Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
Author: admin
ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ಆಚರಿಸಲಾಗುತ್ತದೆ. 1972 ರಲ್ಲಿ ವಿಶ್ವ ಸಂಸ್ಥೆ ಈ ದಿನವನ್ನು ಘೋಷಣೆ ಮಾಡಿದೆ. 1974 ಜೂನ್ 5 ರಂದು ಪ್ರಥಮ ಭಾರಿಗೆ ಈ ದಿನವನ್ನು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ದಿನವನ್ನು 140ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು. ಪ್ಲಾಸ್ಟಿಕ್ ಮಾಲಿನ್ಯವನ್ನು ನಿಷೇದಿಸಿ ಎನ್ನುವ 2023 ರ ಈ ದಿನದ ಘೋಷಣೆಯಾಗಿದೆ. ಈ ದಿನ ಕೆಲವು ಕಡೆ ಶಿಬಿರಗಳು, ಸೆಮಿನಾರ್ ಗಳು, ಹಾಗೂ ರ್‍ಯಾಲಿ ಗಳು ನಡೆಸುತ್ತಾರೆ. ಕೆಲವು ಕಡೆ ಸಂಘ ಸಂಸ್ಥೆಗಳು ಈ ದಿನ ಸಸಿಗಳನ್ನು ನೆಡುವುದರ ಮೂಲಕ ಪರಿಸರದ ಜಾಗೃತಿ ಮೂಡಿಸುತ್ತಾರೆ. ನಾವು ಪ್ಲಾಸ್ಟಿಕ್ ಬಳಕೆಯನ್ನು ದಿನೇ ದಿನೇ ಕಡಿತಗೊಳಿಸಬೇಕು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಆದ ಕಾರಣ ಆ ಮಕ್ಕಳಿಗೆ ಉತ್ತಮ ಪರಿಸರ ಬಿಟ್ಟುಕೊಟ್ಟು ಹೋಗೋಣ. ಇಂದಿನ ಪರಿಸರ ಸಮಸ್ಯೆಗಳು 1.ಮಾಲಿನ್ಯ 2. ಮಣ್ಣಿನ ಅವನತಿ 3. ಹವಾಮಾನ ಬದಲಾವಣೆ…
ತುಮಕೂರು: ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್. ಅವರ ಮಾಹಿತಿಯನ್ನು ಒಡಿಶಾ ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿ ತನದಿಂದ ಕೋಮುಬಣ್ಣ ನೀಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದು ಅತ್ಯಂತ ದುರಾದೃಷ್ಟಕರ ಎಂದು ಒಡಿಶಾ ಪೊಲೀಸರು ಟ್ವೀಟ್ ಮಾಡಿದ್ದಾರೆ. ಈ ಅಪಘಾತಕ್ಕೆ ಕಾರಣ ಏನು ಎನ್ನುವುದರ ಬಗ್ಗೆ ಜಿಆರ್ ಪಿ ಯಿಂದ ತನಿಖೆ ನಡೆಯುತ್ತಿದೆ. ಇಂತಹ ಸುಳ್ಳು ಮತ್ತು ದುರುದ್ದೇಶ ಪೂರಿತ ಪೋಸ್ಟ್ ಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ನಾವು ಮನವಿ ಮಾಡುತ್ತೇವೆ. ವದಂತಿಗಳನ್ನು ಹಬ್ಬಿಸಿ ಕೋಮುಸೌಹಾರ್ದತೆ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ಸ್ಪಷ್ಟಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುತ್ತಿದ್ದು, ಅದಕ್ಕಾಗಿ ನಮ್ಮ ಕಾರ್ಯಕರ್ತರಿಗಾಗಿ ಹೆಲ್ತ್ ಲೈನ್ ಆರಂಭಿಸುತ್ತಿದ್ದೇವೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂದು ಬಿಜೆಪಿ ಕಚೇರಿಯಲ್ಲಿ ಕಾನೂನು ಪ್ರಕೋಷ್ಠದ ಸಭೆ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರದ ಕಾನೂನಾತ್ಮಕ ದೌರ್ಜನ್ಯಗಳನ್ನು ಎದುರಿಸಲು ಹೆಲ್ಸ್ ಲೈನ್ ಸಂಖ್ಯೆಯನ್ನು ರಾಜ್ಯದಲ್ಲಿ ಘೋಷಣೆ ಮಾಡುತ್ತೇವೆ. ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ನಾಯಕರು ಮಾಡುತ್ತಾ ಇರುವ ಆರೋಪ, ನಮ್ಮಕಾರ್ಯಕರ್ತರ ಮೇಲೆ ಕೇಸ್ ಹಾಕಿಸ್ತಾ ಇರೋದು, ಸರ್ಕಾರದ ಬೇರೆ ಬೇರೆ ಮಂತ್ರಿಗಳು, ಮುಖಂಡರು ನಮ್ಮ ಕಾರ್ಯಕರ್ತರ ವಿರುದ್ಧ ಹೇಳಿಕೆ ಕೊಡುತ್ತಿರುವುದು, ಟಾರ್ಗೆಟ್ ಮಾಡುತ್ತಿರುವುದು ಎಲ್ಲವೂ ಗಮನಕ್ಕೆ ಬಂದಿದೆ. ಎಂದರು. ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಹೀಗೆ ಮಾಡಿದ್ರು. ನಮ್ಮ ಕಾರ್ಯಕರ್ತರ ಮೇಲೆ ಕೇಸ್ ಹಾಕಿಸೋದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕೋರ ಮೇಲೆ ಕೇಸ್ ಹಾಕೋದು.ಇಂದಿನ ನಮ್ಮಸಭೆಯಲ್ಲಿ ಈ ಎಲ್ಲಾ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ.…
288 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಒಡಿಶಾ ರೈಲು ದುರಂತಕ್ಕೆ ಕಾರಣವಾದ ಕಾರಣಗಳನ್ನು ಕಂಡುಹಿಡಿಯಲು ತನಿಖೆ ಪ್ರಾರಂಭವಾಗಿದೆ. ಸಿಗ್ನಲ್ ದೋಷವು ಅಪಘಾತಕ್ಕೆ ಕಾರಣವಾಗಿದೆಯೇ ಎಂಬ ಬಗ್ಗೆ ತನಿಖೆ ಈಗ ಕೇಂದ್ರೀಕೃತವಾಗಿದೆ. ಒಡಿಶಾದ ಬಾಲಸೋರ್ ನಲ್ಲಿ ಅಪಘಾತ ನಡೆದ ಸ್ಥಳದಲ್ಲಿ ಉನ್ನತ ಮಟ್ಟದ ರೈಲ್ವೇ ತನಿಖಾ ತಂಡ ಉಳಿದುಕೊಂಡಿದೆ. ಬಾಲಸೋರ್‌ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ಕೂಲಂಕುಷ ತನಿಖೆ ನಡೆಸಲಾಗುವುದು ಮತ್ತು ಅಪಘಾತಕ್ಕೆ ಕಾರಣರಾದವರನ್ನು ಬಿಡುವುದಿಲ್ಲ ಎಂದು ಹೇಳಿದ್ದರು. ಒಡಿಶಾ ರೈಲು ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ ಅಪಘಾತದಲ್ಲಿ ಸುಮಾರು ಸಾವಿರ ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ನಿನ್ನೆ ತಡರಾತ್ರಿ ಬಾಲಸೋರ್ ಮುರಿದು ಬಿದ್ದ ಬೋಗಿಗಳನ್ನು ಸ್ಥಳಾಂತರಿಸುವ ವೇಳೆ ಮತ್ತೆ ಮೃತದೇಹಗಳು ಪತ್ತೆಯಾದ ದಾರುಣ ದೃಶ್ಯಕ್ಕೆ ಸಾಕ್ಷಿಯಾಯಿತು. ಸ್ಥಳದಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಚರಣೆಗಳು ಯುದ್ಧದ ಆಧಾರದ ಮೇಲೆ ಪ್ರಗತಿಯಲ್ಲಿವೆ. ಅಪಘಾತದ ನಂತರ ಅಸ್ತವ್ಯಸ್ತಗೊಂಡಿದ್ದ ರೈಲು ಸಂಚಾರವನ್ನು ಪುನಃಸ್ಥಾಪಿಸಲು ಕ್ರಮ…
ಕಾಂಗ್ರೆಸ್ ಸರ್ಕಾರವು ಐದು ಖಾತರಿಗಳನ್ನು ಘೋಷಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿಕೆ ನೀಡಿದ್ದು, 2 ಕೋಟಿ ಉದ್ಯೋಗ ಸೃಷ್ಟಿ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸುವ ಸರದಿ ಈಗ ಕೇಂದ್ರ ಸರ್ಕಾರದ್ದಾಗಿದೆ ಎಂದಿದ್ದಾರೆ. ಶೀಘ್ರದಲ್ಲೇ ಕೇಂದ್ರ ಸರ್ಕಾರ ಅಗ್ನಿ ಪರೀಕ್ಷೆ (ಲೋಕಸಭಾ ಚುನಾವಣೆ) ಎದುರಿಸಲಿದೆ.ಪರೀಕ್ಷೆಯಲ್ಲಿ ಉತ್ತೀರ್ಣರಾಗಲು,ಅವರು ತಮ್ಮ ಭರವಸೆಗಳನ್ನು ಉಳಿಸಿಕೊಳ್ಳಬೇಕು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.ಖಾತ್ರಿ ಯೋಜನೆಗಳ ಬಗ್ಗೆ ವಿರೋಧ ಪಕ್ಷಗಳು, ವಿಶೇಷವಾಗಿ ಬಿಜೆಪಿ ಟೀಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಟೀಕೆಗಳ ಬದಲು ಪ್ರಧಾನಿ ವಿದೇಶದಲ್ಲಿರುವ ಕಪ್ಪುಹಣವನ್ನು ತರಬೇಕು ಮತ್ತು ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂ.ಹಾಕಬೇಕು. ಕೊಟ್ಟ ಮಾತಿನಂತೆ 2 ಕೋಟಿ ಉದ್ಯೋಗ ಸೃಷ್ಟಿಸಿ ಮತ್ತು ರೈತರ ಆದಾಯ ದ್ವಿಗುಣಗೊಳಿಸಲಿ ಎಂದು ಹೇಳಿದರು.ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಕುಮಾರಸ್ವಾಮಿ ದೊಡ್ಡ ವ್ಯಕ್ತಿ. ಅವರ ಬಗ್ಗೆ ಮಾತನಾಡಲು ಬಯಸುವುದಿಲ್ಲ. ನಾನು ನನ್ನ ಕರ್ತವ್ಯಗಳನ್ನು ನಿರ್ವಹಿಸುತ್ತೇನೆ ಮತ್ತು…
ಪತ್ನಿಯನ್ನು ಹತ್ಯೆಗೈದು, ಬಳಿಕ ಆಸ್ಪತ್ರೆಗೆ ಕರೆ ತಂದು ಆಕೆ ಮಾತನಾಡುತ್ತಿಲ್ಲ ಎಂದು ಕಥೆ ಕಟ್ಟಿದ್ದ ಪತಿಯನ್ನು ಯಶವಂತಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಶರತ್ ಎಂದು ಗುರುತಿಸಲಾಗಿದೆ. ಪ್ರಿಯಾ (19) ಕೊಲೆಯಾದ ಮಹಿಳೆ. ಕಳೆದ ಜೂನ್ 1ರಂದು ಯಶವಂತಪುರದ ಖಾಸಗಿ ಆಸ್ಪತ್ರೆಗೆ ಪತ್ನಿಯ ಶವದೊಂದಿಗೆ ಬಂದಿದ್ದ ಆರೋಪಿ ಶರತ್ ತನ್ನ ಪತ್ನಿ ಮಾತನಾಡುತ್ತಿಲ್ಲ ಎಂದು ಆಸ್ಪತ್ರೆಯಲ್ಲಿ ಗೋಳಾಡಿದ್ದ. ಈ ಬಗ್ಗೆ ವೈದ್ಯರು ಪರಿಶೀಲನೆ ನಡೆಸಿದಾಗ ಆಕೆ ಸಾವನ್ನಪ್ಪಿರುವುದು ಗೊತ್ತಾಗಿತ್ತು. ಪತ್ನಿ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ ಬಳಿಕವೂ ಆರೋಪಿ ಜೋರಾಗಿ ಅತ್ತು ಗೋಳಾಡಿದ್ದ. ಈ ಸಂಬಂಧ ಆಸ್ಪತ್ರೆ ಸಿಬ್ಬಂದಿ ಅನುಮಾನಾಸ್ಪದ ಸಾವು ಎಂದು ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಬಳಿಕ ಮೃತ ಪ್ರಿಯಾಳ ತಾಯಿ ನೀಡಿದ ದೂರಿನನ್ವಯ ಯಶವಂತಪುರ ಠಾಣಾ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆಗೆ ಮುಂದಾಗಿದ್ದರು. ಆರೋಪಿ ಶರತ್ ಗೆ ಪ್ರಿಯಾ ಎರಡನೇ ಹೆಂಡತಿ. ಮದುವೆಯಾಗಿ ಮೊದಲ ಹೆಂಡತಿ ಇದ್ದರೂ ಶರತ್ ಎರಡನೇ ಮದುವೆಯಾಗಿದ್ದ. ಅಲ್ಲದೆ ಆರೋಪಿ ಶರತ್…
ಆಂಟೋನಿ ಬೇಗೂರು ಆರ್ಥಿಕತೆ, ಕೃಷಿ, ಶಿಕ್ಷಣ ವಲಯದಲ್ಲಿ ಅನೇಕ ಸುಧಾರಣೆಗಳ ಮೂಲಕ ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿದ ದಕ್ಷ ಆಡಳಿತಗಾರ, ‘ರಾಜರ್ಷಿ’ ಬಿರುದಾಂಕಿತ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನದ ಸ್ಮರಣೆಗಳು. ಜಲ, ಜಲ ವಿದ್ಯುತ್, ಶಿಕ್ಷಣ, ಆರೋಗ್ಯ, ಉದ್ಯೋಗ, ಕಲೆ-ಸಂಸ್ಕೃತಿ, ಭಾಷೆ ಸೇರಿದಂತೆ ನಾಡಿನ ಸಮಗ್ರ ಅಭಿವೃದ್ಧಿಗೆ ಹಲವು ಕೊಡುಗೆಗಳನ್ನು ನೀಡಿದ ಸಮರ್ಥ ಆಡಳಿತಗಾರ ರಾಜರ್ಷಿ #ನಾಲ್ವಡಿಕೃಷ್ಣರಾಜಒಡೆಯರ್ ಅವರ ಜನ್ಮದಿನದಂದು ಆ ಮಹಾನ್ ಚೇತನಕ್ಕೆ ಗೌರವದ ನಮನಗಳು. ಅವರ ಅಧಿಕಾರಾವಧಿಯನ್ನು ಡಿವಿಜಿಯವರು ‘ಸುವರ್ಣ ಯುಗ’ವೆಂದು ವರ್ಣಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ರಾಷ್ಟ್ರವೇ ಹೆಮ್ಮೆ ಪಡುವ ಅನನ್ಯ ಸಾಧಕ ಅವರು. ಹೆಮ್ಮೆಯ ಕನ್ನಡಿಗ ಒಂದು ಗತವೈಭವವನ್ನೇ ಕಂಡ ಕರ್ನಾಟಕ ಅಂದಿನ ಮೈಸೂರು ರಾಜ್ಯ.. ಕನ್ನಡ ನಾಡು ಕಂಡ ಹೆಮ್ಮೆಯ ನಾಯಕರು ಜಲದಾತ, ವಿದ್ಯಾದಾತ,ಅನ್ನದಾತ,ಉದ್ಯೋಗದಾತ, ಅಭಿವೃದ್ಧಿಯ ಪಿತಾಮಹ.. ಸರ್ವಜನಾಂಗದ ಒಳಿತಿಗಾಗಿ ದುಡಿದ ಮೈಸೂರು ಮಹಾರಾಜರು ಮಾನ್ಯ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವ್ರಿಗೆ ಹುಟ್ಟುಹಬ್ಬದ ಶುಭಾಶಯಗಳು.. ಒಬ್ಬ ಮನುಷ್ಯ ಜೀವನದಲ್ಲಿ ಇಷ್ಟೊಂದು ವಿಕ್ರಮಗಳನ್ನು…
ಮಧುಗಿರಿ: ಕರಡಿ ದಾಳಿಗೆ ಒಳಗಾಗಿ ಗಾಯಗೊಂಡು ಪ್ರಗ್ನೆ ತಪ್ಪಿದ ದ್ವಿಚಕ್ರ ವಾಹನ ಸವಾರರನ್ನು ಕುರಿಗಾಹಿಗಳು ರಕ್ಷಿಸಿ ಆಸ್ಪತ್ರೆಗೆ ಸೇರಿಸಿರುವ ಘಟನೆ ನಡೆದಿದೆ. ತಾಲೂಕಿನ ಮಿಡಗೇಶಿ ಹೋಬಳಿಯ ಹನುಮಂತಪುರದ ವಾಸಿ ಈರಣ್ಣ ( ಕೃಷ್ಣ)38 ಮಿಡಗೇಶಿಯಿಂದ ಲಕ್ಲಿಹಟ್ಟಿಗೆ ಹನುಮಂತಪುರ ಮಾರ್ಗವಾಗಿ ಶುಕ್ರವಾರ ಸಂಜೆ ಸುಮಾರು 6:30ರ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಈರಣ್ಣ ಬೆಟ್ಟದ ಹತ್ತಿರ ಎರಡು ಕರಡಿಗಳು ಪ್ರತ್ಯಕ್ಷವಾಗಿದ್ದವು. ಇದರಲ್ಲಿ ದೊಡ್ಡ ಕರಡಿ ದಾಳಿ ಮಾಡಿದ್ದು, ಈ ವೇಳೆ ಗಾಬರಿಗೊಂಡ ದ್ವಿಚಕ್ರ ವಾಹನ ಸವಾರ ವಾಹನದಿಂದ ನೆಲಕ್ಕೆ ಬಿದ್ದಿದ್ದು, ಪರಿಣಾಮವಾಗಿ ತಲೆಗೆ ಹಾಗೂ ಕೈಗೆ ಪೆಟ್ಟಾಗಿದೆ. ಇದೇ ವೇಳೆ ಸ್ಥಳದಲ್ಲಿ ಕುರಿಗಾಹಿಗಳ ಸಹಾಯದಿಂದ ಮಿಡಿಗೇಶಿ ಪ್ರಾಥಮಿಕ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಪ್ರಥಮ ಚಿಕಿತ್ಸೆ ಪಡೆದು ಮನೆ ತೆರಳಿದ್ದರು. ಶನಿವಾರ ಸಂಜೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ತಪಾಸಣೆ ನಡೆಸಿದ ವೈದ್ಯರು ಹೆಚ್ಚುವರಿ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ವಿಷಯ…
ಗುಬ್ಬಿ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಲ್ಲೂಕಿನ ದೊಡ್ಡಗುಣಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಮೇಲುಸೇತುವೆಯ ಮೇಲ್ಭಾಗ ಭಾನುವಾರ ಮುಂಜಾನೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆ.ಬಿ.ಕ್ರಾಸ್ ಕಡೆಯಿಂದ ಬರುತ್ತಿದ್ದ ಕಾರು ಗುಬ್ಬಿ ಕಡೆಯಿಂದ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.ಗಾಯಾಳುವನ್ನು ತುರುವೇಕೆರೆ ತಾಲ್ಲೂಕು ಹರಿದಾಸನಹಳ್ಳಿ ಚೇತನ್ 28 ವರ್ಷ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇರಿಸಲಾಗಿದೆ. ಶನಿವಾರ ತಡರಾತ್ರಿ ಗುಬ್ಬಿ ಪಟ್ಟಣದಲ್ಲಿ ನೆಡೆದ ಮತ್ತೊಂದು ಅಪಘಾತದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ, ಕಾರು ಸಂಪೂರ್ಣ ಜಕಂ ಗೊಂಡಿದೆ. ಬಸ್ಸು ಮತ್ತು ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಗುಬ್ಬಿ ಪೊಲೀಸ್ ಎಸ್ ಐ ಮುತ್ತುರಾಜ್ ಎರಡೂ ಪ್ರಕರಣ ದಾಖಲಿಸಿಕೊಂಡು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ…
ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಕನಪುರ್ ಪಟ್ಟಣದ ಶಿವ ಸ್ಮಾರಕ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರುಗಳ ಚಿಂತನ ಮಂಥನ ಸಭೆಯಲ್ಲಿ ಪಕ್ಷ ಸಂಘಟನೆ ಕರೆ ನೀಡಿದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು ಆದರೆ ನಮಗೆ ಹಲವಾರು ವಿಷಯಗಳನ್ನು ಕಲಿಸಿಕೊಟ್ಟಿದೆ. ಇದನ್ನು ಪಾಠವಾಗಿ ಸ್ವೀಕರಿಸಿ ಪಕ್ಷವನ್ನು ಕೆಳಮಟ್ಟದಿಂದ ಸಂಘಟಿಸಿ ಮುಂದೆ ನಡೆಯಲಿರುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಚುನಾಯಿಸಿಗೊಳಿಸಲು ನಾವೆಲ್ಲರೂ ಕೆಲಸ ಮಾಡಬೇಕಾಗಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ಇರುವುದರಿಂದ ಈ ಕ್ಷೇತ್ರದ ಅಭಿವೃದ್ಧಿಗೋಸ್ಕರ ಶ್ರಮಿಸೋಣ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು. ಇದೇ ಸಂದರ್ಭದಲ್ಲಿ ಸಭೆಯಲ್ಲಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಕಾರ್ಯಕರ್ತರು ಪಕ್ಷದ ವರಿಷ್ಠರಿಗೆ ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ ಅಶೋಕ್ ಅಂಗಡಿ ಮಹಾಂತೇಶ್ ರಾಹುತ್ ಮಧು ಕವಳೆೇಕರ್ ಲಕ್ಷ್ಮಣ್…