ್ಯಜೀವಿ ದಿನಾಚರಣೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಲಂಚ ಸ್ವೀಕರಿಸುತ್ತಿದ್ದ ಕರ್ನಾಟಕದ ಬಿಜೆಪಿ ಶಾಸಕನ ಪುತ್ರನ ಬಂಧನ. ಬೆಂಗಳೂರಿನಲ್ಲಿ ಲೋಕಾಯುಕ್ತ ಭ್ರಷ್ಟಾಚಾರ ನಿಗ್ರಹ ದಳದಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ನನ್ನು ಬಂಧಿಸಲಾಗಿದೆ. 40 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಪ್ರಶಾಂತ್ ಅವರನ್ನು ಬಂಧಿಸಿದ್ದಾರೆ. ಅವರ ಕಚೇರಿಯಿಂದ 1.7 ಕೋಟಿ ರೂಲೋಕಾಯುಕ್ತ ಭ್ರಷ್ಟಾಚಾರ ನಿಗ್ರಹ ದಳ ಶುಕ್ರವಾರ ಪ್ರಶಾಂತ್ ಮಂಡಲ್ ಅವರ ನಿವಾಸದ ಮೇಲೆ ದಾಳಿ ನಡೆಸಿ 6 ಕೋಟಿ ರೂಪಾಯಿ ವಶಪಡಿಸಿಕೊಂಡಿದೆ ಎಂದು ಎಎನ್‌ಐ ವರದಿ ಮಾಡಿದೆ. ತನಿಖೆ ಇನ್ನೂ ಮುಂದುವರಿದಿದೆ. ಗುರುವಾರ ಬೆಳಗ್ಗೆ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ವಿರೂಪಾಕ್ಷಪ್ಪ ಅವರ ಪುತ್ರನನ್ನು ಬಂಧಿಸಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ತನಿಖೆ ನಡೆಸಲಾಗಿತ್ತು. ಮದಲ್ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸೋಪ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ನ ಅಧ್ಯಕ್ಷರು. ಹೆಚ್ಚಿನ ತನಿಖೆ ನಡೆಯುತ್ತಿದೆ…

Read More

ನಿರ್ದೇಶಕ ರಾಜಮೌಳಿ ತಮ್ಮ ಚಿತ್ರಗಳು ರಾಮಾಯಣ ಮತ್ತು ಮಹಾಭಾರತದಿಂದ ಪ್ರೇರಿತವಾಗಿವೆ ಎಂದು ಹೇಳುತ್ತಾರೆ. ಆರ್‌ಆರ್‌ಆರ್ ಜಾಗತಿಕ ಮನ್ನಣೆ ಪಡೆದ ನಂತರ ದಿ ನ್ಯೂಯಾರ್ಕರ್‌ಗೆ ನೀಡಿದ ಸಂದರ್ಶನದಲ್ಲಿ ರಾಜಮೌಳಿ ಬಹಿರಂಗಪಡಿಸಿದ್ದಾರೆ. ರಾಮಾಯಣ ಮತ್ತು ಮಹಾಭಾರತಗಳು ಸಮುದ್ರದಂತೆ ಅಗಾಧವಾಗಿದ್ದು, ಪ್ರತಿ ಬಾರಿ ಓದಿದಾಗಲೂ ಹೊಸ ವಿಷಯಗಳು ಅರ್ಥವಾಗುತ್ತವೆ ಎಂದು ಅವರು ಹೇಳಿದರು. ಅವರು ಬಾಲ್ಯದಲ್ಲಿ ರಾಮಾಯಣ ಮತ್ತು ಮಹಾಭಾರತಗಳನ್ನು ಓದಲು ಪ್ರಾರಂಭಿಸಿದರು. ಆಗ ಅವುಗಳನ್ನು ಸಣ್ಣ ಕಥೆಗಳಾಗಿ ಓದಲಾಗುತ್ತಿತ್ತು. ಮೊದಲಿಗೆ ಅವು ನನಗೆ ಕೇವಲ ಕಥೆಗಳಾಗಿದ್ದವು. ಅವನು ಬೆಳೆದಂತೆ ಕಥೆಗಳೂ ಬೆಳೆಯತೊಡಗಿದವು. ಕಥೆ ಮತ್ತು ಪಾತ್ರದ ಸೂಕ್ಷ್ಮ ಹಂತಗಳನ್ನು ಗಮನಿಸಲು ಪ್ರಾರಂಭಿಸಿದೆ. ಕಥೆಗಳು, ಪಾತ್ರಗಳು, ಪಾತ್ರಗಳೊಳಗಿನ ಸಂಘರ್ಷಗಳು ಮತ್ತು ಅವರ ಭಾವನೆಗಳು, ರಾಮ ಮತ್ತು ಮಹಾಭಾರತ ನನಗೆ ಆಳವಾದ ಸಾಗರಗಳಿದ್ದಂತೆ. ನೀವು ಅದನ್ನು ಓದಿದಾಗಲೆಲ್ಲಾ ನೀವು ಹೊಸ ಆಲೋಚನೆಗಳನ್ನು ಕಾಣಬಹುದು. ರಾಜಮೌಳಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಭೀಕರ ಅಪಘಾತವೊಂದರಲ್ಲಿ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಫರಿದಾಬಾದ್-ಗುರುಗ್ರಾಮ್ ರಸ್ತೆಯಲ್ಲಿ ನಡೆದಿದ್ದು, ರಸ್ತೆಯಲ್ಲಿ ವೇಗವಾಗಿ ಬಂದ ಡಂಪರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮಂಗರ್ ಪೊಲೀಸ್ ಪೋಸ್ಟ್ ಬಳಿ ಗುರುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಮೃತರು ಮಾರುತಿ ಆಲ್ಟೊ ಕಾರಿನಲ್ಲಿ ಗುರುಗ್ರಾಮದಿಂದ ಫರಿದಾಬಾದ್ ಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೃತಪಟ್ಟವರೆಲ್ಲರೂ ಪಲ್ವಾಲ್ ನಿವಾಸಿಗಳಾಗಿದ್ದಾರೆ. ಎಲ್ಲರು ಕೂಡ ಅಪಘಾತ ನಡೆದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪುತಿನ್, ಜತಿನ್, ಆಕಾಶ್, ಸಂದೀಪ್, ಬಲ್ಜಿತ್ ಮತ್ತು ವಿಶಾಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪೊಲೀಸರು ಡಂಪರ್ ಅನ್ನು ವಶಪಡಿಸಿಕೊಂಡಿದ್ದಾರೆ ಆದರೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More