Subscribe to Updates
Get the latest creative news from FooBar about art, design and business.
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
Author: admin
ಶಿವಮೊಗ್ಗ: ಶಿವಮೊಗ್ಗದ ಸೋಗಾನೆಯಲ್ಲಿರುವುದು ಕೇವಲ ವಿಮಾನ ನಿಲ್ದಾಣವಲ್ಲ. ಮಲೆನಾಡಿನ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಅಭಿವೃದ್ಧಿ ಮತ್ತಷ್ಟು ವೇಗ ಪಡೆದು ಆಗಸದೆತ್ತರಕ್ಕೆ ಏರುವ ಶುಭ ಸೂಚನೆಯಾಗಿದೆ ಎಂದು ವಿಮಾನ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿ.ಎಸ್. ಯಡಿಯೂರಪ್ಪ ಭಾವುಕವಾಗಿ ಮಾತನಾಡಿದರು. ವಿಶ್ವವೇ ಮೆಚ್ಚುವಂತೆ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು, ರಾಷ್ಟ್ರಕವಿ ಕುವೆಂಪು ಅವರು ತಿಳಿಸಿದ ವಿಶ್ವ ಮಾನವ ತತ್ವಕ್ಕೆ ಉದಾಹರಣೆಯಾಗಿದೆ. ಕಟ್ಟುವೆವು ನಾವು ಹೊಸ ನಾಡೊಂದನು, ರಸದ ಬೀಡೊಂದನು ಎಂಬ ಕವಿವಾಣಿಯಂತೆ ಈ ನಾಡಿನ ಅಭಿವೃದ್ಧಿ ಕನಸಿನೊಂದಿಗೆ 70ರ ದಶಕದಲ್ಲಿ ಸಾರ್ವಜನಿಕ ಬದುಕು ಪ್ರವೇಶಿಸಿದ ನನ್ನ ಬದುಕಿನಲ್ಲಿ ಈ ದಿನ ಬಹಳ ವೈಶಿಷ್ಟ್ಯಪೂರ್ಣವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ನೇರವಾಗಿ ವಿಮಾನದಲ್ಲಿ ಬಂದಿಳಿದು ವಿಮಾನ ನಿಲ್ದಾಣವನ್ನು ಉದ್ಘಾಟಿಸಿರುವುದು ಜಿಲ್ಲೆಯ ಜನರ ಪಾಲಿಗೆ ಸಾರ್ಥಕದ ದಿನವಾಗಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಿವಮೊಗ್ಗಾ: ಮಲೆನಾಡ ಹೆಬ್ಬಾಲಿನಲ್ಲಿ ನಿರ್ಮಾಣವಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಅಭಿವೃದ್ಧಿಪರ ಆಡಳಿತ ಮಾಡಿದ ಬಿ.ಎಸ್ ಯಡಿಯೂರಪ್ಪ ಅವರಿಗೆ ಹಸಿರು ಶಾಲು ಹೊದಿಸಿ ಸನ್ಮಾನಿಸಿದ ಪ್ರಧಾನಿ ಮೋದಿ ಬಿ.ಎಸ್ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು ರಾಜ್ಯದ 2ನೇ ಅತಿ ದೊಡ್ಡ ಏರ್ ಪೋರ್ಟ್ ಎಂಬ ಹೆಗ್ಗಳಿಕೆ ಪಡೆದ ಶಿವಮೊಗ್ಗ ಏರ್‌ಪೋರ್ಟ್ ಲೋಕಾರ್ಪಣೆ ಗೊಳಿಸಿದರು. ಒಟ್ಟು 775 ಎಕರೆ ವಿಸ್ತಿರ್ಣದಲ್ಲಿ ನಿರ್ಮಾಣವಾದ ಈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ 449.2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 3.2 ಕಿ.ಮೀ ರನ್ ವೇ ಹೊಂದಿದ್ದು, ಎಟಿಆರ್ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಲ್ಯಾಂಡಿಗ್ ಆಗಲಿವೆ. 4320 ಚದರಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್ ಉದ್ದದ ಕಾಂಪೌಂಡ್ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧಿಸಿದಂತೆ ಗೊಂದಲ, ಸಮಸ್ಯೆಗಳ ಬಗ್ಗೆ ಅನುಕೂಲವಾಗುವ ನಿಟ್ಟಿನಲ್ಲಿ, ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ, ಪರೀಕ್ಷೆ ಗೊಂದಲಗಳಿದ್ದರೇ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1800 425 0255ಗೆ ಕರೆ ಮಾಡಬಹುದು. ಪ್ರತಿದಿನ ಬೆಳಿಗ್ಗೆ 10 ರಿಂದ ಆರಂಭಗೊಂಡು, ರಾತ್ರಿ 8 ಗಂಟೆಯವರೆಗೆ ಚಾಲನೆಯಲ್ಲಿ ಇರಲಿದೆ. ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಭ್ಯವಿರಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಇಂದೇ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ಏರ್ ಪೋರ್ಟ್ ಲೋಕಾರ್ಪಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಇದು ನನ್ನ ಜೀವನದಲ್ಲಿ ಮರೆಯಲಾಗದ ಶುಭದಿನ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಹುಟ್ಟುಹಬ್ಬದ ಹಿನ್ನೆಲೆ ಯಡಿಯೂರಪ್ಪ ಶಿವಮೊಗ್ಗದ ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೊಂದು ವಿಶೇಷ ಸಂದರ್ಭ ನನಗೆ. ನನ್ನ ಹುಟ್ಟು ಹಬ್ಬದ ಸಂದರ್ಭದಲ್ಲೇ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ ಲೋಕಾರ್ಪಣೆಗೊಳಿಸುವುದು ವಿಶೇಷವಾದ ಘಳಿಗೆಯಾಗಿದೆ. ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಮತ್ತೊಮ್ಮೆ ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಳಗಾವಿ: ಮಕ್ಕಳ ಪ್ರತಿಭೆಗೆ, ಜೀವನದಲ್ಲಿ ಅತ್ಯುನ್ನತ ಸಾಧನೆ ಮಾಡಲು ಬಡತನ ಅಡ್ಡಿಯಾಗಬಾರದೆನ್ನುವ ಕಾರಣದಿಂದ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ ಎಂದು ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಭಾನುವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮದ ಸರ್ಕಾರಿ ಹಿರಿಯ ಪಾಥಮಿಕ ಮರಾಠಿ ಶಾಲೆಯ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಗಮನಕ್ಕೆ ತಂದರೂ ಆದ್ಯತೆಯ ಮೇಲೆ ಪರಿಹರಿಸುತ್ತಿದ್ದೇನೆ. ಸರಕಾರದ ಯೋಜನೆ ಇರಬಹುದು, ಶಾಸಕರ ನಿಧಿ ಇರಬಹುದು, ಲಕ್ಷ್ಮೀ ತಾಯಿ ಫೌಂಡೇಶನ್ ಮೂಲಕ ಇರಬಹುದು. ಒಟ್ಟಾರೆ ಯಾವೊಂದು ಶಾಲೆ, ಯಾವೊಂದು ಮಕ್ಕಳು ಕೂಡ ಸಮಸ್ಯೆ ಎದುರಿಸಬಾರದೆಂದು ಎಚ್ಚರವಹಿಸಿ ಕೆಲಸ ಮಾಡುತ್ತಿದ್ದೇನೆ ಎಂದು ಅವರು ತಿಳಿಸಿದರು. ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಗಿದೆ. ಜಿಮ್ ಹಾಗೂ ಕ್ರೀಡಾ ಉಪಕರಣಗಳನ್ನು ವಿತರಿಸಲಾಗುತ್ತಿದೆ. ವಯಕ್ತಿಕಾಗಿ ಹಲವಾರು ಪ್ರತಿಭೆಗಳಿಗೆ ಆರ್ಥಿಕ ನೆರವು ಒದಗಿಸಲಾಗಿದೆ. ಆರ್ಥಿಕ ಸಮಸ್ಯೆಯಿಂದಾಗಿ ಯಾರೊಬ್ಬರೂ ತಮ್ಮ ಸಾಧನೆಯಲ್ಲಿ ಹಿಂದುಳಿಯಲು ಅವಕಾಶ ಕೊಡುವುದಿಲ್ಲ.…
ಬೆಳಗಾವಿ: ಬಾಳೇಕುಂದ್ರಿ ಕೆ ಎಚ್ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಮತ್ತು ನೂತನ ಸ್ಮಾರ್ಟ್ ಕ್ಲಾಸ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಉದ್ಘಾಟಿಸಿದರು. ಕಾಲ ಬದಲಾದಂತೆ ತಂತ್ರಜ್ಞಾನಗಳು ಬದಲಾಗುತ್ತಿವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತ್ಯಂತ ವೇಗವಾಗಿ ಬದಲಾಗುವ ತಂತ್ರಜ್ಞಾನದೊಂದಿಗೆ ಮಕ್ಕಳು ಓಡಲೇಬೇಕಾಗಿದೆ. ಹಾಗಾಗಿ ಸ್ಮಾರ್ಟ್ ಕ್ಲಾಸ್ ಗಳು ಅನಿವಾರ್ಯವಾಗಿವೆ. ವಿದ್ಯಾರ್ಥಿಗಳು ಸಮರ್ಪಕ ಬಳಕೆಯ. ಮೂಲಕ ಇದರ ಪ್ರಯ.ೋಜನ ಪಡೆಯಬೇಕು ಎಂದು ಚನ್ನರಾಜ ಕರೆ ನೀಡಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ನಿಲೇಶ್ ಚಂದಗಡ್ಕರ್, ಶಹಬಾಜ್ ಶೇಖ್, ಜೈನೂಲ್ ಕುಡಚಿ, ಕುತಬುದ್ದಿನ ಅತ್ತಾರ ಹಾಗೂ ಶಾಲಾ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಟಲಿಯ ಕ್ಯಾಲಬ್ರಿಯಾದಲ್ಲಿ ನಿರಾಶ್ರಿತರ ದೋಣಿ ಮುಳುಗಿ 59 ಸಾವು,ದೋಣಿಯಲ್ಲಿ ಸುಮಾರು 150 ಮಂದಿ ಇದ್ದರು ಎಂದು ವರದಿಯಾಗಿದೆ .ಇನ್ನುಳಿದವರನ್ನು ಪತ್ತೆ ಹಚ್ಚಲು ಶೋಧ ಕಾರ್ಯ ನಡೆಯುತ್ತಿದೆ. ಮೃತರಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. 27 ಮಂದಿಯ ಮೃತದೇಹಗಳು ದಡದಲ್ಲಿ ಕೊಚ್ಚಿಹೋಗಿವೆ. ದೋಣಿಯಲ್ಲಿ ಇರಾನ್, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಜನರು ಇದ್ದರು. ಇಳಿಯಲು ಸ್ವಲ್ಪ ದೂರ ಇದ್ದಾಗ ಅವಘಡ ಸಂಭವಿಸಿದೆ. ಹವಾಮಾನ ವೈಪರೀತ್ಯ ಹಾಗೂ ಬೋಟ್ ಬಂಡೆಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಅದೇ ಸಮಯದಲ್ಲಿ, ನಿರಾಶ್ರಿತರ ಅಕ್ರಮ ಆಗಮನವನ್ನು ಕಟ್ಟುನಿಟ್ಟಾಗಿ ತಡೆಯಲಾಗುವುದು ಎಂದು ಇಟಲಿಯ ಆಂತರಿಕ ಸಚಿವ ಮ್ಯಾಟಿಯೊ ಪಿಯಾಂಟೆಡೋಸಿ ಹೇಳಿದ್ದಾರೆ. ನಿರಾಶ್ರಿತರು ಇಟಲಿಯ ಮೆಡಿಟರೇನಿಯನ್ ಸಮುದ್ರದ ಮೂಲಕ ಯುರೋಪಿಗೆ ಆಗಮಿಸುತ್ತಾರೆ. ಇದು ಅತ್ಯಂತ ಅಪಾಯಕಾರಿ ಜಲಮಾರ್ಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆ ಮುಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಸಿಬಿಐ ದಾಖಲಿಸಿರುವ ಮದ್ಯ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಮೊದಲ ಆರೋಪಿಯಾಗಿದ್ಧಾರೆ. ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷ ಇಂದು ದೇಶಾದ್ಯಂತ ಪ್ರತಿಭಟನೆಯನ್ನು ಆಯೋಜಿಸಲು ನಿರ್ಧರಿಸಿದೆ. ಎಎಪಿ ನಾಯಕರು ಎಲ್ಲಾ ರಾಜ್ಯಗಳ ಬಿಜೆಪಿ ಪ್ರಧಾನ ಕಚೇರಿ ಎದುರು ಪ್ರತಿಭಟನೆಗಳನ್ನು ಆಯೋಜಿಸುವುದಾಗಿ ಘೋಷಿಸಿದರು. ಬಂಧನದ ನಂತರ ಎಎಪಿ ಟ್ವೀಟ್ ಮಾಡಿದ್ದು, ಇದು ಪ್ರಜಾಪ್ರಭುತ್ವದಲ್ಲಿ ಕರಾಳ ದಿನ. ನಕಲಿ ಪ್ರಕರಣದಲ್ಲಿ ವಿಶ್ವದ ಅತ್ಯುತ್ತಮ ಶಿಕ್ಷಣ ಸಚಿವರನ್ನು ಸಿಬಿಐ ಬಂಧಿಸಿದ್ದು, ಇದರ ಹಿಂದೆ ಬಿಜೆಪಿಯ ರಾಜಕೀಯ ಸೇಡಿನ ಕೈವಾಡವಿದೆ ಎಂದು ಆಮ್ ಆದ್ಮಿ ಪಕ್ಷ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದೆ. ಮನೀಶ್ ಸಿಸೋಡಿಯಾ ಸೇರಿದಂತೆ 15 ಜನರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಸಿಸೋಡಿಯಾ ಮೊದಲ ಆರೋಪಿ. ದೆಹಲಿಯ ಅಬಕಾರಿ ಆಯುಕ್ತ ಅರವ ಗೋಪಿ ಕೃಷ್ಣ ಮತ್ತು ಇಬ್ಬರು ಹಿರಿಯ…
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಟೀಕಿಸಿದರು. ಕೇಂದ್ರ ಸರ್ಕಾರವನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಬಣ್ಣಿಸಿದ ಖರ್ಗೆ, ಪ್ರಜಾಪ್ರಭುತ್ವವನ್ನು ರಕ್ಷಿಸಲು ದೌರ್ಜನ್ಯವನ್ನು ತೀವ್ರವಾಗಿ ಎದುರಿಸಬೇಕಾಗುತ್ತದೆ ಎಂದು ಹೇಳಿದರು. ಕಾಂಗ್ರೆಸ್‌ನ 85ನೇ ಸರ್ವಸದಸ್ಯ ಅಧಿವೇಶನದ ನಂತರ ರಾಯ್‌ಪುರದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ದೇಶದಲ್ಲಿ ಸರ್ವಾಧಿಕಾರಿ ಆಡಳಿತ ನಡೆಯುತ್ತಿದೆ ಎಂದು ಖರ್ಗೆ ಆರೋಪಿಸಿದರು. ಸಂಸತ್ತಿನಲ್ಲಿ ಬಡವರು, ಪರಿಶಿಷ್ಟ ಪಂಗಡಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರತಿಪಕ್ಷಗಳು ಸ್ವತಂತ್ರವಾಗಿಲ್ಲ. ಅವರ ಮತ್ತು ರಾಹುಲ್ ಗಾಂಧಿಯವರ ಭಾಷಣಗಳನ್ನು ಬಿಟ್ಟುಬಿಡಲಾಗಿದೆ. ಗೌತಮ್ ಅದಾನಿ ಅವರ ಬಗ್ಗೆ ಪ್ರಶ್ನೆಯಾಗಿದ್ದು, ಯಾವುದೇ ಅವಹೇಳನಕಾರಿ ಪದಗಳನ್ನು ಬಳಸಿಲ್ಲ ಎಂದು ಖರ್ಗೆ ಹೇಳಿದರು. 2004ರ ಮೊದಲು ಅದಾನಿ ಆಸ್ತಿ 3,000 ಕೋಟಿ ರೂ. 2014ರಲ್ಲಿ 50,000 ಕೋಟಿ ರೂ.ಗೆ ಏರಿಕೆಯಾಗಿದೆ. 2021 ರಿಂದ 2023 ರವರೆಗೆ ಸಂಪತ್ತು 13 ಪಟ್ಟು ಹೆಚ್ಚಾಗಿದೆ. ಇದು ಯಾವ ಮಾಯೆ?…
ನಾಗಾಲ್ಯಾಂಡ್: ಚುನಾವಣಾ ಕರ್ತವ್ಯದ ನಿಮಿತ್ತ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಭಾನುವಾರ ಮಧ್ಯಾಹ್ನ ನಾಗಾಲ್ಯಾಂಡ್‌ನ ವೋಖಾದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ. ವೋಖಾ ಜಿಲ್ಲೆಯ ಡೊವಾಂಗ್ ಜಲವಿದ್ಯುತ್ ಯೋಜನೆಯ ಬಳಿ ಮತಗಟ್ಟೆ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿದೆ. ಮತದಾನ ಕೇಂದ್ರದಿಂದ ಹತ್ತು ನಿಮಿಷಗಳ ಅಂತರದಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಸ್ ಚಾಲಕ ಸಾವನ್ನಪ್ಪಿದ್ದಾನೆ ಗಾಯಗೊಂಡ ಆರು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದಿಮಾಪುರಕ್ಕೆ ವಿಮಾನದಲ್ಲಿ ರವಾನಿಸಲಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy