Subscribe to Updates
Get the latest creative news from FooBar about art, design and business.
- ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
- ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
- ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
- 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
- ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
- ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
- ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
Author: admin
‘ಮಕ್ಕಳಿಗೆ ಜ್ಞಾನಾರ್ಜನೆ ಮುಖ್ಯ. ಜ್ಞಾನ ಪಡೆಯಬೇಕಾದರೆ ಶಿಕ್ಷಣ ಮುಖ್ಯ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು. ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ರಕ್ಷಾ ಫೌಂಡೇಷನ್ ವತಿಯಿಂದ 10 ಸಾವಿರ ಮಕ್ಕಳಿಗೆ 1. 5 ಲಕ್ಷ ನೋಟ್ ಬುಕ್ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು. ದೇಶ, ಭಾಷೆ ಮತ್ತು ಸಂಸ್ಕೃತಿ, ಸಂಪ್ರದಾಯ ಮರೆಯಬಾರದು ಮಕ್ಕಳು. ‘ಮಕ್ಕಳಿಗೆ ಜ್ಞಾನಾರ್ಜನೆ ಮುಖ್ಯ. ಜ್ಞಾನ ಪಡೆಯಬೇಕಾದರೆ ಶಿಕ್ಷಣ ಮುಖ್ಯ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ‘ರಾಷ್ಟ್ರಭಕ್ತಿ, ದೇಶಪ್ರೇಮ ಬೆಳೆಸಿಕೊಳ್ಳಬೇಕು’ ಎಂದರು. ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ‘ಶಿಕ್ಷಣಕ್ಕೆ ಪ್ರೋತ್ಸಾಹ, ಸಹಕಾರ ನೀಡುವುದು ಮುಖ್ಯ. ಈ ನಿಟ್ಟಿನಲ್ಲಿ ರಕ್ಷಾ ಫೌಂಡೇಷನ್ ದಿಟ್ಟ ಹೆಜ್ಜೆ ಇಟ್ಟಿದೆ’ ಎಂದರು. ಶಾಸಕ ಬಿ. ವೈ. ವಿಜಯೇಂದ್ರ ಮಾತನಾಡಿ, ‘ನೊಂದವರ ಮತ್ತು ಬಡವರ ಸೇವೆ ಮಾಡುವುದು ಮುಖ್ಯ’ ಎಂದರು. ಜಯದೇವ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ್ ಮಾತನಾಡಿ, ‘ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು.…
ಕೆಂಪೇಗೌಡ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಗೆ ಜಯದೇವ ಹೃದ್ರೋಗ ಆಸ್ಪತ್ರೆ, ಯುವ ಉದ್ಯಮಿ ನಿತೀನ್ ಕಾಮತ್ ಹಾಗೂ ಯುವ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಬಿ. ಎಲ್ ಶಂಕರ್ ಅವರ ನೇತೃತ್ವದ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಚರ್ಚೆ ಮಾಡಿ ಮೂವರು ಸಾಧಕರ ಆಯ್ಕೆ ಮಾಡಿದೆ. ಈ ಪ್ರಶಸ್ತಿ ಜೊತೆಗೆ 5 ಲಕ್ಷ ನೀಡುವ ಪದ್ಧತಿ ನಡೆದುಕೊಂಡು ಬಂದಿದೆ. ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಡಾ. ಮಂಜುನಾಥ್ ಅವರಿಂದ ಕಸಗುಡಿಸುವ ಕೆಲಸಗಾರರವರೆಗೂ ಎಲ್ಲರೂ ಸೇವೆ ಸಲ್ಲಿಸಿದ್ದು, ಹೀಗಾಗಿ ಈ ಸಂಸ್ಥೆಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. 1600 ಬೆಡ್ ಸೌಲಭ್ಯ ಹೊಂದಿರುವ ಆಸ್ಪತ್ರೆಯು ಬಹಳ ಕಡಿಮೆ ದರದಲ್ಲಿ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಸೇವೆ ನೀಡುತ್ತಾ ಬಂದಿದೆ. ಇನ್ನು ಕಿರಿಯ ವಯಸ್ಸಿನಲ್ಲೇ ಜೇರೋಧ ಎಂಬ ನವೋದ್ಯಮ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಬೆಳೆದಿರುವ ನಿತಿನ್ ಕಾಮತ್ ಅವರು ಈ…
2024 ರ ಲೋಕಸಭಾ ಚುನಾವಣೆಗೆ ಇನ್ನು 11 ತಿಂಗಳು ಬಾಕಿಯಿದ್ದು, ಈಗಿನಿಂದಲೇ ಸಕಲ ತಯಾರಿಗಳು ನಡೆಯುತ್ತಿದೆ. ಇತ್ತ ರಾಜ್ಯದಲ್ಲಿ 28 ಕ್ಷೇತ್ರಗಳಿದ್ದು, ಅದರಲ್ಲಿ 25 ಮಂದಿ ಬಿಜೆಪಿಯ ಸಂಸದರುಗಳು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಆದ್ರೆ ಇದೆಲ್ಲದರ ಮಧ್ಯೆ ಸದ್ಯ, ಡಿ.ವಿ. ಸದಾನಂದಗೌಡ ಪ್ರತಿನಿಧಿಸುವ ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ಸುಮಾರು ಅರ್ಧ ಡಜನ್ ಅಭ್ಯರ್ಥಿಗಳು ಕಣ್ಣಿಟ್ಟಿದ್ದಾರೆ ಎಂಬ ಮಾಹಿತಿ ಬಿಜೆಪಿ ವಲಯದಿಂದಲೇ ಕೇಳಿ ಬಂದಿದೆ. ಹಾಗಾದ್ರೆ, ಯಾವೆಲ್ಲಾ ನಾಯಕರುಗಳು ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎಂಬುದನ್ನು ನೋಡುವುದಾದ್ರೆ, ಡಿ. ವಿ. ಸದಾನಂದಗೌಡರನ್ನು ಹೊರತುಪಡಿಸಿ, ಸಂಸದರಾದ ಶೋಭಾ ಕರಂದ್ಲಾಜೆ, ಸುಮಲತಾ ಅಂಬರೀಶ್, ಮಾಜಿ ಸಚಿವ ಡಾ. ಕೆ ಸುಧಾಕರ್, ಸಿ. ಟಿ. ರವಿ, ಈಗ ಸಾರ್ವತ್ರಿಕ ವಿಧಾನಸಭೆಗೆ ಸ್ಪರ್ಧಿಸಿ ಪರಾಭವಗೊಂಡಿರುವ ತಮ್ಮೇಶ್ ಗೌಡ ಹಾಗೂ ಟಿಕೆಟ್ ವಂಚಿತ ಮುನೀಂದ್ರ ಕುಮಾರ್ ಕ್ಷೇತ್ರದ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಇಂಡಿಯನ್ ಮನಿ ಡಾಟ್ ಕಾಮ್ ಕಂಪನಿ ಹಾಗೂ ಫ್ರೀಡಂ ಆ್ಯಪ್ ಆಡಳಿತ ಮಂಡಳಿ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಗಳ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅದರ ತೆರವಿಗೆ ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ‘ಅರೆಕಾಲಿಕ ಕೆಲಸದ ಆಮಿಷ ಹಾಗೂ ಕೋರ್ಸ್ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸಲಾಗಿದೆ’ ಎಂದು ಸಂತ್ರಸ್ತರು ದೂರು ನೀಡಿದ್ದರು. ಅದನ್ನು ಆಧರಿಸಿ 6 ಪ್ರತ್ಯೇಕ ಎಫ್‌ಐಆರ್ ದಾಖಲಿಸಿಕೊಂಡಿದ್ದ ಬನಶಂಕರಿ ಠಾಣೆ ಪೊಲೀಸರು, ಕಂಪನಿಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ. ಎಸ್. ಸುಧೀರ್ ಹಾಗೂ ಮಾನವ ಸಂಪನ್ಮೂಲ ವಿಭಾಗದ ರಘು ಅವರನ್ನು ಬಂಧಿಸಿದ್ದರು. ಸುಧೀರ್ ಹಾಗೂ ಇತರರಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಈ ಮಧ್ಯೆಯೇ, ಆರೋಪಿಗಳು ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದರು. ತಡೆಯಾಜ್ಞೆ ತೆರವಿವು ಕೋರಿ ಹೈಕೋರ್ಟ್‌ಗೆ ಮನವಿ ಸಲ್ಲಿಸಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಶೀಲ ಶಂಕಿಸಿ ಪತ್ನಿಯ ತೊಡೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಆರೋಪದಡಿ ರೌಡಿ ದಯಾನಂದ್ ನನ್ನು ಬಂಧಿಸುವಲ್ಲಿ ಆಡುಗೋಡಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಲಸಕ್ಕೆ ಹೋಗುತ್ತಿದ್ದ ಪತ್ನಿ, ಸಹೋದ್ಯೋಗಿ ಜೊತೆ ಹೆಚ್ಚು ಮಾತನಾಡುತ್ತಿದ್ದರು. ಜೈಲಿನಿಂದ ಬರುತ್ತಿದ್ದಂತೆ ಪತ್ನಿ ಮೊಬೈಲ್ ಪರಿಶೀಲಿಸಿದ್ದ ಆರೋಪಿ, ಸಹೋದ್ಯೋಗಿ ಬಗ್ಗೆ ವಿಚಾರಿಸಿದ್ದ. ಸಲುಗೆ ಇಟ್ಟುಕೊಂಡಿರುವುದಾಗಿ ಅನುಮಾನಪಟ್ಟು ಪತ್ನಿಗೆ ಹೊಡೆದಿದ್ದ. ಪತ್ನಿಯ ಹೇಳಿಕೆ ಪಡೆದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವರದಿ : ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹೋಟೆಲೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆ ಮೇಲೆ ನಿಗಾ ವಹಿಸದೇ ನಿರ್ಲಕ್ಷ್ಯ ವಹಿಸಿ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಅಶೋಕನಗರ ಠಾಣೆಯ ಇನ್‌ಸ್ಪೆಕ್ಟರ್ ಶ್ರೀಕಾಂತ್ ತೋಟಗಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಠಾಣೆ ವ್ಯಾಪ್ತಿಯ ದಿ ಪೈಡ್ ಹೋಟೆಲ್ ಮೇಲೆ ಸಿಸಿಬಿ ಪೊಲೀಸರು ಇತ್ತೀಚೆಗಷ್ಟೇ ದಾಳಿ ಮಾಡಿದ್ದರು. ಮಾನವ ಕಳ್ಳ ಸಾಗಾಣಿಕೆ ಮೂಲಕ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಸಂಗತಿಯನ್ನು ಪತ್ತೆ ಮಾಡಿದ್ದರು. ‘ಹೋಟೆಲ್ ನಲ್ಲಿ ಹಲವು ದಿನಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಇದರ ತಡೆಗೆ ಇನ್‌ಸ್ಪೆಕ್ಟರ್ ಗಮನ ಹರಿಸಿರಲಿಲ್ಲ’ ಎಂದು ಸಿಸಿಬಿ ಪೊಲೀಸರು ವರದಿ ನೀಡಿದ್ದರು. ಅದರನ್ವಯ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ, ಪ್ರಾಥಮಿಕ ತನಿಖೆ ನಡೆಸಿ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರಿಗೆ ವರದಿ ಸಲ್ಲಿಸಿದ್ದರು. ವರದಿ ಪರಿಶೀಲಿಸಿದ್ದ ದಯಾನಂದ್, ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡಿ ಸೋಮವಾರ ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ವೈಷ್ಣವಿ ಬಿಲ್ಡರ್ಸ್ ಮಾಲೀಕ ಗೋವಿಂದರಾಜು ಪುತ್ರ ದರ್ಶನ್ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಆರೋಪದಡಿ ವೇದಾಂತ್ ದುಗಾರ್ ನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರ್. ಟಿ. ನಗರ ಠಾಣೆ ವ್ಯಾಪ್ತಿಯಲ್ಲಿ ದರ್ಶನ್ ಮೇಲೆ ಮೇ 9ರಂದು ಹಲ್ಲೆ ನಡೆದಿತ್ತು. ನಂತರ ನಾಪತ್ತೆಯಾಗಿದ್ದ ವೇದಾಂತ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ. ಮಾಹಿತಿ ಆಧರಿಸಿ ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಆರೋಪಿ ವೇದಾಂತ್, ವಿಎಆರ್ ಬಿಲ್ಡರ್ಸ್ ಮಾಲೀಕ ಸಂಜಯ್ ಅವರ ಪುತ್ರ. ಈತ ಹಾಗೂ ದರ್ಶನ್ ಹಲವು ವರ್ಷಗಳ ಸ್ನೇಹಿತರು. ಮದುವೆಯೊಂದಕ್ಕೆ ಇಬ್ಬರೂ ಪ್ರತ್ಯೇಕವಾಗಿ ಹೋಗಿದ್ದರು. ‘ತನ್ನನ್ನು ಹೆಚ್ಚು ಮಾತನಾಡಿಸಲಿಲ್ಲ ಎಂದು ಜಗಳ ತೆಗೆದಿದ್ದ ಆರೋಪಿ ಮದ್ಯದ ಬಾಟಲಿಯಿಂದ ದರ್ಶನ್ ತಲೆಗೆ ಹೊಡೆದಿದ್ದ’ ಎಂದು ತಿಳಿಸಿದ್ದಾರೆ. ವೇದಾಂತ್ ಸಂಬಂಧಿಕರು ನೇಪಾಳದಲ್ಲಿದ್ದಾರೆ. ಕೃತ್ಯದ ಬಳಿಕ ಆತ ನೇಪಾಳಕ್ಕೆ ಹೋಗಿದ್ದ. ಆತ ಬೆಂಗಳೂರಿಗೆ ವಾಪಸು ಬರುತ್ತಿದ್ದಂತೆ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಕರ್ನಾಟಕ ಅಂಚೆ ವೃತ್ತದ ‘ಡೋರ್ ಸ್ಟೆಪ್ ಬುಕ್ಕಿಂಗ್ ಆಫ್ ಪಾರ್ಸೆಲ್ಸ್ ಮೊಬೈಲ್ ವ್ಯಾನ್ಸ್’ ಸೇವೆ ಬೆಂಗಳೂರಿನ ಎಂ. ಜಿ. ರಸ್ತೆಯಲ್ಲಿರುವ ಮಣಿಪಾಲ್ ಸೆಂಟರ್‌ನಲ್ಲಿ ಸೋಮವಾರ ಆರಂಭಗೊಂಡಿತು. ನಿಗದಿತ ಪ್ರದೇಶದ ಸಾರ್ವಜನಿಕರು ಪಾರ್ಸೆಲ್ ಬುಕ್ಕಿಂಗ್ ಸೇವೆಯನ್ನು ಹೆಚ್ಚಿನ ಶುಲ್ಕ ನೀಡದೇ ಪಡೆಯಬಹುದು. ಮೊಬೈಲ್ ವ್ಯಾನ್ ನಿತ್ಯ ಮಧ್ಯಾಹ್ನ 2. 30ಕ್ಕೆ ಮಣಿಪಾಲ್ ಸೆಂಟರ್‌ಗೆ ಬರಲಿದ್ದು, 3. 30ರವರೆಗೆ ಇರಲಿದೆ. ಬೇಡಿಕೆ ಆಧರಿಸಿ ಬೆಂಗಳೂರಿನ ಇತರೆಡೆಗೆ ಈ ಸೇವೆ ವಿಸ್ತರಿಸುವ ಉದ್ದೇಶವಿದೆ ಎಂದು ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಮಾಹಿತಿ ನೀಡಿದರು. ಬೆಂಗಳೂರು ಅಂಚೆ ಕಚೇರಿ ವ್ಯಾಪ್ತಿಯಲ್ಲಿ ಪಾರ್ಸೆಲ್ ಬುಕ್ ಮಾಡಲು ಮೊಬೈಲ್ ಸಂಖ್ಯೆ 94808 09797 ಸಂಪರ್ಕಿಸಬಹುದು. ಪ್ರಾಯೋಗಿಕವಾಗಿ 20 ದಿನದ ಹಿಂದೆ ಅಬ್ಬಿಗೆರೆ-ಪೀಣ್ಯದಲ್ಲಿ ಆರಂಭಿಸಿದ್ದೆವು. ಈವರೆಗೆ 1, 124 ಪಾರ್ಸೆಲ್ ಗಳು ಬಂದಿವೆ ಎಂದರು. ‘ಎಂ. ಜಿ. ರಸ್ತೆ ಹೆಚ್ಚು ವಾಣಿಜ್ಯ ಸಂಕೀರ್ಣಗಳಿರುವ ಪ್ರದೇಶವಾಗಿದ್ದು, ಇಲ್ಲಿ ಜನರಿಗೆ ಹೆಚ್ಚು ಅನುಕೂಲಕರ’ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
‘ಹಿರಿಯರಿಗೆ ಸಮಂಜಸ, ಸುರಕ್ಷತೆಯಿಂದ ಕೂಡಿದ ಮತ್ತು ಮನಸ್ಸಿಗೆ ಶಾಂತಿ ನೀಡುವ ವಾತಾವರಣ ತುಂಬಾ ಮುಖ್ಯ’ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ. ಎಸ್. ಪಾಟೀಲ್ ಹೇಳಿದರು. ನವ ನಿರ್ಮಾಣ್- ವಿಎನ್ಎನ್ ಪ್ರಬುದ್ಧಲಾಯ ಮತ್ತು ಆಯುರ್ಧಾಮ ಭಾನುವಾರ ಆಯೋಜಿಸಿದ್ದ ವಿಎಲ್‌ನ್ ಪ್ರಬುದ್ಧಾಲಯದ 15ನೇ ವಾರ್ಷಿಕೋತ್ಸವ, ವಿಎನ್ಎನ್ ನಿರ್ಮಾಣ್ ಹಿರಿಯ ನಾಗರಿಕರ ಅಜೀವ-ಸಾಧನಾ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಹೊರಗಿನ ಯಾವುದೇ ಜಂಜಾಟಗಳಿಗೆ ತಲೆಕೆಡಿಸಿಕೊಳ್ಳದೇ ಹಿರಿಯರು ನೆಮ್ಮದಿಯಿಂದ ಸುರಕ್ಷತೆಯಿಂದ ಜೀವಿಸಲು ಪ್ರಬುದ್ಧಾಲಯವು ಹಿರಿಯ ಜೀವಿಗಳಿಗೆ ಆಶ್ರಯ ಕಲ್ಪಿಸಿದೆ ಎಂದು ಹೇಳಿದರು. ಚಿತ್ರನಟ ಶ್ರೀನಾಥ್, ‘ಪ್ರಬುದ್ಧಾಲಯದಂತಹ ಹಿರಿಯರ ಮನೆ, ವೃದ್ಧರಿಗೆ ಸ್ವಂತ ಮನೆಯ ಅನುಭವ ನೀಡುತ್ತಿದೆ. ಹಿರಿಯರ ಜೀವನದ ಸಂಧ್ಯಾ ಕಾಲಕ್ಕೆ ಆಶಾದಾಯಕವಾಗಿದ್ದು, ಸಮಾಜಕ್ಕೆ ಉತ್ತಮ ಮಾದರಿಯಾಗಿದೆ’ ಎಂದರು. ಇದೇ ಸಂದರ್ಭದಲ್ಲಿ ಜೀವನದಲ್ಲಿ ಉತ್ತಮ ಸಾಧನೆ ಮಾಡಿದ ಸಿ. ತಾರಾರಂಗನ್, ಬಿ. ವಿ. ತಿಮ್ಮಪ್ಪ, ರಾಧಾ ಶ್ರೀನಾಥ್, ಪ್ರನಖ್ ಕುಮಾರ್ ಬಸು ಮತ್ತು ರುಕ್ಕಿಣಿ ಶೇಷಾದ್ರಿ ಅವರಿಗೆ ವಿ. ಎಲ್. ಎನ್. ನಿರ್ಮಾಣ್ ಹಿರಿಯ ನಾಕರಿಕರ…
ಬೆಸ್ಕಾಂನವರು ಮನೆಗೆ ತೆರಳಿ ಗೃಹಜ್ಯೋತಿ ನೋಂದಣಿ ಮಾಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು. ರಾಮನಗರ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಬೆಸ್ಕಾಂ ಅಧಿಕಾರಿಗಳು ಪ್ರಚಾರ ಮಾಡಿ ನೋಂದಣಿ ಮಾಡಿಸಬೇಕು. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದು ನಾವಲ್ಲ, ಬಿಜೆಪಿ ಸರ್ಕಾರ. ಬಿಜೆಪಿಯವರು ತಿಂದು ನಮ್ಮ ಮೂತಿಗೆ ಒರಿಸುವ ಯತ್ನ ಮಾಡಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy